Tag: ರಕ್ತ ದಾನ

  • ಆ್ಯಸಿಡ್ ಸಂತ್ರಸ್ತೆಯ ಸರ್ಜರಿಗೆ ನೆರವಾದ ಪೊಲೀಸರು

    ಆ್ಯಸಿಡ್ ಸಂತ್ರಸ್ತೆಯ ಸರ್ಜರಿಗೆ ನೆರವಾದ ಪೊಲೀಸರು

    ಬೆಂಗಳೂರು: ಇತ್ತೀಚೆಗೆ ಆ್ಯಸಿಡ್ ದಾಳಿಗೆ ಒಳಗಾಗಿದ್ದ ಯುವತಿಗೆ ರಕ್ತದ ಅವಶ್ಯಕತೆ ಇದ್ದು, ಸಂತ್ರಸ್ತೆಗೆ ರಕ್ತ ದಾನ ಮಾಡುವ ಮೂಲಕ ಪೊಲೀಸರು ಮಾನವೀಯತೆ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಏಪ್ರಿಲ್ 28ರಂದು ಸುಂಕದಕಟ್ಟೆಯಲ್ಲಿ ಆ್ಯಸಿಡ್ ದಾಳಿಗೆ ಒಳಗಾಗಿದ್ದ ಯುವತಿ ಸರ್ಜರಿಗೆ ಒಳಗಾಗಿದ್ದು, ರಕ್ತದ ಅವಶ್ಯಕತೆ ಇತ್ತು. ಹೀಗಾಗಿ ನಗರದ ಕಾಮಾಕ್ಷಿಪಾಳ್ಯದ ಇನ್ಸ್ಪೆಕ್ಟರ್ ಪ್ರಶಾಂತ್ ಸೇರಿದಂತೆ ಐವರು ಸಿಬ್ಬಂದಿ ರಕ್ತದಾನ ಮಾಡಿದ್ದಾರೆ. ಇದನ್ನೂ ಓದಿ: ಪಾಸಿಟಿವಿಟಿ ರೇಟ್ ಶೇ.3.47ಕ್ಕೆ ಏರಿಕೆ – ಬೆಂಗ್ಳೂರಲ್ಲಿ 791 ಕೇಸ್

    ಪೊಲೀಸರು 5 ಯುನಿಟ್ ರಕ್ತದಾನ ಮಾಡಿದ್ದು, ಸಂತ್ರಸ್ತ ಯುವತಿ ಸದ್ಯ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಮೊದಲ ದಿನ ಸಿಇಟಿ ಪರೀಕ್ಷೆ ಸುಗಮ: ಅಶ್ವಥ್ ನಾರಾಯಣ

    Live Tv

  • ನಾಯಿಯಿಂದ ನಾಯಿಗೆ ರಕ್ತದಾನ

    ನಾಯಿಯಿಂದ ನಾಯಿಗೆ ರಕ್ತದಾನ

    ಧಾರವಾಡ: ಒಂದು ನಾಯಿಯಿಂದ ಮತ್ತೊಂದು ನಾಯಿಗೆ ರಕ್ತದಾನ ಮಾಡಿದ ಪ್ರಸಂಗ ಧಾರವಾಡದಲ್ಲಿ ನಡೆದಿದೆ.

    ವಿಜಯಪುರ ಮೂಲದ 7 ತಿಂಗಳ ರಾಟ್ ವಿಲ್ಲರ್ ತಳಿ ನಾಯಿಗೆ ಹೊಟ್ಟೆ ನೋವಿನ ಸಮಸ್ಯೆ ಇದ್ದ ಕಾರಣ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಈ ವೇಳೆ ಆ ನಾಯಿದ ಹೊಟ್ಟೆಯಲ್ಲಿ ರಕ್ತ ಸಾವ್ರವಾಗಿದ್ದರಿಂದ ಬದುಕುಳಿಯುವ ಸಾಧ್ಯತೆ ಕಡಿಮೆ ಇತ್ತು. ಹೀಗಾಗಿ ರಾಟ್ ವಿಲ್ಲರ್ ಮಾಲಿಕ ಧಾರವಾಡ ಕೃಷಿ ವಿವಿಯಲ್ಲಿರುವ ಪಶು ಆಸ್ಪತ್ರೆಗೆ ತಂದಿದ್ದರು. ಕೃಷಿ ವಿವಿಯ ಪಶು ಆಸ್ಪತ್ರೆ ವೈದ್ಯ ಅನಿಲ್ ಪಾಟೀಲ್ ರಾಟ್ ವಿಲ್ಲರಗೆ ಒಂದು ಯುನಿಟ್ ರಕ್ತ ಹಾಕಿದರೆ ಉಳಿಯುತ್ತೆ ಎಂದಿದ್ದಕ್ಕೆ ಧಾರವಾಡದ ಸೋಮಶೇಖರ್ ಅವರ ಜರ್ಮನ್ ಶೆಫರ್ಡ್ ನಾಯಿಯಿಂದ ರಕ್ತದಾನ ಮಾಡಿಸಿದ್ದಾರೆ. ಇದನ್ನೂ ಓದಿ: ಡ್ರಗ್ಸ್‌ ಕೇಸ್‌ – ಶಾರೂಖ್ ಪುತ್ರ ಆರ್ಯನ್ ಜೈಲುಪಾಲು

    ಸೋಮಶೇಖರ್ ಕೂಡ ಮೊದಲು ರಾಟ್ ವಿಲ್ಲರಗಾಗಿ ಹಲವು ಕಡೆ ರಕ್ತ ಹುಡುಕಾಟ ನಡಸಿದ್ದರು. ಆದರೆ ಎರಡೂ ನಾಯಿಗಳ ರಕ್ತ ಮಾದರಿ ಹೊಲಿಕೆಯಾಗದ ಕಾರಣ, ಕೊನೆಗೆ ತನ್ನ ಬಳಿ ಇದ್ದ ನಾಯಿಯ ರಕ್ತದ ಮಾದರಿ ತಪಾಸಣೆ ಮಾಡಿಸಿದ್ದಾರೆ. ಈ ಎರಡೂ ನಾಯಿಗಳ ರಕ್ತದ ಮಾದರಿ ಒಂದೇ ಇದ್ದ ಕಾರಣ ರಕ್ತ ದಾನ ಮಾಡಿಸಿದರು. ಸದ್ಯ ನಾಯಿಗೆ ರಕ್ತದಾನ ಮಾಡುವ ಮೂಲಕ ಜೀವ ಉಳಿಸಿದ್ದಾರೆ.

  • ಕೊರೊನಾ ಸಮಯದಲ್ಲೂ ಕಲಬುರಗಿಯಲ್ಲಿ ಆ್ಯಕ್ಟಿವ್ ಆಗಿದೆ ರಕ್ತದಾನಿಗಳ ತಂಡ

    ಕೊರೊನಾ ಸಮಯದಲ್ಲೂ ಕಲಬುರಗಿಯಲ್ಲಿ ಆ್ಯಕ್ಟಿವ್ ಆಗಿದೆ ರಕ್ತದಾನಿಗಳ ತಂಡ

    – ಕೊರೊನಾ ಸಂದರ್ಭದಲ್ಲಿ ರಕ್ತ ಸಿಗದ್ದನ್ನು ಮನಗಂಡು ಕ್ಯಾಂಪ್ ಆಯೋಜನೆ
    – ರಕ್ತದ ಜೊತೆ ಪ್ಲಾಸ್ಮಾ ಸಹ ಸಂಗ್ರಹ

    ಕಲಬುರಗಿ: ಕೊರೊನಾ ವೈರಸ್ ಹಿನ್ನೆಲೆ ಬಹುತೇಕ ಬ್ಲಡ್ ಬ್ಯಾಂಕ್‍ಗಳಲ್ಲಿ ರಕ್ತದ ಕೊರತೆ ಕಾಡುತ್ತಿದೆ. ಪರಿಸ್ಥಿತಿ ಅರಿತ ಯುವಕರ ತಂಡ ತಮ್ಮದೇ ಗುಂಪು ಕಟ್ಟಿಕೊಂಡು ರಕ್ತ ಸಂಗ್ರಹಕ್ಕೆ ನಿಂತಿದ್ದು, ಕ್ಯಾಂಪ್ ತೆರೆಯುವ ಮೂಲಕ ರಕ್ತ ಸಂಗ್ರಹಿಸುತ್ತಿದ್ದಾರೆ. ಮಾತ್ರವಲ್ಲದೆ ಕೊರೊನಾ ಸೋಂಕಿತರಿಗೆ ಸಹಾಯವಾಗಲು ಪ್ಲಾಸ್ಮಾ ಸಹ ಸಂಗ್ರಹಿಸುತ್ತಿದ್ದಾರೆ.

    ಕೊರೊನಾದಿಂದಾಗಿ ಜಿಲ್ಲೆಯಲ್ಲಿ ಹಲವರು ಸಾವನ್ನಪ್ಪಿದ ಬಳಿಕ ಜಿಲ್ಲೆಯಲ್ಲಿ ಹಲವು ರಕ್ತ ದಾನಿಗಳು ತುರ್ತು ಸಮಯದಲ್ಲಿ ರಕ್ತ ದಾನ ಮಾಡಲು ಆಸಕ್ತಿ ತೋರುತ್ತಿಲ್ಲ. ಹೀಗಾಗಿ ಜಿಲ್ಲೆಯ ಬಹುತೇಕ ಬ್ಲಡ್ ಬ್ಯಾಂಕ್‍ಗಳಲ್ಲಿ ತುರ್ತು ಸಮಯಕ್ಕೆ ರಕ್ತ ಸಿಗದೆ ರೋಗಿಗಳ ಸಂಬಂಧಿಕರು ಪರದಾಡುವಂತಾಗಿದೆ. ಇದನ್ನು ಅರಿತ ಕಲಬುರಗಿಯ ಶರಣು ಪಪ್ಪಾ ನೇತೃತ್ವದ ಜೀ 99 ಹಾಗೂ ಜೀ 55 ಸದಸ್ಯರ ತಂಡ ಜಿಲ್ಲೆಯ ಹಲವೆಡೆ ಬ್ಲಡ್ ಕ್ಯಾಂಪ್ ಆಯೋಜಿಸಿದೆ. ಈ ಮೂಲಕ ಕೊರೊನಾದಂತಹ ಕಷ್ಟ ಕಾಲದಲ್ಲಿ ಹಣ ನೀಡಿದರೂ ರೋಗಿಗಳಿಗೆ ರಕ್ತ ಸಿಗದ ಸಮಯದಲ್ಲಿ ಅವರ ನೇರವಿಗೆ ನಿಂತಿದೆ. ಅಪಘಾತ, ಡೆಲಿವರಿಯಂತಹ ತುರ್ತು ಸಮಯದಲ್ಲಿ ರಕ್ತದ ಅವಶ್ಯವಿರುವವರ ನೇರವಿಗೆ ಧಾವಿಸಿದ್ದಾರೆ.

    ಸದ್ಯ ಈ ತಂಡದಲ್ಲಿ ರಕ್ತ ದಾನ ಮಾಡಲು 300ಕ್ಕೂ ಅಧಿಕ ಸದಸ್ಯರು ನೋಂದಣಿ ಮಾಡಿಸಿಕೊಂಡಿದ್ದಾರೆ. ಮಾತ್ರವಲ್ಲದೆ ಕೊರೊನಾ ಸೋಂಕಿನಿಂದ ಬಳಲುತ್ತಿರುವ ರೋಗ ನಿರೋಧಕ ಶಕ್ತಿ ತೀರಾ ಕಡಿಮೆ ಇರುವವರಿಗೆ ಪ್ಲಾಸ್ಮಾ ಚಿಕಿತ್ಸೆಯ ಅವಶ್ಯವಿದ್ದರೆ ಅಂತಹವರಿಗೆ ಪ್ಲಾಸ್ಮಾ ವ್ಯವಸ್ಥೆಯನ್ನು ಸಹ ಮಾಡುತ್ತಿದ್ದಾರೆ. ಕೊರೊನಾ ಸೋಂಕಿನಿಂದ ಗುಣಮುಖರಾದವರಿಂದ ಪ್ಲಾಸ್ಮಾ ದಾನವಾಗಿ ಪಡೆಯುತ್ತಿದ್ದು, ಈಗಾಗಲೇ ಕಲಬುರಗಿ ಪೊಲೀಸ್ ಪೇದೆ ಜಗದೀಶ್ ಅವರಿಂದ ಪ್ಲಾಸ್ಮಾ ಪಡೆದು, ಮತ್ತೊಬ್ಬರಿಗೆ ನೀಡುವ ಮೂಲಕ ತಂಡ ಒಂದು ಜೀವ ಉಳಿಸಿದೆ.

    ಕೊರೊನಾದಂತಹ ಸಮಯದಲ್ಲಿ ರಕ್ತ ನೀಡಿದರೆ ಸೋಂಕು ಬರುತ್ತೆ ಎಂಬ ಭಯದಲ್ಲಿರುವ ಜನರಿಗೆ ಅರಿವು ಮೂಡಿಸಲಾಗುತ್ತಿದ್ದು, ತಪ್ಪು ಕಲ್ಪನೆಯನ್ನು ಹೋಗಲಾಡಿಸಿ ಜೀ 99 ತಂಡದ ಸದಸ್ಯರು ಜಾಗೃತಿ ಮೂಡಿಸುತ್ತಿದ್ದಾರೆ. ಈ ಮೂಲಕ ಕೊರೊನಾ ವಾರಿಯರ್ಸ್ ಗಳಂತೆ ಇವರು ಸಹ ಜನರ ಜೀವ ಉಳಿಸಲು ತಮ್ಮ ಕೈಲಾದ ಸೇವೆ ಮಾಡುತ್ತಿದ್ದಾರೆ.

  • ರಕ್ತದಾನ ಮಾಡಿ ಮಾದರಿಯಾದ ಪಿಎಸ್‍ಐ

    ರಕ್ತದಾನ ಮಾಡಿ ಮಾದರಿಯಾದ ಪಿಎಸ್‍ಐ

    ಹುಬ್ಬಳ್ಳಿ: ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿರುವ ಪೊಲೀಸ್ ಅಧಿಕಾರಿಯೊಬ್ಬರು ಕರ್ತವ್ಯದಲ್ಲಿರುವಾಗಲೇ ರಕ್ತದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

    ಹುಬ್ಬಳ್ಳಿಯ ಸುಚಿರಾಯು ಆಸ್ಪತ್ರೆಯಲ್ಲಿ ರೋಗಿಯೊಬ್ಬರಿಗೆ ಶಸ್ತ್ರಚಿಕಿತ್ಸೆ ಮಾಡಿದ ಹಿನ್ನೆಲೆಯಲ್ಲಿ ರಕ್ತದ ಅವಶ್ಯಕತೆ ಇತ್ತು. ಸುದ್ದಿ ತಿಳಿಯುತ್ತಿದ್ದಂತೆ ಧಾರವಾಡ ಜಿಲ್ಲೆಯ ಗುಡಗೇರಿ ಪೊಲೀಸ್ ಠಾಣೆಯ ಪಿಎಸ್‍ಐ ನವೀನ ಜಕ್ಕಲಿಯವರು ಆಸ್ಪತ್ರೆಗೆ ಭೇಟಿ ನೀಡಿ ರಕ್ತದಾನ ಮಾಡುವ ಮೂಲಕ ರೋಗಿಯೊಬ್ಬರಿಗೆ ಜೀವದಾನ ಮಾಡಿದ್ದಾರೆ. ವಿಲಿಯಂ ವರ್ಗೀಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಲಾಕ್‍ಡೌನ್ ಸಂದರ್ಭದಲ್ಲಿ ರಕ್ತನಿಧಿಗಳಲ್ಲಿ ರಕ್ತದ ಅಭಾವ ಇರುವುದರಿಂದ ಕರ್ತವ್ಯನಿರತ ಪೊಲೀಸ್ ಅಧಿಕಾರಿ ನವೀನ ಜಕ್ಕಲಿಯವರು ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

    ಕೊರೊನಾ ಹಿನ್ನೆಲೆ ವಾರಿಯರ್ಸ್‍ಗಳಿಗೆ ಕೆಲಸದ ಒತ್ತಡ ಹೆಚ್ಚಾಗಿದ್ದು, ಹಗಲು ರಾತ್ರಿ ಎನ್ನದೆ ದುಡಿಯುತ್ತಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಪೊಲೀಸ್ ಅಧಿಕಾರಿ ಸಾರ್ವಜನಿಕ ಸೇವೆಗೆ ಮುಂದಾಗಿರುವುದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ರಕ್ತ ನಿಧಿಗಳಿಗೂ ತಟ್ಟಿದೆ ವಿಧಾನಸಭಾ ಚುನಾವಣೆಯ ಎಫೆಕ್ಟ್

    ರಕ್ತ ನಿಧಿಗಳಿಗೂ ತಟ್ಟಿದೆ ವಿಧಾನಸಭಾ ಚುನಾವಣೆಯ ಎಫೆಕ್ಟ್

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಎಲ್ಲಾ ಕಡೆ ಅದರ ಬಿಸಿ ತಟ್ಟಿದೆ. ಈಗ ಈ ಚುನಾವಣೆಯ ಪರಿಣಾಮ ರಕ್ತ ನಿಧಿಗಳಿಗೂ ತಟ್ಟಿದೆ.

    ರಾಜ್ಯದಲ್ಲಿ ವಿಧಾನಸಭೆ ಚುನಾವಣಾ ನೀತಿ ಸಂಹಿತೆ ಪರಿಣಾಮದಿಂದಾಗಿ ರಕ್ತದ ಕೊರತೆ ಉಂಟಾಗಿದ್ದು, ರಾಜ್ಯದಲ್ಲಿ ರಕ್ತ ನಿಧಿಗಳಲ್ಲಿ ರಕ್ತವೇ ಸಿಗುತ್ತಿಲ್ಲ. ಇದರಿಂದ ರಾಜ್ಯಾದ್ಯಂತ ಶೇಕಡಾ 80% ಜನ ರಕ್ತದ ಸಿಗದೇ ವಾಪಸ್ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಚುನಾವಣೆಯಿಂದ ರಾಜಕೀಯ ನಾಯಕರು, ಗಣ್ಯರು, ಪ್ರಚಾರದಲ್ಲಿ ತೊಡಗಿದ್ದಾರೆ. ಆದರೆ ಗಣ್ಯರು ತಮ್ಮ ಹುಟ್ಟುಹಬ್ಬದ ಹೆಸರಲ್ಲಿ ರಕ್ತದಾನ ಶಿಬಿರ ಆಯೋಜನೆ ಮಾಡುತ್ತಿದ್ದರು. ಈಗ ಈ ನೀತಿ ಸಂಹಿತೆಯಿಂದ ಗಣ್ಯರ ಹುಟ್ಟು ಹಬ್ಬಕ್ಕೂ ತಡೆಬಿದ್ದಿದ್ದು, ರಕ್ತದಾನ ಶಿಬಿರ ಆಯೋಜನೆಗೆ ನೀತಿ ಸಂಹಿತೆ ಅಡ್ಡಿ ಪಡಿಸಿದೆ. ಇದರಿಂದ ರೋಗಿಗಳು ರಕ್ತ ಸಿಗದೇ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಇನ್ನು ಸಿನಿಮಾ ನಟ-ನಟಿಯರು ಕೂಡ ಚುನಾವಣಾ ಪ್ರಚಾರಕ್ಕಾಗಿ ತೊಡಗಿದ್ದಾರೆ. ಅಷ್ಟೇ ಅಲ್ಲದೇ ಸಂಘ ಸಂಸ್ಥೆಗಳು ಹಾಗೂ ಕಾರ್ಯಕರ್ತರು ಕೂಡ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಆದ್ದರಿಂದ ರಕ್ತದಾನ ಶಿಬಿರ ಆಯೋಜನೆಯಾಗುತ್ತಿಲ್ಲ. ರಾಷ್ಟ್ರೋತ್ಥಾನ ರಕ್ತ ನಿಧಿಯಲ್ಲಿ ತಿಂಗಳಿಗೆ ಸರಾಸರಿ 7 ಸಾವಿರಕ್ಕೂ ಹೆಚ್ಚು ಯೂನಿಟ್ ರಕ್ತ ಸಂಗ್ರಹವಾಗುತ್ತಿತ್ತು. ಆದರೆ ಏಪ್ರಿಲ್‍ನಲ್ಲಿ ಕೇವಲ 2 ಸಾವಿರ ಯೂನಿಟ್ ರಕ್ತ ಸಂಗ್ರಹವಾಗಿದೆ.