Tag: ರಣದೀಪ್ ಸಿಂಗ್ ಸುರ್ಜೆವಾಲಾ

  • ಕಾಂಗ್ರೆಸ್ ಗೆದ್ದಿದ್ದು 136 ಅಲ್ಲ, 138 ಸೀಟು: ಸುರ್ಜೆವಾಲಾ

    ಕಾಂಗ್ರೆಸ್ ಗೆದ್ದಿದ್ದು 136 ಅಲ್ಲ, 138 ಸೀಟು: ಸುರ್ಜೆವಾಲಾ

    ಬಾರಿಯ ವಿಧಾನಸಭೆ ಚುನಾವಣೆಯಲ್ಲಿ (Assembly Election 2023) ಬಿಜೆಪಿ 65 ಸ್ಥಾನಗಳನ್ನು ಪಡೆದರೆ, ಜೆಡಿಎಸ್ 19 ಹಾಗೂ ಪಕ್ಷೇತರ ಅಭ್ಯರ್ಥಿಗಳು 4 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಗೆಲುವಿನ ನಗೆ ಬೀರಿದ್ದರು. ಉಳಿದಂತೆ 136 ಸೀಟುಗಳನ್ನು ಕಾಂಗ್ರೆಸ್ (Congress) ಪಕ್ಷ ಗೆಲ್ಲುವ (Win) ಮೂಲಕ ಅಧಿಕಾರದ ಚುಕ್ಕಾಣೆ ಹಿಡಿದಿದೆ. ಆದರೆ, ಕಾಂಗ್ರೆಸ್ ಪಕ್ಷ ಗೆದ್ದಿದ್ದು ಕೇವಲ 136 ಸೀಟುಗಳಲ್ಲ, 138 ಸೀಟುಗಳು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿರುವ ರಣದೀಪ್ ಸಿಂಗ್ ಸುರ್ಜೆವಾಲಾ (Randeep Singh Surjewala) ಹೇಳಿದರು.

    ಗೆಲುವಿನ ನಂತರ ಕೆಪಿಸಿಸಿ ಕಚೇರಿಯಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸುರ್ಜೆವಾಲಾ, ‘ಕಾಂಗ್ರೆಸ್ ಗೆದ್ದಿರುವುದು ಕೇವಲ 136 ಸ್ಥಾನಗಳು ಮಾತ್ರವಲ್ಲ, ಇನ್ನೂ ಎರಡು ಸ್ಥಾನಗಳಲ್ಲೂ ಅದು ಗೆದ್ದಿದೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದರು. ಮುಂದುವರೆದು ಮಾತನಾಡಿದ ಅವರು, ಮೇಲುಕೋಟೆಯ ಸವೋರ್ದಯ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ, ಗೌರಿಬಿದನೂರಿನ ಪಕ್ಷೇತರ ಅಭ್ಯರ್ಥಿ ಕೆ.ಎಚ್. ಪುಟ್ಟಸ್ವಾಮಯ್ಯ ಕಾಂಗ್ರೆಸ್ ಗೆ ಬೆಂಬಲ ಸೂಚಿಸಿರುವುದನ್ನು ತಿಳಿಸಿದರು. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ; ಸಿಎಂ ಸ್ಥಾನಕ್ಕೆ ಬೊಮ್ಮಾಯಿ ಇಂದು ರಾಜೀನಾಮೆ LIVE Updates

    ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಕಾಂಗ್ರೆಸ್ ಗೆ ಬೆಂಬಲ ನೀಡಿದ್ದರಿಂದ ಕಾಂಗ್ರೆಸ್ ಬಲಾಬಲ ಇದೀಗ 138ಕ್ಕೆ ಏರಿದೆ. ಈ ಮೂಲಕ ರಾಜ್ಯದ ದೊಡ್ಡಪಕ್ಷವಾಗಿ ಹೊರಹೊಮ್ಮಿದೆ. ಈ ಮಾಧ್ಯಮ ಗೋಷ್ಠಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.

  • ಬಿಜೆಪಿಯವರೇ ಬಿಎಸ್‍ವೈ ಮನೆಗೆ ಕಲ್ಲು ಎಸೆಯುವುದಕ್ಕೆ ಕಳಿಸಿರಬೇಕು: ಸುರ್ಜೆವಾಲಾ

    ಬಿಜೆಪಿಯವರೇ ಬಿಎಸ್‍ವೈ ಮನೆಗೆ ಕಲ್ಲು ಎಸೆಯುವುದಕ್ಕೆ ಕಳಿಸಿರಬೇಕು: ಸುರ್ಜೆವಾಲಾ

    ಬೆಂಗಳೂರು: ಯಾರೋ ಬಿಜೆಪಿಯವರೇ ಯಡಿಯೂರಪ್ಪ ಮನೆಗೆ ಕಲ್ಲು ಎಸೆಯುವುದಕ್ಕೆ ಕಳಿಸಿರಬೇಕು ಎಂದು ರಣದೀಪ್ ಸಿಂಗ್ ಸುರ್ಜೆವಾಲಾ (Randeep Singh Surjewala) ಹೇಳಿದರು.

    ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ನಿವಾಸದ ಬಳಿ ನಡೆದ ಘಟನೆಗೆ ಬೇಸರವಿದೆ. ಯಡಿಯೂರಪ್ಪ ಮನೆ ಮೇಲೆ ಯಾಕೆ ದಾಳಿ ಆಯ್ತು? ಅವರು ಈಗ ಅಧಿಕಾರದಲ್ಲಿಲ್ಲ. ಅದಕ್ಕೆ ಯಾರೋ ಬಿಜೆಪಿಯವರೇ (BJP) ಯಡಿಯೂರಪ್ಪ ಮನೆಗೆ ಕಲ್ಲು ಎಸೆಯುವುದಕ್ಕೆ ಕಳಿಸಿರಬೇಕು ಎಂದು ತಿಳಿಸಿದರು.

    ಬೊಮ್ಮಾಯಿ ಆಧುನಿಕ ಶಕುನಿ. ಜನರನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಜಾತಿ ಜಾತಿಗಳ ಮಧ್ಯೆ ಸಂಘರ್ಷ ತರುತ್ತಿದ್ದಾರೆ. 56% ಮೀಸಲಾತಿಯನ್ನು ಹೇಗೆ ಜಾರಿಗೆ ತರುತ್ತಾರೆ? ಎಸ್.ಸಿ, ಎಸ್.ಟಿ ಸಮುದಾಯವನ್ನು ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅದೇ ರೀತಿ ಪ್ರಧಾನಿ ಬರ್ತಾರೆ ಟಾಟಾ ಬೈಬೈ ಮಾಡಿ ಹೋಗುತ್ತಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಬಿಜೆಪಿ ಪಕ್ಷವು ಜನರಿಗೆ ಟೊಳ್ಳು ಭರವಸೆ ನೀಡಿಲ್ಲ- ಡಾ.ಕೆ.ಸುಧಾಕರ್

    ಘಟನೆಯೇನು?: ರಾಜ್ಯ ಸರ್ಕಾರ (Government Of Karnataka) ಕಳೆದ ಎರಡು ದಿನಗಳ ಹಿಂದೆ ಮೀಸಲಾತಿ (Reservation) ಪ್ರಕಟ ಮಾಡಿದ್ದು, ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರ ಶಿಫಾರಸು ಮಾಡಿದೆ. ರಾಜ್ಯ ಸರ್ಕಾರದ ಈ ಕ್ರಮವನ್ನು ವಿರೋಧಿಸಿ ಶಿವಮೊಗ್ಗ (Shivamogga) ಜಿಲ್ಲೆಯ ಶಿಕಾರಿಪುರದಲ್ಲಿ (Shikaripura) ಬಂಜಾರ ಸಮುದಾಯದವರು ಪ್ರತಿಭಟನೆ ನಡೆಸಿದರು.

    ಸದಾಶಿವ ಆಯೋಗದ ವರದಿಯಿಂದ ಬಂಜಾರ ಸಮುದಾಯಕ್ಕೆ ಅನ್ಯಾಯವಾಗಲಿದೆ. ಹೀಗಾಗಿ ಈ ವರದಿ ಜಾರಿಗೊಳಿಸದಂತೆ ಆಗ್ರಹಿಸಿದರು. ಅಲ್ಲದೇ ನಗರದ ಮಾಳರಕೇರಿ ಬಡಾವಣೆಯಲ್ಲಿನ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ನಿವಾಸದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದರು. ಇದನ್ನೂ ಓದಿ: ಬಿಎಸ್‍ವೈ ಮನೆ ಮೇಲೆ ದಾಳಿ ರಾಜಕೀಯ ಪ್ರೇರಿತವೂ ಇರಬಹುದು: ಸಚಿವ ಜೋಶಿ

  • ಹಿಂಸಾತ್ಮಕ ರಾಜನೀತಿಯಿಂದಲೇ ಮಹಾತ್ಮ ಗಾಂಧಿ, ಇಂದಿರಾ, ರಾಜೀವ್ ಗಾಂಧಿ ಹತ್ಯೆಯಾಗಿದ್ದು: ಸುರ್ಜೆವಾಲಾ

    ಹಿಂಸಾತ್ಮಕ ರಾಜನೀತಿಯಿಂದಲೇ ಮಹಾತ್ಮ ಗಾಂಧಿ, ಇಂದಿರಾ, ರಾಜೀವ್ ಗಾಂಧಿ ಹತ್ಯೆಯಾಗಿದ್ದು: ಸುರ್ಜೆವಾಲಾ

    ಬೀದರ್: ಈ ರೀತಿ ಹಿಂಸಾತ್ಮಕ ರಾಜನೀತಿಯಿಂದಲೇ ರಾಷ್ಟ್ರಪಿತ ಮಹಾತ್ಮ ಗಾಂಧಿ, ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಹತ್ಯೆಯಾಗಿದ್ದು ಎಂದು ಕಾಂಗ್ರೆಸ್ (Congress) ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ (Randeep Surjewala) ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹೊಡೆದು ಹಾಕಿ ಎಂದು ಸಚಿವ ಅಶ್ವಥ್ ನಾರಾಯಣ್ (Ashwath Narayan) ಪ್ರಚೋದನಾಕಾರಿ ಹೇಳಿಕೆ ಪ್ರಸ್ತಾಪಿಸಿ ಬೀದರ್‌ನಲ್ಲಿ (Bidra) ಮಾತನಾಡಿದ ಸುರ್ಜೆವಾಲಾ, ಸಿದ್ದರಾಮಯ್ಯ ಕೊಲೆ ಮಾಡಲು ಅಶ್ವಥ್ ನಾರಾಯಣ್ ಹೇಳುತ್ತಿಲ್ಲ. ಬದಲಿಗೆ ಪ್ರಧಾನಿ ಮೋದಿ, ಜೆಪಿ ನಡ್ಡಾ ಹಾಗೂ ಸಿಎಂ ಬೊಮ್ಮಾಯಿ ಹೇಳುತ್ತಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.

    ಮೋದಿಜೀ, ನಡ್ಡಾಜೀ, ಬೊಮ್ಮಾಯಿಜೀ ನೀವು ಮರೆತು ಹೋಗಿದ್ದೀರಾ? ಈ ರೀತಿ ಹಿಂಸಾತ್ಮಕ ರಾಜನೀತಿಯಿಂದಲೇ ಮಹಾತ್ಮ ಗಾಂಧಿ, ಇಂದಿರಾ ಗಾಂಧಿನಮ್ಮ ಪ್ರೀತಿಯ ಪ್ರಧಾನ ಮಂತ್ರಿಯಾಗಿದ್ದ ರಾಜೀವ್ ಗಾಂಧಿ ತುಂಡು ತುಂಡಾಗಿ ಹತ್ಯೆಯಾಗಿದ್ದು. ಇದೇ ಹಿಂಸಾತ್ಮಕ ರಾಜನೀತಿಯಿಂದಲೇ ಇನ್ನೂ ಅನೇಕರು ದೇಶಕ್ಕಾಗಿ ರಕ್ತ ಕೊಟ್ಟಿದ್ದು. ಒಬ್ಬ ಕಾಂಗ್ರೆಸ್ ನಾಯಕನಿಗೆ ಹೊಡೆದರೆ ಒಬ್ಬರು, ಇಬ್ಬರು, ಮೂವರು ಬರುತ್ತಾರೆ ಎಂದು ಬಿಜೆಪಿ ನಾಯಕರಿಗೆ ಸುರ್ಜೆವಾಲಾ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ರೋಹಿಣಿ ಸಿಂಧೂರಿ ವಿರುದ್ಧ ಅಕ್ರಮ ಆಸ್ತಿ ಆರೋಪ- IAS ಅಧಿಕಾರಿ ಆಸ್ತಿಯ Exclusive ಡೀಟೆಲ್ಸ್ ಇಲ್ಲಿದೆ

    ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಹೊಡೆಯಲು ಬರುತ್ತಿದ್ದಾರೆ ಎಂದರೆ ಇದರ ಅರ್ಥ ಬಡವರ, ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತ, ಮಹಿಳೆಯರ, ರೈತರ ಧ್ವನಿ ಬಂದ್ ಮಾಡಲು ಎಂದು ಸುರ್ಜೆವಾಲಾ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹಿಂದೆಂದೂ ಆಗದ ಅಭಿವೃದ್ಧಿ ಕಳೆದ 5 ವರ್ಷಗಳಲ್ಲಿ ಆಗಿದೆ: ತೇಜಸ್ವಿ ಸೂರ್ಯ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಜ್ಯದಲ್ಲಿ ಸರ್ಕಾರ ಸತ್ತುಹೋಗಿದೆ ಅನ್ನೋದಕ್ಕೆ ಅಧಿಕಾರಿಗಳ ಬೀದಿ ರಂಪ ಸಾಕ್ಷಿ – ಸುರ್ಜೆವಾಲಾ

    ರಾಜ್ಯದಲ್ಲಿ ಸರ್ಕಾರ ಸತ್ತುಹೋಗಿದೆ ಅನ್ನೋದಕ್ಕೆ ಅಧಿಕಾರಿಗಳ ಬೀದಿ ರಂಪ ಸಾಕ್ಷಿ – ಸುರ್ಜೆವಾಲಾ

    ತುಮಕೂರು: ಕರ್ನಾಟಕದಲ್ಲಿ ಸರ್ಕಾರ (Government Of Karnataka) ಸತ್ತುಹೋಗಿದೆ ಅನ್ನೋದಕ್ಕೆ ಅಧಿಕಾರಿಗಳ ಬೀದಿರಂಪಾಟವೇ ಸಾಕ್ಷಿ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ (Randeep Surjewala) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ತುಮಕೂರಿನಲ್ಲಿ (Tumakuru) ನಡೆದ ಕಾಂಗ್ರೆಸ್ (Congress) ಸಭೆ ಬಳಿಕ ಮಾತನಾಡಿದ ಅವರು, ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ಕಿತ್ತಾಟ ಮಾಡಿಕೊಳ್ಳುತ್ತಿದ್ದಾರೆ. ಬೊಮ್ಮಾಯಿ ಸರ್ಕಾರ ಭಾರತದ ಇತಿಹಾಸದ ಭ್ರಷ್ಟಸರ್ಕಾರ, ಸಚಿವರ ನಡುವೆ ಗುದ್ದಾಟ ನಡೀತಿದೆ. ಆಡಳಿತ ಯಂತ್ರ ಸಂಪೂರ್ಣ ಕುಸಿದಿದ್ದು ಬೀದಿ ಕಾಳಗ ನಡೆಯುತ್ತಿದೆ ಎಂದು ಟೀಕಿಸಿದ್ದಾರೆ.

    `ಸಚಿವ ಅಶ್ವಥ್ ನಾರಾಯಣ್ ಸಿದ್ದಾರಾಮಯ್ಯರನ್ನ ಕೊಲೆ ಮಾಡಿ’ ಎಂದು ಹೇಳಿಕೆ ನೀಡಿದ್ದಾರೆ. ಬಿಜೆಪಿ ಸರ್ಕಾರ ಈ ಮೂಲಕ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದೆ ಅನ್ನೋದಕ್ಕೆ ನಿದರ್ಶನವಾಗಿದೆ ಎಂದಿದ್ದಾರೆ. ಇದನ್ನೂ ಓದಿ:ನನ್ನ ಧರ್ಮಪತ್ನಿಯ ತೇಜೋವಧೆ ಮಾಡಿದ್ದಾರೆ – ರೂಪಾ ವಿರುದ್ಧ ದೂರು ಕೊಟ್ಟ ಸಿಂಧೂರಿ ಪತಿ

    ಜೆ.ಪಿ ನಡ್ಡಾ ಅವರು ಕರ್ನಾಟಕಕ್ಕೆ ಬಂದಿದ್ದು, ಸಚಿವ ಅಶ್ವಥ್ ನಾರಾಯಣರಿಂದ (Ashwath Narayan) ಬಹಿರಂಗ ಕ್ಷಮೆ ಹೇಳಿಸಿ, ಸಚಿವ ಸ್ಥಾನದಿಂದ ವಜಾಗೊಳಿಸಿ ಜೈಲಿಗೆ ಕಳಿಸಲಿ ಎಂದು ಸುರ್ಜೆವಾಲಾ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ರೋಹಿಣಿ-ರೂಪಾ ವಿರುದ್ಧ ಕಾನೂನು ‌ಕ್ರಮಕ್ಕೆ ಸಿಎಂ ಬೊಮ್ಮಾಯಿ ಸೂಚನೆ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ

    ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ

    ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.

    ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಸಮನ್ಸ್ ಜಾರಿಗೊಳಿಸಿದ್ದು, ಜೂನ್ 8ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿತ್ತು. ಇದನ್ನೂ ಓದಿ: ಚಿನ್ನಿದಾಂಡು ಆಟದಿಂದ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ

    ಈ ಕುರಿತಂತೆ ರಣದೀಪ್ ಸಿಂಗ್ ಸುರ್ಜೆವಾಲಾ ಅವರು, ಕಳೆದ ವಾರ ಸೋನಿಯಾ ಗಾಂಧಿ ಅವರು ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದರು. ಆದರೆ ಬುಧವಾರ ಸಂಜೆ ಜ್ವರ ಬಂದ ಹಿನ್ನೆಲೆ ಕೋವಿಡ್-19 ಪರೀಕ್ಷೆ ನಡೆಸಿದಾಗ ಅವರಿಗೆ ಪಾಸಿಟಿವ್ ಬಂದಿದೆ. ಇದೀಗ ಸೋನಿಯಾ ಗಾಂಧಿ ಅವರು ಕ್ವಾರಂಟೈನ್‍ನಲ್ಲಿದ್ದಾರೆ ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

  • ಅನಿವಾರ್ಯತೆ ಬಂದ್ರೆ ಮೇಕೆದಾಟು ಪಾದಯಾತ್ರೆ ನಿಲ್ಲಿಸಿ: ಕೈ ಹೈಕಮಾಂಡ್‌ ಸೂಚನೆ

    ಅನಿವಾರ್ಯತೆ ಬಂದ್ರೆ ಮೇಕೆದಾಟು ಪಾದಯಾತ್ರೆ ನಿಲ್ಲಿಸಿ: ಕೈ ಹೈಕಮಾಂಡ್‌ ಸೂಚನೆ

    ಬೆಂಗಳೂರು/ರಾಮನಗರ: ಕೊನೆಗೂ ಕಾಂಗ್ರೆಸ್‌ ಹೈಕಮಾಂಡ್‌ ಎಚ್ಚೆತ್ತಿದೆ. ಮೇಕೆದಾಟು ಪಾದಯಾತ್ರೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗುವುದು ಬೇಡ, ಅನಿವಾರ್ಯತೆ ಬಂದ್ರೆ ಪಾದಯಾತ್ರೆ ನಿಲ್ಲಿಸಿ ಎಂದು ರಾಜ್ಯ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ.

    ಇಂದು ಬೆಳಿಗ್ಗೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಇಬ್ಬರ ಜೊತೆಗೂ ಕರೆ ಮಾಡಿ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ಮೇಕೆದಾಟು ಪಾದಯಾತ್ರೆಯಿಂದ ರಾಷ್ಟ್ರ ಮಟ್ಟದಲ್ಲಿ ಡ್ಯಾಮೇಜ್ ಆಗಬಹುದು. ಪಾದಯಾತ್ರೆ ಬಗ್ಗೆ ನಾವು ಇಲ್ಲಿ ಉತ್ತರಿಸಬೇಕಾಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆಗೆ ಕೊರೊನಾ ಪಾಸಿಟಿವ್

    ಕೊರೊನಾ ಸಂದರ್ಭದಲ್ಲಿ ಇಂತಹ ಯಾತ್ರೆ ಸೂಕ್ತವೂ ಅಲ್ಲ. ಪರಿಸ್ಥಿತಿ ನೋಡಿಕೊಂಡು ಪಾದಯಾತ್ರೆ ಮುಂದುವರಿಸಬೇಕಾ ಬೇಡವಾ ಎಂಬ ತೀರ್ಮಾನ ತೆಗೆದುಕೊಳ್ಳಲು ಸೂಚನೆ ನೀಡಿದೆ.

    ನಮ್ಮ ನೀರು, ನಮ್ಮ ಹಕ್ಕು ಎಂಬ ಘೋಷಣೆಯಡಿ ಆರಂಭವಾಗಿರುವ ಕಾಂಗ್ರೆಸ್‌ ಪಾದಯಾತ್ರೆ ನಿನ್ನೆ ರಾತ್ರಿ ರಾಮನಗರ ತಲುಪಿತ್ತು. ಹೈಕೋರ್ಟ್‌ ಪಾದಯಾತ್ರೆ ವಿಚಾರದಲ್ಲಿ ಗರಂ ಆಗಿದ್ದ ಹಿನ್ನೆಲೆಯಲ್ಲಿ ನಿನ್ನೆಯೇ ರಾಜ್ಯ ಸರ್ಕಾರ ಪಾದಯಾತ್ರೆಗೆ ಬ್ರೇಕ್‌ ಹಾಕಿ ಆದೇಶ ಹೊರಡಿಸಿತ್ತು. ಆದರೂ ನಿನ್ನೆ ಕಾಂಗ್ರೆಸ್‌ ನಾಯಕರು ಪಾದಯಾತ್ರೆ ಮುಂದುವರಿಯಲಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಪಾದಯಾತ್ರೆ ತಡೆಯಲು ಯಾರಿಗೆ ಕಾಯುತ್ತಿದ್ದೀರಿ – ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ

  • ಬಿಟ್ ಕಾಯಿನ್ ಹಗರಣದಲ್ಲಿ ಯಾವ ನಟರೂ ಇಲ್ಲ – ಕಾಂಗ್ರೆಸ್ ಆರೋಪಕ್ಕೆ ಸುಧಾಕರ್ ತಿರುಗೇಟು

    ಬಿಟ್ ಕಾಯಿನ್ ಹಗರಣದಲ್ಲಿ ಯಾವ ನಟರೂ ಇಲ್ಲ – ಕಾಂಗ್ರೆಸ್ ಆರೋಪಕ್ಕೆ ಸುಧಾಕರ್ ತಿರುಗೇಟು

    ಬೆಂಗಳೂರು: ಬಿಟ್ ಕಾಯಿನ್ ಹಗರಣದಲ್ಲಿ ಯಾವ ನಟರೂ ಇಲ್ಲ. ಅತ್ಯಂತ ಜವಾಬ್ದಾರಿಯಿಂದ ಅಂದಿನ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರು ಪಾರದರ್ಶಕವಾಗಿ ತನಿಖೆಯನ್ನು ಮಾಡಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಕ್ಕೆ ಆರೋಗ್ಯ ಸಚಿವ ಸುಧಾಕರ್ ತೀರುಗೇಟು ನೀಡಿದ್ದಾರೆ.

    ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣ ಸಂಚಲನ ಸೃಷ್ಟಿಸಿದೆ. ಶನಿವಾರ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಬಸವರಾಜ ಬೊಮ್ಮಾಯಿ ಅವರು ಗೃಹಸಚಿವರಾಗಿದ್ದಾಗ ಬಿಟ್ ಕಾಯಿನ್ ಹಗರಣ ನಡೆದಿದೆ. ಬಹುಕೋಟಿ ಹಗರಣದಲ್ಲಿ ಕರ್ನಾಟಕ ಸರ್ಕಾರವೇ ಭಾಗಿಯಾಗಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದನ್ನೂ ಓದಿ: ಬೊಮ್ಮಾಯಿ ಗೃಹಮಂತ್ರಿಯಾಗಿದ್ದಾಗ ಬಿಟ್ ಕಾಯಿನ್ ಹಗರಣ ನಡೆದಿದೆ: ಸುರ್ಜೆವಾಲಾ

    ಈ ಕುರಿತಂತೆ ಸುಧಾಕರ್ ಅವರು, ಅನೇಕ ವರ್ಷಗಳಿಂದ ಡ್ರಗ್ ಮೇನಸ್ ಏನಾಗುತ್ತಿದೆ ಎಂದು ಕಂಡು ಹಿಡಿಯಬೇಕೆಂದು ನಮ್ಮ ಆಡಳಿತದಲ್ಲಿಯೇ ಇದನ್ನು ಮಟ್ಟ ಹಾಕಬೇಕೆಂದು ಅಂದಿನ ಸರ್ಕಾರದಲ್ಲಿದ್ದ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ತೀರ್ಮಾನಿಸಿದರು. ಇಂದು ತನಿಖೆಗೆ ಆದೇಶ ಸೂಚಿಸಿ, ಅದರಲ್ಲಿ ಶ್ರೀಕಿ ಸಿಕ್ಕಿಹಾಕಿಕೊಂಡು ಇನ್ನಷ್ಟು ತೀವ್ರವಾಗಿ ತನಿಖೆ ಮಾಡಿಸುತ್ತಿದ್ದಾರೆ. ಇವತ್ತು ಅವರು ನಟರಾ? ಇದರಲ್ಲಿ ಯಾರು ಕೂಡ ನಟರಿಲ್ಲ. ಅತ್ಯಂತ ಜವಾಬ್ದಾರಿಯಿಂದ ಅಂದಿನ ಗೃಹಸಚಿವರಾಗಿದ್ದವರು ಇಂದು ಪಾರದರ್ಶಕವಾಗಿ ತನಿಖೆಯನ್ನು ಮಾಡಿಸಿದ್ದಾರೆ ಎಂದಿದ್ದಾರೆ.

    ನಮ್ಮ ಸರ್ಕಾರ, ಗೃಹ ಇಲಾಖೆ, ಪೊಲೀಸ್ ಅಧಿಕಾರಿಗಳು ಚಾರ್ಜ್‍ಶೀಟ್‍ನಲ್ಲಿ ಏನು ತಿಳಿಸಿದ್ದರೋ ಅದನ್ನೇ ನಿಮ್ಮ ಮುಂದೆ ಓದಿದ್ದಾರೆ. ಬೇರೆ ಏನನ್ನೋ ಕಂಡು ಹಿಡಿದು ಯಾವುದೋ ಸ್ಪಷ್ಟವಾಗಿರುವ ಸಾಕ್ಷಿ ಇಟ್ಟುಕೊಂಡು ಅದನ್ನು ತೋರಿಸುವಂತಹ ಕೆಲಸವನ್ನು ಅವರು ಮಾಡಿಲ್ಲ. ಪೊಲೀಸಿನವರು, ಪೊಲೀಸ್ ಇಲಾಖೆ ಅವರು ಅತ್ಯಂತ ಪಾರಾದರ್ಶಕತೆಯಿಂದ ಇಂದು ನಡೆದುಕೊಂಡಿದ್ದಾರೆ. ಯಾರನ್ನು ರಕ್ಷಣೆಯಾಗಲಿ, ಮಾಹಿತಿಯನ್ನು ಬಚ್ಚಿಡುವ ಪ್ರಯತ್ನವನ್ನು ಎಲ್ಲೂ ಕೂಡ ಮಾಡಿಲ್ಲ. ಈ ಎಲ್ಲಾ ಅಪಾಧನೆ, ಸ್ಪೀಕರ್ ನೀಡಿರುವ ಹೇಳಿಕೆಗಳು ಸತ್ಯಕ್ಕೆ ದೂರವಾಗಿರುವ ಮಾತುಗಳಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀಕಿ ವ್ಯಾಲೆಟ್‌ನಿಂದ ಬಿಟ್ ಕಾಯಿನ್ ನಾಪತ್ತೆಯಾಗಿಲ್ಲ – ಬೆಂಗಳೂರು ಪೊಲೀಸರಿಂದ ಸ್ಪಷ್ಟನೆ

    ಸುಳ್ಳನ್ನು ನಿಜ ಮಾಡಲು ಹೊರಟಿದ್ದೀರಾ. ಅದು ಸಾಧ್ಯವಾಗುವುದಿಲ್ಲ. ಇದರಿಂದ ನೀವೆ ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತೀರಾ. ನಮ್ಮ ಸರ್ಕಾರ ಸ್ಪಷ್ಟವಾಗಿದ್ದು, ನಾವು ಯಾರನ್ನು ರಕ್ಷಿಸುವುದಿಲ್ಲ. ನಾವೇ ಇದನ್ನು ಬೆಳಕಿಗೆ ತಂದಿದ್ದೇವೆ. ಹಾಗಾಗಿ ಈ ಕುರಿತಂತೆ ಯಾವ ಹಂತದಲ್ಲಿ ತನಿಖೆ ಮಾಡಿಸಬೇಕು ಎಂಬುವುದನ್ನು ರಾಜ್ಯ ಸರ್ಕಾರ ತೀರ್ಮಾನಿಸುತ್ತದೆ. ಸತ್ಯವನ್ನು ಜನರ ಮುಂದಿಡುವ ಕೆಲಸವನ್ನು ಮಾಡಿತ್ತೇವೆ ಎಂದು ತಿರುಗೇಟು ನೀಡಿದ್ದಾರೆ.

    ಇದರ ನಡುವೆ ಇಂದು ಕೂಡ ರಣದೀಪ್ ಸಿಂಗ್ ಸುರ್ಜೆವಾಲಾ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಬೆಂಗಳೂರಿನಲ್ಲಿ ನಡೆಯಲಿರುವ ಸುದ್ದಿಗೋಷ್ಠಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಕೂಡ ಭಾಗವಹಿಸಲಿದ್ದಾರೆ. ಈ ವೇಳೆ ಮಹತ್ವದ ದಾಖಲೆ ಏನಾದರು ಬಿಡುಗಡೆ ಮಾಡುತ್ತಾರಾ ಎಂದು ಕುತೂಹಲ ಮೂಡಿಸಿದೆ.

  • ರಾಜಕೀಯ ಲಾಭಕ್ಕಾಗಿ ಬಿಜೆಪಿಯಿಂದ ಸರ್ಜಿಕಲ್ ಸ್ಟ್ರೈಕ್ ಬಳಕೆ: ಸುರ್ಜೆವಾಲಾ ಕಿಡಿ

    ರಾಜಕೀಯ ಲಾಭಕ್ಕಾಗಿ ಬಿಜೆಪಿಯಿಂದ ಸರ್ಜಿಕಲ್ ಸ್ಟ್ರೈಕ್ ಬಳಕೆ: ಸುರ್ಜೆವಾಲಾ ಕಿಡಿ

    ನವದೆಹಲಿ: ಬಿಜೆಪಿ ದೇಶದ ರಕ್ಷಣೆಗಾಗಿ ಪ್ರಾಣಾರ್ಪಣೆ ಮಾಡಿದ ಸೈನಿಕರ ಬಲಿದಾನವನ್ನು ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಳುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಆರೋಪಿಸಿದ್ದಾರೆ.

    ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿ ದೇಶದ ಸೈನ್ಯ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಅನ್ನು ತನ್ನ ರಾಜಕೀಯ ಲಾಭಕ್ಕಾಗಿ ಬಳಸುತ್ತಿದೆ. ಸೈನಿಕರು ದೇಶಕ್ಕಾಗಿ ತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಇದನ್ನು ತನ್ನ ರಾಜಕೀಯ ಉದ್ದೇಶದಲ್ಲಿ ಓಟು ಗಳಿಸಲು ಬಳಸಿಕೊಳ್ಳಬಾರದು. ಆದರೆ ಪ್ರಧಾನಿ ಇದನ್ನು ವೈಭವೀಕರಿಸಿ ತಮ್ಮ ರಾಜಕೀಯ ಉದ್ದೇಶಕ್ಕಾಗಿ ಬಳಸುತ್ತಿದ್ದಾರೆ. ಅಲ್ಲದೇ ಮೋದಿ ಸೈನ್ಯದ ಶ್ರಮವನ್ನು ದುರ್ಬಳಕೆ ಮಾಡುತ್ತಿದ್ದಾರೆ ಎಂದು ದೂರಿದರು.

    ಮೋದಿ ಸರ್ಕಾರ ಜೈ ಜವಾನ್ ಜೈ ಕಿಸಾನ್ ಘೋಷಣೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ಹಿಂದೆ ಭಾರತದ ಪ್ರಧಾನಿಗಳಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಮತ್ತು ಮನಮೋಹನ್ ಸಿಂಗ್ ಹೀಗೆ ಮಾಡಿದ್ದಾರಾ ಎಂದು ಮೋದಿಯನ್ನು ಇಡೀ ದೇಶವೇ ಕೇಳುತ್ತದೆ ಎಂದು ಪ್ರಶ್ನಿಸಿದರು.

    ದೇಶದ ಸೈನ್ಯದ ಈ ಕಾರ್ಯದ ಬಗ್ಗೆ ಹೆಮ್ಮೆಪಡುತ್ತದೆ. ಈ ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲಿಯೂ ಈ ರೀತಿಯ ದಾಳಿಗಳನ್ನು ನಡೆಸಲಾಗಿತ್ತು. ಆದರೆ ಅದರ ಬಗ್ಗೆ ಹೇಳಿಕೊಂಡಿರಲಿಲ್ಲ. ಇಂಥಹ ಸರ್ಜಿಕಲ್ ಸ್ಟ್ರೈಕ್‍ಗಳು ಎರಡು ದಶಕಗಳಿಂದ ಸಾಕಷ್ಟು ನಡೆದಿವೆ ಎಂದರು.

    ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇನೆಯನ್ನು ಅವಮಾನಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಉಗ್ರರ ಆಕ್ರಮಣ ಹಾಗೂ ಕದನ ವಿರಾಮ ಉಲ್ಲಂಘನೆ ಹೆಚ್ಚಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

     

    ಕಾಂಗ್ರೆಸ್ ಟೀಕೆಗೆ ಬಿಜೆಪಿಯ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಪ್ರತಿಕ್ರಿಯಿಸಿ, ಕಾಂಗ್ರೆಸ್ ತನ್ನ ಅವಧಿಯಲ್ಲಿ ಇಂಥ ಸ್ಟ್ರೈಕ್ ಮಾಡಲಾಗಿಲ್ಲ. ಹಾಗಾಗಿ ಇಂಥ ವಿಡಿಯೋ ಬಿಡುಗಡೆ ಮಾಡಿಲ್ಲ. ಹಾಗೆಯೇ ನಾವೂ ಸಹ ಬಿಡುಗಡೆ ಮಾಡಲು ಸಾಧ್ಯವಿಲ್ಲ. ಹಾಗಾಗಿ ಅದು ಹೇಗೆ ಜನ ಬಿಜೆಪಿ ಪರವಾಗಿ ಭಾವನೆಗಳನ್ನು ಬದಲಿಸಿಕೊಳ್ಳಲು ಸಾಧ್ಯವಾಗುತ್ತದೆ? ಒಂದು ವೇಳೆ ಕಾಂಗ್ರೆಸ್ ತನ್ನ ಅವಧಿಯಲ್ಲಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದರೆ ಮುಚ್ಚಿಟ್ಟಿದ್ದು ಯಾಕೆ? ಅವರ ಈ ನಡೆ ಹೇಗಿದೆ ಎಂದರೆ ನರಿ ಕೈಗೆಟುಕದ ದ್ರಾಕ್ಷಿ ಹುಳಿ ಎನ್ನುವ ಹಳೆಯ ಗಾದೆ ಮಾತಿನಂತಿದೆ ಎಂದು ವ್ಯಗ್ಯವಾಡಿದರು.

    2016ರ ಸೆಪ್ಟೆಂಬರ್ 28, 29ರ ನಸುಕಿನ ಜಾವ ವೇಳೆ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರವನ್ನು ಪ್ರವೇಶಿಸಿ ಸರ್ಜಿಕಲ್ ದಾಳಿ ನಡೆಸಿ 20ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಿತ್ತು. ಈ ಕಾರ್ಯಾಚರಣೆ ಬಳಿಕ ಸುದ್ದಿಗೋಷ್ಠಿ ನಡೆಸಿ ಡಿಜಿಎಂಒ ಕಾರ್ಯಾಚರಣೆಯ ವಿವರವನ್ನು ನೀಡಿದ್ದರು.