Tag: ಯೋಧರು

  • ಆಪರೇಷನ್ ಅಖಾಲ್ | ಭದ್ರತಾ ಸಿಬ್ಬಂದಿ, ಉಗ್ರರ ನಡುವೆ ಗುಂಡಿನ ಚಕಮಕಿ – ಇಬ್ಬರು ಯೋಧರು ಹುತಾತ್ಮ

    ಆಪರೇಷನ್ ಅಖಾಲ್ | ಭದ್ರತಾ ಸಿಬ್ಬಂದಿ, ಉಗ್ರರ ನಡುವೆ ಗುಂಡಿನ ಚಕಮಕಿ – ಇಬ್ಬರು ಯೋಧರು ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಆಪರೇಷನ್ ಅಖಾಲ್ (Operation Akhal) ಹೆಸರಿನಲ್ಲಿ ನಡೆಯುತ್ತಿರುವ ಕಾರ್ಯಚರಣೆಯಲ್ಲಿ ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದು, ಇಬ್ಬರು ಯೋಧರು (Soldiers) ಹುತಾತ್ಮರಾಗಿದ್ದಾರೆ.

    ಕುಲ್ಗಾಮ್‌ನಲ್ಲಿ (Kulgam) ಶುಕ್ರವಾರ ರಾತ್ರಿಯಿಡೀ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದು, ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ. ಮೃತ ಯೋಧರನ್ನು ಲ್ಯಾನ್ಸ್ ನಾಯಕ್ ಪ್ರೀತ್ಪಾಲ್ ಸಿಂಗ್ ಮತ್ತು ಸಿಪಾಯಿ ಹರ್ಮಿಂದರ್ ಸಿಂಗ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಸಮಾಧಿ ಶೋಧ ಮ್ಯಾರಥಾನ್ – ಐದು ಅಡಿ ಅಗೆದರೂ ಸಿಕ್ಕಿದ್ದು ಬರೀ ಮಣ್ಣು

    ಹುತಾತ್ಮ ಯೋಧರ ಧೈರ್ಯ ಮತ್ತು ಸಮರ್ಪಣೆ ನಮಗೆ ಶಾಶ್ವತ ಸ್ಫೂರ್ತಿ ನೀಡುತ್ತದೆ. ಭಾರತೀಯ ಸೇನೆಯು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ. ಮೃತ ಕುಟುಂಬಗಳೊಂದಿಗೆ ಸೇನೆ ಸದಾ ನಿಲ್ಲುತ್ತದೆ ಎಂದು ಚಿನಾರ್ ಕಾರ್ಪ್ಸ್ ಶನಿವಾರ ಎಕ್ಸ್ನಲ್ಲಿ ತಿಳಿಸಿದೆ. ಇದನ್ನೂ ಓದಿ: ಪುಟಿನ್‌ ಭೇಟಿಗೆ ಟ್ರಂಪ್‌ ಮುಹೂರ್ತ ಫಿಕ್ಸ್‌ – ಉಕ್ರೇನ್‌ನಲ್ಲಿ ಶಾಂತಿ ಸ್ಥಾಪನೆಗೆ ಮಾತುಕತೆ

    ಆಪರೇಷನ್ ಅಖಾಲ್ ಕಾರ್ಯಚರಣೆ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಕಾರ್ಯಾಚರಣೆಯ ಆರಂಭದಿಂದ ಇಲ್ಲಿಯವರೆಗೆ ಹನ್ನೊಂದು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಆಗಸ್ಟ್ 1 ರಂದು ದಕ್ಷಿಣ ಕಾಶ್ಮೀರ ಜಿಲ್ಲೆಯ ಅಖಾಲ್‌ನಲ್ಲಿರುವ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ನಂತರ ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು.

  • Photo Gallery: ‘ಆಪರೇಷನ್‌ ಸಿಂಧೂರ’ ವೀರರನ್ನು ಭೇಟಿಯಾದ ಪಿಎಂ ಮೋದಿ

    Photo Gallery: ‘ಆಪರೇಷನ್‌ ಸಿಂಧೂರ’ ವೀರರನ್ನು ಭೇಟಿಯಾದ ಪಿಎಂ ಮೋದಿ

    ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪಂಜಾಬ್‌ನ ಅದಮ್‌ಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಏರ್‌ ಡಿಫೆನ್ಸ್‌ ಹೊಡೆದುರುಳಿಸಿರುವುದಾಗಿ ಪಾಕ್‌ ಸುಳ್ಳು ಹೇಳಿತ್ತು. ಈಗ ಅದೇ ಸ್ಥಳಕ್ಕೆ ಭೇಟಿ ಕೊಟ್ಟು ಪಾಕ್‌ಗೆ ಮೋದಿ ತಿರುಗೇಟು ನೀಡಿದ್ದಾರೆ. ಯೋಧರೊಂದಿಗೆ ಪ್ರಧಾನಿ ಸಂಭ್ರಮಾಚರಣೆ ಮಾಡಿದ್ದಾರೆ.

    ಯೋಧರೊಂದಿಗೆ ಪ್ರಧಾನಿ ಮೋದಿ ಮಾತುಕತೆ

    ಸೈನಿಕರೊಂದಿಗೆ ‘ಭಾರತ್‌ ಮಾತಾ ಕಿ ಜೈ’ ಎಂದು ಕೂಗಿದ ಪ್ರಧಾನಿ.

    ‘ವೈರಿ ಪೈಲಟ್‌ಗಳು ಯಾಕೆ ನೆಮ್ಮದಿಯಾಗಿ ನಿದ್ರೆ ಮಾಡಲ್ಲ ಅಂದ್ರೆ’ ಗೋಡೆ ಬರಹವಿರುವ ಚಿತ್ರದ ಮುಂದೆ ಫೋಟೊ ತೆಗೆಸಿಕೊಂಡ ಮೋದಿ.

    ಯೋಧರೊಂದಿಗೆ ಫೋಟೊಗೆ ಪೋಸ್‌ ಕೊಟ್ಟ ಮೋದಿ.

    ದೇಶಕ್ಕಾಗಿ ಹೋರಾಡುತ್ತಿರುವ ಯೋಧರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ.

     

  • ಪಾಕ್ ಜೊತೆಗಿನ ಸಂಘರ್ಷದಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ: ಭಾರತೀಯ ಸೇನೆ

    ಪಾಕ್ ಜೊತೆಗಿನ ಸಂಘರ್ಷದಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ: ಭಾರತೀಯ ಸೇನೆ

    ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಉಗ್ರರ ನೆಲೆಗಳ ವಿರುದ್ಧ ಭಾರತ ನಡೆಸಿದ ‘ಆಪರೇಷನ್ ಸಿಂಧೂರ’ (Operation Sindoor) ಕಾರ್ಯಾಚರಣೆಯಲ್ಲಿ ಐವರು ಯೋಧರು (Soldiers) ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆ (Indian Army) ಅಧಿಕೃತವಾಗಿ ಮಾಹಿತಿ ನೀಡಿದೆ.

    ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಕುರಿತು ಭಾನುವಾರ ಸಂಜೆ ಹಿರಿಯ ಮಿಲಿಟರಿ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ದೇಶಕ್ಕಾಗಿ ಸೇವೆ ಸಲ್ಲಿಸಿ ಹುತಾತ್ಮರಾದ ಯೋಧರಿಗೆ ಭಾರತೀಯ ಸೇನಾಪಡೆ ಗೌರವ ಸಲ್ಲಿಸುತ್ತದೆ. ಅಲ್ಲದೇ ಅವರ ತ್ಯಾಗಗಳನ್ನು ಯಾವಾಗಲೂ ಸ್ಮರಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಕಾಶ್ಮೀರದಲ್ಲಿ ಸಿಲುಕಿರುವ 13 ಕರ್ನಾಟಕದ ವಿದ್ಯಾರ್ಥಿಗಳು – ವಾಪಸ್ ಕರೆತರಲು ನೆರವಾದ ಹೆಚ್‌ಡಿಕೆ

    ಮೇ 7ರಿಂದ ಮೇ 10 ರವರೆಗೆ ಜಮ್ಮು ಕಾಶ್ಮೀರ ಗಡಿಯಲ್ಲಿ (LOC) ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನ ಸುಮಾರು 35ರಿಂದ 40 ಸೇನಾ ಸಿಬ್ಬಂದಿಯನ್ನು ಕಳೆದುಕೊಂಡಿದೆ. ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆ ದಾಳಿ ನಡೆಸಿದ ಕುರಿತು ವೀಡಿಯೋ ಸಾಕ್ಷ್ಯ ಸಮೇತ ಇಂಚಿಂಚು ಮಾಹಿತಿ ನೀಡಿದ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ಮತ್ತೆ ಪಾಕ್ ದಾಳಿ ನಡೆಸಿದರೆ ತೀವ್ರವಾಗಿ ದಾಳಿ ನಡೆಸುವ ಬಗ್ಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಇದನ್ನೂ ಓದಿ: ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ 100 ಕ್ಕೂ ಹೆಚ್ಚು ಉಗ್ರರ ಹತ್ಯೆ: ಭಾರತೀಯ ಸೇನೆ

  • ಭದ್ರತಾ ಪಡೆಯಿಂದ ಯಶಸ್ವಿ ಕಾರ್ಯಚರಣೆ – ಓರ್ವ ಭಯೋತ್ಪಾದಕ ಹತ

    ಭದ್ರತಾ ಪಡೆಯಿಂದ ಯಶಸ್ವಿ ಕಾರ್ಯಚರಣೆ – ಓರ್ವ ಭಯೋತ್ಪಾದಕ ಹತ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಿಶ್ತ್ವಾರ್ (Kishtwar) ಜಿಲ್ಲೆಯ ಛತ್ರು ಪ್ರದೇಶದಲ್ಲಿ ಭಾರತೀಯ ಸೇನೆಯು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಭಯೋತ್ಪಾದಕನೊಬ್ಬನನ್ನು ಹೊಡೆದುರುಳಿಸಲಾಗಿದೆ.

    ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಛತ್ರುವಿನ ಕಾಡಿನ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಸಾಧ್ಯತೆಯನ್ನು ಗಮನಿಸಿದ ಸೇನೆ, ಶೋಧ ಕಾರ್ಯಾಚರಣೆಯನ್ನು ಆರಂಭಿಸಿತು. ಈ ವೇಳೆ ಭಯೋತ್ಪಾದಕರೊಂದಿಗೆ (Terrorists) ತೀವ್ರ ಗುಂಡಿನ ಚಕಮಕಿಯಾಗಿದ್ದು, ಒಬ್ಬ ಭಯೋತ್ಪಾದಕನನ್ನು ಸೇನೆಯು ಯಶಸ್ವಿಯಾಗಿ ಹೊಡೆದುರುಳಿಸಿದೆ. ಇದನ್ನೂ ಓದಿ: ಬಿಹಾರ ಚುನಾವಣೆ ವೇಳೆ ಕೇಂದ್ರ ಸರ್ಕಾರ ಉಗ್ರ ರಾಣಾನನ್ನ ಗಲ್ಲಿಗೇರಿಸಲಿದೆ: ಸಂಜಯ್ ರಾವತ್‌

    ಈ ಕಾರ್ಯಾಚರಣೆಯಲ್ಲಿ ಯಾವುದೇ ಯೋಧರಿಗೆ ಗಾಯವಾಗಿಲ್ಲ ಎಂದು ಸೇನಾ ಮೂಲಗಳು ತಿಳಿಸಿವೆ. ಕೊಲ್ಲಲ್ಪಟ್ಟ ಭಯೋತ್ಪಾದಕನ ಗುರುತು ಇನ್ನೂ ಖಚಿತವಾಗಿಲ್ಲ. ಭದ್ರತಾ ಸಿಬ್ಬಂದಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಕಾರ್ಯಾಚರಣೆಯ ಸ್ಥಳದಿಂದ ಶಸ್ತ್ರಾಸ್ತ್ರಗಳು, ಗುಂಡಿನ ಸಾಮಗ್ರಿಗಳು ಮತ್ತು ಇತರ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

  • ಯೋಧರ ಪಿಂಚಣಿ ಬಾಕಿ ಉಳಿಸಿಕೊಂಡ ಕೇಂದ್ರ ಸರ್ಕಾರ – ಪಂಜಾಬ್ ಹೈಕೋರ್ಟ್ ಕೆಂಡಾಮಂಡಲ

    ಯೋಧರ ಪಿಂಚಣಿ ಬಾಕಿ ಉಳಿಸಿಕೊಂಡ ಕೇಂದ್ರ ಸರ್ಕಾರ – ಪಂಜಾಬ್ ಹೈಕೋರ್ಟ್ ಕೆಂಡಾಮಂಡಲ

    ಚಂಡೀಗಢ: ಭಾರತ-ಪಾಕಿಸ್ತಾನ ನಡುವೆ 1965ರಲ್ಲಿ ನಡೆದಿದ್ದ ಯುದ್ಧದಲ್ಲಿ ಹೋರಾಡಿ ವೀರ ಚಕ್ರ ಪುರಸ್ಕಾರಕ್ಕೆ ಭಾಜನರಾಗಿರುವ ಯೋಧರ ಪಿಂಚಣಿ ಬಾಕಿಯನ್ನು ಸಶಸ್ತ್ರ ಪಡೆಗಳ ನ್ಯಾಯಮಂಡಳಿ ಆದೇಶದಂತೆ ಒಂದು ತಿಂಗಳೊಳಗೆ ಪಾವತಿಸಬೇಕು. ಇಲ್ಲದೇ ಹೋದರೆ ಶೇ.15ರಷ್ಟು ಬಡ್ಡಿ ತೆರಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಎಚ್ಚರಿಕೆ ನೀಡಿದೆ.

    ಈ ಸಂಬಂಧ 2018 ರಲ್ಲಿಯೇ ತೀರ್ಪು ನೀಡಲಾಗಿದ್ದರೂ 7 ವರ್ಷಗಳಿಂದ ಬಾಕಿ ಮೊತ್ತ ಪಾವತಿಸದೇ ಇರುವ ಕೇಂದ್ರ ಸರ್ಕಾರದ ಧೋರಣೆ ಬಗ್ಗೆ ನ್ಯಾ. ಸಂಜೀವ್ ಪ್ರಕಾಶ್ ಶರ್ಮಾ ಮತ್ತು ಮೀನಾಕ್ಷಿ ಐ ಮೆಹ್ತಾ ಅವರಿದ್ದ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಇದನ್ನೂ ಓದಿ: Microfinance Bill | ರಾಜ್ಯಪಾಲರ ಅಂಕಿತಕ್ಕೆ ಸುಗ್ರೀವಾಜ್ಞೆ ಬಿಲ್ – ಅನಧೀಕೃತವಾಗಿ ಕೊಟ್ಟಿದ್ದರೆ ಸಾಲ ಮನ್ನಾ

    ಪುರುಷೋತ್ತಮ್ ದಾಸ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಆಧರಿಸಿ ಸಶಸ್ತ್ರ ಪಡೆಗಳ ನ್ಯಾಯಮಂಡಳಿಯ ಆದೇಶ ಪ್ರಶ್ನಿಸಿ ಪದೇ ಪದೇ ಅರ್ಜಿ ಸಲ್ಲಿಸಲಾಗುತ್ತಿದೆ ಎಂದು ಕೂಡ ನ್ಯಾಯಾಲಯ ಕಳವಳ ವ್ಯಕ್ತಪಡಿಸಿದೆ. ಇದನ್ನೂ ಓದಿ: ಮೈಕ್ರೋ ಫೈನಾನ್ಸ್‌ನವರು ರೌಡಿಗಳನ್ನಿಟ್ಟುಕೊಂಡು ಹಣ ವಸೂಲಿ ಮಾಡ್ತಿದ್ದಾರೆ: ಡಿಕೆಶಿ

    ಇದು ಎಎಫ್‌ಟಿ ಆದೇಶಗಳನ್ನು ಪ್ರಶ್ನಿಸಿ 226ನೇ ವಿಧಿಯಡಿ ಅರ್ಜಿಗಳನ್ನು ಆಲಿಸಲು ಹೈಕೋರ್ಟ್‌ಗಳಿಗೆ ಅಧಿಕಾರವಿಲ್ಲ ಎಂದು ತಿಳಿಸಿ ಕೇಂದ್ರ ಸರ್ಕಾರ ಮತ್ತು ಮೇಜರ್ ಜನರಲ್ ಶ್ರೀಕಾಂತ್ ಶರ್ಮಾ ಪ್ರಕರಣಕ್ಕೆ ಸಂಬಂಧಿಸಿದಂತೆ 2015ರಲ್ಲಿ ನೀಡಿದ್ದ ತೀರ್ಪನ್ನು ಆ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು.

    ಭಾರತ- ಪಾಕಿಸ್ತಾನ ನಡುವೆ 1965ರಲ್ಲಿ ನಡೆದಿದ್ದ ಯುದ್ಧದ ವೇಳೆ ಅಂಗವೈಕಲ್ಯಕ್ಕೆ ತುತ್ತಾದ ಪ್ರತಿಷ್ಠಿತ ʻವೀರ ಚಕ್ರʼ ಪುರಸ್ಕಾರಕ್ಕೆ ಭಾಜನರಾದ ನಿವೃತ್ತ ಸೇನಾ ಅಧಿಕಾರಿ ಕ್ಯಾಪ್ಟನ್ ರೀತ್ ಎಂ.ಪಿ ಸಿಂಗ್ ಹಾಗೂ ಇನ್ನಿತರ ಯೋಧರಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಅವರು ಅರ್ಹರಾಗಿದ್ದ ಶೇ.100ರಷ್ಟು ಪಿಂಚಣಿ ಬದಲಿಗೆ ಕೇವಲ ಶೇ.80ರಷ್ಟು ಪಿಂಚಣಿ ನೀಡಲು ನಿರ್ಧರಿಸಲಾಗಿತ್ತು. ಆದರೆ 2014 ರಲ್ಲಿ ಭಾರತ ಒಕ್ಕೂಟ ಸರ್ಕಾರ ಮತ್ತು ರಾಮ್ ಅವತಾರ್ ಪ್ರಕರಣದಲ್ಲಿ ಇಂತಹ ಘಟನೆಗಳಲ್ಲಿ ಅಂಗವೈಕಲ್ಯಕ್ಕೆ ತುತ್ತಾದ ಯೋಧರಿಗೆ ಶೇ.100ರಷ್ಟು ಪಿಂಚಣಿ ಒದಗಿಸಬೇಕು ಎಂದು ತೀರ್ಪು ನೀಡಿತ್ತು. ಈ ತೀರ್ಪಿನ ಹಿನ್ನೆಲೆಯಲ್ಲಿ ಪೂರ್ವಾನ್ವಯವಾಗುವಂತೆ ತಮ್ಮ ಪಿಂಚಣಿಯನ್ನೂ ಪರಿಷ್ಕರಿಸಬೇಕು ಎಂದು ರೀತ್ ಸಿಂಗ್ ಕೋರಿದ್ದರು.

  • ಛತ್ತೀಸ್‌ಗಢ| ಮಾವೋವಾದಿಗಳು ಅಳವಡಿಸಿದ್ದ ಐಇಡಿ ಸ್ಫೋಟ – ಇಬ್ಬರು ಯೋಧರು ಹುತಾತ್ಮ

    ಛತ್ತೀಸ್‌ಗಢ| ಮಾವೋವಾದಿಗಳು ಅಳವಡಿಸಿದ್ದ ಐಇಡಿ ಸ್ಫೋಟ – ಇಬ್ಬರು ಯೋಧರು ಹುತಾತ್ಮ

    – ಇಬ್ಬರು ಪೊಲೀಸರಿಗೆ ಗಾಯ

    ಛತ್ತೀಸ್‌ಗಢ: ಮಾವೋವಾದಿಗಳು ಅಳವಡಿಸಿದ್ದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡ ಪರಿಣಾಮ ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್‌ನ (ITBP) ಇಬ್ಬರು ಯೋಧರು (Soldiers) ಹುತಾತ್ಮರಾಗಿದ್ದು, ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡ ಘಟನೆ ಛತ್ತೀಸ್‌ಗಢದಲ್ಲಿ (Chhattisgarh) ನಡೆದಿದೆ.

    ಶನಿವಾರ ಮಧ್ಯಾಹ್ನದ ಸುಮಾರಿಗೆ, ಐಟಿಬಿಪಿ, ಗಡಿ ಭದ್ರತಾ ಪಡೆ (BSF) ಮತ್ತು ಜಿಲ್ಲಾ ರಿಸರ್ವ್ ಗಾರ್ಡ್ ತಂಡಗಳು ಧುರ್ಬೇಡದಲ್ಲಿ ಕಾರ್ಯಾಚರಣೆ ನಡೆಸಿ ನಾರಾಯಣಪುರಕ್ಕೆ ಹಿಂತಿರುಗುತ್ತಿದ್ದಾಗ ಅಬುಜ್‌ಮಾದ್ ಪ್ರದೇಶದ ಕೊಡ್ಲಿಯಾರ್ ಗ್ರಾಮದ ಬಳಿ ಮಾವೋವಾದಿಗಳು ಅಳವಡಿಸಿದ್ದ ಐಇಡಿ ಸ್ಫೋಟಗೊಂಡಿದೆ. ಇದನ್ನೂ ಓದಿ: ಬಿಜೆಪಿ ಟಿಕೆಟ್‌ ಹೆಸರಲ್ಲಿ ವಂಚನೆ – ಜೋಶಿ ಸಹೋದರ ಗೋಪಾಲ್‌ ಜೋಶಿ ಅರೆಸ್ಟ್‌

    ಐಇಡಿ ಸ್ಫೋಟಗೊಂಡ ಪರಿಣಾಮ ಮಹಾರಾಷ್ಟ್ರದ ಸತಾರಾ ಮೂಲದ ಅಮರ್ ಪನ್ವಾರ್ ಮತ್ತು ಆಂಧ್ರಪ್ರದೇಶದ ಕಡಪಾ ಮೂಲದ ಕೆ ರಾಜೇಶ್ ಎಂಬ ಇಬ್ಬರು ಐಟಿಬಿಪಿ ಯೋಧರು ಮೃತಪಟ್ಟಿದ್ದಾರೆ. ಪನ್ವಾರ್ ಮತ್ತು ರಾಜೇಶ್ ಇಬ್ಬರೂ 36 ವರ್ಷ ವಯಸ್ಸಿನವರಾಗಿದ್ದು, ಐಟಿಬಿಪಿಯ 53ನೇ ಬೆಟಾಲಿಯನ್‌ನ ಭಾಗವಾಗಿದ್ದರು. ಇದನ್ನೂ ಓದಿ: ಉಪ ಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಾರ್ಯತಂತ್ರ: ಬಸವರಾಜ ಬೊಮ್ಮಾಯಿ

    ಘಟನೆಯಲ್ಲಿ ಗಂಭೀರ ಗಾಯಗೊಂಡ ಇಬ್ಬರು ಪೊಲೀಸ್ ಸಿಬ್ಬಂದಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಈ ಆಸ್ತಿ ಜಮೀರ್ ಅಹ್ಮದ್ ಅಪ್ಪಂದಾ?: ಯತ್ನಾಳ್ ಕಿಡಿ

  • ತ್ರಿಪುರಾದಲ್ಲಿ ಪ್ರವಾಹ; ರಕ್ಷಣಾ ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಸಾವು

    ತ್ರಿಪುರಾದಲ್ಲಿ ಪ್ರವಾಹ; ರಕ್ಷಣಾ ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಸಾವು

    ಅಗರ್ತಲಾ: ತ್ರಿಪುರಾದಲ್ಲಿ (Tripura Flood) ನಿರಂತರ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಸಿಲುಕಿದ್ದ ಜನರ ರಕ್ಷಣಾ ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಸಾವಿಗೀಡಾಗಿದ್ದಾರೆ.

    ತ್ರಿಪುರಾ ಸ್ಟೇಟ್ ರೈಫಲ್ಸ್ (ಟಿಎಸ್ಆರ್) ಯೋಧ ಸೇರಿದಂತೆ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ದಕ್ಷಿಣ ತ್ರಿಪುರಾ ಜಿಲ್ಲೆಯ ಬೆಲೋನಿಯಾದ ಟಿಎಸ್‌ಆರ್ ಜವಾನ್ ಆಶಿಶ್ ಬೋಸ್ ಮತ್ತು ಪಶ್ಚಿಮ ತ್ರಿಪುರಾ ಜಿಲ್ಲೆಯ ಇಂದ್ರನಗರದ ಚಿರಂಜಿತ್ ಡೇ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಚೆನ್ನೈಗೆ ಯುಎಸ್ ವಿದೇಶಾಂಗ ವ್ಯವಹಾರಗಳ ಹಂಗಾಮಿ ಸಹಾಯಕ ಕಾರ್ಯದರ್ಶಿ ಜೆನ್ನಿಫರ್ ಆರ್. ಲಿಟಲ್‌ಜಾನ್ ಭೇಟಿ

    ಆ.19 ರಿಂದ ರಾಜ್ಯದಲ್ಲಿ ಮಳೆ ಸಂಬಂಧಿತ ಅವಘಡಗಳಿಂದ 24 ಜನರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇಬ್ಬರು ನಾಪತ್ತೆಯಾಗಿದ್ದು, ರಾಜ್ಯದಾದ್ಯಂತ 558 ಪರಿಹಾರ ಶಿಬಿರಗಳಲ್ಲಿ ಸುಮಾರು 1.28 ಲಕ್ಷ ಜನರು ಆಶ್ರಯ ಪಡೆದಿದ್ದಾರೆ.

    ತ್ರಿಪುರಾ ಪ್ರವಾಹಕ್ಕೆ ಸಿಲುಕಿದವರ ರಕ್ಷಿಸುವ ಸಂದರ್ಭದಲ್ಲಿ ಇಬ್ಬರು ವೀರ ಯೋಧರಾದ ಆಶಿಶ್ ಬೋಸ್ ಮತ್ತು ಚಿರಂಜಿತ್ ಡೇ ಅವರು ಪ್ರಾಣ ತ್ಯಾಗ ಮಾಡಿದ್ದಾರೆ. ಅವರ ಅಗಲಿಕೆಯಿಂದ ತೀವ್ರ ದುಃಖವಾಗಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪ. ಅವರ ನಿಸ್ವಾರ್ಥ ಸೇವೆಯನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಮಾಣಿಕ್ ಸಹಾ ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್‌ನಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ನಕಲಿ ಎನ್‌ಸಿಸಿ ಶಿಬಿರದಲ್ಲಿ ಲೈಂಗಿಕ ದೌರ್ಜನ್ಯ ಕೇಸ್ – ಪ್ರಮುಖ ಆರೋಪಿಯ ತಂದೆ ಸಾವು

    ಕಳೆದ ಎರಡು ದಿನಗಳಲ್ಲಿ ಕಡಿಮೆ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿದ್ದು, ಸೆಪಹಿಜಾಲಾ ಜಿಲ್ಲೆಯ ಸೋನಮುರಾದಲ್ಲಿ ಗೋಮತಿ ನದಿಯನ್ನು ಹೊರತುಪಡಿಸಿ ಎಲ್ಲಾ ನದಿಗಳಲ್ಲಿ ನೀರಿನ ಮಟ್ಟ ಅಪಾಯದ ಮಟ್ಟಕ್ಕಿಂತ ಕೆಳಗಿಳಿದಿದೆ. ರಾಜ್ಯಾದ್ಯಂತ ಪ್ರವಾಹದಿಂದಾಗಿ ಸುಮಾರು 5,000 ಕೋಟಿ ರೂ.ನಷ್ಟು ನಷ್ಟವಾಗಿದೆ ಎಂದರು ವರದಿಯಾಗಿದೆ.

  • ಛತ್ತೀಸ್‌ಗಢದಲ್ಲಿ ಐಇಡಿ ಸ್ಫೋಟಕ್ಕೆ ಇಬ್ಬರು ಯೋಧರು ಹುತಾತ್ಮ

    ಛತ್ತೀಸ್‌ಗಢದಲ್ಲಿ ಐಇಡಿ ಸ್ಫೋಟಕ್ಕೆ ಇಬ್ಬರು ಯೋಧರು ಹುತಾತ್ಮ

    ರಾಯ್ಪುರ: ಛತ್ತೀಸ್‌ಗಢದ (Chhattisgarh) ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ನಕ್ಸಲೀಯರು ನಡೆಸಿದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ.

    ರಾಜ್ಯ ಕಾರ್ಯಪಡೆಯ ಮುಖ್ಯ ಕಾನ್ಸ್‌ಟೇಬಲ್ ಭರತ್ ಲಾಲ್ ಸಾಹು ಮತ್ತು ಕಾನ್‌ಸ್ಟೇಬಲ್ ಸತೇರ್ ಸಿಂಗ್ ಹುತಾತ್ಮರಾಗಿದ್ದಾರೆ. ಇದನ್ನೂ ಓದಿ: ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ಗೆ ಕೋವಿಡ್‌ ದೃಢ

    ತಾರೆಮ್ ಪೊಲೀಸ್ ಠಾಣೆ ವ್ಯಾಪ್ತಿಯ ಮಂಡಿಮಾರ್ಕಾ ಅರಣ್ಯದಲ್ಲಿ ಕಳೆದ ರಾತ್ರಿ ಐಇಡಿ ಸ್ಫೋಟ ಸಂಭವಿಸಿದೆ. ಭದ್ರತಾ ಪಡೆ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಪೈಪ್ ಬಾಂಬ್ ಸ್ಫೋಟಗೊಂಡಿದೆ.

    ಗಾಯಗೊಂಡ ಯೋಧರು ಪುರುಷೋತ್ತಮ್ ನಾಗ್, ಕೋಮಲ್ ಯಾದವ್, ಸಿಯಾರಾಮ್ ಸೋರಿ ಮತ್ತು ಸಂಜಯ್ ಕುಮಾರ್ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತಮ ವೈದ್ಯಕೀಯ ಆರೈಕೆಗಾಗಿ ಅವರನ್ನು ರಾಯ್‌ಪುರಕ್ಕೆ ವಿಮಾನದಲ್ಲಿ ಸಾಗಿಸಲು ಸಿದ್ಧತೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಎನ್‌ಕೌಂಟರ್‌ಗೆ 12 ನಕ್ಸಲರು ಬಲಿ

  • ಛತ್ತೀಸ್‌ಗಢದ ದಾಂತೇವಾಡದಲ್ಲಿ ಬಾಂಬ್ ಬ್ಲಾಸ್ಟ್ – ಇಬ್ಬರು ಅರೆಸೇನಾಪಡೆ ಯೋಧರಿಗೆ ಗಾಯ

    ಛತ್ತೀಸ್‌ಗಢದ ದಾಂತೇವಾಡದಲ್ಲಿ ಬಾಂಬ್ ಬ್ಲಾಸ್ಟ್ – ಇಬ್ಬರು ಅರೆಸೇನಾಪಡೆ ಯೋಧರಿಗೆ ಗಾಯ

    ರಾಯ್ಪುರ: ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಶನಿವಾರ ನಕ್ಸಲರು ಹುದುಗಿಸಿಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡ ಪರಿಣಾಮ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿ ಮತ್ತು ಒಬ್ಬ ಪತ್ರಕರ್ತ ಗಾಯಗೊಂಡಿದ್ದಾರೆ.

    ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (PLGA) ಸಪ್ತಾಹದ ನಡುವೆ ಜಿಲ್ಲೆಯ ಬಲಸೂರ್ ಪಲ್ಲಿ ಮಾರ್ಗ್ ಪ್ರದೇಶದಲ್ಲಿ ನಕ್ಸಲರು ಹಾಕಿದ್ದ ಪೋಸ್ಟರ್‌ಗಳನ್ನು ಭದ್ರತಾ ಸಿಬ್ಬಂದಿ ತೆಗೆದುಹಾಕುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇದನ್ನೂ ಓದಿ: ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ: ಭ್ರೂಣ ಹತ್ಯೆ ಕುರಿತು ನರ್ಸ್ ಮಂಜುಳ ಸ್ಫೋಟಕ ಮಾಹಿತಿ

    ಕಳೆದ ವರ್ಷ ಹಲವಾರು ಕಾರಣಗಳಿಂದ ಪ್ರಾಣ ಕಳೆದುಕೊಂಡ 54 ನಕ್ಸಲರ (Naxalites) ಸ್ಮರಣಾರ್ಥ ಭಯೋತ್ಪಾದಕರು ಪಿಎಲ್‌ಜಿಎ ಸಪ್ತಾಹವನ್ನು ಆಚರಿಸುತ್ತಿದ್ದಾರೆ. ಘಟನೆಯ ನಂತರ ಗಾಯಗೊಂಡ ಸಿಬ್ಬಂದಿಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸದ್ಯ ಅಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: 900 ಭ್ರೂಣಗಳ ಹತ್ಯೆ ಆರೋಪಕ್ಕೆ ಅಂಜಿ ವಿಷದ ಚುಚ್ಚುಮದ್ದು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡ್ರಾ ವೈದ್ಯ?

    ಇದಕ್ಕೂ ಮುನ್ನ, ಛತ್ತೀಸ್‌ಗಢದಲ್ಲಿ ಎರಡನೇ ಹಂತದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ, ರಾಜ್ಯದ ಬಿಂದ್ರನವಗಢ ಪ್ರದೇಶದಲ್ಲಿ ಮತಗಟ್ಟೆಯನ್ನು ಗುರಿಯಾಗಿಸಿಕೊಂಡು ನಕ್ಸಲರು ಸುಧಾರಿತ ಸ್ಫೋಟಕ ಸಾಧನವನ್ನು ಸ್ಫೋಟಿಸಿದ ಪರಿಣಾಮ ಒಬ್ಬ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಯೋಧ ಸಾವನ್ನಪ್ಪಿದ್ದರು. ಇದನ್ನೂ ಓದಿ: ಶಿಕ್ಷಕನ ಅಪಹರಿಸಿ, ಬಂದೂಕಿನಿಂದ ಬೆದರಿಸಿ ಮಗಳೊಂದಿಗೆ ಮದುವೆ ಮಾಡಿಸಿದ ಕಿಡ್ನ್ಯಾಪರ್

    ಮತದಾನಕ್ಕೆ ಒಂದು ದಿನ ಮೊದಲು ಛತ್ತೀಸ್‌ಗಢದ ಧಮ್ತಾರಿ ಪ್ರದೇಶದಲ್ಲಿ ಎರಡು ಕಡಿಮೆ ತೀವ್ರತೆಯ ಐಇಡಿ ಸ್ಫೋಟಕಗಳನ್ನು ಸ್ಫೋಟಿಸಿದ್ದರು. ಇದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ. ಅಧಿಕಾರಿಗಳು ಘಟನಾ ಪ್ರದೇಶದಿಂದ 5 ಕೆಜಿ ಸುಧಾರಿತ ಸ್ಫೋಟಕ ಸಾಧನವನ್ನು ವಶಪಡಿಸಿಕೊಂಡಿದ್ದರು. ಇದನ್ನೂ ಓದಿ: ರೆಸ್ಟೋರೆಂಟಲ್ಲಿ ಕೈ ತೊಳೆದು ಬರುವಷ್ಟರಲ್ಲಿ ಪಿಎಸ್‌ಐ ಪಿಸ್ತೂಲ್ ಮಂಗಮಾಯ!

  • ಲಡಾಖ್‌ನಲ್ಲಿ ಕಮರಿಗೆ ಉರುಳಿದ ಸೇನಾ ವಾಹನ – 9 ಮಂದಿ ಯೋಧರು ಹುತಾತ್ಮ

    ಲಡಾಖ್‌ನಲ್ಲಿ ಕಮರಿಗೆ ಉರುಳಿದ ಸೇನಾ ವಾಹನ – 9 ಮಂದಿ ಯೋಧರು ಹುತಾತ್ಮ

    ಲೇಹ್: ದಕ್ಷಿಣ ಲಡಾಖ್‌ನ (Ladakh) ನ್ಯೋಮಾದಲ್ಲಿ ಭಾರತೀಯ ಸೇನಾ ವಾಹನ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ 9 ಮಂದಿ ಸೈನಿಕರು (Soldiers) ಹುತಾತ್ಮರಾಗಿದ್ದು, ಮತ್ತೊಬ್ಬ ಅಧಿಕಾರಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಮೃತರಲ್ಲಿ 8 ಮಂದಿ ಯೋಧರು ಮತ್ತು ಒಬ್ಬರು ಕಮಿಷನ್ಡ್ ಆಫೀಸರ್ (ಜೆಸಿಒ) ಆಗಿದ್ದರು. ಸೇನಾ ಟ್ರಕ್ (Army Vehicle) ಗ್ಯಾರಿಸನ್‌ನಿಂದ ಲೇಹ್ ಬಳಿಯ ಕ್ಯಾರಿಗೆ ಚಲಿಸುತ್ತಿದ್ದ ಸಂದರ್ಭ ಕ್ಯಾರಿ ಪಟ್ಟಣದಿಂದ 7 ಕಿ.ಮೀ. ಮುಂದೆ ಕಮರಿಗೆ ಬಿದ್ದಿದೆ. ಇದನ್ನೂ ಓದಿ: ಕೆಟಿಎಮ್ 390 ಬೈಕ್‌ನಲ್ಲಿ ರಾಹುಲ್ ಗಾಂಧಿ ಲಡಾಖ್ ಪ್ರವಾಸ – ಪ್ಯಾಂಗಾಂಗ್ ಸರೋವರ ಭೇಟಿ

    ಶನಿವಾರ ಸಂಜೆ 6:30ರ ಸುಮಾರಿಗೆ ಘಟನೆ ನಡೆದಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajanath Singh) ಸಾಮಾಜಿಕ ಜಾಲತಾಣದಲ್ಲಿ ಮೃತ ಯೋಧರಿಗೆ ಸಂತಾಪ ಸೂಚಿಸಿದ್ದಾರೆ. ಲಡಾಖ್‌ನ ಲೇಹ್ ಬಳಿ ಅಪಘಾತದಿಂದಾಗಿ ಭಾರತೀಯ ಸೇನಾ ಸಿಬ್ಬಂದಿಯನ್ನು ಕಳೆದುಕೊಂಡಿರುವುದು ಬಹಳ ದುಃಖವನ್ನುಂಟುಮಾಡಿದೆ. ನಮ್ಮ ದೇಶಕ್ಕೆ ಅವರ ಆದರ್ಶ ಸೇವೆಯನ್ನು ಎಂದಿಗೂ ಮರೆಯುವುದಿಲ್ಲ. ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ರಾಜನಾಥ್ ಸಿಂಗ್ ಟ್ವೀಟ್ (Tweet) ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದ್ವಾರಕಾ ಎಕ್ಸ್‌ಪ್ರೆಸ್‌ವೇ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ನಿತಿನ್ ಗಡ್ಕರಿ ಸ್ಪಷ್ಟನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]