ರಾಮನಗರ: ಚನ್ನಪಟ್ಟಣದಲ್ಲಿ (Channapatna) ಕಾಂಗ್ರೆಸ್ ಗೆಲುವಿಗೆ ಎಲ್ಲಾ ಪಾರ್ಟಿಯವರೂ ಸಹಾಯ ಮಾಡಿದ್ದಾರೆ. ಬಿಜೆಪಿ ಅವರೂ ಸಪೋರ್ಟ್ ಮಾಡಿದ್ದಾರೆ. ಪತ್ಯಕ್ಷ, ಪರೋಕ್ಷವಾಗಿ ಕೆಲಸ ಮಾಡದೇ ಹೋಗಿದ್ರೆ ಇಷ್ಟು ಮತ ನಮಗೆ ಬರುತ್ತಾ ಇರಲಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅಚ್ಚರಿ ಹೇಳಿಕೆ ನೀಡಿದ್ದಾರೆ.
ಕನಕಪುರದಲ್ಲಿಂದು (Kanakapura) ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ, ಚನ್ನಪಟ್ಟಣದಲ್ಲಿ ಯೋಗೇಶ್ವರ್ (CP Yogeshwar) ಗೆಲುವಿನ ಬಗ್ಗೆ ಪ್ರತಿಕ್ರಿಯೆ ನೀಡಿದರು. ಪರೋಕ್ಷವಾಗಿ ಕಾಂಗ್ರೆಸ್ ಗೆಲುವಿಗೆ ಜೆಡಿಎಸ್, ಬಿಜೆಪಿನವರೂ ಸಪೋರ್ಟ್ ಮಾಡಿದ್ದಾರೆ. ಅಶ್ವಥ್ ನಾರಾಯಣ್ ಯೋಗೇಶ್ವರ್ ಗೆಲ್ತಾರೆ ಅಂತ ಗೊತ್ತಿತ್ತು ಅಂದ್ರು, ಇದರ ಅರ್ಥ ಏನು? ಎಂದು ಪ್ರಶ್ನೆ ಮಾಡಿದರು.
ನಮ್ಮ ಮೇಲೆ ಈಗ ಕ್ಷೇತ್ರದ ಜನರ ಸಾಲ ಇದೆ, ಕ್ಷೇತ್ರದ ಜನ ನಮ್ಮ ಪರವಾಗಿ ಇದ್ದಾರೆ. ಈ ಗೆಲುವಿನ ಕ್ರೆಡಿಟ್ ಅಪೂರ್ವ ಸಹೋದರಿಗೆ ಸಲ್ಲಬೇಕಾಗಿಲ್ಲ, ನಮ್ಮೆಲ್ಲ ನಾಯಕರು, ಮತದಾರಿಗೆ ಸಲ್ಲಬೇಕು. ಕ್ಷೇತ್ರ ಖಾಲಿ ಆದಾಗಿನಿಂದ ಸಾಕಷ್ಟು ಪ್ರವಾಸ ಮಾಡಿದ್ವಿ. ಕ್ಷೇತ್ರದ ಜನರಿಗೆ ಏನು ಮಾತು ಕೊಟ್ಟಿದ್ವೊ ಅದನ್ನ ಮೊದಲು ಅನುಷ್ಠಾನ ಮಾಡಬೇಕು. ನಾನು ಯೋಗೇಶ್ವರ್, ಇಬ್ಬರೂ ಕೂತು ಚರ್ಚೆ ಮಾಡಿ ಇದಕ್ಕೆಲ್ಲ ಚಾಲನೆ ಕೊಡ್ತೇವೆ ಎಂದು ಆಶ್ವಾಸನೆ ನೀಡಿದರು.
ನಮಗೆ ಎಲ್ಲಾ ಪಾರ್ಟಿಯವರೂ ಸಹಾಯ ಮಾಡಿದ್ದಾರೆ. ಕಾಂಗ್ರೆಸ್‌ಗೆ ಇದ್ದಿದ್ದು ಕೇವಲ 16,000 ಮತಗಳು ಈಗ ಜಾಸ್ತಿ ಆಗಿದೆ. ಬಿಜೆಪಿ ಅವರೂ ಸಪೋರ್ಟ್ ಮಾಡಿದ್ದಾರೆ. ಬಿಜೆಪಿಯವ್ರು ನಮ್ಮ ಜೊತೆ ಬಂದು ನಿಂತುಕೊಳ್ಳದೇ ಹೋಗಿದ್ರೆ, ಪತ್ಯಕ್ಷವಾಗಿ ಪರೋಕ್ಷವಾಗಿ ಕೆಲಸ ಮಾಡದೇ ಹೋಗಿದ್ರೆ ಇಷ್ಟು ಮತ ನಮಗೆ ಬರುತ್ತಾ ಇರಲಿಲ್ಲ. ನಾನು ಅವರೆಲ್ಲರನ್ನೂ ಅಭಿನಂದಿಸುತ್ತೇನೆ ಎಂದು ನುಡಿದರು.
– ಚನ್ನಪಟ್ಟಣದ ಮನೆ ಮಗನನ್ನ ಗೆಲ್ಲಿಸಿದ್ದಾರೆ ಎಂದ ಶೀಲಾ ಯೋಗೇಶ್ವರ್
ಮಂಡ್ಯ: ಪ್ರತಿಷ್ಠೆಯ ಕಣವಾಗಿದ್ದ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸಿ.ಪಿ ಯೋಗೇಶ್ವರ್ (CP Yogeshwar) ಪತ್ನಿ ಅವರಿಂದು ಮದ್ದೂರಿನ ಹೊಳೆ ಆಂಜನೇಯ ದೇಗುಲಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದಾರೆ.
ಚುನಾವಣೆ ಪೂರ್ವದಲ್ಲೇ ದೇಗುಲಕ್ಕೆ ಭೇಟಿ ನೀಡಿದ್ದ ಕುಟುಂಬ ಸಿಪಿವೈ ಗೆಲುವಿಗಾಗಿ ಹರಕೆ ಕಟ್ಟಿಕೊಂಡಿತ್ತು. ಅದರಂತೆ ದೇವಸ್ಥಾನಕ್ಕೆ ಬಂದು ಹೊಳೆ ಆಂಜನೇಯನಿಗೆ ಒಂದೂಕಾಲು ರೂಪಾಯಿ ಕಟ್ಟಿ ಹರಕೆ ತೀರಿಸಿದ್ದಾರೆ. ಬಳಿಕ ದೀಪ ಹಚ್ಚಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಸಿಪಿವೈ ಪತ್ನಿ ಶೀಲಾಗೆ (Sheela Yogeshwar) ಶಾಸಕ ಉದಯ್ ಪತ್ನಿ ವಿನೂತ್ ಸಾಥ್ ನೀಡಿದ್ದಾರೆ.
ನಾವು ಸಾಮಾನ್ಯ ಕುಟುಂಬದಿಂದ ಬಂದವ್ರು. ಪತಿಯ ಜನಸೇವೆ ಗುರುತಿಸಿ ಜನ ಕೈ ಹಿಡಿದಿದ್ದಾರೆ. ಎರಡು ಸರಿ ಸೋಲು ಅನುಭವಿಸಿದ್ವಿ ಈ ಬಾರಿ ಭರವಸೆ ಇತ್ತು. ಚನ್ನಪಟ್ಟಣದ ಜನ ತಮ್ಮ ಮನೆ ಮಗನನ್ನ ಗೆಲ್ಲಿಸಿದ್ದಾರೆ. ನಮ್ಮದೇ ಸರ್ಕಾರ ಇರೋದ್ರಿಂದ ಜನ ಸೇವೆ ಮಾಡಬಹುದು. ಸಾಕಷ್ಟು ಅಭಿವೃದ್ಧಿ ಬಗ್ಗೆ ಜನರ ನಿರೀಕ್ಷೆ ಇದೆ. ಇದನ್ನೂ ಓದಿ: ಯುಪಿಯ ಕುಂದರ್ಕಿಯಲ್ಲಿ 11 ಮುಸ್ಲಿಮರನ್ನು ಸೋಲಿಸಿದ ಏಕೈಕ ಹಿಂದೂ ಅಭ್ಯರ್ಥಿ
ಇಂದು ಆರ್.ಅಶೋಕ್ ಮಂಡ್ಯ ಪ್ರವಾಸ:
ವಿಪಕ್ಷ ನಾಯಕ ಆರ್. ಅಶೋಕ್ ಇಂದು (ನ.24) ಮಂಡ್ಯ ಕೈಗೊಂಡಿದ್ದಾರೆ. ಬೆಳಗ್ಗೆ 11 ಗಂಟೆ ವೇಳೆಗೆ ಶ್ರೀರಂಗಪಟ್ಟಣ ವಿಧಾನಸಭಾ ಕೇತ್ರದ ತಗ್ಗಹಳ್ಳಿಯಲ್ಲಿ ನಡೆಯಲಿರುವ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಾಜಿ ಡಿಸಿಎಂ ಅಶ್ವಥ್ ನಾರಾಯಣ್, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಹ ಪಾಲ್ಗೊಳ್ಳಲಿದ್ದಾರೆ.
ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ನೂರಕ್ಕು ಹೆಚ್ಚು ಬೇರೆ ಬೇರೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ | ವಿಜಯೋತ್ಸವದ ವೇಳೆ ಅಗ್ನಿ ಅವಘಡ – ನೂತನ ಶಾಸಕನಿಗೆ ಗಾಯ
ರಾಮನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಚನ್ನಪಟ್ಟಣ ಕ್ಷೇತ್ರದ ಮತಎಣಿಕೆ ನಡೆಯುತ್ತಿದ್ದರೆ ಹಾವೇರಿಯ ದೇವಗಿರಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶಿಗ್ಗಾಂವಿ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಡೂರುಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ.
– ಯೋಗೇಶ್ವರ್ ಹುಲಿ ಮಣಿಸ್ತಾರಾ? ಬಲಿಯಾಗ್ತಾರಾ? ನೋಡಬೇಕು ಎಂದ ಎಂಎಲ್‌ಸಿ
ಬೆಂಗಳೂರು: ಯೋಗೇಶ್ವರ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚನ್ನಪಟ್ಟಣದಲ್ಲಿ (Channapatna) ದುರ್ಬಲವೆಂದು ಡಿಕೆ ಶಿವಕುಮಾರ್ ಒಪ್ಪಿಕೊಂಡಂತಾಗಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ (CT Ravi) ಅವರು ಟಾಂಗ್ ಕೊಟ್ಟರು.
ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯೋಗೇಶ್ವರ್ ಅವರು ಕಾಂಗ್ರೆಸ್ಸಿಗೆ ಹೋದುದರಿಂದ ಒಂದಂತೂ ನಾವು ಊಹಿಸಬಹುದು. 136 ಶಾಸಕರಿದ್ದೂ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಅವರಂತಹ ಪ್ರಬಲ ನಾಯಕರನ್ನು ಹೊಂದಿದ ಕಾಂಗ್ರೆಸ್ ಪಕ್ಷ (Congress Party) ಚನ್ನಪಟ್ಟಣದಲ್ಲಿ ದೌರ್ಬಲ್ಯ ಒಪ್ಪಿಕೊಂಡಂತಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸರ್ವರ್ ಸಮಸ್ಯೆಯಿಂದ ಅಕ್ಕಿ ಪಡೆಯಲು ಪರದಾಟ – ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ
ನಿನ್ನೆ ಮೊನ್ನೆಯವರೆಗೂ ನಾನೇ ಕ್ಯಾಂಡಿಡೇಟ್ ಎಂದು ಡಿ.ಕೆ ಶಿವಕುಮಾರ್ ಹೇಳುತ್ತಿದ್ದರು. ಪೂರ್ವತಯಾರಿ ಮಾಡಿ ಓಡಾಡುತ್ತಿದ್ದರು. ಡಿ.ಕೆ ಸುರೇಶ್ ಅಲ್ಲಿ ಅಭ್ಯರ್ಥಿ ಎಂದು ಬಹಳ ಜನ ಅಂದುಕೊಂಡಿದ್ದರು. ಅಲ್ಲಿ ಯೋಗೇಶ್ವರ್‌ಗೆ ಟಿಕೆಟ್ ಕೊಟ್ಟು ಅಸಹಾಯಕತೆ ತೋರಿಸುತ್ತಾರೋ ಅಥವಾ ಯೋಗೇಶ್ವರ್ ಜೊತೆಗಿಟ್ಟುಕೊಂಡು ಡಿ.ಕೆ ಸುರೇಶ್ ಅಭ್ಯರ್ಥಿ ಆಗುತ್ತಾರೋ ನೋಡಬೇಕಿದೆ. ಆದರೆ, ಕಾಂಗ್ರೆಸ್ ತಾನು ಚನ್ನಪಟ್ಟಣದಲ್ಲಿ ದುರ್ಬಲ ಎಂದು ಒಪ್ಪಿಕೊಂಡಂತಾಗಿದೆ ಎಂದು ಸಿ.ಟಿ ರವಿ ತಿಳಿಸಿದರು.
ಹುಲಿ ಮಣಿಸುವರೇ? ಬಲಿ ಆಗುವರೇ?
ಯೋಗೇಶ್ವರ್ ಅವರು ಮಹತ್ವಾಕಾಂಕ್ಷೆ ಇಟ್ಟುಕೊಂಡ ರಾಜಕಾರಣಿ. ಸುದೀರ್ಘ ಅವಧಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ವಿರೋಧಿಸಿ ರಾಜಕಾರಣ ಮಾಡಿದವರು. ಡಿ.ಕೆ ಶಿವಕುಮಾರ್ ಮತ್ತು ಅವರ ನಡುವಿನ ಶತ್ರುತ್ವ ಇವತ್ತು ನಿನ್ನೆಯದಲ್ಲ. ಹುಲಿ ಬೋನಿಗೆ ಹೋಗಿದ್ದಾರೆ. ಒಂದೋ ಹುಲಿಯನ್ನು ಮಣಿಸಬೇಕು. ಇಲ್ಲವೇ ಹುಲಿಗೆ ಬಲಿ ಆಗಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಕುಡಚಿಯಲ್ಲಿ ರೈಲು ಹಳಿ ಪಕ್ಕವೇ ಕುಸಿದ ಭೂಮಿ – ಈಗ ಒಂದು ಹಳಿಯಲ್ಲಿ ಮಾತ್ರ ಸಂಚಾರ
ಇವತ್ತೇ ಎಲ್ಲವನ್ನೂ ಹೇಳಲು ಸಾಧ್ಯವಿಲ್ಲ. ನಮ್ಮ ರಾಜಕಾರಣ ಮತ್ತು ಯೋಗೇಶ್ವರ್ ರಾಜಕಾರಣದ ಚಿಂತನೆಯ ನಡುವೆ ಅಗಾಧವಾದ ಅಂತರವಿದೆ. ಯೋಗೇಶ್ವರ್ ಅವರು ವೈಯಕ್ತಿಕ ನೆಲೆಯಲ್ಲಿ ರಾಜಕಾರಣ ಮಾಡುತ್ತಾರೆ. ಸದಾಕಾಲ ರಾಜಕೀಯ ಕ್ಷೇತ್ರದ ಲಾಭ ನಷ್ಟದ ಲೆಕ್ಕ ಹಾಕುತ್ತಾರೆ. ನಮ್ಮದು ಸೈದ್ಧಾಂತಿಕ ಬದ್ಧತೆಯ ರಾಜಕಾರಣ ಎಂದು ವಿವರಿಸಿದರು. ಲಾಭ ನಷ್ಟದ ಲೆಕ್ಕಾಚಾರಕ್ಕೆ ಅವಕಾಶವೂ ಇಲ್ಲ. ಆ ಚಿಂತನೆಯೂ ನಮ್ಮಲ್ಲಿಲ್ಲ ಎಂದು ನುಡಿದರು.
ಯೋಗೇಶ್ವರ್ ರಾಜೀನಾಮೆ ಕೊಟ್ಟ ಮೇಲೆ ಸೋದರಿಕೆ ಸಂಬಂಧವೇನೂ ಇಲ್ಲ. ನಾವು ಎನ್‍ಡಿಎ ಆಗಿ ಚನ್ನಪಟ್ಟಣದಲ್ಲಿ ಹೋರಾಟ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ನಾವು ನಿರ್ಣಯಿಸಿ ಚರ್ಚೆ ಮಾಡುವುದಿಲ್ಲ. ಚರ್ಚಿಸಿ ನಿರ್ಣಯಕ್ಕೆ ಬರುತ್ತೇವೆ. ಒಂದೂವರೆ ಎರಡು ತಿಂಗಳ ಹಿಂದೆಯೇ ನಾವು ಚನ್ನಪಟ್ಟಣದ ಕುರಿತು ಕೇಂದ್ರ ಸಚಿವ ಕುಮಾರಸ್ವಾಮಿಯವರ ಜೊತೆ ಚರ್ಚಿಸಿದ್ದೇವೆ. ಚನ್ನಪಟ್ಟಣ ಕುಮಾರಸ್ವಾಮಿಯವರು ಪ್ರತಿನಿಧಿಸಿದ ಕ್ಷೇತ್ರ. ಏಕಪಕ್ಷೀಯ ನಿರ್ಣಯ ಹೇರುವುದು, ನಮ್ಮ ನಿರ್ಣಯ ಹೇರುವುದಾಗಲೀ ಮೈತ್ರಿ ಅನಿಸುವುದಿಲ್ಲ. ಇಬ್ಬರೂ ಸೇರಿ ನಿರ್ಣಯಿಸಬೇಕಾಗುತ್ತದೆ ಎಂದು ಇನ್ನೊಂದು ಪ್ರಶ್ನೆಗೆ ಸಿ.ಟಿ ರವಿ ಉತ್ತರಿಸಿದರು.
ರಾಜ್ಯದಲ್ಲಿ ಜನಹಿತ ಮರೆತ ಸರ್ಕಾರ:
ಬೆಂಗಳೂರಿನಲ್ಲಿ ಜನರ ಬದುಕು ಬೀದಿಗೆ ಬಿದ್ದಿದೆ. ಇವತ್ತು ಜನಹಿತ ಮರೆತ ಸರ್ಕಾರ ರಾಜ್ಯದಲ್ಲಿದೆ ಎಂದು ಟೀಕಿಸಿದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಿಗೆ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿಯನ್ನು ಸ್ವಾಗತ ಮಾಡುವುದು ಜನರ ಬದುಕಿಗೆ ಸ್ಪಂದಿಸುವುದಕ್ಕಿಂತ ಮುಖ್ಯವಾಗಿದೆ. ಜನರ ಸಮಸ್ಯೆಗಳಿಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಸ್ಪಂದಿಸುತ್ತಿಲ್ಲ ಎಂದು ಆಕ್ಷೇಪಿಸಿದರು. ಇಂಥ ಸರ್ಕಾರ ಯಾಕಿರಬೇಕು ಹೇಳಿ ಎಂದು ಪ್ರಶ್ನಿಸಿದರು. ಮಳೆಯಿಂದ ಕಟ್ಟಡ ಕುಸಿತ ಸೇರಿ ಮಳೆ ಕಾರಣಕ್ಕೆ 8ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸರ್ಕಾರಕ್ಕೆ ಮಾನವೀಯತೆ ಇದೆಯೇ? ಸ್ಪಂದನೆ ಏನು? ಎಂದು ಕೇಳಿದರಲ್ಲದೇ, ಭ್ರಷ್ಟಾಚಾರದಲ್ಲಿ ತೊಡಗಿದ ಬದುಕಿದ್ದೂ ಸತ್ತಂತಿರುವ ಸರ್ಕಾರ ಇಲ್ಲಿದೆ ಎಂದು ಟೀಕಿಸಿದರು.
ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣಾ (By Election) ಕಾವು ಜೋರಾಗಿದ್ದು ಅದರಲ್ಲೂ ಚನ್ನಪಟ್ಟಣ (Channapatna) ವಿಧಾನಸಭಾ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿದೆ.
ಕಾಂಗ್ರೆಸ್ (Congress) ಹಾಗೂ ದೋಸ್ತಿ ಪಡೆಗೆ ಪ್ರತಿಷ್ಠೆಯ ಕಣವಾಗಿರುವ ಕಾರಣ ಟಿಕೆಟ್ ಆಕಾಂಕ್ಷಿಯಾಗಿರುವ ಸಿಪಿ ಯೋಗೇಶ್ವರ್‌ಗೆ (CP Yogeshwar) ಜೆಡಿಎಸ್ ಮತ್ತೊಂದು ಕೊನೆಯ ಅವಕಾಶ ನೀಡಲು ಮುಂದಾಗಿದೆ ಎನ್ನಲಾಗುತ್ತಿದೆ.
ಸಿಪಿ ಯೋಗೇಶ್ವರ್ ಅವರನ್ನು ಜೆಡಿಎಸ್‌ನಿಂದಲೇ ಸ್ಪರ್ಧೆ ಮಾಡಲು ಮನವೊಲಿಸಲಾಗುತ್ತಿದೆ. ಬಿಜೆಪಿ ರಾಷ್ಟ್ರೀಯ ನಾಯಕರ ಮೂಲಕ ಯೋಗೇಶ್ವರ್ ಮನವೊಲಿಕೆಗೆ ಜೆಡಿಎಸ್ ಕಸರತ್ತು ನಡೆಸಿದೆ. ನಾಮಪತ್ರ ಸಲ್ಲಿಕೆ 3 ದಿನ ಇರುವಾಗಲೂ ಯೋಗೇಶ್ವರ್‌ಗೆ ಜೆಡಿಎಸ್‌ನಿಂದ ಸ್ಪರ್ಧಿಸಲು ಒತ್ತಡ ಹಾಕಲಾಗ್ತಿದೆ.
ಕಾಂಗ್ರೆಸ್ ಇನ್ನೂ ಅಭ್ಯರ್ಥಿಯ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಈ ಕಾರಣಕ್ಕೆ ದಿನದಿಂದ ದಿನಕ್ಕೆ ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರವಾಗಿ ಬದಲಾಗಿದೆ.
ದೋಸ್ತಿಗಳ ಮಧ್ಯೆ ಇರೋ ಆಯ್ಕೆಗಳೇನು?
ಜೆಡಿಎಸ್ ಚಿಹ್ನೆಯಿಂದ ಸಿಪಿವೈ ಸ್ಪರ್ಧೆ ಮಾಡಿಸುವುಂತೆ ಜೆ.ಪಿ ನಡ್ಡಾ, ಜೋಷಿ ಮೂಲಕ ಸಿಪಿವೈ ಮನವೊಲಿಕೆಗೆ ಯತ್ನ ನಡೆಯುತ್ತಿದೆ. ಜೆಡಿಎಸ್‌ನಿಂದ ಸ್ಪರ್ಧಿಸದೇ ಇದ್ದರೆ ಬಿಜೆಪಿಯಿಂದಲೇ ಟಿಕೆಟ್ ನೀಡಲು ಒಪ್ಪಿಗೆ ನೀಡುವುದು. ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ಮುಖಭಂಗ ಮಾಡಲು ಬಿಜೆಪಿಗೆ ಕ್ಷೇತ್ರ ಬಿಟ್ಟುಕೊಡುವುದು.
ಜೆಡಿಎಸ್‌ನಿಂದ ಇಳಿಯುತ್ತಾರಾ?
ಈ ಹಿಂದೆ ಜೆಡಿಎಸ್‌ನಿಂದ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ, ಈಗಾಗಲೇ ನನ್ನನ್ನು ಪಕ್ಷಾಂತರಿ ಎಂದು ಕರೆಯುತ್ತಿದ್ದಾರೆ. ಮತ್ತೆ ನಾನು ಬೇರೆ ಪಕ್ಷದ ಚಿಹ್ನೆಯ ಅಡಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ಯೋಗೇಶ್ವರ್ ನಿರ್ಣಯ ಏನಿರಬಹುದು ಎಂಬ ಕುತೂಹಲ ಹೆಚ್ಚಾಗಿದೆ.
ಯೋಗೇಶ್ವರ್ ಪ್ರಭಾವಿಯೇ?
1999ರಲ್ಲಿ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದ ಯೋಗೇಶ್ವರ್ 2004 ಮತ್ತು 2008 ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದಿದ್ದರು. 2013 ರಲ್ಲಿ ಸಮಾಜವಾದಿ ಪಕ್ಷದಿಂದ ಆಯ್ಕೆಯಾಗಿದ್ದ ಯೋಗೇಶ್ವರ್ 2018 ಮತ್ತು 2023 ರ ಚುನಾವಣೆಯಲ್ಲಿ ಕುಮಾರಸ್ವಾಮಿ ವಿರುದ್ಧ ಸೋತಿದ್ದರು. 2023 ರ ಚುನಾವಣೆಯಲ್ಲಿ ಕುಮಾರಸ್ವಾಮಿ 96,592 ಮತಗಳನ್ನು ಪಡೆದರೆ ಯೋಗೇಶ್ವರ್ 80,677 ಮತಗಳನ್ನು ಪಡೆದಿದ್ದರು.
2018ರ ಚುನಾವಣೆಯಲ್ಲಿ ಕುಮಾರಸ್ವಾಮಿ 21,53 ಮತಗಳ ಅಂತರದಿಂದ ಜಯಗಳಿಸಿದ್ದರೆ 2023 ರಲ್ಲಿ 15,915 ಮತಗಳ ಅಂತರದಿಂದ ಗೆದ್ದಿದ್ದರು.
ಬೆಂಗಳೂರು: ಚನ್ನಪಟ್ಟಣ ಉಪಸಮರದ (Channapatna BY Election) ಕಾವು ಜೋರಾಗಿದೆ. ಟಿಕೆಟ್ ಯಾವ ಪಕ್ಷದ ಪಾಲಾಗಬೇಕು ಎಂಬ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮತ್ತು ಕುಮಾರಸ್ವಾಮಿಯಲ್ಲಿ ಒಮ್ಮತ ಮೂಡದ ಕಾರಣ ನಿರೀಕ್ಷಿತ ಎನ್ನುವಂತಹ ಬೆಳವಣಿಗೆಗಳು ನಡೀತಿವೆ. ಬಿಜೆಪಿ-ಜೆಡಿಎಸ್ ಹಗ್ಗಜಗ್ಗಾಟದಲ್ಲಿ ಯೋಗೇಶ್ವರ್ (CP Yogeshwara) ಪಕ್ಷೇತರರಾಗಿ ಸ್ಪರ್ಧೆ ಮಾಡೋದಾಗಿ ಘೋಷಿಸಿದ್ದಾರೆ.
ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸೋಮವಾರ ಹುಬ್ಬಳ್ಳಿಗೆ ತೆರಳಿ ಸಭಾಪತಿಗಳಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಆದ್ರೆ, ಬಿಜೆಪಿಯನ್ನು ತೊರೆದಿಲ್ಲ. ಬಿಜೆಪಿ ಟಿಕೆಟ್‌ಗಾಗಿಯೇ (BJP Ticket) ಕೊನೆ ಕ್ಷಣದ ಪ್ರಯತ್ನ ನಡೆಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯನ್ನು ಫೋನ್ ಮೂಲಕ ಸಂಪರ್ಕಿಸಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಬಿಜೆಪಿಯಿಂದ ಟಿಕೆಟ್ ಕೊಡಿ ಎಂದು ಈಗಲೂ ಕೇಳ್ತಿದ್ದೇನೆ. ಕಾಂಗ್ರೆಸ್‌ಗೆ ಹೋಗಿ ಅಲ್ಲಿಂದ ಸ್ಪರ್ಧೆ ಮಾಡೋ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ನಾಳೆವರೆಗೂ ಕಾಯ್ತೇನೆ ಎಂದು ಯೋಗೇಶ್ವರ್ ಹೇಳಿದ್ದಾರೆ. ಇದನ್ನೂ ಓದಿ: By Election | ಚನ್ನಪಟ್ಟಣದಲ್ಲಿ ಡಿ.ಕೆ ಸುರೇಶ್ ಸ್ಪರ್ಧೆಗೆ ಒತ್ತಡ ಇದೆ – ಡಿ.ಕೆ ಶಿವಕುಮಾರ್
ಕುಮಾರಸ್ವಾಮಿ ಹೇಳಿದಂತೆ ನಾನು ಕಾಂಗ್ರೆಸ್ಸಿನ ಯಾರನ್ನು ಸಂಪರ್ಕ ಮಾಡಿಲ್ಲ. ಆದ್ರೆ ಮಂಗಳವಾರ ಏನಾಗುತ್ತೆ ಗೊತ್ತಿಲ್ಲ ಅಂತಾನೂ ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ. ಈ ಮೂಲಕ ಎಲ್ಲಾ ಆಯ್ಕೆಗಳನ್ನು ಮಕ್ತವಾಗಿರಿಸಿಕೊಂಡಿದ್ದಾರೆ. ಅತ್ತ, ಸಿಎಂ, ಡಿಸಿಎಂ ಸೇರಿ ಕಾಂಗ್ರೆಸ್‌ನ ಹಲವು ನಾಯಕರು ಕೂಡ ಯೋಗೇಶ್ವರ್ ಜೊತೆ ಮಾತಾಡಿಲ್ಲ ಎಂದಿದ್ದಾರೆ. ಡಿಕೆ ಶಿವಕುಮಾರ್ ಅವ್ರಂತೂ, ಸಿಪಿವೈ ರಾಜೀನಾಮೆ ವಿಚಾರ ಗೊತ್ತೇ ಇಲ್ಲ ಎಂಬಂತೆ ವರ್ತಿಸಿದ್ದಾರೆ. ಆದರೆ, ಯಾವುದಕ್ಕೂ ಇರಲಿ ಪಕ್ಷ ಸೇರ್ಪಡೆಗೆ ವೇದಿಕೆ ಸಿದ್ದಪಡಿಸಿ ಎಂದು ಕೆಪಿಸಿಸಿ ಕಚೇರಿ ಸಿಬ್ಬಂದಿಗೆ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಆದ್ರೆ, ಯೋಗೇಶ್ವರ್ ದುಡುಕಲ್ಲ ಎಂಬ ವಿಶ್ವಾಸವನ್ನು ಅಶೋಕ್ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪೊಲೀಸರು ಮುಕ್ತ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ: ಸಿಎಂ
ಯೋಗೇಶ್ವರ್ ರೆಬೆಲ್ ನಡೆಗೆ ಕಾರಣವೇನು?
* ಯೋಗೇಶ್ವರ್ ವಿಚಾರದಲ್ಲಿ ಆರಂಭದಲ್ಲಿ ಹೆಚ್‌ಡಿಕೆ ಅಂತರ
* ಜೆಡಿಎಸ್ ಚಿನ್ಹೆಯಿಂದ ಯೋಗೇಶ್ವರ್ ಸ್ಪರ್ಧಿಸಬೇಕು ಎಂಬ ಷರತ್ತು
* ಜೆಡಿಎಸ್ ಚಿನ್ಹೆಯಿಂದ ಚನ್ನಪಟ್ಟಣದಲ್ಲಿ ಸ್ಪರ್ಧಿಸಲು ಜೆಡಿಎಸ್ ಘಟಕದಿಂದ ವಿರೋಧ
* ಜೆಡಿಎಸ್ ಚಿನ್ಹೆಯಡಿ ಸ್ಪರ್ಧಿಸಲು ಯೋಗೇಶ್ವರ್ ಹಿಂದೇಟು
* ಎನ್‌ಡಿಎ ಟಿಕೆಟ್ ಖಚಿತವಾಗದ ಕಾರಣ ರೆಬೆಲ್ ಆದ ಯೋಗೇಶ್ವರ್
ಯೋಗೇಶ್ವರ್ ನಡೆ ದೋಸ್ತಿಗಳಿಗೆ ತಲೆ ಬಿಸಿ ತಂದಿದೆ. ಟಿಕೆಟ್ ಗೊಂದಲಕ್ಕೆ ರಾಜ್ಯ ಬಿಜೆಪಿಯ ಕೆಲ ನಾಯಕರು ಕಾರಣ ಎಂದು ಕೇಂದ್ರ ಮಂತ್ರಿ ಕುಮಾರಸ್ವಾಮಿ ಕಳೆದ ರಾತ್ರಿಯೇ ಅಸಮಾಧಾನ ವ್ಯಕ್ತಪಡಿಸಿದ್ರು. ಯೋಗೇಶ್ವರ್ ಸ್ಪರ್ಧೆ ವಿಚಾರವಾಗಿ ರಾಜ್ಯ ಬಿಜೆಪಿ ನಾಯಕರಲ್ಲೂ ಭಿನ್ನ ಅಭಿಪ್ರಾಯಗಳು ಇರೋದು ಗೋಚರವಾಗಿತ್ತು. ಕೆಲವರು ಯೋಗೇಶ್ವರ್‌ಗೆ ಟಿಕೆಟ್ ಸಿಗ್ಬೇಕು ಎಂದು ಆಗ್ರಹಿಸಿದ್ರೆ, ಬಿಎಸ್ ಯಡಿಯೂರಪ್ಪ ಸೇರಿ ಇನ್ನೂ ಕೆಲವರು ಇದು ಜೆಡಿಎಸ್ ಕ್ಷೇತ್ರ ಎಂಬರ್ಥದ ಹೇಳಿಕೆ ನೀಡಿದ್ರು. ಇದು ಯೋಗೇಶ್ವರ್ ಅಸಮಾಧಾನಕ್ಕೂ ಕಾರಣವಾಗಿತ್ತು. ಇದನ್ನು ಅಶೋಕ್ ಆಕ್ಷೇಪಿಸಿದ್ರು. ಅಂತಿಮವಾಗಿ ಯೋಗೇಶ್ವರ್ ರೆಬೆಲ್ ಹಾದಿ ತುಳಿದಿರೋದ್ರಿಂದ ಜೆಡಿಎಸ್ ನಡೆ ಕುತೂಹಲ ಕೆರಳಿಸಿದೆ.
ಹುಬ್ಬಳ್ಳಿ/ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ (Channapatna By Election) ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿರುವ ಸಿ.ಪಿ ಯೋಗೇಶ್ವರ್ ಅವರಿಂದು ಬಿಜೆಪಿ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಯಲು ಸಿಪಿವೈ ನಿರ್ಧರಿಸಿದ್ದರು. ಕೊನೇ ಕ್ಷಣದವರೆಗೂ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಸಿಪಿವೈಗೆ ಬಿಜೆಪಿ ಕಡೆಯಿಂದ ಯಾವುದೇ ಶುಭ ಸುದ್ದಿ ಸಿಗದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ. ಹಾಗಾಗಿ ವಿಧಾನ ಪರಿಷತ್ ಸದಸ್ಯತ್ವಕ್ಕೆ (MLC) ರಾಜೀನಾಮೆ ನೀಡಿದ್ದಾರೆ.
ಈ ನಡುವೆ ಫುಲ್ ಅಲರ್ಟ್ ಆಗಿರುವ ಕಾಂಗ್ರೆಸ್, ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನ ನಡೆಸಿದೆ ಎಂದು ಹೇಳಲಾಗುತ್ತಿದೆ. ಯೋಗೇಶ್ವರ್ ಅವರು ಕಾಂಗ್ರೆಸ್ ಸೇರ್ಪಡೆಯಾದರೆ, ಕಾಂಗ್ರೆಸ್‌ನಿಂದಲೇ ಚನ್ನಪಟ್ಟಣ ಅಖಾಡಕ್ಕೆ ಇಳಿಯುವ ಬಗ್ಗೆಯೂ ಮಾತುಕತೆ ನಡೆಯುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹಾಸನಾಂಬ ಉತ್ಸವಕ್ಕೆ ಕ್ಷಣಗಣನೆ – ಜಿಲ್ಲಾ ಖಜಾನೆಯಿಂದ ದೇವಾಲಯಕ್ಕೆ ಒಡವೆಗಳ ರವಾನೆ
ರಾಜೀನಾಮೆ ನೀಡುವುದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಿ.ಪಿ ಯೋಗೇಶ್ವರ್, ಜೆಡಿಎಸ್ ಚಿನ್ಹೆಯಿಂದ ಸ್ಪರ್ಧೆ ಕುರಿತು ನೀಡಿದ್ದ ಆಫರ್ ಅನ್ನು ನಾನು ತಿರಸ್ಕರಿಸಿದ್ದೇನೆ. ನಾನು ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ ಇದೆ. ಇನ್ನೂ ಎರಡು ದಿನ ಕಾದು ನೋಡುವ ತಂತ್ರವನ್ನು ಉಪಯೋಗಿಸುತ್ತೇನೆ. ನಾನು ಈ ಕ್ಷಣಕ್ಕೂ ಬಿಜೆಪಿಯಿಂದ ಸ್ಪರ್ಧೆ ಮಾಡಬೇಕು ಎಂದುಕೊಂಡಿದ್ದೇನೆ. ಇಂದು (ಅ.21) ಬೆಳಗ್ಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎಂದು ನಮ್ಮ ಜಿಲ್ಲಾಧ್ಯಕ್ಷರು ಎಂದು ಹೇಳಿದ್ದರು. ಹಾಗಂದ್ಮೇಲೆ ಇನ್ನೇನಿದೆ, ಆಯ್ತು ಒಳ್ಳೇದಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಹೇಳಿದ್ದರು.
ಬೆಂಗಳೂರು: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ.ಪಿ ಯೋಗೇಶ್ವರ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ.
ಕೊನೆ ಕ್ಷಣದವರೆಗೂ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಸಿಪಿವೈಗೆ ಬಿಜೆಪಿ ಕಡೆಯಿಂದ ಯಾವುದೇ ಶುಭ ಸುದ್ದಿ ಸಿಗದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ.
ಇಂದು ಬೆಳಗ್ಗೆ ಮಾತನಾಡಿದ್ದ ಯೋಗೇಶ್ವರ್, ಜೆಡಿಎಸ್ ಚಿನ್ಹೆಯಿಂದ ಸ್ಪರ್ಧೆ ಕುರಿತು ನೀಡಿದ್ದ ಆಫರ್ ಅನ್ನು ನಾನು ತಿರಸ್ಕರಿಸಿದ್ದೇನೆ. ನಾನು ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ ಇದೆ. ಇನ್ನೂ ಎರಡು ದಿನ ಕಾದು ನೋಡುವ ತಂತ್ರವನ್ನು ಉಪಯೋಗಿಸುತ್ತೇನೆ. ನಾನು ಈ ಕ್ಷಣಕ್ಕೂ ಬಿಜೆಪಿಯಿಂದ ಸ್ಪರ್ಧೆ ಮಾಡಬೇಕು ಎಂದುಕೊಂಡಿದ್ದೇನೆ. ಇಂದು (ಅ.21) ಬೆಳಗ್ಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎಂದು ನಮ್ಮ ಜಿಲ್ಲಾಧ್ಯಕ್ಷರು ಎಂದು ಹೇಳಿದ್ದರು. ಹಾಗಂದ್ಮೇಲೆ ಇನ್ನೇನಿದೆ, ಆಯ್ತು ಒಳ್ಳೇದಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಹೇಳಿದ್ದರು.
ಬೆಂಗಳೂರು: ಚನ್ನಪಟ್ಟಣ (Channapatna) ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಯೋಗೇಶ್ವರ್ (CP Yogeshwar) ಹೇಳಿಕೆ ನೀಡಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಉಪಚುನಾವಣೆಗೆ (By Election)ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ, ಪಕ್ಷೇತರನಾಗಿ ಮತ್ತೆ ಗೆದ್ದು ಎನ್‌ಡಿಎ ಭಾಗವಾಗುತ್ತೇನೆ. ಏನೇನು ರಾಜಕೀಯ ತಿರುವು ಪಡೆದುಕೊಳ್ಳುತ್ತದೆ ಎನ್ನುವುದನ್ನು ಮುಂದೆ ನೋಡೋಣ ಎಂದು ತಿಳಿಸಿದರು. ಇದನ್ನೂ ಓದಿ: ಬಿಎಸ್‌ವೈ ಬಂಧನಕ್ಕೆ ತಡೆ – ಹೈಕೋರ್ಟ್ ಆದೇಶ ತೆರವಿಗೆ ಸರ್ಕಾರ ಪ್ಲ್ಯಾನ್
ನನ್ನ ತಾಲೂಕಿನ ಜನ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಯಾವುದೇ ಚಿನ್ಹೆಯ ಅಡಿ ನಿಂತರೂ ಗೆಲ್ಲಿಸುತ್ತಾರೆ. ಕ್ಷೇತ್ರದ ಸಮಾನ ಮನಸ್ಕ ವೇದಿಕೆಯಿಂದಲೂ ಸ್ಪರ್ಧೆಗೆ ಒತ್ತಾಯ ಇದೆ ಎಂದರು.
ನಾನು ಕಾಂಗ್ರೆಸ್‌ಗೆ ಹೋಗುವ ಬಗ್ಗೆ ಆಲೋಚನೆ ಮಾಡಿಲ್ಲ. ಯಾರೂ ನನ್ನನ್ನು ಮಾತನಾಡಿಸಲಿಲ್ಲ. ಡಿಕೆಶಿ ಅವರು ಏನೇನೋ ಮಾತನಾಡುತ್ತಾರೆ. ಅದು ಅವರ ರಾಜಕೀಯ ತಂತ್ರಗಾರಿಕೆ. ಅವರಿಗೆ ಯಾವಾಗ ಏನು ಮಾತಾಡಬೇಕು ಅಂತ ಗೊತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಸುಳ್ಳು ವರದಿ ಪ್ರಕಟಿಸಿದ್ರೆ ಮಾಧ್ಯಮಗಳನ್ನು ಮುಚ್ಚುತ್ತೇವೆ: ಬಾಂಗ್ಲಾ ಸರ್ಕಾರ ಬೆದರಿಕೆ
ನನಗೂ ಕುಮಾರಸ್ವಾಮಿಯವರಿಗೂ ಭಿನ್ನಾಭಿಪ್ರಾಯ ಏನಿದೆ? ನಮ್ಮ ಮಧ್ಯೆ ಬಿರುಕು ಮೂಡಿಸುವ ಪ್ರಯತ್ನವನ್ನು ಡಿಕೆಶಿ ಮಾಡ್ತಿದ್ದಾರೆ. ಕುಮಾರಸ್ವಾಮಿ ಅವರು ಮನಸ್ಸು ಬದಲಾಯಿಸಬಹುದು. ಕುಮಾರಸ್ವಾಮಿ ಒಪ್ಪದಿದ್ದರೆ ಮುಂದಿನ ದಾರಿ ನೋಡೋಣ ಎಂದು ತಿಳಿಸಿದರು.
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಮಂಡ್ಯ (Mandya) ಸಂಸದರಾಗಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಆಯ್ಕೆಯಾದ ಬೆನ್ನಲ್ಲೇ ಚನ್ನಪಟ್ಟಣ ಉಪ ಚುನಾವಣೆಗೆ (Channapatna By Election) ಮೈತ್ರಿ ಅಭ್ಯರ್ಥಿ ಯಾರಾಗುತ್ತಾರೆ ಎಂಬ ಕುತೂಹಲ ಈಗ ಮನೆ ಮಾಡಿದೆ.
ವಿಧಾನಸಭಾ ಚುನಾವಣೆಯಲ್ಲಿ (Vidahna Sabha Election) ಹೆಚ್‌ಡಿ ಕುಮಾರಸ್ವಾಮಿ ಚನ್ನಪಟ್ಟಣದಿಂದ ಸ್ಪರ್ಧಿಸಿ ಗೆದ್ದಿದ್ದರು. ಈಗ ಲೋಕಸಭೆಗೆ ಆಯ್ಕೆಯಾಗಿರುವ ಕಾರಣ ಚನ್ನಪಟ್ಟಣ ಕ್ಷೇತ್ರಕ್ಕೆ ಕುಮಾರಸ್ವಾಮಿ ರಾಜೀನಾಮೆ ನೀಡಬೇಕಾಗುತ್ತದೆ.
ಲೋಕಸಭೆ ಮತ್ತು ಪರಿಷತ್ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ (BJP-JDS) ಮೈತ್ರಿ ಯಶಸ್ವಿಯಾದ ಬೆನ್ನಲ್ಲೇ ಚನ್ನಪಟ್ಟಣದಲ್ಲೂ ಮೈತ್ರಿ ಅಭ್ಯರ್ಥಿ ಕಣಕ್ಕೆ ಇಳಿಯಲಿದ್ದಾರೆ. ಮೈತ್ರಿ ಫಿಕ್ಸ್ ಆಗುತ್ತಿದ್ದಂತೆ ಮಾಜಿ ಶಾಸಕ ಯೋಗೇಶ್ವರ್ (CP Yogeshwar )ಟಿಕೆಟ್ ಪಡೆಯಲು ಕಸರತ್ತು ಆರಂಭಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಣ ವರ್ಗಾವಣೆ ಸಿಎಂ, ಡಿಸಿಎಂ ಇಬ್ಬರು ಸೇರಿಯೇ ಮಾಡಿದ್ದಾರೆ: ಹೆಚ್‌ಡಿಕೆ ಆರೋಪ
ವಿಧಾನಸಭೆ ಚುನಾವಣೆಯಲ್ಲಿ ಹೆಚ್‌ಡಿಕೆ ವಿರುದ್ಧವೇ ಸೋತಿದ್ದ ಯೋಗೇಶ್ವರ್ ಗುರುವಾರ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಹಾಗೆ ನೋಡಿದರೆ ಡಿಕೆ ಸುರೇಶ್ (DK Suresh) ವಿರುದ್ಧ ಬೆಂಗಳೂರು ಗ್ರಾಮಾಂತರದಲ್ಲಿ ಸ್ಪರ್ಧಿಸಲು ಯೋಗೇಶ್ವರ್ ಆಸೆ ವ್ಯಕ್ತಪಡಿಸಿದ್ದರು. ಆದರೆ ಬಿಜೆಪಿ ವರಿಷ್ಠ ಸೂಚನೆ ಮೇರೆಗೆ ಕ್ಷೇತ್ರವನ್ನು ಬಿಡಲು ಒಪ್ಪಿಗೆ ನೀಡಿದ್ದರು.
ಲೋಕಸಭಾ ಚುನಾವಣೆಯಲ್ಲಿ ಡಾ.ಮಂಜುನಾಥ್ ಅವರನ್ನು ಗೆಲ್ಲಿಸಲು ಯೋಗೇಶ್ವರ್ ಚನ್ನಪಟ್ಟಣದಲ್ಲಿ ಕೆಲಸ ಮಾಡಿದ್ದರು. ಚನ್ನಪಟ್ಟಣದಲ್ಲಿ ಮಂಜುನಾಥ್ (Dr Manjunath) ಅವರಿಗೆ 1,06,971 ಮತಗಳು ಬಿದ್ದಿದ್ದರೆ ಡಿಕೆ ಸುರೇಶ್ ಅವರಿಗೆ 85,357 ಮತಗಳು ಬಿದ್ದಿತ್ತು.
ಚನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವುದು ತಿಳಿದು ಬಂದಿಲ್ಲ. ಈಗಾಗಲೇ ಬೆಂಗಳೂರು ಗ್ರಾಮಾಂತರದ ಸೋಲನ್ನು ಡಿಕೆ ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಈ ಕಾರಣಕ್ಕೆ ಡಿಕೆ ಸುರೇಶ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬಹುದು ಎಂಬ ಮಾತು ಕೇಳಿ ಬರುತ್ತಿದೆ.
ಲೋಕಸಭೆ, ಪರಿಷತ್‌ನಲ್ಲಿ ಜೆಡಿಎಸ್‌ಗೆ ಕ್ಷೇತ್ರವನ್ನು ಬಿಟ್ಟುಕೊಟ್ಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಎದುರಿಸಲು ನನಗೆ ಟಿಕೆಟ್ ಸಿಗಬಹುದು ಎಂಬ ವಿಶ್ವಾಸದಲ್ಲಿ ಯೋಗೇಶ್ವರ್ ಇದ್ದಾರೆ. ಎನ್‌ಡಿಎ ಸರ್ಕಾರದ ಪ್ರಮಾಣವಚನ ಕಾರ್ಯಕ್ರಮದ ಬಳಿಕ ಮೈತ್ರಿ ಅಭ್ಯರ್ಥಿ ಯಾರಾಗಬಹುದು ಎನ್ನುವುದು ಅಧಿಕೃತವಾಗಿ ಪ್ರಕಟವಾಗಲಿದೆ.