Tag: ಯೋಗಿ ಆದಿತ್ಯ ನಾಥ್

  • ಯೋಗಿಗಳ ಕಾಲು ಹಿಡಿಯುವುದು ನನ್ನ ಅಭ್ಯಾಸ : ರಜನಿ ಖಡಕ್ ಉತ್ತರ

    ಯೋಗಿಗಳ ಕಾಲು ಹಿಡಿಯುವುದು ನನ್ನ ಅಭ್ಯಾಸ : ರಜನಿ ಖಡಕ್ ಉತ್ತರ

    ತ್ತರ ಭಾರತ ಪ್ರವಾಸದ ವೇಳೆ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದರು ಸೂಪರ್ ಸ್ಟಾರ್ ರಜನಿಕಾಂತ್ (Rajinikanth). ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ವಯಸ್ಸಿನ ಅಂತರವಿರು ವ್ಯಕ್ತಿಯ ಕಾಲಿಗೆ ಬಿದ್ದದ್ದು ಒಂದು ಕಡೆಯಾಗಿದ್ದರೆ, ತಮಿಳಿನ ಅಸ್ಮಿತೆಯನ್ನೇ ಯೋಗಿ ಪಾದಕ್ಕೆ ಇಟ್ಟಿದ್ದಾರೆ ಎಂದು ಕೆಲವರು ಕಾಮೆಂಟ್ ಮಾಡಿದ್ದರು. ಅದಕ್ಕೀಯ ರಜನಿ ಉತ್ತರಿಸಿದ್ದಾರೆ.

    ಪ್ರವಾಸ ಮುಗಿಸಿಕೊಂಡು ಚೆನ್ನೈಗೆ ವಾಪಸ್ಸಾಗಿರುವ ರಜನಿಕಾಂತ್, ಮಾಧ್ಯಮಗಳ ಜೊತೆ ಮಾತನಾಡಿ ‘ಯೋಗಿಗಳು, ತಪಸ್ವಿಗಳು, ಮಹಾತ್ಮರು ನನಗಿಂತ ಎಷ್ಟೇ ಚಿಕ್ಕವರಾಗಿದ್ದರೂ, ಅವರ ಕಾಲು ಹಿಡಿದುಕೊಂಡು ಆಶೀರ್ವಾದ ಪಡೆಯುವುದು ನನ್ನ ಅಭ್ಯಾಸ. ಅದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದು ರಜನಿ ಹೇಳಿದ್ದಾರೆ. ಈ ಮೂಲಕ ವಿವಾದಕ್ಕೆ (Controversy) ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

    ಜೈಲರ್ ಸಿನಿಮಾ ಯಶಸ್ಸಿನ ಬೆನ್ನಲ್ಲೇ ರಜನಿಕಾಂತ್ ಟೆಂಪಲ್ ರನ್ ಮಾಡುತ್ತಿದ್ದರು. ಸಿನಿಮಾ ರಿಲೀಸ್ ವೇಳೆ ಅವರು ಹಿಮಾಲಯಕ್ಕೆ ಹಾರಿದ್ದರು. ಅಲ್ಲಿ ಧ್ಯಾನಕ್ಕೆ ಶರಣಾಗಿದ್ದರು. ಅಲ್ಲಿಂದ ಹೊರಟು ಇದೀಗ ಉತ್ತರ ಪ್ರದೇಶದ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿದ್ದರು. ಅಯೋಧ್ಯಗೆ (Ayodhya) ತೆರಳಿ ಶ್ರೀರಾಮನ (Sriram) ದರ್ಶನ ಪಡೆದಿದ್ದಾರೆ. ನಿರ್ಮಾಣ ಹಂತದಲ್ಲಿರುವ ದೇವಸ್ಥಾನವನ್ನೂ ಅವರು ವೀಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ:ತಂದೆ ಸ್ಥಾನವನ್ನೂ ತುಂಬಿ ಮಗಳಿಗೆ ಹೆಸರಿಟ್ಟ ನಟಿ ದಿವ್ಯಾ ಶ್ರೀಧರ್

    ಈ ವೇಳೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಭೇಟಿಯಾಗಿದ್ದರು. ಅವರ ಕಾಲು ಹಿಡಿದು ನಮಸ್ಕರಿಸಿದ್ದರು.  ನಂತರ  (ಆಗಸ್ಟ್ 19) ಜೈಲರ್ (Jailer) ಚಿತ್ರವನ್ನ ಅವರೊಂದಿಗೆ ವೀಕ್ಷಿಸಿದ್ದರು. ಯೋಗಿಯ ಕಾಲು ಹಿಡಿದದ್ದು ಟೀಕೆಗೆ ಗುರಿಯಾಗಿತ್ತು. ಸಖತ್ ಟ್ರೋಲ್ ಕೂಡ ಆಗಿತ್ತು.

     

    ತಲೈವಾ-ಶಿವಣ್ಣ ಕಾಂಬೋ ‘ಜೈಲರ್’ (Jailer) ಸಿನಿಮಾ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ತಲೈವಾ ಸಿನಿಮಾವನ್ನ ಒಪ್ಪಿ ಜನ ಮೆಚ್ಚಿಕೊಂಡಿದ್ದಾರೆ. ಸಿನಿಮಾ ಕಥೆ, ಡೈಲಾಗ್, ಸಾಂಗ್ಸ್ ಎಲ್ಲವೂ ಫ್ಯಾನ್ಸ್‌ಗೆ ಮೋಡಿ ಮಾಡಿದೆ. ಆಗಸ್ಟ್ 10ಕ್ಕೆ ರಿಲೀಸ್ ಆಗಿದ್ದು, ಐನೂರು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಮೂಲಕ ಭರ್ಜರಿ ಕಲೆಕ್ಷನ್ ಮಾಡ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಕ್ಷಯ್ ಕುಮಾರ್ ನಟನೆಯ ‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರಕ್ಕೆ ತೆರಿಗೆ ವಿನಾಯ್ತಿ ಘೋಷಿಸಿದ ಯೋಗಿ ಆದಿತ್ಯನಾಥ್

    ಅಕ್ಷಯ್ ಕುಮಾರ್ ನಟನೆಯ ‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರಕ್ಕೆ ತೆರಿಗೆ ವಿನಾಯ್ತಿ ಘೋಷಿಸಿದ ಯೋಗಿ ಆದಿತ್ಯನಾಥ್

    ನಾಳೆ ವಿಶ್ವದಾದ್ಯಂತ ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾ ರಿಲೀಸ್ ಆಗುತ್ತಿದೆ. ಒಂದು ಕಡೆ ಮುಸ್ಲಿಂ ರಾಷ್ಟ್ರಗಳಲ್ಲಿ ಈ ಸಿನಿಮಾವನ್ನು ಪ್ರದರ್ಶನ ಮಾಡದಂತೆ ನಿಷೇಧ ಹೇರಲಾಗಿದೆ. ಭಾರತದಲ್ಲಿ ಈ ಸಿನಿಮಾಗೆ ಕೆಲ ಕಡೆ ತೆರಿಗೆ ವಿನಾಯತಿ ಘೋಷಿಸಲಾಗುತ್ತಿದೆ. ಇದನ್ನೂ ಓದಿ : ನಾಳೆ ಉಪೇಂದ್ರ ಹೊಸ ಸಿನಿಮಾಗೆ ಮುಹೂರ್ತ : ಅತಿಥಿಗಳಾದ ನಾಲ್ವರು ಸ್ಟಾರ್ ನಟರು

    ನಿನ್ನೆಯಷ್ಟೇ ಗಣ್ಯರಿಗಾಗಿ ಈ ಸಿನಿಮಾದ ವಿಶೇಷ ಪ್ರದರ್ಶನವನ್ನು ಆಯೋಜನೆ ಮಾಡಿದ್ದರು ನಟ ಅಕ್ಷಯ್ ಕುಮಾರ್. ಈ ಪ್ರದರ್ಶನದಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತಾ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಈ ಸಿನಿಮಾ ವೀಕ್ಷಿಸಿದ ನಂತರ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದಲ್ಲಿ ಚಿತ್ರಕ್ಕೆ ತೆರಿಗೆ ವಿನಾಯತಿ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ : ಖ್ಯಾತ ಗಾಯಕ ಕೆಕೆ ಅಂತ್ಯ ಸಂಸ್ಕಾರ ಮುಂಬೈನಲ್ಲಿ : ಅಂತಿಮ ನಮನ ಸಲ್ಲಿಸಿದ ಬಿಟೌನ್

    ಇದೊಂದು ಐತಿಹಾಸಿಕ ಸಿನಿಮಾವಾಗಿದ್ದು, ಎಲ್ಲರೂ ನೋಡಬೇಕಿದೆ. ಹಾಗಾಗಿ ಉತ್ತರ ಪ್ರದೇಶದಲ್ಲಿ ಈ ಚಿತ್ರಕ್ಕೆ ತೆರಿಗೆ ವಿನಾಯತಿ ಘೋಷಣೆ ಮಾಡುವುದಾಗಿ ಹೇಳಿದ್ದಾರೆ ಯೋಗಿ ಆದಿತ್ಯನಾಥ್. ಈ ಹಿಂದೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗಾಗಿಯೂ ಇವರು ತೆರಿಗೆ ವಿನಾಯತಿ ಘೋಷಿಸಿದ್ದರು. ಆನಂತರ ಅನೇಕ ರಾಜ್ಯಗಳು ದಿ ಕಾಶ್ಮೀರ್ ಫೈಲ್ಸ್ ಗೆ ತೆರಿಗೆ ವಿನಾಯತಿ ಘೋಷಿಸಿದ್ದವು.

  • ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ 1985ರ ಬಳಿಕ 50 ಸೀಟ್ ಕೂಡಾ ದಾಟಿಲ್ಲ!

    ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ 1985ರ ಬಳಿಕ 50 ಸೀಟ್ ಕೂಡಾ ದಾಟಿಲ್ಲ!

    ಲಕ್ನೋ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅಲೆಯ ಮುಂದೆ ಕಾಂಗ್ರೆಸ್ ಧೂಳಿಪಟವಾಗಿದೆ. ಸ್ಪಷ್ಟ ಬಹುಮತ ಪಡೆಯುವ ಮೂಲಕ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯಲು ಸಿದ್ಧವಾದರೆ ಇತ್ತ ಕಳಪೆ ಸಾಧನೆಯ ಮೂಲಕ ಕಾಂಗ್ರೆಸ್‍ಗೆ ಬಾರಿ ಮುಖಭಂಗವಾಗಿದೆ.

    ಈ ಬಾರಿ ಕಾಂಗ್ರೆಸ್ 2 ಸೀಟ್ ಗೆದ್ದು ಅತ್ಯಂತ ಕಳಪೆ ಸಾಧನೆ ಮಾಡಿದೆ. ಅಲ್ಲದೇ ಈ ಹಿಂದಿನ ಅಂಕಿಅಂಶಗಳನ್ನು ಗಮನಿಸಿದಾಗಲೂ ಕಾಂಗ್ರೆಸ್ ಕಳಪೆ ಸಾಧನೆ ಮುನ್ನಲೆಗೆ ಬರುತ್ತಿದೆ. 1985ರ ಬಳಿಕ ಕಾಂಗ್ರೆಸ್ ಉತ್ತರ ಪ್ರದೇಶದಲ್ಲಿ 50ಕ್ಕಿಂತ ಹೆಚ್ಚು ಸೀಟ್ ಗೆದ್ದಿರುವ ಇತಿಹಾಸವಿಲ್ಲ. ಈ ಬಾರಿ ಮತ್ತೆ ಒಂದಂಕಿ ಮೊತ್ತಕ್ಕೆ ಇಳಿದಿದೆ. ಇದನ್ನೂ ಓದಿ: ಸ್ಥಳೀಯ ನಾಯಕತ್ವ ಮುಖ್ಯ ಅಲ್ಲ, ಅಜೆಂಡಾ ಮುಖ್ಯ: ಕರ್ನಾಟಕದ ಮೇಲೆ ಪರಿಣಾಮ ಏನು?

    ವರ್ಷ- ಶಾಸಕರು
    2022 – 2
    2017 – 7
    2012 – 28
    2007 – 22
    2002- 25
    1996 – 33
    1991 – 46
    1985 – 269
    1980 – 309
    1977 – 47

    ಈ ಬಾರಿ ಎಕ್ಸಿಟ್ ಪೋಲ್‌ಗಳು ಹೇಳಿದಂತೆಯೇ ಯೋಗಿ-ಮೋದಿ ಜೋಡಿ ಉತ್ತರ ಪ್ರದೇಶದಲ್ಲಿ ಅದ್ವಿತೀಯ ಎನಿಸುವಷ್ಟರ ಮಟ್ಟಿಗೆ ಮೋಡಿ ಮಾಡಿದೆ. ಕಳೆದ ಬಾರಿಯಷ್ಟು ಸೀಟ್ ಗಳಿಸದೇ ಇದ್ದರೂ, ಭಾರೀ ಬಹುಮತ ಗಳಿಸಿದೆ. ಈ ಮೂಲಕ ಉತ್ತರ ಪ್ರದೇಶದ ಇತಿಹಾಸದಲ್ಲೇ 37 ವರ್ಷಗಳ ಬಳಿಕ ಮೊದಲ ಬಾರಿಗೆ, ಒಂದೇ ಪಕ್ಷ ಸತತ ಎರಡನೇ ಬಾರಿ ಅಧಿಕಾರವನ್ನು ಕೈವಶ ಮಾಡಿಕೊಂಡಿದೆ. ಇದನ್ನೂ ಓದಿ: ಜನರು ರಾಷ್ಟ್ರೀಯತೆ, ಅಭಿವೃದ್ಧಿ ಮತ್ತು ಉತ್ತಮ ಆಡಳಿತವನ್ನ ಗೆಲ್ಲಿಸಿದ್ದಾರೆ: ಯೋಗಿ

    ಮತ್ತೆ ಯೋಗಿ ಸರ್ಕಾರ್:
    ಒಟ್ಟು ಸ್ಥಾನಗಳು 403, ಬಹುಮತಕ್ಕೆ 202
    ಬಿಜೆಪಿ – 253
    ಅಪ್ನಾದಳ – 11
    ನಿಷಾದ್ – 06
    ಎಸ್‍ಪಿ – 114
    ಆರ್‍ಎಲ್‍ಡಿ – 09
    ಎಸ್‍ಬಿಎಸ್‍ಪಿ – 05
    ಬಿಎಸ್‍ಪಿ – 01
    ಕಾಂಗ್ರೆಸ್ – 02
    ಎಂಐಎಂ – 00
    ಇತರರು – 00

  • ರಾಮನ ದ್ರೋಹಿಗಳಿಂದ ಅಂತರ ಕಾಯ್ದುಕೊಳ್ಳಿ: ಯೋಗಿ ಆದಿತ್ಯನಾಥ್

    ರಾಮನ ದ್ರೋಹಿಗಳಿಂದ ಅಂತರ ಕಾಯ್ದುಕೊಳ್ಳಿ: ಯೋಗಿ ಆದಿತ್ಯನಾಥ್

    ಲಕ್ನೋ: ವಿರೋಧ ಪಕ್ಷಗಳು ಭಗವಾನ್ ರಾಮನ ವಿರುದ್ಧವಾಗಿವೆ, ಅಂತರ ಕಾಯ್ದುಕೊಳ್ಳಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ

    ರಾಮ ದ್ರೋಹಿಗಳು ಕೇವಲ ನಂಬಿಕೆಗಷ್ಟೇ ಘಾಸಿಯುಂಟುಮಾಡುತ್ತಿಲ್ಲ ಬದಲಾಗಿ ಸಾಮಾಜಿಕ ಸಂರಚನೆಗೆ ಧಕ್ಕೆಯುಂಟು ಮಾಡುವುದರ ಜೊತೆಗೆ ಅಭಿವೃದ್ಧಿಗೂ ಅಡ್ಡಿಪಡಿಸುತ್ತಿದ್ದಾರೆ, ಇವರ ಆಳ್ವಿಕೆಯಲ್ಲಿ ರಾಜ್ಯವನ್ನು ದಂಗೆಯ ಬೆಂಕಿಗೆ ಎಸೆದಿದ್ದರು ಎಂದೂ ವಿರೋಧ ಪಕ್ಷದ ವಿರುದ್ಧವಾಗಿ ಕಿಡಿ ಕಾರಿದ್ದಾರೆ.

    ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಆಯೋಜಿಸಿದ್ದ ವಿಶ್ವಕರ್ಮ ಸಮುದಾಯದವರ ಸಭೆಯಲ್ಲಿ ಮಾತನಾಡಿದ ಅವರು, ರಾಮನ ಹಿತೈಷಿಗಳಾಗದವರು ಎಂದಿಗೂ ನಿಮ್ಮ ಹಿತೈಷಿಗಳಾಗಲು ಸಾಧ್ಯವಿಲ್ಲ. ಭಯೋತ್ಪಾದಕರನ್ನು ರಕ್ಷಿಸುವ, ಗಲಭೆಕೋರರನ್ನು ಅಪ್ಪಿಕೊಳ್ಳುವ ರಾಮ ದ್ರೋಹಿಗಳಿಂದ ಅಂತರ ಕಾಯ್ದುಕೊಳ್ಳುವುದು ಈಗಿನ ಹಾಗೂ ಮುಂದಿನ ಪೀಳಿಗೆಯ ಉತ್ತಮ ಭವಿಷ್ಯಕ್ಕೆ ಅತ್ಯಗತ್ಯ ಎಂದೂ ಹೇಳಿದ್ದಾರೆ. ಇದನ್ನೂ ಓದಿ: ಸ್ವಿಮ್ಮಿಂಗ್‍ಪೂಲ್‍ನಲ್ಲಿ ಐರಾ, ಯಥರ್ವ್ ಮೋಜು ಮಸ್ತಿ