Tag: ಯೋಗ ಕೇಂದ್ರ

  • ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ – ಯೋಗ ಗುರು ನಿರಂಜನಾ ಮೂರ್ತಿ ಅರೆಸ್ಟ್

    ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ – ಯೋಗ ಗುರು ನಿರಂಜನಾ ಮೂರ್ತಿ ಅರೆಸ್ಟ್

    ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿ ನಗರ ಪೊಲೀಸರು (RajaRajeshwari Police) ಬಂಧಿಸಿದ್ದಾರೆ.

    ಬಂಧಿತ ಆರೋಪಿ ಯೋಗ ಗುರು ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರವೊಂದನ್ನು (Yoga Centre) ನಡೆಸುತ್ತಿದ್ದ. ಈ ಯೋಗ ಸೆಂಟರ್‌ಗೆ ಓರ್ವ ಅಪ್ರಾಪ್ತ ಬಾಲಕಿ ಬರುತ್ತಿದ್ದಳು. ಯೋಗದಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಕರೆದೊಯ್ದು, ನಿನ್ನ ಹೆಸರು ಬರುವಂತೆ ಮಾಡುತ್ತೇನೆ. ಅದರಿಂದ ನಿನಗೆ ಸರ್ಕಾರಿ ಕೆಲಸವೂ ಸಿಗಬಹುದು ಎಂದು ನಂಬಿಸಿ, ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ.ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಆರೋಪ; ಕಾಂಗ್ರೆಸ್‌ ಶಾಸಕ ರಾಜೇಗೌಡ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

    ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ತಲೆಮರಿಸಿಕೊಂಡಿದ್ದ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

  • ಮಂಡ್ಯಗೆ ಬರಾಕ್‌ ಒಬಾಮಾ, ದಲೈಲಾಮಾ ಭೇಟಿ – ಹೆಲಿಪ್ಯಾಡ್‌, ಮೂಲಸೌಕರ್ಯಕ್ಕೆ ಸಿಎಂಗೆ ಮನವಿ

    ಮಂಡ್ಯಗೆ ಬರಾಕ್‌ ಒಬಾಮಾ, ದಲೈಲಾಮಾ ಭೇಟಿ – ಹೆಲಿಪ್ಯಾಡ್‌, ಮೂಲಸೌಕರ್ಯಕ್ಕೆ ಸಿಎಂಗೆ ಮನವಿ

    ಬೆಂಗಳೂರು: ಬರಾಕ್‌ ಒಬಾಮಾ (Barack Obama) ದಂಪತಿ ಭೇಟಿ ನೀಡಲಿರುವ ಮಂಡ್ಯದ (Mandya) ಹಲ್ಲೆಗೆರೆಯಲ್ಲಿ ಹೆಲಿಪ್ಯಾಡ್‌ ಹಾಗೂ ಇತರೆ ಮೂಲಸೌಕರ್ಯ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಮನವಿ ಮಾಡಲಾಗಿದೆ.

    ಮಂಡ್ಯದ ಹಲ್ಲೆಗೆರೆಯ ಭೂತಾಯಿ ಟ್ರಸ್ಟ್‌ನ ಅಧ್ಯಕ್ಷ, ಅಮೆರಿಕದ ವೈದ್ಯ ಡಾ. ಲಕ್ಷ್ಮಿನರಸಿಂಹ ಮೂರ್ತಿ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ, ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ಶಾಸಕರಾದ ರವಿಕುಮಾರ್ ಗಣಿಗ, ಬಾಬು ಬಂಡಿಸಿದ್ದೇಗೌಡ ನೇತೃತ್ವದ ನಿಯೋಗವು ಗುರುವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು. ಇದನ್ನೂ ಓದಿ: ಪರಿಷತ್ ನೂತನ ಸದಸ್ಯರಾಗಿ ಮೂವರು ನಾಯಕರಿಂದ ಪ್ರಮಾಣ ವಚನ ಸ್ವೀಕಾರ

    ಟ್ರಸ್ಟ್‌ನಿಂದ ಮಂಡ್ಯದ ಹಲ್ಲೆಗೆರೆಯಲ್ಲಿ ನಿರ್ಮಿಸುತ್ತಿರುವ ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರ ಶಂಕುಸ್ಥಾಪನೆಗೆ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ದಂಪತಿ, ಟಿಬೆಟಿಯನ್ ಧರ್ಮಗುರು ದಲೈಲಾಮಾ (Dalai Lama) ಅವರು ಡಿಸೆಂಬರ್ ತಿಂಗಳಲ್ಲಿ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಲ್ಲೆಗೆರೆಯಲ್ಲಿ ಹೆಲಿಪ್ಯಾಡ್, ರಸ್ತೆ, ಚರಂಡಿ, ವಿದ್ಯುದ್ದೀಪ, ಕುಡಿಯುವ ನೀರು ಮುಂತಾದ ಸೌಕರ್ಯಗಳನ್ನು ಸರ್ಕಾರದ ವತಿಯಿಂದ ಒದಗಿಸಿ ಕೊಡುವಂತೆ ನಿಯೋಗವು ಮನವಿ ಮಾಡಿದೆ.

    ಈ ಕೇಂದ್ರವು ಹಲ್ಲೆಗೆರೆ, ಮಂಡ್ಯ ಜಿಲ್ಲೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ದೊಡ್ಡ ಕೊಡುಗೆಯಾಗಲಿದೆ ಎಂದು ನಿಯೋಗದ ಸದಸ್ಯರು ಕೇಂದ್ರದ ಕಾರ್ಯ ಸ್ವರೂಪವನ್ನು ವಿವರಿಸಿದರು. ಮಾತ್ರವಲ್ಲ ಟ್ರಸ್ಟ್ ಮಾಡುತ್ತಿರುವ ಸಾಮಾಜಿಕ ಕಾರ್ಯವನ್ನು ವಿವರಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಅವರು, “ನೀವು ಮಾಡುವ ಒಳ್ಳೆಯ ಕಾರ್ಯಗಳಿಗೆ ನಿಮ್ಮ ಜೊತೆ ನಾವಿದ್ದೇವೆ. ಬೇಕಾದ ಎಲ್ಲ ಬೆಂಬಲ ನೀಡಲಿದ್ದೇವೆ. ಶೀಘ್ರದಲ್ಲೇ ಅಧಿಕಾರಿಗಳ ಸಭೆ ಕರೆದು ಸಂಬಂಧಪಟ್ಟ ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತೇನೆ” ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಗೆ ತೆರಳಿ ಹೆಚ್‌ಡಿಕೆ ಆರೋಗ್ಯ ವಿಚಾರಿಸಿದ ಸಿಎಂ

    ವಿಧಾನ ಪರಿಷತ್ ಶಾಸಕ ದಿನೇಶ ಗೂಳಿಗೌಡ, ಶಾಸಕರಾದ ರವಿಕುಮಾರ್ ಗಣಿಗ, ಬಾಬು ಬಂಡಿಸಿದ್ದೇಗೌಡ, ಅಮೆರಿಕದ ಅಕ್ಕ ಸಂಸ್ಥೆಯ ಮಾಜಿ ಅಧ್ಯಕ್ಷ ಶಿವಮೂರ್ತಿ ಕಿಲಾರ ಮುಂತಾದವರು ನಿಯೋಗದಲ್ಲಿದ್ದು, ಸಿಎಂಗೆ ವಿವರಣೆ ನೀಡಿದರು.

    ಅಮೆರಿಕ ಹಾಲಿ ಅಧ್ಯಕ್ಷರಾದ ಜೋ ಬೈಡನ್ ಅವರ ವೈದ್ಯಕೀಯ ಸಲಹೆಗಾರ ಡಾ. ವಿವೇಕ್ ಮೂರ್ತಿ ಭಾರತೀಯ ಮೂಲದವರು. ಡಾ.ವಿವೇಕ ಮೂರ್ತಿ ಅಮೆರಿಕದ ಹಿಂದಿನ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೂ ವೈದ್ಯಕೀಯ ಸಲಹೆಗಾರರಾಗಿದ್ದರು. ಡಾ.ವಿವೇಕ್ ಮೂರ್ತಿ ಅವರ ತಂದೆ, ಅನಿವಾಸಿ ಭಾರತೀಯ ಡಾ. ಲಕ್ಷ್ಮಿನರಸಿಂಹ ಮೂರ್ತಿ (ಎಲ್.ಎನ್.ಮೂರ್ತಿ) ಅವರು ತಮ್ಮ ಮಾತೃಭೂಮಿಯ ಅಭ್ಯುದಯಕ್ಕೆ ಪಣ ತೊಟ್ಟಿದ್ದಾರೆ.‌ ಅವರ ಸ್ವಂತ ಊರು ಮಂಡ್ಯ ಜಿಲ್ಲೆಯ ಹಲ್ಲೆಗೆರೆಯಾಗಿದ್ದು, ಇಲ್ಲಿ 13 ಎಕರೆ ಪಿತ್ರಾರ್ಜಿತ ಜಮೀನಿದೆ. ಅದರಲ್ಲಿ ಭೂತಾಯಿ ಟ್ರಸ್ಟ್‌ನಿಂದ ಸುಮಾರು 80 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ‌ಮಟ್ಟದ ಯೋಗ ಮತ್ತು ಧ್ಯಾನ ಕೇಂದ್ರ ತೆರೆಯಲು ಯೋಜಿಸಿ, ಕಾರ್ಯಪ್ರವೃತ್ತರಾಗಿದ್ದಾರೆ. ಭೂತಾಯಿ ಟ್ರಸ್ಟ್‌ನಿಂದ ಮೂರ್ತಿ ಕುಟುಂಬವು ಮಹತ್ತರ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ. ಇದನ್ನೂ ಓದಿ: ರಾಜ್ಯ ಬಿಜೆಪಿಗೆ ಬಿಎಲ್ ಸಂತೋಷ್ ಟಾನಿಕ್ – ವಲಸಿಗರ ಪರ ಬ್ಯಾಟಿಂಗ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]