Tag: ರಂಭಾಪುರಿ ಶ್ರೀಗಳು

  • ರಂಭಾಪುರಿ ಶ್ರೀಗಳ ಕಾರಿನತ್ತ ಚಪ್ಪಲಿ ಎಸೆತ ಪ್ರಕರಣ- 59 ಮಂದಿ ವಿರುದ್ಧ ಎಫ್‍ಐಆರ್

    ರಂಭಾಪುರಿ ಶ್ರೀಗಳ ಕಾರಿನತ್ತ ಚಪ್ಪಲಿ ಎಸೆತ ಪ್ರಕರಣ- 59 ಮಂದಿ ವಿರುದ್ಧ ಎಫ್‍ಐಆರ್

    ಬಾಗಲಕೋಟೆ: ರಂಭಾಪುರಿ ಶ್ರೀಗಳ (Rambhapuri Shree) ಕಾರಿನ ಕಡೆ ಚಪ್ಪಲಿ ಎಸೆತ ಹಾಗೂ ಕಾರಿಗೆ ತಡೆ ಒಡ್ಡಿದ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀಗಳ ಭಕ್ತರು ಕಲಾದಗಿ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದೀಗ ಮಹಿಳೆಯರು ಸೇರಿದಂತೆ 59 ಜನರ ವಿರುದ್ಧ ಎಫ್‍ಐಆರ್ (FIR) ದಾಖಲಾಗಿದೆ.

    ತಾಲೂಕಿನ (Bagalkote) ಕಲಾದಗಿ ಗ್ರಾಮದಲ್ಲಿ ಮಹಿಳೆಯೊಬ್ಬಳು ಶನಿವಾರ ಉದಗಟ್ಟಿ ಗ್ರಾಮಕ್ಕೆ ಅಡ್ಡಪಲ್ಲಕ್ಕಿ ಉತ್ಸವಕ್ಕೆ ತೆರಳುತ್ತಿದ್ದ ರಂಭಾಪುರಿ ಶ್ರೀಗಳ ಕಾರಿನತ್ತ ಚಪ್ಪಲಿ ಎಸೆದಿದ್ದಳು. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದೀಗ ಶ್ರೀಗಳ ಭಕ್ತರು ಈ ವಿಚಾರಕ್ಕೆ ಆಕ್ರೋಶಗೊಂಡಿದ್ದು, ಮಠದ ವಿವಾದ ಕೋರ್ಟ್ ನಲ್ಲಿರುವಾಗ ಕಾನೂನು ಸುವ್ಯವಸ್ಥೆ ಹಾಳು ಮಾಡಿದ್ದಾರೆ. ಶಾಂತಿ ಕದಡುವ ಉದ್ದೇಶದಿಂದ ಶ್ರೀಗಳಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ರಂಭಾಪುರಿ ಶ್ರೀಗಳ ಕಾರಿಗೆ ಚಪ್ಪಲಿ ಎಸೆತ

    ಈ ಸಂಬಂಧ ಬಾಗಲಕೋಟೆ ಎಸ್‍ಪಿ ಅಮರನಾಥ ರೆಡ್ಡಿ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

    ಏನಿದು ಗಲಾಟೆ?:
    ಕಲಾದಗಿಯ ಗುರುಲಿಂಗೇಶ್ವರ ಪಂಚಗ್ರಹ ಸಂಸ್ಥಾನ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯರಾದ ಬಳಿಕ ಅವರ ಉತ್ತರಾಧಿಕಾರಿಯನ್ನಾಗಿ ರಂಭಾಪುರಿ ಶ್ರೀಗಳು ಮಧ್ಯಸ್ಥಿಕೆ ವಹಿಸಿ ತಮ್ಮದೇ ಪೀಠದ ಶಿಷ್ಯರಾಗಿರುವ ಕೆ.ಎಮ್ ಗಂಗಾಧರ ಸ್ವಾಮೀಜಿಯನ್ನ ನೇಮಕ ಮಾಡಿದ್ದರು. ಗ್ರಾಮಸ್ಥರ ಸಮ್ಮುಖದಲ್ಲಿ ಉತ್ತರಾಧಿಕಾರಿ ನೇಮಕ ಮಾಡದೇ ಏಕಪಕ್ಷೀಯವಾಗಿ ರಂಭಾಪುರಿ ಶ್ರೀಗಳು ನಿರ್ಧಾರ ತೆಗೆದುಕೊಂಡಿದ್ದಾರೆಂದು ಕೆಲ ಗ್ರಾಮಸ್ಥರು ಆರೋಪಿಸಿದ್ದರು. ನಂತರ ರಂಭಾಪುರಿ ಶ್ರೀಗಳ ವಿರೋಧಿ ಬಣ ನೂತನ ಸ್ವಾಮೀಜಿಯನ್ನಾಗಿ ಮಹಾಂತ ದೇವರು ಸ್ವಾಮೀಜಿಯನ್ನ ಕರೆತಂದು ಅದ್ಧೂರಿ ಮೆರವಣಿಗೆ ಮಾಡಿತ್ತು. ಪರ, ವಿರೋಧ ಬಣಗಳು ಹುಟ್ಟಿಕೊಂಡು ಪ್ರಕರಣ ಈಗ ಜಿಲ್ಲಾ ನ್ಯಾಯಾಲಯದ ಮೆಟ್ಟಿಲೇರಿದೆ.

    ಶನಿವಾರ, ಗಂಗಾಧರ ಸ್ವಾಮೀಜಿ ಮಠದ ಹೊಲದ ಉಳುಮೆಗೆ ಮುಂದಾದಾಗ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಮಠದ ಒಟ್ಟು 72 ಎಕರೆ ಭೂಮಿಯನ್ನು ರಂಭಾಪುರಿ ಶ್ರೀ ಮತ್ತು ಗಂಗಾಧರ ಸ್ವಾಮೀಜಿ ಲಪಟಾಯಿಸಲು ಮುಂದಾಗಿದ್ದಾರೆ ಎನ್ನುವುದು ಭಕ್ತರ ಆರೋಪ. ವಿವಾದ ಕೋರ್ಟ್‍ನಲ್ಲಿರುವಾಗ ಕಟ್ಟಡ ದುರಸ್ತಿ ಹಾಗೂ ಜಮೀನು ಉಳುಮೆಗೆ ಜನರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಗಲಾಟೆ ನಡೆಯುತ್ತಿರುವಾಗಲೇ ಬಾಗಲಕೋಟೆಯಿಂದ ಕಲಾದಗಿ ಮಾರ್ಗವಾಗಿ ಉದಗಟ್ಟಿ ಗ್ರಾಮಕ್ಕೆ ಅಡ್ಡಪಲ್ಲಕ್ಕಿ ಕಾರ್ಯಕ್ರಮಕ್ಕೆ ರಂಭಾಪುರಿ ಶ್ರೀಗಳು ತೆರಳುತ್ತಿದ್ದರು. ಈ ವೇಳೆ ರಂಭಾಪುರಿ ಶ್ರೀಗಳ ಕಾರಿನ ಕಡೆ ಚಪ್ಪಲಿ ಎಸೆಯಲಾಗಿತ್ತು. ಇನ್ನೂ ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದ ರಂಭಾಪುರಿ ಶ್ರೀಗಳು ಕಾರಿಗೆ ಯಾರು ಚಪ್ಪಲಿ ಎಸೆದಿಲ್ಲ ಎಂದಿದ್ದರು. ಇದನ್ನೂ ಓದಿ: ಮಾಜಿ ಪ್ರಧಾನಿ ಹೆಚ್‌ಡಿಡಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

  • 2006ರಲ್ಲಿ ಎಸ್‍ಪಿಬಿ ಹೇಳಿದ್ದ ಗುಟ್ಟು ನೆನೆದ ರಂಭಾಪುರಿ ಶ್ರೀ

    2006ರಲ್ಲಿ ಎಸ್‍ಪಿಬಿ ಹೇಳಿದ್ದ ಗುಟ್ಟು ನೆನೆದ ರಂಭಾಪುರಿ ಶ್ರೀ

    ಚಿಕ್ಕಮಗಳೂರು: ಗಾನ ಗಾರುಡಿಗ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿ ದೇಶದ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದು, ತಮ್ಮೊಂದಿಗಿನ ವಡನಾಟವನ್ನೂ ಮೆಲುಕು ಹಾಕುತ್ತಿದ್ದಾರೆ. ಅದೇ ರೀತಿ ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶ್ರೀ ಡಾ.ವೀರಸೋಮೇಶ್ವರ ಶ್ರೀಗಳು ಸಹ ತಮ್ಮ ಬಳಿ ಎಸ್‍ಪಿಬಿ ಹೇಳಿದ್ದ ಗುಟ್ಟಿನ ಕುರಿತು ಹೇಳಿದ್ದಾರೆ.

    ಕೊರೊನಾ ಚಿಕಿತ್ಸೆಯ ಬಳಿಕ ವಿಶ್ರಾಂತಿಯಲ್ಲಿರುವ ಶ್ರೀಗಳು ಅಲ್ಲಿಂದಲೇ ಗಾನಗಂಧರ್ವನ ಕುರಿತು ಮಾತನಾಡಿದ್ದಾರೆ. ಎಸ್‍ಪಿಬಿ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ನನ್ನ ಹೆಸರು ಶ್ರೀಪತಿ ಪಂಡಿತಾರಾಧ್ಯ ಬಾಲಸುಬ್ರಹ್ಮಣ್ಯಂ ಎಂದು, ನಾನು ಆರಾಧಿಸೋದು ವೀರಭದ್ರಸ್ವಾಮಿಯನ್ನು, ನಮ್ಮದು ವೀರಭದ್ರಸ್ವಾಮಿಯನ್ನು ಆರಾಧಿಸುವ ಮನೆತನ ಎಂದು ಹೇಳಿದ್ದರಂತೆ. 2006ರಲ್ಲಿ ಎಸ್.ಪಿ.ಬಾಲಸುಬ್ರಹ್ಮಣ್ಯಂ ಹೇಳಿದ ಗುಟ್ಟನ್ನು ರಂಭಾಪುರಿ ಶ್ರೀಗಳು ಇದೀಗ ನೆನೆದಿದ್ದಾರೆ.

    ಸೌಜನ್ಯಶೀಲ ಹಿನ್ನೆಲೆಯ ಗಾಯಕ ಬಾಲಸುಬ್ರಹ್ಮಣ್ಯಂ ಅವರ ನಿಧನದ ವಿಷಯ ಕೇಳಿ ಅತ್ಯಂತ ನೋವಾಗಿದೆ. ಎಸ್‍ಪಿಬಿ ಅವರು 15 ಭಾಷೆಗಳಲ್ಲಿ ಸುಮಾರು 40 ಸಾವಿರಕ್ಕೂ ಅಧಿಕ ಹಾಡುಗಳನ್ನು ಸುಮಧುರ ಕಂಠದಿಂದ ಹಾಡಿದ ಶ್ರೇಯಸ್ಸು ಅವರದ್ದು. ಕನ್ನಡದಲ್ಲಿ ಅವರು ಹಾಡಿದ ಭಕ್ತಿಗೀತೆಗಳು ಜನಮನ ಮುಟ್ಟಿದ್ದು, ನಾವು ಅವುಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರು ಹಾಡಿದ ಚಿತ್ರಗೀತೆಗಳು ಕೂಡ ಜನರ ಮನಸ್ಸಲ್ಲಿ ಸದಾ ಹಚ್ಚಹಸಿರಾಗಿವೆ ಎಂದಿದ್ದಾರೆ.

    ಜಗದ್ಗುರು ರೇಣುಕಾಚಾರ್ಯರು ಅಗಸ್ತ್ಯರಿಗೆ ಬೋಧಿಸಿದ ಸಿದ್ಧಾಂತ ಶೀಖಾಮಣಿಯ ಶ್ಲೋಕಗಳನ್ನು ರಾಗ-ಲಯ ಬದ್ಧವಾಗಿ ಹಾಡಿ ಅದಕ್ಕೆ ಕನ್ನಡದಲ್ಲಿ ಸರಳವಾಗಿ ಅರ್ಥವನ್ನೂ ಹೇಳಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಬಾಳೆಹೊನ್ನೂರಿನಲ್ಲಿ ನಡೆದ ರಸಮಂಜರಿ ಕಾರ್ಯಕ್ರಮಕ್ಕೂ ಅವರು ಆಗಮಿಸಿದ್ದರು. ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ದರ್ಶನವನ್ನೂ ಮಾಡಿ ಸಂದರ್ಶನಕ್ಕೆ ಬಂದಾಗ ಗುಟ್ಟಿನ ಮಾತು ಹೇಳಿ ಸಂತೋಷಗೊಳಿಸಿದ್ದರು.

    ವೀರಭದ್ರಸ್ವಾಮಿ ನನ್ನ ಆರಾಧ್ಯ ದೈವ. ನಮ್ಮದು ವೀರಭದ್ರಸ್ವಾಮಿಯನ್ನೇ ಆರಾಧಿಸುವ ಮನೆತನ. ನನ್ನ ಹೆಸರು ಶ್ರೀಪತಿ ಪಂಡಿತರಾಧ್ಯ ಬಾಲಸುಬ್ರಹ್ಮಣ್ಯಂ ಇದು ನನ್ನ ಪೂರ್ಣ ಹೆಸರು ಎಂದು ಹೇಳಿದ್ದರು. ಶಿವ ಭಕ್ತರಾದ ಮತ್ತು ವೀರಶೈವ ಪರಂಪರೆಯಲ್ಲಿ ಹುಟ್ಟಿದ ಅವರು ಎಲ್ಲ ವರ್ಗದ ಎಲ್ಲ ಸಮುದಾಯದ ಜನರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದರು. ಅಂತಹ ಶ್ರೇಷ್ಠ ಗಾಯಕರನ್ನು ಈ ನಾಡು ಕಳೆದುಕೊಂಡು ತಬ್ಬಲಿಯಾಗಿದೆ ಕೊರೊನಾ ಸೋಂಕಿನಿಂದ ಬಳಲಿ ಇಂದು ನಮ್ಮನ್ನೆಲ್ಲ ಬಿಟ್ಟು ಹೋಗಿದ್ದು ಅತೀವ ದುಃಖ ತಂದಿದೆ. ಅವರ ಪವಿತ್ರ ಆತ್ಮಕ್ಕೆ ಭಗವಂತ ಚಿರಶಾಂತಿ ಅನುಗ್ರಹಿಸಲಿ. ಭಗವಂತ ಅವರ ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

  • ಅಕ್ಟೋಬರ್ 2ನೇ ವಾರದಲ್ಲಿ ಯಡಿಯೂರಪ್ಪಗೆ ಮಹಾಯೋಗ -ಭವಿಷ್ಯ ನುಡಿದ ರಂಭಾಪುರಿ ಶ್ರೀಗಳು

    ಅಕ್ಟೋಬರ್ 2ನೇ ವಾರದಲ್ಲಿ ಯಡಿಯೂರಪ್ಪಗೆ ಮಹಾಯೋಗ -ಭವಿಷ್ಯ ನುಡಿದ ರಂಭಾಪುರಿ ಶ್ರೀಗಳು

    ತುಮಕೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪರ ಜಾತಕದಲ್ಲಿ ಅಕ್ಟೋಬರ್ ಎರಡನೇ ವಾರದಲ್ಲಿ ಮಹಾಯೋಗ ಇದೆ ಅಂತ ರಂಭಾಪುರಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

    ನೊಣವಿನಕೆರೆಯ ಕಾಡುಸಿದ್ದೇಶ್ವರ ಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶ್ರೀಗಳು ಈ ಭವಿಷ್ಯವಾಣಿ ನುಡಿದಿದ್ದಾರೆ. ಅಕ್ಟೋಬರ್ ಎರಡನೇ ವಾರದಲ್ಲಿ ಯಡಿಯೂರಪ್ಪರ ಜಾತಕದಲ್ಲಿ ಮಹಾಯೋಗ ಇದೆ. ಈ ಮಹಾಯೋಗದ ಪ್ರಕಾರ ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

    ಅಕ್ಟೋಬರ್ ಎರಡನೇ ವಾರದ ಅಪೂರ್ವ ಘಟ್ಟದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವ ಯೋಗ ಇದೆ ಎಂದರು. ಶ್ರೀಗಳಿಂದ ಹಿತನುಡಿ ಹೊರಬರುತಿದ್ದಂತೆ ಸಮಾರಂಭದಲ್ಲಿ ನೆರೆದವರು ಚಪ್ಪಾಳೆ ಸುರಿಮಳೆಗೈದಿದ್ದಾರೆ.