ಬೆಂಗಳೂರು: ಸೆಪ್ಟೆಂಬರ್ ಕ್ಷಿಪ್ರಕ್ರಾಂತಿಯ ಸದ್ದು ಜೋರಾಗುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ (Randeep Surjewala) ಇಂದು ಅಸಮಾಧಾನಗೊಂಡಿರುವ ಶಾಸಕರ ಜೊತೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ.
ಬಿ.ಆರ್ ಪಾಟೀಲ್, ರಾಜು ಕಾಗೆ ಬಹಿರಂಗ ಹೇಳಿಕೆಯಿಂದ ಸರ್ಕಾರಕ್ಕೆ ಡ್ಯಾಮೇಜ್ ಉಂಟಾಗಿದ್ದು, ಇದಕ್ಕೆ ತೇಪೆ ಹಚ್ಚಲು ಹೈಕಮಾಂಡ್ (Congress High Command) ಮುಂದಾಗಿದೆ. ಇಂದು ಮಧ್ಯಾಹ್ನ ಶಾಸಕರು ತಮ್ಮ ಸಮಸ್ಯೆ ಹೇಳಿಕೊಳ್ಳಲು ಒನ್ ಟು ಒನ್ ಭೇಟಿಗೆ ಸಮಯ ಮೀಸಲಿಟ್ಟಿದ್ದಾರೆ.
ಪಕ್ಷದ ಅಂತರಿಕ ಬೆಳವಣಿಗೆಗಳ ಪ್ರಶ್ನೆಗೆ ಡಿಕೆಶಿ ಉತ್ತರ ಕೊಡುತ್ತಿಲ್ಲ. ಏನೇ ಕೇಳಿದರೂ ಸಹ ಪಕ್ಷ ಸಂಘಟನೆ ಮಾತ್ರ ನನ್ನ ಗುರಿ ಎನ್ನುತ್ತಿದ್ದಾರೆ. ಪ್ರಶ್ನೆ ಕೇಳಿದರೆ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರ ಕಡೆ ಬೊಟ್ಟು ಮಾಡುತ್ತಿದ್ದಾರೆ.
ಕಾಂಗ್ರೆಸ್ ಪಕ್ಷದ ನೂತನ ಶಾಸಕರ ವಿದೇಶಿ ಪ್ರವಾಸದ ಕುರಿತು ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅಸೀಫ್ ಸೇಠ್ ಮಾತನಾಡಿದ್ದರು. ಮಾಧ್ಯಮಗಳು 15ಕ್ಕೂ ಹೆಚ್ಚು ಶಾಸಕರ ವಿದೇಶಿ ಪ್ರವಾಸದ ಬಗ್ಗೆ ಪ್ರಶ್ನೆ ಮಾಡಿದಾಗ ಅದರ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಕೋರ್ಟ್‌ನಲ್ಲಿ ತನ್ನದೇ ವಿಡಿಯೋ ನೋಡಿದ ಪ್ರಜ್ವಲ್ ರೇವಣ್ಣ
ನನ್ನದು ಈಗ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಮಾತ್ರ. ಪಕ್ಷ ಸಂಘಟನೆ ನನ್ನಗುರಿ ಎಂದು ಡಿಕೆಶಿ ಹೇಳಿ ಹೊರಟರು.
ಬೆಂಗಳೂರು: ನಾವು ಡಿಸಿಎಂ ಡಿಕೆ ಶಿವಕುಮಾರ್ (Dk Shivakumar) ಜೊತೆ ಸಭೆ ನಡೆಸಿದ್ದೇವೆ. ನಮ್ಮಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ (MB Patil) ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು ಬೆಳಗಾವಿ ಅಧಿವೇಶನ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಯಾರಲ್ಲೂ ಅಸಮಾಧಾನ ಇಲ್ಲ. ಎಲ್ಲರೂ ಕೂಡ ಪಕ್ಷ, ಸರ್ಕಾರದ ಹಿತದೃಷ್ಟಿಯಲ್ಲಿ ಕೆಲಸ ಮಾಡಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ (Randeep Surjewala) ಹೇಳಿರುವುದಾಗಿ ತಿಳಿಸಿದರು.
ನಮ್ಮಲ್ಲಿ ಹೈ ಕಮಾಂಡ್ ತೀರ್ಮಾನವೇ ಅಂತಿಮ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರವನ್ನು ಪಕ್ಷ ತೀರ್ಮಾನ ಮಾಡುತ್ತದೆ. ಸಚಿವರ ಬಗ್ಗೆ ಹೈಕಮಾಂಡ್‌ಗೆ ವರದಿ ನೀಡಿದರೆ ತಪ್ಪೇನು? ನಾವು ಕೆಲಸ ಮಾಡಿರುವುದು ಅವರಿಗೂ ಅರ್ಥವಾಗುತ್ತದೆ. ಪಕ್ಷದಲ್ಲಿ ಏನೇ ತೀರ್ಮಾನ ನಡೆದರೂ ಎಐಸಿಸಿ ಅಧ್ಯಕ್ಷರು ಮಾಡುತ್ತಾರೆ ಎಂದು ಹೇಳಿದರು.
ಹಿಂದಿನ ಸರ್ಕಾರ 32-40 ಸಾವಿರ ಕೋಟಿ ರೂ. ಬಾಕಿಯಿಟ್ಟಿತ್ತು. ಬಾಕಿ ಇರಿಸಿದ ಪರಿಣಾಮ ನಮ್ಮ ಮೇಲೆ ಹೊರೆ ಆಗುತ್ತಿದೆ. ಸಿದ್ದರಾಮಯ್ಯನವರು 16 ಬಜೆಟ್ ಮಂಡನೆ ಮಾಡಿದ್ದು ಎಲ್ಲವೂ ಸರಿಯಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗುತ್ತಿಗೆದಾರರ ಬಾಕಿ ಇರುವ ಎಲ್ಲಾ ಬಿಲ್‌ಗಳನ್ನು ನಾವು ಕ್ಲೀಯರ್ ಮಾಡುತ್ತೇವೆ. ಆದರೆ ಅನುಮತಿ ಇಲ್ಲದೇ ಪ್ರಾರಂಭ ಮಾಡಿದ್ದರೆ ಅದಕ್ಕೆ ಸರ್ಕಾರ ಭಾಗಿಯಾಗುವುದಿಲ್ಲ. ಕೆಐಡಿಬಿಯಲ್ಲಿ 960 ಕೋಟಿ ರೂ. ಬಾಕಿಯಿದೆ. ನಮ್ಮ ಇಲಾಖೆಯಲ್ಲಿ ಜಾಸ್ತಿ ಬಾಕಿ ಇಲ್ಲ ಎಂದರು.
ಜಾತಿ ಜನಗಣತಿಗೆ ನಾನು ಎಂದು ವಿರೋಧ ಮಾಡಿಲ್ಲ. ವರದಿಯಲ್ಲಿ ಏನಿದೆ ನೋಡಿ ಆಮೇಲೆ ನಮ್ಮ ನಿಲುವು ತಿಳಿಸುತ್ತೇವೆ. ನೋಡದೇ ಯಾವುದೇ ಪ್ರತಿಕ್ರಿಯೆ ನೀಡಬಾರದು. ಲಿಂಗಾಯತ ಪಂಗಡ ಕೂಡಿಸಿ ಮಾಡಿ ಅಂತ ನಾನು ಮುಖ್ಯಮಂತ್ರಿಗಳಿಗೆ ಹೇಳಿದ್ದೇನೆ. ಲಿಂಗಾಯತ ಉಪ ಪಂಗಡ ಒಂದಾಗಿ ಸೇರಿಸಿ ಲೆಕ್ಕ ಮಾಡಿದರೆ ಎಲ್ಲರೂ ಆಪ್ತರೇ ಆಗುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಬೆಂಗಳೂರು: ಎಲ್ಲಾ ರೀತಿಯ ಪ್ರತ್ಯೇಕ ಸಭೆ, ಊಟ, ಡಿನ್ನರ್ ಮೀಟಿಂಗ್ ಯಾವುದಕ್ಕೂ ಅವಕಾಶ ಇಲ್ಲ. ಎಲ್ಲದಕ್ಕೂ ಬ್ರೇಕ್ ಹಾಕಿ ಎಂದು ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ (Randeep Surjewala) ತಾಕೀತು ಮಾಡಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಖಾಸಗಿ ಹೋಟೆಲಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ (CLP Meeting) ಮಾತನಾಡಿದ ಅವರು, ಸಮುದಾಯದ ಸಭೆ, ಸಮುದಾಯದ ನಾಯಕರ ಸಭೆ ಮಾಡಬೇಕಾದ ಯಾವುದೇ ಪರಿಸ್ಥಿತಿ ಬಂದರೂ ಹೈಕಮಾಂಡ್ ಅನುಮತಿ ಪಡೆದು ಮಾಡಬೇಕು. ಬಹಿರಂಗವಾಗಿ ಮಾತನಾಡುವ ಎಲ್ಲಾ ಚಟುವಟಿಕೆಗಳನ್ನು ನಿಲ್ಲಿಸಬೇಕು ಎಂದು ಸೂಚಿಸಿದ್ದಾರೆ. ಇದನ್ನೂ ಓದಿ: ಪವರ್ ಶೇರಿಂಗ್ ಚರ್ಚೆ ಹೊತ್ತಲ್ಲೇ ಸಿಎಂ ತ್ಯಾಗದ ಮಾತು!
ನೀವು ಏನೇ ಮಾತನಾಡಿದರೂ ಅದು ಪಕ್ಷಕ್ಕೆ ದೊಡ್ಡ ಹಾನಿಯಾಗುತ್ತದೆ. ಏನಿದ್ದರೂ ಬಿಜೆಪಿಯವರ (BJP) ವಿರುದ್ದ ಮಾತನಾಡಿ. ಅವರು ಆರೋಪ ಮಾಡುತ್ತಿರುತ್ತಾರೆ. ನೀವು ನಿಮ್ಮ ಪಾಡಿಗೆ ಸುಮ್ಮನೆ ಇರುತ್ತೀರಿ. ಪಕ್ಷದ ಬಗ್ಗೆ ಮಾತನಾಡುವುದಲ್ಲ. ಬಿಜೆಪಿಯವರ ಆರೋಪದ ವಿರುದ್ದ ಮೊದಲು ಮಾತನಾಡಿ ಎಂದು ಹೇಳಿದರು.
ಏನೇ ಗೊಂದಲಗಳಿದ್ದರೂ ನಾಲ್ಕು ಗೋಡೆಯ ಮಧ್ಯೆ ಪಕ್ಷದ ಚೌಕಟ್ಟಿನಲ್ಲಿ ಚರ್ಚಿಸಿ. ಹ ಕಮಾಂಡ್ ಮುಂದೆ, ಸಿಎಂ ಹಾಗೂ ಡಿಸಿಎಂ ಮುಂದೆ ಮಾತನಾಡಿ ಎಂದು ಎಲ್ಲಾ ಶಾಸಕರಿಗೆ ತಾಕೀತು ಮಾಡಿದರು. ಇದನ್ನೂ ಓದಿ: ಸುರ್ಜೇವಾಲ ಮಹತ್ವದ ಸಭೆಗೆ ಪರಂ, ರಾಜಣ್ಣ ಗೈರು!
ಬೆಂಗಳೂರು: ಇಂದು ಸಂಜೆ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆಗೂ (CLP Meeting) ಮುನ್ನ ಸಿಎಂ ಸಿದ್ದರಾಮಯ್ಯ (CM Siddaramaiah) ತಂಡಕ್ಕೆ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ (Randeep Surjewala) ಅವರು ಎಚ್ಚರಿಕೆ ನೀಡಿದ್ದಾರೆ.
ಸರ್ಕಾರಕ್ಕಿಂತ ಪಕ್ಷ ದೊಡ್ಡದು. ಪಕ್ಷ ಇದ್ದಾಗ ಮಾತ್ರ ಯಾವುದೇ ಸರ್ಕಾರವನ್ನು ಬೇಕಾದ್ರೂ ರಚಿಸಬಹುದು. ಯಾವುದೇ ಕಾರಣಕ್ಕೂ ಬಹಿರಂಗ ಹೇಳಿಕೆ ನೀಡಬಾರದು ಎಂದು ಸಿದ್ದರಾಮಯ್ಯ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲೇ ಸಚಿವರ ಹೆಸರು ಹೇಳದೇ ಸುರ್ಜೇವಾಲ ವಾರ್ನಿಂಗ್ ಕೊಟ್ಟಿದ್ದಾರೆ.
ಬೆಂಗಳೂರು: ನಿಗಮ-ಮಂಡಳಿಯಲ್ಲಿ (Corporation Board) ಮೊದಲ ಬಾರಿ ಶಾಸಕರಾದವರು ಮತ್ತು ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಪಡೆದವರಿಗೆ ಸ್ಥಾನ ಕೊಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಸಿಎಂ, ಸುರ್ಜೇವಾಲ ಹಾಗೂ ನಾನು ಎಲ್ಲರೂ ಚರ್ಚೆ ಮಾಡಿ ಪಟ್ಟಿ ಅಂತಿಮ ಮಾಡಿದ್ದೇವೆ. ಸುರ್ಜೇವಾಲ (Randeep Surjewala) ಹೈಕಮಾಂಡ್ ಬಳಿ ಪಟ್ಟಿಯನ್ನು ತೆಗೆದುಕೊಂಡು ಹೋಗಿದ್ದಾರೆ. ಇವತ್ತು ಚುನಾವಣೆ ಪ್ರಚಾರ ಮುಗಿಯುತ್ತದೆ. ಆದಷ್ಟು ಬೇಗ ಪಟ್ಟಿ ಬಿಡುಗಡೆ ಆಗುತ್ತದೆ ಎಂದರು. ಇದನ್ನೂ ಓದಿ: ಕೃಷ್ಣ ಭೈರೇಗೌಡರ ಆರೋಪ ತನಿಖೆಯಾಗುವ ತನಕ ಸದನಕ್ಕೆ ಹೋಗಲ್ಲ: ಬಿ.ಆರ್ ಪಾಟೀಲ್
ಮೊದಲ ಬಾರಿ ಶಾಸಕರಾದವರಿಗೆ ನಿಗಮ-ಮಂಡಳಿಯಲ್ಲಿ ಸ್ಥಾನ ಇಲ್ಲ. ಅದೇ ರೀತಿ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ತೆಗೆದುಕೊಂಡು ಸ್ಪರ್ಧೆ ಮಾಡಿದವರಿಗೂ ನಿಗಮ-ಮಂಡಳಿ ಸ್ಥಾನ ಇಲ್ಲ ಎಂದರು. ಮೊದಲ ಹಂತದಲ್ಲಿ ಶಾಸಕರಿಗೆ ಕೊಡಲಾಗುತ್ತದೆ. ಕಾರ್ಯಕರ್ತರಿಗೆ ಎರಡನೇ ಹಂತದಲ್ಲಿ ಸ್ಥಾನ ಕೊಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಆರ್ ಪಾಟೀಲ್ ಎಮೋಷನಲ್ ಆಗಿ ಪತ್ರ ಬರೆದಿರಬಹುದು: ಎಂ.ಬಿ ಪಾಟೀಲ್
ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ (Randeep Surjewala) ಅವರು ಮತ್ತೆ ಬೆಂಗಳೂರಿಗೆ ಬಂದಿದ್ದಾರೆ. ಮೊದಲನೇ ಕಂತು ಬಂತು, 2ನೇ ಕಂತು ಬಂತು. 3ನೇ ಕಂತು ಬೇಕು. 3ನೇ ಕಂತಿನಲ್ಲಿ ಚೌಕಾಸಿ ಆಗಬಾರದೆಂದು 3ನೇ ಕಂತಿಗೋಸ್ಕರ ಮತ್ತೆ ಬೆಂಗಳೂರಿಗೆ (Bengaluru) ಬಂದಂತಿದೆ ಎಂದು ಮಾಜಿ ಸಚಿವ ಮತ್ತು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (CT Ravi) ಆರೋಪಿಸಿದ್ದಾರೆ.
ಮಲ್ಲೇಶ್ವರದ (Malleshwaram) ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಯಾವಾಗಲೂ ಚುನಾವಣೆ ನಡೆಸುವುದೇ ಕಡೇ 3 ದಿನಗಳಲ್ಲಿ ಎಂದು ಟೀಕಿಸಿದರು. ತೆಲಂಗಾಣ (Telangana) ಚುನಾವಣಾ (Election) ಉಸ್ತುವಾರಿಯನ್ನು ಕರ್ನಾಟಕದ ಉಪ ಮುಖ್ಯಮಂತ್ರಿಗೆ ನೀಡಿದ್ದಾರೆ. ಹಾಗಾಗಿ 3ನೇ ಕಂತಿಗಾಗಿ ಬಂದಂತಿದೆ. ಕರ್ನಾಟಕ ಇನ್ನೆಷ್ಟು ಕಂತು ಕೊಡಬೇಕೋ? ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಮಾಡುವ ಬಗ್ಗೆ ನಾವು ಮುಂಚೆಯೇ ತಿಳಿಸಿದ್ದೆವು. ಕಾಂಗ್ರೆಸ್ ಗೆಲ್ಲಿಸಬೇಡಿ ಎಂದು ಜನರಿಗೆ ಮನವಿ ಮಾಡಿದ್ದೆವು. ಆದರೆ ಅದನ್ನು ಮನವರಿಕೆ ಮಾಡಿಕೊಡಲಾಗಲಿಲ್ಲ. ಗ್ಯಾರಂಟಿ ಆಸೆಗೋ, ಇನ್ಯಾವುದೋ ಕಾರಣಕ್ಕೋ ಕಾಂಗ್ರೆಸ್ಸನ್ನು (Congress) ಗೆಲ್ಲಿಸಿದ್ದಾರೆ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ಸ್ವಚ್ಚತೆ, ನೈರ್ಮಲ್ಯ ಸಂರಕ್ಷಣೆಗೆ ಸ್ಥಳೀಯ ಸಂಸ್ಥೆಗಳಿಗೆ 2 ಸಾವಿರ ಕೋಟಿ ಅನುದಾನ: ಡಿಕೆಶಿ
ಸುರ್ಜೇವಾಲಾ ಮೇಲೆ ಹದ್ದಿನ ಕಣ್ಣಿಡಬೇಕು:
ಈಗ ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದ್ದಾರೆ. ಐಟಿ ದಾಳಿ ವೇಳೆ ಇಲ್ಲಿ ಸಿಕ್ಕಿದ್ದ 102 ಕೋಟಿ ರೂ. ಕಾಂಗ್ರೆಸ್‌ಗಾಗಿ ಸಂಗ್ರಹಿಸಿದ ಹಣ. ಚುನಾವಣೆ ಆಯೋಗ, ಐಟಿ, ಇ.ಡಿಗಳು ಸುರ್ಜೇವಾಲಾ ಮೇಲೆ ಹದ್ದಿನ ಕಣ್ಣಿಡಬೇಕು ಎಂದು ಆಗ್ರಹಿಸಿದ ಅವರು ಇವತ್ತೇ ಹಣ ಹೋಗುವ ಸಾಧ್ಯತೆ ಇದೆ ಎಂದು ನುಡಿದರು. ಇದನ್ನೂ ಓದಿ: ಸಿಎಂರ ಜನಸ್ಪಂದನವನ್ನು ಅಭಿನಂದಿಸುತ್ತೇನೆ, ಎಲ್ಲವನ್ನು ಟೀಕಿಸಲ್ಲ: ಹೆಚ್‌ಡಿಕೆ
ನಾನು ಕೆಂಪಣ್ಣ ಅವರ ಹೇಳಿಕೆಯನ್ನು ಗಮನಿಸಿಲ್ಲ. ಗುತ್ತಿಗೆದಾರ ಅಂಬಿಕಾಪತಿ ಅವರ ಸಾವು ದುರದೃಷ್ಟಕರ. ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಬಯಸುತ್ತೇನೆ. ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಎಂದು ಈ ಸಂಬಂಧ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ಕೊಟ್ಟರು. ಹೆಸರು ಮುಚ್ಚಿಡುವ ಒತ್ತಡ ಬಂತೋ? ಯಾವ ಒತ್ತಡದಲ್ಲಿ ಅವರಿಗೆ ಹೃದಯಾಘಾತ ಆಗಿದೆ ಎಂದು ಗೊತ್ತಿಲ್ಲ ಎಂದು ತಿಳಿಸಿದರು. ಇವರಿಗೆ ಸತ್ಯ ಹೇಳುವಂತಿಲ್ಲ. ಅವರ ಸಾವು ದುರದೃಷ್ಟಕರ ಎಂದು ತಿಳಿಸಿದರು. ಸುದೀರ್ಘ ಅವಧಿಯ ಕಾಲ ಆಡಳಿತ ನಡೆಸಿದ ಪಕ್ಷ ತನ್ನ ಸಾಧನೆ, ದೂರದೃಷ್ಟಿಯ ಯೋಜನೆಗಳನ್ನು ಜನರ ಮುಂದಿಡುತ್ತದೆ. ಕಾಂಗ್ರೆಸ್ ಬಳಿ ಮಾಡಿದ ಸಾಧನೆ, ದೂರದೃಷ್ಟಿಯ ಯೋಜನೆಗಳಿಲ್ಲ. ಉದ್ಯೋಗ ಸೃಷ್ಟಿಯ ಯೋಜನೆಗಳಿಲ್ಲ. ತಾತ್ಕಾಲಿಕ ಆಸೆ ತೋರಿಸುವ ರಾಜಕಾರಣ ಅವರದು ಎಂದು ಟೀಕಿಸಿದರು. ಇದನ್ನೂ ಓದಿ: ಡಿಕೆಶಿ ಕೇಸ್ ವಾಪಸ್; ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್
ಕರ್ನಾಟಕದಲ್ಲಿ ಅವರು ಮಾಡಿದ್ದು ಕೂಡ ತಾತ್ಕಾಲಿಕ ಆಸೆ ತೋರಿಸುವ ರಾಜಕಾರಣ. ಅದರ ಬಳಿಕವೂ ಅವರು ಹೇಳಿದಂತೆ ನಡೆದುಕೊಂಡಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಜಾರಿ ಮಾಡಿದ ಹೊಸ ಯೋಜನೆಗಳೇನು? ಬಾಕಿ ಹಣ ಎಷ್ಟು ಪಾವತಿ ಮಾಡಿದ್ದೀರಿ? ಎಷ್ಟು ಉದ್ಯೋಗಗಳ ಸೃಷ್ಟಿ ಆಗಿದೆ? ಇವರ ಆರು ತಿಂಗಳ ಸಾಧನೆಯನ್ನು ತಿಳಿಸಲಿ. ಇಷ್ಟು ಉದ್ಯೋಗ ಸೃಷ್ಟಿ ಮಾಡಿದ್ದೇವೆ. ಇಂತಹ ಹೊಸ ಯೋಜನೆ ಕೈಗೆತ್ತಿಕೊಳ್ಳುತ್ತಿದ್ದೇವೆ. ಊರಿಗೊಂದು ಬಾರ್ ಮೂಲಕ ಆದಾಯ ಹೆಚ್ಚಿಸುವ ನಿಮ್ಮ ಕಲ್ಯಾಣದ ಕಲ್ಪನೆ ಊರಿಗೊಂದು ಬಾರ್? ಎಂಬುದೇ ಎಂದು ಕೇಳಿದರು. ಇದನ್ನೂ ಓದಿ: ಯಾರೇ ನಿಂತರೂ 2 ಲಕ್ಷ ಮತಗಳ ಅಂತರದಿಂದ ಗೆಲ್ತೀನಿ: ಪ್ರತಾಪ್ ಸಿಂಹ
ಎಲ್ಲ ನಿರುದ್ಯೋಗಿಗಳಿಗೆ 3,000 ಎಂದರು. ಬಳಿಕ ಈ ವರ್ಷ ಪದವಿ ಮುಗಿಸಿದ ನಿರುದ್ಯೋಗಿಗಳಿಗೆ ಭತ್ಯೆ ಎಂದರು. ಅವರಿಗೂ ಬಂದಿಲ್ಲ. ಎಲ್ಲ ಮಹಿಳೆಯರಿಗೂ 2,000 ಎಂದಿದ್ದರು. ಶೋಭಾ ಕರಂದ್ಲಾಜೆ ನಿಮಗೂ ಫ್ರೀ ಎಂದಿದ್ದರು. ಅದೂ ಸರಿಯಾಗಿ ಜಾರಿ ಆಗಿಲ್ಲ. 200 ಯೂನಿಟ್ ಎಲ್ಲರಿಗೂ ಫ್ರೀ ಎಂದಿದ್ದರು. ಅಲ್ಲೂ ಕೂಡ ಹೇಳಿದ್ದೊಂದು ಮಾಡಿದ್ದೊಂದು ಎಂದು ಆರೋಪಿಸಿದರು. ಇದನ್ನೂ ಓದಿ: 50 ವರ್ಷ ದಾಟಿದೆ, ಒಂಟಿತನ ನಿಮ್ಮನ್ನು ಕಾಡುತ್ತಿರಬಹುದು – ರಾಗಾ ಬಗ್ಗೆ ಓವೈಸಿ ವ್ಯಂಗ್ಯ
ಈ ಮಾದರಿ ಎಷ್ಟು ಕಾಲ ನಡೆದೀತು? ಕಣ್ಣ ಮುಂದೆ ವೆನಿಜುವೆಲಾ ಉದಾಹರಣೆ ಇದೆಯಲ್ಲವೇ? ಸ್ವಾತಂತ್ರ‍್ಯ ನಂತರದ 75 ವರ್ಷಗಳಲ್ಲಿ ಹೆಚ್ಚು ವರ್ಷಗಳ ಕಾಲ ಅಧಿಕಾರ ಅಥವಾ ಅಧಿಕಾರದ ಪ್ರಭಾವಲಯದಲ್ಲಿದ್ದ ಕಾಂಗ್ರೆಸ್ ಪಕ್ಷದ ಸಾಧನೆ ಏನು? ಎಂದು ಕೇಳಿದರು. ನಾವು ಐಐಎಂ, ಐಐಟಿಗಳನ್ನು ದ್ವಿಗುಣಗೊಳಿಸಿದ್ದೇವೆ. ವಿಮಾನನಿಲ್ದಾಣಗಳ ಸಂಖ್ಯೆ ಡಬಲ್ ಮಾಡಿದ್ದೇವೆ. ನೀವೇನು ಹೇಳುತ್ತೀರಿ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ಮಹಾತ್ಮ ಗಾಂಧಿ ‘ಮಹಾಪುರುಷ’, ಪ್ರಧಾನಿ ಮೋದಿ ‘ಯುಗಪುರುಷ’: ಉಪ ರಾಷ್ಟ್ರಪತಿ ಬಣ್ಣನೆ
ವಿದ್ಯುತ್ ದರ ಬಹುತೇಕ ಡಬಲ್ ಆಗಿದೆ. ಮದ್ಯದ ಬೆಲೆ 50 ರೂ. ಇಂದ 100-150ಕ್ಕೆ ಏರಿದೆ. ಜನರನ್ನು ಸ್ವಾವಲಂಬಿ ಮಾಡಿದ್ದೀರಾ? ಉದ್ಯೋಗ ಸೃಷ್ಟಿಗೆ ಇಂತಹ ಯೋಜನೆ ಮಾಡಿದ್ದೀರಾ ಎಂದು ಕೇಳಿದರು. ಇದನ್ನೂ ಓದಿ: ಸಿಎಂ ತವರಲ್ಲೇ ಈಗ ಕಮಿಷನ್ ಆರೋಪ
ನವದೆಹಲಿ: ಕಾಂಗ್ರೆಸ್ (Congress) ನಾಯಕ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಸುಪ್ರೀಂ ಕೋರ್ಟ್ (Supreme Court) ಗುರುವಾರ ರಿಲೀಫ್ ನೀಡಿದೆ. ಅವರನ್ನು ಬಂಧಿಸದಂತೆ ಐದು ವಾರಗಳ ತಡೆ ನೀಡಿದೆ. ತಮ್ಮ ವಿರುದ್ಧದ ವಾರೆಂಟ್ (Warrant) ಪ್ರಶ್ನಿಸಿ ವಾರಣಾಸಿ ನ್ಯಾಯಾಲಯಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಲು ನಾಲ್ಕು ವಾರಗಳ ಸಮಯ ನೀಡಿದೆ.
ತಮ್ಮ ವಿರುದ್ಧ ಹೊರಡಿಸಿದ್ದ ವಾರೆಂಟ್ ಪ್ರಶ್ನಿಸಿ ರಣದೀಪ್ ಸುರ್ಜೆವಾಲ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸುರ್ಜೇವಾಲ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಬೆಳಗ್ಗೆ ವಿಷಯ ಪ್ರಸ್ತಾಪಿಸಿ ಕೂಡಲೇ ವಿಚಾರಣೆ ನಡೆಸುವಂತೆ ಒತ್ತಾಯಿಸಿದರು. ಇದಾದ ಬಳಿಕ ಪ್ರಕರಣದ ವಿಚಾರಣೆ ನಡೆಯಿತು. ಇದನ್ನೂ ಓದಿ: ಎಂಪಿ, ಎಂಎಎಲ್‍ಎಗಳ ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೆ ಸುಪ್ರೀಂ ಸೂಚನೆ
ಪ್ರಕರಣವು 2000ದಲ್ಲಿ ನಡೆದಿದೆ. ಸಂವಾಸಿನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಸುಳ್ಳು ಆರೋಪದ ವಿರುದ್ಧ ಪ್ರತಿಭಟಿಸುತ್ತಿರುವಾಗ ವಾರಣಾಸಿಯ ವಿಭಾಗೀಯ ಆಯುಕ್ತರ ನ್ಯಾಯಾಲಯ ಮತ್ತು ಕಚೇರಿ ಆವರಣದಲ್ಲಿ ಹಿಂಸಾತ್ಮಕ ಘಟನೆ ನಡೆಯಿತು. ಗದ್ದಲವನ್ನು ಸೃಷ್ಟಿಸಿದ ಆರೋಪದ ಮೇಲೆ ಭಾರತೀಯ ಯೂತ್ ಕಾಂಗ್ರೆಸ್‌ನ ಅಂದಿನ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಸುರ್ಜೇವಾಲಾ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವಾದಿಸಿದರು. ಇದನ್ನೂ ಓದಿ: ಸೌಜನ್ಯ ರೇಪ್ & ಮರ್ಡರ್ ಕೇಸ್- ಸಂತೋಷ್ ರಾವ್‍ನೇ ಆರೋಪಿ ಅಂತಾ ಮೇಲ್ಮನವಿ ಸಲ್ಲಿಸಿದ ಸಿಬಿಐ
ಈ ಪ್ರಕರಣದಲ್ಲಿ ವಾರಣಾಸಿ ನ್ಯಾಯಾಲಯ ಈಗ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ ಎಂದು ಹೇಳಿದರು. ವಿಚಾರಣೆ ಆಲಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠವು ಜಾಮೀನು ರಹಿತ ವಾರೆಂಟ್‌ಗೆ ಐದು ವಾರಗಳ ತಡೆ ನೀಡಿತು. ಮತ್ತು ವಾರೆಂಟ್ ರದ್ದುಪಡಿಸಲು ಐದು ವಾರಗಳಲ್ಲಿ ವಾರಣಾಸಿಯ ವಿಶೇಷ ಜನಪ್ರತಿನಿಧಿಗಳ (ಸಂಸದ/ಶಾಸಕ) ನ್ಯಾಯಾಲಯವನ್ನು ಸಂಪರ್ಕಿಸುವಂತೆ ಸುರ್ಜೇವಾಲಾ ಅವರಿಗೆ ಸೂಚಿಸಿತು. ಇದನ್ನೂ ಓದಿ: ಡಿಕೆಶಿಗೆ ಸಿಬಿಐ ಸಂಕಷ್ಟ – ಶುಕ್ರವಾರ ಸುಪ್ರೀಂನಲ್ಲಿ ನಿರ್ಣಾಯಕ ವಿಚಾರಣೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ (Randeep Singh Surjewala) ಅವರು ಇದ್ದ ಸಭೆ ಅಧಿಕೃತ ಅಲ್ಲ ಎಂದು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ನಡೆದಿರುವುದು ಬಿಬಿಎಂಪಿ (Meeting With BBMP Officers) ಅಧಿಕಾರಿಗಳ ಜೊತೆಗಿನ ಸಭೆ ಅಲ್ಲ. ಸುರ್ಜೇವಾಲಾ ಅಧಿಕೃತ ಸಭೆ ನಡೆಸಿಲ್ಲ. ಶಾಸಕರ ಜೊತೆ ಚರ್ಚೆ ನಡೆಸಿದ್ದಾರೆ ಅಷ್ಟೇ ಎಂದು ಹೇಳಿದರು.
ಡಿಸಿಎಂ ಪಾಲ್ಗೊಂಡಿದ್ದ ಸಭೆ ಅದು. ಚುನಾವಣೆ ಬಗ್ಗೆ ಚರ್ಚೆ ಮಾಡಲು ಸಭೆ ಕರೆಯಲಾಗಿತ್ತು. ಕುಮಾರಸ್ವಾಮಿ (HD Kumaraswamy) ಸುಮ್ನೆ ಆರೋಪ ಮಾಡುತ್ತಾರೆ. ಸುರ್ಜೇವಾಲಾ ಅವರು ಅಧಿಕಾರಿಗಳ ಸಭೆ ಕರೆಯೋಕ್ಕಾಗುತ್ತಾ..?, ಬಿಜೆಪಿಯವರು ಬೇಕಾದರೆ ರಾಜ್ಯಪಾಲರಿಗೆ ದೂರು ಕೊಡಲಿ ಎಂದು ತಿಳಿಸಿದರು. ಇದನ್ನೂ ಓದಿ: BBMP ಅಧಿಕಾರಿಗಳ ಜೊತೆ ಸುರ್ಜೇವಾಲ ಸಭೆ ಮಾಡಿ ಕಾನೂನು ಉಲ್ಲಂಘನೆ ಮಾಡಿದ್ದಾರೆ: ಅಶ್ವಥ್ ನಾರಾಯಣ್
ಇದೇ ವೇಳೆ ಪ್ರತಾಪ್ ಸಿಂಹ (Pratap Simha) ವಿರುದ್ಧ ಕಿಡಿಕಾರಿದ ಸಿಎಂ, ಯಾರು ಹೊಂದಾಣಿಕೆ ರಾಜಕೀಯ ಮಾಡ್ತಿರೋರು ಅಂತ ಪ್ರತಾಪ್ ಸಿಂಹ ಹೇಳಲಿ. ಯಾರು ಅವರು ಹೊಂದಾಣಿಕೆ ರಾಜಕೀಯ ಮಾಡ್ತಿರೋರು..? ತನಿಖೆ ಮಾಡಿಸಿ ಅಂತ ಈ ಪ್ರತಾಪ್ ಸಿಂಹ ಹೇಳಿದ್ನಾ?, ಪ್ರತಾಪ್ ಸಿಂಹ ಎಳಸು ಎಂದರು.
ಬಿಬಿಎಂಪಿ ಸಭೆ: ಮಂಗಳವಾರ ನಗರದ ಖಾಸಗಿ ಹೋಟೆಲ್‍ನಲ್ಲಿ ಬಿಬಿಎಂಪಿ ಅಧಿಕಾರಿಗಳ ಜೊತೆ ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಕೆಜೆ ಜಾರ್ಜ್, ಜಮೀರ್ ಅಹ್ಮದ್ ಖಾನ್ ಸಭೆ ನಡೆಸಿದ್ರು. ಈ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಪಾಲ್ಗೊಂಡಿದ್ದರು. ಇದರ ಫೋಟೋವನ್ನು ಜಮೀರ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಅಲ್ಲದೆ ಸಭೆಯಲ್ಲಿ ಸುರ್ಜೇವಾಲಾ ಇರುವುದನ್ನು ಕೂಡ ಉಲ್ಲೇಖಿಸಿದ್ದರು. ಈ ಫೋಟೋ ಭಾರೀ ಚರ್ಚೆಗೆ ಗ್ರಾಸವಾಗಿತ್ತು.
ಬಿಜೆಪಿ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಕೈ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇತ್ತ ಆಗಬಹುದು ಎಂಬ ಕಾರಣಕ್ಕೆ ಗೌಪ್ಯತೆ ಕಾಪಾಡಿಕೊಂಡಿದ್ದ ಸಭೆಯ ಫೋಟೋ ಲೀಕ್ ಮಾಡಿದ್ದ ಜಮೀರ್ ವಿರುದ್ಧ ಸುರ್ಜೇವಾಲಾ ಆಕ್ರೋಶ ಹೊರಹಕಿದ್ದರು. ಕೂಡಲೇ ಜಮೀರ್ ಟ್ವಿಟ್ಟರ್‍ನಿಂದ ಫೋಟೋ ಡಿಲೀಟ್ ಮಾಡಿದ್ದರು. ಇತ್ತ ಡಿಕೆಶಿ ಮೀಟಿಂಗ್ ಇರಲಿಲ್ಲ ಎಂದಿದ್ದು, ಮತ್ತಷ್ಟು ಟೀಕೆಗೆ ಕಾಂಗ್ರೆಸ್ ಗುರಿಯಾಗಿದೆ.
ಬೆಂಗಳೂರು: ಸಚಿವ ಜಮೀರ್ ಅಹಮ್ಮದ್ (Zameer ahmed Khan) ಗೆ ಕರೆ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ (Randeep Singh Surjewala) ತರಾಟೆಗೆ ತೆಗೆದುಕೊಂಡಿದ್ದಾರೆ.
ಹೌದು. ಇಂದು ನಗರದ ಖಾಸಗಿ ಹೋಟೆಲ್‍ನಲ್ಲಿ ಬಿಬಿಎಂಪಿ (BBMP) ಅಧಿಕಾರಿಗಳ ಜೊತೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ಸಚಿವರಾದ ಕೆಜೆ ಜಾರ್ಜ್ (KJ George), ಜಮೀರ್ ಅಹ್ಮದ್ ಖಾನ್ ಸಭೆ ನಡೆಸಿದ್ರು. ಈ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಪಾಲ್ಗೊಂಡಿದ್ದರು.
ಇದರ ಫೋಟೋವನ್ನು ಜಮೀರ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಅಲ್ಲದೆ ಸಭೆಯಲ್ಲಿ ಸುರ್ಜೇವಾಲ ಇರುವುದನ್ನು ಕೂಡ ಉಲ್ಲೇಖಿಸಿದ್ದರು. ಈ ಫೋಟೋ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೆ ಬಿಜೆಪಿ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.