Tag: ರಣದೀಪ್ ಸುರ್ಜೇವಾಲಾ

  • 22 ಸಚಿವರ ಮೀಟಿಂಗ್ ಬೆನ್ನಲ್ಲೇ ಸಿಎಂ-ಡಿಸಿಎಂ ಜೊತೆ ಸುರ್ಜೇವಾಲಾ ಸಭೆ – ಕೆರಳಿದ ಕುತೂಹಲ

    22 ಸಚಿವರ ಮೀಟಿಂಗ್ ಬೆನ್ನಲ್ಲೇ ಸಿಎಂ-ಡಿಸಿಎಂ ಜೊತೆ ಸುರ್ಜೇವಾಲಾ ಸಭೆ – ಕೆರಳಿದ ಕುತೂಹಲ

    ಬೆಂಗಳೂರು: ಶಾಸಕರ ಸರಣಿ ದೂರಿನ ಬೆನ್ನಲ್ಲೇ ರಾಜ್ಯ ಉಸ್ತುವಾರಿ ಸುರ್ಜೇವಾಲಾ (Randeep Surjewala) ಇಂದು ಸಚಿವ ಸಂಪುಟ ಸಚಿವರ ಜೊತೆ ಕೊನೇ ದಿನದ ಸಭೆ ನಡೆಸಿದ್ರು. ಇದಾದ ಬಳಿಕ ಸಿಎಂ – ಡಿಸಿಎಂ ಜೊತೆಗೂ ಸಭೆ ನಡೆಸಿ ಹಲವು ಮಾಹಿತಿಗಳನ್ನ ಸುರ್ಜೇವಾಲಾ ಪಡೆದುಕೊಂಡಿದ್ದಾರೆ.

    ಸಿಎಂ-ಡಿಸಿಎಂ ಜೊತೆ ಸಭೆ ನಡೆಸಿ ಶಾಸಕರು ಹಾಗೂ ಸಚಿವರ ಸಭೆಯ ಸಂಪೂರ್ಣ ಮಾಹಿತಿ ನೀಡಿದರು. ಜೊತೆಗೆ ಶಾಸಕರ ದೂರಿನ ಲಿಖಿತ ಪ್ರತಿ ಹಾಗೂ ಸಚಿವರ ಸಮರ್ಥನೆಯ ಲಿಖಿತ ಅಂಶಗಳ ದಾಖಲೆ ನೀಡಿದರು. ಸಿಎಂ ಡಿಸಿಎಂ ಇಬ್ಬರಿಗೂ ದಾಖಲೆಗಳನ್ನು ‌ನೀಡಿ ಶಾಸಕರು ಹಾಗೂ ಸಚಿವರ ಸಮಸ್ಯೆ ಏನು..? ಏನು ಮಾಡಬೇಕಿದೆ ಎಂಬ ಚರ್ಚೆ ನಡೆಸಿದರು. ಸಿಎಂ ಡಿಸಿಎಂ ಇಬ್ಬರು ಸಂಪೂರ್ಣವಾಗಿ ದಾಖಲೆಗಳನ್ನು ನೋಡಿದ ನಂತರ ಇನ್ನೊಂದು ಸುತ್ತಿನ ಸಭೆ ನಡೆಸಲು ತೀರ್ಮಾನಿಸಿದರು.

    ಇನ್ನೂ ಸುರ್ಜೇವಾಲಾ ಬುಲಾವ್ ನೀಡಿದ್ದ 23 ಸಚಿವರಲ್ಲಿ ಸಚಿವ ಮಹದೇವಪ್ಪ ಹೊರತುಪಡಿಸಿ ಎಲ್ಲರೂ ಹಾಜರಾಗಿದ್ದಾರೆ. ಇಲಾಖೆಗೆ ಸಂಬಂಧಿತ ವಿಚಾರಗಳ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದೇವೆ ಅಂತ ಸಚಿವರು ಹೇಳಿಕೊಂಡಿದ್ದಾರೆ. ಇತ್ತ, ಸಚಿವ ರಾಜಣ್ಣ, ಸುರ್ಜೇವಾಲ ಹಾಗೂ ಸಿಎಂ ಮಾಹಿತಿ ನೀಡಿ ನಿನ್ನೆ ರಾತ್ರಿ ಯುರೋಪ್ ಪ್ರವಾಸ ಕೈಗೊಂಡಿದ್ದಾರೆ.

    ಇನ್ನೊಂದೆಡೆ, ರಾಜೇಂದ್ರ ಪುತ್ರ ರಾಜಣ್ಣ, ಅನುದಾನ ಸುರ್ಜೇವಾಲಾ ಕೊಡ್ತಾರಾ? ಸಿಎಂ ಸಿಎಂ, ಡಿಸಿಎಂ ಕೊಡೋದು ಅಂತ ಟಕ್ಕರ್ ಕೊಟ್ಟಿದ್ದಾರೆ. ಇತ್ತ ಕಲಬುರ್ಗಿಯಲ್ಲಿ ಶಾಸಕ ಬಿ.ಆರ್ ಪಾಟೀಲ್ ಸಚಿವ ಜಮೀರ್ ಹೆಸರು ಹೇಳುತ್ತಿದ್ದಂತೆ ಸಿಡಿಮಿಡಿಗೊಂಡಿದ್ದಾರೆ. ಜಮೀರ್ ಯಾವ ದೊಡ್ಡ ಮನುಷ್ಯ ಎಂದಿದ್ದಾರೆ. ಈ ಬೆಳವಣಿಗೆಗಳ ಮಧ್ಯೆಯೇ, ಕುರ್ಚಿ ಕದನದ ಬಗ್ಗೆ ಮತ್ತೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು ಹೈಕಮಾಂಡ್ ಏನೂ ನಿರ್ಧಾರ ಮಾಡುತ್ತೋ ನಾನು ಹಾಗೂ ಡಿಕೆಶಿ ಇಬ್ಬರೂ ಪಾಲಿಸುತ್ತೇವೆ ಎಂದಿದ್ದಾರೆ.

    ಇತ್ತ, ಡಿಸಿಎಂ ಡಿಕೆಶಿ ಪರ ಸ್ವಾಮೀಜಿಗಳು ಬ್ಯಾಟಿಂಗ್ ಮುಂದುವರೆಸಿದ್ದಾರೆ. ರಂಭಾಪುರಿ ಶ್ರೀಗಳ ಹೇಳಿಕೆ ಸಮರ್ಥಿಸಿಕೊಂಡ ಶ್ರೀಶೈಲ ಜಗದ್ಗುರುಗಳು, ಹೈಕಮಾಂಡ್ ಮಧ್ಯಸ್ಥಿಕೆಯಲ್ಲಿ ಸರ್ಕಾರ ರಚನೆ ವೇಳೆ ಸಿಎಂ ಸ್ಥಾನ ಕುರಿತು ಒಡಂಬಡಿಕೆ ಆಗಿದ್ರೆ ನೆರವೇರಿಸಲಿ ಎಂದಿದ್ದಾರೆ.

    4-5 ದಿನಗಳಲ್ಲಿ ನಿಗಮ ಮಂಡಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣ
    ನಿಗಮ ಮಂಡಳಿಗೆ 4-5 ದಿನದ ಒಳಗಾಗಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ. 600ಕ್ಕೂ ಹೆಚ್ಚು ಪ್ರಮುಖ ಕಾರ್ಯಕರ್ತರಿಗೆ ನಿಗಮ ಮಂಡಳಿ ನಿರ್ದೆಶಕರಾಗಿ ನೇಮಕಕ್ಕೆ‌ ನಿರ್ಧಾರ ಮಾಡಲಾಗಿದ್ದು, ನೇರವಾಗಿ ಕಾರ್ಯಕರ್ತರಿಗೆ ನೇಮಕಾತಿ ಆದೇಶ ತಲುಪಿಸಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ. 32 ನಿಗಮಗಳಿಗೆ ಅಧ್ಯಕ್ಷರ ಆಯ್ಕೆಗೆ ಬಹಿತೇಕ ಸಮ್ಮತಿ ಅಂತಿಮ ಪಟ್ಟಿಗೆ ಮಲ್ಲಿಕಾರ್ಜುನ ಖರ್ಗೆ ಒಪ್ಪಿಗೆ ಪಡೆದು ನೇಮಕಾತಿ ಆದೇಶ ಹೊರಡಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

  • ಪಕ್ಷದಲ್ಲಿ ಯಾರೇ ಶಿಸ್ತು ಉಲ್ಲಂಘಿಸಿದ್ರು ನೋಟಿಸ್ ಕೊಡ್ತೀನಿ – ಡಿಕೆಶಿ

    ಪಕ್ಷದಲ್ಲಿ ಯಾರೇ ಶಿಸ್ತು ಉಲ್ಲಂಘಿಸಿದ್ರು ನೋಟಿಸ್ ಕೊಡ್ತೀನಿ – ಡಿಕೆಶಿ

    ಬೆಂಗಳೂರು: ಪಕ್ಷದ ಶಿಸ್ತು ಯಾರೂ ಉಲ್ಲಂಘನೆ ಮಾಡಬಾರದು. ಯಾರೇ ಉಲ್ಲಂಘಿಸಿದರೂ ನೋಟಿಸ್ ಕೊಡ್ತೀನಿ ಎಂದು (DK Shivakumar)  ಶಾಸಕರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

    ರಾಮನಗರ ಶಾಸಕ ಇಕ್ಬಾಲ್ ಹುಸೇನ್‌ಗೆ (Iqbal Hussain) ನೋಟಿಸ್ ಜಾರಿ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇಕ್ಬಾಲ್ ಹುಸೇನ್‌ಗೂ ನೋಟಿಸ್ ಕೊಡ್ತೀನಿ, ಬೇರೆ ಅವರಿಗೂ ನೋಟಿಸ್ ಕೊಡಬೇಕಾಗುತ್ತದೆ. ಪಕ್ಷದ ಶಿಸ್ತು ಯಾರೂ ಉಲ್ಲಂಘನೆ ಮಾಡಬಾರದು. ಪಕ್ಷದಲ್ಲಿ ಶಿಸ್ತು ಮುಖ್ಯ. ನಾನು ಯಾರಿಗೂ ನನ್ನ ಹೆಸರು ಹೇಳಿ, ಸಿಎಂ ಮಾಡಿ ಅಂತ ಹೇಳಿಲ್ಲ. ಸಿದ್ದರಾಮಯ್ಯ (CM Siddaramaiah) ಮುಖ್ಯಮಂತ್ರಿ ಇದ್ದಾಗ ಬೇರೆ ಯಾರೂ ಅಪಸ್ವರ ಎತ್ತಬಾರದು ಎಂದು ಎಚ್ಚರಿಕೆ ನೀಡಿದರು.ಇದನ್ನೂ ಓದಿ: ಬಿಗಿಭದ್ರತೆಯೊಂದಿಗೆ ಅಮರನಾಥ ಯಾತ್ರೆಗೆ ಚಾಲನೆ

    ಪಕ್ಷಕ್ಕೆ ಎಲ್ಲರೂ ಕಷ್ಟಪಟ್ಟಿದ್ದಾರೆ. ನನ್ನಂತ ನೂರಾರು ಕಾರ್ಯಕರ್ತರು ಕಷ್ಟಪಟ್ಟಿದ್ದಾರೆ. ನಾನು ಒಬ್ಬನೇ ಕಷ್ಟಪಟ್ಟಿದ್ದೀನಾ? ಸಾವಿರಾರು ಜನ, ಲಕ್ಷಾಂತರ ಜನ ಕಷ್ಟಪಟ್ಟಿದ್ದಾರೆ. ಮೊದಲು ನಾವು ಅವರ ಬಗ್ಗೆ ಯೋಚನೆ ಮಾಡಬೇಕು ಎಂದು ಶಿಸ್ತು ಉಲ್ಲಂಘನೆ ಮಾಡುತ್ತಿರುವ ಶಾಸಕರಿಗೆ ಎಚ್ಚರಿಕೆ ಕೊಟ್ಟು ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ.

    ಇದೇ ವೇಳೆ ಶಾಸಕರಿಗೆ ಅಸಮಾಧಾನ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮುಂದಿನ ಚುನಾವಣೆಗೆ ಸಿದ್ಧತೆ ಮಾಡುವ ದೃಷ್ಟಿಯಿಂದ ಸುರ್ಜೇವಾಲಾ (Randeep Surjewala) ಶಾಸಕರ ಸಭೆ ಮಾಡಿದ್ದಾರೆ. ಶಾಸಕರಿಗೆ ಎಲ್ಲೂ ಅಸಮಾಧಾನ ಇರಲಿಲ್ಲ. ಯಾರಿಗೂ ಅಸಮಾಧಾನ ಇಲ್ಲ. ಶಾಸಕರಿಗೆ ಪಕ್ಷ ಮತ್ತು ಸಂಘಟನೆ ವಿಚಾರದಲ್ಲಿ ಜವಾಬ್ದಾರಿ ನಿಗದಿ ಮಾಡುತ್ತಿದ್ದಾರೆ. ಶಾಸಕರು ಏನು ಮಾಡಬೇಕು? ನಾವೇನು ಮಾಡಬೇಕು? ಚುನಾವಣೆಗೆ ಈಗಿನಿಂದಲೇ ಹೇಗೆ ಸಿದ್ಧತೆ ಮಾಡಬೇಕು ಎಂದು ಸೂಚನೆ ಕೊಟ್ಟಿದ್ದಾರೆ ಎಂದು ತಿಳಿಸಿದರು.ಇದನ್ನೂ ಓದಿ: ಕಮಲ್ ಹಾಸನ್ ವಿರುದ್ಧ ಕನಕಪುರ ಕೋರ್ಟ್‌ನಲ್ಲಿ ಖಾಸಗಿ ದೂರು – ಜು.5ಕ್ಕೆ ವಿಚಾರಣೆ

  • ರೈತರ ಪ್ರತಿಭಟನೆ ಬಾಂಗ್ಲಾದಂತ ಪರಿಸ್ಥಿತಿ ನಿರ್ಮಾಣ ಮಾಡುತ್ತಿತ್ತು – ಕಂಗನಾ ಹೇಳಿಕೆಗೆ ಬಿಜೆಪಿ ಛೀಮಾರಿ

    ರೈತರ ಪ್ರತಿಭಟನೆ ಬಾಂಗ್ಲಾದಂತ ಪರಿಸ್ಥಿತಿ ನಿರ್ಮಾಣ ಮಾಡುತ್ತಿತ್ತು – ಕಂಗನಾ ಹೇಳಿಕೆಗೆ ಬಿಜೆಪಿ ಛೀಮಾರಿ

    – ಕಂಗನಾ ಅಭಿಪ್ರಾಯ ವೈಯಕ್ತಿಕ, ಬಿಜೆಪಿಯದ್ದಲ್ಲ ಎಂದು ಸ್ಪಷ್ಟನೆ
    – ಇಂತಹ ಹೇಳಿಕೆಯಿಂದ ದೂರವಿರುವಂತೆ ಹೈಕಮಾಂಡ್ ಸೂಚನೆ

    ನವದೆಹಲಿ: ರೈತರ ಪ್ರತಿಭಟನೆ (Farmers Protest) ಕುರಿತ ನಟಿ-ಸಂಸದೆ ಕಂಗನಾ ರಣಾವತ್ (Kangana Ranaut) ಅವರಿಗೆ ಬಿಜೆಪಿ ಛೀಮಾರಿ ಹಾಕಿದೆ. ಅಲ್ಲದೇ ಕಂಗನಾ ಅವರ ಹೇಳಿಕೆ, ಅವರ ವೈಯಕ್ತಿಕ ಅಭಿಪ್ರಾಯವೇ ಹೊರತು ಪಕ್ಷದ ಅಭಿಪ್ರಾಯವಲ್ಲ ಎಂದು ಬಿಜೆಪಿ (BJP) ಸ್ಪಷ್ಟೀಕರಣ ನೀಡಿದೆ.

    ಹೌದು. ಮಂಡಿ (Mandi) ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್ ರೈತರ ಚಳುವಳಿ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ರೈತ ಹೋರಾಟ ನಿಗ್ರಹಿಸುವ ಸಂಬಂಧ ಕಠಿಣ ನಿಲುವುಗಳನ್ನು ಕೈಗೊಂಡಿತು. ನಾಯಕರು ಬಲವಾಗಿರದಿದ್ದರೆ ಅಥವಾ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನಮ್ಮ ದೇಶದಲ್ಲೂ ಬಾಂಗ್ಲಾದೇಶದಂತಹ (Bangladesh) ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.ಇದನ್ನೂ ಓದಿ: ರಜನಿಯಿಂದಾಗಿ ಹೊಸಬರಿಗೆ ಅವಕಾಶ ಸಿಗ್ತಿಲ್ಲ: ದೊರೈ ಸಿಡಿಸಿದ ಬಾಂಬ್

    ಇದಕ್ಕೆ ಸ್ಪಷ್ಟೀಕರಣ ನೀಡಿರುವ ಬಿಜೆಪಿ, ಅದು ಪಕ್ಷದ ಅಭಿಪ್ರಾಯವಲ್ಲ, ಕಂಗನಾ ಅವರ ವೈಯಕ್ತಿಕ ಹೇಳಿಕೆಯಾಗಿದೆ. ಪಕ್ಷದ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಅಧಿಕಾರ ಅವರಿಗಿಲ್ಲ ಹಾಗೂ ನಾವು ಯಾವುದೇ ರೀತಿಯ ಅನುಮತಿಯೂ ನೀಡಿಲ್ಲ ಎಂದಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಈ ರೀತಿಯ ಹೇಳಿಕೆಗಳನ್ನು ನೀಡದಂತೆ ಕಂಗನಾ ಅವರಿಗೆ ಎಚ್ಚರಿಕೆ ನೀಡಿದೆ.

    ಇದಕ್ಕೂ ಮುನ್ನ ಕಂಗನಾಗೆ ಪ್ರಚೋದನಕಾರಿ ಹೇಳಿಕೆ ನೀಡದಂತೆ ಪಂಜಾಬ್, ಹರಿಯಾಣದ ಬಿಜೆಪಿ ನಾಯಕರು ಸಲಹೆ ನೀಡಿದ್ದರು. ರೈತರ ಬಗ್ಗೆ ಮಾತನಾಡುವುದು ಕಂಗನಾ ಅವರ ವ್ಯಾಪ್ತಿಗೆ ಬರಲ್ಲ. ಬಿಜೆಪಿ ಹಾಗೂ ಮೋದಿ ಸರ್ಕಾರ ಯಾವತ್ತಿಗೂ ರೈತರ ಪರವಾಗಿದೆ ಎಂದು ಪಂಜಾಬ್ ಬಿಜೆಪಿ ನಾಯಕ ಹರ್ಜಿತ್ ಗ್ರೆವಾಲ್ (Harjeet Grewal) ಹೇಳಿದ್ದರು.ಇದನ್ನೂ ಓದಿ: ದರ್ಶನ್‍ಗೆ ಜೈಲಲ್ಲಿ ರಾಜಾತಿಥ್ಯ – ನಾವು ದರ್ಶನ್ ಪರವೂ ಇಲ್ಲ, ವಿರುದ್ಧವೂ ಇಲ್ಲ‌ ಎಂದ ಸಿಎಂ

    ಸಹಜವಾಗಿಯೇ ಕಂಗನಾ ಹೇಳಿಕೆಗೆ ವಿಪಕ್ಷ ನಾಯಕರು ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ರಣದೀಪ್ ಸುರ್ಜೇವಾಲಾ (Randeep Surjewala) ಮಾತನಾಡಿ, ಇವೆಲ್ಲಾ ಕಂಗನಾ ಅವರ ವೈಯಕ್ತಿಕ ಮಾತುಗಳಾ? ಅಥವಾ ಬೇರೆ ಯಾರಾದರೂ ಮಾತನಾಡುವಂತೆ ಹೇಳಿದ್ದಾರಾ? ಹಾಗಾದರೆ ಈ ವಿಷಯದಲ್ಲಿ ಬಿಜೆಪಿ ಯಾಕೆ ಮೌನವಾಗಿದೆ ಎಂದು ಎಕ್ಸ್ನಲ್ಲಿ ಪ್ರತಿಕ್ರಿಯಿಸಿದ್ದಾರೆ.

    ಕಂಗನಾರ ವಿವಾದಾತ್ಮಕ ಹೇಳಿಕೆಗಳು ಇದೇ ಮೊದಲಲ್ಲ. ಈ ಹಿಂದೆ ಕೂಡ ಕೇಂದ್ರ ಸರ್ಕಾರ ಹಿಂಪಡೆದ ಮೂರು ಕೃಷಿ ಕಾಯ್ದೆಗಳ ವಿಚಾರವಾಗಿ ಹಾಗೂ ರೈತರ ಹೋರಾಟದ ವಿಚಾರವಾಗಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. 2020ರಲ್ಲಿ ದೆಹಲಿಯ ಶಹೀನ್‌ಭಾಗ್‌ನಲ್ಲಿ ಸಿಎಎ ವಿರೋಧಿ ಹೋರಾಟದ ವೇಳೆ ಪ್ರತಿಭಟನೆ ಮಾಡುತ್ತಿದ್ದ ಪಂಜಾಬ್‌ನ ರೈತ ಮಹಿಳೆಯೊಬ್ಬರನ್ನು ಬಿಲ್ಕಿಸ್ ಬಾನೋ ಎಂದು ತಪ್ಪಾಗಿ ಬಿಂಬಿಸಿದ್ದ ಕಂಗನಾ ರಣಾವತ್ ವಿವಾದಕ್ಕೆ ಕಾರಣವಾಗಿದ್ದರು. ಗುಜರಾತ್ ಗಲಭೆ ವೇಳೆ ಸಾಮೂಹಿಕ ಅತ್ಯಾಚಾರಕ್ಕೆ ತುತ್ತಾಗಿದ್ದ ಮಹಿಳೆ ಎಂದು ಕಂಗನಾ ಬಿಂಬಿಸಿದ್ದು ವಿವಾದವಾಗಿತ್ತು. ಅಷ್ಟೇ ಅಲ್ಲ, ಮಹಿಳೆಯರು ಕೇವಲ 100 ರೂ. ಕೂಲಿಗೆ ಧರಣಿ ಮಾಡಲು ಬರುತ್ತಾರೆ ಎಂದೂ ನಾಲಿಗೆ ಹರಿಬಿಟ್ಟಿದ್ದರು.ಇದನ್ನೂ ಓದಿ: Badlapur Case | ಮಹಿಳೆಯರ ಸುರಕ್ಷತೆಗಾಗಿ ಶಾಲೆ, ಹಾಸ್ಟೆಲ್‌ಗಳಿಗೆ ಪ್ಯಾನಿಕ್ ಬಟನ್ ಅಳವಡಿಕೆ

  • ನೇಹಾ ಕರ್ನಾಟಕದ ಪುತ್ರಿ.. ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು: ಕಾಂಗ್ರೆಸ್‌ನ ರಣದೀಪ್‌ ಸುರ್ಜೇವಾಲಾ

    ನೇಹಾ ಕರ್ನಾಟಕದ ಪುತ್ರಿ.. ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು: ಕಾಂಗ್ರೆಸ್‌ನ ರಣದೀಪ್‌ ಸುರ್ಜೇವಾಲಾ

    – ನಮ್ಮ ಮಗಳು ಸಾವನ್ನಪ್ಪಿರುವಾಗ ರಾಜಕೀಯ ಮಾಡಬೇಡಿ ಎಂದು ಬಿಜೆಪಿಗೆ ತಿರುಗೇಟು
    – ನೇಹಾ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಕಾಂಗ್ರೆಸ್‌ ನಾಯಕರು

    ಹುಬ್ಬಳ್ಳಿ: ನೇಹಾ (Neha Hiremath) ಹತ್ಯೆ ನಡೆದು ಒಂದು ವಾರವಾಗಿದ್ದು, ಕೊನೆಗೂ ಕಾಂಗ್ರೆಸ್ ಹಿರಿಯ ವರಿಷ್ಠರು ಕೊನೆಗೂ ನೇಹಾ ಮನೆಗೆ ಭೇಟಿ ನೀಡಿ ನೇಹಾ ತಂದೆ-ತಾಯಿಗೆ ಸಾಂತ್ವನ ಹೇಳಿದ್ದಾರೆ. ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ (Randeep Surejewala), ಸಚಿವರಾದ ಹೆಚ್.ಕೆ.ಪಾಟೀಲ್, ಸಂತೋಷ್ ಲಾಡ್, ಶಾಸಕರಾದ ಪ್ರಸಾದ್ ಅಬ್ಬಯ್ಯ, ಎನ್.ಹೆಚ್.ಕೋನರೆಡ್ಡಿ ಅವರು ನೇಹಾ ಮನೆಗೆ ಭೇಟಿ ನೀಡಿದರು.

    ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸುರ್ಜೇವಾಲಾ, ಈ ಮನೆ ಹೊರತುಪಡಿಸಿ ನೀವು ರಾಜಕಾರಣ ಮಾಡಿ. ಸಾವಿನ ಮನೆಯಲ್ಲಿ ಚುನಾವಣಾ ರಾಜಕಾರಣ ಸರಿಯಲ್ಲ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ಹರಿಹಾಯ್ದರು. ಇದನ್ನೂ ಓದಿ: ನೇಹಾ ಕೊಲೆ ಆರೋಪಿ ಫಯಾಜ್‍ನನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದ ಸಿಐಡಿ

    ಇವತ್ತು ನಮ್ಮ ಮಗಳು ನೇಹಾ ನಿವಾಸಕ್ಕೆ ಬಂದಿದ್ದೇವೆ. ನೇಹಾ ಕೇವಲ ನಿರಂಜನ್ ಹಿರೇಮಠ ಪುತ್ರಿ ಅಲ್ಲ. ಇಡೀ ಕರ್ನಾಟಕದ ಪುತ್ರಿ. ನಿರಂಜನ್ ನಮ್ಮ ಕುಟುಂಬದ ಸದಸ್ಯರು. ಈ ಘಟನೆ ಬಗ್ಗೆ ಅತ್ಯಂತ ದುಃಖವಿದೆ. ನಾವೆಲ್ಲ ಅವರ ಜೊತೆ ಇರ್ತೇವೆ. ಸಂಪೂರ್ಣ ನ್ಯಾಯ ಕೊಡಿಸುವುದು ಸರ್ಕಾರದ ಕರ್ತವ್ಯ ಎಂದರು.

    ಈಗಾಗಲೇ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗಿದೆ. ತ್ವರಿತಗತಿಯಲ್ಲಿ ನ್ಯಾಯದಾನ ಆಗಬೇಕು. 90 ದಿನಗಳಲ್ಲಿ ನ್ಯಾಯದಾನ ಸಿಗಲಿದೆ ಎನ್ನುವ ವಿಶ್ವಾಸವಿದೆ. ಆರೋಪಿಗೆ ಗಲ್ಲು ಶಿಕ್ಷೆ ಆಗಬೇಕು. ಆಕೆಯ ಸಾವಿಗೆ ನ್ಯಾಯ ಸಿಗಬೇಕು. ವಿಶೇಷ ಕೋರ್ಟ್ ಖಂಡಿತಾ ತ್ವರಿತ ನ್ಯಾಯದಾನ ನೀಡಲಿದೆ. ಗಲ್ಲಿಗಿಂತ ಕಡಿಮೆ ಶಿಕ್ಷೆ ಸಿಗಲ್ಲ. ನಮ್ಮ ಮಗಳು ಸಾವನ್ನಪ್ಪಿರುವಾಗ ರಾಜಕಾರಣ ಮಾಡಬೇಡಿ. ಚುನಾವಣೆ ವೇಳೆ ರಾಜಕೀಕರಣ ಬೇಡ. ಈ ಮನೆ ಹೊರತುಪಡಿಸಿ ರಾಜಕೀಯ ಮಾಡಿ ಎಂದು ತಿಳಿಸಿದರು. ಇದನ್ನೂ ಓದಿ: ನೇಹಾ ಹಿರೇಮಠ ತಂದೆಯ ಬಳಿ ಕ್ಷಮೆಯಾಚಿಸಿದ ಸಿಎಂ!

    ಬಿಜೆಪಿಯಿಂದ ಸಿಬಿಐ ತನಿಖೆಗೆ ಆಗ್ರಹ ವಿಚಾರವಾಗಿ ಮಾತನಾಡಿ, ಸಿಐಡಿ ಮೇಲೆ ನಮಗೆ ನಂಬಿಕೆ ಇದೆ. ರಾಜ್ಯ ಪೊಲೀಸರ ಮೇಲೆ ವಿಶ್ವಾಸವಿದೆ. 90 ದಿನಗಳಲ್ಲಿ ಖಂಡಿತಾ ನ್ಯಾಯ ಸಿಗಲಿದೆ ಎನ್ನುವ ಖಾತ್ರಿ ಇದೆ ಎಂದರು.

  • ಸುರ್ಜೇವಾಲಾಗೆ ಶಾಕ್‌ – 2 ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ

    ಸುರ್ಜೇವಾಲಾಗೆ ಶಾಕ್‌ – 2 ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ

    ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ (Randeep Surjewala) ಅವರನ್ನು 2 ದಿನಗಳ ಕಾಲ ಚುನಾವಣಾ ಪ್ರಚಾರಕ್ಕೆ (Election Campaign) ನಿರ್ಬಂಧಿಸಲಾಗಿದೆ.

    ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ (Hema Malini) ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಗಾಗಿ ಭಾರತೀಯ ಚುನಾವಣಾ ಆಯೋಗ (ಇಸಿಐ) ಮಂಗಳವಾರ ಈ ಕ್ರಮ ಕೈಗೊಂಡಿದೆ.

    ಇಸಿಐ ಆದೇಶದ ಪ್ರಕಾರ, ಸುರ್ಜೇವಾಲಾ ಅವರು ಇಂದು ಸಂಜೆ 6 ಗಂಟೆಯಿಂದ ಮುಂದಿನ 48 ಗಂಟೆಗಳ ಕಾಲ ಚುನಾವಣಾ ರ್ಯಾಲಿಗಳು ಅಥವಾ ಸಾರ್ವಜನಿಕ ಸಭೆಗಳನ್ನು ನಡೆಸುವಂತಿಲ್ಲ. ಇದನ್ನೂ ಓದಿ: ಮಾತೃಶಕ್ತಿಗೆ ಮಾಡಿದ ಅವಮಾನ- ಸುರ್ಜೇವಾಲಾ ವಿರುದ್ಧ ಯೋಗಿ ಕಿಡಿ

    ಭಾರತದ ಸಂವಿಧಾನದ 324 ನೇ ವಿಧಿಯ ಅಡಿಯಲ್ಲಿ ಯಾವುದೇ ಸಾರ್ವಜನಿಕ ಸಭೆಗಳು, ಸಾರ್ವಜನಿಕ ಮೆರವಣಿಗೆಗಳು, ಸಾರ್ವಜನಿಕ ರ್ಯಾಲಿಗಳು, ರೋಡ್‌ ಶೋಗಳು ಮತ್ತು ಸಂದರ್ಶನಗಳು, ಮಾಧ್ಯಮಗಳಲ್ಲಿ ಸಾರ್ವಜನಿಕ ಹೇಳಿಕೆಗಳನ್ನು ನಡೆಸದಂತೆ ರಣದೀಪ್ ಸುರ್ಜೆವಾಲಾ ಅವರನ್ನು ನಿರ್ಬಂಧಿಸುತ್ತದೆ ಎಂದು ಚುನಾವಣಾ ಸಮಿತಿಯು ತನ್ನ ನೋಟಿಸ್‌ನಲ್ಲಿ ತಿಳಿಸಿದೆ.

    ಸುರ್ಜೇವಾಲಾ ಹೇಳಿದ್ದೇನು..?: ಕೈತಾಲ್‌ನ ಫರಾಲ್ ಗ್ರಾಮದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಸುರ್ಜೇವಾಲಾ ಅವರು, ಮಥುರಾದ ಬಿಜೆಪಿ ಸಂಸದೆ ಹಾಗೂ ಹಿರಿಯ ನಟಿ ಹೇಮಾ ಮಾಲಿನಿ ಕುರಿತಾಗಿ ಕೆಟ್ಟ ಹಾಗೂ ಅಶ್ಲೀಲ ಹೇಳಿಕೆ ನೀಡಿದ್ದರು. ನಾವು ಶಾಸಕರು/ಸಂಸದರನ್ನು ಯಾಕೆ ಆಯ್ಕೆ ಮಾಡುತ್ತೇವೆ? ಅವರು ನಮ್ಮ ದನಿಯನ್ನು ಅಲ್ಲಿ ಕೇಳಬೇಕು ಎನ್ನುವುದು ಇದರ ಹಿಂದಿನ ಉದ್ದೇಶ. ನಮ್ಮ ಮನವಿಗಳು ಅಲ್ಲಿ ಸಲ್ಲಿಕೆಯಾಗಬೇಕು. ಆದರೆ ಹೇಮಾ ಮಾಲಿನಿ ಅವರನ್ನು ನೆಕ್ಕೋಕೆ ಸಂಸದರನ್ನಾಗಿ ಮಾಡಿದ್ದಾರೆ ಎಂದಿದ್ದರು.

    ಸುರ್ಜೇವಾಲಾ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಯಿತು. ಈ ಬೆನ್ನಲ್ಲೇ ಸುರ್ಜೆವಾಲಾ ಅವರ ಸ್ತ್ರೀ ದ್ವೇಷಿ ಹೇಳಿಕೆಯ ವಿರುದ್ಧ ಬಿಜೆಪಿ ಕಿಡಿಕಾರಿದೆ. ಬಳಿಕ ಈ ವಿಚಾರದಲ್ಲಿ ಸ್ಪಷ್ಟನೆ ನೀಡಿದ ಸುರ್ಜೇವಾಲಾ ಅವರು ಬಿಜೆಪಿ (BJP) ಮೇಲೆ ದೊಡ್ಡ ಆರೋಪ ಮಾಡಿದ್ದರು.

  • ಮಹಿಳೆಯರನ್ನು ಹೇಗೆ ಗೌರವಿಸಬೇಕೆಂಬುದನ್ನು ಮೋದಿ ನೋಡಿ ಕಲಿಯಿರಿ: ಹೇಮಾ ಮಾಲಿನಿ

    ಮಹಿಳೆಯರನ್ನು ಹೇಗೆ ಗೌರವಿಸಬೇಕೆಂಬುದನ್ನು ಮೋದಿ ನೋಡಿ ಕಲಿಯಿರಿ: ಹೇಮಾ ಮಾಲಿನಿ

    ನವದೆಹಲಿ: ತನ್ನ ಕುರಿತು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ (Randeep Surjewala) ಹೇಳಿಕೆಗೆ ಮಥುರಾ ಸಂಸದೆ ಹೇಮಾ ಮಾಲಿನಿ (Mathura MP Hema Malini) ಪ್ರತಿಕ್ರಿಯಿಸಿದ್ದಾರೆ. ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕರು ಪ್ರಧಾನಿ ನರೇಂದ್ರ ಮೋದಿಯಿಂದ ಮಹಿಳೆಯರಿಗೆ ಹೇಗೆ ಗೌರವ ನೀಡಬೇಕೆಂಬುದನ್ನು ಕಲಿಯಬೇಕು ಎಂದು ಹೇಳಿದರು.

    ಪ್ರತಿಪಕ್ಷಗಳು ಕೇವಲ ಜನಪ್ರಿಯ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡಿವೆ. ಯಾಕೆಂದರೆ ಫೇಮಸ್‌ ಇಲ್ಲದವರನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿದರೆ ಅವರಿಗೆ ಯಾವುದೇ ಪ್ರಯೋಜನ ಆಗಲ್ಲ. ಹೀಗಾಗಿ ಯಾರು ಸ್ವಲ್ಪ ಪ್ರಚಾರದಲ್ಲಿ ಇರುತ್ತಾರೋ ಅವರ ಬಗ್ಗೆಯೇ ಹೇಳಿಕೆಗಳನ್ನು ನೀಡುತ್ತಾರೆ. ಇಂಥವರು ಮಹಿಳೆಯರನ್ನು ಹೇಗೆ ಗೌರವಿಸಬೇಕು ಎಂಬುದನ್ನು ಮೋದಿ (Narendra Modi) ಅವರಿಂದ ಕಲಿಯಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

    ಮಥುರಾ ಕ್ಷೇತ್ರದಿಂದ (Mathura Constituency) ಮರು ನಾಮನಿರ್ದೇಶನಗೊಂಡಿರುವುದಕ್ಕೆ ತುಂಬಾ ಸಂತೋಷವಾಗಿದೆ. ಮೂರನೇ ಬಾರಿಗೆ ಮಥುರಾದ ಜನತೆಗೆ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿರುವುದಕ್ಕೆ ಅತೀವ ಸಂತಸವಾಗುತ್ತಿದೆ. ನನ್ನ ಎರಡು ಅವಧಿಯಲ್ಲಿ ಮಾಡಲಾಗದ ಕೆಲಸವನ್ನು ಮುಗಿಸುತ್ತೇನೆ. ಈ ಬಾರಿ ಮಥುರಾದ ಜನತೆಗಾಗಿ ಬೃಹತ್ ಅಭಿವೃದ್ಧಿ ಯೋಜನೆಗಳನ್ನು ಆರಂಭಿಸಲಾಗುವುದು. ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ಮಥುರಾಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಾರೆ ಎಂದು ಇದೇ ವೇಳೆ ಹೇಮಾ ಮಾಲಿನಿಯವರು ತಿಳಿಸಿದರು. ಇದನ್ನೂ ಓದಿ: ಮಾತೃಶಕ್ತಿಗೆ ಮಾಡಿದ ಅವಮಾನ- ಸುರ್ಜೇವಾಲಾ ವಿರುದ್ಧ ಯೋಗಿ ಕಿಡಿ

     

    ಸುರ್ಜೇವಾಲಾ ಹೇಳಿದ್ದೇನು..?: ಕೈತಾಲ್‌ನ ಫರಾಲ್ ಗ್ರಾಮದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಸುರ್ಜೇವಾಲಾ ಅವರು, ಮಥುರಾದ ಬಿಜೆಪಿ ಸಂಸದೆ ಹಾಗೂ ಹಿರಿಯ ನಟಿ ಹೇಮಾ ಮಾಲಿನಿ ಕುರಿತಾಗಿ ಕೆಟ್ಟ ಹಾಗೂ ಅಶ್ಲೀಲ ಹೇಳಿಕೆ ನೀಡಿದ್ದರು. ನಾವು ಶಾಸಕರು/ಸಂಸದರನ್ನು ಯಾಕೆ ಆಯ್ಕೆ ಮಾಡುತ್ತೇವೆ? ಅವರು ನಮ್ಮ ದನಿಯನ್ನು ಅಲ್ಲಿ ಕೇಳಬೇಕು ಎನ್ನುವುದು ಇದರ ಹಿಂದಿನ ಉದ್ದೇಶ. ನಮ್ಮ ಮನವಿಗಳು ಅಲ್ಲಿ ಸಲ್ಲಿಕೆಯಾಗಬೇಕು. ಆದರೆ ಇವರು ಹೇಮಾ ಮಾಲಿನಿ ರೀತಿಯಲ್ಲ. ಹೇಮಾ ಮಾಲಿನಿ ಅವರನ್ನು ನೆಕ್ಕೋಕೆ ಸಂಸದರನ್ನಾಗಿ ಮಾಡಿದ್ದಾರೆ ಎಂದಿದ್ದರು.

    ಸುರ್ಜೇವಾಲಾ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಯಿತು. ಈ ಬೆನ್ನಲ್ಲೇ ಸುರ್ಜೆವಾಲಾ ಅವರ ಸ್ತ್ರೀ ದ್ವೇಷಿ ಹೇಳಿಕೆಯ ವಿರುದ್ಧ ಬಿಜೆಪಿ ಕಿಡಿಕಾರಿದೆ. ಬಳಿಕ ಈ ವಿಚಾರದಲ್ಲಿ ಸ್ಪಷ್ಟನೆ ನೀಡಿದ ಸುರ್ಜೇವಾಲಾ ಅವರು ಬಿಜೆಪಿ (BJP) ಮೇಲೆ ದೊಡ್ಡ ಆರೋಪ ಮಾಡಿದ್ದರು. ಬಿಜೆಪಿಯ ಐಟಿ ಸೆಲ್ ಸತ್ಯವನ್ನು ತಿರುಚುವ ಮತ್ತು ಸುಳ್ಳನ್ನು ಹರಡುವ ಅಭ್ಯಾಸವನ್ನು ಬೆಳೆಸಿಕೊಂಡಿದೆ ಎಂದು ಕಿಡಿಕಾರಿದ್ದರು. ಅಲ್ಲದೇ ಅದೇ ಕಾರ್ಯಕ್ರಮದ ಮತ್ತೊಂದು ವೀಡಿಯೊವನ್ನು ಹಂಚಿಕೊಂಡಿದ್ದು, ಅದರಲ್ಲಿ ಅವರು ಹೇಮಾ ಮಾಲಿನಿ ಅವರನ್ನು ನಾವು ಗೌರವಿಸುತ್ತೇವೆ ಏಕೆಂದರೆ ಅವರು ಧರ್ಮೇಂದ್ರ ಜಿ ಅವರನ್ನು ವಿವಾಹವಾಗಿದ್ದಾರೆ, ಅವರು ನಮ್ಮ ಅತ್ತಿಗೆ ಎಂದು ಹೇಳಿದ್ದಾರೆ.

    ನನ್ನ ಉದ್ದೇಶ ಹೇಮಾ ಮಾಲಿನಿ ಅವರನ್ನು ಅವಮಾನಿಸುವುದು ಅಥವಾ ಯಾರನ್ನೂ ನೋಯಿಸುವುದು ಅಲ್ಲ. ಅದಕ್ಕಾಗಿಯೇ ನಾವು ಹೇಮಾ ಮಾಲಿನಿ ಅವರನ್ನು ಗೌರವಿಸುತ್ತೇವೆ ಮತ್ತು ಅವರು ನಮ್ಮ ಅತ್ತಿಗೆ ಎಂದು ನಾನು ಸ್ಪಷ್ಟವಾಗಿ ಹೇಳಿದ್ದೇನೆ. ಬಿಜೆಪಿ ಮಹಿಳಾ ವಿರೋಧಿಯಾಗಿದೆ. ಆದ್ದರಿಂದ ಅದು ತನ್ನ ಸ್ತ್ರೀದ್ವೇಷ-ಬಣ್ಣದ ಕನ್ನಡಕದಿಂದ ಎಲ್ಲವನ್ನೂ ನೋಡುತ್ತದೆ. ಸುಳ್ಳನ್ನು ಹಬ್ಬಿಸುತ್ತಾರೆ ಎಂದು ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

  • ಮಾತೃಶಕ್ತಿಗೆ ಮಾಡಿದ ಅವಮಾನ- ಸುರ್ಜೇವಾಲಾ ವಿರುದ್ಧ ಯೋಗಿ ಕಿಡಿ

    ಮಾತೃಶಕ್ತಿಗೆ ಮಾಡಿದ ಅವಮಾನ- ಸುರ್ಜೇವಾಲಾ ವಿರುದ್ಧ ಯೋಗಿ ಕಿಡಿ

    ಲಕ್ನೋ: ಹೇಮಾ ಮಾಲಿನಿ ಕುರಿತು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ (Randeep Surjewala) ಅವರ ವಿವಾದಾತ್ಮಕ ಹೇಳಿಕೆಗೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಕಿಡಿಕಾರಿದ್ದಾರೆ.

    ಗುರುವಾರ ಮಥುರಾದಲ್ಲಿ (Mathura) ಹೇಮಾ ಮಾಲಿನಿ (Hema Malini) ಪರ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗ ಕಾಂಗ್ರೆಸ್ ನಾಯಕರು ಅಸಭ್ಯ ಹೇಳಿಕೆಗಳನ್ನು ನೀಡುವ ಮೂಲಕ ಭಾರತದ ಅರ್ಧದಷ್ಟು ಜನಸಂಖ್ಯೆಯನ್ನು ಅವಮಾನಿಸಲು ಮುಂದಾಗಿದ್ದಾರೆ ಎಂದು ಸುರ್ಜೇವಾಲಾ ಅವರ ಹೆಸರನ್ನು ಹೇಳದೇ ವಾಗ್ದಾಳಿ ನಡೆಸಿದರು.

    ಇದು ರಾಧಾರಾಣಿಯ ನಾಡು, ಯಮುನಾ ಮಯ್ಯನ ನಾಡು ಎಂಬ ಅರಿವು ಕಾಂಗ್ರೆಸ್ ಮತ್ತು ಮೈತ್ರಿಕೂಟದ ಜನತೆಗೆ ಇರಬೇಕು. ಅವರ ಆಶೀರ್ವಾದ ಈ ನೆಲದ ಮೇಲಿದೆ. ನೀವು ಅರ್ಧದಷ್ಟು ಜನಸಂಖ್ಯೆಯನ್ನು ಅವಮಾನಿಸಿದರೆ, ಮುಂದೆ ನೀವು ರಾಜಕೀಯ ಮಾಡಲು ಸಾಧ್ಯವಿಲ್ಲ ಎಂಬಂತಹ ಪಾಠವನ್ನು ಇಡೀ ಭಾರತಕ್ಕೆ ಕಲಿಸಲಾಗುತ್ತದೆ.

    ಪ್ರಜಾಪ್ರಭುತ್ವದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ, ಆದರೆ ವೈಯಕ್ತಿಕ ಟೀಕೆಗಳನ್ನು ಮಾಡುವ ಮೂಲಕ ಅನಗತ್ಯವಾಗಿ ಮಾತೃಶಕ್ತಿಯನ್ನು ಅವಮಾನಿಸಬೇಕು ಎಂದಲ್ಲ. ಇದನ್ನು ನಮ್ಮ ಸಮಾಜ ಎಂದಿಗೂ ಒಪ್ಪುವುದಿಲ್ಲ. ಅಭಿಪ್ರಾಯಗಳೊಂದಿಗೆ ಒಪ್ಪಿಗೆ ಮತ್ತು ಭಿನ್ನಾಭಿಪ್ರಾಯ ಇರಬಹುದು. ಆದರೆ ನಾವು ಕಲೆ, ಸಂಸ್ಕೃತಿ, ರಾಷ್ಟ್ರೀಯತೆ ಅಥವಾ ಯಾವುದೇ ಜಾತಿಯನ್ನು ಗುರಿಯಾಗಿಸಲು ಸಾಧ್ಯವಿಲ್ಲ. ಯಾರಾದರೂ ನಿಮ್ಮನ್ನು ಗುರಿಯಾಗಿಸಲು ಪ್ರಯತ್ನಿಸುತ್ತಿದ್ದರೆ, ನೀವು ನಿಮಗಾಗಿ ಗುಂಡಿಯನ್ನು ಅಗೆಯುತ್ತೀರಿ ಎಂದು ಯೋಗಿ ಕಿಡಿಕಾರಿದರು.

    ಬೇರೆ ಯಾವ ಪಕ್ಷಕ್ಕೂ ಅಭ್ಯರ್ಥಿಗಳನ್ನು ಹುಡುಕಲು ಸಾಧ್ಯವಾಗುತ್ತಿಲ್ಲ. ಎರವಲು ಪಡೆದು ಅಭ್ಯರ್ಥಿಗಳನ್ನು ಕರೆತರುತ್ತಿದ್ದಾರೆ. ಆದರೆ ಎರವಲು ಪಡೆದರೂ ಅಭ್ಯರ್ಥಿಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಹಾಗಾಗಿಯೇ ಕಾಂಗ್ರೆಸ್ ನಾಯಕರು ತಾಳ್ಮೆ ಕಳೆದುಕೊಂಡಿದ್ದಾರೆ ಎಂದರು. ಇದನ್ನೂ ಓದಿ: ನಾನು ಸನಾತನ ವಿರೋಧಿ ಘೋಷಣೆ ಕೂಗಲ್ಲ – ಕಾಂಗ್ರೆಸ್‌ಗೆ ಗೌರವ್ ವಲ್ಲಭ್ ರಾಜೀನಾಮೆ

    60 ವರ್ಷಗಳ ಕಾಲ ದೇಶವನ್ನು ಆಳುವ ಅವಕಾಶ ಕಾಂಗ್ರೆಸ್‌ಗೆ ಸಿಕ್ಕಿದೆ. ಕಾಶಿ ವಿಶ್ವನಾಥ ಧಾಮವನ್ನು ಏಕೆ ನಿರ್ಮಿಸಬಾರದು? 60 ವರ್ಷಗಳ ಕಾಲ ಕಾಶಿಯನ್ನು ಪ್ರತಿನಿಧಿಸಿದರು. ಅಲ್ಲಿ ಯಾಕೆ ಯೋಚಿಸಬಾರದು. ಮಥುರಾ-ವೃಂದಾವನದ ಬಗ್ಗೆ ಏಕೆ ಯೋಚಿಸಬಾರದು ಎಂದು ಯೋಗಿ ಪ್ರಶ್ನಿಸಿದರು.

    ಸುರ್ಜೇವಾಲಾ ಹೇಳಿದ್ದೇನು..?: ಕೈತಾಲ್‌ನ ಫರಾಲ್ ಗ್ರಾಮದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಸುರ್ಜೇವಾಲಾ ಅವರು, ಮಥುರಾದ ಬಿಜೆಪಿ ಸಂಸದೆ ಹಾಗೂ ಹಿರಿಯ ನಟಿ ಹೇಮಾ ಮಾಲಿನಿ ಕುರಿತಾಗಿ ಕೆಟ್ಟ ಹಾಗೂ ಅಶ್ಲೀಲ ಹೇಳಿಕೆ ನೀಡಿದ್ದರು. ನಾವು ಶಾಸಕರು/ಸಂಸದರನ್ನು ಯಾಕೆ ಆಯ್ಕೆ ಮಾಡುತ್ತೇವೆ? ಅವರು ನಮ್ಮ ದನಿಯನ್ನು ಅಲ್ಲಿ ಕೇಳಬೇಕು ಎನ್ನುವುದು ಇದರ ಹಿಂದಿನ ಉದ್ದೇಶ. ನಮ್ಮ ಮನವಿಗಳು ಅಲ್ಲಿ ಸಲ್ಲಿಕೆಯಾಗಬೇಕು. ಆದರೆ ಇವರು ಹೇಮಾ ಮಾಲಿನಿ ರೀತಿಯಲ್ಲ. ಹೇಮಾ ಮಾಲಿನಿ ಅವರನ್ನು ನೆಕ್ಕೋಕೆ ಸಂಸದರನ್ನಾಗಿ ಮಾಡಿದ್ದಾರೆ ಎಂದಿದ್ದರು.

    ಸುರ್ಜೇವಾಲಾ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಯಿತು. ಈ ಬೆನ್ನಲ್ಲೇ ಸುರ್ಜೆವಾಲಾ ಅವರ ಸ್ತ್ರೀ ದ್ವೇಷಿ ಹೇಳಿಕೆಯ ವಿರುದ್ಧ ಬಿಜೆಪಿ ಕಿಡಿಕಾರಿದೆ. ಬಳಿಕ ಈ ವಿಚಾರದಲ್ಲಿ ಸ್ಪಷ್ಟನೆ ನೀಡಿದ ಸುರ್ಜೇವಾಲಾ ಅವರು ಬಿಜೆಪಿ (BJP) ಮೇಲೆ ದೊಡ್ಡ ಆರೋಪ ಮಾಡಿದ್ದರು.

  • ಮಂಗಳವಾರ ನಿಗಮ ಮಂಡಳಿ ಪಟ್ಟಿ ಫೈನಲ್‌ ಸಾಧ್ಯತೆ

    ಮಂಗಳವಾರ ನಿಗಮ ಮಂಡಳಿ ಪಟ್ಟಿ ಫೈನಲ್‌ ಸಾಧ್ಯತೆ

    ಬೆಂಗಳೂರು: ನಿಗಮ-ಮಂಡಳಿ ಪಟ್ಟಿ ಫೈನಲ್ ಮಾಡುವ ಸಂಬಂಧ ಮಂಗಳವಾರ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ (Randeep Surjewala) ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

    ಮಧ್ಯಾಹ್ನ 12:20 ಕ್ಕೆ ಬೆಂಗಳೂರಿಗೆ (Bengaluru) ಆಗಮಿಸಲಿದ್ದು,‌ಮಧ್ಯಾಹ್ನ 2 ಗಂಟೆಗೆ ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಜೊತೆ ನಿಗಮ-ಮಂಡಳಿ ಕುರಿತು ಸಭೆ ನಡೆಸಲಿದ್ದಾರೆ. ಬಹುತೇಕ ನಾಳೆಯೇ ನಿಗಮ-ಮಂಡಳಿ ಪಟ್ಟಿ ಫೈನಲ್ ಆಗುವ ಸಾಧ್ಯತೆ ಇದೆ.

    ಈಗಾಗಲೇ ಮೊದಲ ಹಂತದ ಸಭೆಯನ್ನು ಸಿಎಂ, ಡಿಸಿಎಂ,‌ ಸುರ್ಜೇವಾಲಾ ನಡೆಸಿದ್ದಾರೆ. ನಾಳೆ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದು, ಶಾಸಕರಿಗೆ ಮೊದಲ ಪಟ್ಟಿಯಲ್ಲಿ ಅವಕಾಶ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಶಾಸಕರ ಜೊತೆ ಕಾರ್ಯಕರ್ತರಿಗೂ ನೀಡುವ ಬಗ್ಗೆ ಚರ್ಚೆ ಆಗಲಿದೆ. ಇದನ್ನೂ ಓದಿ: IPL 2024 Retention: 10 ತಂಡಗಳಲ್ಲಿ 173 ಜನ ಸೇಫ್‌ – 50 ಆಟಗಾರರಿಗೆ ಗೇಟ್‌ಪಾಸ್‌ – ಇಲ್ಲಿದೆ ಡಿಟೇಲ್ಸ್‌

    ಶಾಸಕರಿಗೆ ಮಾತ್ರ ಮೊದಲ ಪಟ್ಟಿಯಲ್ಲಿ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದರೆ ಕಾರ್ಯಕರ್ತರಿಗೂ ಮೊದಲ ಪಟ್ಟಿಯಲ್ಲಿ ಸ್ಥಾನ‌ ಕೊಡಲು ಡಿಕೆ ಶಿವಕುಮಾರ್ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ನಾಳೆ ಮಹತ್ವದ ಸಭೆ ನಡೆಯಲಿದ್ದು,ಯಾರು ಯಾರಿಗೆ ನಿಗಮ-ಮಂಡಳಿ ಎನ್ನುವುದು ಬಹುತೇಕ ಫೈನಲ್ ಆಗುವ ಸಾಧ್ಯತೆಯಿದೆ.

     

  • ಅವರು ರಾಜ್ಯದ ಹಣ ಲೂಟಿ ಮಾಡಲು ಬಂದಿರೋ ದೆಹಲಿ ಪ್ರತಿನಿಧಿ – `ಕೈ’ನಾಯಕನ ವಿರುದ್ಧ HDK ಕಿಡಿ

    ಅವರು ರಾಜ್ಯದ ಹಣ ಲೂಟಿ ಮಾಡಲು ಬಂದಿರೋ ದೆಹಲಿ ಪ್ರತಿನಿಧಿ – `ಕೈ’ನಾಯಕನ ವಿರುದ್ಧ HDK ಕಿಡಿ

    ಬೆಂಗಳೂರು: ಅವರು ರಾಜ್ಯದ ಹಣ ಲೂಟಿ ಮಾಡಲು ಬಂದಿರೋ ದೆಹಲಿ ಪ್ರತಿನಿಧಿ. ರಾಜ್ಯ ಸರ್ಕಾರ ಕಾಂಗ್ರೆಸ್ ಹೈಕಮಾಂಡ್‌ನ ಹಂಗಿನ ಸರ್ಕಾರ ಆಗಿದೆ ಅನ್ನೋದು ಇದರಿಂದ ಗೊತ್ತಾಗುತ್ತದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದರು.

    BBMP ಅಧಿಕಾರಿಗಳ ಸಭೆಯಲ್ಲಿ ಸುರ್ಜೇವಾಲ ಭಾಗಿಯಾದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರದ (Congress Government) ವಿರುದ್ಧ ಕಿಡಿಕಾರಿದರು. ರಾಜ್ಯ ಸರ್ಕಾರಕ್ಕೆ ಸಂಬಂಧವಿಲ್ಲದ ದೆಹಲಿಯ ಪ್ರತಿನಿಧಿ ಅಧಿಕಾರಿಗಳ ಜೊತೆ ಸಭೆ ಮಾಡಿದ್ದಾರೆ. ಇದನ್ನ ನೋಡಿದರೆ ಉಪಮುಖ್ಯಮಂತ್ರಿಗಳು ಎಷ್ಟು ಸುಳ್ಳು ಹೇಳಿದ್ದಾರೆ ಗೊತ್ತಾಗುತ್ತದೆ. ನಾಡಿನ ಜನತೆಯ ಮುಂದೆ ಅವರ ನಾಟಕೀಯವಾದ ಮಾತುಗಳಿಗೆ ಇದು ಒಂದು ಸಾಕ್ಷಿ. ಎಷ್ಟು ದಿನ ಈ ರೀತಿಯ ಸುಳ್ಳುಗಳನ್ನ ಹೇಳಿಕೊಂಡು ಬದುಕುತ್ತೀರಾ ಆಕ್ರೋಶ ಹೊರ ಹಾಕಿದರು.

    ನಮ್ಮ ರಾಜ್ಯದ ಜನರ ಮತದಾನವನ್ನ ನಿಮ್ಮ ದೆಹಲಿ ಹೈಕಮಾಂಡ್‌ಗೆ ಗುಲಾಮರಾಗಿ ಇಟ್ಟುಕೊಂಡಿದ್ದೀರಾ. ಅಧಿಕಾರಿಗಳಿಗೆ, ಮಂತ್ರಿಗಳಿಗೆ ಸುರ್ಜೆವಾಲಾ ಏನು ಸೂಚನೆ ಕೊಟ್ಟಿದ್ದಾರೆ ಗೊತ್ತಿದೆ. ಜನ ಮತ ಹಾಕಿರೋದು ನಿಮಗೋ ಅಥವಾ ಕಾಂಗ್ರೆಸ್ ಹೈಕಮಾಂಡ್ ಗೋ? ಸರ್ಕಾರದ ತಿರ್ಮಾನಗಳ್ನ ಯಾರೋ ಬೀದಿಯಲ್ಲಿ ಹೋಗುವವರ ಜೊತೆ ಮೀಟಿಂಗ್ ಮಾಡುವುದನ್ನ ನೋಡಿದ್ರೆ ರಾಜ್ಯ ಎಂತ ದುರ್ಗತಿಗೆ ಬಂದಿದೆ ಅನ್ನೋದನ್ನ ನಾಡಿನ ಜನ ಅರ್ಥ ಮಾಡಿಕೊಳ್ಳಬೇಕು ಅಂತಾ ಕಿಡಿ ಕಾರಿದರು.

    ರಾಜ್ಯ ಸರ್ಕಾರ ಕಾಂಗ್ರೆಸ್ ಹೈಕಮಾಂಡ್‌ನ ಹಂಗಿನಾ ಸರ್ಕಾರ ಆಗಿರುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಸಭೆಯ ಫೋಟೋ ಬಿಡುಗಡೆ ಮಾಡಿರುವವರು ಯಾರು..? ಸಭೆಯಲ್ಲಿದ್ದ ನಿಮ್ಮ ಮಂತ್ರಿ ಒಬ್ಬ ಆ ಫೋಟೋಗಳನ್ನ ಬಿಡುಗಡೆ ಮಾಡಿರುವುದು. ಅಧಿಕಾರಿಗಳು ಕರೆದುಕೊಂಡು ಹೋಗಲು ಬಂದಿದ್ದಾರೆ ಅಂತ ಹೇಳುತ್ತೀರಾ? ಆ ಟೇಬಲ್ ನೋಡಿದರೆ ಸರ್ಕಾರದ ದಾಖಲೆಗಳನ್ನು ಇಟ್ಟುಕೊಂಡು ಕುಳಿತಿದ್ದಾರೆ. ರಾಜ್ಯವನ್ನ ಲೂಟಿ ಮಾಡಲು ದೆಹಲಿಯಿಂದ ಬಂದಿರುವ ಪ್ರತಿನಿಧಿ ಇವರು. ರಾಜ್ಯವನ್ನ ಲೂಟಿ ಹೊಡೆಯಲು ರಾಜ್ಯ ಕಾಂಗ್ರೆಸ್ ನಾಯಕರಿಗೆ ಡೈರಕ್ಷನ್ ಕೊಟ್ಟಿದೆ. ಹಣ ಲೂಟಿ ಮಾಡಲು ಬಂದಿರುವ ದೆಹಲಿ ಪ್ರತಿನಿಧಿ ಅವರು. ಸಂಪತ್ ಭರಿತ ರಾಜ್ಯವಾದ ಕರ್ನಾಟಕವನ್ನ ಲೂಟಿ ಹೊಡೆಯಲು ಎರಡು ರಾಷ್ಟ್ರೀಯ ಪಕ್ಷಗಳು ಇರುವುದು. ಸೋಲಿನಿಂದ ಹತಾಶರಾಗಿ ಇರುವವರು ನಾವಲ್ಲ. ಸೋಲು ಗೆಲುವನ್ನು ಎರಡನ್ನೂ ನೋಡಿದ್ದೇವೆ. ಜನರಿಗೆ ಗ್ಯಾರಂಟಿ ಭರವಸೆಗಳನ್ನು ಕೊಟ್ಟು ಈಡೇರಿಸಲು ಷರತ್ತು ಹಾಕಿ ನೀವು ಹತಾಶರಾಗಿದ್ದಾರೆ ಎಂದು ಕುಮಾರಸ್ವಾಮಿ ಕಾಂಗ್ರೆಸ್ ನಾಯಕರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

  • ಕನ್ನಡಿಗರು ಮತ ಹಾಕಿದ್ದು ಕೈ ಸರ್ಕಾರಕ್ಕಾ?, ಕೈಗೊಂಬೆ ಸರ್ಕಾರಕ್ಕಾ?: ಹೆಚ್‍ಡಿಕೆ

    ಕನ್ನಡಿಗರು ಮತ ಹಾಕಿದ್ದು ಕೈ ಸರ್ಕಾರಕ್ಕಾ?, ಕೈಗೊಂಬೆ ಸರ್ಕಾರಕ್ಕಾ?: ಹೆಚ್‍ಡಿಕೆ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ (HD Kumaraswamy) ಅವರು ಇದೀಗ ರಾಜ್ಯಸ ರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಸರಣಿ ಟ್ವೀಟ್ ಮಾಡುವ ಮೂಲಕ ಹತ್ತನೇ ನಂಬರಿನ ಹಂಗಿನ ಸರ್ಕಾರ ಎದು ಹ್ಯಾಶ್ ಟ್ಯಾಗ್ ಬಳಸಿ ವಾಗ್ದಾಳಿ ನಡೆಸಿದ್ದಾರೆ.

    ಟ್ವೀಟ್‍ನಲ್ಲೇನಿದೆ..?: ರಾಜ್ಯದಲ್ಲಿರುವುದು ಸಿದ್ದರಾಮಯ್ಯ (Siddaramaiah) ನವರ ನೇತೃತ್ವದ ಸರ್ಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರ್ಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರ್ಕಾರಕ್ಕಾ? ಅಥವಾ ಕೈಗೊಂಬೆ ಸರ್ಕಾರಕ್ಕಾ? ಪಾಪ.. ಜನರ ವೋಟು ಹಂಗಿನ ಸರ್ಕಾರದ ಪಾಲಾಗಿದೆ. ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ ಎಂದಿದ್ದಾರೆ.

    ಸರ್ಕಾರದ ಅಧಿಕೃತ ಸಭೆಗಳನ್ನು ಹೈಕಮಾಂಡಿನ ನಿಲಯದ ಕಲಾವಿದರೇ ನಡೆಸುವ ಕರ್ಮ ಕರ್ನಾಟಕದ್ದು! ನಾನು ಟ್ಯಾಗ್ ಮಾಡಿರುವ ಫೋಟೋ ಆ ದೈನೇಸಿ ಸ್ಥಿತಿಗೆ ಸಾಕ್ಷಿ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ (Randeep Surjewala) ಅವರಿಗೆ ಸರ್ಕಾರದ ಸಭೆಗಳನ್ನು ನಡೆಸುವ ಜವಾಬ್ದಾರಿ, ಅವಕಾಶ ಕೊಟ್ಟವರು ಯಾರು ಎಂದು ಹೆಚ್‍ಡಿಕೆ ಪ್ರಶ್ನಿಸಿದ್ದಾರೆ.

    ಸಭೆಯಲ್ಲಿ ಹಿರಿಯ ಸಚಿವರಿದ್ದಾರೆ. ಹಿರಿಯ ಐಎಎಸ್ ಅಧಿಕಾರಿಗಳೂ ಹಾಜರಿದ್ದಾರೆ. ಅಲ್ಲಿಗೆ ಇದು ಅಧಿಕೃತ ಸಭೆಯೇ ಆಯಿತು. ಆದರೆ ಅಲ್ಲಿ ಸುರ್ಜೆವಾಲಾ ಸೆಂಟರ್ ಸೀಟಿನಲ್ಲಿದ್ದಾರೆ. ಸಚಿವರು ಸೈಡು ಕುರ್ಚಿಗಳ ಪಾಲಾಗಿದ್ದಾರೆ. ಇದೇನು ವಿಚಿತ್ರ? ಮಾನ್ಯ ಮುಖ್ಯಮಂತ್ರಿಗಳೇ ಉತ್ತರಿಸಬೇಕು ಎಂದು ಬರೆದು ಹತ್ತನೇ ನಂಬರಿನ ಹಂಗಿನ ಸರ್ಕಾರ ಎಂಬ ಹ್ಯಾಶ್ ಟ್ಯಾಗ್ ಬಳಸಿದ್ದಾರೆ.