Tag: ಯೋಗೇಶ್ವರ್

  • ಮಾಜಿ ಶಾಸಕ ಯೋಗೇಶ್ವರ್ ಫೋಟೋವನ್ನಿಟ್ಟು ಪೂಜೆ ಸಲ್ಲಿಸಿದ ಗ್ರಾಮಸ್ಥರು

    ಮಾಜಿ ಶಾಸಕ ಯೋಗೇಶ್ವರ್ ಫೋಟೋವನ್ನಿಟ್ಟು ಪೂಜೆ ಸಲ್ಲಿಸಿದ ಗ್ರಾಮಸ್ಥರು

    ರಾಮನಗರ: ಚುನಾವಣೆಯಲ್ಲಿ ಸೋತರೂ ಕೆರೆಗೆ ನೀರು ಹರಿಸಿದ್ದಾರೆಂದು ಮಾಜಿ ಶಾಸಕ ಯೋಗೇಶ್ವರ್ ಫೋಟೋವನ್ನಿಟ್ಟು ಚನ್ನಪಟ್ಟಣ ತಾಲೂಕಿನ ಭೂಹಳ್ಳಿ ಗ್ರಾಮಸ್ಥರು ಪೂಜೆ ಮಾಡಿದ್ದಾರೆ.

    ಕಣ್ವಾ ಏತನೀರಾವರಿ ಮೂಲಕ ಗುರುವಾರ ಭೂಹಳ್ಳಿ, ಹುಚ್ಚಯ್ಯನದೊಡ್ಡಿ, ಬ್ರಹ್ಮಣೀಪುರ ಗ್ರಾಮದ ಕೆರೆಗಳನ್ನು ತುಂಬಿಸುವ ಸಲುವಾಗಿ ನೀರನ್ನು ಹರಿಸಲಾಯಿತು. ಕಳೆದ ಎರಡು ವರ್ಷಗಳಿಂದ ತಮ್ಮ ಕೆರೆಗೆ ನೀರು ಹರಿಸಿ ಎಂದು ಒತ್ತಾಯಿಸುತ್ತಲೇ ಬಂದಿದ್ದ ಭೂಹಳ್ಳಿ ಗ್ರಾಮಸ್ಥರು ಕೆರೆಗೆ ನೀರು ಹರಿದು ಬಂದ ಹಿನ್ನೆಲೆಯಲ್ಲಿ ಸಂಭ್ರಮಿಸಿದ್ದಾರೆ.

    ಅಷ್ಟೇ ಅಲ್ಲದೇ ಗ್ರಾಮಸ್ಥರು ಹಾಗೂ ಯೋಗೇಶ್ವರ್ ಬೆಂಬಲಿಗರು ಸೇರಿ ಮಾಜಿ ಶಾಸಕ ಯೋಗೇಶ್ವರ್ ಫೋಟೋವನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ. ಚುನಾವಣೆಯಲ್ಲಿ ಸೋತರೂ ಸಹ ತಮ್ಮ ಗ್ರಾಮದ ಕೆರೆಗೆ ನೀರು ಹರಿಸಿದ್ದಾರೆಂದು ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಅಲ್ಲದೇ ಸಿಪಿವೈ ಫೋಟೋಗೆ ಪೂಜೆ ಮಾಡಿದ ಫೋಟೋಗಳನ್ನು ಕ್ಲಿಕ್ಕಿಸಿ ಫೇಸ್ ಬುಕ್‍ನಲ್ಲಿ ಹಾಕಿದ್ದಾರೆ. ಈಗ ಆ ಫೋಟೋಗಳು ವೈರಲ್ ಆಗಿದೆ.

  • ರಾಮನಗರದಲ್ಲಿ ಜೆಡಿಎಸ್‍ನಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆ?

    ರಾಮನಗರದಲ್ಲಿ ಜೆಡಿಎಸ್‍ನಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆ?

    ರಾಮನಗರ: ರಾಮನಗರ ಹಾಗೂ ಚನ್ನಪಟ್ಟಣ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಎಚ್.ಡಿ ಕುಮಾರಸ್ವಾಮಿ ತಮ್ಮ ರಾಜಕೀಯ ಕರ್ಮಭೂಮಿ ರಾಮನಗರವನ್ನ ಬಿಟ್ಟು ಚನ್ನಪಟ್ಟಣದ ಕೈ ಹಿಡಿದಿದ್ದಾರೆ.

    ಎಚ್‍ಡಿಕೆ ರಾಮನಗರವನ್ನು ಬಿಟ್ಟರೂ ಕ್ಷೇತ್ರಕ್ಕೆ ಯಾವುದೇ ನಷ್ಟವಿಲ್ಲವಂತೆ. ಕ್ಷೇತ್ರದಲ್ಲಿ ಸಣ್ಣ ಕಾರ್ಯಕರ್ತರನ್ನ ಕುಮಾರಸ್ವಾಮಿಯವರು ನಿಲ್ಲಿಸಿದರೂ ಗೆಲ್ಲುತ್ತಾರೆ ಎಂದು ಜೆಡಿಎಸ್ ಮುಖಂಡರು ಹೇಳಿದ್ದಾರೆ.

    ಆದರೆ ಸ್ಥಳೀಯರು ಕುಮಾರಸ್ವಾಮಿಯವರ ನಡೆಯಿಂದ ಬೇಜಾರಾಗಿದ್ದು, ತಮ್ಮ ಕರ್ಮಭೂಮಿಗೆ ಕೈ ಕೊಟ್ಟಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ ಎಚ್.ಡಿ ದೇವೇಗೌಡರ ಕುಟುಂಬದವರೇ ಉಪ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಅಂತ ಒತ್ತಾಯಿಸಿದ್ದಾರೆ. ಹೀಗಾಗಿ ಅನಿತಾ ಕುಮಾರಸ್ವಾಮಿಯವರೇ ಕಣಕ್ಕಿಳಿಯುವ ಸಾಧ್ಯತೆ ಇದೆ. ಇವರ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ಯೋಗೇಶ್ವರ್ ಕಣಕ್ಕಿಳಿಯುತ್ತಾರೆ ಎನ್ನಲಾಗಿದೆ. ಕಾಂಗ್ರೆಸ್ ಜೆಡಿಎಸ್ ಮೈತ್ರಿಯಾಗಿರುವ ಕಾರಣ ರಾಮನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕೆ ಇಳಿಯುವ ಸಾಧ್ಯತೆ ಕಡಿಮೆ ಇದೆ.

    2013ರ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಯೋಗೇಶ್ವರ್ ಅವರು ಅನಿತಾ ಕುಮಾರಸ್ವಾಮಿ ವಿರುದ್ಧ 6,464 ಮತಗಳ ಅಂತರಿಂದ ಗೆದ್ದಿದ್ದರು. ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ್ದ ಯೋಗೇಶ್ವರ್ ಅವರಿಗೆ 80,099 ಮತಗಳು ಬಿದ್ದಿದ್ದರೆ, ಅನಿತಾ ಕುಮಾರಸ್ವಾಮಿ ಅವರಿಗೆ 73,635 ಮತಗಳು ಬಿದ್ದಿತ್ತು. ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಸದತ್ ಅಲಿ ಖಾನ್ ಅವರಿಗೆ 8,134 ಮತಗಳು ಸಿಕ್ಕಿತ್ತು.

  • ಅನಿತಾ ಕುಮಾರಸ್ವಾಮಿ ಸ್ಪರ್ಧೆ ಅಧಿಕೃತ- ಚನ್ನಪಟ್ಟಣ ಕ್ಷೇತ್ರದಲ್ಲಿ ಯೋಗೇಶ್ವರ್‍ ಗೆ ಪೈಪೋಟಿ

    ಅನಿತಾ ಕುಮಾರಸ್ವಾಮಿ ಸ್ಪರ್ಧೆ ಅಧಿಕೃತ- ಚನ್ನಪಟ್ಟಣ ಕ್ಷೇತ್ರದಲ್ಲಿ ಯೋಗೇಶ್ವರ್‍ ಗೆ ಪೈಪೋಟಿ

    ರಾಮನಗರ: ಚನ್ನಪಟ್ಟಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಎಚ್‍ಡಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸುವುದು ಅಧಿಕೃತವಾಗಿ ಘೋಷಣೆಯಾಗಿದೆ.

    ಅನಿತಾ ಕುಮಾರಸ್ವಾಮಿ ಸ್ಪರ್ಧೆಗೆ ಜೆಡಿಎಸ್ ವರಿಷ್ಠರು ಗ್ರೀನ್ ಸಿಗ್ನಲ್ ನೀಡಿದ್ದು, ತಾಲೂಕು ಜೆಡಿಎಸ್ ಮುಖಂಡರು ಅಭ್ಯರ್ಥಿ ಘೋಷಣೆ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿದ ಜೆಡಿಎಸ್ ಮುಖಂಡರು ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಅವರನ್ನ ಘೋಷಿಸಿದ್ರು.

    ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಜೊತೆ ಮಂಗಳವಾರದಂದು ಮುಖಂಡರು ಅಂತಿಮ ಮಾತುಕತೆ ನಡೆಸಿ ಎಚ್‍ಡಿಕೆಯವರ ಅನುಮತಿ ಪಡೆದು ಅಭ್ಯರ್ಥಿ ಘೋಷಣೆ ಮಾಡಿದ್ದಾರೆ.

    ಚನ್ನಪಟ್ಟಣ ಮುಖಂಡರಾದ ಮಾಜಿ ಶಾಸಕ ಎಂ.ಸಿ ಅಶ್ವಥ್, ಒಕ್ಕಲಿಗರ ಸಂಘದ ನಿರ್ದೇಶಕ ಜಯಮುತ್ತು ಹಾಗೂ ಬಮೂಲ್ ನಿರ್ದೇಶಕ ಲಿಂಗೇಶ್ ಕುಮಾರ್ ರಿಂದ ಅಭ್ಯರ್ಥಿ ಘೋಷಣೆಯಾಗಿದೆ. ಈಗಾಗಲೇ ಕಾರ್ಯಕರ್ತರ ಜೊತೆಗೆ ಪ್ರಮುಖ ಮುಖಂಡರು ಸಭೆ ನಡೆಸಿದ್ದಾರೆ.

    ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿರುವ ಯೋಗೇಶ್ವರ್ ಅವರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ನೀಡಲಿದೆ ಎನ್ನುವ ಮಾತುಗಳು ಕೇಳಿಬಂದಿವೆ. ಹೀಗಾಗಿ ಈ ಚುನಾವಣೆಯಲ್ಲಿ ಯೋಗೇಶ್ವರ್ ಅವರನ್ನು ಸೋಲಿಸಲು ಡಿಕೆಶಿ ಸರ್ವಪ್ರಯತ್ನ ನಡೆಸುತ್ತಿದ್ದು, ಈ ತಂತ್ರದ ಭಾಗವಾಗಿ ಅನಿತಾ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ಅನಿತಾ ಕುಮಾರಸ್ವಾಮಿ ಸ್ಪರ್ಧಿಸಿದರೆ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದೇ ಅನಿತಾರನ್ನೇ ಬೆಂಬಲಿಸುವ ಸಾಧ್ಯತೆ ಇದೆ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

    2013ರ ವಿಧಾನಸಭಾ ಚುನಾವಣೆಯಲ್ಲಿ ಯೋಗೇಶ್ವರ್ ಅವರು ಅನಿತಾ ಕುಮಾರಸ್ವಾಮಿ ವಿರುದ್ಧ 6,464 ಮತಗಳ ಅಂತರಿಂದ ಗೆದ್ದಿದ್ದರು. ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ್ದ ಯೋಗೇಶ್ವರ್ ಅವರಿಗೆ 80,099 ಮತಗಳು ಬಿದ್ದಿದ್ದರೆ, ಅನಿತಾ ಕುಮಾರಸ್ವಾಮಿ ಅವರಿಗೆ 73,635 ಮತಗಳು ಬಿದ್ದಿತ್ತು. ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಸದತ್ ಅಲಿ ಖಾನ್ ಅವರಿಗೆ 8,134 ಮತಗಳು ಸಿಕ್ಕಿತ್ತು.

    2014ರ ಲೋಕಸಭಾ ಚುನಾವಣೆ ವೇಳೆ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇದೇ ಅಕ್ಟೋಬರ್ ನಲ್ಲಿ ಪಕ್ಷದ ವರಿಷ್ಠರ ನಿರ್ಧಾರದಿಂದ ಬೇಸತ್ತು ನಾನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಯೋಗೇಶ್ವರ್ ತಿಳಿಸಿದ್ದರು.

    ಕೆಲ ದಿನಗಳಿಂದ ಪದೇ ಪದೇ ಚನ್ನಪಟ್ಟಣಕ್ಕೆ ಭೇಟಿ ನೀಡುತ್ತಿರುವ ಅನಿತಾ ಕುಮಾರಸ್ವಾಮಿ ಮುಂದಿನ ವಿಧಾನಸಭೆ ಚುನಾವಣೆಗೆ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವ ಆಸೆ ಇದೆ. ಕ್ಷೇತ್ರದ ಜನರು ಕೂಡ ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ ಎಂದು ಈ ಹಿಂದೆ ಪಬ್ಲಿಕ್ ಟಿವಿ ಗೆ ನೀಡಿದ್ದ ಎಕ್ಸ್ ಕ್ಲೂಸೀವ್ ಸಂದರ್ಶನದಲ್ಲಿ ತಿಳಿಸಿದ್ದರು.

    ಕಳೆದ ಬಾರಿ ಇದೇ ಕ್ಷೇತ್ರದಿಂದ ಕಡಿಮೆ ಅಂತರದಿಂದ ಸೋತಿದ್ದೆ. ಹಾಗಾಗಿ ಈ ಬಾರಿ ನೀವು ನಿಲ್ಲಬೇಕು ಅಂತಾ ಅಲ್ಲಿನ ಜನರ ಒತ್ತಾಯವಿದ್ದು, ನನಗೂ ಅಲ್ಲಿಂದಲೇ ಸ್ಪರ್ಧಿಸುವ ಆಸೆ ಇದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಆಭ್ಯರ್ಥಿಗಳು ಇಲ್ಲ. ನನ್ನ ಬೆಂಬಲಕ್ಕೆ ನಿಂತಿರುವ ಕಾರ್ಯಕರ್ತರ ಹಿತಕ್ಕಾಗಿಯಾದ್ರು ನಾನು ಸ್ಪರ್ಧೆ ಮಾಡ್ತೀನಿ. ಇದರ ಬಗ್ಗೆ ಅಂತಿಮವಾಗಿ ನಮ್ಮ ರಾಷ್ಟ್ರೀಯ ಅಧ್ಯಕ್ಷರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಅಂದು ಪ್ರತಿಕ್ರಿಯಿಸಿದ್ದರು.

    ಇದನ್ನೂ ಓದಿ: ಚುನಾವಣೆ ಬರುತ್ತಿದ್ದಂತೆ ರಾಜ್ಯದಲ್ಲಿ ಶುರುವಾಯ್ತಾ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್?

  • ಪಂಥಾಹ್ವಾನ ನೀಡಿದ್ರೂ `ಪವರ್’ಫುಲ್ ಸಚಿವರು ಸೈಲೆಂಟ್ ಆಗಿರೋದಕ್ಕೆ ಅಜ್ಜಯ್ಯ ಕಾರಣನಾ?

    ಪಂಥಾಹ್ವಾನ ನೀಡಿದ್ರೂ `ಪವರ್’ಫುಲ್ ಸಚಿವರು ಸೈಲೆಂಟ್ ಆಗಿರೋದಕ್ಕೆ ಅಜ್ಜಯ್ಯ ಕಾರಣನಾ?

    ಬೆಂಗಳೂರು, ರಾಮನಗರ: ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಚನ್ನಪಟ್ಟಣದ ಶಾಸಕ ಸಿ.ಪಿ.ಯೋಗೇಶ್ವರ್ ತಿರುಗಿಬಿದ್ದು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸ್ತಿದ್ದಾರೆ. ಆದ್ರೆ ಪವರ್ ಮಿನಿಸ್ಟರ್ ಡಿ.ಕೆ.ಶಿವಕುಮಾರ್ ಮಾತ್ರ ಫುಲ್ ಸೈಲೆಂಟ್ ಆಗಿದ್ದಾರೆ. ಯಾಕಂದ್ರೆ ಡಿಕೆ ಶಿವಕುಮಾರ್ ನಂಬಿರುವ ನೊಣವನಕೆರೆಯ ಕಾಡು ಸಿದ್ದೇಶ್ವರ ಮಠದ ಅಜ್ಜಯ್ಯ ಜನವರಿ ಅಂತ್ಯದವರೆಗೆ ಸುಮ್ಮನಿರುವಂತೆ ಹೇಳಿದ್ದಾರಂತೆ.

    ಇದೇ ಕಾರಣಕ್ಕೆ ಡಿಕೆ ಶಿವಕುಮಾರ್ ರಾಜಕೀಯ ವಿರೋಧಿಗಳ ಬಗ್ಗೆ ಮಾತನಾಡದೆ ಸುಮ್ಮನಿದ್ದಾರೆ ಎನ್ನಲಾಗ್ತಿದೆ. ಡಿಕೆ ಶಿವಕುಮಾರ್‍ಗೆ ಮಹಿಳೆಯರ ಕೈಯಲ್ಲಿ ಪೊರಕೆಯಲ್ಲಿ ಹೊಡೆಸುತ್ತೇನೆ. ತಾಕತ್ತಿದ್ದರೆ ಡಿಕೆಶಿ ನನ್ನ ವಿರುದ್ಧ ಚನ್ನಪಟ್ಟಣದಲ್ಲಿ ಸ್ಪರ್ಧಿಸಲಿ ಎಂದು ಸಿ.ಪಿ.ಯೋಗೇಶ್ವರ್ ನೇರವಾಗಿ ಸವಾಲು ಹಾಕಿದ್ರು. ಈವರೆಗೆ ತಮ್ಮ ವಿರುದ್ಧ ಮಾತನಾಡಿದ ಎದುರಾಳಿಗಳ ಮೇಲೆ ಸವಾರಿ ಮಾಡ್ತಿದ್ದ ಡಿಕೆ ಶಿವಕುಮಾರ್ ಸೈಲೆಂಟ್ ಆಗಿದ್ದಾರೆ. ಅಲ್ಲದೆ ಪೊರಕೆಯಲ್ಲಿ ಹೊಡೆಯಲಿ ಯೋಗೇಶ್ವರ್, ಗ್ರೇಟ್ ಪರ್ಸನ್. ಅವರು ತುಂಬ ದೊಡ್ಡ ನಾಯಕರು ಅಂತ ಕೈ ಮುಗಿಯುತ್ತಿದ್ದಾರೆ. ಇದಕ್ಕೆಲ್ಲಾ ಅಜ್ಜಯ್ಯನ ಮಾತು ಕಾರಣವಾಗಿದ್ದು, ಜನವರಿ ನಂತರ ಇದೆ ಅಸಲಿ ಆಟ ಅಂತ ಡಿಕೆ ಶಿವಕುಮಾರ್ ಅಪ್ತರು ಮಾತನಾಡಿಕೊಳ್ತಿದ್ದಾರೆ. ಇದನ್ನೂ ಓದಿ: ಅಭ್ಯರ್ಥಿ ಇಲ್ಲಿ ನೆಪ ಮಾತ್ರ, ನಾನು-ಡಿ.ಕೆ.ಸುರೇಶ್ ಇಲ್ಲಿನ ನಿಜವಾದ ಅಭ್ಯರ್ಥಿಗಳು ನೆನಪಿರಲಿ: ಚನ್ನಪಟ್ಟಣದಲ್ಲಿ ಡಿಕೆಶಿ ಅಬ್ಬರ

     

    ಇನ್ನು ಬೊಂಬೆನಗರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಘೋಷಣೆಯ ಮುನ್ನವೇ ಚುನಾವಣಾ ಕಣ ರಂಗೇರಿದೆ. ಸಿಎಂ ಸಾಧನ ಸಮಾವೇಶದ ನಂತರ ಹಠಕ್ಕೆ ಬಿದ್ದಿರೋ ಶಾಸಕ ಯೋಗೇಶ್ವರ್, ಕ್ಷೇತ್ರದಲ್ಲಿ ಠಿಕಾಣಿ ಹೂಡಿ ಬೂತ್ ಮಟ್ಟದಲ್ಲಿ ಪಕ್ಷ ಬಲವರ್ಧನೆ ಮಾಡ್ತಿದ್ದಾರೆ. ಜೊತೆಗೆ ಕಾರ್ಯಕರ್ತರ ಸಭೆ ನಡೆಸುತ್ತಿರುವ ಯೋಗೇಶ್ವರ್ ಭರ್ಜರಿ ಬಾಡೂಟ ಹಾಕಿಸ್ತಿದ್ದಾರೆ. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಸಿಎಂ ಶಕ್ತಿಪ್ರದರ್ಶನ- ಸಾಧನಾ ಸಮಾವೇಶಕ್ಕೆ ಶಾಸಕ ಸಿಪಿ ಯೋಗೇಶ್ವರ್ ಗೈರಾಗಲು ನಿರ್ಧಾರ

    ಶುಕ್ರವಾರ ಚನ್ನಪಟ್ಟಣ ತಾಲೂಕಿನ ಮಳೂರು ಹಾಗೂ ಚಕ್ಕೆರೆ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ರು. ಮುದುಗೆರೆ ಸಮೀಪದ ಅರಣ್ಯ ಪ್ರದೇಶದಲ್ಲಿ ನಡೆದ ಸಭೆಯಲ್ಲಿ ಭಾಗಿಯಾದವರಿಗೆ 200 ಕೆಜಿ ಚಿಕನ್ ಮತ್ತು 200 ಕೆಜಿ ಮಟನ್‍ನ ಭರ್ಜರಿ ಮಾಂಸದೂಟವನ್ನು ಉಣಬಡಿಸಿದ್ದಾರೆ. ಜೊತೆಗೆ ಚನ್ನಪಟ್ಟಣದಲ್ಲಿ ನಡೆಯುವ ಬಿಜೆಪಿಯ ಪರಿವರ್ತನಾ ಯಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.

     

  • ಇಂದು ಚನ್ನಪಟ್ಟಣದಲ್ಲಿ ಸಿಎಂ ಶಕ್ತಿಪ್ರದರ್ಶನ- ಸಾಧನಾ ಸಮಾವೇಶಕ್ಕೆ ಶಾಸಕ ಸಿಪಿ ಯೋಗೇಶ್ವರ್ ಗೈರಾಗಲು ನಿರ್ಧಾರ

    ಇಂದು ಚನ್ನಪಟ್ಟಣದಲ್ಲಿ ಸಿಎಂ ಶಕ್ತಿಪ್ರದರ್ಶನ- ಸಾಧನಾ ಸಮಾವೇಶಕ್ಕೆ ಶಾಸಕ ಸಿಪಿ ಯೋಗೇಶ್ವರ್ ಗೈರಾಗಲು ನಿರ್ಧಾರ

    ರಾಮನಗರ: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಸಿಪಿ ಯೋಗೇಶ್ವರ್ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜಾಗಿದ್ದು, ಸರ್ಕಾರದ ಸಾಧನಾ ಸಮಾವೇಶ ಇಂದು ಜಿಲ್ಲೆಯ ಚನ್ನಪಟ್ಟಣ ಹಾಗೂ ಮಾಗಡಿ ಕ್ಷೇತ್ರದಲ್ಲಿ ನಡೆಯಲಿದೆ.

    ರಾಮನಗರದ ಚನ್ನಪಟ್ಟಣ ಮತ್ತು ಮಾಗಡಿ ವಿಧಾನಸಭೆ ಕ್ಷೇತ್ರಗಳಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಸಾಧನಾ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಚನ್ನಪಟ್ಟಣದ ಪದವಿ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಇಂಧನ ಸಚಿವ ಡಿ.ಕೆ ಶಿವಕುಮಾರ್, ಸಾರಿಗೆ ಸಚಿವ ಎಚ್ ಎಂ ರೇವಣ್ಣ ಸಿದ್ದರಾಮಯ್ಯಗೆ ಸಾಥ್ ನೀಡಲಿದ್ದಾರೆ.

    ಇಂದು ಈ ಸಮಾವೇಶ ಸಾಕಷ್ಟು ಮಹತ್ವ ಪಡೆದುಕೊಂಡಿದ್ದು, ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯಾಗುವ ಸಾಧ್ಯತೆ ಇದೆ. ಅಲ್ಲದೆ ಈ ಹಿಂದೆ ಸಿಪಿ ಯೋಗೇಶ್ವರ್ ಗೆ ಸವಾಲು ಹಾಕಿದ್ದ ಸಿಎಂ ಸಿದ್ದರಾಮಯ್ಯ, ನಮ್ಮ ಸರ್ಕಾರ ಚನ್ನಪಟ್ಟಣಕ್ಕೆ ಏನೇನು ಕೊಡುಗೆ ಕೊಟ್ಟಿದೆ ಮತ್ತು ಯೋಗೇಶ್ವರ್ ಏನು ಕೆಲಸ ಮಾಡಿದ್ದಾರೆ ಅನ್ನೋದನ್ನು ಚನ್ನಪಟ್ಟಣಕ್ಕೆ ಬಂದೇ ಹೇಳುತ್ತೆ ಎಂದಿದ್ದರು. ಆದರೆ ಈಗ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಶಾಸಕ ಸಿಪಿ ಯೋಗೇಶ್ವರ್ ಸಮಾವೇಶಕ್ಕೆ ಗೈರಾಗಲು ತೀರ್ಮಾನಿಸಿದ್ದಾರೆ.

    ತಮಗೆ ಸಚಿವ ಸ್ಥಾನ ಸಿಗದಿರಲು ಸಚಿವ ಡಿಕೆಶಿಯೇ ಎಂಬ ಸಿಟ್ಟಿಗೆ ಯೋಗೇಶ್ವರ್ ಕಾಂಗ್ರೆಸ್ ತೊರೆದಿದ್ದು, ಚನ್ನಪಟ್ಟಣದಲ್ಲಿ ಇಂದು ನಡೆಯುತ್ತಿರುವ ಸಮಾವೇಶ ಕೇವಲ ಸರ್ಕಾರದ ಸಮಾವೇಶ ಅಷ್ಟೇ ಅಲ್ಲ ತಮ್ಮ ವಿರುದ್ಧದ ರಾಜಕೀಯ ರಣಕಹಳೆ ಎಂದು ಸಮಾವೇಶಕ್ಕೆ ಗೈರಾಗಲು ತೀರ್ಮಾನಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಚನ್ನಪಟ್ಟಣದ ಕೆರೆ ತುಂಬುವ ಯೋಜನೆಗೆ ಸಾವಿರ ಕೋಟಿಗೂ ಹೆಚ್ಚು ಹಣ ಬಿಡುಗಡೆ ಮಾಡಿತ್ತು. ಅಷ್ಟಾಗಿಯು ಪಕ್ಷ ತೊರೆದ ಯೋಗೇಶ್ವರ್ ರನ್ನ ಚನ್ನಪಟ್ಟಣದಲ್ಲೇ ಈ ಬಾರಿ ಸೋಲಿಸಬೇಕು ಎಂಬ ಹಟಕ್ಕೆ ಬಿದ್ದಿರುವ ಸಚಿವ ಡಿಕೆಶಿ, ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಇಂದು ಬೃಹತ್ ಸಾಧನಾ ಸಮಾವೇಶ ಹಮ್ಮಿಕೊಂಡಿದ್ದಾರೆ. ಇಂದಿನ ಸಮಾವೇಶದಲ್ಲಿ ಸಿ.ಪಿ.ಯೋಗೇಶ್ವರ್ ವಿರುದ್ಧ ನಾಯಕರ ವಾಗ್ದಾಳಿ ನಡೆಯುವ ಸಾಧ್ಯತೆ ಇದೆ.

    ಇವತ್ತಿನ ಸಾಧನಾ ಸಮಾವೇಶ ರಾಜಕೀಯ ಕಾರಣಕ್ಕಾಗಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಚನ್ನಪಟ್ಟಣ ಶಾಸಕ ಯೋಗೇಶ್ವರ್ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿರುವ ಕಾರಣ ಚನ್ನಪಟ್ಟಣದ ಇಂದಿನ ಸಮಾವೇಶ ಸಾಕಷ್ಟು ಕುತೂಹಲ ಮೂಡಿಸಿದೆ.

  • ಚನ್ನಪಟ್ಟಣದಲ್ಲಿ ಪರಸ್ಪರ ವಾಗ್ದಾಳಿ ನಡೆಸಿದ ಡಿಕೆಶಿ, ಯೋಗೇಶ್ವರ್

    ಚನ್ನಪಟ್ಟಣದಲ್ಲಿ ಪರಸ್ಪರ ವಾಗ್ದಾಳಿ ನಡೆಸಿದ ಡಿಕೆಶಿ, ಯೋಗೇಶ್ವರ್

    ರಾಮನಗರ: ಇಂಧನ ಸಚಿವ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಯೋಗೇಶ್ವರ್ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ. ಚನ್ನಪಟ್ಟಣ ಹೊರವಲಯದ ಖಾಸಗಿ ಹೋಟೆಲ್‍ನಲ್ಲಿ ಯೋಗೇಶ್ವರ್ ಮಾತನಾಡಿ ಡಿಕೆ ಸಹೋದರರ ವಿರುದ್ಧ  ಏಕವಚನದಲ್ಲಿ ಹರಿಹಾಯ್ದಿದ್ದಾರೆ.

    ಸಚಿವ ಡಿ.ಕೆ ಶಿವಕುಮಾರ್‍ರವರದ್ದು ಇದು ರಾಜಕೀಯದ ಅಂತಿಮಘಟ್ಟ. ಆತನ ಇತಿಹಾಸ ಇಡೀ ರಾಜ್ಯಕ್ಕೆ ಗೊತ್ತಿದ್ದು ಡಿಕೆಶಿ ಒಂದು ನೆಗೆಟಿವ್ ಫೋರ್ಸ್. ಅವನಿಂದಲೇ ಕಾಂಗ್ರೆಸ್ ಗೆ ಮುಂದಿನ ದಿನಗಳಲ್ಲಿ ಹಿನ್ನಡೆಯಾಗಲಿದೆ ಎಂದು ವಾಗ್ದಾಳಿ ನಡೆಸಿದರು.

    ಕೆಪಿಸಿಸಿ ಅಧ್ಯಕ್ಷರಾದರೆ, ಸಿಎಂ ಆದರೆ ಶಿವಕುಮಾರ್ ನನ್ನನ್ನು ಮಂತ್ರಿ ಮಾಡುತ್ತೇನೆ ಎಂದಿದ್ದರು. ಆದರೆ ಅದು ಅವರ ಕನಸು, ಆ ಕನಸು ನನಸಾಗುವುದಿಲ್ಲ. ಈ ಹಿಂದೆ ಲೋಕಸಭಾ ಚುನಾವಣೆಯ ವೇಳೆ ನನ್ನ ಬಳಿ ಕೈ ಕಾಲು ಹಿಡಿದುಕೊಂಡು ಭಿಕ್ಷೆ ಬೇಡಲು ಬಂದಿದ್ದರು ಎಂದು ತಿಳಿಸಿದರು.

    ಅಣ್ಣ-ತಮ್ಮಂದಿರಿಗೆ 25 ವರ್ಷಗಳಿಂದ ತೊಡೆತಟ್ಟಿಕೊಂಡೇ ರಾಜಕಾರಣ ಮಾಡುತ್ತಾ ಬಂದಿದ್ದೇನೆ. ಈಗಲೂ ಸಹ ತೊಡೆ ತಟ್ಟಿ ಚಾಲೆಂಜ್ ಮಾಡ್ತೇನೆ ಮುಂದಿನ ಎಂಪಿ, ಎಂಎಲ್‍ಸಿ ಚುನಾವಣೆಯನ್ನ ಗೆದ್ದು ತೋರಿಸಲಿ ಎಂದು ಹೇಳಿದರು.

    ಮೋಸ ಹೋದ್ವಿ: ಶಾಸಕ ಸಿ.ಪಿ ಯೋಗೇಶ್ವರ್ ಅವರನ್ನು ನಂಬಿ ನಾವು ಮೋಸ ಹೋಗಿದ್ದೇವೆ. ಇನ್ನು ಮುಂದೆ ಹಾಗೆ ಆಗಲ್ಲ ಚನ್ನಪಟ್ಟಣದಲ್ಲಿ 2018 ಕ್ಕೆ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡುವ ಗುರಿಯನ್ನು ಹೊಂದಿದ್ದೇವೆ ಎಂದು ಸಚಿವ ಡಿ.ಕೆ ಶಿವಕುಮಾರ್ ಚನ್ನಪಟ್ಟಣದಲ್ಲಿ ತಿಳಿಸಿದರು.

    ಚನ್ನಪಟ್ಟಣ ಶಾಸಕ ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ತೊರೆದ ಬಳಿಕ ಇಂಧನ ಸಚಿವ ಡಿ.ಕೆ ಶಿವಕುಮಾರ್ ತಮ್ಮ ಶಕ್ತಿ ಪ್ರದರ್ಶನ ನಡೆಸಿದರು. ದೊಡ್ಡಮಳೂರು ಸಮೀಪದ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ನಡೆಸಲಾಯಿತು. ಈ ವೇಳೆ ಡಿ.ಕೆ ಸಹೋದರರು ಶಾಸಕ ಸಿ.ಪಿ ಯೋಗೇಶ್ವರ್ ವಿರುದ್ಧ ಗುಡುಗಿದರು.

    ಈ ವೇಳೆ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಚನ್ನಪಟ್ಟಣ ಕ್ಷೇತ್ರಕ್ಕೆ ಶಾಸಕರಿಲ್ಲ, ನಾವೇ ಶಾಸಕರಾಗಿದ್ದೇವೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕರನ್ನ ಜನ ಆಯ್ಕೆ ಮಾಡ್ತಾರೆ. ಯಾವುದೇ ಕಾರಣಕ್ಕೂ ಬಿಜೆಪಿ ಅಧಿಕಾರಕ್ಕೆ ಬರಲ್ಲ ಯೋಗೇಶ್ವರ್‍ರವರೇ ಎಂದು ಹೇಳಿದರು.

    ಚನ್ನಪಟ್ಟಣದಲ್ಲಿ ಮುಂದಿನ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುತ್ತದೆ. ಅವರು ಯಾವ ಪಕ್ಷಕ್ಕೆ ಬೇಕಾದ್ರೂ ಹೋಗಲಿ, ದಳದವರಿಗೆ ಯೋಗೇಶ್ವರ್ ಬಗ್ಗೆ ಗೊತ್ತು ಅದಕ್ಕೆ ಹತ್ತಿರ ಸೇರಿಸಿಕೊಳ್ಳುತ್ತಿಲ್ಲ. ಇನ್ನೂ ಬಿಜೆಪಿಯವರಿಗೆ ಅನುಭವವಾಗಬೇಕಿದೆ ಎಂದರು.

    ಮಾನ ಮರ್ಯಾದೆ ಇದ್ರೆ ಯೋಗೇಶ್ವರ್ ತಮ್ಮ ಸಹೋದರಿನಿಂದ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಡಿಕೆಶಿ ಹೇಳಿದರು.