Tag: ರಂಜಿತ್‌ ಬಾಲಕೃಷ್ಣನ್‌

  • ನನ್ನನ್ನ ಬೆತ್ತಲೆಗೊಳಿಸಿ ಲೈಂಗಿಕ ಕಿರುಕುಳ ನೀಡಿದ್ರು – ನಿರ್ದೇಶಕ ರಂಜಿತ್‌ ವಿರುದ್ಧ ನಟ ದೂರು, ಕೇಸ್‌ ದಾಖಲು

    ನನ್ನನ್ನ ಬೆತ್ತಲೆಗೊಳಿಸಿ ಲೈಂಗಿಕ ಕಿರುಕುಳ ನೀಡಿದ್ರು – ನಿರ್ದೇಶಕ ರಂಜಿತ್‌ ವಿರುದ್ಧ ನಟ ದೂರು, ಕೇಸ್‌ ದಾಖಲು

    ತಿರುವನಂತಪುರಂ/ಬೆಂಗಳೂರು: ಆಡಿಷನ್‌ ನೆಪದಲ್ಲಿ ಹೋಟೆಲ್‌ಗೆ ಕರೆದು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ 31 ವರ್ಷದ ಪುರುಷನ ನಟರೊಬ್ಬರು ಮಲಯಾಳಂನ ಖ್ಯಾತ ನಿರ್ದೇಶಕ ರಂಜಿತ್‌ ಬಾಲಕೃಷ್ಣನ್‌ (Ranjith Balakrishnan) ವಿರುದ್ಧ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಬೆಂಗಳೂರಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ನ್ಯಾ.ಹೇಮಾ ಸಮಿತಿ ವರದಿ (Hema Committee report) ಬಿಡುಗಡೆಯಾದ ನಂತರ ರಂಜಿತ್‌ ಬಂಗಾಳಿ ನಟಿಯೊಬ್ಬರಿಂದ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿದ್ದರು. ಈ ಬೆನ್ನಲ್ಲೇ ಮತ್ತೊಂದು ಲೈಂಗಿಕ ಕಿರುಕುಳ ಆರೋಪಕ್ಕೆ ಗುರಿಯಾಗಿದ್ದಾರೆ. ನಟನೊಬ್ಬನನ್ನ ಐಷಾರಾಮಿ ಹೋಟೆಲ್‌ಗೆ ಕರೆಸಿ, ವಿವಸ್ತ್ರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖವಾಗಿದೆ. ಈ ಕುರಿತು ಬೆಂಗಳೂರು ಈಶಾನ್ಯ ವಿಭಾಗದ ಬಿಐಎಎಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

    ಕೇರಳ ಪೊಲೀಸರು ಪ್ರಕರಣವನ್ನು ಬೆಂಗಳೂರು ಪೊಲೀಸರಿಗೆ ವರ್ಗಾಯಿಸಿದ ನಂತರ ರಂಜಿತ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ರಂಜಿತ್ ವಿರುದ್ಧ ಐಟಿ ಕಾಯ್ದೆಯ ಐಪಿಸಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧಗಳು) ಮತ್ತು 66-ಇ (ಗೌಪ್ಯತೆಯ ಉಲ್ಲಂಘನೆಗಾಗಿ ಶಿಕ್ಷೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಕೋಝಿಕ್ಕೋಡ್ ಮೂಲದ ಕಲಾವಿದ ಎಂದು ಗುರುತಿಸಿಕೊಂಡಿರುವ ದೂರುದಾರರು, 2012ರಲ್ಲಿ ಬಾವುಟ್ಟಿಯುಡೆ ನಾಮತ್ತಿಲ್’ ಚಿತ್ರದ ಚಿತ್ರೀಕರಣದ ವೇಳೆ ನಟ ಮಮ್ಮುಟ್ಟಿ ಅವರನ್ನು ಭೇಟಿ ಮಾಡಲು ಕೇರಳದ ಈಸ್ಟ್ ಹಿಲ್‌ಗೆ ಹೋಗಿದ್ದ ಸಂದರ್ಭದಲ್ಲಿ ರಂಜಿತ್ ನನ್ನನ್ನು ಭೇಟಿಯಾಗಿದ್ದರು. ಬಳಿಕ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಬಳಿಯ ಐಷಾರಾಮಿ ಹೋಟೆಲ್‌ಗೆ ನನ್ನನ್ನು ಕರೆಸಿಕೊಂಡಿದ್ದ ರಂಜಿತ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ದೂರಿನಲ್ಲಿ ಉಲ್ಲೇಖವಾಗಿದೆ. ಇದನ್ನೂ ಓದಿ: 14,201 ಎಕರೆಯಲ್ಲಿ 773 ಎಕರೆ ಮಾತ್ರ ವಕ್ಫ್‌ಗೆ ನೋಟಿಫಿಕೇಶನ್ ಆಗಿದೆ: ಕೃಷ್ಣಭೈರೇಗೌಡ

    ನನ್ನನ್ನು ಬೆತ್ತಲೆಯಾಗಿ ನಿಲ್ಲುವಂತೆ ರಂಜಿತ್ ಹೇಳಿದ್ದರು. ನಾನು ಅವರು ಹೇಳಿದಂತೆಯೇ ಮಾಡಿದೆ. ಇದೇ ಸಂದರ್ಭದಲ್ಲಿ ರಂಜಿತ್ ಅವರು ನಟಿ ರೇವತಿ ಅವರೊಂದಿಗೆ ಫೋನ್ನಲ್ಲಿ ಮಾತನಾಡುತ್ತಿದ್ದರು. ರಂಜಿತ್ ಮತ್ತು ರೇವತಿ ನಡುವೆ ಯಾವ ರೀತಿಯ ಸಂಬಂಧವಿದೆ ಎಂದು ನನಗೆ ಗೊತ್ತಿಲ್ಲ. ಆದರೆ, ರಂಜಿತ್ ನನ್ನ ಬೆತ್ತಲೆ ಫೋಟೊಗಳನ್ನು ರೇವತಿ ಅವರಿಗೆ ಕಳುಹಿಸಿದ್ದರು. ಆ ಫೋಟೊಗಳನ್ನು ನೋಡಿ ರೇವತಿ ಇಷ್ಟಪಟ್ಟಿದ್ದಾಳೆ ಎಂದು ರಂಜಿತ್ ಹೇಳಿದ್ದರು ಎಂದು ನಟ ದೂರಿನಲ್ಲಿ ವಿವರಿಸಿದ್ದಾರೆ. ಇದನ್ನೂ ಓದಿ: 1974 ಮುಂಚಿನ ದಾಖಲೆ ಇದ್ದರೆ ರೈತರು ಟಾಸ್ಕ್‌ ಫೋರ್ಸ್‌ಗೆ ತಂದುಕೊಡಿ – ಎಂ.ಬಿ ಪಾಟೀಲ್‌