Tag: ರಣದೀಪ್ ಸುರ್ಜೆವಾಲ

  • ಮೋದಿ, ಬಿಜೆಪಿ ನಾಯಕರು ಬಡವರಿಗೆ ಆಹಾರ ಧಾನ್ಯ ನಿರಾಕರಿಸುವಷ್ಟು ಕುರುಡರಾಗಬಹುದೇ?: ಸುರ್ಜೆವಾಲ ವಾಗ್ದಾಳಿ

    ಮೋದಿ, ಬಿಜೆಪಿ ನಾಯಕರು ಬಡವರಿಗೆ ಆಹಾರ ಧಾನ್ಯ ನಿರಾಕರಿಸುವಷ್ಟು ಕುರುಡರಾಗಬಹುದೇ?: ಸುರ್ಜೆವಾಲ ವಾಗ್ದಾಳಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಬಡವರ ವಿರೋಧಿ ಮತ್ತು ದ್ವೇಷಪೂರಿತ ನಿಲುವು ಬಹಿರಂಗವಾಗಿದೆ. ಕರ್ನಾಟಕಕ್ಕೆ (Karnataka) ಅಕ್ಕಿ ನೀಡಲು ಎಫ್‌ಸಿಐ (FCI) ನಿರಾಕರಿಸಿದೆ. ಪ್ರಧಾನಿ ಮೋದಿ ಮತ್ತು ಬಿಜೆಪಿ (BJP) ನಾಯಕರು ಸೋಲಿನ ಬಳಿಕ ಬಡವರಿಗೆ ಆಹಾರ ಧಾನ್ಯವನ್ನು ನಿರಾಕರಿಸುವಷ್ಟು ಕುರುಡರಾಗಬಹುದಾ? ಎಂದು ಕಾಂಗ್ರೆಸ್ (Congress) ಉಸ್ತುವಾರಿ ರಣದೀಪ್ ಸುರ್ಜೆವಾಲ (Randeep Surjewala) ವಾಗ್ದಾಳಿ ನಡೆಸಿದ್ದಾರೆ.

    ದೆಹಲಿಯಲ್ಲಿ (Delhi) ಮಾತನಾಡಿದ ಸುರ್ಜೆವಾಲ, ಅನ್ನ ಭಾಗ್ಯ ನೀಡುವುದು ಕಾಂಗ್ರೆಸ್ ಸರ್ಕಾರದ ಆಶಯವಾಗಿತ್ತು. ಸುಮಾರು 4.42 ಕೋಟಿ ಜನರಿಗೆ ಅಕ್ಕಿ ನೀಡುವ ಉದ್ದೇಶ ಹೊಂದಿತ್ತು. ಕೇಂದ್ರ ಸರ್ಕಾರಕ್ಕೆ ಖಾಸಗಿ ಅವರಿಗೆ ಅಕ್ಕಿ ನೀಡಲು ಸಮಸ್ಯೆ ಇಲ್ಲ. ಆದರೆ ರಾಜ್ಯ ಸರ್ಕಾರಗಳಿಗೆ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ಮೂಲಕ ಬಿಜೆಪಿ ಬಡವರ ವಿರೋಧಿಸಿ ಎನ್ನುವುದು ಸಾಬೀತಾಗಿದೆ ಎಂದರು.

    ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರು ಸೋಲಿನ ಬಳಿಕ ಬಡವರಿಗೆ ಆಹಾರ ಧಾನ್ಯವನ್ನು ನಿರಾಕರಿಸುವಷ್ಟು ಕುರುಡರಾಗಬಹುದಾ? ಎಫ್‌ಸಿಐ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿಯನ್ನು ವ್ಯಾಪಾರಿಗಳಿಗೆ ಮಾರಾಟ ಮಾಡಲು ಅನುಮತಿ ಇದೆ. ಆದರೆ ಸರಿಯಾದ ಹಣ ಪಾವತಿಯ ನಂತರ ರಾಜ್ಯಗಳಿಗೆ ಮಾರಾಟ ಮಾಡುವುದನ್ನು ಏಕೆ ನಿಷೇಧಿಸಲಾಗಿದೆ? ಕಾಂಗ್ರೆಸ್ ಸರ್ಕಾರವು ಬಡವರಿಗೆ ಅಕ್ಕಿಯನ್ನು ನೀಡುವಂತೆ ಎಫ್‌ಸಿಐಗೆ ಕೇಳಿದ ಮರುದಿನವೇ ಮೋದಿ ಸರ್ಕಾರವು ಎಫ್‌ಸಿಐ ಅಕ್ಕಿಯನ್ನು ರಾಜ್ಯಗಳಿಗೆ ಮಾರಾಟ ಮಾಡಬಾರದು ಆದರೆ ವ್ಯಾಪಾರಿಗಳಿಗೆ ಮಾತ್ರ ಮಾರಾಟ ಮಾಡಬಹುದು ಎಂದು ನಿರ್ದೇಶಿಸಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮದ್ಯ ಸಾಗಿಸುತ್ತಿದ್ದ ಆರ್ಮಿ ಫ್ಯಾಮಿಲಿಯನ್ನು ಬಸ್‌ನಿಂದ ಇಳಿಸಿದ್ದಕ್ಕೆ ಕಿರಿಕ್

    ಕಾಂಗ್ರೆಸ್ ಸರ್ಕಾರ ಬಿಪಿಎಲ್ ಕುಟುಂಬಗಳು, ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಬಡವರಿಗೆ ಉಚಿತ ಅಕ್ಕಿ ನೀಡುವುದನ್ನು ತಡೆಯುವುದು ಇದರ ಹುನ್ನಾರ ಅಲ್ಲವೇ? ಖಾಸಗಿ ಅವರಿಗೆ ಮಾರಾಟ ಮಾಡಿ ಲಾಭ ಗಳಿಸಲು ಅವಕಾಶ ನೀಡುತ್ತಿದ್ದಿಯೇ? ಕರ್ನಾಟಕದ ಜನರಿಗೆ ಅನ್ಯಾಯವಾಗುವಾಗ ಸಂಸದರು ಯಾಕೆ ಸುಮ್ಮನೆ ಕೂತಿದ್ದಾರೆ? ಅವರು ಯಾಕೆ ರಾಜೀನಾಮೆ ನೀಡಬಾರದು? ಮೋದಿ ಸರ್ಕಾರದ ನೀತಿ ಬಗ್ಗೆ ಜೆಡಿಎಸ್ ಯಾಕೆ ಮೌನವಾಗಿದೆ? ಮೋದಿ ಸರ್ಕಾರ ಅನ್ನಭಾಗ್ಯ ತಡೆಯಲು ಏನೇ ಮಾಡಿದರು ಅದು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.

    ಬಿಜೆಪಿ, ಜೆಡಿಎಸ್ ಒತ್ತಡಕ್ಕೆ ಒಳಗಾಗಿವೆ. ನಾನು ಹೋಟೆಲ್‌ನಲ್ಲಿದ್ದೆ. ಅದೇ ಹೋಟೆಲ್‌ನಲ್ಲಿ ನಮ್ಮ ಪಿಸಿಸಿ ಅಧ್ಯಕ್ಷರು, ಸಚಿವರು ಸಭೆ ನಡೆಸುತ್ತಿದ್ದರು. ಸಭೆ ಬಳಿಕ ನಾನು ಕಾಫಿ ಕುಡಿಯಲು ಅಲ್ಲಿಗೆ ತೆರಳಿದ್ದೆ. ನಾನು ನಮ್ಮ ಪಕ್ಷದ ನಾಯಕರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ? ಜೆಪಿ ನಡ್ಡಾ ಯಾವುದೇ ರಾಜ್ಯದ ಸಿಎಂ ಭೇಟಿಯಾದರೆ ಸಮಸ್ಯೆ ಇಲ್ಲ. ನಾನು ನಮ್ಮ ನಾಯಕರನ್ನು ಭೇಟಿಯಾದರೆ ಅದರಲ್ಲಿ ಅಪರಾಧ ಏನಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ವಾಪಸ್ – ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

  • ಶೀಘ್ರವೇ ನಮ್ಮ ನಾಯಕರ ಮೇಲೆ ಐಟಿ, ಇಡಿ ದಾಳಿ ನಡೆಯಲಿದೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ಆರೋಪ

    ಶೀಘ್ರವೇ ನಮ್ಮ ನಾಯಕರ ಮೇಲೆ ಐಟಿ, ಇಡಿ ದಾಳಿ ನಡೆಯಲಿದೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ಆರೋಪ

    ನವದೆಹಲಿ: ಕಾಂಗ್ರೆಸ್ (Congress) ನಾಯಕರ ಮೇಲೆ ಐಟಿ, ಇಡಿ ದಾಳಿ ನಡೆಯಲಿದೆ. ಈಗಾಗಲೇ ಅಧಿಕಾರಿಗಳು ಹೊರಟಿದ್ದಾರೆ. ನಾಳೆ ಐಟಿ, ಇಡಿ, ಸಿಬಿಐ ದುರ್ಬಳಕೆ ಆರಂಭವಾಗಲಿದೆ ಎಂದು ಕಾಂಗ್ರೆಸ್ ನಾಯಕರು ಸುದ್ದಿಗೋಷ್ಠಿ ನಡೆಸಿ ಬಿಜೆಪಿ (BJP) ಸರ್ಕಾರದ ವಿರುದ್ಧ ಆರೋಪ ಹೊರಿಸಿ ಕಿಡಿಕಾರಿದ್ದಾರೆ.

    ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah), ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar), ರಣದೀಪ್ ಸುರ್ಜೆವಾಲ (Randeep Surjewala) ಜಂಟಿಯಾಗಿ ತುರ್ತು ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

    ನಾಯಕರು ಹೇಳಿದ್ದೇನು?
    ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು, ಬೆಂಬಲಿಗರ ಮನೆ ಮೇಲೆ ದಾಳಿ ನಡೆಸಲು ಸಿದ್ಧತೆ ನಡೆದಿದೆ. ದೆಹಲಿಯಿಂದ ಸಾವಿರಾರು ಅಧಿಕಾರಿಗಳು ಈಗಾಗಲೇ ಹೊರಟಿದ್ದಾರೆ. ನಿಮ್ಮಲ್ಲಿ ಎಷ್ಟು ದಮ್ ಇದೆ ಅಷ್ಟು ಪ್ರಯತ್ನ ಮಾಡಿ. ಕಾಂಗ್ರೆಸ್ ನಾಯಕರು ಹೆದರುವುದಿಲ್ಲ. ಇದನ್ನೂ ಓದಿ: ಸಿ.ಟಿ ರವಿ ಹೆಸರಲ್ಲಿ ಸುಳ್ಳು ಪೋಸ್ಟ್- ಮೂವರ ವಿರುದ್ಧ ಎಫ್‍ಐಆರ್

    ನಮ್ಮ ಬೆಂಬಲಕ್ಕೆ ಇರುವ ಹಿತೈಷಿಗಳಲ್ಲಿ ನಮಗೆ ಸಹಾಯ ಮಾಡದಂತೆ ಹೆದರಿಸಿದ್ದಾರೆ. ಯಾವ ವಿಚಾರ ಮಾತನಾಡುವುದಕ್ಕೂ ಹೆದರುತ್ತಿದ್ದಾರೆ. ನಮಗೂ ಕಾಲ ಬರುತ್ತದೆ. ಸೋಲುವ ಭಯದಲ್ಲಿ ನಮಗೂ ಭಯ ಸೃಷ್ಟಿಸಲು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ.

    ಬಿಜೆಪಿಗೆ ಸೋಲುವ ಭೀತಿ ಆರಂಭವಾಗಿದೆ. ಎಲ್ಲಾ ಸರ್ವೆಗಳು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ. ಬಹಳಷ್ಟು ನಾಯಕರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಎಂದು ಎಲ್ಲರಿಗೂ ಗೊತ್ತಿದೆ. ಬಿಜೆಪಿ ನಾಯಕರಿಗೆ ಸೋಲಿನ ಬಗ್ಗೆ ಗೊತ್ತಿದೆ. ಅವರು ಅಧಿಕಾರಕ್ಕೆ ಬರುವುದಿಲ್ಲ. ಹಿಂದುತ್ವ ಮತ್ತು ದ್ವೇಷ ರಾಜಕಾರಣವನ್ನು ಜನರು ತಿರಸ್ಕರಿಸಿದ್ದಾರೆ. ಹಣದ ಶಕ್ತಿಯಿಂದ ಅಧಿಕಾರಕ್ಕೆ ಬರಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ನಾಯಕರು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಗುರುವಾರದೊಳಗೆ ಜೆಡಿಎಸ್ 2ನೇ ಪಟ್ಟಿ: ಹೆಚ್‌ಡಿ ಕುಮಾರಸ್ವಾಮಿ

  • ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕೃಷ್ಣಾ ನದಿ ಕಾಮಗಾರಿಗೆ ಪ್ರತಿ ವರ್ಷ 40 ಸಾವಿರ ಕೋಟಿ ಕೊಡ್ತೇವೆ – ಸುರ್ಜೆವಾಲ

    ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕೃಷ್ಣಾ ನದಿ ಕಾಮಗಾರಿಗೆ ಪ್ರತಿ ವರ್ಷ 40 ಸಾವಿರ ಕೋಟಿ ಕೊಡ್ತೇವೆ – ಸುರ್ಜೆವಾಲ

    ಹುಬ್ಬಳ್ಳಿ: ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕೃಷ್ಣಾ ನದಿ 3ನೇ ಹಂತದ ಕಾಮಗಾರಿಗೆ ಪ್ರತಿ ವರ್ಷ 40 ಸಾವಿರ ಕೋಟಿ ರೂಪಾಯಿ ಕೊಡುತ್ತೇವೆ ಎಂದು ಕಾಂಗ್ರೆಸ್ (Congress) ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೆವಾಲ (Randeep Surjewala) ಭರವಸೆ ನೀಡಿದ್ದಾರೆ.

    ಹುಬ್ಬಳ್ಳಿಯಲ್ಲಿಂದು (Hubballi) ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕೃಷ್ಣಾ ನದಿ (Krishna River Project) ನೀರು ಹಂಚಿಕೆ ವಿಚಾರದಲ್ಲಿ ಬಿಜೆಪಿಯವರು (BJP) ಜನರಿಗೆ ದ್ರೋಹ ಮಾಡುತ್ತಾ ಬಂದಿದ್ದಾರೆ. ಪರಿಣಾಮ ಉತ್ತರ ಕರ್ನಾಟಕ ಭಾಗದ ಜನರಿಗೆ ಸಂಘರ್ಷ ಮತ್ತು ಸವಾಲಿನ ಸಮಯ ಎದುರಾಗಿದೆ. ಇನ್ನೂ ಮೂರು ತಿಂಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಅದಾದ ಮೇಲೆ ಕೃಷ್ಣಾ ನದಿ 3ನೇ ಹಂತದ ಕಾಮಗಾರಿಗೆ ಪ್ರತಿ ವರ್ಷ 40 ಸಾವಿರ ಕೋಟಿ ರೂಪಾಯಿ ಕೊಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ನನ್ನ ಮೂರ್ತಿ ಬಿಟ್ಟು ನನ್ನ ಕುತ್ತಿಗೆಗೆ ಬೇರೆ ಯಾರೂ ತಾಳಿ ಕಟ್ಟಬಾರದು- ಯುವತಿಯ ಹರಕೆ

    ಅಮಿತ್ ಶಾ ರಾಜ್ಯಕ್ಕೆ ಬಂದಿದ್ದರೂ ಕೃಷ್ಣಾ ಮತ್ತು ಮಹದಾಯಿ ನೀರು ಹಂಚಿಕೆ (Kalasa Banduri Yojana) ವಿಚಾರವಾಗಿ ಮಾತನಾಡಿಲ್ಲ. ಏಕೆಂದರೆ ಅವರ ಮನಸ್ಸಿನಲ್ಲಿ ಕಳ್ಳನಿದ್ದಾನೆ. ಇಂದಿಗೂ ಶಾ ಮತ್ತು ಮೋದಿ ಅವರು ಕೃಷ್ಣಾ ಮತ್ತು ಮಹದಾಯಿ ನೀರಿನ ಹಕ್ಕಿನಿಂದ ಉತ್ತರ ಕರ್ನಾಟಕದ ಜನರನ್ನು ದೂರ ಇಟ್ಟಿದ್ದಾರೆ. ಅರಣ್ಯ ಇಲಾಖೆ ಕ್ಲಿಯರೆನ್ಸ್, ಹಸಿರು ನ್ಯಾಯಾಧಿಕರಣದ ಕ್ಲಿಯರೆನ್ಸ್, ಕಾಮಗಾರಿ ಟೆಂಡರ್ ಎಲ್ಲಿದೆ ತೋರಿಸಲಿ? ಮೋಸಗಾರ ಬಿಜೆಪಿ ಒಂಟೆಯ ಬಾಯಲ್ಲಿ ಜೀರಿಗೆ ಹಾಕುವ ಕೆಲಸ ಮಾಡುತ್ತಿದೆ. ಈಗ ಇಲ್ಲಸಲ್ಲದ ಮಾತನಾಡಿ ದಿಕ್ಕುತಪ್ಪಿಸುತ್ತಿದೆ. ಈ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಅಮಿತ್ ಶಾ ಏನಾದರೂ ನ್ಯಾಯ ಒದಗಿಸಿದ್ದಾರಾ – ಡಿಕೆಶಿ ಪ್ರಶ್ನೆ

    ಡಿ.ಕೆ.ಶಿವಕುಮಾರ್ (DK Shivakumar) ಮತ್ತು ಸಿದ್ದರಾಮಯ್ಯ (Siddaramaiah) ತಮ್ಮ ಯಾತ್ರೆಯ ಮೂಲಕ ಹೊಸ ಇತಿಹಾಸ ಬರೆಯಲು ಹೊರಟಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಬಳಿಕ ಮುಂದಿನ ಕಾಂಗ್ರೆಸ್ ಸರ್ಕಾರ ಮಹದಾಯಿ ಯೋಜನೆಗೆ 3 ಸಾವಿರ ಕೋಟಿ ರೂ. ಅನುದಾನ ಕೊಡಲಿದೆ. ಮೊದಲ ಕ್ಯಾಬಿನೆಟ್‌ನಲ್ಲಿ ಐದು ನೂರು ಕೋಟಿ ರೂಪಾಯಿ ಬಿಡುಗಡೆ ಮಾಡಲಿದೆ. ಇದು ಕಾಂಗ್ರೆಸ್ ಪಕ್ಷದ ಬದ್ಧತೆ, ದ್ರೋಹಿಗಳ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಕಿವಿಮಾತು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೋದಿ ಸರ್ಕಾರಕ್ಕೆ 4 ವರ್ಷ: ಮೇ 26 ರಂದು ದೇಶಾದ್ಯಂತ ಕಾಂಗ್ರೆಸ್‍ನಿಂದ ವಿಶ್ವಾಸಘಾತ ದಿನಾಚರಣೆ

    ಮೋದಿ ಸರ್ಕಾರಕ್ಕೆ 4 ವರ್ಷ: ಮೇ 26 ರಂದು ದೇಶಾದ್ಯಂತ ಕಾಂಗ್ರೆಸ್‍ನಿಂದ ವಿಶ್ವಾಸಘಾತ ದಿನಾಚರಣೆ

    ನವದೆಹಲಿ: ಮೋದಿ ಸರ್ಕಾರದ 4ನೇ ಸಂಭ್ರಮಾಚರಣೆಯ ದಿನವಾದ ಮೇ 26ರಂದು ಕಾಂಗ್ರೆಸ್ ವಿಶ್ವಾಸಘಾತ ದಿನವನ್ನಾಗಿ ಆಚರಿಸಲು ನಿರ್ಧರಿಸಿದೆ.

    ಎಐಸಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ನಾಯಕರಾದ ಅಶೋಕ್ ಗೆಹ್ಲೋಟ್ ಮತ್ತು ರಣದೀಪ್ ಸುರ್ಜೆವಾಲ, ಮೋದಿ ಚುನಾವಣಾ ಸಂದರ್ಭದಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ಜನರು ಇಟ್ಟಿದ್ದ ವಿಶ್ವಾಸ ಕೇಂದ್ರ ಸರ್ಕಾರ ಉಳಿಸಿಕೊಂಡಿಲ್ಲ. ಹೀಗಾಗಿ ಮೇ 26ರಂದು ವಿಶ್ವಾಸಘಾತ ದಿನವನ್ನಾಗಿ ದೇಶಾದ್ಯಂತ ಆಚರಿಸುವುದಾಗಿ ಹೇಳಿದ್ದಾರೆ.

    ತೈಲ ಬೆಲೆ ದಿನೇ ದಿನೇ ಏರಿಕೆಯಾಗುತ್ತಿದೆ. ಅಧಿಕಾರಕ್ಕೆ ಬರುವಾಗ ಎಲ್ಲಾ ವಸ್ತುಗಳ ಬೆಲೆ ಕಡಿಮೆ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ನಾಲ್ಕು ವರ್ಷ ತುಂಬಿದರೂ ಬೆಲೆ ಗಗನಕ್ಕೆ ಏರುತ್ತಿದೆ. ಹಾಗಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ವಿಶ್ವಾಸಘಾತ್ ದಿನಾಚರಣೆಯನ್ನು ಮಾಡುತ್ತೇವೆ ಎಂದು ಹೇಳಿದರು.

    ಯುವಕರಿಗೆ ಉದ್ಯೋಗ ನೀಡುವ ಭರವಸೆ ಹುಸಿಯಾಗಿದೆ. ಭ್ರಷ್ಟಾಚಾರ ವಿಚಾರ ಇಟ್ಟುಕೊಂಡು ಸರ್ಕಾರ ರಚನೆ ಮಾಡಿದರು. ಆದರೆ ಕೇಂದ್ರ ಸರ್ಕಾರವೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ. ಪಿಯೂಷ್ ಗೊಯೆಲ್ 10 ರೂಪಾಯಿ ಷೇರು 10 ಸಾವಿರಕ್ಕೆ ವ್ಯಾಪಾರ ಆಗುತ್ತದೆ. ಕೋಟ್ಯಾಂತರ ರೂಪಾಯಿ ಲೂಟಿ ಮಾಡಿ ವಿದೇಶಕ್ಕೆ ಹೋಗುತ್ತಿದ್ದಾರೆ. ಪ್ರತಿ ನಾಗರಿಕನ ಅಕೌಂಟಿಗೆ 15 ಲಕ್ಷ ಹಣ ಬರಲಿಲ್ಲ. ಐಟಿ ಮತ್ತು ಇಡಿಯನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ಹಾಗಾಗಿ ವಿಶ್ವಾಸಘಾತ ಹೆಸರಿನಲ್ಲಿ ಮೇ 26ರಂದು ಎಲ್ಲಾ ರಾಜ್ಯಗಳಲ್ಲಿ ಆಚರಣೆ ಮಾಡಲು ಕಾಂಗ್ರೆಸ್ ನಿರ್ಧಾರ ಮಾಡಿದೆ ಎಂದು ತಿಳಿಸಿದರು.