Tag: ರಕ್ಷಿತ್ ಶಟ್ಟಿ

  • ಚಾರ್ಲಿ ಮೇನಿಯಾ : ಮಂಗಳೂರಿನ ಶ್ವಾನಕ್ಕೆ ‘ಚಾರ್ಲಿ’ ಎಂದು ಹೆಸರಿಟ್ಟ ಪೊಲೀಸ್ ಇಲಾಖೆ

    ಚಾರ್ಲಿ ಮೇನಿಯಾ : ಮಂಗಳೂರಿನ ಶ್ವಾನಕ್ಕೆ ‘ಚಾರ್ಲಿ’ ಎಂದು ಹೆಸರಿಟ್ಟ ಪೊಲೀಸ್ ಇಲಾಖೆ

    ಕ್ಷಿತ್ ಶೆಟ್ಟಿ ನಟಿಸಿರು ಚಾರ್ಲಿ 777 ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಸಖತ್ ಕ್ರೇಜ್ ಹುಟ್ಟಿಸಿದೆ. ಈ ಸಿನಿಮಾದ ಕೊನೆಯಲ್ಲಿ ನಾಯಿಯನ್ನು ದತ್ತು ಪಡೆದುಕೊಳ್ಳಿ ಎಂದು ಸಂದೇಶವಿದೆಯಂತೆ. ಹಾಗಾಗಿಯೇ ಸಿನಿಮಾ ನೋಡಿದ ಅನೇಕರು ತಮ್ಮ ತಮ್ಮ ಶ್ವಾನ ಪ್ರೀತಿ ತೋರುತ್ತಿದ್ದಾರೆ. ಕೇವಲ ಸಾಮಾನ್ಯ ಸಿನಿಮಾ ನೋಡುಗರು ಮಾತ್ರವಲ್ಲ, ಪೊಲೀಸ್ ಇಲಾಖೆ ಕೂಡ ತಮ್ಮ ಶ್ವಾನ ದಳದ ನಾಯಿಗೆ ವಿಭಿನ್ನ ರೀತಿಯಲ್ಲಿ ಗೌರವ ನೀಡುವ ಮೂಲಕ ಸಿನಿಮಾವನ್ನು ನೆನಪಿಸಿಕೊಂಡಿದೆ.

    ಚಾರ್ಲಿ ಸಿನಿಮಾದಲ್ಲಿ ನಾಯಿ ಮತ್ತು ಮನುಷ್ಯ ಸಂಬಂಧದ ಕುರಿತು ಅನೇಕ ಅಂಶಗಳನ್ನು ಅಳವಡಿಸಲಾಗಿದೆಯಂತೆ. ಹಾಗಾಗಿ ಮಂಗಳೂರು ಪೊಲೀಸ್ ಇಲಾಖೆಯು ಅದರಿಂದ ಸ್ಫೂರ್ತಿ ಪಡೆದುಕೊಂಡು ತಮ್ಮ ಶ್ವಾನ ದಳದ ಮರಿನಾಯಿಗೆ ಚಾರ್ಲಿ ಎಂದು ಹೆಸರಿಟ್ಟಿದ್ದಾರೆ. ನಾಯಿಮರಿಗೆ ಇನ್ನೂ ಮೂರು ತಿಂಗಳಾಗಿದ್ದರಿಂದ ಚಾರ್ಲಿ ಎಂದು ಹೆಸರಿಡುವ ಮೂಲಕ ಸಂಭ್ರಮಿಸಿದ್ದಾರೆ. ಇದಕ್ಕೆ ಕಾರಣ ಚಾರ್ಲಿ ಸಿನಿಮಾ ಎಂದು ಹೇಳಿದ್ದಾರೆ. ಓದಿ : ಧನಂಜಯ್ ನಟನೆಯ ಮತ್ತೊಂದು ಸಿನಿಮಾ ರಿಲೀಸ್ ಘೋಷಣೆ : ವರ್ಷದ ಅತೀ ಹೆಚ್ಚು ಸಿನಿಮಾ ರಿಲೀಸ್ ಆದ ನಟ ಡಾಲಿ

    ಪೊಲೀಸ್ ಸಿಬ್ಬಂದಿ ಕಚೇರಿಯಲ್ಲೇ ಕೇಕ್ ತಂದು, ನಾಯಿಗೆ ಹೆಸರಿಟ್ಟು ಜೂನ್.9ರಂದು ನಾಮಕರಣ ಶಾಸ್ತ್ರ ಮುಗಿಸಿದ್ದಾರೆ. ಈ ನಾಯಿಮರಿಯು ಲ್ಯಾಬ್ರಡರ್ ತಳಿಯಾಗಿದ್ದು, ಬಂಟ್ವಾಳದಿಂದ ಇಪ್ಪತ್ತು ಸಾವಿರ ರೂಪಾಯಿ ಕೊಟ್ಟು ಖರೀದಿಸಲಾಗಿದೆಯಂತೆ. ಅಂದಹಾಗೆ ಈ ನಾಯಿ ಮರಿ ಹುಟ್ಟಿದ್ದು 16 ಮಾರ್ಚ್ 2022ರಂದು, ಮೂರ್ನಾಲ್ಕು ತಿಂಗಳ ಬಳಿಕೆ ಈ ನಾಯಿಮರಿ ಬೆಂಗಳೂರಿನಲ್ಲಿ ತರಬೇತಿಗಾಗಿ ಬರಲಿದೆಯಂತೆ. ಆನಂತರವಷ್ಟೇ ಅದನ್ನು ಬಾಂಬ್ ನಿಷ್ಕ್ರೀಯ ಕೆಲಸಕ್ಕೆ ನಿಯೋಜನೆ ಮಾಡಲಾಗುತ್ತದೆಯಂತೆ.

  • ರಶ್ಮಿಕಾ ರ ‘ಶೋ ಆಫ್ ಮ್ಯಾನ್’ ಕಮೆಂಟ್‍ಗೆ ಯಶ್ ಪ್ರತಿಕ್ರಿಯಿಸಿದ್ದು ಹೀಗೆ

    ರಶ್ಮಿಕಾ ರ ‘ಶೋ ಆಫ್ ಮ್ಯಾನ್’ ಕಮೆಂಟ್‍ಗೆ ಯಶ್ ಪ್ರತಿಕ್ರಿಯಿಸಿದ್ದು ಹೀಗೆ

    ಬೆಂಗಳೂರು: ರಶ್ಮಿಕಾ ಮಂದಣ್ಣ ಅವರ ವಿರುದ್ಧ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹೀಗಳೆಯುವುದನ್ನು ನಿಲ್ಲಿಸಬೇಕೆಂದು ರಾಕಿಂಗ್ ಸ್ಟಾರ್ ಯಶ್ ಮನವಿ ಮಾಡಿದ್ದಾರೆ.

    ರಶ್ಮಿಕಾ ಅವರು ವೈಯಕ್ತಿಕವಾಗಿ ನನಗೆ ಪರಿಚಿತರಲ್ಲ, ಇದುವರೆಗೂ ಭೇಟಿಯು ಮಾಡಿಲ್ಲ. ಮಾತು ಸಹ ಆಡಿಲ್ಲ. ಹಾಗೆಂದು ಅವರಿಗೆ ನನ್ನ ಬಗ್ಗೆ ಯಾವುದೇ ರೀತಿಯ ಆಭಿಪ್ರಾಯ ಇರಬಾರದೆಂದೇನಿಲ್ಲ. ಅವರ ಅಭಿಪ್ರಾಯ ಅವರದು, ಅದನ್ನು ಹೀಗಳೆಯುವ ಕೆಲಸ ಯಾರೂ ಮಾಡಬಾರದು. ಎಲ್ಲರ ಅಭಿಪ್ರಾಯವನ್ನು ಗೌರವಿಸೋಣ ಎಂದು ಯಶ್ ತಮ್ಮ ಫೇಸ್‍ಬುಕ್ ಪೇಜ್‍ನಲ್ಲಿ ಬರೆದುಕೊಂಡಿದ್ದಾರೆ.

    ಯಶ್ ಅಭಿಮಾನಿಗಳಿಗೆ ಸಿಟ್ಯಾಕೆ?
    ಕೆಲ ದಿನಗಳ ಹಿಂದೆ ‘ಕಿರಿಕ್ ಪಾರ್ಟಿ’ ನಟಿ ರಶ್ಮಿಕಾ ಮುಂದಣ್ಣ ಮತ್ತು ಅವರ ಭಾವಿ ಪತಿ ರಕ್ಷಿತ್ ಶೆಟ್ಟಿ ಸಂದರ್ಶನಕ್ಕೆ ಕರೆಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಶ್ಮಿಕಾ ಮುಂದಣ್ಣ ಅವರು ರಾಕಿಂಗ್ ಸ್ಟಾರ್ ಯಶ್‍ ಅವರಿಗೆ ‘ಮಿಸ್ಟರ್ ಷೋ ಆಫ್’ ಎಂದು ಹೇಳುವ ಮೂಲಕ ವಿವಾದ ಹುಟ್ಟುಹಾಕಿದ್ದರು. ರಶ್ಮಿಕಾ ಮಾತು ಯಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಇದೀಗ ಸ್ವತಃ ಯಶ್ ಅವರೇ ಫೇಸ್‍ಬುಕ್‍ನಲ್ಲಿ ರಶ್ಮಿಕಾ ಹೇಳಿಕೆ ಪ್ರತಿಕ್ರಿಯಿಸಿದ್ದಾರೆ.

    ಯಶ್ ಫೇಸ್‍ಬುಕ್ ಸ್ಟೇಟಸ್ ಈ ರೀತಿ ಇದೆ
    ಎಲ್ಲರಿಗೂ ನಮಸ್ಕಾರ್…
    ಒಬ್ಬ ನಟನಾಗಿ ನಿಮ್ಮೆಲ್ಲರ ಪ್ರೀತಿ ಮತ್ತು ಅಭಿಮಾನವನ್ನು ಸಂಪಾದಿಸುವುದನ್ನೇ ಗುರಿಯಾಗಿಟ್ಟುಕೊಂಡು ಕೆಲಸ ಮಾಡುವ ನಾನು, ಕೆಲವೊಮ್ಮೆ ಎದುರಾಗುವ ಅನಗತ್ಯ ಎನಿಸುವ ವಿಷಯಗಳನ್ನು ನಿಲ್ರ್ಯಕ್ಷಿಸುವ ಸ್ವಭಾವವನ್ನು ರೂಢಿಸಿಕೊಂಡಿದ್ದೇನೆ. ಆದರೆ ನನ್ನನ್ನು ಪ್ರೀತಿಸುವ ನಿಮ್ಮ ಮನಸಿಗೆ ನೋವಾದಾಗ ಪ್ರತಿಕ್ರಿಯೆ ನೀಡದೆ ಇರುವುದು ನನ್ನಿಂದ ಸಾಧ್ಯವಿಲ್ಲ. ನಿಮ್ಮ ಅಭಿಮಾನ ಪ್ರೀತಿಗೆ ಬೆಲೆಕಟ್ಟಲಾಗುವುದಿಲ್ಲ, ಅದಕ್ಕೆ ನಾನೆಂದು ಚಿರಋಣಿ.

    ರಶ್ಮಿಕಾ ಅವರು ವೈಯಕ್ತಿಕವಾಗಿ ನನಗೆ ಪರಿಚಿತರಲ್ಲ, ಇದುವರೆಗೂ ಭೇಟಿಯು ಮಾಡಿಲ್ಲ. ಮಾತು ಸಹ ಆಡಿಲ್ಲ. ಹಾಗೆಂದು ಅವರಿಗೆ ನನ್ನ ಬಗ್ಗೆ ಯಾವುದೇ ರೀತಿಯ ಆಭಿಪ್ರಾಯ ಇರಬಾರದೆಂದೇನಿಲ್ಲ. ಅವರ ಅಭಿಪ್ರಾಯ ಅವರದು, ಅದನ್ನು ಹೀಗಳೆಯುವ ಕೆಲಸ ಯಾರೂ ಮಾಡಬಾರದು. ಎಲ್ಲರ ಅಭಿಪ್ರಾಯವನ್ನು ಗೌರವಿಸೋಣ.

    ‘ಒಬ್ಬರ ಅಭಿಪ್ರಾಯ ಇನ್ನೊಬ್ಬರ ವ್ಯಕ್ತಿತ್ವವನ್ನು ನಿರ್ಧರಿಸುವುದಿಲ್ಲ’ ಈ ವಿಷಯ ಇಲ್ಲಿಗೆ ಬಿಟ್ಟುಬಿಡಿ, ಇಲ್ಲಿ ಚರ್ಚಿಸುವಂತದ್ದು ಏನೂ ಇಲ್ಲ!. ಕೆಲವೇ ದಿನಗಳಲ್ಲಿ ”ಕೆ.ಜಿ.ಎಫ್” ಚಿತ್ರದ ಮತ್ತೊಂದು ಸ್ಟಿಲ್ ಬರಲಿದೆ. ಅಲ್ಲಿಯವರೆಗೆ ಈದ್ ಮುಬಾರಕ್ ಶುಭಾಶಯಗಳು ತಿಳಿಸಿದ್ದಾರೆ.

    ಇದನ್ನೂ ಓದಿ: ಬೆಳಕು ಕಾರ್ಯಕ್ರಮದಲ್ಲಿನ ಮಕ್ಕಳನ್ನು ನೋಡಿದ್ರೆ ನನ್ನ ಬಾಲ್ಯ ನೆನಪಾಗುತ್ತೆ: ಯಶ್

    ಇದನ್ನೂ ಓದಿ:ಮದ್ವೆಯಾದ ಬಳಿಕ ಆ್ಯಕ್ಟ್ ಮಾಡ್ತೀರಾ? ಲವ್ ಆಗಿದ್ದು ಹೇಗೆ? ಅಭಿಮಾನಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದ್ರು ರಶ್ಮಿಕಾ