ಮಾಗೊಂಡಯ್ಯ ಚನ್ನಯ್ಯ ರೇಷ್ಮೆ (37) ಮೃತ ಯೋಧ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದ ಯೋಧ ಕರ್ತವ್ಯದಲ್ಲಿ ಇದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಾಗೊಂಡಯ್ಯ ಕಳೆದ 14 ವರ್ಷದಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬೆಳಗಾವಿ ಮರಾಠಾ ಇನ್‌ಫೆಂಟ್ರಿ ಯುನಿಟ್ 19 ಮೆಕ್ಯಾನಿಕ್ ಸಿ/ಒ 56 ಎಪಿಒ ಬಿಕಾನರ್ ಕಾಂಟ್ ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದನ್ನೂ ಓದಿ: 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ – ಆರೋಪಿ ಅರೆಸ್ಟ್
ಬೆಳಗಾವಿ: ಭಾರತೀಯ ಸೇನೆಯಲ್ಲಿ (Indian Army) ಸೇವೆ ಸಲ್ಲಿಸುತ್ತಿದ್ದ ಯೋಧರೊಬ್ಬರು (Soldier) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆ ಕಿತ್ತೂರು (Kittur) ತಾಲೂಕು ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ.
ಕಳೆದ 20 ದಿನಗಳ ಹಿಂದೆ ರಜೆ ಮೇಲೆ ದೇಗಾಂವ ಗ್ರಾಮಕ್ಕೆ ಬಂದಿದ್ದರು. ರಜೆ ಮುಗಿಸಿ ನವೆಂಬರ್ 24ರಂದು ಸೇನಾ ಕರ್ತವ್ಯಕ್ಕೆ ಹಾಜರಾಗಬೇಕಾಗಿತ್ತು. ಆದರೆ ಇದೀಗ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವಾರು ಸಂದೇಹಗಳಿಗೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಕಿತ್ತೂರು ಪಿಎಸ್‌ಐ ಪ್ರವೀಣ ಗಂಗೋಳ, ಪ್ರವೀಣ ಕೋಟಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಚನ್ನಪಟ್ಟಣ ಗೆಲುವಿಗೆ ಬಿಜೆಪಿಯವರೂ ಸಪೋರ್ಟ್ ಮಾಡಿದ್ದಾರೆ – ಡಿಕೆಶಿ ಅಚ್ಚರಿ ಹೇಳಿಕೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಅನಂತ್‌ನಾಗ್ (Anantnag) ಜಿಲ್ಲೆಯಲ್ಲಿ ಉಗ್ರರು (Terrorists) ಅಪಹರಿಸಿದ್ದ ಭಾರತೀಯ ಸೇನೆಯ ಇಬ್ಬರು ಯೋಧರಲ್ಲಿ (Indian Soldiers) ಓರ್ವ ಯೋಧ ಶವವಾಗಿ ಪತ್ತೆಯಾಗಿದ್ದಾರೆ. ಯೋಧನ ಮೈಮೇಲೆ ಗುಂಡು ಹಾರಿಸಿರುವ ಗಾಯದ ಗುರುತುಗಳು ಕಂಡುಬಂದಿದ್ದು, ಗುಂಡಿಕ್ಕಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.
ಮಂಗಳವಾರ ನಾಪತ್ತೆಯಾಗಿದ್ದ ಟೆರಿಟೋರಿಯಲ್ ಆರ್ಮಿ ಜವಾನ್ ಹಿಲಾಲ್ ಅಹ್ಮದ್ ಭಟ್ ಅವರ ದೇಹವನ್ನು ಅನಂತನಾಗ್‌ನ ಉತ್ರಾಸೂ ಪ್ರದೇಶದ ಸಾಂಗ್ಲಾನ್ ಅರಣ್ಯ ಪ್ರದೇಶದಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತದೇಹದಲ್ಲಿ ಗುಂಡು ಮತ್ತು ಚಾಕುವಿನಿಂದ ಚುಚ್ಚಿರುವ ಗುರುತುಗಳು ಪತ್ತೆಯಾಗಿವೆ ಎಂದು ಸೇನಾ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಏಕಾಂಗಿಯಾಗಿ ಸ್ಪರ್ಧಿಸಿದ್ದರಿಂದ ಕಾಂಗ್ರೆಸ್‌ಗೆ ಸೋಲು – ಮೈತ್ರಿ ಪಕ್ಷವನ್ನೇ ಟೀಕಿಸಿದ ಶಿವಸೇನೆ
ಇನ್ನು ಉಗ್ರರಿಂದ ಅಪಹರಣಕ್ಕೆ ಒಳಗಾದ ಇಬ್ಬರು ಸೈನಿಕರ ಪೈಕಿ ಓರ್ವ ಸೈನಿಕ ಉಗ್ರರ ಹಿಡಿತದಿಂದ ಪಾರಾಗಿ ತಪ್ಪಿಸಿಕೊಂಡು ಬಂದಿದ್ದಾರೆ. ಭದ್ರತಾ ಪಡೆಗಳು ಈ ಭಾಗದಲ್ಲಿ ತುರ್ತು ರಕ್ಷಣಾ ಕಾರ್ಯಾಚರಣೆ ಆರಂಭ ಮಾಡಿತ್ತು. ಇದನ್ನೂ ಓದಿ: ಬೆಂಗಳೂರಿಗೆ ಆಗಮಿಸಿದ ಮಾಲ್ಡೀವ್ಸ್ ಅಧ್ಯಕ್ಷರಿಗೆ ಆತ್ಮೀಯ ಸ್ವಾಗತ
ಈ ಕುರಿತು ಭದ್ರತಾ ಪಡೆಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಅಪಹರಣವಾಗಿದ್ದ ಇಬ್ಬರು ಸೈನಿಕರು ಟೆರಿಟೋರಿಯಲ್ ಆರ್ಮಿಗೆ ಸೇರಿದ ಯೋಧರು ಎಂದು ಖಚಿತಪಡಿಸಿದೆ. ಈ ಪೈಕಿ ಓರ್ವ ಯೋಧ ಸುರಕ್ಷಿತವಾಗಿ ವಾಪಸ್ ಆಗಿದ್ದಾರೆ ಎಂದೂ ಭದ್ರತಾ ಪಡೆಗಳು ಮಾಹಿತಿ ನೀಡಿದೆ. ಈ ಭಾಗದಲ್ಲಿ ಸೇನಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, ನಾಪತ್ತೆಯಾಗಿದ್ದ ಮತ್ತೋರ್ವ ಯೋಧನಿಗಾಗಿ ಶೋಧಕಾರ್ಯ ನಡೆಸಿತ್ತು. ಇದನ್ನೂ ಓದಿ: ಆಯುಧ ಪೂಜೆಗೂ ದುಡ್ಡಿಲ್ಲದೆ ದಿವಾಳಿ ಆಯ್ತಾ KSRTC – ಒಂದು ಬಸ್ಸಿಗೆ ತಲಾ 100 ರೂ. ಖರ್ಚು ಮಾಡುವಂತೆ ಸೂಚನೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮರಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.
ಗಡಿ ನಿಯಂತ್ರಣ ರೇಖೆಯ ಬಳಿ ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ವಿರುದ್ಧ ಕಾರ್ಯಾಚರಣೆ ವೇಳೆ ಒಬ್ಬ ಯೋಧ ಹುತಾತ್ಮರಾಗಿದ್ದಾರೆ.
ಕೆಲವು ದಿನಗಳ ಹಿಂದೆ ಕುಪ್ವಾರದ ಕೋವುಟ್ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿ ನೀಡಲಾಗಿತ್ತು. ಸೇನೆಯು ಜಮ್ಮು-ಕಾಶ್ಮೀರದ ಪೊಲೀಸರೊಂದಿಗೆ ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿತ್ತು.
ಭಾರತೀಯ ಸೇನೆಯ ಕಾರ್ಯಾಚರಣೆ ವೇಳೆ ಉಗ್ರರು ಸಹ ಗುಂಡಿನ ಚಕಮಕಿ ನಡೆಸಿದರು. ಈ ವೇಳೆ ಸೈನಿಕ ಹುತಾತ್ಮರಾಗಿದ್ದಾರೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಸೇನೆಯು ತಿಳಿಸಿದೆ.
ಗುಂಡಿನ ಚಕಮಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಲ್ಯಾನ್ಸ್ ನಾಯಕ್ ಸುಭಾಷ್ ಕುಮಾರ್ ನಂತರ ಕೊನೆಯುಸಿರೆಳೆದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಸೇನೆಗೆ ಹಸ್ತಾಂತರಿಸಲಾಗಿದೆ.
ಚಿಕ್ಕೋಡಿ (ಬೆಳಗಾವಿ): ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಯೋಧರೊಬ್ಬರ ಪತ್ನಿ (Soldier Wife) ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ((Belagavi) ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ನಡೆದಿದೆ.
ಅತ್ತೆ ಸೇವಂತಾ ಸಿದರಾಯ ರೂಪನವರ ಅವರಿಂದ ರೂಪಾಬಾಯಿ ದಿನಂಪ್ರತಿ ಕಿರಿಕಿರಿ ಅನುಭವಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಇದೇ ಕಾರಣದಿಂದ ಮನನೊಂದು ಅವರು ಆತ್ಮಹತ್ಯೆ ದಾರಿ ಹಿಡಿದಿರುವುದಾಗಿ ಮೃತಳ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.
ಬೆಳಗಾವಿ: ದೇಶಾದ್ಯಂತ ಇಂದು 75ನೇ ಗಣರಾಜ್ಯೋತ್ಸವವನ್ನು (75th Republic Day) ಆಚರಿಸಲಾಗುತ್ತಿದೆ. ಅದರಂತೆ ದೆಹಲಿಯಲ್ಲಿ ನಡೆಯಲಿರುವ ಪಥಸಂಚಲನಕ್ಕೆ ಬೆಳಗಾವಿ ಮೂಲದ ಯೋಧರೊಬ್ಬರು ಆಯ್ಕೆಯಾಗಿದ್ದಾರೆ.
ಹೌದು. ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಿಕಟ್ಟಿ ಗ್ರಾಮದ ಯೋಧ ಅದೃಶ್ಯ ಮಾವಿನಕಟ್ಟಿ ಆಯ್ಕೆಯಾಗಿದ್ದಾರೆ. ಇವರು ಮದ್ರಾಸ್ ರೆಜಿಮೆಂಟ್ ಕ್ರೊಪ ವೆಲ್ಲಿಂಗ್ಟನ್ ನಲ್ಲಿ ತರಬೇತಿ ಪಡೆದಿದ್ದಾರೆ.
ಬಾಗಲಕೋಟೆ: ಬೀಳಗಿ ಪಟ್ಟಣದಲ್ಲಿ ದೇಶ ಕಾಯುವ ಸೈನಿಕ ವಿಶಿಷ್ಟ ರೀತಿಯಲ್ಲಿ ಮದುವೆಯಾಗಿದ್ದಾರೆ. ಮದುವೆ ಮಂಟಪದಲ್ಲೇ ಹುತಾತ್ಮ ಯೋಧರ ಪತ್ನಿಯರು, ನಿವೃತ್ತ ಸೈನಿಕರು ಹಾಗೂ ಯುದ್ಧದಲ್ಲಿ ಗಾಯಗೊಂಡ ಯೋಧರನ್ನು ಸನ್ಮಾನಿಸಿ ಗೌರವಿಸಿದ್ದಾರೆ.
ಬೀಳಗಿ ಪಟ್ಟಣ ನಿವಾಸಿಯಾಗಿರುವ ಸಂತೋಷ್ ಭಾವಿಕಟ್ಟಿ ಸೇನಾ ಯೋಧ, ಗುರುವಾರ ಜರುಗಿದ ತಮ್ಮ ಮದುವೆ ಸಮಾರಂಭದಲ್ಲಿ ಹುತಾತ್ಮ ಯೋಧರ ಧರ್ಮಪತ್ನಿಯರು, ಯುದ್ದದಲ್ಲಿ ಗಾಯಾಳು ಆಗಿರುವ ಸೈನಿಕರು, ನಿವೃತ್ತ ಸೈನಿಕರನ್ನು ಸನ್ಮಾನಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದನ್ನೂ ಓದಿ: ಹೊಸ ವರ್ಷಾಚರಣೆ – ಬ್ರಿಗೇಡ್ ರಸ್ತೆಯಲ್ಲಿ ಜೋಡಿಗಳಿಗೆ ಪ್ರತ್ಯೇಕ ಮಾರ್ಗ
ಶೃತಿ ಎಂಬ ಯುವತಿಯ ಕೈಹಿಡಿದ ಯೋಧ ಸಂತೋಷ್, ಬೀಳಗಿ ಪಟ್ಟಣದ ಹೊರವಲಯದ ಸಿದ್ದೇಶ್ವರ ದೇವಸ್ಥಾನದಲ್ಲಿ ಮದುಯಾಗಿದ್ದಾರೆ. ಕಲ್ಯಾಣ ಮಂಟಪದಲ್ಲಿ ಆರತಕ್ಷತೆಯ ಮಂತ್ರಗಳ ಜೊತೆ ‘ಬೋಲೋ ಭಾರತ್ ಮಾತಾಕೀ ಜೈ… ಇಂಡಿಯನ್ ಆರ್ಮಿಗೆ ಜೈ’ ಎಂಬ ಘೋಷಣೆಗಳು ಮೊಳಗಿದ್ದು ವಿಶೇಷವಾಗಿತ್ತು.
ಸಂತೋಷ್ ಬಾವಿಕಟ್ಟಿ ಸಾಮಾಜಿಕ ಜಾಲತಾಣದಲ್ಲಿ ಖ್ಯಾತಿ ಹೊಂದಿರುವ ಸೇನಾ ಯೋಧರಾಗಿದ್ದು, ದೇಶಭಕ್ತಿ ಹಾಗೂ ವಿವಿಧ ವಿಷಯದ ಬಗ್ಗೆ ರೀಲ್ಸ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಯೋಧ ಸಂತೋಷ್ ತಮ್ಮ ಮದುವೆಯಲ್ಲಿ ಪುಲ್ವಾಮಾ, ಸಿಯಾಚಿನ್ ಪ್ರದೇಶದಲ್ಲಿ ಹುತಾತ್ಮ ಯೋಧರ ಪತ್ನಿಯರನ್ನು ಸನ್ಮಾನಿಸುವ ಕನಸು ಹೊತ್ತಿದ್ದರು. ಅದರಂತೆ ಸೈನಿಕರು ಹಾಗೂ ಸೈನಿಕರ ಕುಟುಂಬದವರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ಇದನ್ನೂ ಓದಿ: ವಿಜಯಪುರದ ನಡು ರಸ್ತೆಯಲ್ಲೇ ಹೊತ್ತಿ ಉರಿದ ಜನತಾ ಬಸ್ – ತಪ್ಪಿದ ಭಾರೀ ಅನಾಹುತ
ತಮ್ಮ ಮದುವೆಗೆ ಸಿಯಾಚಿನ್ ಹುತಾತ್ಮ ಯೋಧ ಹನುಮಂತಪ್ಪ ಕೊಪ್ಪದ ಪತ್ನಿ ಮಹಾದೇವಿ ಕೊಪ್ಪದ, ಕಾರ್ಗಿಲ್ ಯೋಧ ಕ್ಯಾಪ್ಟನ್ ನವೀನ್ ನಾಗಪ್ಪ, ಕಾರ್ಗಿಲ್ ಯುದ್ದದ ಗಾಯಾಳು ಯೋಧ ರಂಗಪ್ಪ ಆಲೂರು, ಪುಲ್ವಾಮಾ ಹುತಾತ್ಮ ಯೋಧ ಕಾಶಿರಾಯ ಬೊಮ್ಮನಹಳ್ಳಿ ಅವರ ಪತ್ನಿ ಸಂಗೀತಾ ಬೊಮ್ಮನಹಳ್ಳಿ ಸೇರಿದಂತೆ ಬಾಗಲಕೋಟೆ, ವಿಜಯಪುರ, ಬೆಳಗಾವಿ ಜಿಲ್ಲೆಯ ಎಂಟು ಮಂದಿಯನ್ನು ಸನ್ಮಾನಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ನಿವೃತ್ತ ಯೋಧರು, ಹುತಾತ್ಮ ಯೋಧರ ಕುಟುಂಬದವರನ್ನ ಸಾಮಾನ್ಯವಾಗಿ ರಾಷ್ಟ್ರೀಯ ಹಬ್ಬಗಳ ಸಮಯದಲ್ಲಿ ಮಾತ್ರ ನೆನಪು ಮಾಡಿಕೊಳ್ಳುತ್ತಾರೆ. ಆದರೆ, ಸಂತೋಷ್ ತನ್ನ ಜೀವನದ ಸಂತೋಷದ ಗಳಿಗೆಗೆ ನಮ್ಮನ್ನೆಲ್ಲ ಕರೆದು ಸನ್ಮಾನಿಸಿ, ಗೌರವಿಸಿದ್ದಾರೆ. ತಮ್ಮ ಕುಟುಂಬದ ಸಂಭ್ರಮದಲ್ಲಿ ನಮ್ಮನ್ನು ಭಾಗಿ ಆಗುವಂತೆ ಮಾಡಿದ್ದಾನೆ. ಅವರ ದಾಂಪತ್ಯ ಜೀವನ ಚೆನ್ನಾಗಿ ಸಾಗಲಿ ಎಂದು ಹಾರೈಸಿದ್ದಾರೆ.
ಮಡಿಕೇರಿ: ಕೇರಳದ (Kerala) ಮಾಜಿ ಯೋಧರೊಬ್ಬರಿಗೆ (Soldier) ಮದುವೆ ಮಾಡಿಸುವುದಾಗಿ ನಂಬಿಸಿ 8 ಲಕ್ಷ ರೂ. ನಗದು ಹಾಗೂ 2,00,000 ರೂ. ಚೆಕ್ ಪಡೆದು ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಕೊಡಗು (Kodagu) ಪೊಲೀಸ್ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ನಿವಾಸಿ ಅಬ್ದುಲ್ ಬಶೀರ್ (29) ಕಡಬದ ನಿವಾಸಿ ಸಾಧಿಕ್ (30) ಹಾಗೂ ಮತ್ತೊಬ್ಬ ಆರೋಪಿ ಫೈಸಲ್, ಈಗಾಗಲೇ ಬೇರೊಂದು ಪ್ರಕರಣದಲ್ಲಿ ಮೈಸೂರಿನಲ್ಲಿ ಬಂಧನವಾಗಿದ್ದಾನೆ. ಬಂಧಿತ ಆರೋಪಿಗಳಿಂದ ಮೊಬೈಲ್, ನಗದು ಹಾಗೂ ಚೆಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೋರ್ವ ಆರೋಪಿ ಅಮೀರ್ ತಲೆಮರೆಸಿಕೊಂಡಿದ್ದಾನೆ. ಇದನ್ನೂ ಓದಿ: 5 ಕಿ.ಮೀ. ಹೊತ್ತು, ಬೆಟ್ಟದಿಂದ ಬೆಟ್ಟಕ್ಕೆ ಹಗ್ಗ ಕಟ್ಟಿ ಟೆಕ್ಕಿ ಮೃತದೇಹ ತಂದ್ರು!
ಏನಿದು ಘಟನೆ?
ಕೇರಳದ ಎರ್ನಾಕುಲಂ (Ernakulam) ಜಿಲ್ಲೆಯ ನಿವಾಸಿ ಮಾಜಿ ಯೋಧ ಜಾನ್ ಮೇಥಿವ್ (64) ಅವರಿಗೆ ಮದುವೆಯಾಗಲು ಒಳ್ಳೆಯ ಒಂದು ಹುಡುಗಿ ಇದ್ದಾಳೆ ಎಂದು ಹೇಳಿ ಅವರನ್ನು ನವೆಂಬರ್ 26ರಂದು ಮಡಿಕೇರಿಯ ಹೋಂ ಸ್ಟೇ (Home Stay) ಒಂದಕ್ಕೆ ಕರೆಸಿಕೊಂಡು ಅಲ್ಲಿ ಮಹಿಳೆ ಒಬ್ಬಳನ್ನು ತೋರಿಸಿ ಇವರನ್ನು ವಿವಾಹವಾಗುವಂತೆ ಹೇಳಿ ಅದೇ ಹೋಂ ಸ್ಟೇನಲ್ಲಿ ಆರೋಪಿಗಳು ಮದುವೆ ಮಾಡಿಸಿ ಇಬ್ಬರನ್ನೂ ಹೋಂ ಸ್ಟೇಯಲ್ಲಿ ಅಂದು ತಂಗಲು ಅವಕಾಶ ನೀಡಿದ್ದರು. ನಂತರ ಸಂಜೆ ಆರೋಪಿಗಳು ಇವರಿಬ್ಬರ ಜೊತೆಯಲ್ಲಿರುವ ಮದುವೆಯ ಫೋಟೋವನ್ನು ಜಾನ್ ಅವರಿಗೆ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿ ಒಟ್ಟು 8 ಲಕ್ಷ ನಗದು ಹಾಗೂ 2 ಲಕ್ಷ ರೂ. ಚೆಕ್ ಅನ್ನು ಪಡೆದು ಆರೋಪಿಗಳು ಪರಾರಿಯಾಗಿದ್ದರು. ಇದನ್ನೂ ಓದಿ: ಆಸ್ತಿ ಬರೆಯಲು ನಿರಾಕರಿಸಿದ ಅಮ್ಮನ ಶಿರಚ್ಛೇದ ಮಾಡಿದ ಪಾಪಿ ಪುತ್ರ!
ನಂತರ ಮೋಸ ಹೋಗಿದ ಮಾಜಿ ಯೋಧ ಜಾನ್ ಮಡಿಕೇರಿ ಪೊಲೀಸರಿಗೆ ನೀಡಿದ ದೂರಿನ ಅನ್ವಯ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿ ಅವರಿಂದ ನಗದು ಹಾಗೂ 3 ಮೊಬೈಲ್, ಚೆಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಮಡಿಕೇರಿ ಡಿವೈಎಸ್ಪಿ ಬಿ.ಜಗದೀಶ್ ಎಂ, ವೃತ್ತ ನಿರೀಕ್ಷಕರಾದ ಅನೂಪ್ ಮಾದಪ್ಪ, ಡಿಸಿಆರ್‌ಬಿ, ಇನ್ಸ್ಪೆಕ್ಟರ್ ಐಪಿ ಮೇದಪ್ಪ, ನಗರ ಠಾಣಾಧಿಕಾರಿ ಲೋಕೇಶ್, ಪೊಲೀಸ್ ಸಿಬ್ಬಂದಿ ಹಾಗೂ ಮಹಿಳಾ ಸಿಬ್ಬಂದಿ ಭಾಗವಹಿಸಿದ್ದರು. ಇದನ್ನೂ ಓದಿ: ಉಪ್ಪಿನಂಗಡಿಯಲ್ಲಿ ಒಂದೇ ಕೋಮಿನ ಜೋಡಿಯನ್ನು ತಡೆದು ಹಲ್ಲೆಗೆ ಯತ್ನ!
ಮೃತ ಯೋಧ ಪದ್ಮರಾಜು ಕಳೆದ 31 ವರ್ಷಗಳಿಂದ ಸಿಆರ್‌ಪಿಎಫ್ ಯೋಧರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಣಿಪುರದಲ್ಲಿ ನಡೆದ ಹಿಂಸಾಚಾರದ ವೇಳೆಯೂ ಅವರು ಕರ್ತವ್ಯ ನಿರ್ವಹಿಸಿದ್ದರು ಎಂದು ತಿಳಿದುಬಂದಿದೆ.
ಕೆ.ಆರ್.ಪುರಂನ ಅವರ ನಿವಾಸಕ್ಕೆ ಪಾರ್ಥಿವ ಶರೀರ ತರಲಾಗಿದ್ದು, ನೂರಾರು ಮಂದಿ ಮೃತ ಯೋಧನ ಅಂತಿಮ ದರ್ಶನಕ್ಕೆ ಬರುತ್ತಿದ್ದಾರೆ. ಇಂದು (ಶನಿವಾರ) ಮಧ್ಯಾಹ್ನ ಹಾಸನ (Hassan) ನಗರ ಹೊರವಲಯದ ಬಿಟ್ಟಗೋಡನಹಳ್ಳಿಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ನವದೆಹಲಿ: ಕಾಶ್ಮೀರದ (Kashmir) ರಜೌರಿಯಲ್ಲಿ ಭಯೋತ್ಪಾದಕರ (Terrorists) ವಿರುದ್ಧ ಕಾರ್ಯಚರಣೆಯಲ್ಲಿ ಹುತಾತ್ಮರಾದ ಬೆಂಗಳೂರು (Bengaluru) ಮೂಲದ ಕ್ಯಾಪ್ಟನ್ ಪ್ರಾಂಜಲ್ (Captain Pranjal) ಅವರ ಕುಟುಂಬಕ್ಕೆ ಇನ್ನೂ ಪರಿಹಾರ (Compensation) ಹಣ ನೀಡಿಲ್ಲ. ಸಿಎಂ ಕೂಡಲೇ ಈ ಬಗ್ಗೆ ಗಮನ ಹರಿಸಿ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಬೇಕು ಎಂದು ಸಂಸದ ತೇಜಸ್ವಿ ಸೂರ್ಯ (Tejasvi Surya) ಆಗ್ರಹಿಸಿದ್ದಾರೆ.
ಈ ಬಗ್ಗೆ ನವದೆಹಲಿಯಲ್ಲಿ (New Delhi) ಮಾತನಾಡಿದ ಅವರು, ಕಳೆದ 2 ವಾರದ ಹಿಂದೆ ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಹುತಾತ್ಮರಾಗಿದ್ದರು. ಅವರ ಪಾರ್ಥಿವ ಶರೀರ ಬೆಂಗಳೂರಿಗೆ ತರುವಾಗ ರಾಜ್ಯಪಾಲರು, ಸಿಎಂ ಸೇರಿ ಎಲ್ಲರೂ ಹೆಚ್‌ಎಎಲ್ (HAL) ವಿಮಾನ ನಿಲ್ದಾಣಕ್ಕೆ ತೆರಳಿದ್ದೆವು. ಅಂದು ಮುಖ್ಯಮಂತ್ರಿಗಳಿಗೆ ನಾನು ಮತ್ತು ವಿಜಯೇಂದ್ರ ಅವರು 50 ಲಕ್ಷ ರೂ. ಪರಿಹಾರ ನೀಡಲು ಮನವಿ ಮಾಡಿದ್ದೆವು. ಅದರಂತೆ ಸಿಎಂ ಪರಿಹಾರ ಘೋಷಣೆ ಮಾಡಿದ್ದರು ಎಂದರು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವು – ಜೋತಿರಾದಿತ್ಯ ಸಿಂಧಿಯಾ ಬಣಕ್ಕೆ ಖುಷಿ ಕೊಡದ ಫಲಿತಾಂಶ
ಯಾರೇ ಸೈನಿಕರು ಹುತಾತ್ಮರಾದರೂ 50 ಲಕ್ಷ ರೂ. ಪರಿಹಾರ ಕೊಡಬಹುದು ಎಂದು ನಿಯಮ ಇದೆ. ಮುಖ್ಯಮಂತ್ರಿಗಳು ಸಹ ಅವತ್ತು ಪರಿಹಾರ ಘೋಷಣೆ ಮಾಡಿದ್ದರು. ಎರಡು ದಿನದ ಹಿಂದೆ ನಾನು ಪ್ರಾಂಜಲ್ ತಂದೆಗೆ ಫೋನ್ ಮಾಡಿ ಪರಿಹಾರದ ಮಾಹಿತಿ ಪಡೆದೆ. ಅವರ ತಂದೆ ಇವತ್ತಿನವರೆಗೂ ಸಹ ನನಗೆ ಯಾವುದೇ ಫೋನ್ ಬಂದಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಹಾವು ಏಣಿಯಾಟ – ಅತಿದೊಡ್ಡ, ಅತಿಸಣ್ಣ ನಿರ್ಣಾಯಕ ಗೆಲುವುಗಳಿವು
ಪರಿಹಾರ ಹಣ ಬಿಡುಗಡೆಗೆ ನಾನು ಸಿಎಂ, ಡಿಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದೇನೆ. ಸಿಎಂಗೆ ಮಾಧ್ಯಮದವರು ಈ ಬಗ್ಗೆ ಪ್ರಶ್ನೆ ಕೇಳಿದರೆ ಪ್ರಾಂಜಲ್ ಅಂದರೆ ಯಾರು? ನಾವೆಲ್ಲಿ ಪರಿಹಾರ ಕೊಡುತ್ತೇವೆ ಎಂದು ಹೇಳಿದ್ದೆವು ಎಂದು ಬೇಜವಾಬ್ದಾರಿಯುತವಾಗಿ ಮಾತನಾಡಿದ್ದಾರೆ. ಓರ್ವ ಯೋಧನ ಬಗ್ಗೆ ಮುಖ್ಯಮಂತ್ರಿಗಳು ಹೀಗೆ ಮಾತನಾಡಿದ್ದು ನೋಡಿ ಬಹಳ ಬೇಸರ ಆಯಿತು ಎಂದರು. ಇದನ್ನೂ ಓದಿ: ಬಿಜೆಪಿಗೆ ಭರ್ಜರಿ ಜಯ, ಹೂಡಿಕೆದಾರರ ಸಂಪತ್ತು ಒಂದೇ ದಿನ 6 ಲಕ್ಷ ಕೋಟಿ ಹೆಚ್ಚಳ – ದಾಖಲೆ ಬರೆದ ಸೆನ್ಸೆಕ್ಸ್
ಪ್ರಾಂಜಲ್ ಮೃತದೇಹ ಬೆಂಗಳೂರಿಗೆ ಬಂದಾಗ ಮುಖ್ಯಮಂತ್ರಿಗಳ ಕಣ್ಣಲ್ಲೂ ಸಹ ನೀರಿತ್ತು. ಅವರು ಸಹ ಭಾವುಕರಾಗಿದ್ದರು. ಆದರೆ ಈಗಾಗಲೇ 15 ದಿನ ಆಯಿತು. ಇನ್ನೂ ಪರಿಹಾರ ಬಂದಿಲ್ಲ. ಆದಷ್ಟು ಬೇಗ ಪರಿಹಾರ ಹಣ ಬಿಡುಗಡೆ ಮಾಡಬೇಕಾಗಿರುವುದು ಸಿಎಂ ಜವಾಬ್ದಾರಿ. ಮುಖ್ಯಮಂತ್ರಿಗಳು ಎಲ್ಲರ ಬಳಿ ಕ್ಷಮೆ ಕೇಳಬೇಕು ಹಾಗೂ ಈ ಕೂಡಲೇ ಪರಿಹಾರ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: Mizoram Election Results: ʻಕೈʼ ಹಿಡಿಯದ ಮಿಜೋರಾಂ – ZPMಗೆ ಗೆಲುವು, 2 ಕ್ಷೇತ್ರಗಳಲ್ಲಿ ಅರಳಿದ ಕಮಲ