Tag: ಯೆಲ್ಲೋ ಗ್ಯಾಂಗ್ಸ್

  • ವಿಭಿನ್ನ ಕಥಾಹಂದರದ ‘ಯೆಲ್ಲೋ ಗ್ಯಾಂಗ್ಸ್’ ಸಿನಿಮಾ ಟ್ರೇಲರ್ ಬಿಡುಗಡೆ

    ವಿಭಿನ್ನ ಕಥಾಹಂದರದ ‘ಯೆಲ್ಲೋ ಗ್ಯಾಂಗ್ಸ್’ ಸಿನಿಮಾ ಟ್ರೇಲರ್ ಬಿಡುಗಡೆ

    ಮಾಮೂಲಿ ತರಹದ ಕಥೆಯಲ್ಲದೇ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳಿಗೆ ಕನ್ನಡ ಪ್ರೇಕ್ಷಕರು ಜೈ ಎಂದದ್ದು ಹೆಚ್ಚು. ಅಂತಹ ವಿಭಿನ್ನ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಯೆಲ್ಲೋ ಗ್ಯಾಂಗ್ಸ್” (Yellow Gangs) ಚಿತ್ರದ ಟ್ರೇಲರ್ (Trailer) ವಿಭಿನ್ನವಾಗಿದ್ದು, ನೋಡುಗರಲ್ಲಿ ಕುತೂಹಲ ಮೂಡಿಸಿದೆ. ಇದನ್ನೂ ಓದಿ:ಕೊಟ್ಟ ಮಾತಿನಂತೆ ದಾವಣಗೆರೆ ಬೆಣ್ಣೆದೋಸೆ ಸವಿದ ಸ್ಯಾಂಡಲ್ ವುಡ್ ಕ್ವೀನ್

    ಬೇರೊಂದು ಉದ್ಯೋಗ ಮಾಡುತ್ತಿದ್ದ ನನ್ನನ್ನು ಚಿತ್ರರಂಗ ಆಕರ್ಷಿಸಿತ್ತು. ಮೊದಲ ಪ್ರಯತ್ನವಾಗಿ ಈ ಚಿತ್ರ ನಿರ್ದೇಶಿಸಿದ್ದೇನೆ. ಕನ್ನಡದಲ್ಲಿ ಕ್ರೈಮ್ ಥ್ರಿಲ್ಲರ್ ಚಿತ್ರಗಳು ಬಂದಿದೆಯಾದರೂ, ಇದು ಸ್ವಲ್ಪ ಭಿನ್ನ. ನಾಯಕ ದೇವ್ ದೇವಯ್ಯ (Dev Deviah), ನಾಯಕಿ ಅರ್ಚನಾ ಕೊಟ್ಟಿಗೆ (Archana Kottige) ಸೇರಿದಂತೆ ಹತ್ತೊಂಬತ್ತು ಪ್ರಮುಖ ಪಾತ್ರಗಳು ನಮ್ಮ ಚಿತ್ರದಲ್ಲಿದೆ. ಎಲ್ಲಾ ಪಾತ್ರಗಳ ಮೇಲೂ ನಮ್ಮ ಚಿತ್ರದ ಕಥೆ ಸಾಗುತ್ತದೆ. ಮೂರು ಗ್ಯಾಂಗ್ ಗಳಿದ್ದು, ಅದಕ್ಕೆ ಮೂರು ಜನ ಮುಖ್ಯಸ್ಥರಿರುತ್ತಾರೆ. ಸುಜ್ಞಾನ್ ಅವರ ಸುಂದರ ಛಾಯಾಗ್ರಹಣ ಹಾಗೂ ರೋಹಿತ್ ಸೋವರ್ ಅವರ ಸಂಗೀತ ನಿರ್ದೇಶನ ಈ ಚಿತ್ರದ ಹೈಲೆಟ್. ಇಡೀ ಚಿತ್ರವನ್ನು ಟ್ರ್ಯಾಲಿ ಬಳಸದೆ , ಕೈಯಲ್ಲಿ ಕ್ಯಾಮೆರಾ ಹಿಡಿದು ಚಿತ್ರಿಸಿರುವುದು ವಿಶೇಷ. ಇಂತಹ ಹಲವು ವಿಶೇಷಗಳ ಸಂಗಮವಾಗಿರುವ ನಮ್ಮ “ಯೆಲ್ಲೋ ಗ್ಯಾಂಗ್ಸ್” ಗೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಿರ್ದೇಶಕ ರವೀಂದ್ರ ಪರಮೇಶ್ವರಪ್ಪ.

    ವಿಭಿನ್ನ ಸ್ಟುಡಿಯೋಸ್, ವಾಟ್ ನೆಕ್ಸ್ಟ್ ಮೂವೀಸ್ ಹಾಗೂ ಕೀ ಲೈಟ್ಸ್ ಸಂಸ್ಥೆ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಶಿವಮೊಗ್ಗದ ನವೋದಯ ಶಾಲೆಯಲ್ಲಿ ಓದಿರುವ ಸಾಕಷ್ಟು ವಿದ್ಯಾರ್ಥಿಗಳು ಈ ಚಿತ್ರಕ್ಕೆ ಹಣ ಹೂಡಿದ್ದೇವೆ. ಏಕೆಂದರೆ ನಿರ್ದೇಶಕ ರವೀಂದ್ರ ನಮ್ಮ ಸಹಪಾಠಿ. ಮೊದಲಿನಿಂದಲೂ ಅವರ ಯೋಚನೆ ವಿಭಿನ್ನವಾಗಿರುವುದರಿಂದ ನಮ್ಮ ಸಂಸ್ಥೆಗೆ ವಿಭಿನ್ನ ಸ್ಟುಡಿಯೋಸ್ ಎಂದು ಹೆಸರಿಟ್ಟಿದ್ದೇವೆ ಎಂದರು ನಿರಂಜನ್.

    ವಿಕ್ರಮ್ ಎಂಬ ಹೆಸರಿನಿಂದ ಪೊಲೀಸ್ ಅಧಿಕಾರಿಯಾಗಿ ಈ ಚಿತ್ರದಲ್ಲಿ ಅಭಿನಯಿಸಿರುವುದಾಗಿ ನಾಯಕ ದೇವ್ ದೇವಯ್ಯ ಹೇಳಿದರು. ನನಗೆ ಇದೊಂದು ಉತ್ತಮ ಚಿತ್ರವೆಂದರು ನಾಯಕಿ ಅರ್ಚನಾ ಕೊಟ್ಟಿಗೆ. ಚಿತ್ರದಲ್ಲಿ ನಟಿಸಿರುವ ಸತ್ಯ ಬಿ.ಜಿ, ಅರುಣ್ ಕುಮಾರ್, ನಾಟ್ಯ ರಂಗ, ವಿನೀತ್ ಕಟ್ಟಿ ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು. ಹಾಡುಗಳಿಲ್ಲ. ರೀರೇಕಾರ್ಡಿಂಗ್ ಚಿತ್ರದ ಹೈಲೆಟ್ ಎಂದರು ಸಂಗೀತ ನಿರ್ದೇಶಕ ರೋಹಿತ್. ಸಹ ನಿರ್ಮಾಪಕ ಮನೋಜ್ ಪಿ ಅವರ ಪುತ್ರಿ ಪ್ರತೀಕ್ಷ ಟ್ರೇಲರ್ ಬಿಡುಗಡೆ ಮಾಡಿದರು. ನಿರ್ದೇಶಕರೊಟ್ಟಿಗೆ ಸಂಭಾಷಣೆ ಬರೆದಿರುವ ಪ್ರವೀಣ್ ಕುಮಾರ್ ಅಚ್ಚುಕಟ್ಟಾಗಿ ಸಮಾರಂಭ ನಡೆಸಿಕೊಟ್ಟರು.

    Live Tv
    [brid partner=56869869 player=32851 video=960834 autoplay=true]

  • ಶಿಷ್ಯನ ಸಿನಿಮಾ ಟೀಸರ್ ಬಿಡುಗಡೆ ಮಾಡಿದ ಯೋಗರಾಜ್ ಭಟ್

    ಶಿಷ್ಯನ ಸಿನಿಮಾ ಟೀಸರ್ ಬಿಡುಗಡೆ ಮಾಡಿದ ಯೋಗರಾಜ್ ಭಟ್

    – ಇಂಟ್ರಸ್ಟಿಂಗ್ ಆಗಿದೆ `ಯೆಲ್ಲೋ ಗ್ಯಾಂಗ್ಸ್’ ಟೀಸರ್..!

    `ಯೆಲ್ಲೋ ಗ್ಯಾಂಗ್ಸ್’ ಹೆಸರು ಸ್ಯಾಂಡಲ್‍ವುಡ್ ಅಂಗಳದಲ್ಲಿ ಬೇಜಾನ್ ಸದ್ದು ಮಾಡಲು ಶುರು ಮಾಡಿದೆ. ಟೈಟಲ್‍ನಲ್ಲಿ ಕ್ಯೂರಿಯಾಸಿಟಿ ಇರುವುದರಿಂದ ಚಿತ್ರದಲ್ಲಿ ಈ ಗ್ಯಾಂಗ್ ಹೇಗೆ ಕೆಲಸ ಮಾಡಿದೆ ಎಂಬ ಕುತೂಹಲವೂ ಈಗಾಗಲೇ ಚಂದನವನದಲ್ಲಿ ಮೂಡಿದೆ. ಇದರ ಬೆನ್ನಲ್ಲೇ ಆ ನಿರೀಕ್ಷೆಯನ್ನು ಹೆಚ್ಚು ಮಾಡಲು ಚಿತ್ರತಂಡ ಟೀಸರ್ ಮೂಲಕ ಸೋಶಿಯಲ್ ಮೀಡಿಯಾಗೆ ಎಂಟ್ರಿ ಕೊಟ್ಟಿದೆ. ಸಖತ್ ಇಂಟ್ರಸ್ಟಿಂಗ್ ಆಗಿ ಮೂಡಿ ಬಂದಿರೋ `ಯೆಲ್ಲೋ ಗ್ಯಾಂಗ್ಸ್’ ಟೀಸರನ್ನು ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಮೆಚ್ಚಿ ಬಿಡುಗಡೆ ಮಾಡಿದ್ದಾರೆ.

    `ಯೆಲ್ಲೋ ಗ್ಯಾಂಗ್ಸ್’ ಪ್ರಯೋಗಾತ್ಮಕ ಸಿನಿಮಾವಾಗಿದ್ದು, ಕ್ರೈಂ ಥ್ರಿಲ್ಲರ್ ಸಬ್ಜೆಕ್ಟ್ ಚಿತ್ರದಲ್ಲಿದೆ. ರವೀಂದ್ರ ಪರಮೇಶ್ವರಪ್ಪ ಸಿನಿಮಾದ ಸೂತ್ರಧಾರರಾಗಿದ್ದು ಕಥೆ ಹಾಗೂ ನಿರ್ದೇಶನ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಯೋಗರಾಜ್ ಭಟ್ ಸಿನಿಮಾಗಳಲ್ಲಿ ದುಡಿದ ಅನುಭವ ಇರುವ ರವೀಂದ್ರ ಪರಮೇಶ್ವರಪ್ಪ ಇದೇ ಮೊದಲ ಬಾರಿ ಸ್ವತಂತ್ರವಾಗಿ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ಶಿಷ್ಯನ ಸಿನಿಮಾ ಟೀಸರ್ ನೋಡಿ ಮೆಚ್ಚಿಕೊಂಡ ಯೋಗರಾಜ್ ಭಟ್ ಇಡೀ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

    ದೇವ್ ದೇವಯ್ಯ, ಅರ್ಚನಾ ಕೊಟಗಿ, ಅರುಣ್ ಕುಮಾರ್, ಸತ್ಯಣ್ಣ, ನಾಟ್ಯರಂಗ, ಸುದೀಪ್ ಪೂಜಾರಿ ಸೇರಿದಂತೆ ಅನೇಕ ಕಲಾವಿದರು ಯೆಲ್ಲೋ ಗ್ಯಾಂಗ್ಸ್ ಅಡ್ಡಾದಲ್ಲಿ ಬಣ್ಣ ಹಚ್ಚಿದ್ದಾರೆ. ಕಳೆದ ವರ್ಷವೇ ಚಿತ್ರೀಕರಣ ಕಂಪ್ಲೀಟ್ ಮಾಡಿರುವ `ಯೆಲ್ಲೋ ಗ್ಯಾಂಗ್ಸ್’ ಸಿನಿಮಾ ಕೊರೋನಾ ಹೊಡೆತದಿಂದ ಮುಂದಿನ ವರ್ಷ ತೆರೆ ಮೇಲೆ ತರಲಿದೆ.

    ಕ್ರೈಂ ಥ್ರಿಲ್ಲರ್ ಸಬ್ಜೆಕ್ಟ್ ಇರುವ `ಯೆಲ್ಲೋ ಗ್ಯಾಂಗ್ಸ್’ ಸಿನಿಮಾವನ್ನು ಖ್ಯಾತ ಛಾಯಾಗ್ರಾಹಕ ಸುಜ್ಞಾನ್ ಕ್ಯಾಮರಾ ವರ್ಕ್, ರೋಹಿತ್ ಸೋವರ್ ಸಂಗೀತ ನಿರ್ದೇಶನವಿದೆ. ವಿಭಿನ್ನ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣವಾಗಿದೆ. ಮನೋಜ್.ಪಿ, ಜಿಎಂಆರ್ ಕುಮಾರ್. ಡಿ.ಎಸ್. ಪ್ರವೀಣ್, `ಯೆಲ್ಲೋ ಗ್ಯಾಂಗ್ಸ್’ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.