Tag: ಯೂನಿಯನ್ ಬ್ಯಾಂಕ್

  • ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ – ಮೂವರು ಬ್ಯಾಂಕ್ ಸಿಬ್ಬಂದಿಗೆ ಎಸ್‌ಐಟಿ ನೋಟಿಸ್

    ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ – ಮೂವರು ಬ್ಯಾಂಕ್ ಸಿಬ್ಬಂದಿಗೆ ಎಸ್‌ಐಟಿ ನೋಟಿಸ್

    ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ (Valmiki Development Corporation Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬ್ಯಾಂಕ್ ಸಿಬ್ಬಂದಿಗೆ ಎಸ್‌ಐಟಿ ನೋಟಿಸ್ (SIT Notice) ನೀಡಿದೆ.

    ಯೂನಿಯನ್ ಬ್ಯಾಂಕ್‌ನ ಮೂವರು ಸಿಬ್ಬಂದಿಗೆ ಎಸ್‌ಐಟಿ ನೋಟಿಸ್ ಕೊಟ್ಟಿದೆ. ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತ ರೌಲ್, ಬ್ಯಾಂಕ್ ಬ್ರಾಂಚ್ ಹೆಡ್ ದೀಪಾ ಎಸ್, ಕೃಷ್ಣಮೂರ್ತಿಗೆ ನೋಟಿಸ್ ನೀಡಲಾಗಿದೆ. ತುರ್ತಾಗಿ ವಿಚಾರಣೆಗೆ ಹಾಜರಾಗಲು ನೋಟಿಸ್ ಕೊಡಲಾಗಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣ – ಸಿಎಂ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಲಿ: ಎನ್.ರವಿಕುಮಾರ್ ಆಗ್ರಹ

    ಸಿಬಿಐ ಬಳಿಕ ಇ.ಡಿ ಈ ಪ್ರಕರಣಕ್ಕೆ ಎಂಟ್ರಿಕೊಟ್ಟಿದ್ದು, ಯೂನಿಯನ್ ಬ್ಯಾಂಕ್ ನೀಡಿದ ದೂರಿನ ಮಾಹಿತಿ ಪಡೆದಿದೆ. ಸಿಬಿಐ ಬಳಿ ಇ.ಡಿ ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ. ಹಣ ಅಕ್ರಮ ವರ್ಗಾವಣೆ (ಹವಾಲ) ನಡೆದಿರೋ ಶಂಕೆ ಹಿನ್ನೆಲೆ ಇ.ಡಿ ಮಾಹಿತಿ ಪಡೆದಿದ್ದು, ಸಿಬಿಐ ಬಳಿ ಎಫ್‌ಐಆರ್ ಬಗೆಗಿನ ಮಾಹಿತಿ ಪಡೆದಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ವಿಪಕ್ಷ ನಾಯಕ ಆಗಲಿ ಅನ್ನೋದು ನಮ್ಮೆಲ್ಲರ ಆಸೆ: ಜಿ.ಪರಮೇಶ್ವರ್

    ಸಿಬಿಐ ಬಳಿಕ ಇ.ಡಿ ಎಫ್‌ಐಆರ್ ದಾಖಲಿಸುವ ಸಾಧ್ಯತೆಯಿದ್ದು, ಮುಂದಿನ ವಾರ ಎಫ್‌ಐಆರ್ ದಾಖಲು ಮಾಡಲು ತಯಾರಿ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ‘ಪಬ್ಲಿಕ್ ಟಿವಿ’ಗೆ ಮಾಹಿತಿ ನೀಡಿದೆ. ಈಗಾಗಲೇ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ತನ್ನ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿದೆ. ಇದನ್ನೂ ಓದಿ: ಗ್ಯಾರಂಟಿಗಳನ್ನು ಮತ ಪಡೆಯಲು ನೀಡಿಲ್ಲ, ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲಿಸಲ್ಲ: ರಾಮಲಿಂಗಾ ರೆಡ್ಡಿ

  • ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ – ತನಿಖೆಗೆ ಸಿಬಿಐ ಬಳಿಕ ED ಎಂಟ್ರಿ!

    ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ – ತನಿಖೆಗೆ ಸಿಬಿಐ ಬಳಿಕ ED ಎಂಟ್ರಿ!

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ (Valmiki Corporation Corruption Scam) ಪ್ರಕರಣಕ್ಕೆ ಈಗ ಸಿಬಿಐ ಬಳಿಕ ಜಾರಿ ನಿರ್ದೇಶನಾಲಯ (ED) ಎಂಟ್ರಿ ಆಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಸಿಬಿಐ ಬಳಿಕ ಜಾರಿ ನಿರ್ದೇಶನಾಲಯ ಎಂಟ್ರಿ ಆಗಿದ್ದು, ಯೂನಿಯನ್ ಬ್ಯಾಂಕ್ (Union Bank Of India) ನೀಡಿದ್ದ ದೂರು ಹಾಗೂ ಅಕ್ರಮ ಹಣ ವರ್ಗಾವಣೆ ನಡೆದಿರುವ ಬಗ್ಗೆ ಸಿಬಿಐನಿಂದ ಮಾಹಿತಿ ಪಡೆದುಕೊಂಡಿದೆ. ಜೊತೆಗೆ ಸಿಬಿಐ ದಾಖಲಿಸಿರುವ ಎಫ್‌ಐಆರ್‌ ಬಗ್ಗೆಯೂ ಮಾಹಿತಿ ಪಡೆದಿದ್ದು, ಮುಂದಿನ ವಾರದಲ್ಲೇ ಇಡಿ ಇನ್ನಷ್ಟು ತನಿಖೆಯೊಂದಿಗೆ ಎಫ್‌ಐಆರ್‌ ದಾಖಲಿಸುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ʻಪಬ್ಲಿಕ್‌ ಟಿವಿʼಗೆ (Public TV) ಮಾಹಿತಿ ನೀಡಿವೆ. ಇದನ್ನೂ ಓದಿ: Exclusive: ನಮ್ಮ ನಾಯಕರು ಸೂಚಿಸಿದ್ರೆ ರಾಜೀನಾಮೆ ಕೊಡಲು ಸಿದ್ಧ- ವಾಲ್ಮೀಕಿ ನಿಗಮದ ಅಧ್ಯಕ್ಷ ದದ್ದಲ್

    ಈಗಾಗಲೇ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ (Karnataka Maharshi Valmiki Scheduled Tribe Development Corporation Ltd) ನಡೆದಿರುವ ಹಗರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್‌ ಬ್ಯಾಂಕ್‌ ತನ್ನ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿದೆ. ಖಾತೆಗಳಲ್ಲಿನ ವಂಚನೆಯ ವಹಿವಾಟಿನ ಬಗ್ಗೆ ಬ್ಯಾಂಕ್ ಅರಿವು ಹೊಂದಿದೆ. ಅಕ್ರಮಗಳು ಬೆಳಕಿಗೆ ಬಂದಾಗ ಬ್ಯಾಂಕ್ ತಕ್ಷಣವೇ ಪ್ರಶ್ನಾರ್ಹ ವಹಿವಾಟುಗಳನ್ನು ವಂಚನೆ ಎಂದು ಘೋಷಿಸಿದೆ. ಸಂಪೂರ್ಣ ತನಿಖೆ ಮತ್ತು ಅಪರಾಧಿಗಳ ಪತ್ತೆಗಾಗಿ ಮೇ 30 ರಂದು ಕೇಂದ್ರೀಯ ತನಿಖಾ ದಳಕ್ಕೆ (CBI) ದೂರು ನೀಡಿದ್ದೇವೆ. ಮುಂದಿನ ವಿಚಾರಣೆಗಾಗಿ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಈ ಸಮಸ್ಯೆಯನ್ನು ನ್ಯಾಯಯುತವಾಗಿ ಮತ್ತು ತ್ವರಿತವಾಗಿ ಪರಿಹರಿಸಲು ನಾವು ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಮತ್ತು ಅಂತಹ ಘಟನೆಗಳನ್ನು ತಡೆಯಲು ನಾವು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಹೇಳಿದೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ – ಅಧಿಕಾರಿಗಳು, ಬ್ಯಾಂಕ್‌ ಉದ್ಯೋಗಿ ವಿರುದ್ಧ ಎಫ್‌ಐಆರ್‌

    ಏನಿದು ಪ್ರಕರಣ?
    ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ (Chandrashekaran) ಇತ್ತೀಚೆಗೆ ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್‌, ಮೆಸೇಜ್‌ ಬಂದಿಲ್ಲ. ಬ್ಯಾಂಕ್‌ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ 94 ಕೋಟಿ ಗೋಲ್ಮಾಲ್‌ – ಯೂನಿಯನ್‌ ಬ್ಯಾಂಕ್‌ನಿಂದಲೇ ವಂಚನೆ, ಕೇಸ್‌ ದಾಖಲು

  • ವಾಲ್ಮೀಕಿ ನಿಗಮದಲ್ಲಿ 94 ಕೋಟಿ ಹಗರಣ – ಅಕ್ರಮದ ತನಿಖೆಗೆ ಇಳಿಯುತ್ತಾ ಸಿಬಿಐ?

    ವಾಲ್ಮೀಕಿ ನಿಗಮದಲ್ಲಿ 94 ಕೋಟಿ ಹಗರಣ – ಅಕ್ರಮದ ತನಿಖೆಗೆ ಇಳಿಯುತ್ತಾ ಸಿಬಿಐ?

    – ತನಿಖೆ ನಡೆಸುವಂತೆ ಸಿಬಿಐಗೆ ದೂರು ನೀಡಿದ ಯೂನಿಯನ್‌ ಬ್ಯಾಂಕ್‌
    – ಸಿಐಡಿ ತನಿಖೆಗೆ ಆದೇಶಿಸಿದ್ದ ಕರ್ನಾಟಕ ಸರ್ಕಾರ

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಖಾತೆಯಲ್ಲಿ ನಡೆದ ಅವ್ಯವಹಾರ ಪ್ರಕರಣದ ತನಿಖೆ ಸಿಬಿಐಗೆ ವರ್ಗಾವಣೆಯಾಗುವ ಸಾಧ್ಯತೆ ಹೆಚ್ಚಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್‌ ಬ್ಯಾಂಕ್‌ (Union Bank) ತನ್ನ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಸಿಬಿಐಗೆ (CBI) ದೂರು ನೀಡಿದೆ. ಇತ್ತ ಕರ್ನಾಟಕ ಸರ್ಕಾರ ಈ ಪ್ರಕರಣದ ತನಿಖೆ ನಡೆಸುವಂತೆ ಸಿಐಡಿಗೆ (CID) ಆದೇಶಿಸಿದೆ. ಇದನ್ನೂ ಓದಿ: 94 ಕೋಟಿ ಹಗರಣ – ಸಿಬಿಐಗೆ ದೂರು ನೀಡಿ ಮೂವರನ್ನು ಅಮಾನತುಗೊಳಿಸಿದ ಯೂನಿಯನ್‌ ಬ್ಯಾಂಕ್‌

    ಸಿಐಡಿ ತನಿಖೆ ನಡೆಸಿದರೂ ಇದು ಆರ್ಥಿಕ ಅಪರಾಧವಾಗಿರುವ ಕಾರಣ ಈ ಪ್ರಕರಣದ ತನಿಖೆ ಸಿಬಿಐಗೆ ವರ್ಗಾವಣೆಯಾಗಲಿದೆ. ಬ್ಯಾಂಕ್‌ನಲ್ಲಿ 10 ಕೋಟಿ ರೂ.ಗೂ ಅಧಿಕ ಅಕ್ರಮ ಪ್ರಕರಣ ದಾಖಲಾದರೆ ಅದರ ತನಿಖೆ ಸಿಬಿಐ ನಡೆಸಬೇಕು ಎಂದು ಆರ್‌ಬಿಐ (RBI) ನಿಯಮ ಹೇಳುತ್ತದೆ. ಈ ಪ್ರಕರಣದಲ್ಲಿ 94 ಕೋಟಿ ರೂ. ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ಸಿಬಿಐ ಕೇಸ್‌ ದಾಖಲಿಸಿ ತನಿಖೆ ನಡೆಸುವ ಸಾಧ್ಯತೆ ಹೆಚ್ಚಿದ್ದು ಹೊಸ ಸರ್ಕಾರ ಬಂದ ನಂತರ ಈ ವಿಚಾರ ಸ್ಪಷ್ಟವಾಗಲಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ 94 ಕೋಟಿ ಗೋಲ್ಮಾಲ್‌ – ಯೂನಿಯನ್‌ ಬ್ಯಾಂಕ್‌ನಿಂದಲೇ ವಂಚನೆ, ಕೇಸ್‌ ದಾಖಲು

    ಯಾವೆಲ್ಲ ತನಿಖೆಯನ್ನು ಸಿಬಿಐ ಮಾಡುತ್ತೆ?
    ಉನ್ನತ ಸ್ಥಾನಗಳಲ್ಲಿ ಭ್ರಷ್ಟಾಚಾರ, ಗಂಭೀರ ವಂಚನೆ, ಸಾಮಾಜಿಕ ಅಪರಾಧ ಮತ್ತು ಲಾಭಕೋರತನಕ್ಕೆ ಸಂಬಂಧಿಸಿದ ಗಂಭೀರ ಅಪರಾಧಗಳು, ಹತ್ಯೆಗಳು, ಅಪಹರಣಗಳು ಮುಂತಾದ ಸಾಂಪ್ರದಾಯಿಕ ಅಪರಾಧಗಳ ತನಿಖೆಯನ್ನು ಸಿಬಿಐ ಮಾಡುತ್ತದೆ.

     

    ನಕಲಿ ಭಾರತೀಯ ಕರೆನ್ಸಿ ನೋಟುಗಳಿಗೆ ಸಂಬಂಧಿಸಿದ ಅಪರಾಧ, ಬ್ಯಾಂಕ್ ವಂಚನೆಗಳು ಮತ್ತು ಸೈಬರ್ ಅಪರಾಧ, ಮಾದಕವಸ್ತುಗಳು, ಪ್ರಾಚೀನ ವಸ್ತುಗಳು ಸಾಂಸ್ಕೃತಿಕ ಆಸ್ತಿಗಳ ದೊಡ್ಡ ಪ್ರಮಾಣದ ಕಳ್ಳಸಾಗಣೆ ಸೇರಿದಂತೆ ಪ್ರಮುಖ ಹಣಕಾಸು ಹಗರಣಗಳ ತನಿಖೆಯನ್ನು ಸಿಬಿಐ ಮಾಡುತ್ತದೆ. ಇದನ್ನೂ ಓದಿ: ಡೆತ್‌ನೋಟ್‌ನಲ್ಲಿರುವ ನಾಗರಾಜ್‌ ಜೊತೆ ನಾಗೇಂದ್ರಗೆ ವ್ಯವಹಾರ ಇದೆ: ಸಿಟಿ ರವಿಯಿಂದ ಫೋಟೋ ರಿಲೀಸ್

    ಒಂದು ವೇಳೆ ಪ್ರಕರಣದ ತನಿಖೆ ನಡೆಸುವಾಗ ವಿದೇಶದಲ್ಲಿ ಅಕ್ರಮ ಹಣ ವರ್ಗಾವಣೆ, ವಿದೇಶದಿಂದ ಅಕ್ರಮ ದೇಣಿಗೆ ಸ್ವೀಕರಿಸಿದ್ದಕ್ಕೆ ದಾಖಲೆಗಳು ಸಿಕ್ಕಿದರೆ ಆಗ ಪ್ರಕರಣಕ್ಕೆ ಜಾರಿ ನಿರ್ದೇಶನಾಲಯ ಪ್ರವೇಶ ಮಾಡುತ್ತದೆ.

  • 94 ಕೋಟಿ ಹಗರಣ – ಸಿಬಿಐಗೆ ದೂರು ನೀಡಿ ಮೂವರನ್ನು ಅಮಾನತುಗೊಳಿಸಿದ ಯೂನಿಯನ್‌ ಬ್ಯಾಂಕ್‌

    94 ಕೋಟಿ ಹಗರಣ – ಸಿಬಿಐಗೆ ದೂರು ನೀಡಿ ಮೂವರನ್ನು ಅಮಾನತುಗೊಳಿಸಿದ ಯೂನಿಯನ್‌ ಬ್ಯಾಂಕ್‌

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಖಾತೆಯಲ್ಲಿ ಅವ್ಯವಹಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್‌ ಬ್ಯಾಂಕ್‌ ತನ್ನ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿದೆ.

    ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಬ್ಯಾಂಕ್‌, ಖಾತೆಗಳಲ್ಲಿನ ವಂಚನೆಯ ವಹಿವಾಟಿನ ಬಗ್ಗೆ ಬ್ಯಾಂಕ್ ಅರಿವು ಹೊಂದಿದೆ. ಅಕ್ರಮಗಳು ಬೆಳಕಿಗೆ ಬಂದಾಗ ಬ್ಯಾಂಕ್ ತಕ್ಷಣವೇ ಪ್ರಶ್ನಾರ್ಹ ವಹಿವಾಟುಗಳನ್ನು ವಂಚನೆ ಎಂದು ಘೋಷಿಸಿದೆ. ಸಂಪೂರ್ಣ ತನಿಖೆ ಮತ್ತು ಅಪರಾಧಿಗಳ ಪತ್ತೆಗಾಗಿ ಮೇ 30 ರಂದು ಕೇಂದ್ರೀಯ ತನಿಖಾ ದಳಕ್ಕೆ (CBI) ದೂರು ನೀಡಿದ್ದೇವೆ. ಮುಂದಿನ ವಿಚಾರಣೆಗಾಗಿ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ 94 ಕೋಟಿ ಗೋಲ್ಮಾಲ್‌ – ಯೂನಿಯನ್‌ ಬ್ಯಾಂಕ್‌ನಿಂದಲೇ ವಂಚನೆ, ಕೇಸ್‌ ದಾಖಲು

    ಈ ಸಮಸ್ಯೆಯನ್ನು ನ್ಯಾಯಯುತವಾಗಿ ಮತ್ತು ತ್ವರಿತವಾಗಿ ಪರಿಹರಿಸಲು ನಾವು ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಮತ್ತು ಅಂತಹ ಘಟನೆಗಳನ್ನು ತಡೆಯಲು ನಾವು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಹೇಳಿದೆ.  ಇದನ್ನೂ ಓದಿ: ಡೆತ್‌ನೋಟ್‌ನಲ್ಲಿರುವ ನಾಗರಾಜ್‌ ಜೊತೆ ನಾಗೇಂದ್ರಗೆ ವ್ಯವಹಾರ ಇದೆ: ಸಿಟಿ ರವಿಯಿಂದ ಫೋಟೋ ರಿಲೀಸ್

    ಏನಿದು ಪ್ರಕರಣ?
    ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ (Chandrashekaran) ಮೂವರ ಹೆಸರನ್ನು ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್‌, ಮೆಸೇಜ್‌ ಬಂದಿಲ್ಲ. ಬ್ಯಾಂಕ್‌ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

     

  • ವಾಲ್ಮೀಕಿ ನಿಗಮದಲ್ಲಿ 94 ಕೋಟಿ ಗೋಲ್ಮಾಲ್‌ – ಯೂನಿಯನ್‌ ಬ್ಯಾಂಕ್‌ನಿಂದಲೇ ವಂಚನೆ, ಕೇಸ್‌ ದಾಖಲು

    ವಾಲ್ಮೀಕಿ ನಿಗಮದಲ್ಲಿ 94 ಕೋಟಿ ಗೋಲ್ಮಾಲ್‌ – ಯೂನಿಯನ್‌ ಬ್ಯಾಂಕ್‌ನಿಂದಲೇ ವಂಚನೆ, ಕೇಸ್‌ ದಾಖಲು

    – ಬ್ಯಾಂಕ್‌ ವಿರುದ್ಧ ದೂರು ನೀಡಿದ ಎಂಡಿ ರಾಜಶೇಖರ್
    – ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್‌, ಮೆಸೇಜ್‌ ಬಂದಿಲ್ಲ
    – ಬ್ಯಾಂಕ್‌ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಅಧೀಕ್ಷಕ ಚಂದ್ರಶೇಖರನ್‌ (Chandrashekaran) ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ (Union Bank of India) ವಿರುದ್ಧ ಎಫ್‌ಐಆರ್‌ (FIR) ದಾಖಲಾಗಿದೆ.

    ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ಯೂನಿಯನ್ ಬ್ಯಾಂಕ್ ನ ಎಂಡಿ ಹಾಗೂ ಸಿಇಓ ಮನಿಮೇಖಲೈ, ಕಾರ್ಯನಿರ್ವಾಹಕ ನಿರ್ದೇಶಕ ನಿತೇಶ್ ರಂಜನ್, ರಾಮಸುಬ್ರಮಣ್ಯಂ,‌ ಸಂಜಯ್‌ ರುದ್ರ, ಪಂಕಜ್ ದ್ವಿವೇದಿ, ಸುಶಿಚಿತ ರಾವ್ ವಿರುದ್ಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

    ದೂರಿನ ಆಧಾರದಲ್ಲಿ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ವಿರುದ್ಧ ಐಪಿಸಿ ಸೆಕ್ಷನ್‌ 149 (ಒಂದೇ ಉದ್ದೇಶವನ್ನು ಇಟ್ಟುಕೊಂಡು ಗುಂಪಿನಲ್ಲಿರುವ ಪ್ರತಿಯೊಬ್ಬ ಸದಸ್ಯ ಕೃತ್ಯ ಎಸಗಿರುವುದು), 409( ಸರ್ಕಾರಿ ನೌಕರ ಅಥವಾ ಬ್ಯಾಂಕರ್‌ನಿಂದ ನಂಬಿಕೆ ದ್ರೋಹ), 420 (ವಂಚನೆ), 467 (ಬೆಲೆಯುಳ್ಳ ಭದ್ರತಾ ಪತ್ರ ಇತ್ಯಾದಿಗಳ ಸುಳ್ಳು ಸ್ಪಷ್ಟನೆ), 468 (ವಂಚಿಸುವ ಉದ್ದೇಶದಿಂದಲೇ ಸುಳ್ಳು ಸ್ಪಷ್ಟನೆ), 471(ಸುಳ್ಳು ಸ್ಪಷ್ಟನೆಯ ದಾಖಲೆಯನ್ನು ನೈಜವೆಂದು ಬಳಸುವುದು) ಅಡಿ ಎಫ್‌ಐಆರ್‌ ದಾಖಲಾಗಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಣ ಐಟಿ ಕಂಪನಿ ಖಾತೆಗೆ ಅಕ್ರಮ ವರ್ಗಾವಣೆ!


    ದೂರಿನಲ್ಲಿ ಏನಿದೆ?
    ನಿಗಮದ ಹೆಸರಲ್ಲಿ ವಸಂತನಗರದಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‌ನಲ್ಲಿ ಖಾತೆ ಇತ್ತು. ಫೆ.19, 2024 ರಂದು ಎಂಜಿ ರಸ್ತೆಯಲ್ಲಿರುವ ಬ್ರ್ಯಾಂಚ್‌ ಖಾತೆಯನ್ನು ವರ್ಗಾವಣೆ ಮಾಡಲಾಗಿರುತ್ತದೆ.

    ಫೆ.26 ರಂದು ಬ್ಯಾಂಕಿನವರು ನಿಗಮದ ಎಂಡಿ ಹಾಗೂ ಲೆಕ್ಕಾಧಿಕಾರಿಗಳ ಸಹಿಯನ್ನು ಪಡೆದುಕೊಂಡಿರುತ್ತಾರೆ. ನಂತರ ಈ ಖಾತೆಗೆ ನಿಗಮ ಮಾರ್ಚ್‌ 3 ರಂದು 25 ಕೋಟಿ ರೂ., ಮಾರ್ಚ್‌ 6 ರಂದು 44 ಕೋಟಿ ರೂ., ಮಾರ್ಚ್‌ 21 ರಂದು 33 ಕೋಟಿ ರೂ., ಮಾರ್ಚ್‌ 22 ರಂದು 33 ಕೋಟಿ ರೂ., ಮಾರ್ಚ್‌ 21 ರಂದು 50 ಕೋಟಿ ರೂ. ಹಣವನ್ನು ವರ್ಗಾವಣೆ ಮಾಡಿತ್ತು. ಒಟ್ಟು 187.33 ಕೋಟಿ ರೂ. ಹಣ ವರ್ಗಾವಣೆಯಾಗಿತ್ತು

    ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇದ್ದ ಹಿನ್ನೆಲೆಯಲ್ಲಿ ಬ್ಯಾಂಕ್‌ ಜೊತೆ ನಿಗಮದಿಂದ ಯಾವುದೇ ಪತ್ರ ವ್ಯವಹಾರ ನಡೆಸಿರುವುದಿಲ್ಲ. ಹೀಗಿದ್ದರೂ ನಕಲಿ ದಾಖಲೆ ಸೃಷ್ಟಿಸಿ 94,73,08,500 ರೂ. ಹಣವನ್ನು ವರ್ಗಾವಣೆ ಮಾಡಲಾಗಿದೆ. ಇಷ್ಟೊಂದು ಹಣ ವರ್ಗಾವಣೆಯಾದರೂ ನಿಗಮದ ನೊಂದಾಯಿಸಿದ ಇಮೇಲ್‌, ಮೊಬೈಲಿಗೆ ಯಾವುದೇ ಮಸೇಜ್‌ ಬಂದಿರುವುದಿಲ್ಲ.

     

    ಚಂದ್ರಶೇಖರನ್‌ ಅವರು ಬ್ಯಾಂಕ್‌ ದೃಢೀಕರಣ ಚೆಕ್‌, ಆರ್‌ಟಿಜಿಎಸ್‌, ಬ್ಯಾಂಕ್‌ ಹೇಳಿಕೆಗಳನ್ನು ಸಮನ್ವಯಗೊಳಿಸುವ ಕೆಲಸ ಮಾಡುತ್ತಿದ್ದರು. ಈ ರೀತಿ ಹಣ ವರ್ಗಾವಣೆಯಾದ ವಿಚಾರ ಗೊತ್ತಾದ ಬಳಿಕ ನಿಗಮ ಪ್ರಶ್ನೆ ಮಾಡಿದ್ದಕ್ಕೆ ಬ್ಯಾಂಕ್‌ ತಕ್ಷಣ 5 ಕೋಟಿ ರೂ. ಹಣವನ್ನು ಖಾತೆಗೆ ಹಾಕಿದೆ. ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳನ್ನು ನೀಡುವಂತೆ ಕೋರಿದ್ದು ಇಲ್ಲಿಯವರೆಗೆ ಬ್ಯಾಂಕ್‌ ಯಾವುದೇ ಸಿಸಿಟಿವಿ ದೃಶ್ಯ ನೀಡಿಲ್ಲ.

    ಬ್ಯಾಂಕ್‌ನ ಲೋಪದಿಂದಲೇ ಈ ಅಕ್ರಮ ವ್ಯವಹಾರ ನಡೆದಿದೆ. ಬ್ಯಾಂಕಿಂಗ್‌ ವ್ಯವಸ್ಥೆಯಲ್ಲಿ ನಡೆದ ಈ ಲೋಪಗಳಿಗೆ ಮುನ್ನೆಚ್ಚರಿಕೆ ತಗೆದುಕೊಳ್ಳುವಲ್ಲಿ ಬ್ಯಾಂಕ್‌ ಆಫ್‌ ಇಂಡಿಯಾದ ಉನ್ನತ ಆಡಳಿತವೇ ಜವಾಬ್ದಾರರಾಗಿದ್ದಾರೆ. ಯಾವುದೇ ಪರಿಶೀಲನೆ ನಡೆಸದೇ ಬ್ಯಾಂಕ್‌ನಿಂದ ಓವರ್ ಡ್ರಾಫ್ಟ್‌ ಸೌಲಭ್ಯವನ್ನು ಸೃಷ್ಟಿಸಿ ಹಾಗೂ ನಕಲಿ ದಾಖಲೆ ಸೃಷ್ಟಿಸಿ ಅಧಿಕೃತವಾಗಿ ಬೇರೆ ಬೇರೆ ಖಾತೆಗಳಿಗೆ ಹಣ ವರ್ಗಾವಣೆ ಮಾಡಿ ನಿಗಮಕ್ಕೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ. ಈ ಕೃತ್ಯಕ್ಕೆ ಕಾರಣದವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತಿದ್ದೇನೆ.

     

  • ಬಾಗಲಕೋಟೆಯಲ್ಲಿ ದಾಖಲೆಯಿಲ್ಲದ 5 ಕೋಟಿ ರೂ. ಹಣ ಜಪ್ತಿ

    ಬಾಗಲಕೋಟೆಯಲ್ಲಿ ದಾಖಲೆಯಿಲ್ಲದ 5 ಕೋಟಿ ರೂ. ಹಣ ಜಪ್ತಿ

    ಬಾಗಲಕೋಟೆ: ದಾಖಲೆಯಿಲ್ಲದೆ ಹುಬ್ಬಳ್ಳಿಯಿಂದ ಮುಧೋಳ ಮಾರ್ಗವಾಗಿ ಸಾಗಿಸುತ್ತಿದ್ದ 5 ಕೋಟಿ ರೂ. ಹಣವನ್ನು ಚುನಾವಣಾಧಿಕಾರಿಗಳು, ಫ್ಲೈಯಿಂಗ್‌ ಸ್ಕ್ವಾಡ್‌ (Flying Squad) ಹಾಗೂ ಲೋಕಾಪುರ ಪೊಲೀಸರು ಜಪ್ತಿ ಮಾಡಿದ್ದಾರೆ.

    ಹಣ ಸಾಗಿಸುವ ಬೊಲೆರೋ (Bolero) ವಾಹನದಲ್ಲಿ ಶುಕ್ರವಾರ ರಾತ್ರಿ ಹುಬ್ಬಳ್ಳಿ ಯೂನಿಯನ್ ಬ್ಯಾಂಕಿನಿಂದ (Union Bank) ಮುಧೋಳ ಯೂನಿಯನ್ ಬ್ಯಾಂಕ್‌ಗೆ 5 ಕೋಟಿ ರೂ. ಹಣವನ್ನು ಸಾಗಿಸಲಾಗುತ್ತಿತ್ತು. ಲೋಕಾಪುರ ಬಳಿಯಿರುವ ಲಕ್ಷಾನಟ್ಟಿ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ವೇಳೆ ಹಣ ಸಾಗಾಟ ಕಂಡುಬಂದಿದೆ. ಇದನ್ನೂ ಓದಿ: ಸಿಎಂ ಮನೆ ಮುಂದಿನ ರಸ್ತೆಯಲ್ಲೇ 10 ಲಕ್ಷ ನಗದು ಹಣ ಪತ್ತೆ..!

    ಈ ಹಣ ಯೂನಿಯನ್ ಬ್ಯಾಂಕ್‌ಗೆ ಸೇರಿದ್ದು ಎಂಬ ಮಾಹಿತಿ ನೀಡಿದರೂ ಸಹ ಸಮರ್ಪಕ ದಾಖಲೆಯಿಲ್ಲದ ಹಿನ್ನೆಲೆ ಹಣವನ್ನು ಜಪ್ತಿಪಡಿಸಿಕೊಂಡು ಕಾರಿನಲ್ಲಿದ್ದ ಐವರನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಅಧಿಕಾರಿಗಳು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಕಲಿ ಪಾಸ್‌ಪೋರ್ಟ್‌ ಬಳಸಿ ವಿದೇಶಕ್ಕೆ ಹಾರಲು ಸಂಚು ರೂಪಿಸಿದ್ದ ಆರೋಪಿ ಅಂದರ್‌

  • ಮೊಬೈಲ್‌ನಲ್ಲೇ ಕ್ರೆಡಿಟ್ ಕಾರ್ಡ್ ಮಾಡಿಕೊಡೋದಾಗಿ ನಂಬಿಸಿ 1.13 ಲಕ್ಷ ಪಂಗನಾಮ

    ಮೊಬೈಲ್‌ನಲ್ಲೇ ಕ್ರೆಡಿಟ್ ಕಾರ್ಡ್ ಮಾಡಿಕೊಡೋದಾಗಿ ನಂಬಿಸಿ 1.13 ಲಕ್ಷ ಪಂಗನಾಮ

    ಹಾಸನ: ಮೊಬೈಲ್‌ನಲ್ಲೇ ಕ್ರೆಡಿಟ್ ಕಾರ್ಡ್ (Mobile Credit Card) ಮಾಡಿಕೊಡುವುದಾಗಿ ನಂಬಿಸಿ ಕಣ್ಣೆದುರೇ ಚಾಲಾಕಿಯೊಬ್ಬ ಮೊಬೈಲ್‌ನಿಂದ (Mobile) ಹಣ ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಹಾಸನ ನಗರದ ಬಸಟ್ಟಿಕೊಪ್ಪಲು ನಿವಾಸಿ ಧರ್ಮಪ್ರಕಾಶ ಎಂಬುವವರು ಯೂನಿಯನ್ ಬ್ಯಾಂಕ್ (Union Bank) ಖಾತೆದಾರರಾಗಿದ್ದಾರೆ. ಬ್ಯಾಂಕ್ ಖಾತೆಗೆ (Bank Account) ತಮ್ಮ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಿಸಿದ್ದರು. ಇದನ್ನೂ ಓದಿ: ಪುಸ್ತಕದಲ್ಲಿ ಹಿಂದೂ ವಿರೋಧಿ ಉಲ್ಲೇಖ – ಲೇಖಕರು ಸೇರಿ ನಾಲ್ವರ ವಿರುದ್ಧ ಕೇಸ್

    ಕಳೆದ ಸೆಪ್ಟೆಂಬರ್ 9 ರಂದು ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ನಗರದ ಯೂನಿಯನ್ ಬ್ಯಾಂಕ್ (Union Bank) ಬಳಿ ಭೇಟಿಯಾಗಿ ಪರಿಚಯಸ್ಥನಂತೆ ಮಾತನಾಡಿದ್ದಾನೆ. ನಂತರ ತಾನು ಮೊಬೈಲ್‌ನಲ್ಲೇ ಕ್ರೆಡಿಟ್ ಕಾರ್ಡ್‌ಗಳನ್ನು ಇನ್‌ಸ್ಟಾಲ್‌ ಮಾಡಿಕೊಡುತ್ತೇನೆ ಎಂದು ನಂಬಿಸಿ ಧರ್ಮಪ್ರಕಾಶ್ ಮೊಬೈಲ್ ಪಡೆದು ಡಿಜಿಟಲ್ ದಾಖಲೆ ಹಾಗೂ ಮಾಹಿತಿಯನ್ನ ಅಪ್ಲೋಡ್ ಮಾಡಿದ್ದಾನೆ. ಇದನ್ನೂ ಓದಿ: ರಾಹುಲ್‌ ಏಕಾಂಗಿ ಹೋರಾಟ ವ್ಯರ್ಥ, ಶಕೀಬ್‌ ಆಲ್‌ರೌಂಡರ್‌ ಆಟ – ಬಾಂಗ್ಲಾದೇಶಕ್ಕೆ 1 ವಿಕೆಟ್‌ ರೋಚಕ ಜಯ

    ಸ್ವಲ್ಪ ಹೊತ್ತಿನ ನಂತರ ಮೊಬೈಲ್‌ನ್ನು ಧರ್ಮಪ್ರಕಾಶ್‌ಗೆ ವಾಪಸ್ ಕೊಟ್ಟಿದ್ದಾನೆ. ಆ ವೇಳೆ ಮೊಬೈಲ್ ಸ್ವಿಚ್ಡ್ಆಫ್ ಆಗಿದ್ದರಿಂದ ಮೊಬೈಲ್ ಅಂಗಡಿಗೆ ಹೋಗಿ ಪರಿಶೀಲಿಸಿದ್ದಾರೆ. ನಂತರವೇ ಮೊಬೈಲ್‌ನಲ್ಲಿದ್ದ ಸಿಮ್‌ನ್ನು ಅಪರಿಚಿತ ನಿಷ್ಕ್ರಿಯಗೊಳಿಸಿರುವುದು ಗೊತ್ತಾಗಿದೆ. ಕೂಡಲೇ ಬೇರೆ ಸಿಮ್ ತೆಗೆದುಕೊಂಡು ಮೊಬೈಲ್ ಪರಿಶೀಲಿಸಿದಾಗ ಬ್ಯಾಂಕ್ ಖಾತೆಯಿಂದ 1,13,800 ರೂ. ಗಳನ್ನು ಬೇರೆ ಖಾತೆಗೆ ವರ್ಗಾವಣೆ ಮಾಡಿಕೊಂಡಿರುವುದು ಗೊತ್ತಾಗಿದೆ.

    ಅಪರಿಚಿತ ವಂಚಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಧರ್ಮಪ್ರಕಾಶ್ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]