Tag: ಯುರೋಪ್ ಪ್ರವಾಸ

  • ಯುರೋಪ್ ಪ್ರವಾಸ ಕೈಗೊಂಡ ರಾಹುಲ್ – ಕಾಂಗ್ರೆಸ್ ಮಹತ್ವದ ಸಭೆಗೆ ಗೈರು

    ಯುರೋಪ್ ಪ್ರವಾಸ ಕೈಗೊಂಡ ರಾಹುಲ್ – ಕಾಂಗ್ರೆಸ್ ಮಹತ್ವದ ಸಭೆಗೆ ಗೈರು

    ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರು ಖಾಸಗಿ ಭೇಟಿಗಾಗಿ ಯುರೋಪ್ ಪ್ರವಾಸ ಕೈಗೊಂಡಿದ್ದು, ರಾಷ್ಟ್ರಪತಿ ಚುನಾವಣೆ ಹಾಗೂ ಸಂಸತ್ ಮುಂಗಾರು ಅಧಿವೇಶನಕ್ಕೂ ಮುನ್ನ ಭಾನುವಾರ ಭಾರತಕ್ಕೆ ಮರಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

    ರಾಹುಲ್‌ಗಾಂಧಿ ಆಗಾಗ್ಗೆ ವಿದೇಶಿ ಪ್ರವಾಸ ಕೈಗೊಳ್ಳುವುದು ಸಹಜ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಮಹತ್ವದ ಸಭೆ ನಡೆಯುತ್ತಿರುವ ಸಂದರ್ಭದಲ್ಲಿ ಅವರು ಗೈರಾಗುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: RSS ನಿಮ್ಮ ಜೊತೆ ಇದೆ: ದಲಿತ, ಹಿಂದುಳಿದ ವರ್ಗಗಳ ಮಠಾಧೀಶರೊಂದಿಗೆ ಮೋಹನ್‌ ಭಾಗವತ್‌ ಸಂವಾದ

    ಪಕ್ಷದ ಅಧ್ಯಕ್ಷರ ಆಯ್ಕೆಯ ಬಗ್ಗೆಯೇ ಕಾಂಗ್ರೆಸ್ ಗುರುವಾರ ಸಭೆ ಆಯೋಜನೆ ಮಾಡಿದೆ. ಸೋನಿಯಾ ಗಾಂಧಿ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಈಗ ಚೇತರಿಸಿಕೊಂಡಿದ್ದಾರೆ. ಈ ಬೆನ್ನಲ್ಲೇ ಜುಲೈ 21ಕ್ಕೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಹೇಳಿದೆ. ಈ ಸಂದರ್ಭದಲ್ಲಿ ಪಕ್ಷದ ನಾಯಕತ್ವದ ಬದಲಾವಣೆಗೆ ಒತ್ತಡ ಹೆಚ್ಚಾಗುತ್ತಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಭೆ ಮುಖ್ಯವಾಗಿದೆ. ಆದರೂ ರಾಹುಲ್ ಈ ಸಭೆಗೆ ಗೈರಾಗುತ್ತಿದ್ದಾರೆ. ಅಧ್ಯಕ್ಷೀಯ ಹುದ್ದೆಯನ್ನು 2019ರ ಲೋಕಸಭಾ ಚುನಾವಣೆ ಸೋಲಿನ ಬಳಿಕ ತ್ಯಜಿಸಿದ್ದ ರಾಹುಲ್ ಗಾಂಧಿ, ಮತ್ತೆ ಈ ಹುದ್ದೆಯನ್ನು ಒಪ್ಪಿಕೊಳ್ಳುತ್ತಾರೆಯೇ ಎನ್ನುವುದು ಸ್ಪಷ್ಟವಾಗಿಲ್ಲ.

    11 ಕಾಂಗ್ರೆಸ್ ಸದಸ್ಯರ ಬಲ ಹೊಂದಿರುವ ಗೋವಾದಲ್ಲಿ ಹಿರಿಯ ನಾಯಕರು ಬಂಡಾಯ ಏಳಲು ಮುಂದಾಗಿದ್ದಾರೆ. ಇದರ ಲಾಭ ಪಡೆಯಲು ಮುಂದಾಗಿರುವ ಬಿಜೆಪಿ ಕಾಂಗ್ರೆಸ್ ಶಾಸಕರನ್ನು ತನ್ನತ್ತ ಸೆಳೆಯಲು ಮುಂದಾಗಿದೆ. ಆದರೂ ಈವರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯಾಗಲಿ, ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯಾಗಲಿ ಈ ಬಗ್ಗೆ ಪ್ರತಿಕ್ರಿಯೆ ನೀಡದಿರುವುದು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಆರ್ಥಿಕವಾಗಿ ಸ್ಥಿತಿವಂತರಾಗಿದ್ರೆ ಅನುಕಂಪದ ನೌಕರಿಯಿಲ್ಲ – ಹೊಸ ಮಾರ್ಗಸೂಚಿಯಲ್ಲಿ ಏನಿದೆ?

    ಗುರುವಾರ ನಡೆಯಲಿರುವ ಕಾಂಗ್ರೆಸ್ ಸಭೆಯಲ್ಲಿ, ಅಕ್ಟೋಬರ್ 2ರಂದು ಆರಂಭಿಸಲಿರುವ `ಭಾರತ್ ಜೋಡೋ ಯಾತ್ರಾ’ ಅಥವಾ ಭಾರತವನ್ನು ಒಗ್ಗೂಡಿಸುವ ಯಾತ್ರೆಯ ಯೋಜನೆ ರೂಪಿಸುವ ಕುರಿತು ಸಹ ಚರ್ಚಿಸಲಾಗುತ್ತದೆ. ರಾಹುಲ್ ಗಾಂಧಿ ಅವರ ಗೈರು, ನಾಯಕತ್ವದ ಪ್ರಶ್ನೆ ಕುರಿತಾದ ಊಹಾಪೋಹಗಳನ್ನು ಮತ್ತಷ್ಟು ಹೆಚ್ಚಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಸಿದ್ದರಾಮಯ್ಯ ಯುರೋಪ್ ಪ್ರವಾಸಕ್ಕೆ ಸಮ್ಮಿಶ್ರ ಸರ್ಕಾರದಲ್ಲಿ ಆತಂಕ..!

    ಸಿದ್ದರಾಮಯ್ಯ ಯುರೋಪ್ ಪ್ರವಾಸಕ್ಕೆ ಸಮ್ಮಿಶ್ರ ಸರ್ಕಾರದಲ್ಲಿ ಆತಂಕ..!

    ಬೆಂಗಳೂರು: ಮಾಜಿ ಸಿಎಂ ಹಾಗು ಸಮನ್ವಯ ಸಮಿತಿಯ ಅಧ್ಯಕ್ಷರಾಗಿರುವ ಸಿದ್ದರಾಮಯ್ಯರ ಯುರೋಪ್ ಪ್ರವಾಸ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಸಿದ್ದರಾಮಯ್ಯನವರು ಸ್ಥಳೀಯ ಚುನಾವಣೆ ಬಳಿಕ ಪ್ರವಾಸ ಕೈಗೊಳ್ಳುವ ಮೂಲಕ ಡಿಸಿಎಂ ಜಿ.ಪರಮೇಶ್ವರ್ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಶಾಕ್ ನೀಡಲು ಮುಂದಾಗಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ಅಂಗಳದಲ್ಲಿ ಹರಿದಾಡುತ್ತಿವೆ.

    ಇಷ್ಟು ದಿನ ಆಷಾಢ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಲಾಗುತ್ತಿತ್ತು. ಆದ್ರೆ ಕಾಂಗ್ರೆಸ್ ಸ್ಥಳೀಯ ಚುನಾವಣೆ ಬಳಿಕ ಸಂಪುಟ ವಿಸ್ತರಣೆ ಮಾಡೋದು ಸೂಕ್ತ ಎಂದು ಕಾಂಗ್ರೆಸ್ ಹಿರಿಯ ನಾಯಕರು ಚಿಂತಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಚುನಾವಣೆಗೆ ಮುನ್ನ ಸಂಪುಟ ವಿಸ್ತರಣೆವಾದ್ರೆ ಸಚಿವ ಸ್ಥಾನ ಸಿಗದ ಅಸಮಾಧಾನಿತ ಶಾಸಕರ ಕ್ಷೇತ್ರಗಳಲ್ಲಿ ಚುನಾವಣೆ ಗೆಲ್ಲೋದು ಕಷ್ಟ ಎಂದು ಕಾಂಗ್ರೆಸ್ ಲೆಕ್ಕಾಚಾರ ಹಾಕುತ್ತಿದೆ. ಹಾಗಾಗಿ ಸಂಪುಟ ವಿಸ್ತರಣೆಯ ದಿನಾಂಕ ಮುಂದೂಡುವ ಕುರಿತು ಕಾಂಗ್ರೆಸ್ ನಲ್ಲಿ ಚರ್ಚೆಗಳು ನಡೆಯುತ್ತಿವೆ ಎನ್ನಲಾಗುತ್ತಿದೆ.

    ಈ ಎಲ್ಲ ಗೊಂದಲಗಳ ನಡುವೆಯೇ ಸಿದ್ದರಾಮಯ್ಯನವರು ಯುರೋಪ್ ಪ್ರವಾಸ ಕೈಗೊಳ್ಳುತ್ತೀರೋದು ಕಾಂಗ್ರೆಸ್ ಶಾಸಕರ ಅಸಮಾಧಾನಕ್ಕೆ ಕಾರಣ ಎನ್ನಲಾಗುತ್ತಿದೆ. ಸೆಪ್ಟೆಂಬರ್ 2ರಂದು ಯುರೋಪ್ ಗೆ ತೆರಳಿದ್ರೆ ಸೆ.13ಕ್ಕೆ ವಾಪಾಸ್ಸ ಆಗಲಿದ್ದಾರೆ. ಚುನಾವಣೆ ಬಳಿಕ ಸಂಪುಟ ವಿಸ್ತರಣೆ ಆದರೂ ಸಿದ್ದರಾಮಯ್ಯ ಯುರೋಪ್ ಪ್ರವಾಸದಲ್ಲಿ ಇರುತ್ತಾರೆ. ಸಚಿವ ಸಿಗದ ಅಸಮಾಧಾನಿತರ ಕೈಗೆ ಮಾಜಿ ಸಿಎಂ ಸಿಗಲ್ಲ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವ ಶಾಸಕರು ಪ್ರವಾಸಕ್ಕೂ ಮುನ್ನವೇ ಸಂಪುಟ ವಿಸ್ತರಣೆ ನಡೆಯಬೇಕೆಂದು ಬಿಗಿಪಟ್ಟು ಹಿಡಿದಿದ್ದಾರಂತೆ. ಸ್ಥಳೀಯ ಚುನಾವಣೆ ಮುಗಿಯವರೆಗೂ ನಮಗೆ ಕಾಯೋದಕ್ಕೆ ಆಗಲ್ಲ ಎಂದು ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

    ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಡಿ.ಕೆ.ಶಿವಕುಮಾರ್ ಮತ್ತು ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸಭೆ ನಡೆದಿದೆ ಎನ್ನಲಾಗಿದೆ. ಸಭೆಯಲ್ಲಿ ಸ್ಥಳೀಯ ಚುನಾವಣೆಯ ದಿನಾಂಕ ಸಮೀಪಿಸುತ್ತಿದ್ದು, ಕಾಂಗ್ರೆಸ್‍ನಲ್ಲಿ ಹಣಕಾಸಿನ ಸಮಸ್ಯೆ ಕಾಣಿಸಿಕೊಂಡಿದೆಯಂತೆ. ಈ ಸಂಬಂಧ ಚುನಾವಣೆಗೆ ಹಣ ಹೇಗೆ ಹೊಂದಿಸಬೇಕು? ಹೇಗೆ ವ್ಯಯಿಸಬೇಕೆಂಬುದರ ಬಗ್ಗೆ ರಹಸ್ಯ ಮಾತುಕತೆಗಳು ನಡೆದಿವೆಯಂತೆ. ಪಕ್ಷ ಕರೆದ ಸಭೆಗೆ ಸಚಿವ ಸ್ಥಾನ ಆಕಾಂಕ್ಷಿಗಳು ದೂರ ಉಳಿದಿದ್ದು, ಅಧಿಕಾರ ಮಾತ್ರ ನಿಮಗೆ ಹಣ ನಮ್ಮದು ಹೇಗೆ ಅಂತಾ ಹಿರಿಯ ನಾಯಕರನ್ನು ಪ್ರಶ್ನಿಸುತ್ತಿದ್ದಾರಂತೆ. ಮೊದಲು ಸಂಪುಟ ವಿಸ್ತರಣೆ ಮಾಡಿ, ಆಮೇಲೆ ಹಣ ಕೇಳಿ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಕೆಪಿಸಿಸಿ ಅಧ್ಯಕ್ಷರನ್ನು ಪ್ರಶ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews