Tag: ಯೋಗ ದಿನಾಚರಣೆ

  • ಬಿಇಎಲ್ ಸಿಬ್ಬಂದಿಯಿಂದ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ

    ಬಿಇಎಲ್ ಸಿಬ್ಬಂದಿಯಿಂದ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ

    ಬೆಂಗಳೂರು: ವಿಶ್ವದೆಲ್ಲೆಡೆ ಇಂದು ಏಳನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಅದರಂತೆ ಜಾಲಹಳ್ಳಿಯ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ(ಬಿಇಎಲ್) ನ ಸಿಬ್ಬಂದಿ, ಸಾಮಾಜಿಕ ಅಂತರ ಕಾಯ್ದುಕೊಂಡು ಯೋಗ ಮಾಡಿದ್ರು.

    ಬಿ.ಇ.ಎಲ್ ನಲ್ಲಿ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿದ್ದು, ಎಲ್ಲಾ ಘಟಕಗಳ ಸಿಬ್ಬಂದಿ ಹಾಗೂ ಕುಟುಂಬ ವರ್ಗದ ಸಾವಿರಾರು ಜನ ಸೇರಿ ಆನ್‍ಲೈನ್ ಮುಖಾಂತರ ಏಕಕಾಲಕ್ಕೆ ಸೇರಿ ಯೋಗ ಆಚರಿಸಿದರು. ವಿವಿಧ ಆಸನಗಳನ್ನು ಮಾಡಿದರು.

    ಈ ಬಗ್ಗೆ ಬಿಇಎಲ್ ನ ವ್ಯವಸ್ಥಾಪಕ ನಿರ್ದೇಶಕ ಎಂ.ವಿ.ಗೌತಮ್, ಪ್ರಾಣಾಯಾಮದಿಂದ ಆರೋಗ್ಯಕರ ಬದುಕನ್ನು ಸಾಗಿಸಬಹುದು ಎಂದರು. ಬೆಂಗಳೂರು ಸಂಕೀರ್ಣದ ನಿರ್ದೇಶಕರಾದ ವಿನಯ ಕುಮಾರ್ ಕತ್ಯಾಲ್, ಮಾನವ ಸಂಪನ್ಮೂಲ ನಿರ್ದೇಶಕರಾದ ಕೆ.ಎಂ ಶಿವಕುಮಾರನ್, ಪ್ರಧಾನ ವ್ಯವಸ್ಥಾಪಕರಾದ ಆರ್.ಪಿ ಮೋಹನ್ ಹಾಗೂ ಸಂಸ್ಥೆಯು ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು. ಬಿಇಎಲ್ ಸಂಸ್ಥೆಯಿಂದ ಕೊರೊನಾ ಪೀಡಿತರಿಗೆ ಯೋಗ ಥೆರಪಿಯನ್ನು ನಿರಂತರವಾಗಿ ನೀಡಲಾಗುತ್ತಿದೆ.

  • ಯೋಗವೆನ್ನುವುದು ದೈನಂದಿನ ಅಭ್ಯಾಸದ ಭಾಗವಾಗಬೇಕು: ಬಿ.ಸಿ.ಪಾಟೀಲ್

    ಯೋಗವೆನ್ನುವುದು ದೈನಂದಿನ ಅಭ್ಯಾಸದ ಭಾಗವಾಗಬೇಕು: ಬಿ.ಸಿ.ಪಾಟೀಲ್

    ಹಾವೇರಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಕೃಷಿ ಸಚಿವರಾಗಿರುವ ಬಿ.ಸಿ.ಪಾಟೀಲ್ ಹಿರೇಕೆರೂರಿನ ಬಯಲು ಬಸವದೇವರ ದೇವಸ್ಥಾನದ ಆವರಣದಲ್ಲಿ ಅರ್ಚಕರಾದ ನಿಂಗಾಚಾರ್ ಮಾಯಾಚಾರ್ ನೇತೃತ್ವದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರೊಂದಿಗೆ ಯೋಗ ಮಾಡಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 224 ಕ್ಷೇತ್ರಗಳಲ್ಲಿಯೂ ಬಿಜೆಪಿ ವತಿಯಿಂದ ಇಂದು ಯೋಗ ದಿನಾಚರಣೆ ನಡೆಸಲಾಗುತ್ತಿದೆ. ಅಂತೆಯೇ ತಮ್ಮ ಮತಕ್ಷೇತ್ರದಲ್ಲಿಯೂ ಯೋಗ ದಿನಾಚರಣೆ ಆಚರಿಸಲಾಗಿದೆ. ಯೋಗ ಎನ್ನುವುದು ನಮ್ಮ ದೇಶದ ಪ್ರಾಚೀನ ಪದ್ಧತಿಯಾಗಿದ್ದು, ಯೋಗದ ಮಹತ್ವ ಇಡೀ ವಿಶ್ವಕ್ಕೆ ಸಾರಿದೆ. ಯೋಗವು ಭಾರತೀಯ ಮೂಲದ ಸುಮಾರು 6 ಸಾವಿರ ವರ್ಷ ಹಳೆಯದಾಗಿದೆ. ಭೌತಿಕ, ಮಾನಸಿಕ, ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ ಎಂದಿದ್ದಾರೆ.

    ಭಾರತದ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶ್ವ ಸಂಸ್ಥೆಯ ತಮ್ಮ ಭಾಷಣದಲ್ಲಿ ವರ್ಷದ ಅತಿ ದೀರ್ಘ ದಿನವಾದ ಜೂನ್ 21 ರಂದು ವಿಶ್ವ ಯೋಗ ದಿನ ಆಚರಿಸುವಂತೆ ಕರೆ ನೀಡಿದರು. ಮೊದಲ ಅಂತಾರಾಷ್ಟ್ರೀಯ ಯೋಗ ದಿನವನ್ನು ಹೊಸದಿಲ್ಲಿಯ ರಾಜಪಥ್‍ನಲ್ಲಿ ನೆಡೆಸಲು ಭಾರತ ಸರ್ಕಾರ ಕಾರ್ಯಕ್ರಮ ರೂಪಿಸಿತ್ತು ಎಂದರು.

    ಯೋಗವೆನ್ನುವುದು ಆಚರಣೆಯಾಗದೇ ದೈನಂದಿನ ಭಾಗವಾಗಬೇಕು. ಯೋಗದಿಂದ ಫಿಟ್ ಎಂಡ್ ಫೈನ್ ಆಗಿರಬಹುದು. ಸದೃಢ ಆರೋಗ್ಯದ ಗುಟ್ಟು ಇದಾಗಿದ್ದು, ಮಾನಸಿಕ ಸ್ಥೈರ್ಯಕ್ಕೆ ಯೋಗ ಸಾಧನವಾಗಿದೆ. ಪ್ರತಿದಿನ 15 ನಿಮಿಷ ಒಂದೆರಡು ಆಸನವನ್ನಾದರೂ ದೈನಂದಿನ ರೂಢಿ ಮಾಡಿಕೊಳ್ಳಬೇಕು. ಯೋಗವೆನ್ನುವುದು ದೈಹಿಕ ಪ್ರಶಿಕ್ಷಣ ಮಾತ್ರವಲ್ಲದೇ ಮಾನಸಿಕ ಸಾಧನೆಯೂ ಆಗಬೇಕೆಂದು ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

    ಯೋಗ ದಿನಾಚರಣೆಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಶಿವಕುಮಾರ್ ತಿಪ್ಪಶೆಟ್ಟಿ, ಕಂಠಾದರ ಅಂಗಡಿ, ರಮೇಶ್,ಕುಸುಮ ಬಣಕಾರ್,ಲತಾ ಬಣಕಾರ್ ಸೇರಿದಂತೆ ಮತ್ತಿತ್ತರರು ಪಾಲ್ಗೊಂಡಿದ್ದರು.

  • ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಶೆಟ್ಟರ್ ಚಾಲನೆ

    ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಶೆಟ್ಟರ್ ಚಾಲನೆ

    ಹುಬ್ಬಳ್ಳಿ: ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಹುಬ್ಬಳ್ಳಿ ಪಿರಾಮಿಡ್ ಧ್ಯಾನ ಮಂದಿರದಲ್ಲಿ ಆಯೋಜಿಸಲಾದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಪಾಲ್ಗೊಂಡು ಯೋಗಾಭ್ಯಾಸ ಮಾಡುವ ಮೂಲಕ ಯೋಗ ದಿನಾಚರಣೆಗೆ ಚಾಲನೆ ನೀಡಿದರು.

    ಯೋಗ ದುನಾಚರಣೆ ಅಂಗವಾಗಿ ಯೋಗ ಶಿಕ್ಷಕ ಸಂಗಮೇಶ್ ನಿಂಬರಗಿ ಯೋಗಾಸನಗಳ ಕ್ರಮಗಳ ಕುರಿತು ನಿರ್ದೇಶನ ನೀಡಿ ಅವುಗಳ ಉಪಯೋಗ ತಿಳಿಸಿದರು. ಶೆಟ್ಟರ್ ಸಹಿತ ಕಾರ್ಯಕ್ರಮದಲ್ಲಿದ್ದ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಯೋಗಾಭ್ಯಾಸ ಮಾಡಿದರು. ಇದನ್ನೂ ಓದಿ: ಸಿಎಂ ಬದಲಾವಣೆ ವಿಚಾರ ಎದೆ ಮೇಲೆ ಬೋರ್ಡ್ ಹಾಕಿಕೊಂಡು ಓಡಾಡುವ ಸ್ಥಿತಿ ಬಂದಿದೆ: ಶೆಟ್ಟರ್

    ಕಾರ್ಯಕ್ರಮದಲ್ಲಿ ಜಿ.ಪಂ. ಸಿ.ಇ.ಓ ಡಾ.ಬಿ.ಸುಶೀಲ, ಹು-ಧಾ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಯಶವಂತ ಮದೀನಕರ್, ಜಿಲ್ಲಾ ಆಯುಷ್ಯಾಧಿಕಾರಿ ಡಾ.ಮೀನಾಕ್ಷಿ, ತಹಶೀಲ್ದಾರ್ ಶಶಿಧರ ಮಾಡ್ಯಾಳ ಭಾಗವಹಸಿದ್ದರು.

  • ಯಲವಾಳ ತೋಟದಲ್ಲಿ ಸಹಕಾರಿ, ಕೃಷಿ ಸಚಿವರಿಂದ ಯೋಗ

    ಯಲವಾಳ ತೋಟದಲ್ಲಿ ಸಹಕಾರಿ, ಕೃಷಿ ಸಚಿವರಿಂದ ಯೋಗ

    ಹಾವೇರಿ: ಕೃಷಿ ಸಚಿವರಾದ ಬಿ.ಸಿ ಪಾಟೀಲರು ಮತ್ತು ಸಹಕಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಸ್ವಗ್ರಾಮ ಯಲವಾಳ ಗ್ರಾಮದ ಕೃಷಿ ಸಚಿವರ ತೋಟದಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಯೋಗ ದಿನಾಚರಣೆಯಲ್ಲಿ ಅಚರಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್, ಯೋಗ ಎನ್ನುವುದು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿಯನ್ನೂ ನೀಡಬಲ್ಲದು. ಋಷಿಮುನಿಗಳು ಈ ಹಿಂದೆ ಆಚರಿಸಿ ಅನುಸರಿಸುತ್ತಿದ್ದ ಯೋಗವನ್ನು ಇಂದಿಗೂ ನಮ್ಮ ದೇಶದಲ್ಲಿ ಪಾರಂಪರಿಕವಾಗಿ ಮುಂದುವರಿಸಿಕೊಂಡು ಬರಲಾಗುತ್ತಿದೆ. ಯೋಗ ದಿನಾಚರಣೆಯಂದು ಮಾತ್ರ ಯೋಗ ಮಾಡದೇ ಪ್ರತಿನಿತ್ಯ ವ್ಯಾಯಾಮ ಯೋಗ ಮಾಡುವುದು ಒಳ್ಳೆಯದು. ಯೋಗ ಎಲ್ಲರ ದೈನಂದಿನ ಭಾಗವಾಗಬೇಕು ಎಂದು ಕರೆ ನೀಡಿದರು.

    ಯೋಗಕ್ಕೆ ತನ್ನದೇ ಆದ ಇತಿಹಾಸದ ಜೊತೆಗೂ ವೈಜ್ಞಾನಿಕವಾಗಿಯೂ ಸಾಬೀತಾಗಿದೆ. ಯೋಗವನ್ನು ಗುರುಗಳಿಂದ ಯೋಗ ಶಾಲೆಯಲ್ಲಿ ಕಲಿಯಬಹುದು. ಕೈಬೆರಳಲ್ಲಿರುವ ಮೊಬೈಲ್‍ನಲ್ಲಿ ಯೋಗ ಕಲಿಸುವ ಅದೆಷ್ಟೋ ಯೋಗದ ವಿಡಿಯೋ ಚಾನೆಲ್‍ಗಳು ಆ್ಯಪ್‍ಗಳು ಸಹ ಲಭ್ಯ. ನಮ್ಮ ನಮ್ಮ ದೇಹಕ್ಕೆ ಅನುಕೂಲಕರವಾಗುವಂತೆ ಆದಷ್ಟು ಮಾರ್ಗದರ್ಶನ ಪಡೆದೇ ಯೋಗವನ್ನು ಅನುಸರಿಸುವುದು ಉತ್ತಮ ಎಂದು ಸಚಿವರು ಸಲಹೆಯಿತ್ತರು.

  • ಯೋಗ ನಮ್ಮ ಬದುಕಿನ ದೈನಂದಿನ ಅವಿಭಾಜ್ಯ ಅಂಗವಾಗಬೇಕು- ಬಿಎಸ್ ವೈ

    ಯೋಗ ನಮ್ಮ ಬದುಕಿನ ದೈನಂದಿನ ಅವಿಭಾಜ್ಯ ಅಂಗವಾಗಬೇಕು- ಬಿಎಸ್ ವೈ

    ಬೆಂಗಳೂರು: ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿ ಎದುರು ಸಾಮೂಹಿಕ ಯೋಗಾಸನ ಕಾರ್ಯಕ್ರಮ ನಡೆಯಿತು.

    ಬಿಜೆಪಿ ಕಚೇರಿ ಎದುರು ರಸ್ತೆಯಲ್ಲೇ ಕಾರ್ಯಕರ್ತರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಯೋಗ ಮಾಡಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯನಾಗಿರೋ ಬಿಎಸ್‍ವೈ ಸೂರ್ಯ ನಮಸ್ಕಾರ ಮಾಡುವಷ್ಟರಲ್ಲಿ ಸುಸ್ತಾದ್ರು. ಹೀಗಾಗಿ ಲಘು ಯೋಗ , ಸೂರ್ಯ ನಮಸ್ಕಾರದ ಮೂರು ಆಸನಗಳ ಬಳಿಕ ಸ್ವಲ್ಪ ಹೊತ್ತು ವಿಶ್ರಾಂತಿ ತೆಗೆದುಕೊಂಡರು.

    ಬಳಿಕ ಮಾತನಾಡಿದ ಬಿಎಸ್‍ವೈ, ಸ್ವಾಮಿ ವಿವೇಕಾನಂದರು ಹೇಳಿದಂತೆ ಯೋಗ ಮನಸ್ಸನ್ನು ಶಕ್ತಿಯುತ ಹಾಗು ಶಿಸ್ತುಬದ್ಧಗೊಳಿಸಲಿದೆ. ಯೋಗ ಕೇವಲ ದೈಹಿಕ ವ್ಯಾಯಾಮ ಮಾತ್ರವಲ್ಲ, ಶರೀರ, ಬುದ್ಧಿ, ಮನಸ್ಸು ಸಮತೋಲನ ಸಾಧಿಸುವ ಜೀವನ ವಿಧಾನವಾಗಿದೆ. ನಮ್ಮಲ್ಲಿನ ಶಕ್ತಿಯನ್ನು ಕಂಡುಕೊಳ್ಳುವುದೇ ಯೋಗ. ಪುರಾತನ ಯೋಗ ಪದ್ಧತಿ ನಮ್ಮ ದೇಶದ ಹೆಮ್ಮೆಯಾಗಿದೆ. ದೇಹ ದೇವಾಲಯವಿದ್ದಂತೆ ಅದನ್ನು ಶುದ್ಧಿಯಾಗಿಟ್ಟುಕೊಳ್ಳುವುದೇ ಯೋಗ. ಯೋಗ ಇಂದು ಜಾಗತಿಕ ಮನ್ನಣೆ ಪಡೆದಿದೆ ಅಂದ್ರು.

    ಅಂತಾರಾಷ್ಟ್ರೀಯ ಯೋಗ ದಿನ ಎಂದು ವಿಶ್ವಸಂಸ್ಥೆ ಘೊಷಿಸಿದೆ. ಇದರ ಯಶಸ್ಸು ಮೋದಿಗೆ ಸಲ್ಲಬೇಕು. ಯೋಗ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಆರೋಗ್ಯವಂತರನ್ನಾಗಿ ಮಾಡುವ ಅಗತ್ಯವಿದೆ. ದೈಹಿಕ ಮಾನಸಿಕ ಸದೃಢತೆ ಬೆಳೆಸಿಕೊಳ್ಳಬೇಕು. ಆರೋಗ್ಯ ಪೂರ್ಣ ಸಮಾಜ ನಿರ್ಮಾಣವಾಗಬೇಕು. ಯೋಗ ದಿನಕ್ಕೆ ಯೋಗಾಸನ ಮಾಡುವುದು ಸೀಮಿತವಾಗದೆ ಯೋಗ ನಮ್ಮ ಬದುಕಿನ ದೈನಂದಿನ ಅವಿಭಾಜ್ಯ ಅಂಗವಾಗಬೇಕು ಅಂತ ಸಲಹೆ ನೀಡಿದ್ರು.

  • ವಿಶಿಷ್ಟ ಚೇತನ ಮಕ್ಕಳೊಂದಿಗೆ ಯೋಗ ದಿನಾಚರಣೆ ಆಚರಿಸಿದ ಮ್ಯಾಥ್ಯೂ ಹೇಡನ್

    ವಿಶಿಷ್ಟ ಚೇತನ ಮಕ್ಕಳೊಂದಿಗೆ ಯೋಗ ದಿನಾಚರಣೆ ಆಚರಿಸಿದ ಮ್ಯಾಥ್ಯೂ ಹೇಡನ್

    ಬೆಂಗಳೂರು: ವಿಶ್ವ ಯೋಗ ದಿನಾಚರಣೆ ವಿಶೇಷ ಆಚರಣೆಯ ಅಂಗವಾಗಿ ಅಸೀಸ್ ತಂಡದ ಮಾಜಿ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಭಾನುವಾರ ನಗರದಲ್ಲಿ ವಿಶಿಷ್ಟ ಚೇತನ ಮಕ್ಕಳೊಂದಿಗೆ ಯೋಗ ದಿನಾಚರಣೆ ಆಚರಿಸಿದರು.

    ನಾಗವಾರದ ಮ್ಯಾನ್ಫೂಕನ್ವೆಕ್ಷನ್ ಸೆಂಟರ್ ನಲ್ಲಿ ಅಕ್ಷರ ಯೋಗ ಟೀಂ ನಿಂದ ಅಂಗವಿಕಲ ಮಕ್ಕಳ ಜತೆ ನಡೆಯುತ್ತಿರುವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ಮಾತನಾಡಿ, ಯೋಗ ಎನ್ನುವುದು ಒಂದು ಪಾಸಿಟಿವ್ ಎನರ್ಜಿ. ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ತುಂಬ ಖುಷಿ ಕೊಟ್ಟಿದೆ. ಮಕ್ಕಳ ಜತೆ ಯೋಗ ಮಾಡಿದ್ದು ಸಂತಸ ತಂದಿದೆ ಎಂದು ಹೇಳಿದರು.

    ಯೋಗ ಕಾರ್ಯಕ್ರಮದಲ್ಲಿ ನಟಿ ಸಂಜನಾ ಗರ್ಲಾನಿ, ಆರ್ ವಿ ದೇವರಾಜ್ ಪತ್ನಿ ಮಂಜುಳಾ ದೇವರಾಜ್ ಮತ್ತಿತರರು ಭಾಗವಹಿಸಿದ್ದರು. ಸಾವಿರಾರು ಅಂಗವಿಕಲ ಮಕ್ಕಳು ಪಾಲ್ಗೊಂಡಿದ್ದರು.