Tag: ರಕ್ಷಿತ್

  • ಪ್ರೇಮ್ ಪುತ್ರಿ 2ನೇ ಸಿನಿಮಾ: ಸ್ಮೈಲ್ ಗುರು ರಕ್ಷಿತ್ ಗೆ ಅಮೃತಾ ನಾಯಕಿ

    ಪ್ರೇಮ್ ಪುತ್ರಿ 2ನೇ ಸಿನಿಮಾ: ಸ್ಮೈಲ್ ಗುರು ರಕ್ಷಿತ್ ಗೆ ಅಮೃತಾ ನಾಯಕಿ

    ಟಗರು ಪಲ್ಯ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಬಲಗಾಲಿಟ್ಟಿದ್ದ ಲವ್ಲಿ ಸ್ಟಾರ್ ಪ್ರೇಮ್ ಮುದ್ದಿನ ಗೊಂಬೆ ಅಮೃತಾ ಪ್ರೇಮ್. ಚೊಚ್ಚಲ ಚಿತ್ರದಲ್ಲಿಯೇ ಭರವಸೆ ಮೂಡಿಸಿದ್ದ ಈ ಸೂರ್ಯಕಾಂತಿ ಮುಂದಿನ ಸಿನಿಮಾ ಯಾವುದು ಎಂದು ಸಿನಿಮಾ ಪ್ರೇಮಿಗಳು ಎದುರು ನೋಡುತ್ತಿದ್ದರು. ಈಗ ಅದಕ್ಕೆ ಉತ್ತರ ಸಿಕ್ಕಿದೆ. ಅಮೃತಾ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಅಳೆದು ತೂಗಿ ಕಥೆ ಆಯ್ಕೆ ಮಾಡಿಕೊಂಡು ನಿರ್ದೇಶಕ ಮಹೇಶ್ ಬಾಬು ಚಿತ್ರದಲ್ಲಿ ನಾಯಕಿಯಾಗಿ ನಟಿಸಲು ಸಮ್ಮತಿ ಸೂಚಿಸಿದ್ದಾರೆ. ವರಮಹಾಲಕ್ಷ್ಮೀ ಹಬ್ಬದ ಸುಸಂದರ್ಭದಲ್ಲಿ ಚಿತ್ರತಂಡ ಅಮೃತಾ ಪ್ರೇಮ್ ಅವರನ್ನು ಸ್ವಾಗತಿಸಿದೆ. ಸ್ಮೈಲ್ ಗುರು ರಕ್ಷಿತ್ ಗೆ ಜೋಡಿಯಾಗಿ ಅಮೃತಾ ಸಾಥ್‌ ಕೊಡುತ್ತಿದ್ದಾರೆ. ನಿರ್ದೇಶಕ ಮಹೇಶ್ ಬಾಬು ಸಾರಥ್ಯದಲ್ಲಿ ನಡೆದ 15 ದಿನಗಳ ವರ್ಕ್ ಶಾಪ್ ನಲ್ಲಿ ನಾಯಕ ರಕ್ಷಿತ್, ನಾಯಕಿ ಅಮೃತಾ ಪ್ರೇಮ್ ಸೇರಿದಂತೆ ಇಡೀ ತಂಡ ಭಾಗಿಯಾಗಿದೆ. ಇನ್ನೂ ಅಮೃತಾ ಪ್ರೇಮ್ ತಮ್ಮ ಪಾತ್ರಕ್ಕೆ ಬೇಕಾದ ಕಸರತ್ತಿನೊಂದಿಗೆ ಶೀಘ್ರದಲ್ಲಿಯೇ ಚಿತ್ರತಂಡ ಸೇರಿಕೊಳ್ಳಲಿದ್ದಾರೆ.

    ಅಮೃತಾ ಪ್ರೇಮ್ (Amrita Prem) ನಾಯಕಿಯಾಗಿ ಅಭಿನಯಿಸಿದ್ದ ಟಗರು ಪಲ್ಯ ಸಿನಿಮಾ ವಿಶೇಷವಾಗಿಯೇ ಇತ್ತು. ಹಳ್ಳಿ ಹುಡುಗಿಯಾಗಿಯೆ ಅಮೃತಾ ಪ್ರೇಮ್ ತುಂಬಾನೆ ಹೆಚ್ಚು ಗಮನ ಸೆಳೆದಿದ್ದರು. ಮೊದಲ ಚಿತ್ರದಲ್ಲಿಯೇ ದೊಡ್ಡ ಕಲಾವಿದರ ಮುಂದೆ ಅಭಿನಯಿಸಿ ಸೈ ಎನಿಸಿಕೊಂಡಿದ್ದರು.  ಚಿತ್ರದ ಮೂಲಕವೇ ಸೌತ್ ಫಿಲ್ಮಂ ಫೇರ್ ಪ್ರಶಸ್ತಿಯನ್ನ ಪಡೆದುಕೊಂಡಿದ್ದಾರೆ. ದಕ್ಷಿಣದ ವಿವಿಧ ಭಾಷೆಯ ಸಿನಿಮಾಗಳಿಗೆ ವಿವಿಧ ವಿಭಾಗದಲ್ಲಿಯೇ ಪ್ರಶಸ್ತಿಯನ್ನ ಕೊಡಲಾಗುತ್ತದೆ. ಆ ರೀತಿ ಕನ್ನಡದ ಟಗರು ಪಲ್ಯದ ಚಿತ್ರದಲ್ಲಿ ನಟಿಸಿರೋ ನಟಿ ಅಮೃತಾ ಪ್ರೇಮ್, ಅತ್ಯುತ್ತಮ ಡೆಬ್ಯು ಪ್ರಶಸ್ತಿ ಪಡೆದುಕೊಂಡಿದ್ದಾರೆ.

    ಕಿರುಚಿತ್ರ, ಧಾರಾವಾಹಿ, ರಿಯಾಲಿಟಿ ಶೋ ಅಂತಿದ್ದ ಸ್ಮೈಲ್ ಗುರು ರಕ್ಷಿತ್ ನಾಯಕನಾಗಿ ಇಂಡಸ್ಟ್ರಿಗೆ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಇವರ ಚೊಚ್ಚಲ ಸಿನಿಮಾಗೆ ‘ಆಕಾಶ್’, ‘ಅರಸು’ ಅಂತಹ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ಮಹೇಶ್ ಬಾಬು ಆಕ್ಷನ್ ಕಟ್ ಹೇಳುತ್ತಿದ್ದಾರೆ.

    ಕನ್ನಡ ಚಿತ್ರರಂಗಕ್ಕೆ ಸದಭಿರುಚಿಯ ಸಿನಿಮಾ ಕೊಡಬೇಕು ಎಂಬ ಉದ್ದೇಶದಿಂದ ಎಂಎಂಎಂ ಪಿಕ್ಚರ್ಸ್ ಹಾಗೂ ಎ ಕ್ಲಾಸ್ ಸಿನಿ ಫಿಲ್ಮಂಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಈ ನಿರ್ಮಾಣ ಸಂಸ್ಥೆಯಡಿ ಅನುರಾಗ್ ಆರ್ ಹಾಗೂ ಮಿಥುನ್ ಕೆ.ಎಸ್ ಸೇರಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಮಾಡುತ್ತಿದ್ದರೆ, ಸತ್ಯ ಅವರು ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ಸತೀಶ್ ಚಂದ್ರಯ್ಯ ಅವರ ಸಂಕಲನ ಈ ಚಿತ್ರಕ್ಕಿರಲಿದೆ. ನಾಯಕ ಸ್ಮೈಲ್ ಗುರು ರಕ್ಷಿತ್ ಕಥೆ ಬರೆದಿದ್ದು, ವಿಜಯ್ ಈಶ್ವರ್ ಸಂಭಾಷಣೆ ಒದಗಿಸಿದ್ದಾರೆ. ಸದ್ಯ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ.

  • ‘ವೀರ ಮದಕರಿ’ ಬಾಲನಟಿ ಈಗ ನಾಯಕಿ- ಮಹೇಶ್ ಬಾಬು, ರಕ್ಷಿತ್ ಸಿನಿಮಾದಲ್ಲಿ ಜೆರುಶಾ

    ‘ವೀರ ಮದಕರಿ’ ಬಾಲನಟಿ ಈಗ ನಾಯಕಿ- ಮಹೇಶ್ ಬಾಬು, ರಕ್ಷಿತ್ ಸಿನಿಮಾದಲ್ಲಿ ಜೆರುಶಾ

    ಹೇಶ್ ಬಾಬು (Mahesh Babu) ಕನ್ನಡ ಚಿತ್ರರಂಗದ ಸ್ಟಾರ್ ನಿರ್ದೇಶಕ. ಆಕಾಶ್, ಅರಸು, ಪರಮೇಶ ಪಾನ್ ವಾಲ ಮುಂತಾದ ಸ್ಟಾರ್ ಸಿನಿಮಾಗಳನ್ನು ಮಾಡಿರುವ ಅವರು, ಈಗ ಮತ್ತೊಂದು ಹೊಸ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಅಪರೂಪ ಎಂಬ ಸಿನಿಮಾ ಮೂಲಕ ಯುವ ಪ್ರತಿಭೆಗಳನ್ನು ಸ್ಯಾಂಡಲ್‌ವುಡ್‌ಗೆ ಪರಿಚಯಿಸಿದ್ದ ಅವರೀಗ ಸ್ಮೈಲ್ ಗುರು ರಕ್ಷಿತ್ ಅನ್ನು (Smile Guru Rakshith) ನಾಯಕನಾಗಿ ಕನ್ನಡ ಸಿನಿಮಾ ಪ್ರೇಮಿಗಳ ಎದುರು ತರುತ್ತಿದ್ದಾರೆ.

    ಮಹೇಶ್ ಬಾಬು, ರಕ್ಷಿತ್ ಹೊಸ ಸಿನಿಮಾ ಈಗಾಗಲೇ ಅನೌನ್ಸ್ ಆಗಿದೆ. ಇದೀಗ ಹೊಸ ಸಮಾಚಾರ ಏನಂದರೆ ಈ ಚಿತ್ರದ ಮೂಲಕ ಮತ್ತೊಬ್ಬ ಯುವ ನಟಿಯನ್ನು ಲಾಂಚ್ ಮಾಡುತ್ತಿದ್ದಾರೆ ಮಹೇಶ್. ಮೆರವಣಿಗೆ ಸಿನಿಮಾ ಮೂಲಕ ಐಂದ್ರಿತಾ ರೇ, ಚಿರು (Chiru Film) ಸಿನಿಮಾ ಮೂಲಕ ಕೃತಿ ಕರಬಂಧ, ಅಜಿತ್ ಚಿತ್ರದ ಮೂಲಕ ನಿಕ್ಕಿ ಗಲ್ರಾನಿ, ಕ್ರೇಜಿ ಬಾಯ್ (Crazy Boy) ಮೂಲಕ ಆಶಿಕಾ ರಂಗನಾಥ್ ಹೀಗೆ ಹಲವಾರು ನಟಿಯರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ನಿರ್ದೇಶಕ ಮಹೇಶ್ ಬಾಬು ಇದೀಗ ಹೊಸ ಮುಖ ಜೆರುಶಾರನ್ನು ನಾಯಕಿಯಾಗಿ ಲಾಂಚ್ ಮಾಡುತ್ತಿದ್ದಾರೆ. ಇದನ್ನೂ ಓದಿ:ಕಿಚ್ಚನ ಕುಟುಂಬದ ಜೊತೆ ಊಟ ಸವಿದ ವಿನಯ್ ಗೌಡ

    ಅಂದಹಾಗೆ, ಜೆರುಶಾ ಕ್ಯಾಮೆರಾ ಹೊಸದೇನಲ್ಲ. ಈಗಾಗಲೇ ಸುದೀಪ್ ಅಭಿನಯದ ‘ವೀರ ಮದಕರಿ’ (Veera Madakari) ಚಿತ್ರದಲ್ಲಿ ಬಾಲ ಕಲಾವಿದೆಯಾಗಿ ಪ್ರೇಕ್ಷಕರ ಗಮನ ಸೆಳೆದಿದ್ದರು. ಜಾಹೀರಾತುಗಳು ಮತ್ತು ರಂಗಭೂಮಿ ಹಿನ್ನೆಲೆ ಹೊಂದಿರುವ ಜೆರುಶಾ (Jerusha Christopher) ಇದೀಗ ಮಹೇಶ್ ಬಾಬು ನಿರ್ದೇಶನದ ಚಿತ್ರದ ಮೂಲಕ ಬೆಳ್ಳಿತೆರೆಗೆ ಪದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ.

    ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಳ್ಳಲು ಹೆಸರಾಗಿರುವ ಸ್ಮೈಲ್ ಗುರು ರಕ್ಷಿತ್‌ಗೆ ಜೋಡಿಯಾಗಿ ಜೆರುಶಾ ಮಿಂಚಲಿದ್ದಾರೆ. ಮಹೇಶ್ ಬಾಬು ಅವರು ಪ್ರಮುಖ ಪಾತ್ರವೊಂದಕ್ಕೆ ಮತ್ತೊಬ್ಬ ಪ್ರತಿಭಾವಂತ ನಟಿ ಆಯ್ಕೆಯಲ್ಲಿ ತೊಡಗಿದ್ದು, ಅದರ ವಿವರಗಳನ್ನು ಶೀಘ್ರದಲ್ಲೇ ಅನಾವರಣಗೊಳಿಸಲಾಗುವುದು.

    ಅಂದಹಾಗೆ, ಮಹೇಶ್ ಬಾಬು ಹೊಸ ಕಥೆಗೆ ಸದ್ಯ ಶೀರ್ಷಿಕೆ ಫೈನಲ್ ಆಗಿಲ್ಲ. ಈ ಚಿತ್ರಕ್ಕೆ ಚೇತನ್ ಮತ್ತು ಅನುರಾಗ್ ಬಂಡವಾಳ ಹೂಡಲಿದ್ದಾರೆ. ಚಿತ್ರಕ್ಕೆ ಅನೂಪ್ ಸೀಳಿನ್ ಅವರ ಸಂಗೀತ ಸಂಯೋಜನೆ ಮತ್ತು ಸತ್ಯ ಛಾಯಾಗ್ರಾಹಣವಿರಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರಮುಖ ಸ್ಥಳಗಳಲ್ಲಿ ಮೇ ತಿಂಗಳಿನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

  • ಬಾಲಿವುಡ್ ಬೆಡಗಿ ಮೀರಾ ಚೋಪ್ರಾ ವೆಡ್ಡಿಂಗ್ ಕಾರ್ಡ್ ವೈರಲ್: ಏನೆಲ್ಲ ವಿಶೇಷ

    ಬಾಲಿವುಡ್ ಬೆಡಗಿ ಮೀರಾ ಚೋಪ್ರಾ ವೆಡ್ಡಿಂಗ್ ಕಾರ್ಡ್ ವೈರಲ್: ಏನೆಲ್ಲ ವಿಶೇಷ

    ನ್ನಡದ ಅರ್ಜುನ್ ಸಿನಿಮಾದಲ್ಲಿ ನಟಿಸಿದ್ದ, ಬಾಲಿವುಡ್ ನಟಿ ಮೀರಾ ಚೋಪ್ರಾ ಹೊಸ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಎರಡು ದಿನಗಳ ಕಾಲ ನಡೆಯಲಿರುವ ಈ ನಟಿಯ ಮದುವೆಗೆ ಒಟ್ಟು ಆರು ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಲಾಗಿದೆ. ಅಷ್ಟೂ ಕಾರ್ಡ್ ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

    ಮುಂಬೈ ಬೆಡಗಿ, ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಸಹೋದರಿ ಮೀರಾ ಚೋಪ್ರಾ (Meera Chopra) ಉದ್ಯಮಿ ರಕ್ಷಿತ್ (Rakshit) ಎನ್ನುವವರ ಜೊತೆ ಮದುವೆ ಆಗುತ್ತಿದ್ದಾರೆ. ಇದೇ ಮಾರ್ಚ್ 11 ಮತ್ತು 12ರಂದು ಮದುವೆ ಸಮಾರಂಭ ನಡೆಯಲಿದೆ. ಜೈಪುರ ಮತ್ತು ದೆಹಲಿ ಹೆದ್ದಾರಿ ಬಳಿಯಿರುವ ಐಷಾರಾಮಿ ರೆಸಾರ್ಟ್‌ವೊಂದರಲ್ಲಿ ಮೀರಾ ಮದುವೆ (Wedding) ನಡೆಯಲಿದೆ. ಅದಕ್ಕಾಗಿ ಸಕಲ ಸಿದ್ಧತೆ ಕೂಡ ನಡೆಯುತ್ತಿದೆ.

    ಮೀರಾ ಚೋಪ್ರಾ ಮೂಲತಃ ಮುಂಬೈ ಹುಡುಗಿ ಆಗಿದ್ರೂ ಅವರಿಗೆ ಕನ್ನಡಕ್ಕೆ ನಂಟಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ನಾಯಕಿ ನಟಿಸಿ ಸೈ ಎನಿಸಿಕೊಂಡಿದ್ದರು. ಕನ್ನಡಿಗರಿಗೆ ಅರ್ಜುನ್ ಚಿತ್ರದ ನಟಿ ಅಂದರೆ ಅವರು ಎಂಬುದು ನೆನಪಾಗುತ್ತಾರೆ.

    ಸಹೋದರಿ ಸಂಬಂಧಿ ಪ್ರಿಯಾಂಕಾರಂತೆ ಅವರಿಗೆ ಮೀರಾ ಬಾಲಿವುಡ್‌ನಲ್ಲಿ ಗಟ್ಟಿ ನೆಲೆ ಸಿಗಲಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಇದ್ದರೂ ಕೂಡ ಸಿನಿಮಾರಂಗ ಅವರ ಕೈಹಿಡಿಯಲಿಲ್ಲ.

     

    ‘1920 ಲಂಡನ್’, ‘ಸೆಕ್ಷನ್ 375’, ‘ಕಾಮಾತಿಪುರ’ ಎಂಬ ಹಿಂದಿ ಸಿನಿಮಾಗಳಲ್ಲಿ ಮೀರಾ ಚೋಪ್ರಾ ನಟಿಸಿದ್ದಾರೆ. ‘ಸಫೇದ್’ ಸಿನಿಮಾ ಕೂಡ ಬಿಡುಗಡೆಗೆ ಸಿದ್ಧವಾಗಿದೆ.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಶ್ರೀರಸ್ತು ಶುಭಮಸ್ತು’ ನಟಿ ದೀಪಾ ಕಟ್ಟೆ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಶ್ರೀರಸ್ತು ಶುಭಮಸ್ತು’ ನಟಿ ದೀಪಾ ಕಟ್ಟೆ

    ‘ಮಿಥುನರಾಶಿ’, ಶ್ರೀರಸ್ತು ಶುಭಮಸ್ತು ಸೀರಿಯಲ್ ನಟಿ ದೀಪಾ ಕಟ್ಟೆ (Deepa Katte) ಅವರು ವೈವಾಹಿಕ (Wedding) ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಳ್ತಂಗಡಿಯ ಉಜಿರೆಯಲ್ಲಿ ಸರಳವಾಗಿ ನಟಿ ಹಸೆಮಣೆ ಏರಿದ್ದಾರೆ. ಇದನ್ನೂ ಓದಿ:ನಂದಮೂರಿ ಬಾಲಯ್ಯ ಸಿನಿಮಾದಲ್ಲಿ ಹ್ಯಾಟ್ರಿಕ್‌ ಹೀರೋ ಶಿವಣ್ಣ

     

    View this post on Instagram

     

    A post shared by Deepa Katte – Menaka (@deepa_katte)

    ‘ಮಿಥುನರಾಶಿ’ (Mithunarashi) ಸೀರಿಯಲ್ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ದೀಪಾ ಕಟ್ಟೆ ಅವರು ಸದ್ಯ `ಶ್ರೀರಸ್ತು ಶುಭಮಸ್ತು’ ಧಾರಾವಾಹಿಯಲ್ಲಿ ಸುಧಾರಾಣಿ (Sudharani) ಅವರ ಮಗಳ ಪಾತ್ರದಲ್ಲಿ ದೀಪಾ ನಟಿಸುತ್ತಿದ್ದಾರೆ. ಕೊಂಚ ನೆಗೆಟಿವ್ ಶೇಡ್ ಇರುವ ಪಾತ್ರ ಇದಾಗಿದೆ.

    ಮೇ 22ರಂದು ಸಾಫ್ಟ್ವೇರ್ ಇಂಜಿನಿಯರ್ ರಕ್ಷಿತ್ ಜೊತೆ ಬೆಳ್ತಂಗಡಿ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಕೃಷ್ಣಾನುಗ್ರಹ ಸಭಾ ಗೃಹದಲ್ಲಿ ಅದ್ದೂರಿಯಾಗಿ ದೀಪಾ ಕಟ್ಟೆ ಅವರು ಮದುವೆಯಾಗಿದ್ದಾರೆ.

    ನೆಚ್ಚಿನ ನಟಿ ಹಸೆಮಣೆ ಏರಿರೋ ಗುಡ್ ನ್ಯೂಸ್ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ದೀಪಾ ಕಟ್ಟೆ ವೈವಾಹಿಕ ಬದುಕಿಗೆ ಶುಭಾವಾಗಲಿ ಎಂದು ಹಾರೈಸುತ್ತಿದ್ದಾರೆ.

  • ತಪ್ಪು ಮಾಡಿಯೂ ತಪ್ಪೇ ಮಾಡಿಲ್ಲ ಎಂದ ಗಟ್ಟಿಮೇಳ ರಕ್ಷಿತ್‌ – ಎಫ್‌ಐಆರ್‌ ಕಾಪಿ ಲಭ್ಯ

    ತಪ್ಪು ಮಾಡಿಯೂ ತಪ್ಪೇ ಮಾಡಿಲ್ಲ ಎಂದ ಗಟ್ಟಿಮೇಳ ರಕ್ಷಿತ್‌ – ಎಫ್‌ಐಆರ್‌ ಕಾಪಿ ಲಭ್ಯ

    ಬೆಂಗಳೂರು: ತಪ್ಪು ಮಾಡಿಯೂ ತಪ್ಪೇ ಮಾಡಿಲ್ಲ ಎಂಬಂತೆ ಗಟ್ಟಿಮೇಳ ಸೀರಿಯಲ್ ಖ್ಯಾತಿಯ ರಕ್ಷಿತ್ ಸುಳ್ಳು ಹೇಳುತ್ತಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ನಾವು ತಪ್ಪು ಮಾಡಿಲ್ಲ. ನಮ್ಮ ಮೇಲೆ ಎಫ್‌ಐಆರ್ ಆಗಿಲ್ಲ. ಮಾಧ್ಯಮಗಳು ನಮ್ಮ ಮೇಲೆ ಸುಳ್ಳು ಸುದ್ದಿ ಪ್ರಸಾರ ಮಾಡಿವೆ ಎಂದು ರಕ್ಷಿತ್ ಸಿನಿಮಾ ಡೈಲಾಗ್ ಹೊಡೆದಿದ್ದಾರೆ. ಆದರೆ ಶುಕ್ರವಾರ ರಾತ್ರಿ ರಕ್ಷಿತ್‌ ಮತ್ತು ಗ್ಯಾಂಗ್‌ ಕೋವಿಡ್‌ ನೈಟ್‌ ಕಾರ್ಫ್‌ಯೂ ಮಾರ್ಗಸೂಚಿಯನ್ನು ಉಲ್ಲಂಘಿಸಿ ಪಕ್ಷಕ್ಕೆ ವಿಪತ್ತು ನಿರ್ವಹಣಾ ಕಾಯ್ದೆ 2005 ಮತ್ತು ವಿವಿಧ ಐಪಿಸಿ ಸೆಕ್ಷನ್‌ ಅಡಿಯಲ್ಲಿ ಕೆಂಗೇರಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ,  ಪ್ರತಿ ಪಬ್ಲಿಕ್‌ ಟಿವಿಗೆ ಲಭ್ಯವಾಗಿದೆ.

    ಯಾವೆಲ್ಲ ಸೆಕ್ಷನ್?
    ಕೆಂಗೇರಿ ಠಾಣೆಯ ಎಸ್‌ಐ ನಾಗರಾಜ್‌ ಅವರು ನೀಡಿದ ದೂರಿನ ಮೇರೆಗೆ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಐಪಿಸಿ ಸೆಕ್ಷನ್‌ 143(ಕಾನೂಬಾಹಿರ ಸಭೆ), 147(ಗಲಾಟೆ),188(ಸರ್ಕಾರದ ಆದೇಶ ಉಲ್ಲಂಘಿಸಿ ಅವಿಧೇಯ ವರ್ತನೆ), 269(ನಿರ್ಲಕ್ಷ್ಯದಿಂದ ಜೀವಕ್ಕೆ ಅಪಾಯಕಾರಿಯಾದ ಕಾಯಿಲೆ ಸೋಂಕನ್ನು ಹರಡುವುದು) ಅಡಿ ರಕ್ಷಿತ್ ವಿರುದ್ಧ 6 ಎಫ್. ಸೇರಿದೆ. ಇದನ್ನೂ ಓದಿ:  ಗಟ್ಟಿಮೇಳ ಸೀರಿಯಲ್ ಖ್ಯಾತಿಯ ನಟ ರಕ್ಷಿತ್ ಆಯಂಡ್ ಗ್ಯಾಂಗ್‌ನಿಂದ ರಂಪಾಟ

    ಯಾರೆಲ್ಲ ಆರೋಪಿಗಳು?
    ರಕ್ಷಿತ್‌(ಎ1), ಅಭಿಷೇಕ್‌(ಎ2), ರಂಜನ್‌(ಎ3), ರಾಕೇಶ್‌ ಕುಮಾರ್‌(ಎ4), ರವಿಚಂದ್ರನ್‌(ಎ5), ಅನುಷಾ(ಎ6), ಶರಣ್ಯಾ(ಎ7) ಆರೋಪಿಗಳಾಗಿದ್ದಾರೆ.

    ದೂರಿನಲ್ಲಿ ಏನಿದೆ?
    ಶುಕ್ರವಾರ ರಾತ್ರಿ ನಾವು ಮಧ್ಯರಾತ್ರಿ1:35ಕ್ಕೆ ಜಿಂಜರ್‌ ಲೇಕ್ ವ್ಯೂನಲ್ಲಿ ಕುಡಿದು ಯಾರೋ ಗಲಾಟೆ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಠಾಣೆಗೆ ಕರೆ ಮಾಡಿ ತಿಳಿಸಿದ್ದರು. ಈ ಕರೆಯ ಸ್ಥಳಕ್ಕೆ ತೆರಳಿದಾಗ ಹೋಟೆಲ್‌ನಲ್ಲಿ 5 ಮಂದಿ ಪುರುಷರು ಮತ್ತು ಇಬ್ಬರು ಮಹಿಳೆಯರು ಜೋರಾಗಿ ಗಲಾಟೆ ಮಾಡಿ ಶಾಂತಿ ಭಂಗ ಮಾಡುತ್ತಿರುವುದು ತಿಳಿದು ಬಂದಿದೆ.

    ಈ ವೇಳೆ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದ್ದು ಸ್ಥಳದಿಂದ ತೆರಳುವಂತೆ ಸೂಚಿಸಿದಾಗ ಏರು ಧ್ವನಿಯಲ್ಲಿ ನಮ್ಮೊಂದಿಗೆ ಮಾತನಾಡುವ ಸ್ಥಳದಿಂದ ತೆರಳಲು ನಿರಾಕರಿಸಲಾಗಿದೆ. ಕೂಡಲೇ ಅವರನ್ನು ಹೊಯ್ಸಳ ಸಿಬ್ಬಂದಿ ಮೂಲಕ ಠಾಣೆಗೆ ಕರೆ ತರಲಾಗಿದೆ. ಸರ್ಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದಕ್ಕೆ ಇವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಈ ಮೂಲಕ ದೂರು ನೀಡಲಾಗಿದೆ.

  • ಹೆಸರು ಬದಲಾಯಿಸಿಕೊಂಡ ಪುಟ್ಟಗೌರಿ ಮದುವೆ ನಾಯಕ ರಕ್ಷಿತ್

    ಹೆಸರು ಬದಲಾಯಿಸಿಕೊಂಡ ಪುಟ್ಟಗೌರಿ ಮದುವೆ ನಾಯಕ ರಕ್ಷಿತ್

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪುಟ್ಟಗೌರಿ ಮದುವೆ ಧಾರಾವಾಹಿಯಲ್ಲಿ ನಾಯಕನಾಗಿ ನಟಿಸುತ್ತಿರುವ ರಕ್ಷಿತ್ ಈಗ ತಮ್ಮ ಹೆಸರನ್ನು ಬದಲಾಯಿಸಿಕೊಂಡು ಸ್ಯಾಂಡಲ್‍ವುಡ್‍ಗೆ ಎಂಟ್ರಿ ನೀಡುತ್ತಿದ್ದಾರೆ.

    ಮಹೇಶ ಪಾತ್ರಧಾರಿಯ ರಕ್ಷಿತ್ ಈಗ ರಕ್ಷ್ ಎಂದು ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಸ್ಯಾಂಡಲ್‍ವುಡ್‍ನಲ್ಲಿ ಈಗಾಗಲೇ ರಕ್ಷಿತ್ ಶೆಟ್ಟಿ ಇರುವುದರ ಕಾರಣ ಅವರು ತಮ್ಮ ಹೆಸರನ್ನು ರಕ್ಷ್ ಎಂದು ಬದಲಾಯಿಸಿಕೊಂಡಿದ್ದಾರೆ.

    8ಎಂಎಂ ಚಿತ್ರದ ನಿರ್ದೇಶಕರಾದ ಹರಿಕೃಷ್ಣ ರಕ್ಷ್ ಅವರ ಹೊಸ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ‘ರೆಡ್’ ಎಂದು ಹೆಸರಿಡಲಾಗಿದೆ. ಈ ಚಿತ್ರದಲ್ಲಿ ರಕ್ಷ್ ಹ್ಯಾಕರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಕ್ಷ್‍ಗೆ ನಾಯಕಿಯಾಗಿ ಸೋನು ಗೌಡ ಮಿಲಿಟರಿ ಆಫಿಸರ್ ಪಾತ್ರದಲ್ಲಿ ಅಭಿನಯಿಸಲಿದ್ದಾರೆ.

    ಸದ್ಯ ಶುಕ್ರವಾರ ರೆಡ್ ಸಿನಿಮಾದ ಮುಹೂರ್ತ ನಡೆಯಲಿದೆ. ಅಲ್ಲದೇ ಈ ಚಿತ್ರದಲ್ಲಿ ಮತ್ತೊಬ್ಬರು ನಾಯಕಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಮತ್ತೊಬ್ಬ ನಾಯಕಿ ಅಧಿಕೃತವಾಗಿಲ್ಲ. ಈ ಚಿತ್ರಕ್ಕೆ ಜುದಾ ಸ್ಯಾಂಡಿ ಸಂಗೀತ ನೀಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶೂಟಿಂಗ್ ಸೆಟ್‍ನಲ್ಲಿ ಕೂದಲೆಳೆಯ ಅಂತರದಲ್ಲಿ ಪ್ರಾಣಪಾಯದಿಂದ ಪಾರಾದ ಮಹೇಶ

    ಶೂಟಿಂಗ್ ಸೆಟ್‍ನಲ್ಲಿ ಕೂದಲೆಳೆಯ ಅಂತರದಲ್ಲಿ ಪ್ರಾಣಪಾಯದಿಂದ ಪಾರಾದ ಮಹೇಶ

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಪುಟ್ಟಗೌರಿ ಮದುವೆ’ ಶೂಟಿಂಗ್ ಸೆಟ್‍ನಲ್ಲಿ ನಟ ರಕ್ಷಿತ್ (ಮಹೇಶ) ಕೂದಲೆಳೆಯ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.

    ಪುಟ್ಟಗೌರಿ ಮದುವೆ ಧಾರವಾಹಿಯಲ್ಲಿ ಇತ್ತೀಚೆಗೆ ಫೈಟ್ ಸೀನೊಂದು ಚಿತ್ರೀಕರಿಸಲಾಗಿತ್ತು. ಈ ದೃಶ್ಯದಲ್ಲಿ ಮಹೇಶ ಹಾಗೂ ಹಿಮಾ ಜೀಪ್‍ನಲ್ಲಿ ಹೋಗುವಾಗ ರೌಡಿಗಳು ಅವರ ಮೇಲೆ ದಾಳಿ ನಡೆಸಲು ಮುಂದಾಗುತ್ತಾರೆ.

    ಈ ವೇಳೆ ರೌಡಿಗಳು ಟ್ಯೂಬ್‍ಲೈಟ್‍ನಿಂದ ಮಹೇಶನ ಮೇಲೆ ಹಲ್ಲೆ ಮಾಡವ ದೃಶ್ಯವನ್ನು ಚಿತ್ರೀಕರಿಸುತ್ತಿದ್ದರು. ರೌಡಿಗಳು ಟ್ಯೂಬ್‍ಲೈಟ್‍ನಿಂದ ಮಹೇಶನಿಗೆ ಹೊಡೆಯುವಾಗ ಅದರ ಪೀಸ್‍ಗಳು ಕಣ್ಣಿಗೆ ಚುಚ್ಚಬೇಕಿತ್ತು. ಅಷ್ಟರಲ್ಲಿ ಮಹೇಶ ಈ ಅವಘಡದಿಂದ ಪಾರಾಗಿದ್ದಾರೆ.

    ಸದ್ಯ ಮಹೇಶ ಅಲಿಯಾಸ್ ರಕ್ಷಿತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಅಲ್ಲದೇ ಅವರ ಆರೋಗ್ಯ ಕೂಡ ಚೆನ್ನಾಗಿದೆ ಎಂದು ಪುಟ್ಟಗೌರಿ ಧಾರವಾಹಿ ತಂಡ ತಿಳಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv