Tag: ರಕ್ಷಾ ರಾಮಯ್ಯ

  • ಚುನಾವಣೋತ್ತರ ಸಮೀಕ್ಷೆ ಬೆನ್ನಲ್ಲೇ ಸಾದಲಮ್ಮ ದೇವಿಯ ಮೊರೆ ಹೋದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ

    ಚುನಾವಣೋತ್ತರ ಸಮೀಕ್ಷೆ ಬೆನ್ನಲ್ಲೇ ಸಾದಲಮ್ಮ ದೇವಿಯ ಮೊರೆ ಹೋದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ

    – ಗೆಲುವು ಸಿಗಲಿ ಎಂದು ದೇವರಲ್ಲಿ ಪ್ರಾರ್ಥನೆ

    ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್ ಬೆನ್ನಲ್ಲೇ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿಯಾಗಿರುವ ರಕ್ಷಾ ರಾಮಯ್ಯ (Raksha Ramaiah) ಸಾದಲಮ್ಮ ದೇವಿಯ ಮೊರೆ ಹೋಗಿದ್ದಾರೆ.

    ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಸಾದಲಿ ಗ್ರಾಮದ ಗ್ರಾಮದೇವತೆ ಸಾದಲಮ್ಮ ದೇವಾಲಯಕ್ಕೆ ತಡರಾತ್ರಿ ಭೇಟಿ ನೀಡಿದ ರಕ್ಷಾ ರಾಮಯ್ಯ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಂದ ಹಾಗೆ ಚುನಾವಣಾ ಸಂದರ್ಭದಲ್ಲಿ ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ರಕ್ಷಾ ರಾಮಯ್ಯ ಅವರು ಗೆಲವು ಸಾಧಿಸಬೇಕು ಎಂದು ಸಾದಲಮ್ಮ ದೇವಿಗೆ ಹರಕೆ ಹೊತ್ತುಕೊಂಡಿದ್ದರು. ಇದನ್ನೂ ಓದಿ: ಹಳೇ ಮೈಸೂರು ಭಾಗದಲ್ಲಿ ಮೈತ್ರಿಯಿಂದ 10 ಸ್ಥಾನ ಗೆಲುವು: ಬಿಜೆಪಿ ವಿಶ್ವಾಸ

    ಇನ್ನೇನು ಫಲಿತಾಂಶಕ್ಕೆ ಕೇವಲ ಎರಡು ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ರಕ್ಷಾ ರಾಮಯ್ಯ ಇಬ್ಬರೂ ಸಾದಲಮ್ಮ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸಿದ್ದಾರೆ. ಚೋಳರ ಕಾಲದ ಪುರಾತನ ಪ್ರಸಿದ್ಧ ಸಾದಲಮ್ಮ ದೇವಿಗೆ ಇಷ್ಟಾರ್ಥ ಸಿದ್ದಿಗೆ ಪ್ರಾರ್ಥನೆ ಮಾಡಿಕೊಂಡರೆ ಸಾದಲಮ್ಮ ದೇವಿ ಖಂಡಿತ ಭಕ್ತರ ಇಷ್ಟಾರ್ಥ ಈಡೇರಿಸುತ್ತಾಳೆ ಎಂಬ ನಂಬಿಕೆ ಭಕ್ತರದ್ದಾಗಿದೆ.

    ಸಾದಲಮ್ಮ ದೇವಿಯ ಮಹಿಮೆ ಅಪಾರವಾಗಿದ್ದು, ದೇವಿಯ ಮುಂದೆ ಧ್ಯಾನ ಮಾಡುತ್ತಾ ಪ್ರಾರ್ಥನೆ ಮಾಡಿಕೊಂಡರೆ ದೇವಿ ಕಂಡಿತ ಭಕ್ತರ ಇಷ್ಟಾರ್ಥ ಈಡೇರಿಸುತ್ತಾಳೆ ಎಂಬ ನಂಬಿಕೆಯಿಂದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಸಹ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಧ್ಯಾನ ಮಾಡಿ ದೇವಿಯಲ್ಲಿ ಇಷ್ಟಾರ್ಥ ಸಿದ್ದಿಗಾಗಿ ಪ್ರಾರ್ಥನೆ ಮಾಡಿಕೊಂಡಿದ್ದಾರೆ. ತದನಂತರ ಮಾತನಾಡಿದ ಅವರು, ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Exit Polls – 5 ರಾಜ್ಯಗಳಲ್ಲಿ ಬಿಜೆಪಿ ಕ್ಲೀನ್‌ ಸ್ವೀಪ್‌!

  • ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಿದ ಯುವ ಕಾಂಗ್ರೆಸ್

    ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಿದ ಯುವ ಕಾಂಗ್ರೆಸ್

    – ಬೃಹತ್ ಪ್ರತಿಭಟನಾ ಜಾಥ ಆಯೋಜನೆ

    ಬೆಂಗಳೂರು: ದೇಶದ ಯುವ ಸಮೂಹ ಸೇರಿದಂತೆ ಎಲ್ಲಾ ವರ್ಗಗಳನ್ನು ಅತೀವ ಸಂಕಷ್ಟಕ್ಕೆ ದೂಡಿರುವ, ಅತಿ ಹೆಚ್ಚು ನಿರುದ್ಯೋಗ ಸೃಷ್ಟಿ ಮಾಡಿರುವ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ವಿರುದ್ಧ ಪ್ರದೇಶ ಯುವ ಕಾಂಗ್ರೆಸ್ಸಿನಿಂದ ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಲಾಯಿತು.

    ನರೇಂದ್ರ ಮೋದಿ ಅವರ ಜನ್ಮ ದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಆಚರಿಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಯುವ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಯುವ ಕಾಂಗ್ರೆಸ್ಸಿನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಮತ್ತು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ಜಾಥ ಆಯೋಜಿಸಲಾಗಿತ್ತು. ಪದವಿಧರರು, ಆಟೋ ಚಾಲಕರು, ಅಸಂಘಟಿತ ಕಾರ್ಮಿಕರ ಪೋಷಾಕು ಧರಿಸಿದ ಯುವ ಕಾರ್ಯಕರ್ತರು ‘ನರೇಂದ್ರ ಮೋದಿ ಉದ್ಯೋಗ ಕೊಡಿ’ ಎಂದು ಘೋಷಣೆ ಕೂಗಿದರು.

    ಯುವ ಜನತೆ, ಕಾರ್ಮಿಕರು, ಉದ್ಯೋಗ ಕಳೆದುಕೊಂಡವರ ಧ್ವನಿಯಾಗಿ ಯುವ ಕಾಂಗ್ರೆಸ್ಸಿನಿಂದ ರಾಷ್ಟ್ರೀಯ ನಿರುದ್ಯೋಗ ದಿನವನ್ನು ವಿಭಿನ್ನವಾಗಿ ಆಚರಿಸಿತು. ಉದ್ಯೋಗ ಸೃಷ್ಟಿ ಮತ್ತು ಉದ್ಯೋಗ ನಷ್ಟ ತಪ್ಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಇದನ್ನೂ ಓದಿ: ರಾಜ್ಯದಲ್ಲಿ ಆನ್‍ಲೈನ್ ಬೆಟ್ಟಿಂಗ್ ನಿಷೇಧ: ಅರಗ ಜ್ಞಾನೇಂದ್ರ

    ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಮಾತನಾಡಿ, ಪ್ರಧಾನಿ ಅವರ ಹುಟ್ಟುಹಬ್ಬವನ್ನು ಯುವ ಕಾಂಗ್ರೆಸ್ ದೇಶಾದ್ಯಂತ ನಿರುದ್ಯೋಗ ದಿನವನ್ನಾಗಿ ಆಚರಿಸುತ್ತಿರುವುದು ಈ ದೇಶದ ದುರಂತವಾಗಿದ್ದು, ಈ ಸರ್ಕಾರದಿಂದ ಜನ ಸಾಮಾನ್ಯರಿಗೆ ನ್ಯಾಯ ದೊರೆಯುವುದಿಲ್ಲ. ವಿರುದ್ಧ ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ಕ್ವಿಟ್ ಇಂಡಿಯಾ ಮಾದರಿಯಲ್ಲಿ ಹಾಲಿ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲಾಗುವುದು ಎಂದರು.

    ಮೋದಿ ಅವರು ನೀಡಿದ ಭರವಸೆಯಂತೆ 2014 ರಿಂದ ಈವರೆಗೆ ನಮಗೆ 14 ಕೋಟಿ ಉದ್ಯೋಗ ಸೃಷ್ಟಿಮಾಡಬೇಕಾಗಿತ್ತು. ಆದರೆ ನಾವು 20 ಕೋಟಿ ಉದ್ಯೋಗ ಕಳೆದುಕೊಂಡಿದ್ದೇವೆ. ನಿರುದ್ಯೋಗ ಸಮಸ್ಯೆಯಿಂದ ಬಹಳಷ್ಟು ಮಂದಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಯುವ ಜನರ ಧ್ವನಿಯಾಗಿ ನಾವು ಹೋರಾಟ ಮಾಡುತ್ತೇವೆ. ಜನರ ಪರಿವಾಗಿ ನಾವು ನಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುತ್ತೇವೆ ಎಂದರು.

    ಎಂ.ಎಸ್. ರಕ್ಷಾ ರಾಮಯ್ಯ ಮಾತನಾಡಿ, ದೇಶದಲ್ಲಿ ಶೇ 33 ರಷ್ಟು ಅಪರಾಧ ಪ್ರಕರಣಗಳು ಹೆಚ್ಚಾಗಿದ್ದು, ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗುತ್ತಿದೆ. ಇದಕ್ಕೆಲ್ಲಾ ನಿರುದ್ಯೋಗ ಸಮಸ್ಯೆಯೇ ಕಾರಣ. ಹೀಗಾಗಿ ನಿರುದ್ಯೋಗದ ವಿರುದ್ಧ ನಮ್ಮ ಹೋರಾಟ ತೀವ್ರಗೊಳಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಕತ್ತಿ, ಖಡ್ಗ, ತಲ್ವಾರ್ ಒಂದು ಶಸ್ತ್ರ ಮನೆಯಲ್ಲಿ ಇರಲೇಬೇಕು: ಮುತಾಲಿಕ್

    ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಪ್ರಧಾನಮಂತ್ರಿಯವರ ಆಶ್ವಾಸನೆ ಕಾಗದಗಳಲ್ಲೇ ಉಳಿದಿದೆ. ಯುವ ಸಮೂಹಕ್ಕೆ ಉದ್ಯೋಗ ಒದಗಿಸಲು ಕೇಂದ್ರ ಸರ್ಕಾರ ಯಾವುದೇ ಕಾರ್ಯಕ್ರಮ ಕೈಗೊಂಡಿಲ್ಲ. ಸಣ್ಣ ಮತ್ತು ಮಧ್ಯಮ ಉದ್ಯಮ ನೆಲಕಚ್ಚುವಂತೆ ಮಾಡಿದ್ದು, ಇದರ ಪರಿಣಾಮ ಜನ ಜೀವನ ತೀವ್ರ ಬಾಧಿತವಾಗಿದೆ. ದೇಶದ ಎಲ್ಲಾ ಸಂಕಟಗಳಿಗೂ ಮೋದಿ ಸರ್ಕಾರವೇ ಕಾರಣ ಎಂದು ಆಪಾದಿಸಿದರು.

  • ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ವಿರುದ್ಧ ಎಫ್‍ಐಆರ್

    ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ವಿರುದ್ಧ ಎಫ್‍ಐಆರ್

    ಬೆಂಗಳೂರು: ಸಂಜಯನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.

    ರಾಷ್ಟ್ರಿಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾರಾಮಯ್ಯ ಸೇರಿ ಒಟ್ಟು 17 ಮಂದಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಎಫ್‍ಐಆರ್ 188 ಹಾಗೂ ಎನ್.ಡಿ.ಎಂ.ಎ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಾಗಿದೆ.

    ಜುಲೈ 12 ರಂದು ಬೆಲೆ ಏರಿಕೆ ವಿರುದ್ಧ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ಇದಕ್ಕೆ ಅನುಮತಿಯನ್ನ ಕೇಳಿದ್ದರಾದ್ರೂ ಕೋವಿಡ್ ನಿಯಮದಂತೆ ಅನುಮತಿ ನಿರಾಕರಿಸಲಾಗಿತ್ತು. ಅದಾಗ್ಯೂ ಹೆಬ್ಬಾಳದ ಬ್ಯಾಪಿಸ್ಟ್ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು.

    ರಕ್ಷಾರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ಪ್ರತಿಭಟನೆಗೆ ಯಾವುದೇ ಅನುಮತಿ ಪಡೆಯದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳದೇ, ಸರ್ಕಾರದ ಕೊರೋನಾ ಲಾಕ್ ಡೌನ್ ನಿಯಮಾವಳಿಗಳನ್ನ ಉಲ್ಲಂಘಿಸಲಾಗಿದೆ ಎಂದು ಎಫ್.ಐ.ಆರ್ ನಲ್ಲಿ ಉಲ್ಲೇಖಿಸಿಲಾಗಿದೆ.

  • ಕೊನೆಗೂ ಡಿಕೆಶಿ ಹಠಕ್ಕೆ ಮಣೆ ಹಾಕಿದ ಹೈಕಮಾಂಡ್

    ಕೊನೆಗೂ ಡಿಕೆಶಿ ಹಠಕ್ಕೆ ಮಣೆ ಹಾಕಿದ ಹೈಕಮಾಂಡ್

    – ಒಂದು ವರ್ಷ ರಕ್ಷಾ ರಾಮಯ್ಯ
    – 2 ವರ್ಷ ನಲಪಾಡ್‍ಗೆ ಪಟ್ಟ

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಠಕ್ಕೆ ಹೈಕಮಾಂಡ್ ಕೊನೆಗೂ ಮಣೆ ಹಾಕಿದೆ. 2022ರ ಜನವರಿ 31 ರವರೆಗೆ ಮಾತ್ರ ರಕ್ಷಾ ರಾಮಯ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. 2022 ರ ಜನವರಿ 31ರಿಂದ ಮೊಹಮ್ಮದ್ ನಲಪಾಡ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕವಾಗಲಿದ್ದಾರೆ. ರಕ್ಷಾ ರಾಮಯ್ಯಗೆ ಒಟ್ಟು 1 ವರ್ಷ ಅಧಿಕಾರ, ನಲಪಾಡ್ ಅವರಿಗೆ 2 ವರ್ಷ ಅಧ್ಯಕ್ಷ ಸ್ಥಾನ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ರಿಂದ ಅಧಿಕೃತವಾಗಿ ಪ್ರಕಟಣೆ ಹೊರಡಿಸಲಾಗಿದೆ.

    ಈ ಹಿಂದೆ ಸಿದ್ದರಾಮಯ್ಯ ಡಿಕೆಶಿ ಬಣದ ಪ್ರತಿಷ್ಠೆಯ ಕದನದಲ್ಲಿ ಗಲಾಟೆಗೆ ಹೈ ಕಮಾಂಡ್ ಬ್ರೇಕ್ ಹಾಕಿತ್ತು. ನಲಪಾಡ್‍ರನ್ನು ಯುವ ಕಾಂಗ್ರೆಸ್ ಅಧ್ಯಕ್ಷನನ್ನಾಗಿ ಮಾಡಲು ಮುಂದಾಗಿದ್ದ ಡಿಕೆಶಿಗೆ ಹೈಕಮಾಂಡ್ ಸೂಚನೆಯಿಂದ ಹಿನ್ನಡೆಯಾಗಿತ್ತು. ಎಲ್ಲ ತಣ್ಣಗಾಯ್ತು ಎನ್ನುವಷ್ಟರಲ್ಲಿ ಹೈಕಮಾಂಡ್ ಮಟ್ಟದಲ್ಲಿ ಲಾಬಿ ಮಾಡಿ ತಮ್ಮ ಶಿಷ್ಯ ನಲಪಾಡ್‍ಗೆ ಮುಂದಿನ 2 ವರ್ಷದ ಅಧ್ಯಕ್ಷ ಗಾದಿ ಕೊಡಿಸುವಲ್ಲಿ ಡಿಕೆಶಿ ಯಶಸ್ವಿಯಾಗಿದ್ದಾರೆ.

    ಹಾಲಿ ಅಧ್ಯಕ್ಷ ರಕ್ಷಾ ರಾಮಯ್ಯಗೆ ಇನ್ನು 7 ತಿಂಗಳುಗಳ ಕಾಲವಷ್ಟೇ ಅಧ್ಯಕ್ಷರಾಗಿ ಅಧಿಕಾರ ಮುಂದುವರಿಯಲಿದ್ದಾರೆ. ಈ ಬೆಳವಣಿಗೆ ನಂತರ ಅಧ್ಯಕ್ಷನಾಗಿ ಮುಂದಿನ 2 ವರ್ಷದ ಅಧಿಕಾರ ಸಿಗುವುದು ಖಚಿತವಾಗಿತ್ತಿದ್ದಂತೆ ಸಿದ್ದರಾಮಯ್ಯ ನಿವಾಸದಲ್ಲಿ ಸಿದ್ದರಾಮಯ್ಯರನ್ನು ಭೇಟಿ ಮಾಡಲು ನಲಪಾಡ್ ತೆರಳಿದರು. ಈ ವೇಳೆ ಹಾರ ತುರಾಯಿ ತಂದ ನಲಪಾಡ್‍ಗೆ ಮುಜುಗರ ಆಗುವಂತ ಪ್ರಸಂಗ ನಡೆಯಿತು. ಹಾರ ಹಾಕಲು ಹೋದ ನಲಪಾಡ್‍ಗೆ ಸಿದ್ದರಾಮಯ್ಯ ಹಾರ ಬೇಡ ಎಂದರು. ಪೇಟ ಹಾಕಲು ಮುಂದಾಗಿತ್ತಿದ್ದಂತೆ ಪೇಟವು ಬೇಡ ಎಂದರು. ಅದೆಲ್ಲ ಬೇಡ ಎಂದು ಶಾಲು ಮಾತ್ರ ಸ್ವೀಕರಿಸಿದರು. ಇದಕ್ಕೂ ಮುನ್ನ ನಾನೇನು ಮಾಡಿದ್ದೆನಪ್ಪ ನಿನಗೆ ಎಂದು ಸಿದ್ದರಾಮಯ್ಯ ಅವರು ನಲಪಡ್‍ಗೆ ಪ್ರಶ್ನಿಸಿದರು. ಆ ಬಳಿಕ ಕ್ಯಾಮೆರಾ ನೋಡಿ ಹಾಗೆ ಸುಮ್ಮನಾದರು. ಇದನ್ನೂ ಓದಿ: ಹಗಲು ಹೊಡೆದು ರಾತ್ರಿ ರಾಜಿ ಮಾಡ್ಕೊಂಡ ನಲಪಾಡ್

    ಅಧಿಕಾರ ಸಿಗುವುದು ಖಚಿತವಾಗುತ್ತಿದ್ದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ನಲಪಾಡ್, ಪಕ್ಷ ಯಾವುದೇ ಅಧಿಕಾರ ಕರ್ತವ್ಯ ಕೊಟ್ಟರೂ ನಿರ್ವಹಿಸುತ್ತೇನೆ. ಐವೈಸಿ ನನಗೆ ಈಗ ಅಧಿಕಾರ ನೀಡಿದೆ. ಕಾಂಗ್ರೆಸ್ ನನ್ನ ತಾಯಿ ಇದ್ದಂತೆ. ಕಾಂಗ್ರೆಸ್ ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ. ಯುವಕರನ್ನು ಕಾಂಗ್ರೆಸ್ ಬಳಿ ಸೇರಿಸಲು ಈ ಯುವ ಕಾಂಗ್ರಸ್ ಹುದ್ದೆ ಬೇಕಿದೆ. ಪಕ್ಷ ನನ್ನ ಕೆಲಸ ನೋಡಿ ಪಕ್ಷ ಕಟ್ಟುವ ಕೆಲಸ ನೀಡಿದೆ. ನಾನು ಇದನ್ನು ನಿಭಾಯಿಸಿಕೊಂಡು ಹೋಗುವೆ. ಈಗ ಅಧ್ಯಕ್ಷ ಸ್ಥಾನ ನೀಡಿರುವುದು ಖುಷಿ ತಂದಿದೆ. ತಂದೆ, ತಾಯಿ, ಡಿಕೆಶಿ, ಸಿದ್ದರಾಮಯ್ಯ ಒಂದು ಅವಕಾಶ ಮಾಡಿಕೊಟ್ಟಿದ್ದಾರೆ. ಅದನ್ನು ನಿಭಾಯಿಸಿಕೊಂಡು ಹೋಗುತ್ತೇನೆ. ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಎಲ್ಲರನ್ನೂ ಜೊತೆಗೂಡಿ ಒಟ್ಟಿಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

  • ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನಲಪಾಡ್‍ಗೆ ಕೊಡಿಸಲು ಹೋಗಿ ಡಿಕೆಶಿಗೆ ಮುಖಭಂಗ

    ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನಲಪಾಡ್‍ಗೆ ಕೊಡಿಸಲು ಹೋಗಿ ಡಿಕೆಶಿಗೆ ಮುಖಭಂಗ

    ಬೆಂಗಳೂರು: ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನಲಪಾಡ್ ಗೆ ಕೊಡಿಸಲು ತಡರಾತ್ರಿವರೆಗೆ ರಾಜೀಸಂಧಾನ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಇಂದು ಹೈಕಮಾಂಡ್ ಶಾಕ್ ನೀಡಿದೆ.

    ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಯಾರ ಹೆಸರನ್ನು ಅಧಿಕೃತವಾಗಿ ಪ್ರಕಟಿಸದಂತೆ ಹೈಕಮಾಂಡ್ ಬ್ರೇಕ್ ಹಾಕಿದೆ. ಅಲ್ಲದೆ ಈಗ ರಕ್ಷಾ ರಾಮಯ್ಯ ಅಧ್ಯಕ್ಷರಾಗಿದ್ದು, ಯಥವತ್ತಾಗಿ ಮುಂದುವರಿಯಲಿ ಎಂದು ಸೂಚಿಸಲಾಗಿದೆ.

    ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಗಾದಿ ಬೆಳವಣಿಗೆ ಬಗ್ಗೆ ರಾಹುಲ್ ಗಾಂಧಿ ಅಸಮಧಾನ ಸಹ ವ್ಯಕ್ತಪಡಿಸಿದ್ದಾರೆ. ಪಕ್ಷದ ಆಂತರಿಕ ಚುನಾವಣೆ ನನ್ನ ಕನಸು ಅದನ್ನ ಹೀಗೆಲ್ಲಾ ದುರ್ಬಳಕೆ ಮಾಡಿಕೊಳ್ಳುವುದು ಸರಿಯಲ್ಲ. ಒಂದು ವರ್ಷ ರಕ್ಷಾ ರಾಮಯ್ಯ, 2 ವರ್ಷ ನಲಪಾಡ್ ಯುವ ಕಾಂಗ್ರೆಸ್ ಅಧ್ಯಕ್ಷ ಎಂದು ಡಿಕೆಶಿ ಸಭೆಯಲ್ಲಿ ತೀರ್ಮಾನ ಮಾಡಿದ್ದರು. ಆದರೆ ರಾಜ್ಯದ ಎಲ್ಲಾ ಬೆಳವಣಿಗೆ ಬಗ್ಗೆ ರಾಜ್ಯ ಕಾಂಗ್ರೆಸ್ಸಿನ ಮೂರನೇ ಬಣದ ಹಿರಿಯ ನಾಯಕರಿಂದ ಮಾಹಿತಿ ಪಡೆದ ರಾಹುಲ್ ಗಾಂಧಿ, ಇಂದು ಯಾವ ಪ್ರಕಟಣೆ ಮಾಡದಂತೆ ಡಿಕೆಶಿಗೆ ಸೂಚನೆ ನೀಡಿದ್ದಾರೆ.

    ಈ ಮೂಲಕ ಯುವ ಕಾಂಗ್ರೆಸ್ ಬೆಳವಣಿಗೆ ಬಗ್ಗೆ ಏನೂ ಮಾತನಾಡದಂತೆ ತಾತ್ಕಾಲಿಕ ಬ್ರೇಕ್ ನಿಂದ ನಾನು ಹೇಳಿದವರೆ ಅಧ್ಯಕ್ಷರು ನಾನು ಹೇಳಿದ್ದಷ್ಟು ಟರ್ಮ್ ಎಂದುಕೊಂಡಿದ್ದ ಡಿಕೆಶಿಗೆ ಹಿನ್ನಡೆ ಆಗಿದೆ. ರಾತ್ರೋರಾತ್ರಿ ನಲಪಾಡ್ ಪರ ಲಾಬಿ ಮಾಡಿ ಡಿಸೆಂಬರ್ ಗೆ ಅಧಿಕಾರ ಬಿಟ್ಟುಕೊಡುವಂತೆ ರಕ್ಷಾ ರಾಮಯ್ಯ ಮೇಲೆ ಡಿಕೆಶಿ ಒತ್ತಡ ತಂದಿದ್ದರು. ಆದರೆ ಇದೀಗ ರಾಹುಲ್ ಗಾಂಧಿ ಮಧ್ಯ ಪ್ರವೇಶದಿಂದ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅಧಿಕೃತ ಘೋಷಣೆಗೆ ಬ್ರೇಕ್ ಬಿದ್ದಿದೆ. ಇದನ್ನೂ ಓದಿ: ಶೀಘ್ರ ಸಂಪುಟ ವಿಸ್ತರಣೆ, ಜಾರಕಿಹೊಳಿ,ಮುನಿರತ್ನ ಸಚಿವರಾಗ್ತಾರೆ: ಸಚಿವ ನಾರಾಯಣ ಗೌಡ

    ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ವಿವಾದಕ್ಕೆ ಹೊಸ ತಿರುವು ಸಿಕ್ಕಿದೆ. ರಕ್ಷಾ ರಾಮಯ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಕೆ ಎಂದು ಅಧಿಕೃತವಾಗಿಯೇ INDIAN YOUTH CONGRESS ವೆಬ್ ಸೈಟ್ ನಲ್ಲಿ ಘೋಷಣೆ ಮಾಡಲಾಗಿದೆ. ಅಧಿಕೃತವಾಗಿ ಮಾದ್ಯಮ ಹೇಳಿಕೆ ಪ್ರಕಟಿಸುವ ಮೂಲಕ ಎಲ್ಲ ಗೊಂದಲಗಳಿಗೆ ತೆರೆ ಎರೆಯಲಾಗಿದೆ.ಬೆಂಗಳೂರಿನಲ್ಲಿ ನಿನ್ನೆ ತಡರಾತ್ರಿಯವರೆಗೂ ಡಿಕೆಶಿ ಸರಣಿ ಸಭೆ ನಡೆಸಿದ ಬೆನ್ನಲ್ಲೇ ಮಹತ್ವದ ಘೋಷಣೆಯನ್ನು ಎಐಸಿಸಿ ಮಾಡಿದೆ.