Tag: ಯುವ

  • ಪೊರಕೆ ಹಿಡಿದು ಹೊಸ ಅವತಾರದಲ್ಲಿ ಯುವ ಎಂಟ್ರಿ- ‘‌ಎಕ್ಕ’ ಚಿತ್ರದ ಟೀಸರ್‌ ಔಟ್

    ಪೊರಕೆ ಹಿಡಿದು ಹೊಸ ಅವತಾರದಲ್ಲಿ ಯುವ ಎಂಟ್ರಿ- ‘‌ಎಕ್ಕ’ ಚಿತ್ರದ ಟೀಸರ್‌ ಔಟ್

    ನ್ನಡ ಚಿತ್ರರಂಗದ ಭರವಸೆ ನಟ ಯುವ ರಾಜ್‌ಕುಮಾರ್‌ (Yuva Rajkumar) ಹುಟ್ಟುಹಬ್ಬದ ಅಂಗವಾಗಿ ನಿನ್ನೆ (ಏ.23) ಬಿಡುಗಡೆಯಾಗಬೇಕಿದ್ದ ಯುವ ಟೀಸರ್‌ ಇಂದು ಅನಾವರಣ ಮಾಡಲಾಗಿದೆ. ಪಹಲ್ಗಾಮ್ ಉಗ್ರರ ದಾಳಿಯಲ್ಲಿ ತಮ್ಮ ಕುಟುಂಬದವರನ್ನು ಕಳೆದುಕೊಂಡವರಿಗೆ ಗೌರವ ಸೂಚಿಸುವ ಸಲುವಾಗಿ ಚಿತ್ರತಂಡ ಟೀಸರ್‌ ಬಿಡುಗಡೆ ಮುಂದೂಡಿತ್ತು. ಇಂದು (ಏ.24) ಅಣ್ಣಾವ್ರ ಜನ್ಮದಿನದ ಜೊತೆಗೆ ಯುವ ಬರ್ತಡೇಗೆ ಸ್ಪೆಷಲ್‌ ಆಗಿಯೇ ಟೀಸರ್‌ ರಿಲೀಸ್‌ ಆಗಿದೆ. ಇದನ್ನೂ ಓದಿ:ಸೆಟ್ಟೇರಿತು ಯುವ ರಾಜ್‌ಕುಮಾರ್‌ 2ನೇ ಚಿತ್ರ- ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ಚಿತ್ರತಂಡ

    1 ನಿಮಿಷ 9 ಸೆಕೆಂಡ್‌ ಇರುವ ‘ಯುವ’ ಟೀಸರ್‌ ಸಖತ್‌ ಆಗಿ ಮೂಡಿ ಬಂದಿದೆ. ಹೊಸ ಅವತಾರದಲ್ಲಿ ಯುವ ರಾಜ್‌ಕುಮಾರ್‌ ಎಂಟ್ರಿ ಕೊಟ್ಟಿದ್ದಾರೆ. ಮಸ್ತ್‌ ಆಗಿ ಡೈಲಾಗ್‌ ಹೊಡೆಯುತ್ತಾ ಕೈಯಲ್ಲಿ ಪೊರಕೆ ಹಿಡಿದು ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನೊಂದ್ ವಿಷ್ಯ ಇದು ಇಲ್ಲಿಗೆ ನಿಲ್ಲೋದಿಲ್ಲ ಅಂತ ಯುವ ಡೈಲಾಗ್‌ ಹೊಡೆದಿದ್ದಾರೆ. ಇದರಿಂದ ಸಿನಿಮಾ ಬಗೆಗಿನ ನಿರೀಕ್ಷೆ ಹೆಚ್ಚಿಸಿದೆ. ‘ಎಕ್ಕ’ (Ekka) ಚಿತ್ರದಲ್ಲಿ ಯುವ ನಟನೆ, ರೋಹಿತ್‌ ಪದಕಿ ನಿರ್ದೇಶನ, ಚರಣ್‌ ರಾಜ್‌ ಅವರ ಮ್ಯೂಸಿಕ್‌ ಕಿಕ್‌ ಈ ಚಿತ್ರದ ಟೀಸರ್‌ ತೂಕವನ್ನು ಮತ್ತಷ್ಟು ಹೆಚ್ಚಿಸಿದೆ. ಈಗಾಗಲೇ ‘ಯುವ’ ಸಿನಿಮಾದ ಟೈಟಲ್‌ ಟ್ರ್ಯಾಕ್‌ ಚಿಂದಿ ಉಡಾಯಿಸಿದ್ದು, ಈಗ ‘ಎಕ್ಕ’ ಟೀಸರ್‌ ಸರದಿ ಅಂತ ಫ್ಯಾನ್ಸ್‌ ಖುಷಿಪಡುತ್ತಿದ್ದಾರೆ. ಇದನ್ನೂ ಓದಿ: ಮಹಾಭಾರತ ಸಿನಿಮಾ ಮಾಡೋದಾಗಿ ಘೋಷಿಸಿದ ಆಮೀರ್ ಖಾನ್

    ರೋಹಿತ್ ಪದಕಿ ನಿರ್ದೇಶನದ ಈ ಚಿತ್ರದಲ್ಲಿ ಯುವರಾಜ್‌ಕುಮಾರ್ ನಾಯಕನಾಗಿ, ಸಂಪದಾ ಹಾಗೂ ಸಂಜನಾ ಆನಂದ್ (Sanjana Anand) ನಾಯಕಿಯರಾಗಿ ಅಭಿನಯಿಸಿದ್ದಾರೆ. ಅತುಲ್ ಕುಲಕರ್ಣಿ, ಡೆಡ್ಲಿ ಆದಿತ್ಯಾ ಸೇರಿದಂತೆ ದೊಡ್ಡ ತಾರಗಣ ಚಿತ್ರದಲ್ಲಿ. ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಸತ್ಯ ಹೆಗಡೆ ಛಾಯಾಗ್ರಹಣ ಮತ್ತು ದೀಪು ಎಸ್‍. ಕುಮಾರ್ ಸಂಕಲನ ಒದಗಿಸಿದ್ದಾರೆ.

     

    View this post on Instagram

     

    A post shared by Yuva Rajkumar (@yuva_rajkumar)

    ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾವ್ ಅವರ ಕೆಆರ್‌ಜಿ ಸಂಸ್ಥೆ, ಜಯಣ್ಣ ಹಾಗೂ ಭೋಗೇಂದ್ರ ಅವರ ಜಯಣ್ಣ ಫಿಲ್ಮ್ಸ್, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದೆ. ಈ ಚಿತ್ರದ ಶೂಟಿಂಗ್‌ ಭರದಿಂದ ಸಾಗುತ್ತಿದ್ದು, ಜೂನ್ 6ರಂದು ‘ಎಕ್ಕ’ ಸಿನಿಮಾ ರಿಲೀಸ್‌ ಆಗಲಿದೆ.

  • ಅಮ್ಮನಿಲ್ಲದ ಜೀವನ ಎಷ್ಟು ಕಷ್ಟ ಅಂತ ಗೊತ್ತಿದೆ: ಸುದೀಪ್ ತಾಯಿ ಅಂತಿಮ ದರ್ಶನ ಪಡೆದ ರಾಘಣ್ಣ

    ಅಮ್ಮನಿಲ್ಲದ ಜೀವನ ಎಷ್ಟು ಕಷ್ಟ ಅಂತ ಗೊತ್ತಿದೆ: ಸುದೀಪ್ ತಾಯಿ ಅಂತಿಮ ದರ್ಶನ ಪಡೆದ ರಾಘಣ್ಣ

    ಸ್ಯಾಂಡಲ್‌ವುಡ್ ನಟ ಸುದೀಪ್ ಅವರ ತಾಯಿ ಇಂದು (ಅ.20) ಬೆಳಗ್ಗೆ ನಿಧನರಾಗಿದ್ದಾರೆ. ಈ ಹಿನ್ನೆಲೆ ಸುದೀಪ್ ತಾಯಿ ಅಂತಿಮ ದರ್ಶನ ಪಡೆಯಲು ರಾಘವೇಂದ್ರ ರಾಜ್‌ಕುಮಾರ್ (Raghavendra Rajkumar) ಕುಟುಂಬ ನಟನ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ, ಅಮ್ಮನಿಲ್ಲದ ಜೀವನ ಎಷ್ಟು ಕಷ್ಟ ಅಂತ ಗೊತ್ತಿದೆ ಎಂದು ರಾಘವೇಂದ್ರ ರಾಜ್‌ಕುಮಾರ್ ಮಾತನಾಡಿದ್ದಾರೆ. ಇದನ್ನೂ ಓದಿ:BBK 11: ದೊಡ್ಮನೆಗೆ ಹನುಮಂತ ವೈಲ್ಡ್ ಕಾರ್ಡ್ ಎಂಟ್ರಿ

    ಅಂತಿಮ ದರ್ಶನದ ಬಳಿಕ ಮಾಧ್ಯಮಕ್ಕೆ ರಾಘಣ್ಣ ಮಾತನಾಡಿ, ಸುದೀಪ್ ಅವರ ತಾಯಿ, ನಮ್ಮ ತಾಯಿ ಸ್ನೇಹಿತರು. ಅವರ ಮನೆಗೆ ನಾವು ಹೋಗೋದು, ನಮ್ಮ ಮನೆಗೆ ಅವರು ಬರುತ್ತಿದ್ದರು. ನಾವು ಹೊರಗಡೆ ಹೋಗುವಾಗ ಅವರ ಆಶೀರ್ವಾದ ಪಡೆದುಕೊಳ್ಳುತ್ತಿದ್ವಿ. ಸುದೀಪ್ ಅವರನ್ನು ನೋಡಿದ್ರೆ ತುಂಬಾ ಕಷ್ಟ ಆಗುತ್ತಿದೆ. ಅಮ್ಮನಿಲ್ಲದ ಜೀವನ ಎಷ್ಟು ಕಷ್ಟ ಅಂತ ನಮಗೆ ಗೊತ್ತಿದೆ. ನಾನು ಅನುಭವಿಸಿದ್ದೇನೆ. ಸುದೀಪ್ ಆ ಕಷ್ಟ, ನೋವು ಹೇಗೆ ತೆಡೆದುಕೊಳ್ತಾರೋ ಏನೋ ಅನಿಸುತ್ತಿದೆ. ಈ ನೋವು ಭರಿಸುವ ಶಕ್ತಿಯನ್ನ ಅವರಿಗೆ ದೇವರು ಕೊಡಲಿ ಎಂದು ನಟ ರಾಘವೇಂದ್ರ ರಾಜ್‌ಕುಮಾರ್ ಮಾತನಾಡಿದ್ದಾರೆ.

    ಅಂದಹಾಗೆ, ಸುದೀಪ್ ತಾಯಿ ಸರೋಜಾ ಅಂತಿಮ ದರ್ಶನ ಪಡೆಯಲು ರಾಘವೇಂದ್ರ ರಾಜ್‌ಕುಮಾರ್ ಜೊತೆ ಪುತ್ರರಾದ ಯುವ, ವಿನಯ್ ಕೂಡ ಭೇಟಿ ಕೊಟ್ಟಿದ್ದಾರೆ. ಬಳಿಕ ‘ವಿಕ್ರಾಂತ್ ರೋಣ’ ಡೈರೆಕ್ಟರ್ ಅನೂಪ್ ಭಂಡಾರಿ ಕೂಡ ಆಗಮಿಸಿದ್ದಾರೆ.

  • ಆಯುಧ ಪೂಜೆಯ ದಿನದಂದೇ ಸಿಹಿಸುದ್ದಿ ಕೊಟ್ಟ ಯುವ- ಚಿತ್ರದ ಪೋಸ್ಟರ್‌ ಔಟ್

    ಆಯುಧ ಪೂಜೆಯ ದಿನದಂದೇ ಸಿಹಿಸುದ್ದಿ ಕೊಟ್ಟ ಯುವ- ಚಿತ್ರದ ಪೋಸ್ಟರ್‌ ಔಟ್

    ದೊಡ್ಮನೆ ಕುಡಿ ಯುವ ರಾಜ್‌ಕುಮಾರ್ (Yuva Rajkumar) ಕೊನೆಗೂ ಮುಂದಿನ ಸಿನಿಮಾದ ಬಗ್ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇಂದು (ಅ.11) ಆಯುಧ ಪೂಜೆಯ ದಿನದಂದೇ ಹೊಸ ಚಿತ್ರದ ಪೋಸ್ಟರ್ ಶೇರ್ ಮಾಡಿ ಅಧಿಕೃತವಾಗಿ ಮುಂದಿನ ಸಿನಿಮಾ ‘ಯುವ 02’ ಕುರಿತು ಮಾಹಿತಿ ನೀಡಿದ್ದಾರೆ.

    ‘ರತ್ನನ್ ಪ್ರಪಂಚ’ ಖ್ಯಾತಿಯ ನಿರ್ದೇಶಕ ರೋಹಿತ್ ಪದಕಿ‌ (Rohith Padaki) ಜೊತೆ ಯುವ ಹೊಸ ಸಿನಿಮಾ ಮಾಡುತ್ತಿದ್ದಾರೆ. ಸದ್ಯ ಯುವ, ರಕ್ತ ಸಿಕ್ತವಾಗಿರುವ ಪೋಸ್ಟರ್‌ ಶೇರ್‌ ಮಾಡಿದ್ದಾರೆ. ಚಿತ್ರದ ಪೋಸ್ಟರ್‌ ಲುಕ್‌ ನೋಡಿ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದೆ. ‘ಯುವ 02’ ಎಂದು ಚಿತ್ರವನ್ನು ಹೆಸರಿಸಲಾಗಿದೆ.

     

    View this post on Instagram

     

    A post shared by Karthik Gowda (@karthik_krg)

    ಇನ್ನೂ ಪೋಸ್ಟರ್ ಅನ್ನು ಸರಿಯಾಗಿ ಗಮನಿಸಿದರೆ ಯುವ ಕೈ ಮೇಲೆ ‘ರತ್ನ’ ಎನ್ನುವ ಹಚ್ಚೆ ಇರುವುದನ್ನು ನೋಡಬಹುದು. ಚಿತ್ರದಲ್ಲಿ ರತ್ನ ಯಾರು? ನಾಯಕನ ತಾಯಿನಾ? ಅಥವಾ ಸಹೋದರಿನಾ? ಇಲ್ಲ ಪ್ರೇಯಸಿನಾ? ಆಕೆಗಾಗಿಯೇ ಈ ರಕ್ತ ಚರಿತ್ರೆ ನಡೆಯುತ್ತಾ? ಎನ್ನುವ ಪ್ರಶ್ನೆಗಳಿಗೆಲ್ಲಾ ಸಿನಿಮಾದಲ್ಲಿಯೇ ಉತ್ತರ ಸಿಗಲಿದೆ.

     

    View this post on Instagram

     

    A post shared by Yuva Rajkumar (@yuva_rajkumar)

    ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಅನ್ನು ನವೆಂಬರ್ 2ರಂದು ಚಿತ್ರತಂಡ ಅನೌನ್ಸ್ ಮಾಡಲಿದ್ದಾರೆ. ಯುವ ರಾಜ್‌ಕುಮಾರ್ ನಟನೆಯ ಮುಂದಿನ ಚಿತ್ರವನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneeth Rajkumar), ಜಯಣ್ಣ & ಭೋಗೇಂದ್ರ, ಕೆಆರ್‌ಜಿ ಸಂಸ್ಥೆ ಜಂಟಿಯಾಗಿ ನಿರ್ಮಾಣ ಮಾಡಲಿದ್ದಾರೆ.

  • ಯುವ ರಾಜ್‌ಕುಮಾರ್‌ಗೆ ರೋಹಿತ್ ಪದಕಿ ಆ್ಯಕ್ಷನ್ ಕಟ್

    ಯುವ ರಾಜ್‌ಕುಮಾರ್‌ಗೆ ರೋಹಿತ್ ಪದಕಿ ಆ್ಯಕ್ಷನ್ ಕಟ್

    ದೊಡ್ಮನೆ ಕುಡಿ ಯುವ ರಾಜ್‌ಕುಮಾರ್ (Yuva Rajkumar) ಅವರು ‘ಯುವ’ ಚಿತ್ರದ ಮೂಲಕ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದರು. ಅದಾದ ನಂತರ ಅವರ ಮುಂದಿನ ಸಿನಿಮಾ ಬಗ್ಗೆ ಯಾವುದೇ ಅಪ್‌ಡೇಟ್ ಸಿಕ್ಕಿರಲಿಲ್ಲ. ಇದೀಗ ಸ್ವತಃ ಅವರೇ ‘ಪಬ್ಲಿಕ್ ಟಿವಿ’ ಡಿಜಿಟಲ್‌ಗೆ ಮುಂದಿನ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಡೈರೆಕ್ಟರ್ ರೋಹಿತ್ ಪದಕಿ (Rohit Padaki) ಜೊತೆ ಸಿನಿಮಾ ಮಾಡೋದಾಗಿ ತಿಳಿಸಿದ್ದಾರೆ.

    ‘ಯುವ’ (Yuva) ಚಿತ್ರದಲ್ಲಿ ಯುವನ ಎಂಟ್ರಿ ನೋಡಿ ಅಭಿಮಾನಿಗಳಲ್ಲಿ ಭರವಸೆ ಮೂಡಿತ್ತು. ಈ ಚಿತ್ರದ ನಂತರ ಮುಂದೇನು? ಅಂತ ಕೇಳುತ್ತಿದ್ದವರಿಗೆ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಒಂದೊಳ್ಳೆಯ ಕಂಟೆಂಟ್ ಇರುವ ಚಿತ್ರ ಇದಾಗಿದ್ದು, ಡಿಫರೆಂಟ್ ರೋಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಚಿತ್ರವನ್ನು ಡೈರೆಕ್ಟರ್ ರೋಹಿತ್ ಪದಕಿ ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಣದ ಹೊಣೆಯನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ವಹಿಸಿಕೊಂಡಿರೋದಾಗಿ ಯುವ ತಿಳಿಸಿದ್ದಾರೆ. ಇದನ್ನೂ ಓದಿ:‘ಕಾಂತಾರ’ ಚಿತ್ರದ ಪ್ರತಿ ಹಂತವು ವಿಶೇಷವಾಗಿತ್ತು – ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ

    ಇನ್ನೂ ಈ ಚಿತ್ರಕ್ಕೆ ಇನ್ನೂಳಿದ ಕಲಾವಿದರ ಆಯ್ಕೆ ಆಗಬೇಕಿದೆ. ದಸರಾ ಹಬ್ಬದಂದು ಅಧಿಕೃತ ಘೋಷಣೆ ಆಗಲಿದೆ ಎಂದು ಯುವ ಮಾತನಾಡಿದ್ದಾರೆ.

    ಇನ್ನೂ ‘ರತ್ನನ್ ಪ್ರಪಂಚ’ ನಿರ್ದೇಶಕನ ಜೊತೆ ಯುವನ ಹೊಸ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಮೂಡಿಸಿದೆ. ಚಿತ್ರದ ಹೆಚ್ಚಿನ ಅಪ್‌ಡೇಟ್‌ಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

  • ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೂ ನನ್ನ ದಾರಿಗೆ ಏನೇ ಎದುರಾದರೂ ಹೆದರಲ್ಲ: ಯುವ ಪತ್ನಿ ಶ್ರೀದೇವಿ

    ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೂ ನನ್ನ ದಾರಿಗೆ ಏನೇ ಎದುರಾದರೂ ಹೆದರಲ್ಲ: ಯುವ ಪತ್ನಿ ಶ್ರೀದೇವಿ

    ಬೆಂಗಳೂರು: ನನ್ನ ಮೇಲೆ ಮಾಡಿರುವ ಪ್ರತಿಯೊಂದು ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೆ ನನ್ನ ದಾರಿಗೆ ಏನೇ ಎದುರಾದರೂ ನಾನು ಹೆದರುವುದಿಲ್ಲ ಎಂದು ಸ್ಯಾಂಡಲ್‌ವುಡ್‌ (Sandalwood) ನಟ ಯುವ (Yuva Rajkumar) ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಹೇಳಿದ್ದಾರೆ.

    ಈ ಸಂಬಂಧ ಇನ್‌ಸ್ಟಾದಲ್ಲಿ ಸ್ಟೋರಿ ಹಾಕಿರುವ ಅವರು, ಹಾರ್ವರ್ಡ್‌ನಲ್ಲಿ ನಾನೊಂದು ಶೈಕ್ಷಣಿಕ ಯೋಜನೆಯನ್ನು ಶುರುಮಾಡಿದ್ದು, ಆ ಕಾಯಕವನ್ನು ಮುಂದುವರಿಸಲು ನಾನು ಅಮೆರಿಕಗೆ ಹಿಂತಿರುಗುತ್ತಿದ್ದೇನೆ. ಸರಿಯಾದ ಸಮಯ ಬಂದಾಗ ನಾನು ಹಿಂದಿರುಗುತ್ತೇನೆ ಮತ್ತು ಇಲ್ಲಿನ ಕೆಲಸಗಳನ್ನು ಮುಂದುವರಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಯುವರಾಜ್‌ಕುಮಾರ್ ದಾಂಪತ್ಯದಲ್ಲಿ ಬಿರುಕು- ಡಿವೋರ್ಸ್‌ಗೆ ಮುಂದಾದ ಜೋಡಿ

    ಕಳೆದ 15 ದಿನದಿಂದ ನಾನು ಕರ್ನಾಟಕದಲ್ಲಿ ನನ್ನ ಕುಟುಂಬದ ಜೊತೆ ಇದ್ದಾಗ, ನನ್ನ ಖಾಸಗಿ ಬದುಕನ್ನು ಗೌರವಿಸಿ, ನನ್ನ ಘನತೆಯನ್ನು ಕಾಪಾಡುವಲ್ಲಿ, ಅತ್ಯಂತ ಸೂಕ್ಷ್ಮ ಮತ್ತು ಜವಾಬ್ದಾರಿಯುತ ನಡೆ ತೋರಿದ ಮಾಧ್ಯಮದ ಪ್ರತಿಯೊಬ್ಬರಿಗೂ ನಾನು ಪ್ರಾಮಾಣಿಕವಾಗಿ ನನ್ನ ಹೃದಾಯಾಂತರಾಳದಿಂದ ಧನ್ಯವಾದ ಹೇಳಲು ಬಯಸುತ್ತೇನೆ.

    ಸ್ಟೋರಿಯಲ್ಲಿ ಏನಿದೆ?
    ಕಳೆದ ದಶಕಗಳಿಂದ ನನ್ನ ಜೊತೆಯಾಗಿದ್ದ ನನ್ನ ಸ್ನೇಹಿತರ ಬಳಗ, ಕೆಲವು ದಿನಗಳ ಹಿಂದಿನ ಸುಳ್ಳಿನ ಸರಮಾಲೆಗೆ ಬಲಿಯಾದದ್ದು ತೀರ ದುರದೃಷ್ಟಕರ. ಆದರೂ ಸಹ, ನಿಮ್ಮ ತಾಳ್ಮೆಗೆ, ಸತ್ಯದ ಪರ ಧೃತಿಗೆಡದೆ ನಿಲ್ಲುವ ನಿಮ್ಮ ಹಾಗೂ ನಿಮ್ಮ ಕುಟುಂಬದ ಧೈರ್ಯಕ್ಕೆ, ಸಹಕಾರಕ್ಕೆ ನಾನು ಆಭಾರಿಯಾಗಿದ್ದೇನೆ. ಈ ವಿಚಾರದಲ್ಲಿ ನಿಮಗಾದ ನೋವಿಗೆ ನಾನು ವಿನಮ್ರತೆಯಿಂದ ಕ್ಷಮೆಯಾಚಿಸುತ್ತೇನೆ. ಎಲ್ಲರಿಗೂ ನಿಮ್ಮಂಥ ಸಹೃದಯಿ ಸ್ನೇಹ ಬಳಗ ಸಿಗುವ ಅದೃಷ್ಟ ಸಿಗಲಿ ಎಂದು ಹಾರೈಸುತ್ತೇನೆ.

    ಕಳೆದ ಏಳು ತಿಂಗಳುಗಳು ತೀವ್ರ ಒತ್ತಡ ಮತ್ತು ಆಘಾತದಿಂದ ಕೂಡಿದ್ದವು. ನನ್ನೊಂದಿಗೆ ಶಕ್ತಿಯಾಗಿ ನಿಂತ ನನ್ನ ಕುಟುಂಬ, ಸ್ನೇಹಿತರು, ಚಲನಚಿತ್ರರಂಗದ ಬಂಧುಗಳು, ಅನ್ಯಾಯದ ವಿರುದ್ಧ ದನಿಯೆತ್ತಿ ನನ್ನ ಪರ ನಿಂತ ಪ್ರತಿಯೊಬ್ಬರಿಗೂ, ವಿಶೇಷವಾಗಿ ನನ್ನೊಂದಿಗೆ ದುಃಖಿಸಿ ಸಾಂತ್ವಾನ ಹೇಳಿದ ನನ್ನ ವಿದ್ಯಾರ್ಥಿಗಳಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ನನ್ನ ಶಕ್ತಿಯನ್ನು ಮರಳಿ ಪಡೆಯಲು ಮತ್ತು ನ್ಯಾಯದ ಪರ ಹೋರಾಡಲು ನೀವೆಲ್ಲರೂ ನನಗೆ ಸಹಾಯ ಮಾಡಿದ್ದೀರಿ. ನಿಮ್ಮ ಪ್ರೀತಿ, ದಯೆಯ ಋಣ ತೀರಿಸುವ ಅವಕಾಶ ನನಗೆ ಸಿಗಲಿ ಎಂದು ನಾನು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.

    ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ ಹಾಗೂ ಅದಕ್ಕಾಗಿ ಹೋರಾಡುತ್ತೇನೆ ಎಂದು ನಾನು ಪುನರುಚ್ಚರಿಸುತ್ತೇನೆ. ನನ್ನ ಮೇಲೆ ಮಾಡಿರುವ ಪ್ರತಿಯೊಂದು ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೆ ನನ್ನ ದಾರಿಗೆ ಏನೇ ಎದುರಾದರೂ ಹೆದರುವುದಿಲ್ಲ.

    ಹಾರ್ವರ್ಡ್‌ನಲ್ಲಿ ನಾನೊಂದು ಶೈಕ್ಷಣಿಕ ಯೋಜನೆಯನ್ನು ಶುರುಮಾಡಿದ್ದು, ಆ ಕಾಯಕವನ್ನು ಮುಂದುವರಿಸಲು ನಾನು ಅಮೆರಿಕಗೆ ಹಿಂತಿರುಗುತ್ತಿದ್ದೇನೆ. ಈ ಸಮಯವು, ನನಗೆ ಇನ್ನಷ್ಟು ಕಲಿಯಲು, ಬೆಳೆಯಲು ಮತ್ತು ಎಲ್ಲಾ ಆಘಾತಗಳಿಂದ ಗುಣಮುಖಳಾಗಲು ಸಹಾಯ ಮಾಡುತ್ತದೆ ಎಂದು ನಾನು ನಂಬಿದ್ದೇನೆ. ಸರಿಯಾದ ಸಮಯ ಬಂದಾಗ ನಾನು ಹಿಂದಿರುಗುತ್ತೇನೆ ಮತ್ತು ಇಲ್ಲಿನ ಕೆಲಸಗಳನ್ನು ಮುಂದುವರಿಸುತ್ತೇನೆ. ದೇವರ ಆಶೀರ್ವಾದ ಸದಾ ಎಲ್ಲರ ಮೇಲೆ ಇರಲಿ.

  • ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆ ಮೇಲೆಯೇ ಕಲ್ಲು ತೂರಾಟ!

    ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆ ಮೇಲೆಯೇ ಕಲ್ಲು ತೂರಾಟ!

    – ಮದುವೆ ಮಾಡಿಕೊಡುವಂತೆ ಯುವತಿ ತಾಯಿಗೆ ಧಮ್ಕಿ

    ಬೆಳಗಾವಿ: ಹುಬ್ಬಳ್ಳಿಯಲ್ಲಿ ನೇಹಾ, ಅಂಜಲಿ ಕೊಲೆ ಪ್ರಕರಣದ ನಂತರವೂ ಪಾಗಲ್ ಪ್ರೇಮಿಗಳ ಕಾಟ ತಪ್ಪಿಲ್ಲ. ಇದೀಗ ಬೆಳಗಾವಿಯಲ್ಲೊಬ್ಬ (Belagavi) ಸೈಕೋಪಾತ್ ಕಾಣಿಸಿಕೊಂಡಿದ್ದಾನೆ.

    ಬೆಳಗಾವಿ ತಾಲೂಕಿನ ಕಿಣೈ ಗ್ರಾಮದ ತಿಪ್ಪಣ್ಣ ಡೋಕರೆ (27) ಎಂಬ ಪಾಗಲ್ ಪ್ರೇಮಿಯ ಕಾಟದಿಂದ ಯುವತಿ ಕುಟುಂಬ ಕಂಗಾಲಾಗಿದೆ. ಯುವತಿ ಅದೇ ಗ್ರಾಮದ ಕಿಣೈಯಲ್ಲಿರುವ ಮನೆಯಲ್ಲಿ ತಾಯಿ ಜೊತೆಗೆ ವಾಸವಿದ್ದಾಳೆ. ಬಿಕಾಂ ಓದುತ್ತಿರುವ ಈಕೆ ನಿತ್ಯ ಕಾಲೇಜಿಗೆ ಹೋಗುವಾಗಲೇ ಫಾಲೋ ಮಾಡಿ ತಿಪ್ಪಣ್ಣ ರೇಗಿಸುತ್ತಿದ್ದನು.

    ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆ ಮೇಲೆಯೇ ಕಲ್ಲು ತೂರಿ ನೇಹಾಳಂತೆ ಕೊಲೆ ಮಾಡುವ ಬೆದರಿಕೆ ಹಾಕಿದ್ದಾನೆ. ಪಾಗಲ್ ಪ್ರೇಮಿ ಕಾಟದಿಂದ ಯುವತಿ ಕಾಲೇಜಿಗೆ ಹೋಗುವುದನ್ನೇ ಬಿಟ್ಟಿದ್ದಾಳೆ. ಪ್ರೀತಿಸು, ಮದುವೆ ಆಗೆಂದು ಕಳೆದ ಮೂರು ವರ್ಷಗಳಿಂದ ಡೋಕರೆ ಪೀಡಿಸುತ್ತಿದ್ದಾನೆ. ಮದುವೆ ಮಾಡಿಕೊಡದಿದ್ದರೆ ಹತ್ಯೆಗೈಯ್ಯುವುದಾಗಿ ಯುವತಿ ಹಾಗೂ ತಾಯಿಗೆ ತಿಪ್ಪಣ್ಣ ಬೆದರಿಕೆ ಹಾಕಿದ್ದಾನೆ. ಇದನ್ನೂ ಓದಿ: ರಾತ್ರಿ ಸುರಿದ ಮಳೆಗೆ ರಾಜಕಾಲುವೆಗೆ ಉರುಳಿದ ಆಟೋ – ಚಾಲಕ ದುರ್ಮರಣ

    ಕೆಲ ತಿಂಗಳ ಹಿಂದೆ ಯುವತಿ ಮನೆಯ ಹಿಂಬಾಗಿಲಿಗೆ ಬೆಂಕಿ ಹಚ್ಚಿ ಹುಚ್ಚಾಟ ಮೆರೆದಿದ್ದನು. ಯಾವುದೇ ಕೆಲಸ ಮಾಡದೇ ಕುಡಿದು ಊರಲ್ಲಿ ಸುತ್ತಾಡುವ ತಿಪ್ಪಣ್ಣನ ಕಿರಿಕಿರಿಗೆ ಬೇಸತ್ತು ಕುಟುಂಬ ಪೊಲೀಸರ ಮೊರೆ ಹೋಗಿದೆ. ಮೂರು ವರ್ಷಗಳ ಹಿಂದೆಯೇ ತಿಪ್ಪಣ್ಣ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಆಗ ಪೊಲೀಸರ ವಾರ್ನ್‍ಗೆ ಕೆಲ ದಿನಗಳ ಕಾಲ ಯುವತಿ ತಂಟೆಗೆ ಹೋಗದೇ ಸೈಲೆಂಟ್ ಆಗಿದ್ದ. ಈಗ ಮತ್ತೆ ಬಾಲಬಿಚ್ಚಿರುವ ತಿಪ್ಪಣ್ಣ, ಯುವತಿಯ ಮನೆ ಮೇಲೆ ಕಲ್ಲು ತೂರಿ ಅಟ್ಟಹಾಸ ಮೆರೆದಿದ್ದಾನೆ.

    ಸದ್ಯ ಕುಟುಂಬ ಮತ್ತೆ ರಕ್ಷಣೆ ಕೋರಿ ನಗರ ಪೊಲೀಸ್ ಆಯುಕ್ತರ ಕಚೇರಿ ಮೆಟ್ಟಿಲೇರಿದೆ. ಇದೀಗ ನಗರ ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ರಕ್ಷಣೆಗಾಗಿ ಯುವತಿ ಮನೆಗೆ ಓರ್ವ ಪೊಲೀಸ್ ಪೇದೆಯನ್ನು ನೇಮಿಸಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಹುಟ್ಟು ಹಬ್ಬ ಆಚರಿಸಿಕೊಳ್ಳಲ್ಲ: ಯುವ ಫ್ಯಾನ್ಸಿಗೆ ನಿರಾಸೆ

    ಹುಟ್ಟು ಹಬ್ಬ ಆಚರಿಸಿಕೊಳ್ಳಲ್ಲ: ಯುವ ಫ್ಯಾನ್ಸಿಗೆ ನಿರಾಸೆ

    ನಾಳೆ ನಟ ಯುವರಾಜ್ ಕುಮಾರ್ ಹುಟ್ಟು ಹಬ್ಬ. ಇವರ ನಟನೆಯ ಯುವ ಸಿನಿಮಾ ಕೂಡ ಗೆಲುವು ಸಾಧಿಸಿದ್ದರಿಂದ, ಅದ್ದೂರಿಯಾಗಿಯೇ ನಟನ ಹುಟ್ಟು ಹಬ್ಬವನ್ನು (Birthday) ಆಚರಿಸಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದರು. ಆದರೆ, ಅಭಿಮಾನಿಗಳಿಗೆ ನಿರಾಸೆಯಾಗಿದೆ. ತಾವು ಆ ದಿನದಂದು ಮನೆಯಲ್ಲಿ ಇರೋದಿಲ್ಲ. ಹಾಗಾಗಿ ನೀವು ಇದ್ದಲ್ಲಿಂದಲೇ ಹಾರೈಸಿ ಎಂದು ಯುವರಾಜ್ ಕುಮಾರ್ ವಿಡಿಯೋ ಮಾಡಿದ್ದಾರೆ.

    ಚುನಾವಣೆ ಮತ್ತು ಇತರ ಕಾರಣಗಳಿಂದಾಗಿ ಈ ಬಾರಿ ಯುವ ರಾಜ್ ಕುಮಾರ್, ಮನೆಯಲ್ಲಿ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎನ್ನುವ ಮಾಹಿತಿ ಸಿಕ್ಕಿದೆ. ಮನೆಯಲ್ಲಿ ಅಂದು ಇರೋದಿಲ್ಲವೆಂದದು ಸ್ವತಃ ಯುವರಾಜ್ ಅವರೇ ವಿಡಿಯೋ ಸಂದೇಶ ಕಳುಹಿಸಿದ್ದಾರೆ.

    ಯುವ ಗೆಲುವು

    ವಿಜಯ್ ಕಿರಗಂದೂರ್ ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಯುವ ರಾಜಕುಮಾರ್ (Yuvaraj Kumar) ನಾಯಕರಾಗಿ ನಟಿಸಿರುವ ಮೊದಲ ಚಿತ್ರ “ಯುವ” ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಮೂಲಕ ಹೊಂಬಾಳೆ ಫಿಲಂಸ್ ನ ಗೆಲುವಿನ ಓಟಕ್ಕೆ  ಮತ್ತೊಂದು ಚಿತ್ರ ಸೇರ್ಪಡೆಯಾಗಿದೆ. ಈ ಯಶಸ್ಸಿನ (Success) ಸಂಭ್ರಮವನ್ನು ಸಂಭ್ರಮಿಸಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ರಾಜ್ಯದ ಜನತೆ “ಯುವ” (Yuva) ಚಿತ್ರವನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಚಿತ್ರ ಮೂರನೇ ವಾರಕ್ಕೆ ಕಾಲಿಟ್ಟಿದೆ. ಈಗಲೂ ಜನ ಕುಟುಂಬ ಸಮೇತ ಬಂದು ಸಿನಿಮಾ ನೋಡುತ್ತಿದ್ದಾರೆ. ಕನ್ನಡ ಕಲಾರಸಿಕರಿಗೆ, ಮಾಧ್ಯಮದವರಿಗೆ, ಹೊಂಬಾಳೆ ಫಿಲಂಸ್ ಸಂಸ್ಥೆಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಸಂತೋಷ್ ಆನಂದರಾಮ್.

     

    ಜನರು ನನ್ನ ಮೊದಲ ಚಿತ್ರಕ್ಕೆ ತೋರುತ್ತಿರುವ ಒಲವಿಗೆ ಮನ ತುಂಬಿ ಬಂದಿದೆ ಎಂದು ಮಾತನಾಡಿದ ನಾಯಕ ಯುವ ರಾಜಕುಮಾರ್, ಪ್ರಥಮವಾಗಿ ನಾನು ನನಗೆ ಅವಕಾಶ ನೀಡಿದ ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರ್ ಅವರಿಗೆ, ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ. ನನ್ನ ಸಹ ಕಲಾವಿದರ ಹಾಗೂ ತಂತ್ರಜ್ಞರ ಪ್ರೋತ್ಸಾಹವನ್ನು ಈ ಸಮಯದಲ್ಲಿ ನೆನೆಯುತ್ತೇನೆ. ಮೊದಲ ಚಿತ್ರದಲ್ಲಿ ನನ್ನಿಂದೇನಾದರೂ ಸಣ್ಣಪುಟ್ಟ ತಪ್ಪಾಗಿದ್ದರೆ ಮುಂದಿನ ಚಿತ್ರಗಳಲ್ಲಿ ಸರಿ ಪಡಿಸಿಕೊಳ್ಳುತ್ತೇನೆ. ಜನ ಫ್ಯಾಮಿಲಿ ಸಮೇತ ಬಂದು ಚಿತ್ರವನ್ನು ನೋಡುತ್ತಿರುವುದು ಬಹಳ ಖುಷಿಯಾಗಿದೆ. ಈ ಮೂಲಕ ರಾಜ್ಯದ ಜನತೆಗೆ ವಿಶೇಷ ಧನ್ಯವಾದ ತಿಳಿಸುತ್ತೇನೆ ಎಂದರು.

  • ‘ಯುವ’ ಸಿನಿಮಾ ನೋಡಿ ಧನ್ಯವಾದ ತಿಳಿಸಿದ ಕಿಚ್ಚ ಸುದೀಪ್

    ‘ಯುವ’ ಸಿನಿಮಾ ನೋಡಿ ಧನ್ಯವಾದ ತಿಳಿಸಿದ ಕಿಚ್ಚ ಸುದೀಪ್

    ಕಿಚ್ಚ ಸುದೀಪ್ ‘ಯುವ’ (Yuva) ಸಿನಿಮಾವನ್ನು ನೋಡಿ ಚಿತ್ರತಂಡಕ್ಕೆ ಅಭಿನಂದನೆ ತಿಳಿಸಿದ್ದಾರೆ. ತಮಗಾಗಿ ಸ್ಪೆಷಲ್ ಶೋ ಆಯೋಜನೆ ಮಾಡಿದ್ದಕ್ಕೆ ಹೊಂಬಾಳೆ ಫಿಲ್ಮ್ಸ್ ಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಅಲ್ಲದೇ, ಯುವರಾಜ್ ಕುಮಾರ್ ಅವರಿಗೆ ಉತ್ತಮ ಭವಿಷ್ಯವಿದೆ ಎಂದು ಹಾರೈಸಿದ್ದಾರೆ. ವಿಶೇಷ ಪ್ರದರ್ಶನವನ್ನು ಸುದೀಪ್ (Kichcha Sudeep) ಮನೆಯಲ್ಲೇ ಆಯೋಜನೆ ಮಾಡಲಾಗಿತ್ತು. ನಿರ್ದೇಶಕ ಸಂತೋಷ್ ಆನಂದ್ ರಾಮ್, ಯುವ (Yuvaraj Kumar) ಹಾಗೂ ಕಾರ್ತಿಕ್ ಸೇರಿದಂತೆ ಹಲವು ಭಾಗಿಯಾಗಿದ್ದರು.

    ಸಕ್ಸಸ್ ಸಂಭ್ರಮ

    ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಹ ಕೆ.ಜಿ.ಎಫ್, ಕಾಂತಾರ, ರಾಜಕುಮಾರ ದಂತಹ ಯಶಸ್ವಿ ಚಿತ್ರಗಳ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಲಾಂಛದಡಿಯಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಮೊದಲ ಚಿತ್ರ “ಯುವ” ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಮೂಲಕ ಹೊಂಬಾಳೆ ಫಿಲಂಸ್ ನ ಗೆಲುವಿನ ಓಟಕ್ಕೆ  ಮತ್ತೊಂದು ಚಿತ್ರ ಸೇರ್ಪಡೆಯಾಗಿದೆ. ಈ ಯಶಸ್ಸಿನ ಸಂಭ್ರಮವನ್ನು ಸಂಭ್ರಮಿಸಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.

    ರಾಜ್ಯದ ಜನತೆ “ಯುವ” ಚಿತ್ರವನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಚಿತ್ರ ಮೂರನೇ ವಾರಕ್ಕೆ ಕಾಲಿಟ್ಟಿದೆ. ಈಗಲೂ ಜನ ಕುಟುಂಬ ಸಮೇತ ಬಂದು ಸಿನಿಮಾ ನೋಡುತ್ತಿದ್ದಾರೆ. ಕನ್ನಡ ಕಲಾರಸಿಕರಿಗೆ, ಮಾಧ್ಯಮದವರಿಗೆ, ಹೊಂಬಾಳೆ ಫಿಲಂಸ್ ಸಂಸ್ಥೆಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಸಂತೋಷ್ ಆನಂದರಾಮ್.

    ಜನರು ನನ್ನ ಮೊದಲ ಚಿತ್ರಕ್ಕೆ ತೋರುತ್ತಿರುವ ಒಲವಿಗೆ ಮನ ತುಂಬಿ ಬಂದಿದೆ ಎಂದು ಮಾತನಾಡಿದ ನಾಯಕ ಯುವ ರಾಜಕುಮಾರ್, ಪ್ರಥಮವಾಗಿ ನಾನು ನನಗೆ ಅವಕಾಶ ನೀಡಿದ ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರ್ ಅವರಿಗೆ, ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ. ನನ್ನ ಸಹ ಕಲಾವಿದರ ಹಾಗೂ ತಂತ್ರಜ್ಞರ ಪ್ರೋತ್ಸಾಹವನ್ನು ಈ ಸಮಯದಲ್ಲಿ ನೆನೆಯುತ್ತೇನೆ. ಮೊದಲ ಚಿತ್ರದಲ್ಲಿ ನನ್ನಿಂದೇನಾದರೂ ಸಣ್ಣಪುಟ್ಟ ತಪ್ಪಾಗಿದ್ದರೆ ಮುಂದಿನ ಚಿತ್ರಗಳಲ್ಲಿ ಸರಿ ಪಡಿಸಿಕೊಳ್ಳುತ್ತೇನೆ. ಜನ ಫ್ಯಾಮಿಲಿ ಸಮೇತ ಬಂದು ಚಿತ್ರವನ್ನು ನೋಡುತ್ತಿರುವುದು ಬಹಳ ಖುಷಿಯಾಗಿದೆ. ಈ ಮೂಲಕ ರಾಜ್ಯದ ಜನತೆಗೆ ವಿಶೇಷ ಧನ್ಯವಾದ ತಿಳಿಸುತ್ತೇನೆ ಎಂದರು.

    ನನ್ನ ಮಗನ ಮೊದಲ ಚಿತ್ರವನ್ನು  ನಿರ್ಮಾಣ ಮಾಡಿದ ಹೊಂಬಾಳೆ ಸಂಸ್ಥೆಗೆ ಮೊದಲು ಧನ್ಯವಾದ ಹೇಳುತ್ತೇನೆ. ನಂತರ ನನ್ನ ಮಗನ ಒಂದು ಬ್ರಾಂಡ್ ಗೆ ಸೀಮಿತ ಮಾಡದೆ ಎಲ್ಲಾ ರೀತಿಯ ನಟನೆಯನ್ನು ಅವನಿಂದ ಎಲ್ಲಾ ರೀತಿಯ ನಟನೆಯನ್ನು ಮಾಡಿಸಿರುವ ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೂ ಧನ್ಯವಾದ ಹೇಳುತ್ತಾ, ಯುವನ ಸಿನಿಮಾ ಹಾದಿ ಈಗಷ್ಟೇ ಆರಂಭವಾಗಿದೆ. ‌ಮುಂದೆ ಬೇರೆಬೇರೆ ಪಾತ್ರಗಳಲ್ಲಿ ಅವನು ನಟಿಸಿ ಜನರಿಂದ ಸೈ ಎನಿಸಿಕೊಳ್ಳಬೇಕು ಎಂದು ರಾಘವೇಂದ್ರ ರಾಜಕುಮಾರ್ ತಿಳಿಸಿದರು.

    ಒಳ್ಳೆಯ ಪಾತ್ರ ನೀಡಿದ್ದಕ್ಕೆ ನಾಯಕಿ ಸಪ್ತಮಿ ಗೌಡ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ ಹೇಳಿದರು ಚಿತ್ರದಲ್ಲಿ ಅಭಿನಯಿಸಿರುವ ಅಚ್ಯುತಕುಮಾರ್, ಸುಧಾರಾಣಿ, ಗೋಪಾಲಕೃಷ್ಣ ದೇಶಪಾಂಡೆ, ರವಿಶಂಕರ್ ಗೌಡ, ರಾಘು ಶಿವಮೊಗ್ಗ ಹಾಗೂ ಛಾಯಾಗ್ರಾಹಕ ಶ್ರೀಶ ಕುದುವಳ್ಳಿ “ಯುವ” ಚಿತ್ರದ ಗೆಲುವನ್ನು ‌ತಮ್ಮ ಮಾತುಗಳ ಮೂಲಕ ಹಂಚಿಕೊಂಡರು.

  • ‘ಯುವ’ ಸಕ್ಸಸ್: ಸಂಭ್ರಮ ಹಂಚಿಕೊಂಡ ಹೊಂಬಾಳೆ ಫಿಲ್ಮ್ಸ್

    ‘ಯುವ’ ಸಕ್ಸಸ್: ಸಂಭ್ರಮ ಹಂಚಿಕೊಂಡ ಹೊಂಬಾಳೆ ಫಿಲ್ಮ್ಸ್

    ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಹ ಕೆ.ಜಿ.ಎಫ್, ಕಾಂತಾರ, ರಾಜಕುಮಾರ ದಂತಹ ಯಶಸ್ವಿ ಚಿತ್ರಗಳ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಲಾಂಛದಡಿಯಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಯುವ ರಾಜಕುಮಾರ್ (Yuvaraj Kumar) ನಾಯಕರಾಗಿ ನಟಿಸಿರುವ ಮೊದಲ ಚಿತ್ರ “ಯುವ” ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಮೂಲಕ ಹೊಂಬಾಳೆ ಫಿಲಂಸ್ ನ ಗೆಲುವಿನ ಓಟಕ್ಕೆ  ಮತ್ತೊಂದು ಚಿತ್ರ ಸೇರ್ಪಡೆಯಾಗಿದೆ. ಈ ಯಶಸ್ಸಿನ (Success) ಸಂಭ್ರಮವನ್ನು ಸಂಭ್ರಮಿಸಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.

    ರಾಜ್ಯದ ಜನತೆ “ಯುವ” (Yuva) ಚಿತ್ರವನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಚಿತ್ರ ಮೂರನೇ ವಾರಕ್ಕೆ ಕಾಲಿಟ್ಟಿದೆ. ಈಗಲೂ ಜನ ಕುಟುಂಬ ಸಮೇತ ಬಂದು ಸಿನಿಮಾ ನೋಡುತ್ತಿದ್ದಾರೆ. ಕನ್ನಡ ಕಲಾರಸಿಕರಿಗೆ, ಮಾಧ್ಯಮದವರಿಗೆ, ಹೊಂಬಾಳೆ ಫಿಲಂಸ್ ಸಂಸ್ಥೆಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಸಂತೋಷ್ ಆನಂದರಾಮ್.

    ಜನರು ನನ್ನ ಮೊದಲ ಚಿತ್ರಕ್ಕೆ ತೋರುತ್ತಿರುವ ಒಲವಿಗೆ ಮನ ತುಂಬಿ ಬಂದಿದೆ ಎಂದು ಮಾತನಾಡಿದ ನಾಯಕ ಯುವ ರಾಜಕುಮಾರ್, ಪ್ರಥಮವಾಗಿ ನಾನು ನನಗೆ ಅವಕಾಶ ನೀಡಿದ ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರ್ ಅವರಿಗೆ, ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ. ನನ್ನ ಸಹ ಕಲಾವಿದರ ಹಾಗೂ ತಂತ್ರಜ್ಞರ ಪ್ರೋತ್ಸಾಹವನ್ನು ಈ ಸಮಯದಲ್ಲಿ ನೆನೆಯುತ್ತೇನೆ. ಮೊದಲ ಚಿತ್ರದಲ್ಲಿ ನನ್ನಿಂದೇನಾದರೂ ಸಣ್ಣಪುಟ್ಟ ತಪ್ಪಾಗಿದ್ದರೆ ಮುಂದಿನ ಚಿತ್ರಗಳಲ್ಲಿ ಸರಿ ಪಡಿಸಿಕೊಳ್ಳುತ್ತೇನೆ. ಜನ ಫ್ಯಾಮಿಲಿ ಸಮೇತ ಬಂದು ಚಿತ್ರವನ್ನು ನೋಡುತ್ತಿರುವುದು ಬಹಳ ಖುಷಿಯಾಗಿದೆ. ಈ ಮೂಲಕ ರಾಜ್ಯದ ಜನತೆಗೆ ವಿಶೇಷ ಧನ್ಯವಾದ ತಿಳಿಸುತ್ತೇನೆ ಎಂದರು.

    ನನ್ನ ಮಗನ ಮೊದಲ ಚಿತ್ರವನ್ನು  ನಿರ್ಮಾಣ ಮಾಡಿದ ಹೊಂಬಾಳೆ ಸಂಸ್ಥೆಗೆ ಮೊದಲು ಧನ್ಯವಾದ ಹೇಳುತ್ತೇನೆ. ನಂತರ ನನ್ನ ಮಗನ ಒಂದು ಬ್ರಾಂಡ್ ಗೆ ಸೀಮಿತ ಮಾಡದೆ ಎಲ್ಲಾ ರೀತಿಯ ನಟನೆಯನ್ನು ಅವನಿಂದ ಎಲ್ಲಾ ರೀತಿಯ ನಟನೆಯನ್ನು ಮಾಡಿಸಿರುವ ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೂ ಧನ್ಯವಾದ ಹೇಳುತ್ತಾ, ಯುವನ ಸಿನಿಮಾ ಹಾದಿ ಈಗಷ್ಟೇ ಆರಂಭವಾಗಿದೆ. ‌ಮುಂದೆ ಬೇರೆಬೇರೆ ಪಾತ್ರಗಳಲ್ಲಿ ಅವನು ನಟಿಸಿ ಜನರಿಂದ ಸೈ ಎನಿಸಿಕೊಳ್ಳಬೇಕು ಎಂದು ರಾಘವೇಂದ್ರ ರಾಜಕುಮಾರ್ ತಿಳಿಸಿದರು.

    ಒಳ್ಳೆಯ ಪಾತ್ರ ನೀಡಿದ್ದಕ್ಕೆ ನಾಯಕಿ ಸಪ್ತಮಿ ಗೌಡ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ ಹೇಳಿದರು ಚಿತ್ರದಲ್ಲಿ ಅಭಿನಯಿಸಿರುವ ಅಚ್ಯುತಕುಮಾರ್, ಸುಧಾರಾಣಿ, ಗೋಪಾಲಕೃಷ್ಣ ದೇಶಪಾಂಡೆ, ರವಿಶಂಕರ್ ಗೌಡ, ರಾಘು ಶಿವಮೊಗ್ಗ ಹಾಗೂ ಛಾಯಾಗ್ರಾಹಕ ಶ್ರೀಶ ಕುದುವಳ್ಳಿ “ಯುವ” ಚಿತ್ರದ ಗೆಲುವನ್ನು ‌ತಮ್ಮ ಮಾತುಗಳ ಮೂಲಕ ಹಂಚಿಕೊಂಡರು.

  • ರಾಜ್ಯಾದ್ಯಂತ ‘ಯುವ’ ಚಿತ್ರ ರಿಲೀಸ್: ಸ್ವಾಗತಿಸಿದ ಅಪ್ಪು ಫ್ಯಾನ್ಸ್

    ರಾಜ್ಯಾದ್ಯಂತ ‘ಯುವ’ ಚಿತ್ರ ರಿಲೀಸ್: ಸ್ವಾಗತಿಸಿದ ಅಪ್ಪು ಫ್ಯಾನ್ಸ್

    ಇಂದಿನಿಂದ ರಾಜ್ಯಾದ್ಯಂತ ಯುವ (Yuva) ಸಿನಿಮಾ ರಿಲೀಸ್ (Released) ಆಗಿದೆ. ಮುನ್ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಯುವ ಬಿಡುಗಡೆಯಾಗಿದ್ದು, ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಚಿತ್ರವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ ಯುವ ರಾಜ್ ಕುಮಾರ್ (Yuvaraj Kumar) ಜೊತೆಗೆ ಅಪ್ಪು (Appu) ಕಟೌಟ್ ಕೂಡ ಚಿತ್ರಮಂದಿರದ ಮುಂದೆ ನಿಲ್ಲಿಸಿದ್ದಾರೆ.

    ಅದರಲ್ಲೂ ಬೆಂಗಳೂರಿನ ಪ್ರಮುಖ ಚಿತ್ರಮಂದಿರಗಳಲ್ಲಿ ಅರಮನೆ ರೀತಿಯ ಸೆಟ್, ಡಾ.ರಾಜ್ ಕುಟುಂಬದ ಕಟೌಟ್, ಯುವ ಕಟೌಟ್, ಪುನೀತ್ ರಾಜ್ ಕುಮಾರ್ ಕಟೌಟ್ ಹೀಗೆ ಅಭಿಮಾನಿಗಳು ತಮ್ಮದೇ ಆದ ರೀತಿಯಲ್ಲಿ ಅಭಿಮಾನ ತೋರಿಸಿದ್ದಾರೆ. ಮುಖ್ಯ ಚಿತ್ರಮಂದಿರ ಮೆಜೆಸ್ಟಿಕ್ ನ ಸಂತೋಷ್ ಥಿಯೇಟರ್ ನಲ್ಲಿ ಕಳೆಗಟ್ಟಿದೆ ಸಂಭ್ರಮ.

     

    ಪಟಾಕಿ ಸಿಡಿಸಿ, ಟಪ್ಪಾಂಗುಚ್ಚಿ ಹೆಜ್ಜೆಹಾಕಿ ದೊಡ್ಮನೆ ನಯಾ‌ ಕುಡಿ ಬರಮಾಡಿಕೊಳ್ಳುತ್ತಿದ್ದಾರೆ ಅಭಿಮಾನಿಗಳು. ಬೆಳ್ಳಂಬೆಳಗ್ಗೆ ಅನೇಕ ಸ್ಕ್ರೀನ್‌ಗಳಲ್ಲಿ ತೆರೆಕಂಡಿರುವ ಯುವ ಸಿನಿಮಾವನ್ನು ನೋಡುತ್ತಾ, ಅಪ್ಪುವನ್ನು ಕಳೆದುಕೊಂಡು ಮಿಸ್ ಮಾಡಿಕೊಳ್ತಿರುವ ಅಭಿಮಾನಿಗಳಿಗೆ ಯುವರಾಜ್ ಕುಮಾರ್ ರನ್ನು ಬರಮಾಡಿಕೊಳ್ಳುವ  ಸಂಭ್ರಮ ಎಲ್ಲೆಲ್ಲೂ ಕಾಣುತ್ತಿದೆ.