Tag: ಯೋಗೇಶ್ ಗೌಡ

  • ತಮ್ಮನಂತೆ ಅಣ್ಣ ವಿನಯ್ ಕುಲಕರ್ಣಿಗೂ ಜನ್ಮದಿನ ಮುಂಚೆಯೇ ಸಿಬಿಐ ವಿಚಾರಣೆ

    ತಮ್ಮನಂತೆ ಅಣ್ಣ ವಿನಯ್ ಕುಲಕರ್ಣಿಗೂ ಜನ್ಮದಿನ ಮುಂಚೆಯೇ ಸಿಬಿಐ ವಿಚಾರಣೆ

    ಧಾರವಾಡ: ತಮ್ಮ ವಿಜಯ್ ಕುಲಕರ್ಣಿಯಂತೆ ಅಣ್ಣ ವಿನಯ್ ಕುಲಕರ್ಣಿಯನ್ನು ಕೂಡ ಸಿಬಿಐ ಅಧಿಕಾರಿಗಳು ವಿಚಾರಣೆಗೆ ಕರೆದೊಯ್ದಿದ್ದಾರೆ.

    ನವೆಂಬರ್ 7ರಂದು ವಿನಯ್ ಕುಲಕರ್ಣಿ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದರು. ಆದರೆ ಜನ್ಮದಿನಕ್ಕೂ ಮುಂಚೆಯೇ ವಿನಯ್ ಕುಲಕರ್ಣಿ ವಿಚಾರಣೆ ನಡೆಸಲಾಗುತ್ತಿದೆ. ಈ ಮೂಲಕ ತಮ್ಮನಂತೆ ಅಣ್ಣನಿಗೂ ಜನ್ಮದಿನ ಮುಂಚೆಯೇ ಸಿಬಿಐ ಅಧಿಕಾರಿಗಳು ಡ್ರಿಲ್ ಮಾಡಲಿದ್ದಾರೆ.

    ಈ ಹಿಂದೆ ಸೋದರ ವಿಜಯ್ ಕುಲಕರ್ಣಿಗೂ ಜನ್ಮದಿನ ಮುಂಚೆಯೇ ಬೆಂಗಳೂರಿನಲ್ಲಿ ವಿಚಾರಣೆ ನಡೆದಿತ್ತು. ಜನ್ಮದಿನದಂದು ಕೂಡ ಧಾರವಾಡದಲ್ಲಿ ಸಿಬಿಐ, ವಿಜಯ್ ವಿಚಾರಣೆ ನಡೆಸಿತ್ತು. ಈಗ ವಿನಯ್ ಜನ್ಮದಿನಕ್ಕೆ ಎರಡು ದಿನ ಇರುವಾಗಲೇ ಸಿಬಿಐ ವಶಕ್ಕೆ ಪಡೆದಿದೆ.

    2017 ಜೂನ್ 15ರಂದು ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡನ ಕೊಲೆಯಾಗಿತ್ತು. ಅಂದು ಬೆಳಗ್ಗೆ ಧಾರವಾಡ ನಗರದ ಸಪ್ತಾಪುರ ಜಿಮ್‍ಗೆ ಎಂಟ್ರಿ ಕೊಟ್ಟಿದ್ದ ದುಷ್ಕರ್ಮಿಗಳು ಯೋಗೇಶ್ ಗೌಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿದ್ದರು. ಈ ದೃಶ್ಯವು ಜಿಮ್ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳನ್ನಾಧರಿಸಿ ಪೊಲೀಸರು ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು. ಹೀಗಾಗಿ ಕೊಲೆಯ ಹಿಂದೆ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿತ್ತು.

    ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಪಿಗಳು ಯೋಗಿಶ್ ಗೌಡನ ಸಹೋದರನ ಜೊತೆ ರಾಜಿ ಮಾಡಿಕೊಳ್ಳಲು ಮುಂದಾಗಿದ್ದರು. ಇತ್ತ ವಿನಯ್ ಕುಲಕರ್ಣಿಯವರ ಹೆಸರನ್ನು ಕೈ ಬಿಡಲು ಅಧಿಕಾರಿಗಳು ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ ಎಂದು ಯೋಗೇಶ್ ಗೌಡ ತಾಯಿ ಆರೋಪಿಸಿದ್ದರುನಿದೀಗ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಇಂದು ಬೆಳ್ಳಂಬೆಳಗ್ಗೆ ವಿನಯ್ ಮನೆಗೆ ದಾಳಿ ಮಾಡಿದ ಸಿಬಿಐ ಅಧಿಕಾರಿಗಳು ಮಾಜಿ ಸಚಿವರನ್ನು ವಶಕ್ಕೆ ಪಡೆದಿದ್ದಾರೆ.

  • ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಸಿಬಿಐ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ತೀವ್ರ ತನಿಖೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿಯನ್ನು ವಶಕ್ಕೆ ಪಡೆದಿದ್ದಾರೆ.

    ಇಂದು ಬೆಳ್ಳಂಬೆಳಗ್ಗೆ ಧಾರವಾಡದ ಬರಾಕೊಟ್ರಿಯಲ್ಲಿರುವ ಕುಲಕರ್ಣಿ ನಿವಾಸಕ್ಕೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಸಿಬಿಐ ಅಧಿಕಾರಿ ರಾಕೇಶ್ ರಂಜನ್ ನೇತೃತ್ವದ 6 ಮಂದಿಯ ತಂಡ ಕುಲಕರ್ಣಿಯನ್ನು ವಶಕ್ಕೆ ಪಡೆದು, ಧಾರವಾಡ ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ. ವಿನಯ್ ಕುಲಕರ್ಣಿ ತನ್ನದೇ ವಾಹನದಲ್ಲಿ ಪೊಲೀಸ್ ಠಾಣೆಗೆ ತೆರಳಿದ್ದಾರೆ.

    2017 ಜೂನ್ 15ರಂದು ಯೋಗೇಶ್ ಗೌಡನ ಕೊಲೆಯಾಗಿತ್ತು. ಅಂದು ಬೆಳಗ್ಗೆ ಧಾರವಾಡ ನಗರದ ಸಪ್ತಾಪುರ ಜಿಮ್‍ಗೆ ಎಂಟ್ರಿ ಕೊಟ್ಟಿದ್ದ ದುಷ್ಕರ್ಮಿಗಳು ಯೋಗೇಶ್ ಗೌಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿದ್ದರು. ಈ ದೃಶ್ಯವು ಜಿಮ್ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳನ್ನಾಧರಿಸಿ ಪೊಲೀಸರು ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು. ಹೀಗಾಗಿ ಕೊಲೆಯ ಹಿಂದೆ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿತ್ತು.

    ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಪಿಗಳು ಯೋಗಿಶ್ ಗೌಡನ ಸಹೋದರನ ಜೊತೆ ರಾಜಿ ಮಾಡಿಕೊಳ್ಳಲು ಮುಂದಾಗಿದ್ದರು. ಇತ್ತ ವಿನಯ್ ಕುಲಕರ್ಣಿಯವರ ಹೆಸರನ್ನು ಕೈ ಬಿಡಲು ಅಧಿಕಾರಿಗಳು ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ ಎಂದು ಯೋಗೇಶ್ ಗೌಡ ತಾಯಿ ಆರೋಪಿಸಿದ್ದರು.

    ರಾಜ್ಯ ಸರ್ಕಾರ 2019 ಸೆಪ್ಟೆಂಬರ್ 9ರಂದು ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಅಧಿಕೃತವಾಗಿ ಸಿಬಿಐಗೆ ಹಸ್ತಾಂತರಿಸಿತ್ತು. ತನಿಖೆ ಆರಂಭಿಸಿರುವ ಸಿಬಿಐ ಪ್ರಕರಣದ ಆರೋಪಿಗಳಾದ ಬಸವರಾಜ ಶಿವಪ್ಪ, ವಿಕ್ರಮ್ ಬಳ್ಳಾರಿ, ಕೀರ್ತಿ ಕುಮಾರ್ ಕುರಹಟ್ಟಿ, ಸಂದೀಪ್ ಸೌದತ್ತಿ, ವಿನಾಯಕ ಕಾಟಗಿ ಹಾಗೂ ಮಹಾಬಲೇಶ್ವರ ಹೊನಗಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ.

  • ಯೋಗೇಶ್‌ ಗೌಡ ಕೇಸ್‌ – ಮಾಜಿ ಸಚಿವ ವಿನಯ್‌ ಕುಲಕರ್ಣಿ ಸಹೋದರನಿಗೆ ಸಿಬಿಐ ಡ್ರಿಲ್‌

    ಯೋಗೇಶ್‌ ಗೌಡ ಕೇಸ್‌ – ಮಾಜಿ ಸಚಿವ ವಿನಯ್‌ ಕುಲಕರ್ಣಿ ಸಹೋದರನಿಗೆ ಸಿಬಿಐ ಡ್ರಿಲ್‌

    ಬೆಂಗಳೂರು: ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಕೊಲೆ ಪ್ರಕರಣದ ಸಿಬಿಐ ತನಿಖೆ ಮತ್ತೆ ಚುರುಕು ಪಡೆದಿದೆ. ಇಂದು ಮಾಜಿ ಮಂತ್ರಿ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಸಿಬಿಐ ವಿಚಾರಣೆ ಎದುರಿಸಿದ್ದಾರೆ.

    ನೋಟಿಸ್‌ ಜಾರಿ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಸಿಬಿಐ ಕಚೇರಿಗೆ ಬೆಳಗ್ಗೆ 10.30ಕ್ಕೆ ಹಾಜರಾದ ವಿಜಯ್ ಕುಲಕರ್ಣಿಗೆ 7 ಗಂಟೆಗಳ ಕಾಲ ಸಿಬಿಐ ಫುಲ್ ಡ್ರಿಲ್ ಮಾಡಿದೆ.

    ಯೋಗೇಶ್‌ ಗೌಡ
    ಯೋಗೇಶ್‌ ಗೌಡ

    ವಿಚಾರಣೆ ಬಳಿಕ ಮಾತನಾಡಿದ ಅವರು, ಈ ಪ್ರಕರಣದಲ್ಲಿ 537 ಮಂದಿ ವಿಚಾರಣೆ ನಡೆಸಲಾಗಿದೆ. ಇದ್ರಲ್ಲಿ ನಾನು ಒಬ್ಬ ಅಷ್ಟೇ ಎಂದಿದ್ದಾರೆ. ವಿಚಾರಣೆಗೆ ಮತ್ತೆ ಕರೆದರೆ ಬರುತ್ತೇನೆ. ಈ ಹಂತದಲ್ಲಿ ಹೆಚ್ಚು ಮಾತನಾಡುವುದಿಲ್ಲ.

    ಈಗಾಗಲೇ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಆರು ಆರೋಪಿಗಳ ವಿರುದ್ಧ ಸಿಬಿಐ ಎಫ್‍ಐಆರ್ ದಾಖಲಿಸಿದೆ. ಹೆಚ್ಚಿನ ವಿಚಾರಣೆಗಾಗಿ ಶೀಘ್ರವೇ ಮಾಜಿ ಸಚಿವ ವಿನಯ್ ಕುಲಕರ್ಣಿಗೂ ಸಹ ಸಿಬಿಐ ನೋಟಿಸ್ ಕೊಡುವ ಸಾಧ್ಯತೆ ಇದೆ.

    ಸಿಬಿಐ ತನಿಖೆ ಬಗ್ಗೆ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದ್ದಾರೆ. ಅನಗತ್ಯವಾಗಿ ಸಿಬಿಐ ವಿಚಾರಣೆ ಮಾಡುತ್ತಿದೆ ಎಂದು ಆಪಾದಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿದ ಸಚಿವ ಶೆಟ್ಟರ್, ತಪ್ಪು ಮಾಡಿಲ್ಲ ಅಂದ್ರೆ ಸಿಬಿಐ ತನಿಖೆಗೆ ಹೆದರೋದ್ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ.

  • ಯೋಗೇಶ್‍ಗೌಡ ಕೊಲೆ ಪ್ರಕರಣ- ಪೇದೆಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ಸಿಬಿಐ

    ಯೋಗೇಶ್‍ಗೌಡ ಕೊಲೆ ಪ್ರಕರಣ- ಪೇದೆಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ಸಿಬಿಐ

    ಹುಬ್ಬಳ್ಳಿ: ಧಾರವಾಡ ಜಿ.ಪಂ ಸದಸ್ಯ ಯೋಗೇಶ್‍ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ಚುರುಕುಗೊಳಿಸಿದ್ದು, ಬೆಂಡಿಗೇರಿ ಪೊಲೀಸ್ ಠಾಣೆಯ ಮುಖ್ಯ ಪೇದೆಯೊಬ್ಬರನ್ನು ವಿಚಾರಣೆಗೆ ಒಳಪಡಿಸಿದೆ.

    ಬೆಂಡಿಗೇರಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಬಾಬು ಕಟಗಿಯನ್ನು ಸಿಬಿಐ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ. ಬಾಬು ಕಟಗಿ ಯೋಗೇಶ್ ಗೌಡ ಕೊಲೆಯಲ್ಲಿ ಪೇದೆಯ ಪಾತ್ರದ ಬಗ್ಗೆ ವಿಚಾರಣೆ ನಡೆಸಲಾಗಿದ್ದು, ಬಾಬು ಕಟಗಿ ಕೊಲೆ ಆರೋಪಿಗಳ ನಿರಂತರ ಸಂಪರ್ಕದಲ್ಲಿದ್ದರು ಎಂಬುವ ಮಾಹಿತಿ ಸಿಬಿಐ ಮೂಲಗಳಿಂದ ತಿಳಿದು ಬಂದಿದೆ.

    ಕೊಲೆಯಾದ ದಿನವೂ ಆರೋಪಿಗಳ ಜೊತೆ ಬಾಬು ಕಟಗಿ ಸಂಪರ್ಕದಲ್ಲಿದ್ದರು ಎನ್ನಲಾಗಿದ್ದು, ಕೊಲೆ ನಡೆದ ದಿನ ಪೇದೆ ರಜೆಯಲ್ಲಿದ್ದರೂ ಘಟನಾ ಸ್ಥಳದಲ್ಲಿ ಉಪಸ್ಥಿತರಿದ್ದ ಬಗ್ಗೆ ಸಿಬಿಐಗೆ ಸಾಕ್ಷ್ಯಗಳು ದೊರೆತಿವೆ. ಈ ಹಿನ್ನೆಲೆಯಲ್ಲಿ ಸಿಬಿಐ ತೀವ್ರ ವಿಚಾರಣೆಗೆ ಒಳಪಡಿಸಿದೆ. ವಿಚಾರಣೆ ವೇಳೆ ಪೊಲೀಸ್ ಪೇದೆ ಹಲವು ಮಹಿಳೆಯರ ಜೊತೆ ಸಂಪರ್ಕದಲ್ಲಿದ್ದ ವಿಚಾರದ ಬಗ್ಗೆಯೂ ಸಿಬಿಐ ಮಾಹಿತಿ ಕಲೆ ಹಾಕಿದೆ.

    2017 ಜೂನ್ 15ರಂದು ಯೋಗೇಶ್ ಗೌಡನ ಕೊಲೆಯಾಗಿತ್ತು. ಅಂದು ಬೆಳಗ್ಗೆ ಧಾರವಾಡ ನಗರದ ಸಪ್ತಾಪುರ ಜಿಮ್‍ಗೆ ಎಂಟ್ರಿ ಕೊಟ್ಟಿದ್ದ ದುಷ್ಕರ್ಮಿಗಳು ಯೋಗೇಶ್ ಗೌಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿದ್ದರು. ಈ ದೃಶ್ಯವು ಜಿಮ್ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳನ್ನಾಧರಿಸಿ ಪೊಲೀಸರು ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು.

  • ಯೋಗೇಶ್‍ಗೌಡ ಕೊಲೆ ಪ್ರಕರಣ – ಸುಪಾರಿ ಕಿಲ್ಲರ್ಸ್ 5 ದಿನ ಸಿಬಿಐ ವಶಕ್ಕೆ

    ಯೋಗೇಶ್‍ಗೌಡ ಕೊಲೆ ಪ್ರಕರಣ – ಸುಪಾರಿ ಕಿಲ್ಲರ್ಸ್ 5 ದಿನ ಸಿಬಿಐ ವಶಕ್ಕೆ

    ಧಾರವಾಡ: ಜಿಲ್ಲಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್‍ಗೌಡ ಕೊಲೆ ಪ್ರಕರಣದ ಸುಪಾರಿ ತೆಗೆದುಕೊಂಡಿದ್ದಾರೆ ಎನ್ನಲಾದ ಆರೋಪಿಗಳನ್ನು ನ್ಯಾಯಾಲಯ 5 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿದೆ.

    ಭಾನುವಾರ ಸಿಬಿಐ ಅಧಿಕಾರಿಗಳು ಬೆಂಗಳೂರಿನಿಂದ ಈ ಸುಪಾರಿ ಕಿಲ್ಲರ್ಸ್‍ಗಳನ್ನು ಧಾರವಾಡಕ್ಕೆ ಕರೆ ತಂದು, ನ್ಯಾಯಾಧೀಶರ ಬಳಿ ಹಾಜರು ಪಡಿಸಿದ್ದರು. ನ್ಯಾಯಾಧೀಶರು ಆರೋಪಿಗಳನ್ನು ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು. ಇವತ್ತು ಸಿಬಿಐ ಅಧಿಕಾರಿಗಳು ಮತ್ತೇ ಧಾರವಾಡ ಪ್ರಧಾನ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶರ ಎದುರು 6 ಆರೋಪಿಗಳನ್ನ ಹಾಜರು ಪಡಿಸಿ ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು.

    ಈ ಹಿನ್ನೆಲೆ ನ್ಯಾಯಾಲಯ 6 ಆರೋಪಿಗಳನ್ನು ಮಾರ್ಚ್ 7ರ ವರೆಗೆ 5 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿದೆ. ಸದ್ಯ ದಿನೇಶ್, ಸುನೀಲ್ ಕುಮಾರ್, ನೂತನ್, ಅಶ್ವತ್, ಶಾನವಾಜ್, ನಜೀರ ಅಹ್ಮದನನ್ನು ವಶಕ್ಕೆ ಪಡೆದಿರುವ ಸಿಬಿಐ ಅಧಿಕಾರಿಗಳಿಗೆ ಹೆಚ್ಚಿನ ವಿಚಾರಣೆಗೆ ಅವಕಾಶ ಸಿಕ್ಕಿದೆ.

    2016ರ ಜೂನ್ 15ರಂದು ನಡೆದಿದ್ದ ಯೋಗೇಶ್‍ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು 6 ಆರೋಪಿಗಳನ್ನು ಬಂಧಿಸಲಾಗಿತ್ತು. ಯೋಗೇಶ್‍ಗೌಡ ಸಹೋದರ ಕೂಡಾ ಈ ಪ್ರಕರಣದಲ್ಲಿ ಕಾಣದ ಕೈಗಳಿದ್ದು, ಅವರನ್ನು ಹಿಡಿದು ಸಿಬಿಐ ಅಧಿಕಾರಿಗಳು ನಮಗೆ ನ್ಯಾಯ ಕೊಡಿಸುತ್ತಾರೆ ಎಂಬ ಭರವಸೆ ಇದೆ ಎಂದು ಹೇಳಿದ್ದಾರೆ.

  • ಯೋಗೇಶ್ ಗೌಡ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

    ಯೋಗೇಶ್ ಗೌಡ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

    ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ಸಿಬಿಐ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

    ರಾಜ್ಯ ಸರ್ಕಾರವು ಸೆಪ್ಟೆಂಬರ್ 9ರಂದು ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಅಧಿಕೃತವಾಗಿ ಸಿಬಿಐಗೆ ಹಸ್ತಾಂತರಿಸಿತ್ತು. ತನಿಖೆ ಆರಂಭಿಸಿದ್ದ ಸಿಬಿಐ ಪ್ರಮುಖ ಆರೋಪಿಗಳಾದ ಬಸವರಾಜ ಶಿವಪ್ಪ ಮುತ್ತಗಿ, ವಿಕ್ರಮ್ ಬಳ್ಳಾರಿ, ಕೀರ್ತಿ ಕುಮಾರ್ ಕುರಹಟ್ಟಿ, ಸಂದೀಪ್ ಸೌದತ್ತಿ, ವಿನಾಯಕ ಕಾಟಗಿ ಹಾಗೂ ಮಹಾಬಲೇಶ್ವರ ಹೊನಗಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿತ್ತು.

    ರಾಜ್ಯ ಸರ್ಕಾರದ ಆದೇಶ ರದ್ದು ಮಾಡುವಂತೆ ಕೋರಿ ಪ್ರಕರಣದ ಮೊದಲ ಆರೋಪಿ ಬಸವರಾಜ ಶಿವಪ್ಪ ಮುತ್ತಗಿ ಹೈಕೋರ್ಟ್ ಮೆಟ್ಟಿಲೇರಿದ್ದ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.

    2017 ಜೂನ್ 15ರಂದು ಯೋಗೇಶ್ ಗೌಡನ ಕೊಲೆಯಾಗಿತ್ತು. ಅಂದು ಬೆಳಗ್ಗೆ ಧಾರವಾಡ ನಗರದ ಸಪ್ತಾಪುರ ಜಿಮ್‍ಗೆ ಎಂಟ್ರಿ ಕೊಟ್ಟಿದ್ದ ದುಷ್ಕರ್ಮಿಗಳು ಯೋಗೇಶ್ ಗೌಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿದ್ದರು. ಈ ದೃಶ್ಯವು ಜಿಮ್ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳನ್ನಾಧರಿಸಿ ಪೊಲೀಸರು ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು. ಹೀಗಾಗಿ ಕೊಲೆಯ ಹಿಂದೆ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿತ್ತು.

    ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಪಿಗಳು ಯೋಗಿಶ್ ಗೌಡನ ಸಹೋದರನ ಜೊತೆ ರಾಜಿ ಮಾಡಿಕೊಳ್ಳಲು ಮುಂದಾಗಿದ್ದರು. ಇತ್ತ ವಿನಯ್ ಕುಲಕರ್ಣಿಯವರ ಹೆಸರನ್ನು ಕೈ ಬಿಡಲು ಅಧಿಕಾರಿಗಳು ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ ಎಂದು ಯೋಗೇಶ್ ಗೌಡ ತಾಯಿ ಆರೋಪಿಸಿದ್ದರು.

    https://www.youtube.com/watch?v=vpNnQPrC3pg

  • ಯೋಗೇಶ್ ಗೌಡ ಕೊಲೆ ಕೇಸ್: ಸಿಬಿಐನಿಂದ 6 ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲು

    ಯೋಗೇಶ್ ಗೌಡ ಕೊಲೆ ಕೇಸ್: ಸಿಬಿಐನಿಂದ 6 ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲು

    ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ತನಿಖೆ ಆರಂಭಿಸಿರುವ ಸಿಬಿಐ ಆರು ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿದೆ.

    ರಾಜ್ಯ ಸರ್ಕಾರ ಸೆಪ್ಟೆಂಬರ್ 9ರಂದು ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಅಧಿಕೃತವಾಗಿ ಸಿಬಿಐಗೆ ಹಸ್ತಾಂತರಿಸಿತ್ತು. ತನಿಖೆ ಆರಂಭಿಸಿರುವ ಸಿಬಿಐ ಪ್ರಕರಣದ ಆರೋಪಿಗಳಾದ ಬಸವರಾಜ ಶಿವಪ್ಪ, ವಿಕ್ರಮ್ ಬಳ್ಳಾರಿ, ಕೀರ್ತಿ ಕುಮಾರ್ ಕುರಹಟ್ಟಿ, ಸಂದೀಪ್ ಸೌದತ್ತಿ, ವಿನಾಯಕ ಕಾಟಗಿ ಹಾಗೂ ಮಹಾಬಲೇಶ್ವರ ಹೊನಗಲ್ ವಿರುದ್ಧ ಪ್ರಕರಣ ದಾಖಸಿಕೊಂಡಿದೆ.

    2017 ಜೂನ್ 15ರಂದು ಯೋಗೇಶ್ ಗೌಡನ ಕೊಲೆಯಾಗಿತ್ತು. ಅಂದು ಬೆಳಗ್ಗೆ ಧಾರವಾಡ ನಗರದ ಸಪ್ತಾಪುರ ಜಿಮ್‍ಗೆ ಎಂಟ್ರಿ ಕೊಟ್ಟಿದ್ದ ದುಷ್ಕರ್ಮಿಗಳು ಯೋಗೇಶ್ ಗೌಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿದ್ದರು. ಈ ದೃಶ್ಯವು ಜಿಮ್ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳನ್ನಾಧರಿಸಿ ಪೊಲೀಸರು ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು. ಹೀಗಾಗಿ ಕೊಲೆಯ ಹಿಂದೆ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿತ್ತು.

    ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಪಿಗಳು ಯೋಗಿಶ್ ಗೌಡನ ಸಹೋದರನ ಜೊತೆ ರಾಜಿ ಮಾಡಿಕೊಳ್ಳಲು ಮುಂದಾಗಿದ್ದರು. ಇತ್ತ ವಿನಯ್ ಕುಲಕರ್ಣಿಯವರ ಹೆಸರನ್ನು ಕೈ ಬಿಡಲು ಅಧಿಕಾರಿಗಳು ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ ಎಂದು ಯೋಗೇಶ್ ಗೌಡ ತಾಯಿ ಆರೋಪಿಸಿದ್ದರು.

    ಈ ಎಲ್ಲ ಬೆಳವಣಿಗೆ ನಡುವೆ 2017ರಲ್ಲಿ ಯೋಗೇಶ್ ಗೌಡ ಪತ್ನಿ ಮಲ್ಲಮ್ಮ ಕಾಂಗ್ರೆಸ್ ಸೇರುವ ಮೂಲಕ ಹಲವು ಅಚ್ಚರಿಗೆ ಕಾರಣವಾಗಿದ್ದರು. ಆದರೆ ಬಿಜೆಪಿ ನಾಯಕರು ಮಲ್ಲಮ್ಮ ಅವರನ್ನು ಕಾಂಗ್ರೆಸ್ ನಾಯಕರು ಹೈಜಾಕ್ ಮಾಡಿದ್ದಾರೆ. ಬೆದರಿಸಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದ ಮಲ್ಲಮ್ಮ, ನಾನು ಸ್ವಇಚ್ಛೆಯಿಂದ ಕಾಂಗ್ರೆಸ್ ಸೇರಿದ್ದೇನೆ ಎಂದಿದ್ದರು.

    ನನ್ನ ಗಂಡನ ಹತ್ಯೆಯಲ್ಲಿ ವಿನಯ್ ಕುಲಕರ್ಣಿ ಪಾತ್ರ ಇದೆ ಅಂತ ನಾನು ಸುಮ್ಮನೆ ಆರೋಪ ಮಾಡಲ್ಲ. ಗಂಡನನ್ನು ಕೊಂದವರಿಗೆ ಶಿಕ್ಷೆ ಆಗಬೇಕು. ನನಗೂ, ನನ್ನ ನಾಲ್ಕು ಮಕ್ಕಳಿಗೂ ನ್ಯಾಯ ಸಿಗಬೇಕು. ಸಿದ್ದರಾಮಯ್ಯ ನಮ್ಮ ಜಾತಿಯವರು. ಅವರ ಬಳಿ ಹೋದರೆ ನನಗೆ ನ್ಯಾಯ ಸಿಗುತ್ತೆ. ಅವರು ಸೇರಿಸಿಕೊಂಡ್ರೆ ನಾನು ಕಾಂಗ್ರೆಸ್ ಸೇರುತ್ತೇನೆ. ವಿನಯ್ ಕುಲಕರ್ಣಿ ಇದುವರೆಗೆ ನನ್ನೊಂದಿಗೆ ಯಾವತ್ತೂ ಮಾತನಾಡಿಲ್ಲ. ನನ್ನ ಭಾವ ಗುರುನಾಥ್ ಗೌಡ ಪ್ರತಿಯೊಂದಕ್ಕೂ ನನಗೆ ಅಡ್ಡಿಪಡಿಸುತ್ತಿದ್ದಾರೆ. ನಾನು ಯಾರನ್ನು ನಂಬುವ ಸ್ಥಿತಿಯಲ್ಲಿ ಇಲ್ಲ. ಗಂಡನ ಸಾವನ್ನು ನನ್ನ ಭಾವ ಹಾಗೂ ಸ್ಥಳೀಯ ನಾಯಕರು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಅಂತ ಮಲ್ಲಮ್ಮ ತನ್ನ ಅಳಲು ತೋಡಿಕೊಂಡಿದ್ದರು.

    ಆರೋಪಿಗಳ ಕೊಲೆಗೆ ಸ್ಕೆಚ್:
    ಯೋಗೇಶ್ ಗೌಡ ಪ್ರಕರಣದಲ್ಲಿ ಧಾರವಾಡದ ಕೇಂದ್ರ ಕಾರಾಗೃಹದಲ್ಲಿದ್ದ ಬಸವರಾಜ್ ಮುತ್ತಗಿ, ಕೀರ್ತಿ, ವಿನಾಯಕ್, ಮುದಕಪ್ಪ ಮತ್ತು ಸಂದೀಪ್ ಕೊಲೆಗೆ ಸಂಚು ರೂಪಿಸಲಾಗಿತ್ತು. ಯೋಗೇಶ್ ಗೌಡ ಸಹೋದರ ಗುರುನಾಥ್ ಗೌಡ ತನ್ನ ಸಹಚರರಾದ ಲಕ್ಷ್ಮಣ್, ಹನುಮಂತ್ ಮತ್ತು ಸಂಜಯ್ ಮೂಲಕ ಕೊಲೆಗೆ ಸಂಚು ರೂಪಿಸಿದ್ದನು. ಈ ನಾಲ್ವರ ಮಾತನಾಡಿರುವ ಆಡಿಯೋ ಟೇಪ್ ಪೊಲೀಸರಿಗೆ ಲಭ್ಯವಾಗಿದ್ದರಿಂದ ದೊಡ್ಡ ಅನಾಹುತವನ್ನು ತಡೆದಿದ್ದರು. ಸದ್ಯ ಪ್ರಕರಣದ ಎಲ್ಲ ಆರೋಪಿಗಳು ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ.

    ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳಿಗೆ ಉತ್ತರವೇ ಸಿಕ್ಕಿಲ್ಲ. ವಿನಯ್ ಕುಲಕರ್ಣಿ ಮಾತ್ರ ಬಿಜೆಪಿ ನಾಯಕರು ರಾಜಕೀಯ ದ್ವೇಷದಿಂದ ನನ್ನ ಹೆಸರನ್ನು ಈ ಪ್ರಕರಣದಲ್ಲಿ ಎಳೆದು ತರುತ್ತಿದ್ದಾರೆ. ನನಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ಪ್ರಕರಣ ಸಿಬಿಐಗೆ ವರ್ಗಾವಣೆ ಆಗಿದ್ದರಿಂದ ವಿನಯ್ ಕುಲಕರ್ಣಿ ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳು ಹೆಚ್ಚಿವೆ.

  • ಯೋಗಿಶ್ ಗೌಡ ಹತ್ಯೆ ಪ್ರಕರಣ-ಸಿಬಿಐಗೆ ಹಸ್ತಾಂತರ

    ಯೋಗಿಶ್ ಗೌಡ ಹತ್ಯೆ ಪ್ರಕರಣ-ಸಿಬಿಐಗೆ ಹಸ್ತಾಂತರ

    ಬೆಂಗಳೂರು: ಧಾರವಾಡ ಜಿ.ಪಂ. ಸದಸ್ಯ ಯೋಗಿಶ್ ಗೌಡ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಸಿಬಿಐಗೆ ಹಸ್ತಾಂತರಿಸಿದೆ.

    2017 ಜೂನ್ 15ರಂದು ಯೋಗಿಶ್ ಗೌಡನ ಕೊಲೆಯಾಗಿತ್ತು. ಅಂದು ಬೆಳಗ್ಗೆ ಧಾರವಾಡ ನಗರದ ಸಪ್ತಾಪುರ ಜಿಮ್‍ಗೆ ಎಂಟ್ರಿ ಕೊಟ್ಟಿದ್ದ ದುಷ್ಕರ್ಮಿಗಳು ಯೋಗಿಶ್ ಗೌಡನನ್ನು ಹತ್ಯೆಗೈದಿದ್ದರು. ಜಿಮ್ ಸಿಸಿಟಿವಿ ದೃಶ್ಯಗಳನ್ನಾಧರಿಸಿ ಪೊಲೀಸ್ ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು. ಹೀಗಾಗಿ ಕೊಲೆಯ ಹಿಂದೆ ವಿನಯ್ ಕುಲಕರ್ಣಿಯವರ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು.

    ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಪಿಗಳು ಯೋಗಿಶ್ ಗೌಡನ ಸೋದರನ ಜೊತೆ ರಾಜಿ ಮಾಡಿಕೊಳ್ಳಲು ಮುಂದಾಗಿದ್ದರು. ಇತ್ತ ವಿನಯ್ ಕುಲಕರ್ಣಿಯವರ ಹೆಸರನ್ನು ಕೈ ಬಿಡಲು ಅಧಿಕಾರಿಗಳು ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ ಎಂದು ಯೋಗಿಶ್ ಗೌಡ ತಾಯಿ ಆರೋಪಿಸಿದ್ದರು.

    ಈ ಎಲ್ಲ ಬೆಳವಣಿಗೆ ನಡುವೆ 2017ರಲ್ಲಿ ಯೋಗಿಶ್ ಗೌಡ ಪತ್ನಿ ಮಲ್ಲಮ್ಮ ಕಾಂಗ್ರೆಸ್ ಸೇರುವ ಮೂಲಕ ಹಲವು ಅಚ್ಚರಿಗೆ ಕಾರಣವಾಗಿದ್ದರು. ಆದರೆ ಬಿಜೆಪಿ ನಾಯಕರು ಮಲ್ಲಮ್ಮ ಅವರನ್ನು ಕಾಂಗ್ರೆಸ್ ನಾಯಕರು ಹೈಜಾಕ್ ಮಾಡಿದ್ದಾರೆ. ಬೆದರಿಸಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದ ಮಲ್ಲಮ್ಮ, ನಾನು ಸ್ವಇಚ್ಛೆಯಿಂದ ಕಾಂಗ್ರೆಸ್ ಸೇರಿದ್ದೇನೆ ಎಂದಿದ್ದರು.

    ಬಸವರಾಜ್ ಮುತ್ತಗಿ ಮತ್ತು ಅವನ ಸಹಚರರು

    ನನ್ನ ಗಂಡನ ಹತ್ಯೆಯಲ್ಲಿ ವಿನಯ್ ಕುಲಕರ್ಣಿ ಪಾತ್ರ ಇದೆ ಅಂತ ನಾನು ಸುಮ್ಮನೆ ಆರೋಪ ಮಾಡಲ್ಲ. ಗಂಡನನ್ನು ಕೊಂದವರಿಗೆ ಶಿಕ್ಷೆ ಆಗಬೇಕು. ನನಗೂ, ನನ್ನ ನಾಲ್ಕು ಮಕ್ಕಳಿಗೂ ನ್ಯಾಯ ಸಿಗಬೇಕು. ಸಿದ್ದರಾಮಯ್ಯ ನಮ್ಮ ಜಾತಿಯವರು. ಅವರ ಬಳಿ ಹೋದರೆ ನನಗೆ ನ್ಯಾಯ ಸಿಗುತ್ತೆ. ಅವರು ಸೇರಿಸಿಕೊಂಡ್ರೆ ನಾನು ಕಾಂಗ್ರೆಸ್ ಸೇರುತ್ತೇನೆ. ವಿನಯ್ ಕುಲಕರ್ಣಿ ಇದುವರೆಗೆ ನನ್ನೊಂದಿಗೆ ಯಾವತ್ತೂ ಮಾತಾಡಿಲ್ಲ. ನನ್ನ ಭಾವ ಗುರುನಾಥ್ ಗೌಡ ಪ್ರತಿಯೊಂದಕ್ಕೂ ನನಗೆ ಅಡ್ಡಿಪಡಿಸುತ್ತಿದ್ದಾರೆ. ನಾನು ಯಾರನ್ನು ನಂಬುವ ಸ್ಥಿತಿಯಲ್ಲಿ ಇಲ್ಲ. ಗಂಡನ ಸಾವನ್ನು ನನ್ನ ಭಾವ ಹಾಗೂ ಸ್ಥಳೀಯ ನಾಯಕರು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಅಂತ ಮಲ್ಲಮ್ಮ ತನ್ನ ಅಳಲು ತೋಡಿಕೊಂಡಿದ್ದರು.

    ಗುರುನಾಥ್ ಗೌಡ

    ಆರೋಪಿಗಳ ಕೊಲೆಗೆ ಸ್ಕೆಚ್: ಯೋಗಿಶ್ ಗೌಡ ಪ್ರಕರಣದಲ್ಲಿ ಧಾರವಾಡದ ಕೇಂದ್ರ ಕಾರಾಗೃಹದಲ್ಲಿದ್ದ ಬಸವರಾಜ್ ಮುತ್ತಗಿ, ಕೀರ್ತಿ, ವಿನಾಯಕ್, ಮುದಕಪ್ಪ ಮತ್ತು ಸಂದೀಪ್ ಕೊಲೆಗೆ ಸಂಚು ರೂಪಿಸಲಾಗಿತ್ತು. ಯೋಗಿಶ್ ಗೌಡ ಸೋದರ ಗುರುನಾಥ್ ಗೌಡ ತನ್ನ ಸಹಚರರಾದ ಲಕ್ಷ್ಮಣ್, ಹನುಮಂತ್ ಮತ್ತು ಸಂಜಯ್ ಮೂಲಕ ಕೊಲೆಗೆ ಸಂಚು ರೂಪಿಸಿದ್ದನು. ಈ ನಾಲ್ವರ ಮಾತನಾಡಿರುವ ಆಡಿಯೋ ಟೇಪ್ ಪೊಲೀಸರಿಗೆ ಲಭ್ಯವಾಗಿದ್ದರಿಂದ ದೊಡ್ಡ ಅನಾಹುತವನ್ನು ತಡೆದಿದ್ದರು. ಸದ್ಯ ಪ್ರಕರಣದ ಎಲ್ಲ ಆರೋಪಿಗಳು ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ.

    ಯೋಗಿಶ್ ಗೌಡನ ತಾಯಿ ಮತ್ತು ಪತ್ನಿ

    ಯೋಗಿಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳಿಗೆ ಉತ್ತರವೇ ಸಿಕ್ಕಿಲ್ಲ. ವಿನಯ್ ಕುಲಕರ್ಣಿ ಮಾತ್ರ ಬಿಜೆಪಿ ನಾಯಕರು ರಾಜಕೀಯ ದ್ವೇಷದಿಂದ ನನ್ನ ಹೆಸರನ್ನು ಈ ಪ್ರಕರಣದಲ್ಲಿ ಎಳೆದು ತರುತ್ತಿದ್ದಾರೆ. ನನಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ಪ್ರಕರಣ ಸಿಬಿಐಗೆ ವರ್ಗಾವಣೆ ಆಗಿದ್ದರಿಂದ ವಿನಯ್ ಕುಲಕರ್ಣಿಯವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳು ಹೆಚ್ಚಿವೆ. ರಾಜ್ಯ ಸರ್ಕಾರದ ನಿರ್ಧಾರವನ್ನು ಯೋಗಿಶ್ ಗೌಡ ಕುಟುಂಬಸ್ಥರು ಸ್ವಾಗತಿಸಿದ್ದಾರೆ.