ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Election 2023) ಯ ಫಲಿತಾಂಶ ಶನಿವಾರ ಹೊರಬೀಳುತ್ತಿದ್ದು, ಇದೀಗ ರಾಜ್ಯದಲ್ಲಿ ಬೆಟ್ಟಿಂಗ್ ದಂಧೆ ಆರಂಭವಾಗಿದೆ. ಅಂತೆಯೇ ವ್ಯಕ್ತಿಯೊಬ್ಬರು ಬೆಟ್ಟಿಂಗ್‍ಗೆ ತನ್ನ ಜಮೀನನ್ನೇ ಮಾರಾಟ ಮಾಡಲು ಮುಂದಾಗಿರುವ ಪ್ರಸಂಗವೊಂದು ಮೈಸೂರಿನಲ್ಲಿ ನಡೆದಿದೆ.
ಹೌದು. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಗ್ರಾಮದ ಯೋಗೇಶ್ ಗೌಡ (Yogesh Gowda Betting) ಜಮೀನು ಮಾರಲು ಮುಂದಾದ ಕಾಂಗ್ರೆಸ್ (Congress) ಮುಖಂಡ. ಪಿರಿಯಾಪಟ್ಟಣ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಕೆ.ವೆಂಕಟೇಶ್ (K Venkatesh) ಹಾಗೂ ಜೆಡಿಎಸ್ (JDS) ಅಭ್ಯರ್ಥಿ ಕೆ.ಮಹದೇವ್ ( K Mahadev) ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆದಿದೆ.
ಈ ಹಿನ್ನೆಲೆಯಲ್ಲಿ ಪಿರಿಯಾಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರೆಂದು 1 ಎಕರೆ 37 ಗುಂಟೆ ಜಮೀನು ಬೆಟ್ಟಿಂಗ್ ನಡೆದಿದೆ. ಸದ್ಯ ಯೋಗೇಶ್ ಗೌಡ ಮಾತನಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಸಿಂಗಾಪುರ್ ಪಾಲಿಟಿಕ್ಸ್ ಅಸಲಿ ಆಟ ಶುರುನಾ?
ವೀಡಿಯೋದಲ್ಲಿ ಏನಿದೆ..?: ಪಿರಿಯಾಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರೆಂದು ಹಾರನಹಳ್ಳಿ ಗ್ರಾಮದ ಯೋಗೇಶ್ ಗೌಡನಾದ ನಾನು 1 ಎಕರೆ 37 ಗುಂಟೆ ಬೆಟ್ ಕಟ್ತೀನಿ. ಯಾರದ್ರೂ ತಯಾರಿದ್ದರೆ ಬರಬಹುದು. ಅಗ್ರಿಮೆಂಟ್ ಮಾಡಿ ಕೊಡ್ತೀನಿ. ನನ್ನ ಹೆಂಡ್ತಿ ಮಕ್ಕಳ ಸಹಿ ಕೂಡ ಹಾಕಿ ಕೊಡುತ್ತೇನೆ ಎಂದು ವೀಡಿಯೋದಲ್ಲಿ ಹೇಳಿದ್ದಾರೆ.
ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿ ಬಿಡುಗಡೆ ಆದ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಮನೆಯಿಂದ ಹೊರ ಬರದೇ ವಿಶ್ರಾಂತಿಗೆ ಮೊರೆ ಹೋಗಿದ್ದಾರೆ.
ಮನೆಯಲ್ಲೇ ವಿಶ್ರಾಂತಿ ಪಡೆದ ವಿನಯ್ ಕುಲಕರ್ಣಿ ಇಡೀ ದಿನ ಮನೆಯಿಂದ ಹೊರ ಬರಲಿಲ್ಲ. ಯಾರನ್ನೂ ಭೇಟಿ ಮಾಡಲಿಲ್ಲ. ವಿನಯ್ ಕುಲಕರ್ಣಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ಮಾಡುವ ಸಾಧ್ಯತೆ ಇತ್ತು. ಆದರೆ ಇಡೀ ದಿನ ಕುಟುಂಬದ ಜೊತೆ ಕಳೆದ ವಿನಯ್ ಕುಲಕರ್ಣಿ ಮನೆಯಿಂದ ಹೊರಗೆ ಬರದೇ, ಯಾರ ಭೇಟಿಯನ್ನು ಮಾಡಲ್ಲ ಎಂದು ತಮ್ಮ ಸಿಬ್ಬಂದಿಗೆ ತಿಳಿಸಿ ಮನೆಯಲ್ಲೇ ಉಳಿದುಕೊಂಡಿದ್ದಾರೆ. ಇದನ್ನೂ ಓದಿ: ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ರೂ ಧಾರವಾಡ ಪ್ರವೇಶಿಸುವಂತಿಲ್ಲ!
ಬೆಂಗಳೂರು: ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರಾಗಿದೆ.
ಹೌದು. ಯೋಗೇಶ್ ಗೌಡ ಹತ್ಯೆ ಕೇಸ್‍ನಲ್ಲಿ ಸಾಕ್ಷಿ ನಾಶ ಪ್ರಕರಣದಲ್ಲಿ ಕುಲಕರ್ಣಿಗೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಹಿಂಡಲಗಾ ಜೈಲಿನಲ್ಲಿದ್ದ ವಿನಯ್ ಕುಲಕರ್ಣಿ ವಿರುದ್ಧ ಸಿಬಿಐ ಎರಡು ಕೇಸ್ ದಾಖಲಿಸಿತ್ತು. ಇದೀಗ ಸಾಕ್ಷ್ಯನಾಶ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ವಿನಯ್ ಕುಲಕರ್ಣಿ ಅವರು ಈಗಾಗಲೇ ಯೋಗೇಶ್ ಗೌಡ ಹತ್ಯೆ ಕೇಸ್‍ನಲ್ಲಿ ಸುಪ್ರೀಂಕೋರ್ಟ್ ನಿಂದ ಜಾಮೀನು ಪಡೆದಿದ್ದರು. ನ್ಯಾ ಉದಯ್ ಲಲಿತ್ ನೇತೃತ್ವದ ದ್ವಿಸದಸ್ಯ ಪೀಠ ಸುದೀರ್ಘ ವಿಚಾರಣೆ ನಡೆಸಿ ಸಿಬಿಐ ಆಕ್ಷೇಪಣೆಯ ನಡುವೆಯೂ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿ ಆದೇಶ ಪ್ರಕಟಿಸಿತ್ತು.
ಧಾರವಾಡಕ್ಕೆ ಭೇಟಿ ನೀಡುವಂತಿಲ್ಲ. ಸಿಬಿಐ ವಿಚಾರಣೆಗೆ ತಪ್ಪದೇ ಹಾಜರಾಗಬೇಕು ಎಂದು ಕೋರ್ಟ್ ವಿನಯ್ ಕುಲಕರ್ಣಿಗೆ ಷರತ್ತು ವಿಧಿಸಿತ್ತು. ವಿನಯ್ ಕುಲಕರ್ಣಿ ಜಾಮೀನು ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿ ಸಿಬಿಐ ಪರ ವಕೀಲ ಎಎಸ್.ಜಿ. ಎಸ್.ವಿ. ರಾಜು ವಾದ ಮಂಡನೆ ಮಾಡಿದ್ದರು. ಇದನ್ನೂ ಓದಿ: ರಕ್ಷಾ ಬಂಧನದಂದು ಮಹಿಳೆಯರಿಗೆ ಬಂಪರ್ ಆಫರ್ ನೀಡಿದ ಯುಪಿ ಸಿಎಂ
ಸಿಬಿಐ ಪರ ವಾದ ಏನಿತ್ತು?
ಎ1 ಆರೋಪಿಗಳಿಂದ ಎ15 ರವರೆಗಿನ ಆರೋಪಿಗಳಿಗೆ ಆರು ಲಕ್ಷ ರೂಪಾಯಿ ಹಣ ಪಾವತಿಯಾಗಿದೆ. ಕೇಸ್ ತನಿಖಾಧಿಕಾರಿಗೂ ಎರಡು ಲಕ್ಷ ರೂಪಾಯಿ ಹಣ ಪಾವತಿಯಾಗಿದೆ. ವಿನಯ್ ಕುಲಕರ್ಣಿ ಮನವಿ ಮೇರೆಗೆ ಹಾರ್ನ್ ಬಿಲ್ ರೆಸಾರ್ಟ್ ನಲ್ಲಿ ಸಾಕ್ಷಿಗಳಿಗೆ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿದೆ.
ವಿನಯ್ ಕುಲಕರ್ಣಿಗೆ ಯೋಗೀಶ್ ಗೌಡ ಜೊತೆಗೆ ವೈಷಮ್ಯ ಇತ್ತು. ಭೂ ವಿವಾದದಿಂದ ಕೊಲೆಯಾಗಿದೆ ಎಂದು ಬಿಂಬಿಸುವ ಯತ್ನ ಮಾಡಿದ್ದರು. ಸಿಬಿಐ ತನಿಖೆ ನಡೆಸಿದ ಬಳಿಕ ದೊಡ್ಡ ಷಡ್ಯಂತ್ರ ಬೆಳಕಿಗೆ ಬಂದಿದೆ. ವಿನಯ್ ಕುಲಕರ್ಣಿ ಕೊನೆಯಲ್ಲಿ ಪ್ರಮುಖ ಪಾತ್ರವಾಗಿದ್ದು, ಸಾಕ್ಷ್ಯವನ್ನು ತಿರುಚಲಾಗಿದೆ. ಪೊಲೀಸ್ ತನಿಖೆಯಲ್ಲಿ ಕೊಲೆ, ಸಣ್ಣ ಷಡ್ಯಂತ್ರ ಮಾತ್ರ ಪ್ರಸ್ತಾಪವಾಗಿದೆ.
ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಅವರನ್ನು ಹತ್ಯೆ ಮಾಡಿದ ಪ್ರಕರಣ ಸಂಬಂಧ ವಿನಯ್ ಕುಲಕರ್ಣಿ ಅವರನ್ನು ಸಿಬಿಐ 2020ರ ನವೆಂಬರ್ 05 ರಂದು ಬಂಧಿಸಿತ್ತು.
ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನಿನ್ನೆಯಷ್ಟೇ ಸುಪ್ರೀಂ ಕೋರ್ಟ್‍ನಲ್ಲಿ ಜಾಮೀನು ಸಿಕ್ಕಿದೆ. ಆದರೆ ಜಾಮೀನು ಸಿಕ್ಕರೂ ಅವರಿಗೆ ಜೈಲಿನಿಂದ ಬಿಡುಗಡೆ ಭಾಗ್ಯವಿಲ್ಲ. ಇನ್ನೊಂದು ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕ ಅವರು ಜೈಲಿನಿಂದ ಬಿಡುಗಡೆ ಹೊಂದಬಹುದೆಂದು ವಿನಯ್ ಪರ ವಕೀಲರಾದ ಆನಂದ ಕೊಳ್ಳಿ ತಿಳಿಸಿದ್ದಾರೆ.
ಈ ವಿಚಾರವಾಗಿ ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆನಂದ ಕೊಳ್ಳಿ, ಇನ್ನೊಂದು ಪ್ರಕರಣದಲ್ಲಿ ಜಾಮೀನು ಆಗಬೇಕಿದೆ. ಈಗಾಗಲೇ ಆ ಪ್ರಕರಣದ ಜಾಮೀನು ಅರ್ಜಿ ಸಲ್ಲಿಸಲಿದ್ದೇವೆ. ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆಯಾಗಿಟ್ಟುಕೊಂಡು ಈ ಅರ್ಜಿ ಸಲ್ಲಿಸುತ್ತೇವೆ. ವಿನಯ್ ಕುಲಕರ್ಣಿ ಬೆಂಗಳೂರಿನಲ್ಲೇ ಇರುವಂತೆ ಕೋರ್ಟ್ ಆದೇಶ ಮಾಡಿದೆ. ಬೆಂಗಳೂರು ಬಿಟ್ಟು ಎಲ್ಲಿಯೂ ಹೋಗುವಂತಿಲ್ಲ, ಧಾರವಾಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಇದೆ ಎಂದರು.
ವಿನಯ್ ಕುಲಕರ್ಣಿ ಧಾರವಾಡಕ್ಕೆ ಬರಬೇಕೆಂದರೆ ಸುಪ್ರೀಂ ಕೋರ್ಟ್‍ನ ಅನುಮತಿ ಪಡೆಯಬೇಕು. ಅವಶ್ಯಕ ಕಾರಣ ಒದಗಿಸಿ ಅನುಮತಿ ಪಡೆಯಬಹುದಾಗಿದೆ. ಸುಪ್ರೀಂ ಕೋರ್ಟ್‍ನಲ್ಲಿ ಜಾಮೀನಿಗೆ ಸಿಬಿಐ ವಿರೋಧ ವ್ಯಕ್ತಪಡಿಸಿತ್ತು, ಕಾನೂನು ಪ್ರಕಾರ ಸಿಬಿಐ ನಡೆ ತಪ್ಪು ಎಂದು ನಾವು ವಾದಿಸಿದ್ದೇವು. ನಮ್ಮ ವಾದವನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿತು, ಹೈಕೋರ್ಟ್‍ನಲ್ಲಿನ ವಿಚಾರಣೆ ಎರಡು ತಿಂಗಳಲ್ಲಿ ಮುಗಿಸಲು ಸುಪ್ರೀಂ ಕೋರ್ಟ್ ಸೂಚಿಸಿದೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂನಿಂದ ಜಾಮೀನು
ಈ ಪ್ರಕರಣ ಸಿಬಿಐಗೆ ವಹಿಸಿದ್ದು ಕಾನೂನು ಪ್ರಕಾರ ಸರಿಯೇ ಎನ್ನುವ ವಿಚಾರವಾಗಿ ಅವರು ಮಾತನಾಡಿ, ಅದು ಬೆಂಗಳೂರು ಹೈಕೋರ್ಟ್‍ನ ವಿಚಾರಣೆಯಲ್ಲಿ ನಿರ್ಧಾರ ಆಗಲಿದೆ, ರಾಜ್ಯ ಸರ್ಕಾರ ಮೂರು ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ, ಅದರಲ್ಲಿ ಒಂದು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು, ಆಗ ಯೋಗೇಶ್ ಗೌಡ ಅವರ ಅಣ್ಣ ಹೈಕೋರ್ಟ್ ಮೊರೆ ಹೋಗಿದ್ದರು, ಹೈಕೋರ್ಟ್ ಅವರ ಅರ್ಜಿಯನ್ನೂ ತಿರಸ್ಕರಿಸಿತ್ತು, ಆದರೂ ಸರ್ಕಾರ ಮತ್ತೆ ಸಿಬಿಐ ನೀಡಿತ್ತು. ಇದನ್ನೇ ಚಾಲೆಂಜ್ ಮಾಡಿ ಜಾಮೀನು ಪಡೆಯಲಾಗಿದೆ ಎಂದು ತಿಳಿಸಿದರು.
ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧಿ ಆಗಿರುವ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಕೇಸ್‍ಗೆ ಇವತ್ತು ಸ್ಫೋಟಕ ತಿರುವು ಸಿಗುವ ಸಾಧ್ಯತೆ ಇದೆ.
ಕೊಲೆ ಕೇಸ್‍ನಲ್ಲಿ ಪ್ರಮುಖ ಆರೋಪಿ ಆಗಿರುವ ಬಸವರಾಜ ಮುತ್ತಗಿ ಇವತ್ತು ಸುದ್ದಿಗೋಷ್ಠಿ ನಡೆಸಿ ಸ್ಫೋಟಕ ಮಾಹಿತಿಗಳನ್ನು ಹೊರಹಾಕುವ ಸಾಧ್ಯತೆ ಇದೆ. ನಿನ್ನೆ ಸಿಬಿಐ ಬುಲಾವ್ ಮೇಲೆ ವಿಚಾರಣೆಗೆ ಹಾಜರಾದ ಬಳಿಕ ಮಾತಾಡಿದ್ದ ಮುತ್ತಗಿ `ಒಂದು ದಿನ ಕಾಯಿರಿ. ಮಾಧ್ಯಮಗಳ ಎದುರು ಬಹಳಷ್ಟು ಚರ್ಚೆ ಮಾಡುವುದು ಇದೆ. ನಾನೂ ಕೂಡಾ ಓರ್ವ ವಕೀಲ. ಈಗಾಗಲೇ ಕೇಸ್ ವಿಚಾರಣೆ ಹಂತದಲ್ಲಿದ್ದು ಮಾಧ್ಯಮಗಳ ಮುಂದೆ ಸಾಕಷ್ಟು ವಿಷಯಗಳನ್ನು ಚರ್ಚೆ ಮಾಡ್ತೇನೆ’ ಎಂದಿದ್ದಾರೆ. ಇದನ್ನೂ ಓದಿ: ಅಶೋಕ್ ಪಿಎ ವಿರುದ್ಧ ದೂರು ನೀಡಿದ್ದ ಶೃಂಗೇರಿ ಸಬ್ ರಿಜಿಸ್ಟ್ರಾರ್ ಸೇವೆಯಿಂದ ವಜಾ
ನಿನ್ನೆ ಸಿಬಿಐ ದಿಢೀರ್ ದಾಳಿ ಬಳಿಕ ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತ ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅವರನ್ನು ಬಂಧಿಸಿದೆ. ಅಲ್ಲದೇ ಯೋಗೇಶ್ ಗೌಡ ಪತ್ನಿ, ಸದ್ಯ ಕಾಂಗ್ರೆಸ್‍ನಲ್ಲಿರುವ ಮಲ್ಲಮ್ಮ, ಕೆಪಿಸಿಸಿ ಕಾರ್ಯದರ್ಶಿ ನಾಗರಾಜ್ ಗೌರಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಶಿವಾನಂದ ಕರಿಗಾರ್ ಅವರನ್ನು ವಿಚಾರಣೆ ನಡೆಸಿತ್ತು.
2017 ಜೂನ್ 15ರಂದು ಯೋಗೇಶ್ ಗೌಡನ ಕೊಲೆಯಾಗಿತ್ತು. ಅಂದು ಬೆಳಗ್ಗೆ ಧಾರವಾಡ ನಗರದ ಸಪ್ತಾಪುರ ಜಿಮ್‍ಗೆ ಎಂಟ್ರಿ ಕೊಟ್ಟಿದ್ದ ದುಷ್ಕರ್ಮಿಗಳು ಯೋಗೇಶ್ ಗೌಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿದ್ದರು. ಈ ದೃಶ್ಯವು ಜಿಮ್ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳನ್ನಾಧರಿಸಿ ಪೊಲೀಸರು ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು.
ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸ್‍ನಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಮನೆಗೆ ನಟ ದರ್ಶನ್ ಭೇಟಿ ನೀಡಿದ್ದಾರೆ.
ಧಾರವಾಡ ನಗರದ ಶಿವಗಿರಿಯಲ್ಲಿರುವ ಮನೆಗೆ ತಡರಾತ್ರಿ ಭೇಟಿ ನೀಡಿದ ಡಿ ಬಾಸ್, ವಿನಯ ಕುಟುಂಬ ಸದಸ್ಯರಿಗೆ ಆತ್ಮಸ್ಥೈರ್ಯ ತುಂಬಿದರು. ನಿನ್ನೆ ಹುಬ್ಬಳ್ಳಿಯಲ್ಲಿ ರಾಬರ್ಟ್ ಸಿನಿಮಾ ಆಡಿಯೋ ರೀಲಿಸ್‍ಗಾಗಿ ಆಗಮಿಸಿದ್ದ ನಟ ದರ್ಶನ್, ಮಧ್ಯಾಹ್ನವೇ ಕುಲಕರ್ಣಿ ಮನೆಗೆ ಭೇಟಿ ಮಾಡ್ತಾರೆ ಎಂದು ಮಾಹಿತಿ ಇತ್ತು.
ಈ ಹಿನ್ನೆಲೆ ದರ್ಶನ್ ಅಭಿಮಾನಿಗಳು ವಿನಯ ಮನೆ ಬಳಿ ಬಂದು ಕಾದು ಕುಳಿತಿದ್ರು. ಆದರೆ ದರ್ಶನ್ ತಡ ರಾತ್ರಿ 12 ಗಂಟೆಗೆ ವಿನಯ ಕುಟುಂಬಕ್ಕೆ ಭೇಟಿ ಮಾಡಿದ್ದಾರೆ. ವಿನಯ್ ಹಾಗೂ ದರ್ಶನ್ ಗೆಳೆತನ ಬಹಳ ವರ್ಷಗಳಿಂದ ಇದ್ದು, ದರ್ಶನ್ ಧಾರವಾಡಕ್ಕೆ ಬಂದರೆ, ವಿನಯ ಕುಲಕರ್ಣಿ ಹಾಲಿನ ಡೇರಿಯಲ್ಲೇ ಉಳಿದುಕೊಳ್ಳುತಿದ್ದರು.
ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನವೆಂಬರ್ 23ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಈ ಮೂಲಕ ಮಾಜಿ ಸಚಿವರು ಜೈಲಿನಲ್ಲಿಯೇ ದೀಪಾವಳಿ ಆಚರಿಸುವಂತಾಗಿದೆ.
ಇಂದು ವೀಡಿಯೋ ಕಾನ್ಫರನ್ಸ್ ಮೂಲಕ ಧಾರವಾಡದ 2ನೇ ಹೆಚ್ಚುವರಿ ನ್ಯಾಯಾಲಯದ ಎದುರು ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ಹಾಜರುಪಡಿಸಿದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ನ.23 ರವರೆಗೆ ಅಂದರೆ ಇಂದಿನಿಂದ 14 ದಿನಗಳ ಕಾಲ ವಿನಯ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಕೊನೆಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅರೆಸ್ಟ್
ಮೂರು ದಿನಗಳ ಸಿಬಿಐ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಧಾರವಾಡದ 3ನೇ ಹೆಚ್ಚುವರಿ ನ್ಯಾಯಾಲಯದ ಎದುರು ವಿನಯ್ ಅವರನ್ನು ಹಾಜರುಪಡಿಸಬೇಕಾಗಿತ್ತು. ವಿನಯ್ ಅವರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಅವಾಂತರದಿಂದಾಗಿ ಕೊನೆ ಕ್ಷಣದಲ್ಲಿ ಸಿಬಿಐ ಅಧಿಕಾರಿಗಳು ವೀಡಿಯೋ ಕಾನ್ಫರನ್ಸ್ ಮೂಲಕ ವಿನಯ್ ಅವರನ್ನು ನ್ಯಾಯಾಲಯದ ಎದುರು ಹಾಜರುಪಡಿಸಿದರು.ಇದನ್ನೂ ಓದಿ: ಬಿದ್ದು, ಎದ್ದು, ಗೆದ್ದು ಬರುವೆ- ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತೆ: ವಿನಯ್ ಕುಲಕರ್ಣಿ
ಹೆಚ್ಚಿನ ವಿಚಾರಣೆಗಾಗಿ ಸಿಬಿಐ ವಿನಯ್ ಅವರನ್ನು ತಮ್ಮ ಕಸ್ಟಡಿಗೆ ನೀಡುವಂತೆ ಸಿಬಿಐ ಅರ್ಜಿ ಸಲ್ಲಿಸಿರಲಿಲ್ಲ. ವಿನಯ್ ಪರ ವಕೀಲರೂ ಜಾಮೀನು ಕೋರಿ ಅರ್ಜಿಯನ್ನೂ ದಾಖಲಿಸಿರಲಿಲ್ಲ. ಹೀಗಾಗಿ ನ್ಯಾಯಾಲಯ ನ.23ರ ವರೆಗೂ ವಿನಯ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ. ಇದನ್ನೂ ಓದಿ: ನೂರಕ್ಕೆ ನೂರರಷ್ಟು ರಾಜಕೀಯ- ಪಬ್ಲಿಕ್ ಟಿವಿಗೆ ವಿನಯ್ ಕುಲಕರ್ಣಿ ಪ್ರತಿಕ್ರಿಯೆ
ಶನಿವಾರ ಹಾಗೂ ಭಾನುವಾರ ಬೆಳಕಿನ ಹಬ್ಬ ದೀಪಾವಳಿ ಆಚರಿಸಲಾಗುತ್ತಿದ್ದು, ಈ ಬೆಳಕಿನ ಹಬ್ಬವನ್ನು ಮಾಜಿ ಸಚಿವ ವಿನಯ್ ಕತ್ತಲಲ್ಲೇ ಆಚರಿಸುವಂತಾಗಿದೆ. ಪ್ರತಿವರ್ಷ ತಮ್ಮದೇ ಒಡೆತನದ ವಿನಯ್ ಡೇರಿಯಲ್ಲಿ ಅದ್ಧೂರಿಯಾಗಿ ದೀಪಾವಳಿ ಆಚರಣೆ ಮಾಡುತ್ತಿದ್ದ ವಿನಯ್, ಈ ವರ್ಷ ಜೈಲಿನಲ್ಲಿ ದೀಪಾವಳಿ ಆಚರಣೆ ಮಾಡುವಂತಾಗಿದೆ.
ಧಾರವಾಡ: ತಮ್ಮ ಬಂಧನ ರಾಜಕೀಯ ಪ್ರೇರಿತ ಎಂದು ಹೇಳಿರುವ ವಿನಯ್ ಕುಲಕರ್ಣಿ, ಬಿದ್ದು, ಎದ್ದು, ಗೆದ್ದು ಬರುವೆನು. ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ. ಆದರೆ ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೇ ಹೋಗುತ್ತದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಫೇಸ್ಬುಕ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿದ್ದು, ಎದ್ದು, ಗೆದ್ದು ಬರುವೆನು. ಸತ್ಯದ ತಳಹದಿಯಿಂದ ಎದ್ದು, ಗೆದ್ದು ಬರುವೆನು. ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ. ಆದರೆ ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೆ ಹೋಗುತ್ತದೆ. ಸತ್ಯಕ್ಕೆ ಸೋಲಿಲ್ಲ, ನನ್ನೆಲ್ಲಾ ಪ್ರೀತಿ ಪಾತ್ರರಿಗೆ ನನ್ನ ಮೇಲಿಟ್ಟಿರುವ ನಂಬಿಕೆಗೆ ನಾನು ಚಿರಋಣಿ, ನಿಮ್ಮೆಲ್ಲರ ಹಾರೈಕೆ ಹಾಗೂ ನಂಬಿಕೆ ಎಂದೂ ಸುಳ್ಳಾಗುವುದಿಲ್ಲ. ಇಂತಿ ನಿಮ್ಮ ವಿನಯ ಕುಲಕರ್ಣಿ ಎಂದು ಬರೆದುಕೊಂಡಿದ್ದಾರೆ.
ತಮ್ಮ ಪರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರ ಸಾಮಾಜಿಕ ಜಾಲತಾಣಗಳ ಪೋಸ್ಟ್ ಫೋಟೋ ಹಾಕಿ ವಿನಯ್ ಕುಲಕರ್ಣಿ ಸಾಲುಗಳನ್ನು ಬರೆದಿದ್ದಾರೆ.
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿ ಹಿಂಡಲಗಾ ಜೈಲಲ್ಲಿ ರಾತ್ರಿ ಕಳೆದಿದ್ದಾರೆ. ಗುರುವಾರ ಬೆಳಗ್ಗೆ ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದು ಬಂಧಿಸಿತ್ತು. 1 ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿಗೆ ಕರೆದುಕೊಂಡು ಹೋಗಲಾಗಿತ್ತು.
“Truth is generally the best vindication against slander”
ಬಿದ್ದು ಎದ್ದು ಗೆದ್ದು ಬರುವೆನು,
ಸತ್ಯದ ತಳಹದಿಯಿಂದ ಎದ್ದು ಗೆದ್ದು…
ಸದ್ಯ ಹಿಂಡಲಗಾ ಜೈಲಿನ ರೆಡ್ ಝೋನ್ ಸೆಲ್‍ನಲ್ಲಿ ಇರುವ ವಿನಯ್ ಕುಲಕರ್ಣಿ, ಕೋವಿಡ್ ಹಿನ್ನೆಲೆ ಜೈಲು ಸಿಬ್ಬಂದಿ ಸೆಲ್‍ನಲ್ಲಿ ಒಬ್ಬರನ್ನು ಇರಿಸಿದ್ದಾರೆ. ಸಾಮಾನ್ಯ ಕೈದಿಯಂತೆ ಒಂದು ರಾತ್ರಿ ಕಳೆದ ಮಾಜಿ ಸಚಿವರಿಗೆ ಸೆಲ್‍ನಲ್ಲಿ ಟಿವಿ ಸೇರಿದಂತೆ ಯಾವುದೇ ವ್ಯವಸ್ಥೆ ಇಲ್ಲ. ಸೊಳ್ಳೆ ಕಾಟ ತಾಳಲಾರದೆ ವಿನಯ್, ಸೊಳ್ಳೆ ಬತ್ತಿಯಾದ್ರೂ ಕೊಡಿ ಎಂದು ಜೈಲು ಸಿಬ್ಬಂದಿಗೆ ಮನವಿ ಮಾಡಿಕೊಂಡರು. ಊಟವೂ ಇಲ್ಲ, ರಾತ್ರಿಯಿಡೀ ನಿದ್ದೆ ಮಾಡದೆ ಯೋಚನೆಯಲ್ಲೇ ರಾತ್ರಿ ಕಳೆದಿದ್ದಾರೆ.
ಇಂದು ವೀಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆ ನಡೆಯಲಿದೆ. ವಿನಯ್ ಕುಲಕರ್ಣಿ ಅವರಿಗೆ ವಿಚಾರಣಾಧೀನ ಕೈದಿ ಸಂಖ್ಯೆ 16635 ನೀಡಲಾಗಿದೆ. ಕೋವಿಡ್ ಮಾರ್ಗಸೂಚಿ ಪ್ರಕಾರ ಜೈಲಿನ ಪ್ರತ್ಯೇಕ ಕ್ವಾರಂಟೈನ್ ಸೆಂಟರ್‍ನಲ್ಲಿ ಇಡಲಾಗಿದೆ.
ನಿನ್ನೆ ಸತತ 9 ಗಂಟೆಗಳ ಸಿಬಿಐ ಅಧಿಕಾರಿಗಳ ವಿಚಾರಣೆ ಎದುರಿಸಿದ ಬಳಿಕ ಅವರನ್ನು ಬಂಧಿಸಿ ವೈದ್ಯಕೀಯ ಪರೀಕ್ಷೆ ಹಾಗೂ ಕೊರೊನಾ ಪರೀಕ್ಷೆ ನಡೆಸಲು ಧಾರವಾಡ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ವಿಚಾರಣೆಯ ಕುರಿತು ಪ್ರತಿಕ್ರಿಯೆ ನೀಡಿದ್ದ ವಿನಯ್ ಕುಲಕರ್ಣಿ, ಈ ಕೇಸಿನಲ್ಲಿ ನೂರಕ್ಕೆ ನೂರರಷ್ಟು ರಾಜಕೀಯ ಇದೆ. ಇದರಲ್ಲಿ ಹೇಳೋದು ಏನಿದೆ ಎಂದು ಪ್ರಶ್ನೆ ಮಾಡಿ ಮುಂದೆ ಸಾಗಿದ್ದರು.
ಬೆಳಗಾವಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿ ಹಿಂಡಲಗಾ ಜೈಲಲ್ಲಿ ರಾತ್ರಿ ಕಳೆದಿದ್ದಾರೆ.
ಗುರುವಾರ ಬೆಳಗ್ಗೆ ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದು ಬಂಧಿಸಿತ್ತು. 1 ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿಗೆ ಕರೆದುಕೊಂಡು ಹೋಗಲಾಗಿತ್ತು. ಸದ್ಯ ಹಿಂಡಲಗಾ ಜೈಲಿನ ರೆಡ್ ಝೋನ್ ಸೆಲ್‍ನಲ್ಲಿ ಇರುವ ವಿನಯ್ ಕುಲಕರ್ಣಿ, ಕೋವಿಡ್ ಹಿನ್ನೆಲೆ ಜೈಲು ಸಿಬ್ಬಂದಿ ಸೆಲ್‍ನಲ್ಲಿ ಒಬ್ಬರನ್ನು ಇರಿಸಿದ್ದಾರೆ. ಸಾಮಾನ್ಯ ಕೈದಿಯಂತೆ ಒಂದು ರಾತ್ರಿ ಕಳೆದ ಮಾಜಿ ಸಚಿವರಿಗೆ ಸೆಲ್‍ನಲ್ಲಿ ಟಿವಿ ಸೇರಿದಂತೆ ಯಾವುದೇ ವ್ಯವಸ್ಥೆ ಇಲ್ಲ. ಸೊಳ್ಳೆ ಕಾಟ ತಾಳಲಾರದೆ ವಿನಯ್, ಸೊಳ್ಳೆ ಬತ್ತಿಯಾದ್ರೂ ಕೊಡಿ ಎಂದು ಜೈಲು ಸಿಬ್ಬಂದಿಗೆ ಮನವಿ ಮಾಡಿಕೊಂಡರು. ಊಟವೂ ಇಲ್ಲ, ರಾತ್ರಿಯಿಡೀ ನಿದ್ದೆ ಮಾಡದೆ ಯೋಚನೆಯಲ್ಲೇ ರಾತ್ರಿ ಕಳೆದಿದ್ದಾರೆ.
ಇಂದು ವೀಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆ ನಡೆಯಲಿದೆ. ವಿನಯ್ ಕುಲಕರ್ಣಿ ಅವರಿಗೆ ವಿಚಾರಣಾಧೀನ ಕೈದಿ ಸಂಖ್ಯೆ 16635 ನೀಡಲಾಗಿದೆ. ಕೋವಿಡ್ ಮಾರ್ಗಸೂಚಿ ಪ್ರಕಾರ ಜೈಲಿನ ಪ್ರತ್ಯೇಕ ಕ್ವಾರಂಟೈನ್ ಸೆಂಟರ್‍ನಲ್ಲಿ ಇಡಲಾಗಿದೆ. ಇದನ್ನೂ ಓದಿ: ಕೊನೆಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅರೆಸ್ಟ್
ನಿನ್ನೆ ಸತತ 9 ಗಂಟೆಗಳ ಸಿಬಿಐ ಅಧಿಕಾರಿಗಳ ವಿಚಾರಣೆ ಎದುರಿಸಿದ ಬಳಿಕ ಅವರನ್ನು ಬಂಧಿಸಿ ವೈದ್ಯಕೀಯ ಪರೀಕ್ಷೆ ಹಾಗೂ ಕೊರೊನಾ ಪರೀಕ್ಷೆ ನಡೆಸಲು ಧಾರವಾಡ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ವಿಚಾರಣೆಯ ಕುರಿತು ಪ್ರತಿಕ್ರಿಯೆ ನೀಡಿದ್ದ ವಿನಯ್ ಕುಲಕರ್ಣಿ, ಈ ಕೇಸಿನಲ್ಲಿ ನೂರಕ್ಕೆ ನೂರರಷ್ಟು ರಾಜಕೀಯ ಇದೆ. ಇದರಲ್ಲಿ ಹೇಳೋದು ಏನಿದೆ ಎಂದು ಪ್ರಶ್ನೆ ಮಾಡಿ ಮುಂದೆ ಸಾಗಿದ್ದರು.
ಬೆಂಗಳೂರು: ಯೋಗೇಶ್ ಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ. ಇದೇ ವೇಳೆ ಪ್ರಕರಣದ ವಿಚಾರವಣೆಯನ್ನು ರಾಜಕೀಯ ಪ್ರಭಾವಕ್ಕೆ ಒಳಗಾಗದೇ ಸಿಬಿಐ ತನಿಖೆ ನಡೆಸಲಿ ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಎಚ್‍ಡಿಕೆ, ಯಾವುದೇ ಹಳೆಯ ಪ್ರಕರಣವನ್ನು ತನಿಖೆ ನಡೆಸಿ ಕ್ರಮಕೈಗೊಳ್ಳಲು ಮುಂದಾದರೇ ರಾಜಕೀಯ ನಾಯಕರಾದ ನಾವು ಅದನ್ನು ರಾಜಕೀಯ ಪ್ರೇರಿತ ಎಂದು ಹೇಳಿ ಶೆಲ್ಟರ್ ಪಡೆದುಕೊಳ್ಳಲು ಯತ್ನಿಸುತ್ತೇವೆ ಎಂದು ಅಭಿಪ್ರಾಯಪಟ್ಟರು.
ಯೋಗೇಶ್ ಗೌಡ ಪ್ರಕರಣದಲ್ಲಿ ಸಾರ್ವಜನಿಕವಾಗಿ ಹಲವಾರು ಗುಮಾನಿ ಇತ್ತು. ಬಿಜೆಪಿ ಸರ್ಕಾರ ಬಂದು ತನಿಖೆಗೆ ಕೊಟ್ಟಿತ್ತು. ಪ್ರಕರಣದಲ್ಲಿ ನಿಜವಾದ ಸತ್ಯಾಸತ್ಯ ಹೊರ ಬರಬೇಕು. ಅಧಿಕಾರಿಗಳು ಪ್ರಾಮಾಣಿಕವಾಗಿ ರಾಜಕೀಯ ಪ್ರಭಾವಕ್ಕೆ ಒಳಗಾಗದೇ ತನಿಖೆ ಮಾಡಬೇಕು. ಆದರೆ ನನಗೆ ವಿನಯ್ ಕುಲಕರ್ಣಿ ಬಿಜೆಪಿಗೆ ಸೇರಲು ಹೊರಟಿದ್ರಾ ಎಂಬುವುದು ನನಗೆ ಗೊತ್ತಿಲ್ಲ. ಇದು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಿಗೆ ಮಾತ್ರ ತಿಳಿದಿರುತ್ತದೆ ಎಂದರು.
ಇದೇ ವೇಳೆ ಉಪಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನಿಡಿದ ಎಚ್‍ಡಿಕೆ, ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳು ಚುನಾವಣೆಯಲ್ಲಿ ಗೆಲುವು ಪಡೆದಿದ್ದೇವೆ ಎಂದು ಹೇಳುತ್ತಿದ್ದಾರೆ. ಚುನಾವಣೆ ಫಲಿತಾಂಶದ ನಂತರ ಸಿಎಂ, ವಿಪಕ್ಷ ಸ್ಥಾನ ಬದಲಾಗುತ್ತೆ ಅಂತಾ ಚರ್ಚೆ ಆಗುತ್ತಿದೆ. ಸಿಎಂ ಪುತ್ರ 25 ಸಾವಿರ ಮತದಲ್ಲಿ ಗೆದ್ದಿದ್ದೇವೆ ಅಂತಾರೆ. ಇಬ್ಬರ ಮಾತು ಕೇಳಿದ್ರೆ ನಾವು ಮೂರನೇ ಸ್ಥಾನಕ್ಕೆ ಬತ್ತೀವಾ ಅನ್ನಿಸುತ್ತಿದೆ. ಯಾರು ಏನೇ ಹೇಳಲಿ, ಏನೇ ಮಾಡಿ ಶಿರಾದಲ್ಲಿ ನಾವು ಗೆಲ್ತೀವಿ. ಜನರು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಆರ್‍ಆರ್ ನಗರದಲ್ಲಿ ನಮ್ಮ ಕಾರ್ಯಕರ್ತರು ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಿದ್ದು, ಆರ್.ಆರ್. ನಗರದಲ್ಲಿ ಗೆಲುವಿನ ಹತ್ತಿರಕ್ಕೆ ಹೋಗ್ತೀವಿ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿಬಿಐ ಬಿಜೆಪಿ ಸರ್ಕಾರದ ರಾಜಕೀಯ ದಾಳವಾಗಿದೆ: ಡಿಕೆಶಿ