Tag: ಯೋಗಿ ಅದಿತ್ಯನಾಥ್

  • ಪತಿಯನ್ನು ಹತ್ಯೆಗೈದವರು ಈಗ ಸಮಾಧಿಯಾಗಿದ್ದಾರೆ – ಯೋಗಿಯನ್ನು ಹೊಗಳಿದ್ದಕ್ಕೆ ಪಕ್ಷದಿಂದಲೇ ಎಸ್‌ಪಿ ಶಾಸಕಿ ಉಚ್ಚಾಟನೆ

    ಪತಿಯನ್ನು ಹತ್ಯೆಗೈದವರು ಈಗ ಸಮಾಧಿಯಾಗಿದ್ದಾರೆ – ಯೋಗಿಯನ್ನು ಹೊಗಳಿದ್ದಕ್ಕೆ ಪಕ್ಷದಿಂದಲೇ ಎಸ್‌ಪಿ ಶಾಸಕಿ ಉಚ್ಚಾಟನೆ

    ಲಕ್ನೋ: ಉತ್ತರ ಪ್ರದೇಶದ (Uttar Pradesh) ಸಿಎಂ ಯೋಗಿ ಆದಿತ್ಯನಾಥ್‌ (Yogi Adityanath) ಅವರನ್ನು ಸದನದಲ್ಲೇ ಹೊಗಳಿದ್ದಕ್ಕೆ ಸಮಾಜವಾದಿ ಪಕ್ಷದ ಶಾಸಕಿ ಪೂಜಾ ಪಾಲ್ (Pooja Pal) ಅವರನ್ನು ಅಖಿಲೇಶ್‌ ಯಾದವ್‌ ಪಕ್ಷದಿಂದಲೇ ಹೊರಹಾಕಿದ್ದಾರೆ.

    ನೀವು ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದೀರಿ. ಎಚ್ಚರಿಕೆ ನೀಡಿದ ನಂತರವೂ ನೀವು ಈ ಚಟುವಟಿಕೆಗಳನ್ನು ಮುಂದುವರಿಸಿದ್ದೀರಿ. ನೀವು ಮಾಡಿದ ಕೆಲಸ ಪಕ್ಷ ವಿರೋಧಿ ಮತ್ತು ಗಂಭೀರ ಅಶಿಸ್ತಿನ ಕೃತ್ಯವಾಗಿದೆ. ಆದ್ದರಿಂದ ನಿಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಮಾಜವಾದಿ ಪಕ್ಷದಿಂದ (SP) ಉಚ್ಚಾಟಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

    ಪಕ್ಷದಿಂದ ಉಚ್ಚಾಟಿಸಿದ ಬಳಿಕವೂ ಪೂಜಾ ಪಾಲ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಯೋಗಿ ಸರ್ಕಾರ ಬಂದ ನಂತರ ರಾಜ್ಯದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಧಾರಣೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಪ್ರಯಾಗ್‌ರಾಜ್‌ನಲ್ಲಿ ನನಗಿಂತ ಹೆಚ್ಚು ನೋವನ್ನು ಅನುಭವಿಸಿದ ಮಹಿಳೆಯರ ಧ್ವನಿಯನ್ನು ನೀವು ಕೇಳಲು ಸಾಧ್ಯವಾಗದಿರಬಹುದು. ಆದರೆ ನಾನು ಅವರ ಧ್ವನಿ. ನನ್ನನ್ನು ಶಾಸಕಿಯಾಗಿ ಆಯ್ಕೆ ಮಾಡಿ ವಿಧಾನಸಭೆಗೆ ಕಳುಹಿಸಲಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ತಾಯಂದಿರು ಮತ್ತು ಸಹೋದರಿಯರ ಧ್ವನಿ ನಾನು. ಪ್ರಯಾಗ್‌ರಾಜ್‌ನಲ್ಲಿರುವ ಪೂಜಾ ಪಾಲ್‌ಗೆ ಮಾತ್ರವಲ್ಲದೆ ಅತಿಕ್ ಅಹ್ಮದ್‌ನಿಂದ ತೊಂದರೆಗೊಳಗಾದ ಎಲ್ಲಾ ಜನರಿಗೆ ಮುಖ್ಯಮಂತ್ರಿಗಳು ನ್ಯಾಯ ಒದಗಿಸಿದ್ದಾರೆ. ನಾನು ಪಕ್ಷದಲ್ಲಿ ಇದ್ದರೂ ಮೊದಲ ದಿನದಿಂದಲೇ ಇದನ್ನೇ ಹೇಳುತ್ತಿದ್ದೇನೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಗ್ಯಾಂಗ್‌ಸ್ಟರ್ಅತೀಕ್ಅಹ್ಮದ್ತಲೆಗೆ 1, ದೇಹಕ್ಕೆ 8 ಗುಂಡೇಟು

     

    ಪೂಜಾ ಪಾಲ್ ಯಾರು?
    ಪೂಜಾ ಪಾಲ್ ಅಲಹಾಬಾದ್ ನಗರದ ಪಶ್ಚಿಮ ಕ್ಷೇತ್ರದ ಬಿಎಸ್‌ಪಿ ಶಾಸಕ ರಾಜು ಪಾಲ್ ಅವರ ಪತ್ನಿ. 2005 ರಲ್ಲಿ ಪೂಜಾ ಪಾಲ್ ಮದುವೆಯಾದ 10 ದಿನದಲ್ಲೇ ರಾಜು ಪಾಲ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಮಾಫಿಯಾ ಡಾನ್ ಅತಿಕ್ ಅಹ್ಮದ್ (Atiq Ahmed) ಸಹೋದರ ಅಶ್ರಫ್ ಮೇಲೆ ಈ ಹತ್ಯೆ ಮಾಡಿದ ಆರೋಪ ಬಂದಿತ್ತು. ನಂತರ ಈ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಅತಿಕ್ ಅಹ್ಮದ್ ಸಹೋದರ ಖಾಲಿದ್ ಅಜೀಮ್ ವಿರುದ್ಧ ಬಿಎಸ್‌ಪಿಯಿಂದ ಪೂಜಾ ಪಾಲ್ ಸ್ಪರ್ಧಿಸಿದ್ದರು. ಆದರೆ ಈ ಚುನಾವಣೆಯಲ್ಲಿ ಪೂಜಾ ಸೋತಿದ್ದರು. ನಂತರ 2007 ಮತ್ತು 2012 ರ ಚುನಾವಣೆಯಲ್ಲಿ ಪೂಜಾ ಪಾಲ್ ಈ ಕ್ಷೇತ್ರದಿಂದ ಜಯಗಳಿಸಿದ್ದರು.

    ಈ ಮಧ್ಯೆ ಬಿಜೆಪಿ ನಾಯಕ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರನ್ನು ಭೇಟಿಯಾಗಿದ್ದಕ್ಕೆ ಫೆಬ್ರವರಿ 2018 ರಲ್ಲಿ ಬಿಎಸ್‌ಪಿಯಿಂದ ಉಚ್ಚಾಟಿಸಲಾಗಿತ್ತು. 2019 ರಲ್ಲಿ ಸಮಾಜವಾದಿ ಪಕ್ಷವನ್ನು ಸೇರಿದ್ದ ಪೂಜಾ ಪಾಲ್ ಕೌಶಂಬಿ ಜಿಲ್ಲೆಯ ಚೈಲ್ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕಿಯಾಗಿ ಆಯ್ಕೆಯಾಗಿದ್ದರು.

    ಪೂಜಾ ಪಾಲ್‌ ಹೇಳಿದ್ದೇನು?
    ನನ್ನ ಪತಿಯನ್ನು ಹತ್ಯೆ ಮಾಡಿದವರು ಯಾರು ಎನ್ನುವುದು ಎಲ್ಲರಿಗೂ ಗೊತ್ತಿತ್ತು. ಯಾರಿಂದಲೂ ನ್ಯಾಯ ಸಿಗದೇ ಇದ್ದಾಗ ನನ್ನ ಮಾತು ಕೇಳಿ ನನಗೆ ನ್ಯಾಯ ಒದಗಿಸಿದ್ದಕ್ಕೆ ಯೋಗಿ ಆದಿತ್ಯನಾಥ್‌ ಅವರಿಗೆ ಧನ್ಯವಾದಗಳು. ಅಪರಾಧಿಗಳ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಗಳನ್ನು ತರುವ ಮೂಲಕ ಮುಖ್ಯಮಂತ್ರಿ ಪ್ರಯಾಗ್‌ರಾಜ್‌ನಲ್ಲಿ ನನ್ನಂತಹ ಅನೇಕ ಇತರ ಮಹಿಳೆಯರಿಗೆ ನ್ಯಾಯ ಒದಗಿಸಿದ್ದಾರೆ. ಇಂದು ಇಡೀ ರಾಜ್ಯವೇ ಸಿಎಂ ಅವರನ್ನು ವಿಶ್ವಾಸದಿಂದ ನೋಡುತ್ತಿದೆ. ಮುಖ್ಯಮಂತ್ರಿಗಳು ನನ್ನ ಪತಿಯ ಕೊಲೆಗಾರ ಅತಿಕ್ ಅಹ್ಮದ್‌ನನ್ನು ಸಮಾಧಿ ಮಾಡಿದ್ದಾರೆ ಎಂದು ಶ್ಲಾಘಿಸಿದ್ದರು.

    ಗುಂಡಿಕ್ಕಿ ಹತ್ಯೆ:
    ರಾಜು ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಅವರನ್ನು ಫೆಬ್ರವರಿ 2023 ರಲ್ಲಿ ಪ್ರಯಾಗ್‌ರಾಜ್‌ನ ಸುಲೇಮ್ ಸರಾಯ್ ಪ್ರದೇಶದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

    ಈ ಪ್ರಕರಣದ ಪ್ರಮುಖ ಆರೋಪಿಗಳಾದ ಅತಿಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಅಹ್ಮದ್‌ನನ್ನು ಪೊಲೀಸರು ಬಂಧಿಸಿದ್ದರು. ಏಪ್ರಿಲ್ 15, 2023 ರಂದು ಇಬ್ಬರನ್ನು ಪ್ರಯಾಗ್‌ರಾಜ್‌ನಲ್ಲಿ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಪತ್ರಕರ್ತರಂತೆ ನಟಿಸಿದ್ದ ಇಬ್ಬರು ಇವರ ಮೇಲೆ ಗುಂಡಿನ ದಾಳಿ ನಡೆಸಿ ಅಣ್ಣ, ತಮ್ಮನನ್ನು ಹತ್ಯೆ ಮಾಡಿದ್ದರು.

  • ಎಷ್ಟೇ ಸುಳ್ಳು ಹರಡಿದ್ರೂ ಕೋಟ್ಯಂತರ ಜನ ಭಾಗಿಯಾಗಿ ಉತ್ತರ ನೀಡಿದ್ದಾರೆ – ಪ್ರತಿಪಕ್ಷಗಳಿಗೆ ಯೋಗಿ ಗುದ್ದು

    ಎಷ್ಟೇ ಸುಳ್ಳು ಹರಡಿದ್ರೂ ಕೋಟ್ಯಂತರ ಜನ ಭಾಗಿಯಾಗಿ ಉತ್ತರ ನೀಡಿದ್ದಾರೆ – ಪ್ರತಿಪಕ್ಷಗಳಿಗೆ ಯೋಗಿ ಗುದ್ದು

    – ಸನಾತನದ ಧ್ವಜ ಎಂದಿಗೂ ಕೆಳಗೆ ಇಳಿಯಲು ಬಿಡಲ್ಲ
    – ಪ್ರತಿ ಪಕ್ಷಗಳ ಸುಳ್ಳಿಗೆ ಭಕ್ತರು ಬಲಿಯಾಗಲಿಲ್ಲ
    – ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ 10 ಸಾವಿರ ರೂ. ಬೋನಸ್‌

    ಪ್ರಯಾಗ್‌ರಾಜ್‌: ಪ್ರತಿಪಕ್ಷಗಳು ಎಷ್ಟೇ ಸುಳ್ಳಿನ ಮಾಹಿತಿ ಹರಡಿದರೂ ಕೋಟ್ಯಂತರ ಜನರು ಕುಂಭಮೇಳದಲ್ಲಿ (Kumbh Mela) ಭಾಗವಹಿಸುವ ಮೂಲಕ ಅವರಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್‌ ( CM Yogi Adityanath) ಹೇಳಿದ್ದಾರೆ.

    ಮಹಾ ಕುಂಭಮೇಳ ಯಶಸ್ವಿಯಾದ ಬೆನ್ನಲ್ಲೇ ಇಂದು ಯೋಗಿ ಪ್ರಯಾಗ್‌ರಾಜ್‌ಗೆ (Prayagraj) ಆಗಮಿಸಿದ್ದರು.  ಮಧ್ಯಾಹ್ನ  ಯೋಗಿ ಅವರು ಪ್ರಯಾಗ್‌ರಾಜ್‌ನ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾದವರ ಜೊತೆ ಮಧ್ಯಾಹ್ನ ಭೋಜನ ಮಾಡಿದರು.

    ನಂತರ ಈ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದವರನ್ನು ಉದ್ದೇಶಿಸಿ ಮಾತನಾಡಿದ ಅವರು, ತಪ್ಪು ಮಾಹಿತಿಗೆ ನಾವು ಬಲಿಯಾಗುವುದಿಲ್ಲ ಮತ್ತು ಸನಾತನದ ಧ್ವಜ ಎಂದಿಗೂ ಕೆಳಗೆ ಇಳಿಯಲು ಬಿಡುವುದಿಲ್ಲ ಎಂಬ ಸಂದೇಶವನ್ನು ಕೋಟ್ಯಂತರ ಭಕ್ತರು ಪ್ರತಿಪಕ್ಷಗಳಿಗೆ ರವಾನಿಸಿದ್ದಾರೆ ಎಂದು ಹೇಳಿದರು.

    ನಗರದಲ್ಲಿ 20-25 ಲಕ್ಷ ಜನಸಂಖ್ಯೆ ಇದೆ. ಒಂದೇ ಬಾರಿಗೆ ಕೋಟ್ಯಂತರ ಜನ  ಬಂದಾಗ ಪರಿಸ್ಥಿತಿ ಏನಾಗಬಹುದು ಎನ್ನುವುದು ನನಗೆ ತಿಳಿದಿದೆ. ಕಳೆದ ಎರಡು ತಿಂಗಳುಗಳಿಂದ ಈ ಕಾರ್ಯಕ್ರಮವನ್ನು ತಮ್ಮ ಮನೆಯ ಕಾರ್ಯಕ್ರಮವಾಗಿ ಸ್ವೀಕರಿಸಿದ ಪ್ರಯಾಗ್‌ರಾಜ್ ಜನತೆಗೆ ನಾನು ಧನ್ಯವಾದ ಹೇಳುತ್ತೇನೆ ಎಂದು ತಿಳಿಸಿದರು.

    ಸುಮಾರು 66.30 ಕೋಟಿ ಭಕ್ತರು ಭಾಗವಹಿಸಿದ ಬೃಹತ್ ಕಾರ್ಯಕ್ರಮ ಜಗತ್ತಿನ ಎಲ್ಲಿಯೂ ನಡೆದಿಲ್ಲ. ಅಪಹರಣ, ಲೂಟಿ ಅಥವಾ ಅಂತಹ ಯಾವುದೇ ಘಟನೆ ನಡೆದಿಲ್ಲ. ಪ್ರತಿಪಕ್ಷಗಳು ಬೈನಾಕ್ಯುಲರ್ ಮತ್ತು ಸೂಕ್ಷ್ಮದರ್ಶಕವನ್ನು ಬಳಸಿ ಹುಡುಕಿದರೂ ಅವರಿಗೆ ಸಿಗಲಿಲ್ಲ ಎಂದರು.

    ಈ ರೀತಿಯ ದೊಡ್ಡ ಕಾರ್ಯಕ್ರಮ ಮಾಡಿದ್ದನ್ನು ಸಹಿಸದ ಪ್ರತಿಪಕ್ಷಗಳು ಸುಳ್ಳು ಮಾಹಿತಿಯನ್ನು ಹರಡಿದವು. ಮೌನಿ ಅಮವಾಸ್ಯೆಯಂದು 8 ಕೋಟಿ ಭಕ್ತರು ಸ್ನಾನ ಮಾಡಿದ್ದರು. ಪ್ರತಿಪಕ್ಷಗಳು ಕಠ್ಮಂಡುವಿನ ವೀಡಿಯೋ ಬಳಸಿಕೊಂಡು ಮತ್ತು ಅದನ್ನು ಪ್ರಯಾಗ್‌ರಾಜ್‌ನಿಂದ ಎಂದು ಬಿಂಬಿಸುವ ಮೂಲಕ ತಪ್ಪು ಮಾಹಿತಿಯನ್ನು ಹರಡಿದ್ದರು. ಬೇರೆಡೆಯಿಂದ ಕೆಲವು ವೀಡಿಯೊಗಳನ್ನು ತೋರಿಸುವ ಮೂಲಕ ಪ್ರಯಾಗ್‌ರಾಜ್ ಅನ್ನು ನಿಂದಿಸುತ್ತಿದ್ದರು ಎಂದು ವಾಗ್ದಾಳಿ ನಡೆಸಿದರು.

    ಮೌನಿ ಅಮವಾಸ್ಯೆ ರಾತ್ರಿ ದು:ಖಕರ ಘಟನೆ ನಡೆಯಿತು. ಕಾಲ್ತುಳಿತದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಗಳ ಬಗ್ಗೆ ನಮಗೆ ಸಹಾನುಭೂತಿಯಿದೆ. ಪ್ರತಿ ಪಕ್ಷಗಳು ಈ ವಿಚಾರವನ್ನು ದೊಡ್ಡದು ಮಾಡಿದ್ದವು. ಆದರೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಮೂಲಕ ಅವರಿಗೆ ಉತ್ತರ ನೀಡಿದರು ಎಂದರು.

    ಪ್ರಯಾಗರಾಜ್‌ನಲ್ಲಿ ನಡೆಯುವ ಮಹಾ ಕುಂಭದಲ್ಲಿ ನೈರ್ಮಲ್ಯ ಮತ್ತು ಆರೋಗ್ಯ ಕಾರ್ಯಕರ್ತರಿಗೆ 10,000 ರೂ. ಬೋನಸ್ ನೀಡಲು ನಮ್ಮ ಸರ್ಕಾರ ನಿರ್ಧರಿಸಿದೆ. ಏಪ್ರಿಲ್‌ನಿಂದ ನೈರ್ಮಲ್ಯ ಕಾರ್ಮಿಕರಿಗೆ ಕನಿಷ್ಠ ವೇತನ 16,000 ರೂ.ಗಳನ್ನು ಒದಗಿಸಲಾಗುವುದು. ತಾತ್ಕಾಲಿಕ ಆರೋಗ್ಯ ಕಾರ್ಯಕರ್ತರಿಗೆ ನೇರ ಬ್ಯಾಂಕ್ ಮೂಲಕ ಹಣವನ್ನು ವರ್ಗಾವಣೆ ಮಾಡಲಾಗುವುದು. ಎಲ್ಲಾ ಆರೋಗ್ಯ ಕಾರ್ಯಕರ್ತರ ಆರೋಗ್ಯ ರಕ್ಷಣೆಗಾಗಿ ಆಯುಷ್ಮಾನ್ ಭಾರತ್ ಯೋಜನೆಗೆ ಲಿಂಕ್ ಮಾಡಲಾಗುವುದು ಎಂದು ಈ ವೇಳೆ ಘೋಷಣೆ ಮಾಡಿದರು.

  • Prayagraj Kumbh Mela | 1500 ಕೋಟಿ ರೂ. ಖರ್ಚು ಮಾಡಿದ್ದಕ್ಕೆ UP ಆರ್ಥಿಕತೆಗೆ 3 ಲಕ್ಷ ಕೋಟಿ ಲಾಭ: ಯೋಗಿ

    Prayagraj Kumbh Mela | 1500 ಕೋಟಿ ರೂ. ಖರ್ಚು ಮಾಡಿದ್ದಕ್ಕೆ UP ಆರ್ಥಿಕತೆಗೆ 3 ಲಕ್ಷ ಕೋಟಿ ಲಾಭ: ಯೋಗಿ

    ಲಕ್ನೋ: ಪ್ರಯಾಗ್‌ರಾಜ್‌ನಲ್ಲಿ (Prayagraj) ನಡೆದ ಮಹಾ ಕುಂಭಮೇಳದಿಂದ (Maha Kumbh Mela) ಉತ್ತರ ಪ್ರದೇಶದ ಆರ್ಥಿಕತೆಗೆ 3 ಲಕ್ಷ ಕೋಟಿ ರೂ. ಲಾಭವಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್‌ (Yogi Adityanath) ಹೇಳಿದ್ದಾರೆ.

    ಇಂದು ಲಕ್ನೋದಲ್ಲಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಸಮ್ಮುಖದಲ್ಲಿ 114 ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ನಡೆಯಿತು. ಇದನ್ನೂ ಓದಿ: ನಮ್ಮ ಮಕ್ಕಳು ಲವ್‌ ಜಿಹಾದ್‌ಗೆ ತುತ್ತಾಗಿದ್ದಾರೆ, ಸಹಾಯ ಮಾಡಿ: ಶ್ರೀರಾಮಸೇನೆಯ ಸಹಾಯ ಕೇಳಿದ ಪೊಲೀಸ್‌ ಅಧಿಕಾರಿಗಳು

    ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅದಿತ್ಯನಾಥ್‌, ನಮಗೆ ಪ್ರತಿ 6 ವರ್ಷಗಳಿಗೊಮ್ಮೆ ಕುಂಭ ಮತ್ತು ಪ್ರತಿ 12 ವರ್ಷಗಳಿಗೊಮ್ಮೆ ಮಹಾಕುಂಭವನ್ನು ಆಯೋಜಿಸುವ ಅವಕಾಶ ಸಿಗುತ್ತದೆ. ನಾವು ಮಾಡುವ ಎಲ್ಲಾ ಚಟುವಟಿಕೆಗಳು ನಮ್ಮ ಪ್ರವಾಸೋದ್ಯಮವನ್ನು ಹೆಚ್ಚಿಸುತ್ತವೆ ಎಂದರು.


    ಕುಂಭಮೇಳವನ್ನು ಆಯೋಜಿಸಲು ಒಟ್ಟು 1500 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದಕ್ಕೆ ಪ್ರತಿಯಾಗಿ ನಮ್ಮ ಆರ್ಥಿಕತೆ 3 ಲಕ್ಷ ಕೋಟಿ ರೂ.ಗಳ ಲಾಭ ಪಡೆದಿದೆ. 1,500 ಕೋಟಿ ರೂ. ಹಣವನ್ನು ಕುಂಭಮೇಳಕ್ಕೆ ಮಾತ್ರ ಖರ್ಚು ಮಾಡಿಲ್ಲ. ಪ್ರಯಾಗ್‌ರಾಜ್ ನಗರದ ನವೀಕರಣಕ್ಕೆ ಖರ್ಚು ಮಾಡಲಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದು ತಿಳಿಸಿದರು.

  • ನೀವು ಇರುವ ಗಂಗಾ ಮಾತೆಯ ಘಾಟ್ ಬಳಿಯೇ ಸ್ನಾನ ಮಾಡಿ, ವದಂತಿ ನಂಬಬೇಡಿ: ಯೋಗಿ ಅದಿತ್ಯನಾಥ್‌

    ನೀವು ಇರುವ ಗಂಗಾ ಮಾತೆಯ ಘಾಟ್ ಬಳಿಯೇ ಸ್ನಾನ ಮಾಡಿ, ವದಂತಿ ನಂಬಬೇಡಿ: ಯೋಗಿ ಅದಿತ್ಯನಾಥ್‌

    ಪ್ರಯಾಗ್‌ರಾಜ್‌: ಸಂಗಮದ ಎಲ್ಲಾ ಘಾಟ್‌ಗಳಲ್ಲಿ ಜನರು ಶಾಂತಿಯುತವಾಗಿ ಸ್ನಾನ ಮಾಡುತ್ತಿದ್ದಾರೆ. ಯಾವುದೇ ವದಂತಿಗೆ ಕಿವಿಗೊಡಬೇಡಿ ಎಂದು ಉತ್ತರ ಪ್ರದೇಶ (Uttar Pradesh) ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್‌ (Yogi Adityanath) ಜನರಲ್ಲಿ ಮನವಿ ಮಾಡಿದ್ದಾರೆ.

    ಮಹಾಕುಂಭ ಮೇಳದಲ್ಲಿ (MahaKumba Mela) ಕಾಲ್ತುಳಿತ (Stampede) ಸಂಭವಿಸಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಯೋಗಿ ನೀವು ಇರುವ ಗಂಗಾ ಮಾತೆಯ ಘಾಟ್ ಬಳಿಯೇ ಸ್ನಾನ ಮಾಡಿ ತ್ರಿವೇಣಿ ಸಂಗಮಕ್ಕೆ ಹೋಗಲು ಪ್ರಯತ್ನ ಮಾಡಬೇಡಿ ಎಂದು ವಿನಂತಿ ಮಾಡಿದ್ದಾರೆ.

    ನಾನು ಸಾಧು ಸಂತರ ಜೊತೆಗೆ ಮಾತನಾಡಿದ್ದೇವೆ. ಮೊದಲು ಭಕ್ತಾಧಿಗಳು ಪುಣ್ಯಸ್ನಾನ ಮಾಡಲಿ. ಆಮೇಲೆ ನಾವು ಸ್ನಾನ ಮಾಡುವುದಾಗಿ ಸಾಧು ಸಂತರು, ಅಖಾಡಗಳ ಮುಖ್ಯಸ್ಥರು ಹೇಳಿದ್ದಾರೆ. ಆರೋಗ್ಯ ಸಮಸ್ಯೆ ಇರುವವರು ದೂರು ನಡೆಯಬೇಡಿ. ಯಾವುದೇ ಘಾಟ್‌ನಲ್ಲಿ ಸ್ನಾನ ಮಾಡಿದರು ಅದು ಗಂಗಾ ನದಿಯ ನೀರು. ಮೌನಿ ಅಮವಾಸ್ಯೆ ಗಂಗಾ ಸ್ನಾನ ಪುಣ್ಯ ಪ್ರಾಪ್ತಿ ಮಾಡಲಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ, ಜನಸ್ತೋಮ ಇರುವ ಹಿನ್ನಲೆ ಜನರು ಸಂಯಮದಿಂದ ವರ್ತಿಸಿ ಎಂದು ಮನವಿ ಮಾಡಿದರು.

    ಆಡಳಿತದ ಸೂಚನೆಗಳನ್ನು ಅನುಸರಿಸಿ ಮತ್ತು ಅವರೊಂದಿಗೆ ಸಹಕರಿಸಬೇಕು. ಯಾವುದೇ ವದಂತಿಗಳಿಗೆ ಗಮನ ಕೊಡಬೇಡಿ ಎಂದು ಕೇಳಿಕೊಂಡಿದ್ದಾರೆ. ಇದನ್ನೂ ಓದಿ: GSLV ರಾಕೆಟ್‌ ಹಾರಿಸಿ ಶತಕ ಹೊಡೆದ ಇಸ್ರೋ! – ಏನಿದು ನಾವಿಕ್‌? ಲಾಭ ಏನು?

    ಇಂದು ಮೌನಿ ಅಮಾವಾಸ್ಯೆ (Mauni Amavasya) ಇರುವ ಹಿನ್ನೆಲೆಯಲ್ಲಿ ಭಾರೀ ಸಂಖ್ಯೆಯಲ್ಲಿ ಸ್ನಾನ ಮಾಡಲು ತ್ರೀವೇಣಿ ಸಂಗಮಕ್ಕೆ ಆಗಮಿಸಿದ್ದರು. ಈ ವೇಳೆ ಕೆಲವರು ಬ್ಯಾರಿಕೇಡ್‌ ಹಾರಿ ಪವಿತ್ರ ಸ್ನಾನಕ್ಕೆ ಮುನ್ನುಗಿದ್ದರಿಂದ ಪ್ರಯಾಗ್‌ರಾಜ್‌ನಲ್ಲಿ ಕಾಲ್ತುಳಿತ ಸಂಭವಿಸಿತ್ತು.

    ಕಾಲ್ತುಳಿತ ಸುದ್ದಿ ಪ್ರಕಟವಾಗುತ್ತಿದ್ದಂತೆ ಪ್ರಧಾನಿ ಮೋದಿ ಅವರು ಇಂದು ಮೂರು ಬಾರಿ ಕರೆ ಮಾಡಿ ಯೋಗಿ ಅದಿತ್ಯನಾಥ್‌ ಅವರಲ್ಲಿ ಮಾತನಾಡಿದ್ದಾರೆ.

    ಕುಂಭಮೇಳದಲ್ಲಿ ಕಾಲ್ತುಳಿತ ವರದಿಯಾದ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ಅಖಾಡಗಳು ಅಮೃತ ಸ್ನಾನವನ್ನು ತಾತ್ಕಾಲಿಕವಾಗಿ ರದ್ದು ಮಾಡಿದ್ದವು. ಈಗ ಪರಿಸ್ಥಿತಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು ಪವಿತ್ರ ಸ್ನಾನ ಮತ್ತೆ ಆರಂಭಗೊಂಡಿದೆ.

     

  • ರಝಾಕರ್‌ಗಳಿಂದಲೇ ಖರ್ಗೆ ತಾಯಿ, ಸಹೋದರಿಯ ಹತ್ಯೆಯಾದರೂ ಮುಸ್ಲಿಮರ ಮತಕ್ಕಾಗಿ ಬಾಯಿ ಬಿಡುತ್ತಿಲ್ಲ: ಯೋಗಿ ತಿರುಗೇಟು

    ರಝಾಕರ್‌ಗಳಿಂದಲೇ ಖರ್ಗೆ ತಾಯಿ, ಸಹೋದರಿಯ ಹತ್ಯೆಯಾದರೂ ಮುಸ್ಲಿಮರ ಮತಕ್ಕಾಗಿ ಬಾಯಿ ಬಿಡುತ್ತಿಲ್ಲ: ಯೋಗಿ ತಿರುಗೇಟು

    ಮುಂಬೈ: ರಝಾಕರ್‌ಗಳಿಂದಲೇ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕುಟುಂಬದವರ ಹತ್ಯೆ ನಡೆದಿದೆ. ಆದರೆ ಮುಸ್ಲಿಂ ವೋಟ್ ಬ್ಯಾಂಕ್‌ಗಾಗಿ (Muslim Vote Bank) ಖರ್ಗೆಯವರು ಏನೂ ಮಾತನಾಡುತ್ತಿಲ್ಲ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಅದಿತ್ಯನಾಥ್‌ (Yogi Adityanath ) ಅವರು ತಿರುಗೇಟು ನೀಡಿದ್ದಾರೆ.

    ಮಹಾರಾಷ್ಟ್ರ ವಿಧಾನಸಭಾ ಚುನಾವಣೆ (Maharashtra Election) ಹಿನ್ನೆಲೆಯಲ್ಲಿ ಇಂದು ಅಚಲಪುರದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನನ್ನ ಮೇಲೆ ಅನಗತ್ಯವಾಗಿ ಕೋಪ ಮಾಡಿಕೊಳ್ಳುತ್ತಿದ್ದಾರೆ. ನಾನು ಅವರ ವಯಸ್ಸನ್ನು ಗೌರವಿಸುತ್ತೇನೆ. ಆದರೆ ನನ್ನ ಮೇಲೆ ಕೋಪ ಮಾಡಿಕೊಳ್ಳುವ ಬದಲು ಅವರು ಹೈದರಾಬಾದ್‌ ನಿಜಾಮಾನ ಮೇಲೆ ಆಕ್ರೋಶ ಹೊರಹಾಕಬೇಕು ಎಂದು ವಾಗ್ದಾಳಿ ನಡೆಸಿದರು.

    ಖರ್ಗೆಯವರ ಗ್ರಾಮವಾದ ವಾರ್ವಟ್ಟಿ ಒಮ್ಮೆ ಹೈದರಾಬಾದ್‌ನ ನಿಜಾಮರ (Hyderabad Nizam) ಆಳ್ವಿಕೆಗೆ ಒಳಪಟ್ಟಿತ್ತು. ಆ ಸಮಯದಲ್ಲಿ ಬ್ರಿಟಿಷರು ರಾಷ್ಟ್ರವನ್ನು ವಿಭಜಿಸಲು ಮುಸ್ಲಿಂ ಲೀಗ್ (Muslim League) ಅನ್ನು ಪ್ರೋತ್ಸಾಹಿಸಿಸರು ಅದಕ್ಕೆ ಕಾಂಗ್ರೆಸ್ ನಾಯಕತ್ವವು ಶರಣಾಯಿತು. ಸ್ವಾತಂತ್ರ್ಯದ ನಂತರ ನಿಜಾಮರಿಗೆ ಅಧಿಕಾರ ಕಳೆದುಕೊಳ್ಳುವ ಭೀತಿ ಎದುರಾಯಿತು ನಂತರ ಹಿಂಸಾಚಾರ ಆರಂಭವಾಯಿತು. ನಿಜಾಮರು ನಿಮ್ಮ ಗ್ರಾಮವನ್ನು ಸುಟ್ಟುಹಾಕಿದರು. ಹಿಂದೂಗಳನ್ನು (Hindu) ಬರ್ಬರವಾಗಿ ಕೊಂದರು ಮತ್ತು ನಿಮ್ಮ ತಾಯಿ, ಸಹೋದರಿ, ನಿಮ್ಮ ಕುಟುಂಬ ಸದಸ್ಯರನ್ನು ಸುಟ್ಟುಹಾಕಿದರು. ಈ ವಿಚಾರ ಖರ್ಗೆ ಅವರಿಗೆ ಗೊತ್ತಿದ್ದರೂ ಬಹಿರಂಗವಾಗಿ ಹೇಳಿಕೆ ನೀಡುತ್ತಿಲ್ಲ. ಮುಸ್ಲಿಂ ವೋಟ್‌ಬ್ಯಾಂಕ್‌ಗಾಗಿ ಅವರು ಎಲ್ಲವನ್ನೂ ಮರೆಯುತ್ತಾರೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಅಭಿವೃದ್ಧಿಗೆ ಬ್ರೇಕ್ ಹಾಕುವಲ್ಲಿ ಕಾಂಗ್ರೆಸ್, ಮಿತ್ರಪಕ್ಷಗಳಿಂದ ಪಿಹೆಚ್‌ಡಿ: ಮೋದಿ ವಾಗ್ದಾಳಿ

    ಖರ್ಗೆ ಹೇಳಿದ್ದೇನು?
    ಮುಂಬೈನಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಖರ್ಗೆ, ನೈಜ ಯೋಗಿಗಳಾದವರು ವಿಭಜನೆಗೊಂಡರೆ ನಾಶವಾಗುತ್ತೇವೆ(ಬಟೆಂಗೇ ತೋ ಕಟೆಂಗೇ) ಎನ್ನುವ ಹೇಳಿಕೆಗಳನ್ನು ನೀಡುವುದಿಲ್ಲ. ಈ ರೀತಿಯ ಭಾಷೆಗಳನ್ನು ಬಳಸುವವರು ಉಗ್ರರು. ಬಿಜೆಪಿಯಲ್ಲಿ ಸಾಧುಗಳ ವೇಷ ಧರಿಸುವ ರಾಜಕಾರಣಿಗಳಿದ್ದಾರೆ. ಕಾವಿ ಧರಿಸುವ ಅವರ ತಲೆಯಲ್ಲಿ ಕೂದಲು ಇಲ್ಲ. ಸಮಾಜವನ್ನು ಒಂದುಗೂಡಿಸುವ ಹೇಳಿಕೆ ನೀಡುವ ಬದಲು ಸಮಾಜವನ್ನು ಒಡೆಯುವ ಹೇಳಿಕೆ ನೀಡುತ್ತಿದ್ದಾರೆ ಎಂದು ಯೋಗಿ ಆದಿತ್ಯನಾಥ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು.

     

  • ಕರ್ನಾಟಕಕ್ಕೆ ಒಬ್ಬ ಯೋಗಿ ಆದಿತ್ಯನಾಥ್ ಬೇಕೇ ಹೊರತು ಜಾತಿವಾದಿ ನಾಯಕರಲ್ಲ: ಪ್ರತಾಪ್‌ ಸಿಂಹ

    ಕರ್ನಾಟಕಕ್ಕೆ ಒಬ್ಬ ಯೋಗಿ ಆದಿತ್ಯನಾಥ್ ಬೇಕೇ ಹೊರತು ಜಾತಿವಾದಿ ನಾಯಕರಲ್ಲ: ಪ್ರತಾಪ್‌ ಸಿಂಹ

    – ಪ್ರವೀಣ್ ನೆಟ್ಟಾರು, ಹರ್ಷ ಹತ್ಯೆ ಆರೋಪಿಗಳನ್ನು ಎನ್‌ಕೌಂಟರ್ ಮಾಡದಕ್ಕೆ ಅಸಮಾಧಾನ

    ಮಂಗಳೂರು: ಕರ್ನಾಟಕಕ್ಕೆ (Karnataka) ಒಬ್ಬ ಯೋಗಿ ಆದಿತ್ಯನಾಥ್ (Yogi Adityanath) ಬೇಕೇ ಹೊರತು ಜಾತಿವಾದಿ ನಾಯಕರಲ್ಲ ಎಂದು ಮೈಸೂರಿನ ಮಾಜಿ ಸಂಸದ ಪ್ರತಾಪ್‌ ಸಿಂಹ (Pratap Simha) ಪಕ್ಷದ ನಾಯಕರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷದ್ (VHP) ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ‌ ಆಯೋಜಿಸಿದ್ದ 11ನೇ ವರ್ಷದ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ಪ್ರವೀಣ್ ನೆಟ್ಟಾರು (Praveen Nettaru) ಮತ್ತು ಹರ್ಷನ (Harsha) ಹತ್ಯೆ ಆರೋಪಿಗಳನ್ನು ಎನ್‌ಕೌಂಟರ್ ಮಾಡದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಪರೋಕ್ಷವಾಗಿ ಜಾತಿವಾದಿ ಬಿಜೆಪಿ ನಾಯಕರ (BJP Leaders) ಮತ್ತು ಅಂದು ಅಧಿಕಾರದಲ್ಲಿದ್ದ ಬಿಜೆಪಿ ಸರಕಾರದ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ತಿಂಗಳಿಗೆ 10 ಸಾವಿರ ಕೊಡ್ತೀನಿ, ಲಿವ್‌ಇನ್ ರಿಲೇಷನ್‌ಶಿಪ್‌ನಲ್ಲಿ ಇರ್ತೀಯಾ ಅಂತ ಕೇಳಿದ್ದ ರೇಣುಕಾ – ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

     

    ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ಹೋಗಿ ಬಾವುಟ, ಕರಪತ್ರ ಹಂಚಿ 2018 ರಲ್ಲಿ ಸರ್ಕಾರವನ್ನು ತಂದಿದ್ದೀರಿ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾಯಿತು. ಮರ್ಡರ್ ಮಾಡಿದವರು ಎಲ್ಲಿ ಇದ್ದಾರೆ ಎಂದು ಪೊಲೀಸರಿಗೆ ಗೊತ್ತಿತ್ತು. ಪೊಲೀಸರ ಕೈಯಲ್ಲಿ ಬಂದೂಕು ಇತ್ತು. ಟ್ರಿಗರ್ ಎಳೆಯಲು ಬೆರಳು ಇತ್ತು. ಆದರೆ ಟ್ರಿಗರ್ ಎಳೆಯಬೇಡಿ ಎಂದು ಬಿಜೆಪಿ ಸರಕಾರಕ್ಕೆ ಆರ್ಡರ್ ಮಾಡಿದವರು ಯಾರು? ಪೊಲೀಸ್ ಇಲಾಖೆಯು ರಾಜಕಾರಣಿಗಳು ಎಂಬ ದುಷ್ಟ ವ್ಯವಸ್ಥೆಯಡಿ ಸಿಲುಕಿದೆ ಎಂದು ಆರೋಪಿಸಿದರು.

    ಅಂದು ಬಿಜೆಪಿ ಸರಕಾರ ಆರ್ಡರ್ ಕೊಟ್ಟಿದ್ದರೆ, ದುರುಳರು ಇವತ್ತು ಸತ್ತಿರುತ್ತಿದ್ದರು. ಶಿವಮೊಗ್ಗ ಹರ್ಷನ ಮರ್ಡರ್ ಕೇಸ್‌ನಲ್ಲಿದ್ದ ಆರೋಪಿಗಳು ಒಂದು ಮನೆಯಲ್ಲಿದ್ದರು. ಅವರನ್ನು ಎನ್‌ಕೌಂಟರ್ ಮಾಡಿಸುವುದಕ್ಕೆ ತೊಂದರೆ ಏನಿತ್ತು ಎಂದು ಪ್ರಶ್ನಿಸಿದರು.

     

  • ತೋಳಗಳ ಹತ್ಯೆಗೆ ಕಂಡಲ್ಲಿ ಗುಂಡು – ಯೋಗಿ ಸರ್ಕಾರ ಆದೇಶ

    ತೋಳಗಳ ಹತ್ಯೆಗೆ ಕಂಡಲ್ಲಿ ಗುಂಡು – ಯೋಗಿ ಸರ್ಕಾರ ಆದೇಶ

    ಲಕ್ನೋ: ಉತ್ತರಪ್ರದೇಶದ (Uttar Pradesh ) ಬಹ್ರೇಚ್ ಜಿಲ್ಲೆಯನ್ನು ತತ್ತರಿಸುವಂತೆ ಮಾಡಿರುವ ನರಭಕ್ಷಕ ತೋಳಗಳ (Man-Eating Wolves) ವಿಚಾರದಲ್ಲಿ ಯೋಗಿ ಆದಿತ್ಯನಾಥ್‌ ಸರ್ಕಾರ (CM Yogi Adityanath Govt ) ಮಹತ್ವದ ನಿರ್ಣಯ ತೆಗೆದುಕೊಂಡಿದೆ. ತೋಳಗಳ ಹತ್ಯೆಗೆ ಕಂಡಲ್ಲಿ ಗುಂಡಿಕ್ಕಲು (Shoot-at-Sight) ಆದೇಶ ನೀಡಿದೆ.

    ಈ ಭಾಗದಲ್ಲಿ ಒಟ್ಟು ಆರು ತೋಳ ಸಂಚರಿಸುತ್ತಿದ್ದವು. ಆಪರೇಷನ್ ಭೇಡಿಯಾ ಭಾಗವಾಗಿ ನಾಲ್ಕು ತೋಳ ಸೆರೆಹಿಡಿಯಲಾಗಿತ್ತು. ಆದರೆ ಉಳಿದ ಎರಡು ತೋಳಗಳು ಸಿಗುತ್ತಿಲ್ಲ. ಸೋಮವಾರ ರಾತ್ರಿಯೂ ತೋಳದ ದಾಳಿಗೆ ಬಾಲಕಿ ಗಾಯಗೊಂಡಿದ್ದಾಳೆ. ಈವರೆಗೂ ತೋಳದ ದಾಳಿಗೆ 9 ಮಕ್ಕಳು ಸೇರಿ, 10 ಮಂದಿ ಬಲಿಯಾಗಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.  ಇದನ್ನೂ ಓದಿ: ಛತ್ತೀಸ್‍ಗಢದಲ್ಲಿ ಎನ್‍ಕೌಂಟರ್ – 9 ನಕ್ಸಲರನ್ನು ಬೇಟೆಯಾಡಿದ ಭದ್ರತಾ ಪಡೆ

     

    ತೋಳಗಳನ್ನು ಪತ್ತೆಹಚ್ಚಲು, ಅರಣ್ಯ ಇಲಾಖೆ ಮತ್ತು ಉತ್ತರ ಪ್ರದೇಶ ಪೊಲೀಸರು ‘ಆಪರೇಷನ್ ಭೇಡಿಯಾ’ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ಪ್ರದೇಶವನ್ನು ಏಳು ವಲಯಗಳಾಗಿ ವಿಂಗಡಿಸಲಾಗಿದ್ದು, ಅಧಿಕಾರಿಗಳು ನಿಗಾ ವಹಿಸಿದ್ದಾರೆ.

    ಪ್ರತಿ ಗ್ರಾಮ ಪಂಚಾಯಿತಿಗೂ ಪೊಲೀಸ್ ತಂಡವನ್ನು ನಿಯೋಜಿಸಲಾಗಿದೆ. ಖಂಡಿತವಾಗಿಯೂ ಶೀಘ್ರದಲ್ಲೇ ನಾವು ಕಾರ್ಯಾಚರಣೆಯಲ್ಲಿ ಯಶಸ್ವಿಯಾಗುತ್ತೇವೆ ಎಂದು ಗೋರಖ್‌ಪುರ ವಲಯದ ಎಡಿಜಿ ಕೆಎಸ್ ಪ್ರತಾಪ್ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ಬಿಕ್ಕಟ್ಟು – ಎರಡು ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಗೆ ಜಮೆಯಾಗದ ಸಂಬಳ

     

  • ಭ್ರಷ್ಟಾಚಾರದ ವಿರುದ್ಧ ಸಮರ – ಉ.ಪ್ರದೇಶದ 13 ಲಕ್ಷಕ್ಕೂ ಹೆಚ್ಚು ಸರ್ಕಾರಿ ಉದ್ಯೋಗಿಗಳಿಗೆ ಆಗಸ್ಟ್‌ ಸಂಬಳ ಸಿಗಲ್ಲ

    ಭ್ರಷ್ಟಾಚಾರದ ವಿರುದ್ಧ ಸಮರ – ಉ.ಪ್ರದೇಶದ 13 ಲಕ್ಷಕ್ಕೂ ಹೆಚ್ಚು ಸರ್ಕಾರಿ ಉದ್ಯೋಗಿಗಳಿಗೆ ಆಗಸ್ಟ್‌ ಸಂಬಳ ಸಿಗಲ್ಲ

    ಲಕ್ನೋ: ಉತ್ತರ ಪ್ರದೇಶ (Uttara Pradesh) ಸರ್ಕಾರದ 13 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಆಗಸ್ಟ್‌ ತಿಂಗಳ ವೇತನ (August Salary) ಪಾವತಿಯಾಗುವುದು ಅನುಮಾನ.

    ಭ್ರಷ್ಟಾಚಾರದ (Corruption) ವಿರುದ್ಧ ಸಮರ ಸಾರಿರುವ ಉತ್ತರ ಪ್ರದೇಶ ಸರ್ಕಾರ ಎಲ್ಲಾ ಸರ್ಕಾರಿ ಉದ್ಯೋಗಿಗಳು ತಮ್ಮ ಆಸ್ತಿ ವಿವರಗಳನ್ನು ಕಡ್ಡಾಯವಾಗಿ ಮಾನವ ಸಂಪದಾ ಪೋರ್ಟಲ್‌ನಲ್ಲಿ ಸಲ್ಲಿಸಬೇಕೆಂದು ಸೂಚಿಸಿದೆ.

    ಉದ್ಯೋಗಿಗಳು ಆಗಸ್ಟ್ 31 ರೊಳಗೆ ತಮ್ಮ ಆಸ್ತಿಯ ವಿವರವನ್ನು ಘೋಷಿಸಬೇಕು. ಒಂದು ವೇಳೆ ಘೋಷಿಸದೇ ತಿಂಗಳ ಸಂಬಳವನ್ನು ಪಾವತಿಸಲಾಗುವುದಿಲ್ಲ ಜೊತೆಗೆ ಬಡ್ತಿಯ ಮೇಲೂ ಇದು ಗಂಭೀರ ಪರಿಣಾಮ ಬೀರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.  ಇದನ್ನೂ ಓದಿ: ಅನಿಲ್‌ ಅಂಬಾನಿಗೆ ಸೆಬಿ ಶಾಕ್‌ – ಸೆಕ್ಯೂರಿಟೀಸ್‌ ಮಾರುಕಟ್ಟೆಯಿಂದ 5 ವರ್ಷ ಬ್ಯಾನ್‌, 25 ಕೋಟಿ ದಂಡ

    ಸರ್ಕಾರ ಈಗ ಹಿಂದೆ ಕಳೆದ ವರ್ಷದ ಡಿಸೆಂಬರ್‌ 31ಕ್ಕೆ ಗಡುವು ನೀಡಿತ್ತು. ನಂತರ ಹಲವು ಬಾರಿ ವಿಸ್ತರಣೆ ಮಾಡಿ ಈಗ ಆ.31 ರಂದು ಕೊನೆಯದಾಗಿ  ಡೆಡ್‌ಲೈನ್‌ ವಿಸ್ತರಿಸಿದೆ. ರಾಜ್ಯದಲ್ಲಿನ 17,88,429 ಸರ್ಕಾರಿ ನೌಕರರ ಪೈಕಿ 26% ಉದ್ಯೋಗಿಗಳು ಮಾತ್ರ ವೆಬ್‌ಸೈಟ್‌ನಲ್ಲಿ ವಿವರ ಸಲ್ಲಿಸಿದ್ದು ಇನ್ನೂ 13 ಲಕ್ಷಕ್ಕೂ ಹೆಚ್ಚು ನೌಕರರು ತಮ್ಮ ಆಸ್ತಿಯನ್ನು ಬಹಿರಂಗಪಡಿಸಬೇಕಿದೆ.

    ವರದಿಗಳ ಪ್ರಕಾರ ಹೊಸ ಗಡುವಿನ ಮೊದಲು ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸುವವರಿಗೆ ಮಾತ್ರ ಈ ತಿಂಗಳ ವೇತನವನ್ನು ಪಾವತಿಸಲಾಗುತ್ತದೆ. ಈ ನಿಯಮವು ಎಲ್ಲಾ ವರ್ಗದ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಅನ್ವಯಿಸುತ್ತದೆ . ಇದನ್ನೂ ಓದಿ: ಮೋದಿ ಉತ್ತರಾಧಿಕಾರಿ ಯಾರು? ಅಮಿತ್‌ ಶಾ, ಗಡ್ಕರಿ, ಯೋಗಿ.. ಯಾರಿಗೆ ಹೆಚ್ಚು ಜನರ ಒಲವು?

    ಈ ಕ್ರಮವು ಸರ್ಕಾರದೊಳಗೆ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಮತ್ತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ ನಾವು ಭ್ರಷ್ಟಾಚಾರದ ಬಗ್ಗೆ ಶೂನ್ಯ ಸಹಿಷ್ಣು ನೀತಿಯನ್ನು ಹೊಂದಿದ್ದೇವೆ ಎಂದು ಯುಪಿ ಸರ್ಕಾರದ ಸಚಿವ ಡ್ಯಾನಿಶ್ ಆಜಾದ್ ಅನ್ಸಾರಿ (Danish Azad Ansari) ಹೇಳಿದ್ದಾರೆ.

     

  • ಮೋದಿ ಉತ್ತರಾಧಿಕಾರಿ ಯಾರು? ಅಮಿತ್‌ ಶಾ, ಗಡ್ಕರಿ, ಯೋಗಿ.. ಯಾರಿಗೆ ಹೆಚ್ಚು ಜನರ ಒಲವು?

    ಮೋದಿ ಉತ್ತರಾಧಿಕಾರಿ ಯಾರು? ಅಮಿತ್‌ ಶಾ, ಗಡ್ಕರಿ, ಯೋಗಿ.. ಯಾರಿಗೆ ಹೆಚ್ಚು ಜನರ ಒಲವು?

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಉತ್ತರಾಧಿಕಾರಿ ಯಾರು? ಬಿಜೆಪಿ ಪಾಳೆಯದ ಈ ಪ್ರಶ್ನೆಗೆ ಸದ್ಯ ಕಮಲ ನಾಯಕರಲ್ಲಿ ಉತ್ತರ ಇಲ್ಲ. ಅಮಿತ್‌ ಶಾ, ಯೋಗಿ ಅದಿತ್ಯನಾಥ್‌ ಹೆಸರು ಮುಂಚೂಣಿಯಲ್ಲಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಈ ನಿಟ್ಟಿನಲ್ಲಿ ವಾಹಿನಿಯೊಂದು ಸಮೀಕ್ಷೆ ನಡೆಸಿ ಉತ್ತರ ಕಂಡುಕೊಳ್ಳುವ ಕೆಲಸ ಮಾಡಿದೆ.

    ಇಂಡಿಯಾ ಟುಡೇ ಟುಡೇ 543 ಲೋಕಸಭಾ ಕ್ಷೇತ್ರಗಳಲ್ಲಿ(Lok Sabha Constituency) 40,591 ಜನರನ್ನು ಸಂದರ್ಶಿಸಿ ಮೂಡ್ ಆಫ್ ನೇಷನ್ ಸಮೀಕ್ಷೆ ಕೈಗೊಂಡಿದೆ. ಸದ್ಯ ಮೋದಿ ಕ್ಯಾಬಿನೆಟ್‌ನಲ್ಲಿ ನಂಬರ್‌ 2 ಆಗಿರುವ ಗೃಹ ಸಚಿವ ಅಮಿತ್‌ ಶಾ (Amit Shah) ಅವರು ಉತ್ತರಾಧಿಕಾರಿಯಾಗಲು ಸೂಕ್ತ ವ್ಯಕ್ತಿ ಎಂದು ಹೆಚ್ಚಿನ ಜನ ಅಭಿಪ್ರಾಯಪಟ್ಟಿದ್ದಾರೆ.

    ಎರಡನೇ ಸ್ಥಾನದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಇದ್ದರೆ, ಮೂರನೇ ಸ್ಥಾನದಲ್ಲಿ ಭೂ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ (Nitin Gadkari) ಇದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅನುಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: ನಿಮ್ಮ ಜಗಳದಿಂದ ಸರ್ಕಾರ ಅಸ್ಥಿರಗೊಂಡರೆ ಅದಕ್ಕೂ ನಮಗೆ ಸಂಬಂಧವಿಲ್ಲ: ಜೋಷಿ ಕಿಡಿ

    ಯಾರಿಗೆ ಎಷ್ಟು ಒಲವು?
    ಅಮಿತ್‌ ಶಾ 25%, ಯೋಗಿ ಅದಿತ್ಯನಾಥ್‌ 19%, ಗಡ್ಕರಿ 13% ಜನ ಬೆಂಬಲಿಸಿದ್ದಾರೆ. ರಾಜನಾಥ್‌ ಸಿಂಗ್‌ ಮತ್ತು ಶಿವರಾಜ್‌ ಚೌಹಾಣ್‌ ಅವರಿಗೆ 5% ಜನ ಬೆಂಬಲ ನೀಡಿದ್ದಾರೆ.

    ಪ್ರಧಾನಿ ಮೋದಿ ಅವರಿಗೆ ಮುಂದಿನ ಸೆಪ್ಟೆಂಬರ್‌ನಲ್ಲೂ 75 ವರ್ಷ ತುಂಬುತ್ತದೆ. 75 ವರ್ಷ ಮೀರಿದವರು ಅಧಿಕಾರದಲ್ಲಿ ಇರಬಾರದು. ಅವರು ಕಿರಿಯರಿಗೆ ಅವಕಾಶ ನೀಡಬೇಕು. 75 ವರ್ಷ ಮೀರಿದವರಿಗೆ ಟಿಕೆಟ್‌ ನೀಡುವುದಿಲ್ಲ ಎಂಬ ಮಾನದಂಡವನ್ನು ಬಿಜೆಪಿ ಹಿಂದೆ ಹಾಕಿಕೊಂಡಿತ್ತು. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿಈ ಮಾನದಂಡ ವಿಫಲವಾದ ಬೆನ್ನಲ್ಲೇ ನಂತರದ ಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್‌ ಹಂಚಿಕೆಗೆ ಈ ನಿಯಮಗಳು ಅನ್ವಯವಾಗಲಿಲ್ಲ.

     

    ಮೋದಿ ಅವರು ಗುಜರಾತ್‌ನಲ್ಲಿ 2001 ರಿಂದ 2014 ರವರೆಗೆ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದರು. 2012ರ ವಿಧಾನಸಭಾ ಚುನಾವಣೆ ಮೋದಿ ಅವರಿಗೆ ನಿರ್ಣಯಕವಾಗಿತ್ತು. ಈ ಚುನಾವಣೆ ಗೆದ್ದ ಬಳಿಕ ಮೋದಿ ಅವರ ಹೆಸರು ರಾಷ್ಟ್ರ ರಾಜಕಾರಣಕ್ಕೆ ಬಂದಿತ್ತು.  ಇದನ್ನೂ ಓದಿ: Renukaswamy Case | ಪ್ರಮುಖ ಸಾಕ್ಷಿ, ಹಾಸ್ಯ ನಟ ಚಿಕ್ಕಣ್ಣಗೆ ಮತ್ತೆ ಸಂಕಷ್ಟ!

    ಯೋಗಿ ಅದಿತ್ಯನಾಥ್‌ ಅವರು ಸತತ ಎರಡು ಬಾರಿ ಉತ್ತರ ಪ್ರದೇಶ ಚುನಾವಣೆ ಗೆದ್ದಿದ್ದಾರೆ. 2027 ರಲ್ಲಿ ಉತ್ತರ ಪ್ರದೇಶದಲ್ಲಿ ಚುನಾವಣೆ ನಡೆಯಲಿದೆ. ಈ ಬಾರಿಯ ಲೋಕಸಭಾ ಚುನಾವಣೆ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. 2027ರ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದರೆ ಯೋಗಿ ಅದಿತ್ಯನಾಥ್‌ ಅವರು ವರ್ಚಸ್ಸು ವೃದ್ಧಿಯಾಗುವ ಸಾಧ್ಯತೆಯಿದೆ.

     

  • ಈಗ ಕ್ರಿಮಿನಲ್‌ಗಳು ಜೈಲಿಗೆ ಹೋಗಲು ಭಯ ಪಡುತ್ತಿದ್ದಾರೆ: ಯೋಗಿ ಅದಿತ್ಯನಾಥ್‌

    ಈಗ ಕ್ರಿಮಿನಲ್‌ಗಳು ಜೈಲಿಗೆ ಹೋಗಲು ಭಯ ಪಡುತ್ತಿದ್ದಾರೆ: ಯೋಗಿ ಅದಿತ್ಯನಾಥ್‌

    ಲಕ್ನೋ: ಉತ್ತರ ಪ್ರದೇಶದಲ್ಲಿ (Uttar Pradesh) ಈಗ ಕ್ರಿಮಿನಲ್‌ಗಳು (Criminals) ಜೈಲಿಗೆ ಹೋಗಲು ಭಯ ಪಡುತ್ತಿದ್ದಾರೆ ಎಂದು ಸಿಎಂ ಯೋಗಿ ಅದಿತ್ಯನಾಥ್‌ (Yogi Adityanath) ಹೇಳಿದ್ದಾರೆ.

    ಶಂಸಾಬಾದ್‌ನಲ್ಲಿ ಬಿಜೆಪಿ (BJP) ಅಭ್ಯರ್ಥಿ ಪರ ಮತ ಪ್ರಚಾರ ನಡೆಸಿ ಮಾತನಾಡಿದ ಅವರು, ನಾವು ಶೂನ್ಯ ಸಹಿಷ್ಣುತೆಯ ನೀತಿಯನ್ನು ಅನುಸರಿಸುತ್ತಿದ್ದೇವೆ. ಕ್ರಿಮಿನಲ್‌ ವ್ಯಕ್ತಿಗಳು ಅಪರಾಧವನ್ನು ನಿಲ್ಲಿಸಬೇಕು ಅಥವಾ ಅದಕ್ಕೆ ತಕ್ಕುದಾದ ಬೆಲೆಯನ್ನು ಪಾವತಿಸಲು ಸಿದ್ಧರಾಗಬೇಕು. ಈಗ ಬಹುತೇಕ ಕ್ರಿಮಿನಲ್‌ಗಳು ಜೈಲಿಗೆ ಹೋಗಲು ಭಯಪಡುತ್ತಿದ್ದಾರೆ ಎಂದು ಹೇಳಿದರು.

    ಕಳೆದ ವಾರ ಬಂದಾ ಜೈಲಿನಲ್ಲಿ ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿ (Mukhtar Ansari) ಸಾವನ್ನಪ್ಪಿದ ನಂತರ ಈ ಹೇಳಿಕೆ ಬಂದಿರುವುದು ವಿಶೇಷ. ಕುಟುಂಬಸ್ಥರು ವಿಷ ಪ್ರಾಶನ ಮಾಡಿ ಅನ್ಸಾರಿಯನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿದ್ದರೆ ಹೃದಯಾಘಾತದಿಂದ ಸಾವಾಗಿದೆ ಎಂದು ಮರಣೋತ್ತರ ಪರೀಕ್ಷೆ ವರದಿ ನೀಡಿದೆ. ಇದನ್ನೂ ಓದಿ: ವಿಷಪೂರಿತ ಹಾವಿಗಿಂತ ಬಿಜೆಪಿ ಅಪಾಯಕಾರಿ: ಮಮತಾ ಬ್ಯಾನರ್ಜಿ ವಾಗ್ದಾಳಿ

    2017ರ ಮೊದಲು ಪೊಲೀಸ್ ಠಾಣೆಗಳು ಸೂರ್ಯಾಸ್ತದ ನಂತರ ಬೀಗ ಹಾಕುತ್ತಿದ್ದವು. ಸಾಮಾನ್ಯ ಜನರು ಭಯಭೀತರಾಗಿದ್ದರು. ಉತ್ತರ ಪ್ರದೇಶದಲ್ಲಿ ಸರ್ಕಾರ ಬದಲಾಯಿತು ಆದರೆ ಅಪರಾಧಿಗಳು ಮೊದಲಿನಂತೆಯೇ ಇರುತ್ತದೆ ಎಂದು ಭಾವಿಸಿದ್ದರು. ನಾವು ನಮ್ಮ ರಾಜ್ಯದಲ್ಲಿ ಅಪರಾಧದ ಬಗ್ಗೆ ‘ಶೂನ್ಯ ಸಹಿಷ್ಣುತೆ’ ನೀತಿಯನ್ನು ತಂದಿದ್ದೇವೆ. ಕ್ರಿಮಿನಲ್‌ಗಳು ಸುಧಾರಣೆಯಾಗಬೇಕು ಅಥವಾ ಅವರು ಬೆಲೆ ತೆರುವ ಆಯ್ಕೆಯನ್ನು ನೀಡಲಾಗಿದೆ ಎಂದು ಯೋಗಿ ಹೇಳಿದರು.

    ಜಾಮೀನು (Bail) ಸಿಕ್ಕಿ ಪರಾರಿಯಾಗುತ್ತಿದ್ದವರು ಈಗ ತಾವಾಗಿಯೇ ಶರಣಾಗುತ್ತಿದ್ದಾರೆ. ಅಪರಾಧಿಗಳು ನಮ್ಮನ್ನು ಜೈಲಿಗೆ ಕಳುಹಿಸಬೇಡಿ ಎಂದು ಬೇಡಿಕೊಳ್ಳುತ್ತಿದ್ದಾರೆ. ಈಗ ಅವರಿಗೆ ಜೈಲಿಗೆ ಹೋಗುವ ಭಯವಿದೆ. ಇನ್ನು ಮುಂದೆ ಯಾವುದೇ ಅಪರಾಧ ಮಾಡುವುದಿಲ್ಲ. ನಮ್ಮ ಪ್ರಾಣ ಉಳಿದರೆ ನಾವು ಉತ್ಪನ್ನಗಳನ್ನು ಮಾರಾಟ ಮಾಡುತ್ತೇವೆ ಎಂಬ ಸಂದೇಶ ಇರುವ ಪ್ಲೇ ಕಾರ್ಡ್‌ ಹಿಡಿದು ಬರುತ್ತಿದ್ದಾರೆ ಎಂದರು. ಇದನ್ನೂ ಓದಿ: ಮಹಿಳೆಯರನ್ನು ಹೇಗೆ ಗೌರವಿಸಬೇಕೆಂಬುದನ್ನು ಮೋದಿ ನೋಡಿ ಕಲಿಯಿರಿ: ಹೇಮಾ ಮಾಲಿನಿ

    ಈ ಹಿಂದೆ ಉತ್ತರ ಪ್ರದೇಶದಲ್ಲಿ ಆಗಾಗ ಗಲಭೆ, ಕರ್ಫ್ಯೂ ನಡೆಯುತ್ತಿತ್ತು ಆದರೆ ರಾಜ್ಯದಲ್ಲಿ ಬಿಜೆಪಿ ಆಡಳಿತ ಬಂದ ಮೇಲೆ ಇದೆಲ್ಲವನ್ನೂ ಬದಲಾವಣೆ ಮಾಡಲಾಗಿದೆ. ಈಗ ಯಾವುದೇ ಗಲಭೆಗಳಿಲ್ಲ ಮತ್ತು ಕರ್ಫ್ಯೂ ಇಲ್ಲ. ಹಬ್ಬಗಳ ಉತ್ಸವ ನಡೆಯುತ್ತಿದೆ. ʼಉತ್ಸವ ಪ್ರದೇಶʼ ಇದು ಮೋದಿಯ ಗ್ಯಾರಂಟಿ ಎಂದು ಬಣ್ಣಿಸಿದರು.