Tag: ಯುವ ರಾಜಕುಮಾರ್

  • ನಿಖಿಲ್ ಕುಮಾರ್ ಸೆಟ್ ನಲ್ಲಿ ಕಾಣಿಸಿಕೊಂಡ ಯುವರಾಜ್

    ನಿಖಿಲ್ ಕುಮಾರ್ ಸೆಟ್ ನಲ್ಲಿ ಕಾಣಿಸಿಕೊಂಡ ಯುವರಾಜ್

    ಬೆಂಗಳೂರಿನ ಸಪೋಟ ಗಾರ್ಡನ್ ನಲ್ಲಿ ನಿಖಿಲ್ ಕುಮಾರ್ (Nikhil Kumar) ನಟನೆಯ ಹೊಸ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ಚಿತ್ರೀಕರಣ ಸ್ಥಳಕ್ಕೆ ಯುವರಾಜ ಕುಮಾರ್ (Yuva Rajkumar) ಮತ್ತು ನಿರ್ದೇಶಕ ಸಂತೋಷ್ ಆನಂದ್ ರಾಮ್ ಭೇಟಿ ಮಾಡಿದ್ದಾರೆ. ಪ್ರತಿಷ್ಠಿತ ಲೈಕಾ ಸಂಸ್ಥೆ ನಿರ್ಮಾಣದ ಇನ್ನೂ ಹೆಸರಿಡದ ಸಿನಿಮಾ ಶೂಟಿಂಗ್ ನಲ್ಲಿ ನಿಖಿಲ್ ಬ್ಯುಸಿಯಾಗಿದ್ದಾರೆ. ಈ ಸಮಯದಲ್ಲಿ ಕನ್ನಡದ ಅನೇಕ ನಟರು ಶೂಟಿಂಗ್ ಸ್ಥಳಕ್ಕೆ ಭೇಟಿ ನೀಡಿ ವಿಶ್ ಮಾಡುತ್ತಿದ್ದಾರೆ.

    ಇತ್ತೀಚೆಗಷ್ಟೇ ಶಿವಣ್ಣ ಹಾಗೂ ಧ್ರುವ ಸರ್ಜಾ, ನಿಖಿಲ್ ಸಿನಿಮಾ ಸೆಟ್ ಗೆ ಭೇಟಿ ನೀಡಿದ್ದರು ಇದೀಗ ದೊಡ್ಮನೆ ನಟ ಯುವ ಭೇಟಿ ಕೊಟ್ಟಿದ್ದಾರೆ. ಸೆಟ್ ನಲ್ಲಿ ಕೆಲ ಸಮಯ ಮಾತುಕಥೆ ನಡೆಸಿದ ನಿಖಿಲ್, ಯುವ ಮತ್ತು ಸಂತೋಷ್ ಆನಂದ್ ರಾಮ್ ಸಿನಿಮಾಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಸಿನಿಮಾ ರಂಗದ ಹಲವಾರು ವಿಚಾರಗಳನ್ನು ನಿಖಿಲ್ ಮತ್ತು ಯುವರಾಜ್ ಕುಮಾರ್ ಹಂಚಿಕೊಂಡಿದ್ದಾರೆ.

     

    ಸಂತೋಷ್ ಆನಂದ್ ರಾಮ್  (Santhosh Anand Ram) ನಿರ್ದೇಶನದ, ಹೊಂಬಾಳೆ ಸಂಸ್ಥೆ ನಿರ್ಮಾಣದ ಯುವ ಸಿನಿಮಾದಲ್ಲಿ ಯುವರಾಜ್ ಕುಮಾರ್ ನಟಿಸುತ್ತಿದ್ದಾರೆ. ಮೈಸೂರಿನಲ್ಲಿ ಹಲವು ದಿನಗಳಿಂದ ಶೂಟಿಂಗ್ ನಡೆಯುತ್ತಿತ್ತು. ಆ ಭಾಗದ ಶೂಟಿಂಗ್ ಮುಗಿಸಿಕೊಂಡು ಇದೀಗ ಚಿತ್ರತಂಡ ಬೆಂಗಳೂರಿಗೆ ಬಂದಿಳಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯುವ ರಾಜ್‌ಕುಮಾರ್‌ ಸಿನಿಮಾದ ಟೈಟಲ್: ‘ಜ್ವಾಲಾಮುಖಿ’ನಾ? ಅಥವಾ ‘ಅಶ್ವಮೇಧ’ನಾ?

    ಯುವ ರಾಜ್‌ಕುಮಾರ್‌ ಸಿನಿಮಾದ ಟೈಟಲ್: ‘ಜ್ವಾಲಾಮುಖಿ’ನಾ? ಅಥವಾ ‘ಅಶ್ವಮೇಧ’ನಾ?

    ಇಂದು ಸಂಜೆ 6.55ಕ್ಕೆ ಯುವ ರಾಜ್‌ಕುಮಾರ್‌ (Yuva Rajkumar) ನಟನೆಯ ಚೊಚ್ಚಲು ಸಿನಿಮಾದ ಟೈಟಲ್ ಟೀಸರ್ ಅನಾವರಣಗೊಳ್ಳುತ್ತಿದೆ. ಟೀಸರ್ ಬಿಡುಗಡೆ ಕ್ಷಣಗಣನೆಯ ಹೊತ್ತಿನಲ್ಲಿ ಚಿತ್ರದ ಟೈಟಲ್ (Title) ಏನಿರಬಹುದು ಎನ್ನುವ ಚರ್ಚೆ ಶುರುವಾಗಿದೆ. ಜೊತೆಗೆ ಎರಡು ಶೀರ್ಷಿಕೆಗಳು ಕೂಡ ಗಾಂಧಿನಗರದಲ್ಲಿ ಕೇಳಿ ಬರುತ್ತಿವೆ. ಡಾ.ರಾಜ್‌ಕುಮಾರ್‌ ನಟನೆಯ ‘ಅಶ್ವಮೇಧ’ (Ashwamedha) ಅಥವಾ ‘ಜ್ವಾಲಾಮುಖಿ’ (Jwalamukhi) ಚಿತ್ರಗಳ ಹೆಸರನ್ನೇ ಯುವ  ಸಿನಿಮಾಗೆ ಇಡಲಾಗಿದೆ ಎಂದು ಕೇಳಿ ಬರುತ್ತಿದೆ.

    ಡಾ.ರಾಜ್ ಕುಟುಂಬದ ಅಭಿಮಾನಿಗಳು ಕೂಡ ಈ ಎರಡೂ ಹೆಸರಿನ ಪೋಸ್ಟರ್ ಗಳನ್ನು ತಮ್ಮದೇ ಆದ ರೀತಿಯಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಈ ಎರಡು ಶೀರ್ಷಿಕೆಗಳಲ್ಲಿ ಒಂದಂತೂ ಪಕ್ಕಾ ಎಂದೇ ಹೇಳಲಾಗುತ್ತಿದೆ. ಅಲ್ಲದೇ, ಜ್ವಾಲಮುಖಿಯೇ ಫಿಕ್ಸ್ ಆಗಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಸಹಜವಾಗಿಯೇ ಟೈಟಲ್ ಬಗ್ಗೆ ಕುತೂಹಲ ಮತ್ತು ನಿರೀಕ್ಷೆ ಹೆಚ್ಚಾಗಿದೆ. ಯಾವ ಟೈಟಲ್ ಅನ್ನು ಚಿತ್ರತಂಡ ಘೋಷಿಸಲಿದೆ ಎಂದು ಕಾದು ನೋಡಬೇಕಿದೆ. ಇದನ್ನೂ ಓದಿ: ಹೃತಿಕ್ ರೋಷನ್- ಸಬಾ ಮದುವೆ ಬಗ್ಗೆ ಇಲ್ಲಿದೆ ಬಿಗ್ ಅಪ್‌ಡೇಟ್

    ಈ ಹಿಂದೆ ಸಿನಿಮಾದ ಟೀಸರ್ ಮತ್ತು ಟೈಟಲ್ ಲಾಂಚ್ ಅನ್ನು ಪುನೀತ್ ರಾಜ್‌ಕುಮಾರ್‌ ಅವರ ಹುಟ್ಟು ಹಬ್ಬದಂದು ರಿಲೀಸ್ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಅಪ್ಪು ಹುಟ್ಟುಹಬ್ಬ 14 ದಿನ ಬಾಕಿ ಇರುವಾಗಲೇ ಇಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಕಾರಣ ಅಂದು ಪುನೀತ್ ಪತ್ನಿ ಅಶ್ವಿನಿ ಅವರು ಲಭ್ಯವಿಲ್ಲ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ. ಈ ಕಾರಣದಿಂದಾಗಿ ಶುಕ್ರವಾರ ಸಂಜೆ ಮುಹೂರ್ತ, ಟೈಟಲ್ ಮತ್ತು ಟೀಸರ್ ಲಾಂಚ್ ಮಾಡಲು ಸಂಸ್ಥೆ ಮುಂದೆ ಬಂದಿದೆಯಂತೆ.

    ಈ ಸಿನಿಮಾ ಮೂಲಕ ಪುನೀತ್ ರಾಜ್‌ಕುಮಾರ್‌ ಅವರ ಉತ್ತರಾಧಿಕಾರಿ ಎಂದೇ ಬಿಂಬಿಸಲಾಗುತ್ತಿರುವ ಯುವರಾಜ್ ಕುಮಾರ್ ಅಧಿಕೃತವಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಸಿನಿಮಾ ಮೂಡಿ ಬರಲಿದೆ.  ಪುನೀತ್  ಜೊತೆ ಒಳ್ಳೆಯ ಬಾಂಧವ್ಯ ಹಾಗೂ ಅವರ ಎರಡು ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಸಂತೋಷ್ ಆನಂದ್ ರಾಮ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದರೆ, ನುರಿತ ತಂತ್ರಜ್ಞರ ತಂಡವೇ ಸಿನಿಮಾದಲ್ಲಿದೆ.

    ಅಂದುಕೊಂಡಂತೆ ಆಗಿದ್ದರೆ ಯುವ ಈ ಹಿಂದೆಯೇ ಲಾಂಚ್ ಆಗಬೇಕಿತ್ತು. ಯುವಗಾಗಿಯೇ ‘ಯುವ ರಣಧೀರ ಕಂಠೀರವ’ ಸಿನಿಮಾ ಮಾಡಲು ಹೊರಟಿದ್ದರು ಜಾಕಿ ತಿಮ್ಮಯ್ಯ. ಸಾಕಷ್ಟು ಹಣ ಖರ್ಚು ಮಾಡಿ ಟೀಸರ್ ಕೂಡ ರಿಲೀಸ್ ಮಾಡಿದ್ದರು. ಆದರೆ, ಆ ಸಿನಿಮಾ ಮುಂದುವರೆಯಲಿಲ್ಲ. ಈ ಕಾರಣದಿಂದಾಗಿ ಸಂತೋಷ್ ಆನಂದ್ ರಾವ್ ಅವರ ಚಿತ್ರವೇ ಯುವ ನಟನೆಯ ಚೊಚ್ಚಲು ಸಿನಿಮಾವಾಗಲಿದೆ.

  • ಪ್ರತಿಷ್ಠಿತ ಹೋಟೆಲ್ ನಲ್ಲಿ ಯುವರಾಜ ಚಿತ್ರದ ಟೈಟಲ್ ಲಾಂಚ್: ಯಾರೆಲ್ಲ ಗೆಸ್ಟ್?

    ಪ್ರತಿಷ್ಠಿತ ಹೋಟೆಲ್ ನಲ್ಲಿ ಯುವರಾಜ ಚಿತ್ರದ ಟೈಟಲ್ ಲಾಂಚ್: ಯಾರೆಲ್ಲ ಗೆಸ್ಟ್?

    ಯುವರಾಜಕುಮಾರ್ (Yuva Rajkumar) ಮತ್ತು ನಿರ್ದೇಶಕ ಸಂತೋಷ್ ಆನಂದ್ ರಾಮ್ (Santosh Anand Ram) ಕಾಂಬಿನೇಷನ್ ನ ಮೊದಲ ಸಿನಿಮಾದ ಟೈಟಲ್ (Title) ಲಾಂಚ್ ಟೀಸರ್ ಇಂದು ರಿಲೀಸ್ ಆಗುತ್ತಿದೆ. ಸಂಜೆ ಸಿನಿಮಾದ ಮುಹೂರ್ತ ಮುಗಿಸಿಕೊಂಡು ನಂತರ ಪ್ರತಿಷ್ಠಿತ ಹೋಟೆಲ್ ವೊಂದರಲ್ಲಿ ಖಾಸಗಿಯಾಗಿ ಟೀಸರ್ ಲಾಂಚ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ಅಭಿಮಾನಿಗಳಿಗೆ ಎರಡು ಕಡೆ ಟೈಟಲ್ ಟೀಸರ್ ನೋಡಲು ಅವಕಾಶ ಕಲ್ಪಿಸಲಾಗಿದ್ದು, ಚಿತ್ರತಂಡಕ್ಕೆ ಮತ್ತು ಡಾ.ರಾಜ್ ಕುಟುಂಬಕ್ಕಾಗಿ ಹೋಟೆಲ್ ವೊಂದರಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

    ಪ್ರತಿಷ್ಠಿತ ಹೋಟೆಲ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್,  ಅಶ್ವಿನಿ ಪುನೀತ್ ರಾಜಕುಮಾರ್ ಸೇರಿದಂತೆ ಡಾ.ರಾಜ್ ಕುಟುಂಬವೇ ಸೇರಲಿದೆ. ಅಲ್ಲದೇ, ನಿರ್ಮಾಪಕ ವಿಜಯ ಕಿರಗಂದೂರು, ನಿರ್ದೇಶಕ ಸಂತೋಷ್ ಆನಂದ್ ರಾಮ್ ಮತ್ತು ರಮ್ಯಾ ಕೂಡ ಭಾಗಿಯಾಗಲಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಚಿತ್ರತಂಡದ ಸದಸ್ಯರು, ಹೊಂಬಾಳೆ ಫಿಲ್ಮ್ಸ್ ಸಿಬ್ಬಂದಿ ಕೂಡ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ.

    ದೊಡ್ಮನೆ ಕುಟುಂಬದ ಕುಡಿ ಯುವರಾಜಕುಮಾರ್ ನಟನೆಯ ಹೊಸ ಸಿನಿಮಾದ ಮುಹೂರ್ತ ಇಂದು ಸಂಜೆ 5 ಗಂಟೆಗೆ ಸುಬ್ರಮಣ್ಯ ದೇವಸ್ಥಾನದಲ್ಲಿ ಸಿಂಪಲ್ ಆಗಿ ನಡೆಯಲಿದೆ. ಆದರೆ, ಟೀಸರ್ ರಿಲೀಸ್ ಮಾತ್ರ ಅದ್ಧೂರಿಯಾಗಿ ಮಾಡುವುದಾಗಿ ಡಾ.ರಾಜ್ ಕುಟುಂಬದ ಅಭಿಮಾನಿಗಳು ಸದಸ್ಯರು ತಿಳಿಸಿದ್ದಾರೆ. ಹೊಸ ಸಿನಿಮಾದ ಮುಹೂರ್ತದ ನಂತರ ಟೀಸರ್ ರಿಲೀಸ್ ಮಾಡುವ ಪ್ಲ್ಯಾನ್ ಮಾಡಿದ್ದು, ಬೆಂಗಳೂರಿನ ಜೆ.ಪಿ ನಗರದ ಸಿದ್ದಲಿಂಗೇಶ್ವರ ಚಿತ್ರಮಂದಿರದಲ್ಲಿ ಸಂಜೆ 6.55ಕ್ಕೆ ಟೀಸರ್ ಬಿಡುಗಡೆಯಾಗಲಿದೆ. ಜೊತೆಗೆ ಸಿನಿಮಾದ ಟೈಟಲ್ ಕೂಡ ಅನೌನ್ಸ್ ಆಗಲಿದೆ.  ಅಲ್ಲದೇ, ಕುರುಬರಹಳ್ಳಿಯ ಡಾ.ರಾಜ್ ಪ್ರತಿಮೆಯ ಮುಂದೆಯೇ ಟೀಸರ್ ತೋರಿಸಲಾಗುತ್ತಿದೆ.  ಇದನ್ನೂ ಓದಿ: ಸದ್ದಿಲ್ಲದೇ ʻಟೋಬಿʼ ಚಿತ್ರದ ಶೂಟಿಂಗ್‌ ಮುಗಿಸಿದ ರಾಜ್‌ ಬಿ ಶೆಟ್ಟಿ

    ಈ ಹಿಂದೆ ಸಿನಿಮಾದ ಟೀಸರ್ ಮತ್ತು ಟೈಟಲ್ ಲಾಂಚ್ ಅನ್ನು ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬದಂದು ರಿಲೀಸ್ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಅಪ್ಪು ಹುಟ್ಟುಹಬ್ಬ 15 ದಿನ ಬಾಕಿ ಇರುವಾಗಲೇ ನಾಳೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಕಾರಣ ಅಂದು ಪುನೀತ್ ಪತ್ನಿ ಅಶ್ವಿನಿ ಅವರು ಲಭ್ಯವಿಲ್ಲ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ. ಈ ಕಾರಣದಿಂದಾಗಿ ಮಾರ್ಚ್ 3ಕ್ಕೆ ಮುಹೂರ್ತ, ಟೈಟಲ್ ಮತ್ತು ಟೀಸರ್ ಲಾಂಚ್ ಮಾಡಲು ಸಂಸ್ಥೆ ಮುಂದೆ ಬಂದಿದೆಯಂತೆ.

    ಈ ಸಿನಿಮಾ ಮೂಲಕ ಪುನೀತ್ ರಾಜಕುಮಾರ್ ಅವರ ಉತ್ತರಾಧಿಕಾರಿ ಎಂದೇ ಬಿಂಬಿಸಲಾಗುತ್ತಿರುವ ಯುವರಾಜಕುಮಾರ್ ಅಧಿಕೃತವಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಸಿನಿಮಾ ಮೂಡಿ ಬರಲಿದೆ.  ಪುನೀತ್ ರಾಜಕುಮಾರ್ ಜೊತೆ ಒಳ್ಳೆಯ ಬಾಂಧವ್ಯ ಹಾಗೂ ಅವರ ಎರಡು ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಸಂತೋಷ್ ಆನಂದ್ ರಾಮ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದರೆ, ನುರಿತ ತಂತ್ರಜ್ಞರ ತಂಡವೇ ಸಿನಿಮಾದಲ್ಲಿದೆ.

    Yuvaraj Kumar

    ಅಂದುಕೊಂಡಂತೆ ಆಗಿದ್ದರೆ ಯುವರಾಜಕುಮಾರ್ ಈ ಹಿಂದೆಯೇ ಲಾಂಚ್ ಆಗಬೇಕಿತ್ತು. ಯುವಗಾಗಿಯೇ ‘ಯುವ ರಣಧೀರ ಕಂಠೀರವ’ ಸಿನಿಮಾ ಮಾಡಲು ಹೊರಟಿದ್ದರು ಜಾಕಿ ತಿಮ್ಮಯ್ಯ. ಸಾಕಷ್ಟು ಹಣ ಖರ್ಚು ಮಾಡಿ ಟೀಸರ್ ಕೂಡ ರಿಲೀಸ್ ಮಾಡಿದ್ದರು. ಆದರೆ, ಆ ಸಿನಿಮಾ ಮುಂದುವರೆಯಲಿಲ್ಲ. ಈ ಕಾರಣದಿಂದಾಗಿ ಸಂತೋಷ್ ಆನಂದ್ ರಾವ್ ಅವರ ಚಿತ್ರವೇ ಯುವ ನಟನೆಯ ಚೊಚ್ಚಲು ಸಿನಿಮಾವಾಗಲಿದೆ.

  • Exclusive Details- ಇಂದು ಯುವರಾಜ ಹೊಸ ಚಿತ್ರದ ಟೈಟಲ್, ಟೀಸರ್ ಅನಾವರಣ

    Exclusive Details- ಇಂದು ಯುವರಾಜ ಹೊಸ ಚಿತ್ರದ ಟೈಟಲ್, ಟೀಸರ್ ಅನಾವರಣ

    ಯುವರಾಜಕುಮಾರ್ (Yuva Rajkumar) ಹೊಸ ಸಿನಿಮಾದ ಮಹತ್ವದ ವಿಷಯಗಳು ಇಂದು ಅನಾವರಣಗೊಳ್ಳಲಿವೆ. ಕಳೆದ ಒಂದು ವರ್ಷದಿಂದ ಈ ಸಿನಿಮಾದ ಬಗ್ಗೆ ನಾನಾ ರೀತಿಯ ಸುದ್ದಿಗಳು ಹೊರ ಬರುತ್ತಿದ್ದವು. ಇಂದು ನಾಳೆ ಅಂದುಕೊಂಡು ಒಂದು ವರ್ಷಗಳ ಕಾಲ ಸಿನಿಮಾದ ಬಗ್ಗೆ ಅಧಿಕೃತವಾಗಿ ಯಾವುದೇ ಮಾಹಿತಿಯನ್ನು ಚಿತ್ರತಂಡ ಬಿಟ್ಟುಕೊಟ್ಟಿರಲಿಲ್ಲ. ಇವತ್ತು ಹಲವು ವಿಚಾರಗಳನ್ನು ಚಿತ್ರತಂಡ ಹಂಚಿಕೊಳ್ಳಲಿದೆ. ಅಲ್ಲಿಗೆ ಅಧಿಕೃತ ಮಾಹಿತಿಗಳು ಹೊರಬೀಳಲಿವೆ.

    ದೊಡ್ಮನೆ ಕುಟುಂಬದ ಕುಡಿ ಯುವರಾಜಕುಮಾರ್ ನಟನೆಯ ಹೊಸ ಸಿನಿಮಾದ ಮುಹೂರ್ತ ಇಂದು ಸಂಜೆ 5.45 ಗಂಟೆಗೆ ಸುಬ್ರಮಣ್ಯ ದೇವಸ್ಥಾನದಲ್ಲಿ ಸಿಂಪಲ್ ಆಗಿ ನಡೆಯಲಿದೆ. ಆದರೆ, ಟೀಸರ್ ರಿಲೀಸ್ ಮಾತ್ರ ಅದ್ಧೂರಿಯಾಗಿ ಮಾಡುವುದಾಗಿ ಡಾ.ರಾಜ್ ಕುಟುಂಬದ ಅಭಿಮಾನಿಗಳು ಸದಸ್ಯರು ತಿಳಿಸಿದ್ದಾರೆ. ಹೊಸ ಸಿನಿಮಾದ ಮುಹೂರ್ತದ ನಂತರ ಟೀಸರ್ ರಿಲೀಸ್ ಮಾಡುವ ಪ್ಲ್ಯಾನ್ ಮಾಡಿದ್ದು, ಬೆಂಗಳೂರಿನ ಜೆ.ಪಿ ನಗರದ ಸಿದ್ದಲಿಂಗೇಶ್ವರ ಚಿತ್ರಮಂದಿರದಲ್ಲಿ ಸಂಜೆ 6.55ಕ್ಕೆ ಟೀಸರ್ ಬಿಡುಗಡೆಯಾಗಲಿದೆ. ಜೊತೆಗೆ ಸಿನಿಮಾದ ಟೈಟಲ್ ಕೂಡ ಅನೌನ್ಸ್ ಆಗಲಿದೆ.  ಅಲ್ಲದೇ, ಕುರುಬರಹಳ್ಳಿಯ ಡಾ.ರಾಜ್ ಪ್ರತಿಮೆಯ ಮುಂದೆಯೇ ಟೀಸರ್ ತೋರಿಸಲಾಗುತ್ತಿದೆ. ಇದನ್ನೂ ಓದಿ: ಮತ್ತೆ ಕಿರುತೆರೆಗೆ ಮರಳಿದ ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ

    ಈ ಹಿಂದೆ ಸಿನಿಮಾದ ಟೀಸರ್ ಮತ್ತು ಟೈಟಲ್ ಲಾಂಚ್ ಅನ್ನು ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬದಂದು ರಿಲೀಸ್ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಅಪ್ಪು ಹುಟ್ಟುಹಬ್ಬ 15 ದಿನ ಬಾಕಿ ಇರುವಾಗಲೇ ನಾಳೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಕಾರಣ ಅಂದು ಪುನೀತ್ ಪತ್ನಿ ಅಶ್ವಿನಿ ಅವರು ಲಭ್ಯವಿಲ್ಲ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ. ಈ ಕಾರಣದಿಂದಾಗಿ ಮಾರ್ಚ್ 3ಕ್ಕೆ ಮುಹೂರ್ತ, ಟೈಟಲ್ ಮತ್ತು ಟೀಸರ್ ಲಾಂಚ್ ಮಾಡಲು ಸಂಸ್ಥೆ ಮುಂದೆ ಬಂದಿದೆಯಂತೆ.

    ಈ ಸಿನಿಮಾ ಮೂಲಕ ಪುನೀತ್ ರಾಜಕುಮಾರ್ ಅವರ ಉತ್ತರಾಧಿಕಾರಿ ಎಂದೇ ಬಿಂಬಿಸಲಾಗುತ್ತಿರುವ ಯುವರಾಜಕುಮಾರ್ ಅಧಿಕೃತವಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್ (Hombale Films) ಬ್ಯಾನರ್ ನಲ್ಲಿ ಸಿನಿಮಾ ಮೂಡಿ ಬರಲಿದೆ.  ಪುನೀತ್ ರಾಜಕುಮಾರ್ ಜೊತೆ ಒಳ್ಳೆಯ ಬಾಂಧವ್ಯ ಹಾಗೂ ಅವರ ಎರಡು ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಸಂತೋಷ್ ಆನಂದ್ ರಾಮ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದರೆ, ನುರಿತ ತಂತ್ರಜ್ಞರ ತಂಡವೇ ಸಿನಿಮಾದಲ್ಲಿದೆ.

    ಅಂದುಕೊಂಡಂತೆ ಆಗಿದ್ದರೆ ಯುವರಾಜಕುಮಾರ್ ಈ ಹಿಂದೆಯೇ ಲಾಂಚ್ ಆಗಬೇಕಿತ್ತು. ಯುವಗಾಗಿಯೇ ‘ಯುವ ರಣಧೀರ ಕಂಠೀರವ’ ಸಿನಿಮಾ ಮಾಡಲು ಹೊರಟಿದ್ದರು ಜಾಕಿ ತಿಮ್ಮಯ್ಯ. ಸಾಕಷ್ಟು ಹಣ ಖರ್ಚು ಮಾಡಿ ಟೀಸರ್ ಕೂಡ ರಿಲೀಸ್ ಮಾಡಿದ್ದರು. ಆದರೆ, ಆ ಸಿನಿಮಾ ಮುಂದುವರೆಯಲಿಲ್ಲ. ಈ ಕಾರಣದಿಂದಾಗಿ ಸಂತೋಷ್ ಆನಂದ್ ರಾಮ್ (Santhosh Anand Ram) ಅವರ ಚಿತ್ರವೇ ಯುವ ನಟನೆಯ ಚೊಚ್ಚಲು ಸಿನಿಮಾವಾಗಲಿದೆ.

  • ನಾಳೆಯೇ ರಿಲೀಸ್ ಆಗಲಿದೆ ಯುವರಾಜ ನಟನೆಯ ಹೊಸ ಚಿತ್ರದ ಟೀಸರ್

    ನಾಳೆಯೇ ರಿಲೀಸ್ ಆಗಲಿದೆ ಯುವರಾಜ ನಟನೆಯ ಹೊಸ ಚಿತ್ರದ ಟೀಸರ್

    ದೊಡ್ಮನೆ ಕುಟುಂಬದ ಕುಡಿ ಯುವರಾಜಕುಮಾರ್ (Yuva Rajkumar) ನಟನೆಯ ಹೊಸ ಸಿನಿಮಾದ ಮುಹೂರ್ತ ನಾಳೆ ಸಿಂಪಲ್ ಆಗಿ ನಡೆಯಲಿದೆ. ಆದರೆ, ಟೀಸರ್ ರಿಲೀಸ್ ಮಾತ್ರ ಅದ್ಧೂರಿಯಾಗಿ ಮಾಡುವುದಾಗಿ ಡಾ.ರಾಜ್ ಕುಟುಂಬದ ಅಭಿಮಾನಿಗಳು ಸದಸ್ಯರು ತಿಳಿಸಿದ್ದಾರೆ. ಹೊಸ ಸಿನಿಮಾದ ಮುಹೂರ್ತದ ನಂತರ ಟೀಸರ್ ರಿಲೀಸ್ ಮಾಡುವ ಪ್ಲ್ಯಾನ್ ಮಾಡಿದ್ದು, ಬೆಂಗಳೂರಿನ ಜೆ.ಪಿ ನಗರದ ಸಿದ್ದಲಿಂಗೇಶ್ವರ ಚಿತ್ರಮಂದಿರದಲ್ಲಿ ಸಂಜೆ 6ಕ್ಕೆ ಟೀಸರ್ ಬಿಡುಗಡೆಯಾಗಲಿದೆ. ಜೊತೆಗೆ ಸಿನಿಮಾದ ಟೈಟಲ್ ಕೂಡ ಅನೌನ್ಸ್ ಆಗಲಿದೆ.

    ಈ ಹಿಂದೆ ಸಿನಿಮಾದ ಟೀಸರ್ ಮತ್ತು ಟೈಟಲ್ ಲಾಂಚ್ ಅನ್ನು ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬದಂದು ರಿಲೀಸ್ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಅಪ್ಪು ಹುಟ್ಟುಹಬ್ಬ 15 ದಿನ ಬಾಕಿ ಇರುವಾಗಲೇ ನಾಳೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಕಾರಣ ಅಂದು ಪುನೀತ್ ಪತ್ನಿ ಅಶ್ವಿನಿ ಅವರು ಲಭ್ಯವಿಲ್ಲ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ. ಈ ಕಾರಣದಿಂದಾಗಿ ಮಾರ್ಚ್ 3ಕ್ಕೆ ಮುಹೂರ್ತ, ಟೈಟಲ್ (Title) ಮತ್ತು ಟೀಸರ್ (Teaser) ಲಾಂಚ್ ಮಾಡಲು ಸಂಸ್ಥೆ ಮುಂದೆ ಬಂದಿದೆಯಂತೆ.

    ಈ ಸಿನಿಮಾ ಮೂಲಕ ಪುನೀತ್ ರಾಜಕುಮಾರ್ ಅವರ ಉತ್ತರಾಧಿಕಾರಿ ಎಂದೇ ಬಿಂಬಿಸಲಾಗುತ್ತಿರುವ ಯುವರಾಜಕುಮಾರ್ ಅಧಿಕೃತವಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್ (Hombale Films)ಬ್ಯಾನರ್ ನಲ್ಲಿ ಸಿನಿಮಾ ಮೂಡಿ ಬರಲಿದೆ.  ಪುನೀತ್ ರಾಜಕುಮಾರ್ ಜೊತೆ ಒಳ್ಳೆಯ ಬಾಂಧವ್ಯ ಹಾಗೂ ಅವರ ಎರಡು ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಸಂತೋಷ್ ಆನಂದ್ ರಾಮ್ (Santhosh Anand Ram) ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದರೆ, ನುರಿತ ತಂತ್ರಜ್ಞರ ತಂಡವೇ ಸಿನಿಮಾದಲ್ಲಿದೆ. ಇದನ್ನೂ ಓದಿ:`ಸಿಟಾಡೆಲ್’ ಫಸ್ಟ್ ಲುಕ್ ಔಟ್: ಆ್ಯಕ್ಷನ್ ಅವತಾರದಲ್ಲಿ ಪ್ರಿಯಾಂಕಾ ಚೋಪ್ರಾ

    ಅಂದುಕೊಂಡಂತೆ ಆಗಿದ್ದರೆ ಯುವರಾಜಕುಮಾರ್ ಈ ಹಿಂದೆಯೇ ಲಾಂಚ್ ಆಗಬೇಕಿತ್ತು. ಯುವಗಾಗಿಯೇ ‘ಯುವ ರಣಧೀರ ಕಂಠೀರವ’ ಸಿನಿಮಾ ಮಾಡಲು ಹೊರಟಿದ್ದರು ಜಾಕಿ ತಿಮ್ಮಯ್ಯ. ಸಾಕಷ್ಟು ಹಣ ಖರ್ಚು ಮಾಡಿ ಟೀಸರ್ ಕೂಡ ರಿಲೀಸ್ ಮಾಡಿದ್ದರು. ಆದರೆ, ಆ ಸಿನಿಮಾ ಮುಂದುವರೆಯಲಿಲ್ಲ. ಈ ಕಾರಣದಿಂದಾಗಿ ಸಂತೋಷ್ ಆನಂದ್ ರಾವ್ ಅವರ ಚಿತ್ರವೇ ಯುವ ನಟನೆಯ ಚೊಚ್ಚಲು ಸಿನಿಮಾವಾಗಲಿದೆ.

  • ಯುವ ರಾಜಕುಮಾರ್ ಚೊಚ್ಚಲು ಚಿತ್ರಕ್ಕೆ ನಾಳೆಯೇ ಮುಹೂರ್ತ

    ಯುವ ರಾಜಕುಮಾರ್ ಚೊಚ್ಚಲು ಚಿತ್ರಕ್ಕೆ ನಾಳೆಯೇ ಮುಹೂರ್ತ

    ಡಾ.ರಾಜಕುಮಾರ್ ಕುಟುಂಬದ ಮತ್ತೊಂದು ಕುಡಿ ಸಿನಿಮಾ ರಂಗ ಪ್ರವೇಶ ಮಾಡುತ್ತಿದೆ. ಪುನೀತ್ ರಾಜಕುಮಾರ್ (Puneeth rajkumar) ಅವರ ಉತ್ತರಾಧಿಕಾರಿ ಎಂದೇ ಬಿಂಬಿಸಲಾಗುತ್ತಿರುವ ಯುವರಾಜಕುಮಾರ್ (Yuva Rajkumar) ಅಧಿಕೃತವಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್ (Hombale Films) ಬ್ಯಾನರ್ ನಲ್ಲಿ ಮೂಡಿ ಬರಲಿರುವ ಈ ಹೊಸ ಸಿನಿಮಾದ ಮುಹೂರ್ತ (Muhurta) ನಾಳೆ ಬೆಂಗಳೂರಿನ ದೇವಸ್ಥಾನವೊಂದರಲ್ಲಿ ನಡೆಯಲಿದೆ. ಸಿಂಪಲ್ ಆಗಿ ಮುಹೂರ್ತವನ್ನು ಆಚರಿಸಲಿದೆ ಚಿತ್ರತಂಡ ನಿರ್ಧರಿಸಿದೆ.

    ಪುನೀತ್ ರಾಜಕುಮಾರ್ ಜೊತೆ ಒಳ್ಳೆಯ ಬಾಂಧವ್ಯ ಹಾಗೂ ಅವರ ಎರಡು ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಸಂತೋಷ್ ಆನಂದ್ ರಾಮ್ಈ (Santhosh Anand Ram) ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದರೆ, ನುರಿತ ತಂತ್ರಜ್ಞರ ತಂಡವೇ ಸಿನಿಮಾದಲ್ಲಿದೆ. ಈ ಸಿನಿಮಾ ಕುರಿತು ಯಾವುದೇ ಅಧಿಕೃತ ಮಾಹಿತಿಯನ್ನು ನಿರ್ದೇಶಕರಾಗಲಿ ಅಥವಾ ಸಿನಿಮಾ ಸಂಸ್ಥೆಯಾಗಲಿ ನೀಡದೇ ಇದ್ದರೂ, ನಾಯಕಿ ಸೇರಿದಂತೆ ಹಲವು ವಿಷಯಗಳು ಸುದ್ದಿಯಾಗಿವೆ. ಇದನ್ನೂ ಓದಿ:ಪಡ್ಡೆಹುಡುಗರ ನಿದ್ದೆಗೆಡಿಸಿದ ನಟಿ ನಿಧಿ ಸುಬ್ಬಯ್ಯ ಹಾಟ್‌ ಫೋಟೋಶೂಟ್

    ತಂಡದ ಮೂಲಗಳ ಪ್ರಕಾರ ನಾಳೆ ಕೇವಲ ಮುಹೂರ್ತ ಮಾತ್ರ ನಡೆಯಲಿದ್ದು, ಸಿನಿಮಾದ ಶೀರ್ಷಿಕೆ ಮತ್ತು ಟೀಸರ್ ಅನ್ನು ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬದ ದಿನದಂದು ಮಾಡಲು ನಿರ್ಧರಿಸಿದ್ದಾರಂತೆ. ನಾಳೆ ಕೇವಲ ಮುಹೂರ್ತ ಮಾತ್ರ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಮತ್ತೊಂದು ಮೂಲಗಳ ಪ್ರಕಾರ ನಾಳೆ ಸಂಜೆಯೇ ಸಿನಿಮಾದ ಶೀರ್ಷಿಕೆ ಮತ್ತು ಟೀಸರ್ ಅನ್ನು ರಿಲೀಸ್ ಮಾಡುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ. ಕುರುಬರಹಳ್ಳಿಯಲ್ಲಿ ಅದಕ್ಕಾಗಿ ಸಿದ್ಧತೆ ಮಾಡಿಕೊಂಡಿದ್ದಾರಂತೆ.

    ಅಂದುಕೊಂಡಂತೆ ಆಗಿದ್ದರೆ ಯುವರಾಜಕುಮಾರ್ ಈ ಹಿಂದೆಯೇ ಲಾಂಚ್ ಆಗಬೇಕಿತ್ತು. ಯುವಗಾಗಿಯೇ ‘ಯುವ ರಣಧೀರ ಕಂಠೀರವ’ ಸಿನಿಮಾ ಮಾಡಲು ಹೊರಟಿದ್ದರು ಜಾಕಿ ತಿಮ್ಮಯ್ಯ. ಸಾಕಷ್ಟು ಹಣ ಖರ್ಚು ಮಾಡಿ ಟೀಸರ್ ಕೂಡ ರಿಲೀಸ್ ಮಾಡಿದ್ದರು. ಆದರೆ, ಆ ಸಿನಿಮಾ ಮುಂದುವರೆಯಲಿಲ್ಲ. ಈ ಕಾರಣದಿಂದಾಗಿ ಸಂತೋಷ್ ಆನಂದ್ ರಾವ್ ಅವರ ಚಿತ್ರವೇ ಯುವ ನಟನೆಯ ಚೊಚ್ಚಲು ಸಿನಿಮಾವಾಗಲಿದೆ.