Tag: ರತ್ನಗಿರಿ

  • ಕೇರಳದಲ್ಲಿ ರೈಲಿಗೆ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣ – ಪರಾರಿಯಾಗಿದ್ದ ಆರೋಪಿ ಅರೆಸ್ಟ್

    ಕೇರಳದಲ್ಲಿ ರೈಲಿಗೆ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣ – ಪರಾರಿಯಾಗಿದ್ದ ಆರೋಪಿ ಅರೆಸ್ಟ್

    ಮುಂಬೈ: ಕೇರಳದಲ್ಲಿ ಭಾನುವಾರ ರಾತ್ರಿ ಸಹ ಪ್ರಯಾಣಿಕನೊಂದಿಗೆ ಜಗಳವಾಡಿ ರೈಲಿಗೆ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗುಪ್ತಚರ (Central Intelligence) ಮತ್ತು ಭಯೋತ್ಪಾದನಾ ನಿಗ್ರಹ (Anti Terrorism) ಅಧಿಕಾರಿಗಳ ಜಂಟಿ ತಂಡ ಬುಧವಾರ ಶಂಕಿತ ಆರೋಪಿಯನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಶಾರುಖ್ ರೈಲಿಗೆ ಬೆಂಕಿ ಹಚ್ಚಿದ ಶಂಕಿತ ಆರೋಪಿಯಾಗಿದ್ದು, ಮಹಾರಾಷ್ಟ್ರದ (Maharashtra) ರತ್ನಗಿರಿ (Ratnagiri) ಜಿಲ್ಲೆಯಲ್ಲಿ ಆತನನ್ನು ಬಂಧಿಸಲಾಗಿದೆ. ಕೇರಳ ಪೊಲೀಸರ ತಂಡವೂ ರತ್ನಗಿರಿ ತಲುಪಿದ್ದು, ಶಂಕಿತ ಆರೋಪಿಯನ್ನು ಶೀಘ್ರದಲ್ಲೇ ಅವರಿಗೆ ಹಸ್ತಾಂತರಿಸಲಾಗುವುದು ಎಂದು  ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ವ್ಯಕ್ತಿ – ಮೂವರು ಸಾವು 

    ಪ್ರಕರಣದ ಹಿಂದಿನ ಉದ್ದೇಶವು ಇನ್ನೂ ಸ್ಪಷ್ಟವಾಗಿಲ್ಲ. ಕೋಝಿಕ್ಕೋಡ್ (Kozhikode) ಜಿಲ್ಲೆಯ ಎಲತ್ತೂರ್ ಬಳಿ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದ ವಾದದ ನಂತರ ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮಂಗಳವಾರ ಕಣ್ಣೂರು ನಿಲ್ದಾಣದಲ್ಲಿ ರೈಲಿನ ಕೋಚ್‌ಗಳನ್ನು ಪರೀಕ್ಷಿಸಿ ವಿಧಿವಿಜ್ಞಾನ ಸಾಕ್ಷಿಗಳನ್ನು ಸಂಗ್ರಹಿಸಿದೆ. ಘಟನೆಯ ವೇಳೆ ಅಲ್ಲಿದ್ದ ಕೆಲವು ಪ್ರಯಾಣಿಕರು ಮತ್ತು ರೈಲ್ವೆ ಸಿಬ್ಬಂದಿಯನ್ನೂ ಎನ್‌ಐಎ ವಿಚಾರಣೆಗೊಳಪಡಿಸಿದೆ. ಇದನ್ನೂ ಓದಿ: ವರನ ಕೊಲೆಗೆ ಸ್ಕೆಚ್‌ ಹಾಕಿ ಸ್ಫೋಟಕ ತುಂಬಿ ಗಿಫ್ಟ್‌ ಕೊಟ್ಟ ವಧುವಿನ ಮಾಜಿ ಲವ್ವರ್!  

    ಪ್ರಕರಣದ ತನಿಖೆಗಾಗಿ ಕೇರಳ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದರು. ಅಲ್ಲದೇ ಶಂಕಿತ ಆರೋಪಿಯ ಕುರಿತು ಮಾಹಿತಿ ನೀಡಿದವರಿಗೆ 2 ಲಕ್ಷ ರೂ. ಬಹುಮಾನ ಘೋಷಿಸಿದ್ದರು. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದ ರಜಾಕ್ ನೀಡಿದ ಸಾಕ್ಷಿ ವಿವರಣೆಯ ಆಧಾರದ ಮೇಲೆ ಪೊಲೀಸರು ಶಂಕಿತ ಆರೋಪಿಯ ರೇಖಾಚಿತ್ರವನ್ನೂ (Sketch) ಬಿಡುಗಡೆ ಮಾಡಿದ್ದರು.

    ರೇಖಾಚಿತ್ರವು ಗಡ್ಡ ಮತ್ತು ಕ್ಯಾಪ್ ಹೊಂದಿರುವ ವ್ಯಕ್ತಿಯನ್ನು ಒಳಗೊಂಡಿದ್ದು, ಗಾಢ ಬಣ್ಣದ ಶರ್ಟ್ ಮತ್ತು ಪ್ಯಾಂಟ್ ಧರಿಸಿದ್ದ. ಆತನ ಬಗ್ಗೆ ಯಾವುದೇ ಮಾಹಿತಿ ದೊರೆತರೂ ತಕ್ಷಣವೇ ತಿಳಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದರು. ಇದನ್ನೂ ಓದಿ: ಯುವತಿ ಮೇಲೆ ಅತ್ಯಾಚಾರವೆಸಗಿ ಚಿನ್ನಾಭರಣ ಕದ್ದು ಪರಾರಿ – ಮಹಿಳೆ ಸೇರಿ ಐವರ ವಿರುದ್ಧ ಕೇಸ್ 

    ಅಲಪ್ಪುಳ- ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲು ಕೋಝಿಕ್ಕೋಡ್ ನಗರವನ್ನು ದಾಟಿ ಕೇರಳದ (Kerala) ಕೊರಾಪುಳ ರೈಲ್ವೆ ಸೇತುವೆಯನ್ನು ತಲುಪಿತ್ತು. ಈ ವೇಳೆ ಅನಾಮಿಕನೊಬ್ಬ ಸಹ ಪ್ರಯಾಣಿಕನೊಂದಿಗೆ ಜಗಳವಾಡಿ, ನಂತರ ಆತನಿಗೆ ಬೆಂಕಿ (Fire) ಹಚ್ಚಿದ ಪರಿಣಾಮ 9 ಮಂದಿ ಗಾಯಗೊಂಡಿದ್ದಾರೆ. ಘಟನೆ ನಡೆದ ಕೂಡಲೇ ವ್ಯಕ್ತಿ ಪರಾರಿಯಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಕಚ್ಚಾ ತೈಲ ಮೇಲಿನ ವಿಂಡ್‌ಫಾಲ್‌ ತೆರಿಗೆ ಕಡಿತಗೊಳಿಸಿದ ಭಾರತ

    ಘಟನೆಯಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದರು. ಅದರಲ್ಲೂ 5 ಮಂದಿ ಗಂಭೀರ ಗಾಯಗೊಂಡಿದ್ದು, ಅವರನ್ನು ಕೋಝಿಕ್ಕೋಡ್‌ನ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಮೂವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವರದಿಗಳು ತಿಳಿಸಿವೆ. ಇದನ್ನೂ ಓದಿ: ಸಿಕ್ಕಿಂನಲ್ಲಿ ಭಾರೀ ಹಿಮಪಾತ – 6 ಸಾವು, ಹಲವರು ನಾಪತ್ತೆ

  • ಔಷಧಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ – 5 ಕಿ.ಮೀ. ದೂರದವರೆಗೆ ಕೇಳಿದ ಸ್ಫೋಟದ ಸದ್ದು

    ಔಷಧಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ – 5 ಕಿ.ಮೀ. ದೂರದವರೆಗೆ ಕೇಳಿದ ಸ್ಫೋಟದ ಸದ್ದು

    – ರಸ್ತೆಗೆ ಓಡಿ ಬಂದ ಸಿಬ್ಬಂದಿ

    ಮುಂಬೈ: ಮಹಾರಾಷ್ಟ್ರದ ರತ್ನಗಿರಿಯ ಎಂಐಡಿಸಿಯ ಎಂ ಫಾರ್ಮಾ ಔಷಧ ಕಂಪನಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ ಸುಮಾರು 11 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

    ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಲ್ಲ ಮತ್ತು ಯಾರೂ ಗಾಯಗೊಂಡಿಲ್ಲ ಎಂದು ವರದಿಯಾಗಿದೆ. ಪ್ಲಾಂಟ್ ನಲ್ಲಿ ಒಂದು ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ ಬೆಂಕಿ ವ್ಯಾಪಿಸಿದೆ. ಈ ಸ್ಫೋಟದ ಸದ್ದು ಸುಮಾರು 5 ಕಿಲೋ ಮೀಟರ್ ದೂರದವರೆಗೆ ಕೇಳಿಸಿದೆ. ಕಂಪನಿ ವ್ಯಾಪ್ತಿಯಲ್ಲಿ ಹೊಗೆ ಆಕಾಶವನ್ನ ತಲುಪಿದ ರೀತಿ ಕಾಣಿಸುತ್ತಿತ್ತು. ಸ್ಫೋಟದ ತೀವ್ರತೆಗೆ ಕಂಪನಿಯ ಕಿಟಕಿಯ ಗಾಜುಗಳು ಪುಡಿ ಪುಡಿಯಾಗಿವೆ.

    ವಿಷಯ ತಿಳಿಯುತ್ತಿದ್ದಂತೆ ಏಳು ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನ ನಿಯಂತ್ರಿಸಿದ್ದಾರೆ. ಸದ್ಯ ಕಂಪನಿಯ ಎಲ್ಲ ಸಿಬ್ಬಂದಿಯನ್ನ ಮನೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ಕಂಪನಿ ಮತ್ತು ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಟ್ಯಾಂಕರ್ ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಫ್ಯಾಕ್ಟರಿಯಲ್ಲಿ ಸ್ಫೋಟವಾಗ್ತಿದ್ದಂತೆ ಸಿಬ್ಬಂದಿ ಹೊರಗೆ ಓಡಿ ಬಂದಿದ್ದಾರೆ. ಇತ್ತ ರಸ್ತೆಯಲ್ಲಿದ್ದ ಜನರು ದಟ್ಟ ಹೊಗೆ ಕಂಡು ಓಡಿ ಹೋಗಿದ್ದಾರೆ.