Tag: ಯುವರಾಜ್

  • ವಿಚಾರಣೆ ಬಳಿಕ ಬಿಗಿ ಭದ್ರತೆಯಲ್ಲಿ ಯುವರಾಜ್ ಕರೆದೊಯ್ದ ಬೆಂಬಲಿಗರು

    ವಿಚಾರಣೆ ಬಳಿಕ ಬಿಗಿ ಭದ್ರತೆಯಲ್ಲಿ ಯುವರಾಜ್ ಕರೆದೊಯ್ದ ಬೆಂಬಲಿಗರು

    ಬೆಂಗಳೂರು: ಖ್ಯಾತ ನಿರೂಪಕ, ಅಕುಲ್ ಬಾಲಾಜಿ ಹಾಗೂ ನಟ ಸಂತೋಷ್ ಕುಮಾರ್ ಅವರ ಸಿಸಿಬಿ ವಿಚಾರಣೆ ಅಂತ್ಯವಾಗಿದೆ. ವಿಚಾರಣೆಯ ಬಳಿಕ ಮಾಜಿ ಶಾಸಕ ಆರ್ ವಿ ದೇವರಾಜ್ ಪುತ್ರ ಮಾಜಿ ಕಾರ್ಪೋರೇಟರ್ ಯುವರಾಜ್ ಅವರನ್ನು ಬೆಂಬಲಿಗರು ಬಿಗಿ ಭದ್ರತೆಯಲ್ಲಿ ಕರೆದೊಯ್ದ ಪ್ರಸಂಗ ನಡೆದಿದೆ.

    ಸಿಸಿಬಿ ವಿಚಾರಣೆ ಎದುರಿಸಿದ ಬಳಿಕ ನಟ ಸಂತೋಷ್ ಹಾಗೂ ಅಕುಲ್ ಬಾಲಾಜಿ ಮಾಧ್ಯಮಗಳ ಜೊತೆ ಮಾತನಾಡಿ, ವಿಚಾರಣೆಗೆ ಕರೆದರೆ ಮತ್ತೆ ಬರುವುದಾಗಿ ಹೇಳಿದ್ದಾರೆ. ಆದರೆ ಯುವರಾಜ್ ಅವರನ್ನು ಮಾತ್ರ ಅವರ ಬೆಂಬಲಿಗರು ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ಬಂದು ಕರೆದೊಯ್ದಿದ್ದಾರೆ. ಮಾಧ್ಯಮಗಳ ಕ್ಯಾಮೆರಾ ಮ್ಯಾನ್ ಗಳನ್ನು ತಳ್ಳಿ ಯುವರಾಜ್ ನನ್ನು ಬೆಂಬಲಿಗರು ಕರೆದುಕೊಂಡು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಯಾವುದೇ ಮಾಹಿತಿಯನ್ನು ಯುವರಾಜ್ ನೀಡಿಲ್ಲ.

    ಡ್ರಗ್ಸ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ನಿನ್ನೆಯಷ್ಟೇ ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಈ ಮೂವರಿಗೆ ನೋಟಿಸ್ ನೀಡಿದ್ದರು. ಅದರಂತೆ ಈ ಮೂವರು ಕೂಡ ಇಂದು ಹಾಜರಾಗಿದ್ದು, ಸತತ 7 ಗಂಟೆಗಳ ವಿಚಾರಣೆ ಎದುರಿಸಿ, ಕೆಲವೊಂದಿಷ್ಟು ಮಾಹಿತಿಗಳನ್ನು ಸಿಸಿಬಿಗೆ ನೀಡಿದ್ದಾರೆ. ಇದನ್ನೂ ಓದಿ: ‘ಆ’ ಫೋಟೋ ಹಾಕಿ ಹೊಗಳಿದ್ದ ಸಂಜನಾ!

    ಈ ಮಧ್ಯೆ ಇಂದು ಮಂಗಳೂರಿನಲ್ಲಿ ಮಾದಕ ವಸ್ತುಗಳ ಸಮೇತ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಮಂಗಳೂರು ಸುರತ್ಕಲ್ ಕಾನ ನಿವಾಸಿ ಅಕೀಲ್ ನೌಶೀಲ್ (28) ಹಾಗೂ ಕುಳಾಯಿ ನಿವಾಸಿ ಕಿಶೋರ್ ಅಮನ್ ಶೆಟ್ಟಿ(30) ಎಂದು ಗುರುತಿಸಲಾಗಿದೆ. ಆರೋಪಿಗಳ ಬಳಿಯಿಂದ ಎಂಡಿಎಂ ಪೌಡರ್, ಬೈಕ್, 2 ಮೊಬೈಲ್ ಫೋನ್ ಸೇರಿದಂತೆ 1 ಲಕ್ಷ ಮೌಲ್ಯದ ವಸ್ತು ವಶಕ್ಕೆ ಒಡೆದುಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಕೆಲ ಆರೋಪಿಗಳಿದ್ದಾರೆ. ಇವರ ಚೈನ್ ಲಿಂಕ್ ಬಗ್ಗೆ ಸಂಪೂರ್ಣ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲಿಸ್ ಆಯುಕ್ತ ವಿಕಾಸ್ ಕುಮಾರ್ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಇಬ್ಬರ ಜೊತೆ ಬಂದು ಸಂಜನಾ ಮತಾಂತರ: ಮೌಲ್ವಿ ಮಹಮ್ಮದ್ ಜಲಾಲುದ್ದಿನ್

    ಖ್ಯಾತ ಡ್ಯಾನ್ಸರ್ ಆಗಿರುವ ಕಿಶೋರ್ ಶೆಟ್ಟಿ, ಹಿಂದಿಯ ಎಬಿಸಿಡಿ ಸಿನಿಮಾದಲ್ಲಿ ನಟಿಸಿದ್ದ. ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ನಲ್ಲೂ ಸ್ಪರ್ಧಿಯಾಗಿದ್ದ ಕಿಶೋರ್ ಶೆಟ್ಟಿ, ಇದೀಗ ಮಂಗಳೂರು ಸಿಸಿಬಿ ಪೊಲೀಸರ ಬಲೆಯಲ್ಲಿದ್ದಾನೆ. ಈತಹ ಬಹಳಷ್ಟು ಮಂದಿ ಹುಡುಗಿಯರಿಗೆ ಡ್ರಗ್ಸ್ ಕೊಟ್ಟು ಪಾರ್ಟಿ ಮಾಡ್ತಾ ಇದ್ದ. ಇತ್ತೀಚೆಗಷ್ಟೆ ಮಂಗಳೂರಿನಲ್ಲಿ ಒಂದು ಡ್ರಗ್ ಪಾರ್ಟಿ ಕೂಡ ಆಯೋಜಿಸಿದ್ದು, ಈ ಪಾರ್ಟಿಯಲ್ಲಿ ಬೆಂಗಳೂರಿನ ಪ್ರಖ್ಯಾತ ಆಂಕರ್ ಕಂ ನಟಿ ಭಾಗವಹಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಡ್ರಗ್ಸ್ ಕೇಸ್ – ನಟ ಸಂತೋಷ್, ಐಂದ್ರಿತಾ ಕಾಲೆಳೆದ ಪ್ರಶಾಂತ್ ಸಂಬರಗಿ

    https://www.youtube.com/watch?v=ryNo2EoUdLg

  • ಕ್ರಿಕೆಟ್ ನಿವೃತ್ತಿ ವಿಚಾರವನ್ನು ಪ್ರಕಟಿಸಿದ ಯುವರಾಜ್

    ಕ್ರಿಕೆಟ್ ನಿವೃತ್ತಿ ವಿಚಾರವನ್ನು ಪ್ರಕಟಿಸಿದ ಯುವರಾಜ್

    ನವದೆಹಲಿ: 2019ರ ವಿಶ್ವಕಪ್ ಟೂರ್ನಿಯ ಬಳಿಕ ತಮ್ಮ ನಿವೃತ್ತಿ ಬಗ್ಗೆ ಯೋಚಿಸುವುದಾಗಿ ಟೀಂ ಇಂಡಿಯಾದ ಆಲ್ ರೌಂಡರ್ ಯುವರಾಜ್ ಸಿಂಗ್ ಹೇಳಿದ್ದಾರೆ.

    ಮುಂದಿನ ಐಪಿಎಲ್ ಪಂದ್ಯಾವಳಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಕಣಕ್ಕಿಳಿಯಲಿರುವ ಅವರು, ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಮತ್ತೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೇ 2019 ರ ವಿಶ್ವಕಪ್ ವೇಳೆವರೆಗೂ ಕ್ರಿಕೆಟ್ ನಲ್ಲಿ ಮುಂದುವರೆಯಲಿದ್ದು ಬಳಿಕ ನಿವೃತ್ತಿಯ ಬಗ್ಗೆ ಚಿಂತನೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

    ಕ್ರಿಕೆಟ್ ವೃತ್ತಿ ಜೀವನದ ಆರಂಭ 6, 7 ವರ್ಷಗಳ ಕಾಲ ಉತ್ತಮವಾಗಿ ಆಡಿದ್ದೇನೆ. ನಂತರ ಅವಧಿಯಲ್ಲಿ ಯುವ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದರಿಂದ ನನಗೆ ಅವಕಾಶಗಳು ಕಡಿಮೆಯಾದವು. ಅದೇ ಸಂದರ್ಭದಲ್ಲಿ ಕ್ಯಾನ್ಸರ್ ನನ್ನನ್ನು ಕಾಡಿತು. ಆದರೆ ಕ್ಯಾನ್ಸರ್ ನಿಂದ ಗುಣಮುಖನಾದೆ. ಬಳಿಕ ತಂಡದಲ್ಲಿ ನನಗೆ ನಿರಂತರವಾಗಿ ಅವಕಾಶ ಸಿಗಲಿಲ್ಲ. ಕೆಲವು ಪಂದ್ಯಗಳಲ್ಲಿ ಮಾತ್ರ ಆಡಲು ಸಾಧ್ಯವಾಯಿತು ಎಂದರು.

    ಯುವರಾಜ್ ಸಿಂಗ್ 2017 ಜೂನ್ ನಲ್ಲಿ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದರು. 2011ರ ವಿಶ್ವಕಪ್ ವರೆಗೂ ಟೀಂ ಇಂಡಿಯಾ ತಂಡದಲ್ಲಿ ನಿರಂತರವಾಗಿ ಆಡಿದ್ದ ಯುವಿ ಆನಂತರ ಕ್ಯಾನ್ಸರ್ ನಿಂದ ಬಳಲಿದ್ದರು. ಆದರೆ ಕ್ಯಾನ್ಸರ್ ವಿರುದ್ಧ ಹೋರಾಟ ನಡೆಸಿ ಗೆದ್ದು ಬಂದ ಅವರು ಬಳಿಕ ಫಾರ್ಮ್ ಸಮಸ್ಯೆಯಿಂದ ಬಳಲಿದ್ದರು.

    ಇದೇ ವೇಳೆ ಆಫ್ರಿಕಾ ವಿರುದ್ಧದ ಸಿಮೀತ ಓವರ್ ಗಳ ಸರಣಿಯಲ್ಲಿ ಟೀಂ ಇಂಡಿಯಾ ಪ್ರದರ್ಶನಕ್ಕೆ ಮೆಚ್ಚುಗೆ ಸೂಚಿಸಿದರು. ಅಲ್ಲದೇ ಮುಂಬರುವ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಸರಣಿ ಗೆಲುವು ಪಡೆಯಲು ಕೊಹ್ಲಿ ಗಮನ ಹರಿಸಬೇಕಿದೆ. ತಂಡದ ಪ್ರತಿಯೊಬ್ಬ ಆಟಗಾರರು ಸ್ಥಿರ ಪ್ರದರ್ಶನ ನೀಡಬೇಕಿದೆ ಎಂದರು.