Tag: ರಥಯಾತ್ರೆ

  • ಪುರಿ ಕಾಲ್ತುಳಿತದಲ್ಲಿ ಮೂವರ ಸಾವು ಪ್ರಕರಣ – ಸಂತ್ರಸ್ತರ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ

    ಪುರಿ ಕಾಲ್ತುಳಿತದಲ್ಲಿ ಮೂವರ ಸಾವು ಪ್ರಕರಣ – ಸಂತ್ರಸ್ತರ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ

    – ಜಗನ್ನಾಥ ಭಕ್ತರಲ್ಲಿ ಕ್ಷಮೆಯಾಚಿಸಿದ ಒಡಿಶಾ ಸಿಎಂ, ಇಬ್ಬರು ಅಧಿಕಾರಿಗಳ ಅಮಾನತು

    ಭುವನೇಶ್ವರ: ಒಡಿಶಾದ (Odisha) ಪುರಿ ಜಗನ್ನಾಥ ರಥಯಾತ್ರೆ (Puri Jagannath Rath Yatra) ವೇಳೆ ಕಾಲ್ತುಳಿತ (Stampede) ಉಂಟಾಗಿ ಮೂವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಇದೀಗ ಘಟನೆಗೆ ಕ್ಷಮೆಯಾಚಿಸಿರುವ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ, ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಘೋಷಣೆ ಮಾಡಿದ್ದಾರೆ.

    ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ನಾನು ಮತ್ತು ನನ್ನ ಸರ್ಕಾರ ಎಲ್ಲಾ ಜಗನ್ನಾಥ ಭಕ್ತರರಲ್ಲಿ ಕ್ಷಮೆಯಾಚಿಸುತ್ತದೆ. ಜೀವ ಕಳೆದುಕೊಂಡ ಭಕ್ತರ ಕುಟುಂಬಗಳಿಗೆ ನಾವು ನಮ್ಮ ಸಂತಾಪ ಸೂಚಿಸುತ್ತೇವೆ. ಈ ಆಳವಾದ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ಅವರಿಗೆ ನೀಡಬೇಕೆಂದು ಮಹಾಪ್ರಭು ಜಗನ್ನಾಥನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: Uttar Pradesh | ರೀಲ್ಸ್ ಮಾಡೋಕೆ ಐಫೋನ್‌ಗಾಗಿ ಬೆಂಗಳೂರು ಯುವಕನ ಕೊಲೆ

    Puri Jagannath

    ತಲಾ 25 ಲಕ್ಷ ಪರಿಹಾರ ಘೋಷಣೆ
    ದುರಂತದಲ್ಲಿ ಪ್ರಾಣ ಕಳೆದುಕೊಂಡ ಭಕ್ತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಅಲ್ಲದೇ ಈ ಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರದವು ನಿಮ್ಮೊಂದಿಗಿರಲಿದೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಆತ್ಮಾಹುತಿ ದಾಳಿಯ ಹೊಣೆ ಹೊರಿಸಲು ಪಾಕ್ ಯತ್ನ – ಭಾರತ ತಿರುಗೇಟು

    ಆಡಳಿತಾತ್ಮಕ ತನಿಖೆಗೆ ಆದೇಶ
    ಇನ್ನೂ ಘಟನೆಗೆ ನಿಖರ ಕಾರಣ ತಿಳಿಯಲು ಪೂರ್ಣ ಪ್ರಮಾಣದ ಆಡಳಿತಾತ್ಮಕ ತನಿಖೆಗೆ ಮಾಝಿ ಆದೇಶಿಸಿದ್ದಾರೆ. ಈ ಬೆನ್ನಲ್ಲೇ ಭದ್ರತಾ ಲೋಪಕ್ಕೆ ಕಾರಳವಾದ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿರುವುದಾಗಿ ವರದಿಗಳು ತಿಳಿಸಿವೆ. ಇದನ್ನೂ ಓದಿ: ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ – ಮೂವರು ಸಾವು, 10 ಮಂದಿಗೆ ಗಾಯ

    Puri Jagannath 2

    ಏನಿದು ಘಟನೆ?
    ಇದೇ ಜೂ.27ರಂದು ಜಗನ್ನಾಥ ದೇವಾಲಯದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವ ಗುಂಡಿಚಾ ದೇವಾಲಯದ ಬಳಿ ಕಾಲ್ತುಳಿತ ಉಂಟಾಗಿತ್ತು. ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿ ಮೂವರು ಮೃತಪಟ್ಟಿದ್ದಾರೆ. ಮೃತರನ್ನು ಪ್ರಭಾತಿ ದಾಸ್, ಬಸಂತಿ ಸಾಹು ಹಾಗೂ ಪ್ರೇಮಕಾಂತ್ ಮೊಹಂತಿ (70) ಎಂದು ಗುರುತಿಸಲಾಗಿದೆ. ಮೂವರೂ ಒಡಿಶಾದ ಖುರ್ದಾ ಜಿಲ್ಲೆಯವರಾಗಿದ್ದು, ರಥಯಾತ್ರೆಗಾಗಿ ಪುರಿಗೆ ಬಂದಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪುರಿ ಜಗನ್ನಾಥ ರಥೋತ್ಸವ ವೇಳೆ ಕಾಲ್ತುಳಿತ – 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ, 40ಕ್ಕೂ ಹೆಚ್ಚು ಜನರ ಸ್ಥಿತಿ ಚಿಂತಾಜನಕ

    ಜಗನ್ನಾಥ ದೇವರು ಮತ್ತು ಅವರ ಅಣ್ಣ ಬಲಭದ್ರ ಮತ್ತು ತಂಗಿ ದೇವಿ ಸುಭದ್ರಾ ದೇವಿಯ ರಥಯಾತ್ರೆಯ ಸಂದರ್ಭದಲ್ಲಿ ಜನದಟ್ಟಣೆ ಹೆಚ್ಚಾಗಿದ್ದರಿಂದ ಕಾಲ್ತುಳಿತ ಸಂಭವಿಸಿತ್ತು. 600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

    Puri Jagannath 3

    ಜಗನ್ನಾಥ ರಥಯಾತ್ರೆ ವಿಶೇಷ ಏನು?
    ಅಹಮದಾಬಾದ್‌ನಲ್ಲಿ ನಡೆಯುವ ರಥಯಾತ್ರೆ ಅದೊಂದು ಐತಿಹಾಸಿಕ ಹಿಂದೂ ಹಬ್ಬ. 1878ರಿಂದಲೂ ಪ್ರತಿವರ್ಷ ರಥೋತ್ಸವ ಜರುಗುತ್ತಿದೆ. ಜಗನ್ನಾಥ ದೇವಸ್ಥಾನವು ಆಷಾಢ ಸುಧ್ ಬಿಜ್‌ನಂದು ರಥಯಾತ್ರೆ ಮೆರವಣಿಗೆಯನ್ನು ಆಯೋಜಿಸುತ್ತದೆ. ಈ ಹಬ್ಬದಂದು ಜಗನ್ನಾಥ, ಬಲರಾಮ ಮತ್ತು ಸುಭದ್ರ ದೇವತೆಗಳನ್ನು ಪೂಜಿಸಲಾಗುತ್ತದೆ. ಇದು 148ನೇ ಜಗನ್ನಾಥ ರಥಯಾತ್ರೆ ಆಗಿದೆ.

  • ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ – ಮೂವರು ಸಾವು, 10 ಮಂದಿಗೆ ಗಾಯ

    ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ – ಮೂವರು ಸಾವು, 10 ಮಂದಿಗೆ ಗಾಯ

    ಭುವನೇಶ್ವರ: ಒಡಿಶಾದ (Odisha) ಪುರಿ ಜಗನ್ನಾಥ ರಥಯಾತ್ರೆ (Puri Jagannath Rath Yatra) ವೇಳೆ ಕಾಲ್ತುಳಿತ (Stampede) ಉಂಟಾಗಿ ಮೂವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ.

    ಜಗನ್ನಾಥ ದೇವಾಲಯದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವ ಗುಂಡಿಚಾ ದೇವಾಲಯದ ಬಳಿ ಕಾಲ್ತುಳಿತ ಉಂಟಾಗಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿ ಮೂವರು ಮೃತಪಟ್ಟಿದ್ದಾರೆ. ಮೃತರನ್ನು ಪ್ರಭಾತಿ ದಾಸ್, ಬಸಂತಿ ಸಾಹು ಹಾಗೂ ಪ್ರೇಮಕಾಂತ್ ಮೊಹಂತಿ (70) ಎಂದು ಗುರುತಿಸಲಾಗಿದೆ. ಮೂವರೂ ಒಡಿಶಾದ ಖುರ್ದಾ ಜಿಲ್ಲೆಯವರಾಗಿದ್ದು, ರಥಯಾತ್ರೆಗಾಗಿ ಪುರಿಗೆ ಬಂದಿದ್ದರು ಎಂದು ತಿಳಿದುಬಂದಿದೆ. ಇನ್ನು ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಶತಕ ಹೊಡೆದು ಹಲವು ದಾಖಲೆ ನಿರ್ಮಿಸಿದ ಸ್ಮೃತಿ ಮಂಧನಾ

    ಇಂದು ಮುಂಜಾನೆ 4:30ರ ವೇಳೆಗೆ ಘಟನೆ ನಡೆದಿದೆ. ಗುಂಡಿಚಾ ದೇವಾಲಯದ ಬಳಿ ರಥಯಾತ್ರೆಯನ್ನು ಕಣ್ತುಂಬಿಕೊಳ್ಳಲು ಭಕ್ತ ಸಮೂಹವೇ ಸೇರಿತ್ತು. ರಥಗಳು ಭಕ್ತರನ್ನು ಸಮೀಪಿಸುತ್ತಿದ್ದಂತೆ ಜನಸಂದಣಿ ಹೆಚ್ಚಾಗಿ ಕಾಲ್ತುಳಿತ ಉಂಟಾಗಿದೆ. ಇದನ್ನೂ ಓದಿ: ನಕಲಿ ಬ್ರಾಂಡೆಡ್ ಜೀನ್ಸ್ ತಯಾರಿಕಾ ಅಡ್ಡೆ ಮೇಲೆ ಪೊಲೀಸ್ ದಾಳಿ – 30 ಲಕ್ಷಕ್ಕೂ ಅಧಿಕ ಮೌಲ್ಯದ ಜೀನ್ಸ್ ಸೀಜ್

  • ಕಾಂಗ್ರೆಸ್‍ನಲ್ಲಿ ಒಂದು ಸಿಎಂ ಕುರ್ಚಿಗಾಗಿ 10 ಜನ ಕಾಯುತ್ತಿದ್ದಾರೆ; ಜೆಡಿಎಸ್‌ಗೆ ಮತ ಕೊಟ್ರೆ ಕಾಂಗ್ರೆಸ್‌ಗೆ ಕೊಟ್ಟಂತೆ – ಅಮಿತ್ ಶಾ

    ಕಾಂಗ್ರೆಸ್‍ನಲ್ಲಿ ಒಂದು ಸಿಎಂ ಕುರ್ಚಿಗಾಗಿ 10 ಜನ ಕಾಯುತ್ತಿದ್ದಾರೆ; ಜೆಡಿಎಸ್‌ಗೆ ಮತ ಕೊಟ್ರೆ ಕಾಂಗ್ರೆಸ್‌ಗೆ ಕೊಟ್ಟಂತೆ – ಅಮಿತ್ ಶಾ

    ಬೀದರ್‌: ವಿಜಯ ಸಂಕಲ್ಪ ಯಾತ್ರೆಯು (Vijaya Sankalpa Yatra) ಬಡವರ ಕಲ್ಯಾಣದ ಸಂಕಲ್ಪವನ್ನು ಹೊಂದಿದೆ. ಇದು ರಾಜ್ಯದ ವಿಕಾಸದ ಸಂಕಲ್ಪದ ಯಾತ್ರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಶುಕ್ರವಾರ ವಿಶ್ಲೇಷಿಸಿದರು.

    ಬೀದರ್ (Bidar) ಜಿಲ್ಲೆ ಬಸವಕಲ್ಯಾಣದಲ್ಲಿ ವಿಜಯ ಸಂಕಲ್ಪ 3ನೇ ರಥ ಯಾತ್ರೆಯನ್ನು ಉದ್ಘಾಟಿಸಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಇಲ್ಲಿನ ಯಾತ್ರೆಯು ಕಲ್ಯಾಣ ಕರ್ನಾಟಕದ ವಿವಿಧ ಕಡೆ ಸಂಚರಿಸಲಿದೆ. ಈ ಭಾಗದ ಎಲ್ಲ ಕ್ಷೇತ್ರಗಳಲ್ಲಿ ಗೆಲುವು ನಮ್ಮದಾಗಬೇಕಿದೆ ಎಂದು ಕಾರ್ಯಕರ್ತರನ್ನು ಹುರಿದುಂಬಿಸಿದರು. ಇದನ್ನೂ ಓದಿ: ಒಬ್ಬ ವ್ಯಕ್ತಿ ತಪ್ಪು ಮಾಡಿದ್ರೆ ಅದು ಪಕ್ಷಕ್ಕೆ ಹೇಗೆ ಬರುತ್ತದೆ – ಗೋವಿಂದ ಕಾರಜೋಳ ಪ್ರಶ್ನೆ

    ರೈಲ್ವೆಯಲ್ಲಿ ಯುಪಿಎ ಸರ್ಕಾರ ಕೊಟ್ಟದ್ದಕ್ಕಿಂತ 9 ಪಟ್ಟು ಹೆಚ್ಚು ಹಣ ಕೊಡಲಾಗಿದೆ. ಲಂಬಾಣಿ ಸಮುದಾಯಕ್ಕೆ ನ್ಯಾಯ ಕೊಟ್ಟಿದ್ದೇವೆ. ಕಾಂಗ್ರೆಸ್‍ನಲ್ಲಿ ಒಂದು ಸಿಎಂ ಕುರ್ಚಿಗಾಗಿ 10 ಜನ ನಾಯಕರಿದ್ದಾರೆ. ಇವರು ಕರ್ನಾಟಕಕ್ಕೆ ಒಳಿತನ್ನು ಕೊಡಲು ಸಾಧ್ಯವೇ? ಕಾಂಗ್ರೆಸ್ ಬಳಿ ಗೆಲುವಿನ ಸೂತ್ರ ಉಳಿದಿಲ್ಲ. ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸ್ಥಿತಿ ಕುಸಿಯುತ್ತಿದೆ. ಮೋದಿ ಅವರ ಸಾವಿಗಾಗಿ ಘೋಷಣೆ ಕೂಗುತ್ತಿದ್ದಾರೆ. ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಟೀಕೆಯಿಂದ ಕಮಲ ಇನ್ನಷ್ಟು ಪ್ರಬಲವಾಗಿ ಹೊರಹೊಮ್ಮಲಿದೆ. ವಿಕಾಸದ ವಿರೋಧಿ ಕಾಂಗ್ರೆಸ್ಸನ್ನು ಸೋಲಿಸಿ. ಮೋದಿಜಿ ಸಾವನ್ನು ಬಯಸುವ ಕಾಂಗ್ರೆಸ್ಸಿಗರ ಸೋಲಿಗೆ ಕಲ್ಯಾಣ ಕರ್ನಾಟಕದ ಜನತೆ ಸಂಕಲ್ಪ ಮಾಡಬೇಕು ಎಂದು ಮನವಿ ಮಾಡಿದರು.

    ಹೈದರಾಬಾದ್ ಕರ್ನಾಟಕದ ಹೆಸರನ್ನು ಕಲ್ಯಾಣ ಕರ್ನಾಟಕ ಎಂದು ಬದಲಿಸಿದ ಬಿಜೆಪಿ, ಈ ಪ್ರದೇಶದ ಅಭಿವೃದ್ಧಿಗೆ ಬದ್ಧವಿದೆ. ಗರಿಷ್ಠ ಹಣವನ್ನೂ ಈ ಭಾಗಕ್ಕೆ ಕೊಟ್ಟಿದ್ದೇವೆ. ಸಿದ್ದರಾಮಯ್ಯ ಸರ್ಕಾರವು ಕಾಂಗ್ರೆಸ್ ಎಟಿಎಂ ಆಗಿತ್ತು. ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಕುಟುಂಬವಾದವನ್ನು ಪೋಷಿಸುವ ಪಕ್ಷಗಳು. ಜೆಡಿಎಸ್‍ಗೆ ಕೊಡುವ ಮತ ಸಂಪೂರ್ಣ ಹಾಳಾಗುತ್ತದೆ. ಅದು ಕಾಂಗ್ರೆಸ್‍ಗೆ ಮತ ಕೊಟ್ಟಂತೆ. ತುಕ್ಡೇ ತುಕ್ಡೇ ಗ್ಯಾಂಗ್ ಬೆಂಬಲಿಸುವ, ಆತಂಕವಾದಕ್ಕೆ ಬೆಂಬಲ ಕೊಡುವ ಕಾಂಗ್ರೆಸ್ ಪಕ್ಷಕ್ಕೆ ಮತ ಕೊಡದಿರಿ ಎಂದು ತಿಳಿಸಿದರು.

    10 ಕೋಟಿ ಶೌಚಾಲಯ ನೀಡಿದ್ದು, 13 ಕೋಟಿ ಜನರಿಗೆ ಸಿಲಿಂಡರ್, ವಿದ್ಯುತ್ ಇಲ್ಲದ ಮನೆಗಳಿಗೆ ವಿದ್ಯುತ್ ಕೊಡಲಾಗಿದೆ. 80 ಕೋಟಿ ಜನರಿಗೆ ಉಚಿತ ಪಡಿತರ, ಉಚಿತ ಕೋವಿಡ್ ಲಸಿಕೆ ನೀಡಲಾಗಿದೆ. ಉಚಿತ ವಿಮೆ, ಆರೋಗ್ಯ ರಕ್ಷಣೆ ಸಹ ಒದಗಿಸಲಾಗಿದೆ. ದೇಶದ ರಕ್ಷಣೆಗಾಗಿ 370ನೇ ವಿಧಿಯನ್ನು ರದ್ದು ಮಾಡಲಾಯಿತು. ಕಾಂಗ್ರೆಸ್ ಮತ ಬ್ಯಾಂಕ್ ಪರವಾಗಿದೆ. ನಾವು ಮತಬ್ಯಾಂಕಿನ ಕಡೆ ಗಮನ ಕೊಡುತ್ತಿಲ್ಲ. ನಮಗೆ ದೇಶದ ಸುರಕ್ಷತೆ ಮುಖ್ಯ. ರಾಮಮಂದಿರ ಬೇಕಿತ್ತೇ ಅಥವಾ ಬೇಡವಾಗಿತ್ತೇ? ಮಂದಿರ ವಿಚಾರವನ್ನು ವಿಳಂಬ ಮಾಡಿದ್ದೇ ಕಾಂಗ್ರೆಸ್. ಆದರೆ ಮೋದಿಜಿ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿದರು. ಕಾಶಿ, ಕೇದಾರನಾಥ, ಸೋಮನಾಥ ಮಂದಿರದ ಅಭಿವೃದ್ಧಿ ಮಾಡುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ 50 ಟಿಕೆಟ್ ಹೊಸಬರಿಗೆ ಫಿಕ್ಸ್?

    ರಸ್ತೆ, ವಿಮಾನ ನಿಲ್ದಾಣ, ನಲ್ಲಿ ನೀರಿನ ಸಂಪರ್ಕ, ಶಿಕ್ಷಣ ಕ್ಷೇತ್ರ, ನೀರಾವರಿಗೆ ಗರಿಷ್ಠ ಹಣ ನೀಡಿದ್ದೇವೆ. ನಮ್ಮ ಕ್ಲಿನಿಕ್ ಸೇರಿ ಮನೆ, ಮನೆಗೆ ನೀರಿನ ಸೌಕರ್ಯ ಕೊಡಲಾಗುತ್ತಿದೆ. ಕಿಸಾನ್ ಸಮ್ಮಾನ್ ಮೂಲಕ ಮೋದಿಜಿ- ಯಡಿಯೂರಪ್ಪ ಸರ್ಕಾರ ಹಣ ನೀಡಿತು. ಜಗಜ್ಯೋತಿ ಬಸವೇಶ್ವರರು ಪ್ರಜಾಪ್ರಭುತ್ವದ ಸಂದೇಶ ನೀಡಿದರು. ಮೋದಿಜಿ ಗೌರವಪೂರ್ಣವಾಗಿ ಇದನ್ನು ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಯಡಿಯೂರಪ್ಪ- ಬೊಮ್ಮಾಯಿ ಅವರು ಇಲ್ಲಿನ ಅಭಿವೃದ್ಧಿಗೆ ಗರಿಷ್ಠ ಅನುದಾನ ಕೊಟ್ಟಿದ್ದಾರೆ ಎಂದರು.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮಾತನಾಡಿ, ಕೋವಿಡ್ ನಿಯಂತ್ರಣಕ್ಕೆ ಕಾರಣಕರ್ತರು ಪ್ರಧಾನಿ ಮೋದಿಜಿ. ಅಮಿತ್ ಶಾ ಅವರು ಕೋವಿಡ್ ನಿಯಂತ್ರಣಕ್ಕೆ ಶ್ರಮಿಸಿದರು. ದೇಶದ ಆರ್ಥಿಕ ಸ್ಥಿತಿಯನ್ನು ಸರಿ ದಾರಿಗೆ ತಂದು ದೇಶವನ್ನು ಮುನ್ನಡೆಸಿದವರು ಮೋದಿಜಿ. ಕಾಂಗ್ರೆಸ್ ಅಧಿಕಾರದಲ್ಲಿ ಇರುತ್ತಿದ್ದರೆ ದೇಶದಲ್ಲಿ ಅಲ್ಲೋಲ ಕಲ್ಲೋಲ ಆಗುತ್ತಿತ್ತು. ಸಾವಿರಾರು ಸಾವು ಆಗುತ್ತಿತ್ತು. ಆದರೆ ಮೋದಿಜಿ ಅಧಿಕಾರದಲ್ಲಿ ಇದ್ದ ಕಾರಣ ಹಾಗಾಗಲಿಲ್ಲ ಎಂದು ವಿವರಿಸಿದರು.

    ದೇಶದ ಅಮೃತ ಕಾಲಕ್ಕೆ ಭದ್ರ ಬುನಾದಿ ಹಾಕಲು 2023ರಲ್ಲಿ ಕರ್ನಾಟಕದಲ್ಲಿ ಬಿಜೆಪಿ, 2024ರಲ್ಲಿ ದೇಶದಲ್ಲಿ ಬಿಜೆಪಿ ಅಧಿಕಾರ ಪಡೆಯಬೇಕಿದೆ. ಬಿಜೆಪಿಗೆ ಮತ ಹಾಕಿ; ಮತ ಹಾಕಿಸಿ ಎಂದು ಮನವಿ ಮಾಡಿದರಲ್ಲದೇ, ಸಾಲದ ಹೊರೆ ಕೊಟ್ಟದ್ದು ಕಾಂಗ್ರೆಸ್. ಜನರಿಗೆ ಮೋಸ ಮಾಡುವುದು, ಸುಳ್ಳು, ಭ್ರಷ್ಟಾಚಾರ ಎಂದರೆ ಅದು ಕಾಂಗ್ರೆಸ್. ಜಾತಿ, ಮತಗಳನ್ನು ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ರಾಜ್ಯದ ಹಿನ್ನಡೆಗೆ ಕಾಂಗ್ರೆಸ್ ಕಾರಣ. ನೈಜ ಸಾಮಾಜಿಕ ನ್ಯಾಯವನ್ನು ಬಿಜೆಪಿ ಮೀಸಲಾತಿ ಮೂಲಕ ಕೊಟ್ಟಿದೆ. ಇದು ಕಾಂಗ್ರೆಸ್ ಹೊಟ್ಟೆಯಲ್ಲಿ ತಳಮಳಕ್ಕೆ ಕಾರಣವಾಗಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ನೀಡಲಾಗುತ್ತಿದೆ. ನಮ್ಮದು ಜನಸಮಸ್ಯೆಗೆ ಸ್ಪಂದಿಸುವ ಸರ್ಕಾರ. ಮತ್ತೆ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸದಿಂದ ನುಡಿದರು. ಇದನ್ನೂ ಓದಿ: ನನಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ಆಫರ್ ಬರಲಿಲ್ಲ: ಸೋಮಶೇಖರ್ ಸ್ಪಷ್ಟನೆ

    ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (Yediyurappa) ಮಾತನಾಡಿ, 4 ರಥಗಳು 224 ಕ್ಷೇತ್ರಗಳಿಗೆ ಭೇಟಿ ಕೊಡಲಿವೆ. ಮಾರ್ಚ್ 25ರಂದು ದಾವಣಗೆರೆಯಲ್ಲಿ ಬೃಹತ್ ಸಭೆ ನಡೆಯಲಿದೆ. ಮಹಾನ್ ನಾಯಕ ನರೇಂದ್ರ ಮೋದಿಜಿ ಅವರು ಬರಲಿದ್ದಾರೆ. ಬಸವ ಕಲ್ಯಾಣ ಹೇಗಿತ್ತು? ಇವತ್ತು ಸಾವಿರಾರು ಕೋಟಿ ಹಣದಿಂದ ಹೇಗೆ ಅಭಿವೃದ್ಧಿ ಆಗಿದೆ ಎಂದು ಗಮನಿಸಿ. ಮೋದಿಜಿ, ಅಮಿತ್ ಶಾಜಿ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ. ಅದಕ್ಕೆ ನಿಮ್ಮ ಬೆಂಬಲ ಇರಲಿ ಎಂದರಲ್ಲದೆ, ಕಾಂಗ್ರೆಸ್‍ನ ಹಣ, ತೋಳು ಬಲದ ಮೂಲಕ ಗೆಲ್ಲುವುದು ತಿರುಕನ ಕನಸಷ್ಟೇ. ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ತಿಳಿಸಿದರು.

    ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಾತನಾಡಿ, ಬಸವಣ್ಣನ ಕರ್ಮಭೂಮಿಯಿಂದ ಈ ಯಾತ್ರೆ ಆರಂಭವಾಗಿದೆ. ಇದಕ್ಕೆ ಬಸವಣ್ಣನ ಪ್ರೇರಣೆ ಇದೆ. ಬಸವ ಕಲ್ಯಾಣವು ಜನರ ಆಕರ್ಷಣೆಯ ಕೇಂದ್ರಬಿಂದು. ಇಡೀ ರಾಜ್ಯದಲ್ಲಿ ಬಿಜೆಪಿ ಪರ ಅಲೆ ಎದ್ದಿದೆ. ನರೇಂದ್ರ ಮೋದಿಜಿ ಅವರ ಸಾಧನೆಗಳನ್ನು ಜಗತ್ತೇ ಕೊಂಡಾಡುತ್ತಿದೆ.‌ ಕೋವಿಡ್ ನಿಯಂತ್ರಣದ ಮಹತ್ವದ ಕಾರ್ಯವನ್ನು ನಮ್ಮ ಪ್ರಧಾನಿ ಮೋದಿಜಿ ಮಾಡಿದ್ದಾರೆ. 140 ಕೋಟಿ ಜನರಿಗೆ ಉಚಿತ ಲಸಿಕೆ ನೀಡಿದ್ದಾರೆ. ಶ್ರೀಲಂಕಾ- ಪಾಕಿಸ್ತಾನಗಳು ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿವೆ. ಪಾಕ್ ಜನತೆ ಮೋದಿಜಿ ಅವರಂಥ ನಾಯಕತ್ವ ಬಯಸುತ್ತಿದ್ದಾರೆ. ದೇಶದ ಸಾಧನೆ, ದೇಶ, ರಾಜ್ಯಗಳ ಅಭಿವೃದ್ಧಿಯನ್ನು ಗಮನಿಸಿ ಮತ್ತೆ ಬಿಜೆಪಿ ಆಡಳಿತಕ್ಕೆ ಅವಕಾಶ ಕೊಡಬೇಕೆಂದು ವಿನಂತಿಸಿದರು. ಇದನ್ನೂ ಓದಿ: ಅಮಿತ್ ಶಾ ಬರುತ್ತಿರುವುದೇ ಇಲ್ಲಿನ ‘ಸಂಪತ್ತು’ ಕೊಂಡೊಯ್ಯುವುದಕ್ಕಾ- ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

    ಸಚಿವ ಬಿ.ಶ್ರೀರಾಮುಲು, ರಾಜ್ಯದ ಸಹ ಉಸ್ತುವಾರಿ ಡಿ.ಕೆ.ಅರುಣಾ, ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್, ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯ ಸಚಿವ ಪ್ರಭು ಚೌಹಾಣ್, ಸಂಸದ ಉಮೇಶ್ ಜಾಧವ್, ಶಾಸಕ ರಘುನಾಥ ಮಲ್ಕಾಪುರೆ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್, ಸಿದ್ದರಾಜು, ಶಾಸಕ ಶರಣು ಸಲಗರ್, ಶಾಸಕರು, ಜನಪ್ರತಿನಿಧಿಗಳು ಹಾಗೂ ಪಕ್ಷದ ಮುಖಂಡರು ಭಾಗವಹಿಸಿದ್ದರು.

  • ಕಾಂಗ್ರೆಸ್‌ಗೆ ಈ ಚುನಾವಣೆ ಬಳಿಕ ತಲೆ ಎತ್ತದಂತೆ‌ ಅಂತಿಮ ಮೊಳೆ: ಆರ್.ಅಶೋಕ್

    ಕಾಂಗ್ರೆಸ್‌ಗೆ ಈ ಚುನಾವಣೆ ಬಳಿಕ ತಲೆ ಎತ್ತದಂತೆ‌ ಅಂತಿಮ ಮೊಳೆ: ಆರ್.ಅಶೋಕ್

    ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ (Congress) ಇನ್ನು ಯಾವತ್ತೂ ತಲೆ ಎತ್ತದಂತೆ ಅಂತಿಮ ಮೊಳೆ ಹೊಡೆಯುವ ಚುನಾವಣೆ ಇದಾಗಲಿದೆ ಎಂದು ರಾಜ್ಯದ ಕಂದಾಯ ಸಚಿವ ಆರ್.ಅಶೋಕ್ (R.Ashok) ತಿಳಿಸಿದರು.

    ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಂಪೇಗೌಡರು ಕಟ್ಟಿಸಿದ ಆವಟಿಯ ಚನ್ನಕೇಶವ ದೇವಾಲಯದಲ್ಲಿ ಇದೇ 3ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪೂಜೆ ಬಳಿಕ 4ನೇ ರಥ ಉದ್ಘಾಟನೆ ಆಗಲಿದೆ. ಬಳಿಕ ದೇವನಹಳ್ಳಿ ಶಾಲಾ ಮೈದಾನದಲ್ಲಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಾರ್ವಜನಿಕ ಸಭೆ ಇದ್ದು, 30-40 ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎಂದು ವಿವರ ನೀಡಿದರು. ಇದನ್ನೂ ಓದಿ: ಸನಾತನ ಧರ್ಮ, ರಾಷ್ಟ್ರೀಯತೆ ಮೈಗೂಡಿಸಿಕೊಂಡ ಪಕ್ಷ ಸೇರಿದ್ದೇನೆ: ಭಾಸ್ಕರ್‌ ರಾವ್‌

    ಡಬಲ್ ಎಂಜಿನ್ ಸರ್ಕಾರ ಮರುಸ್ಥಾಪನೆಗೆ ಗೆಲ್ಲುವಂಥ ಹಲವಾರು ಸೂತ್ರಗಳನ್ನು ಪಕ್ಷ ಸಿದ್ಧಪಡಿಸಿದೆ. ಜನತೆಗೆ ಮುಟ್ಟಿರುವ ಕಾರ್ಯಕ್ರಮಗಳು ಜನರಿಗೆ ತಿಳಿಯಬೇಕೆಂದು ವಿಜಯ ಸಂಕಲ್ಪ ಯಾತ್ರೆ 4 ರಥಗಳ ಮೂಲಕ ನಡೆಯಲಿದೆ. ನನ್ನ ನೇತೃತ್ವದ ತಂಡವು 3ರಂದು ರ‍್ಯಾಲಿ ನಡೆಸಲಿದೆ. ಅಶ್ವಥ್ ನಾರಾಯಣ್, ಗೋಪಾಲಯ್ಯ, ಸೋಮಶೇಖರ್, ಡಾ.ಸುಧಾಕರ್ ಇನ್ನೂ ಹಲವಾರು ಎಂಎಲ್‍ಸಿಗಳು, ಲೋಕಸಭಾ ಸದಸ್ಯ ಪಿ.ಸಿ.ಮೋಹನ್ ಇವರೆಲ್ಲರೂ ನಮ್ಮ ತಂಡದಲ್ಲಿದ್ದಾರೆ. 40 ನಾಯಕರು ವಿವಿಧೆಡೆ ನಮ್ಮ ರಥಯಾತ್ರೆಯಲ್ಲಿ ಭಾಗವಹಿಸುತ್ತಾರೆ ಎಂದು ಹೇಳಿದರು.

    ಕರ್ನಾಟಕದಲ್ಲಿ ನಮ್ಮ ತಂಡ 17 ಸಾರ್ವಜನಿಕ ಸಭೆಗಳನ್ನು ಮಾಡಲಿದೆ. 7 ಮೋರ್ಚಾಗಳ ಸಭೆಯೂ ನಡೆಯಲಿದೆ. ದಿನಾಂಕಗಳನ್ನು ನಿರ್ಧರಿಸಲಾಗಿದೆ. ಎಲ್ಲ ಕಡೆ ರೋಡ್ ಷೋ, ಸಾರ್ವಜನಿಕ ಸಭೆ ಇರುತ್ತದೆ. ಬೆಂಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಭಾಗದಲ್ಲಿ ನಮ್ಮ ರಥದ ಮೂಲಕ ಸಂಚರಿಸುತ್ತೇವೆ. ಕೊನೆಗೆ ದಾವಣಗೆರೆಯಲ್ಲಿ 25 ರಂದು ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ರಥಗಳ ಸಂಚಾರದ ಸಮಾರೋಪ ನಡೆಯಲಿದೆ. ಬೃಹತ್ ರ‍್ಯಾಲಿ ಮೂಲಕ ಮೋದಿ ಅವರು ಪಾಂಚಜನ್ಯದ ಶಂಖನಾದ ಮಾಡಲಿದ್ದಾರೆ. ಒಂದು ವಾರದಿಂದ ತಯಾರಿ ನಡೆದಿದೆ. ದೇವನಹಳ್ಳಿಯಲ್ಲಿ ಇವತ್ತು ವೇದಿಕೆ ವೀಕ್ಷಿಸಲಿದ್ದೇನೆ ಎಂದರು. ಇದನ್ನೂ ಓದಿ: ದುಡ್ಡು ಕೊಟ್ಟು ಮೋದಿ ರೋಡ್ ಶೋಗೆ ಜನ ಕರೆಸುತ್ತಾರೆ – ಸಿದ್ದರಾಮಯ್ಯ ಕಿಡಿ

    ಕಳೆದ 3 ತಿಂಗಳಿನಿಂದ ನಡೆದ ಸರ್ವೇಗಳಲ್ಲಿ ಬಿಜೆಪಿ ಮೊದಲ ಸ್ಥಾನದಲ್ಲಿದೆ. ನಾವು ಬಹುಮತ ದಾಟಿ ಅತಿ ಹೆಚ್ಚು ಸ್ಥಾನಗಳೊಂದಿಗೆ ವಿಧಾನಸಭೆಯಲ್ಲಿ ಅಧಿಕಾರ ಪಡೆಯಲಿದ್ದೇವೆ. ಹಳೆ ಮೈಸೂರು ಭಾಗದಲ್ಲಿ ಪಕ್ಷ ಹೆಚ್ಚಿನ ಸಂಖ್ಯೆಯ ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಕಾಂಗ್ರೆಸ್ ನಾಯಕತ್ವದ ಕೊರತೆಯಿಂದ ಬಳಲುತ್ತಿದೆ. ಅದು ಬಂಜರು ಭೂಮಿಯ ಪಕ್ಷ. ಮರಳುಗಾಡಿನ ಪಕ್ಷ ಅದು. ಕಾಂಗ್ರೆಸ್ ಇಲ್ಲಸಲ್ಲದ ಆರೋಪ ಮಾಡುತ್ತಿದೆ ಎಂದು ಕಾಂಗ್ರೆಸ್‌ ವಿರುದ್ಧ ಟೀಕಾಪ್ರಹಾರ ನಡೆಸಿದರು. ಇದನ್ನೂ ಓದಿ: ಜೆಡಿಎಸ್‌ಗೆ ಮತ ಹಾಕಿದ್ರೆ ಬಿಜೆಪಿಗೆ ಮತ ಹಾಕಿದಂತೆ: ಜಮೀರ್ ಅಹ್ಮದ್

    ಮುಂದಿನ ಬಿಜೆಪಿ ಸಭೆ, ಸಮಾರಂಭಗಳು ಅತಿ ಹೆಚ್ಚು ಶಾಸಕತ್ವದೊಂದಿಗೆ ಬಿಜೆಪಿ ಗೆಲುವಿಗೆ ಕಾರಣವಾಗಲಿದೆ. ಬಿಜೆಪಿ ಅಶ್ವಮೇಧ ಆರಂಭವಾಗಿದೆ. ರಾಜ್ಯದಾದ್ಯಂತ ಬಿಜೆಪಿ ಹವಾ ಇದೆ. ನಮ್ಮಲ್ಲಿ ಲೀಡರ್‌ಶಿಪ್‌ ಇದೆ. ಅವರಲ್ಲಿ (ಕಾಂಗ್ರೆಸ್) ಗುಂಪುಗಾರಿಕೆ ಇದೆ ಎಂದು ಆರೋಪಿಸಿದರು. ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಬಿ.ನಾರಾಯಣಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

  • ಮಾರ್ಚ್ 1ರಿಂದ ಬಿಜೆಪಿ ರಥಯಾತ್ರೆ: ಬೊಮ್ಮಾಯಿ

    ಮಾರ್ಚ್ 1ರಿಂದ ಬಿಜೆಪಿ ರಥಯಾತ್ರೆ: ಬೊಮ್ಮಾಯಿ

    ಬೆಂಗಳೂರು: ಮಾರ್ಚ್ 1ರಿಂದ ಬಿಜೆಪಿ (BJP) ರಥಯಾತ್ರೆ ಆರಂಭವಾಗಲಿದೆ. ಇದು ಚುನಾವಣಾ ಸಮರದ ಸಮಯ. ನಾವೆಲ್ಲರೂ ದಣಿವರಿಯದೆ ಕೆಲಸ ಮಾಡಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

    ನಗರದ ಖಾಸಗಿ ಹೋಟೆಲ್‍ನಲ್ಲಿ ಇಂದು ಮಂಡಲ ಪ್ರಭಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್ ನಂತರದಲ್ಲಿ ರಾಜ್ಯವು ಅತಿ ಹೆಚ್ಚು ಜಿಎಸ್‍ಟಿ ಸಂಗ್ರಹಿಸುತ್ತಿದ್ದು, ಗುರಿ ಮೀರಿ ಶೇ 23ರಷ್ಟು ಹೆಚ್ಚು ಕಂದಾಯ ಸಂಗ್ರಹವಾಗಿದೆ. ಬಡವರ ಪರವಾಗಿ ನಮ್ಮ ನಿಲುವಿದೆ. ಕಮಲ ಅರಳಿಸಿ, ಅಧಿಕಾರ ಗಳಿಸುವ ಸಂಕಲ್ಪ ನಮ್ಮದಾಗಬೇಕು ಎಂದು ಹೇಳಿದರು. ಇದನ್ನೂ ಓದಿ: ಅಕ್ರಮ ಕೆಲಸಗಳಿಗೆ ಕೈ ಹಾಕ್ಬೇಡಿ, ನಾವು ಅಧಿಕಾರಕ್ಕೆ ಬಂದ್ಮೇಲೆ ತನಿಖೆ ನಡೆಸ್ತೀವಿ: ಸಿದ್ದರಾಮಯ್ಯ ಎಚ್ಚರಿಕೆ

    ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಮಸ್ಯೆ ಪರಿಹರಿಸಿದ್ದೇವೆ. ಪ್ರವಾಹ ಸಂತ್ರಸ್ತರಿಗೆ ಹೆಚ್ಚು ಹಣ ಅನುದಾನ ಕೊಟ್ಟಿದ್ದೇವೆ. ಸ್ಪಂದನಾಶೀಲ, ಜನಪರ ಬಿಜೆಪಿ ಸರ್ಕಾರ ರಾಜ್ಯದಲ್ಲಿದೆ. ಕ್ಷೇತ್ರದಲ್ಲಿ ಫಲಾನುಭವಿಗಳ ಸಮ್ಮೇಳನ ನಡೆಸಲು ತಿಳಿಸಿದರು.

    ಮಂಡಲ ಪ್ರಭಾರಿಗಳ ಮೇಲೆ ಗುರುತರವಾದ ಜವಾಬ್ದಾರಿ ಇದೆ. ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಹತ್ತು ಹಲವು ಕಾರ್ಯಕ್ರಮ ಅನುಷ್ಠಾನಕ್ಕೆ ತಂದಿದೆ. ಕರ್ನಾಟಕದಲ್ಲಿ 2019ರಲ್ಲಿ ಯಡಿಯೂರಪ್ಪ ಅವರ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಕೊಟ್ಟಿದ್ದಲ್ಲದೆ, ಕೋವಿಡ್‌ನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದೆ. ನಾನು ಪ್ರವಾಹವನ್ನು ಸಮರ್ಪಕವಾಗಿ ನಿಭಾಯಿಸಿದ್ದೇನೆ. ಅಲ್ಲದೆ ನಮ್ಮ ರಾಜ್ಯ ಸರ್ಕಾರ ಅನೇಕ ಜನೋಪಯೋಗಿ ಕಾರ್ಯಕ್ರಮ ಜಾರಿಗೊಳಿಸಿದೆ. ಇವೆಲ್ಲವನ್ನೂ ಜನರಿಗೆ ತಿಳಿಸಬೇಕಿದೆ ಎಂದರು. ಇದನ್ನೂ ಓದಿ: Shivamogga Airport ನಾಮಕರಣ ವಿವಾದ- ಉದ್ಘಾಟನೆಗೆ ಡೇಟ್ ಫಿಕ್ಸ್ ಆದ್ರೂ ಫೈನಲ್ ಆಗಿಲ್ಲ ಹೆಸರು!

    ನಕಾರಾತ್ಮಕವಾಗಿ ಮತ ಪಡೆಯಲು ಕಾಂಗ್ರೆಸ್-ಜೆಡಿಎಸ್ ಪ್ರಯತ್ನ ಮಾಡುತ್ತಿವೆ. ನಾವು ಧನಾತ್ಮಕ ರೀತಿಯಲ್ಲಿ ಜನಮತ ಪಡೆಯಲು ಮುಂದಾಗುತ್ತೇವೆ. ಜನರ ಮುಂದೆ ರಿಪೋರ್ಟ್ ಕಾರ್ಡ್ ಇಟ್ಟು ಪಕ್ಷಕ್ಕೆ ಗೆಲುವು ತಂದು ಕೊಡಬೇಕಿದೆ. ಸ್ವಾರ್ಥ, ಸ್ವಜನಪಕ್ಷಪಾತ, ಭ್ರಷ್ಟಾಚಾರ ಮಾಡಿದ ಕಾಂಗ್ರೆಸ್ ಪಕ್ಷವು ಇನ್ನೊಬ್ಬರ ಅವಹೇಳನ ಮಾಡಿ ಮತ ಪಡೆಯಲು ಮುಂದಾಗಿದೆ. ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ನಿರಂತರವಾಗಿ ಮಾಡಿದ್ದಾರೆ. ಕೇಂದ್ರದ ಅನುದಾನ ಬಳಸಿ ಪಡಿತರ ಅಕ್ಕಿ ಕೊಟ್ಟರೂ ಅನ್ನ ಭಾಗ್ಯ ತಾವೇ ಕೊಟ್ಟಿದ್ದಾಗಿ ಬಿಂಬಿಸಿದ್ದರು ಎಂದು ಟೀಕಿಸಿದರು.

    ಜನರ ಕಣ್ಣಿಗೆ ಮಣ್ಣೆರಚುವ ಕಾರ್ಯವನ್ನು ಸದಾ ಕಾಲ ಕಾಂಗ್ರೆಸ್ ಮಾಡಿತ್ತು. ಅವರ ಅವಧಿಯಲ್ಲಿ ರಾಜ್ಯವು ಎಲ್ಲ ರಂಗಗಳಲ್ಲಿ ಹಿಂದುಳಿದಿತ್ತು. ಅವರ ಕಾಲದಲ್ಲಿ ದಾಖಲೆ ಪ್ರಮಾಣದಲ್ಲಿ ಭ್ರಷ್ಟಾಚಾರ ಆಗಿತ್ತು. ಅಕ್ಕಿ, ಎಸ್‍ಸಿ, ಎಸ್‍ಟಿ ಹಾಸ್ಟೆಲ್‌ಗಳ ಹಾಸಿಗೆ, ದಿಂಬಿನಲ್ಲಿ ಭ್ರಷ್ಟಾಚಾರ ಆಗಿತ್ತು. ನೀರಾವರಿ, ನೇಮಕಾತಿಯಲ್ಲೂ ಭ್ರಷ್ಟಾಚಾರ, ಬಿಡಿಎದಲ್ಲಿ ರೀಡೂ ಭ್ರಷ್ಟಾಚಾರ, ಸೋಲಾರ್ ವಿದ್ಯುತ್ ವಿಚಾರದಲ್ಲೂ ಭ್ರಷ್ಟಾಚಾರ ಮಾಡಿದ್ದರು ಎಂದು ಆರೋಪಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆಯ ಬಸ್ ಮದುವೆಯಲ್ಲಿ ಪ್ರತ್ಯಕ್ಷ- ಜನರಲ್ಲಿ ಅಚ್ಚರಿ

    ಭ್ರಷ್ಟಾಚಾರ ಮುಚ್ಚಿ ಹಾಕಲು ಲೋಕಾಯುಕ್ತ ಸಂಸ್ಥೆಯನ್ನೇ ಮುಗಿಸಿಬಿಟ್ಟರು. ಎಸಿಬಿ ಮುಂದೆ ಸಿದ್ದರಾಮಯ್ಯರದ್ದೂ ಸೇರಿದಂತೆ ಸುಮಾರು 60 ಕೇಸುಗಳಿದ್ದು, ಎಲ್ಲದಕ್ಕೂ ಬಿ ರಿಪೋರ್ಟ್ ಕೊಟ್ಟಿದ್ದರು. ಕಾಂಗ್ರೆಸ್ ತಮ್ಮ ಮೇಲಿನ ಆರೋಪಗಳಿಗೆ ಮೊದಲು ಉತ್ತರಿಸಬೇಕು. ಬಣ್ಣ ಬಯಲಾಗುವ ಭೀತಿ ಕಾಂಗ್ರೆಸ್ಸಿಗರದು. ಆರೋಪಗಳ ಮೇಲೆ ಕೌದಿ ಹಾಕಿ ಮುಚ್ಚಿ ಹಾಕುವ ಪ್ರಯತ್ನ ಸಿದ್ದರಾಮಯ್ಯರದ್ದು. ನಮ್ಮ ಮೇಲಿನ ಆರೋಪದ ದಾಖಲೆ ಕೊಟ್ಟರೆ ಅದನ್ನು ತನಿಖೆ ಮಾಡಿಸಲು ಸಿದ್ಧ. ನೀರಾವರಿ ನಿಗಮದಲ್ಲಿ 2 ಸಮಿತಿ ಇತ್ತು. ಇವೆರಡನ್ನೂ ಮುಚ್ಚಿ ಹಾಕಿದವರು ಕಾಂಗ್ರೆಸ್ಸಿಗರು. ಆ ಮೂಲಕ ಭ್ರಷ್ಟಾಚಾರಕ್ಕೆ ರಹದಾರಿ ಮಾಡಿದ್ದರು ಎಂದು ಆಕ್ಷೇಪಿಸಿದರು.

    ಕಾಂಗ್ರೆಸ್ ವೈಫಲ್ಯ, ಬಿಜೆಪಿಯ ಮನೆಮನೆಗೆ ನಲ್ಲಿ ನೀರು ಯೋಜನೆ ಸೇರಿದಂತೆ ವಿವಿಧ ಜನಪರ ಯೋಜನೆಗಳ ವಿವರವನ್ನು ಜನರಿಗೆ ತಿಳಿಸಬೇಕು. ಮನೆ, ಕರೆಂಟ್, ಶೌಚಾಲಯ, ಉಚಿತ ಪಡಿತರ- ಹೀಗೆ ಕುಟುಂಬಗಳ ಸಶಕ್ತೀಕರಣ ನಡೆದಿದೆ. ಕಿಸಾನ್ ಸಮ್ಮಾನ್ ಯೋಜನೆ, ಸಂಧ್ಯಾ ಸುರಕ್ಷಾ, ವಿಧವಾ ವೇತನ, ಮಕ್ಕಳಿಗೆ ಸೈಕಲ್, ವಿದ್ಯಾನಿಧಿಯಂಥ ಯೋಜನೆಗಳನ್ನು ಜನರಿಗೆ ತಿಳಿಸಿ. ದುಡಿಯುವ ವರ್ಗಕ್ಕೆ ಬಲ ತುಂಬಲು ಕಾಯಕ ಯೋಜನೆ ಜಾರಿಗೊಳಿಸಿದ್ದೇವೆ. ಇಂಥ ಫಲಾನುಭವಿಗಳನ್ನು ಭೇಟಿ ಮಾಡಿ ನಮ್ಮ ಅಭಿಮಾನಿಗಳನ್ನು ಹೆಚ್ಚಿಸಿ. ಎಸ್‍ಸಿ, ಎಸ್‍ಟಿ ಮೀಸಲಾತಿ ಹೆಚ್ಚಳವನ್ನೂ ಜನರಿಗೆ ತಿಳಿಸಬೇಕು. ಲಂಬಾಣಿ ತಾಂಡಾದ ಜನರಿಗೆ ನ್ಯಾಯ ಕೊಟ್ಟದ್ದನ್ನು ತಿಳಿಸಿಕೊಡಿ ಎಂದು ತಿಳಿಸಿದರು.

    ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ ಮತ್ತು ರಾಷ್ರ್ಟೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಪಕ್ಷದ ಪ್ರಮುಖರು ಭಾಗವಹಿಸಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮೈಸೂರಿನಲ್ಲಿ ‘ವಿರಾಟಪುರ ವಿರಾಗಿ’ ಸಿನಿಮಾ ರಥಯಾತ್ರೆಗೆ ಚಾಲನೆ ನೀಡಿದ ಸುತ್ತೂರುಶ್ರೀ

    ಮೈಸೂರಿನಲ್ಲಿ ‘ವಿರಾಟಪುರ ವಿರಾಗಿ’ ಸಿನಿಮಾ ರಥಯಾತ್ರೆಗೆ ಚಾಲನೆ ನೀಡಿದ ಸುತ್ತೂರುಶ್ರೀ

    ಹಾನಗಲ್ಲ ಕುಮಾರ ಶಿವಯೋಗಿಗಳ ಜೀವನ ಚರಿತ್ರೆಯನ್ನು ಆಧರಿಸಿದ ‘ವಿರಾಟಪುರ ವಿರಾಗಿ’ ಸಿನಿಮಾದ ಧ್ವನಿ ಸುರುಳಿ ಬಿಡುಗಡೆ ಸಮಾರಂಭ ಮತ್ತು ರಥಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ಮೈಸೂರಿನಲ್ಲಿ ನಡೆಯಿತು. ಮೈಸೂರು ಸುತ್ತೂರಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ, ನಿಂಬಾಳ ಶಾಂತಲಿಂಗೇಶ್ವರ ವಿರಕ್ತಮಠದ ಜಡೆಯ ಶಾಂತಲಿಂಗೇಶ್ವರ ಸ್ವಾಮಿಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮಗಳು ನಡೆದವು. ಗೊ.ರು ಚನ್ನಬಸಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ದೇಶಕ ಲಿಂಗದೇವರು, ಹಲವು ಮಠಗಳ ಮಠಾಧೀಶರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

    ರಾಜ್ಯಾದ್ಯಂತ ಆರು ರಥಗಳು, ಹದಿಮೂರು ದಿನಗಳ ಕಾಲ, ಏಳು ಸಾವಿರ ಕಿಲೋ ಮೀಟರ್ ಪಯಣವನ್ನು ಮಾಡಲಿವೆ. ಈ ರಥಯಾತ್ರೆಯಲ್ಲಿ ಒಟ್ಟು 360 ಸಭೆಗಳನ್ನೂ ಆಯೋಜನೆ ಮಾಡಲಾಗಿದ್ದು, ಒಂದು ಕೋಟಿ ಜನರನ್ನು ಮುಟ್ಟುವ ಗುರಿಯನ್ನು ಹೊಂದಲಾಗಿದೆ ಎಂದು ಲಿಂಗದೇವರು ತಿಳಿಸಿದ್ದಾರೆ. ಡಿಸೆಂಬರ್ 20ರಂದು ಶುರುವಾಗಲಿರುವ ಈ ರಥಯಾತ್ರೆಯು ಜನವರಿ 1 ರಂದು ಗದಗನಲ್ಲಿ ಮುಕ್ತಾಯಗೊಳ್ಳಲಿದೆ.

    ಸಿನಿಮಾ ಕುರಿತು ಮತ್ತೋರ್ವ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ‘ಕುಮಾರ ಶಿವಯೋಗಿಗಳು ಒಂದು ದಂತಕಥೆ. ಒಬ್ಬ ಮನುಷ್ಯ ತನ್ನ ಜೀವಿತಾಧಿಯಲ್ಲಿ ಏನೇನು ಮಾಡಲು ಅಸಾಧ್ಯವೋ ಅದನ್ನೆಲ್ಲಾ ಸಾಧ್ಯ ಮಾಡಿದ್ದಾರೆ. ಗಾಂಧೀಜಿಯವರು ಭಾರತಕ್ಕೆ ಬರುವ ಕೆಲವು ವರ್ಷಗಳ ಮೊದಲೇ ಗಾಂಧೀಜಿ ಅವರು ಆದರ್ಶ ಅಂದುಕೊಂಡಿದ್ದ ಬಹುತೇಕ ಕೆಲಸಗಳನ್ನು ಮಾಡಿ ತೋರಿಸಿದವರು ಹಾನಗಲ್ಲ ಗುರುಕುಮಾರ ಶಿವಯೋಗಿಗಳು’ ಎಂದು ಮಾತನಾಡಿದ್ದಾರೆ.

    ಕನ್ನಡದ ಖ್ಯಾತ ನಟ ಸುಚೇಂದ್ರ ಪ್ರಸಾದ್ ಹಾನಗಲ್ ಕುಮಾರ ಶ್ರೀಗಳ ಪಾತ್ರವನ್ನು ನಿರ್ವಹಿಸಿದ್ದು, ಕರ್ನಾಟಕದ ನಾನಾ ಮಠಗಳಿ ಮಠಾಧೀಶರು ಕೂಡ ಪಾತ್ರ ಮಾಡಿರುವುದು ವಿಶೇಷ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿದ್ದು, ಅಶೋಕ್ ವಿ ರಾಮನ್ ಅವರ ಸಿನಿಮಾಟೋಗ್ರಫಿ ಹಾಗೂ ಎಸ್. ಗುಣಶೇಖರನ್ ಅವರು ಸಂಕಲನ ಚಿತ್ರಕ್ಕಿದೆ. ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದ್ದು ಮೆಚ್ಚುಗೆ ವ್ಯಕ್ತವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ‘ವಿರಾಟಪುರ ವಿರಾಗಿ’ ಸಿನಿಮಾದ ಧ್ವನಿ ಸುರುಳಿ ರಿಲೀಸ್ ಮಾಡಿ, ರಥಯಾತ್ರೆಗೆ ಚಾಲನೆ ನೀಡಿದ ಸಿಎಂ

    ‘ವಿರಾಟಪುರ ವಿರಾಗಿ’ ಸಿನಿಮಾದ ಧ್ವನಿ ಸುರುಳಿ ರಿಲೀಸ್ ಮಾಡಿ, ರಥಯಾತ್ರೆಗೆ ಚಾಲನೆ ನೀಡಿದ ಸಿಎಂ

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್.ಲಿಂಗದೇವರು ನಿರ್ದೇಶನದಲ್ಲಿ ಮೂಡಿ ಬಂದಿರುವ ಹಾನಗಲ್ ಶ್ರೀ ಕುಮಾರ ಶಿವಯೋಗಿಗಳ ಜೀವನ ಚರಿತ್ರೆ ಆಧಾರಿತ ‘ವಿರಾಟಪುರ ವಿರಾಗಿ’ ಚಿತ್ರದ ಧ್ವನಿ ಸುರಳಿ ಬಿಡುಗಡೆ ಹಾಗೂ ಕುಮಾರೇಶ್ವರ ರಥ ಯಾತ್ರೆಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಬೆಳಗಾವಿಯಲ್ಲಿ ಚಾಲನೆ ನೀಡಿದರು. ಧ್ವನಿ ಸುರಳಿ ಬಿಡುಗಡೆ ಮಾಡಿ, ರಥ ಯಾತ್ರೆಗೆ ಚಾಲನೆ ನೀಡಿದ ನಂತರ ಸಿನಿಮಾ ಕುರಿತಾಗಿ ಅವರು ಮಾತನಾಡಿದರು.

    ಸಿನಿಮಾದ ಬಗ್ಗೆ ಮಾತನಾಡಿದ ಸಿಎಂ, ‘ಹಾನಗಲ್ ಕುಮಾರಸ್ವಾಮಿಗಳು ೧೨ ಶತಮಾನದ ಆಧ್ಯಾತ್ಮಿಕ ಕ್ರಾಂತಿ ಮಾಡಿದವರು. ವೀರಶೈವ ಲಿಂಗಾಯತ ಸಮುದಾಯವನ್ನು ಎತ್ತಿ ಹಿಡಿದವರು. ಅವರು ಸ್ಥಾಪನೆ ಮಾಡಿರುವ ಶಿವಯೋಗಿ ಮಂದಿರ ಮಹಾನ್ ಸಂಸ್ಥೆಯಾಗಿದೆ. ನಮ್ಮ ಪರಂಪರೆ. ಸಂಸ್ಕಾರವನ್ನು ಅದು ಕಾಪಾಡಿಕೊಂಡು ಬರುತ್ತಿದೆ. ಶಿವಯೋಗಿ ಮಂದಿರ ಜೀಣೋದ್ದಾರಕ್ಕಾಗಿ ಬಿ.ಎಸ್. ಯಡ್ಯೂರಪ್ಪನವರು ಸಿಎಂ ಆಗಿದ್ದ ವೇಳೆ ಅನುದಾನ ನೀಡಿದ್ದರು’ ಎಂದು ಹೇಳಿದರು. ಇದನ್ನೂ ಓದಿ: ಭಾರತದಲ್ಲಿ 150 ಕೋಟಿಗೂ ಅಧಿಕ ಗಳಿಕೆ ಮಾಡಿದ ‘ಅವತಾರ್ 2’ ಸಿನಿಮಾ

    ಮುಂದುವರೆದು ಮಾತನಾಡಿದ ಸಿ.ಎಂ, ‘ವೀರಶೈವ ಲಿಂಗಾಯತ ಸಮುದಾಯ ಚಲನಶೀಲ ಸಮಾಜ. ಎಲ್ಲರನ್ನೂ ಒಪ್ಪಿಕೊಳ್ಳುವ ಅಪ್ಪಿಕೊಳ್ಳುವ ಪ್ರಗತಿಪರವಾಗಿರುವ ಸಮಾಜವಾಗಿದೆ. ಬೆಳಗಾವಿಯ ಗಡಿಭಾಗದಿಂದ ಹಿಡಿದು ಕೊಳ್ಳಗಾಲದವರೆಗೂ ವೀರಶೈವ ಲಿಂಗಾಯತ ಮಠದ ಶಿಕ್ಷಣ ಸಂಸ್ಥೆಗಳನ್ನು ತೆರಯಲಾಗಿದೆ. ಸಿನಮಾ ಒಂದು ಒಳ್ಳೆಯ ಕೆಲಸವಾಗಿದೆ. ಸಂಶೋಧನೆ ಮಾಡಿ ಚಿತ್ರ ಮಾಡಿದ್ಸಾರೆ. ಸಿನಿಮಾದಲ್ಲಿನ ಜೀವನ ಚರಿತ್ರೆ ಎಲರಿಗೂ ಪ್ರೇರಣೆಯಾಗಬೇಕು’ ಎಂದರು ಬಸವರಾಜ್ ಬೊಮ್ಮಾಯಿ.

    ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯ್ಯೂರಪ್ಪ, ಚಿತ್ರ ನಿರ್ದೇಶಕ ಬಿ.ಎಸ್.ಲಿಂಗದೇವರು ಹಾಗೂ ಅನೇಕ ಮಠಾಧೀಶರು ಉಪಸ್ಥಿತರಿದ್ದರು. ಹಾನಗಲ್ಲ ಕುಮಾರ ಶಿವಯೋಗಿಗಳ ಜೀವನಚರಿತ್ರೆ ಆಧರಿತ ಸಿನಿಮಾ ‘ವಿರಾಟಪುರ ವಿರಾಗಿ’ ಸಿದ್ಧವಾಗಿದೆ. ಸಮಾಧಾನ ಸಂಸ್ಥೆ ನಿರ್ಮಾಣದಲ್ಲಿ ಮೂಡಿ ಬಂದಿರುವ ಈ ಸಿನಿಮಾದ  ಹಿನ್ನೆಲೆಯನ್ನು ಸಾರುವುದಕ್ಕಾಗಿ ಕುಮಾರ ಶಿವಯೋಗಿಗಳ ನೆನಪಿನಲ್ಲಿ ‘ವಿರಾಗಿ ಶ್ರೀ ಕುಮಾರೇಶ್ವರ ರಥಯಾತ್ರೆ’ ನಡೆಸಲು ಉದ್ದೇಶಿಸಲಾಗಿದೆ.

    ರಾಜ್ಯಾದ್ಯಂತ ಆರು ರಥಗಳು, ಹದಿಮೂರು ದಿನಗಳ ಕಾಲ, ಏಳು ಸಾವಿರ ಕಿಲೋ ಮೀಟರ್ ಪಯಣವನ್ನು ಮಾಡಲಿವೆ. ಈ ರಥಯಾತ್ರೆಯಲ್ಲಿ ಒಟ್ಟು 360 ಸಭೆಗಳನ್ನೂ ಆಯೋಜನೆ ಮಾಡಲಾಗಿದ್ದು, ಒಂದು ಕೋಟಿ ಜನರನ್ನು ಮುಟ್ಟುವ ಗುರಿಯನ್ನು ಹೊಂದಲಾಗಿದೆ ಎಂದು ಲಿಂಗದೇವರು ತಿಳಿಸಿದ್ದಾರೆ. ಡಿಸೆಂಬರ್ 20ರಂದು ಶುರುವಾಗಲಿರುವ ಈ ರಥಯಾತ್ರೆಯು ಜನವರಿ 1 ರಂದು ಗದಗನಲ್ಲಿ ಮುಕ್ತಾಯಗೊಳ್ಳಲಿದೆ.

    Live Tv
    [brid partner=56869869 player=32851 video=960834 autoplay=true]

  • ಲಿಂಗದೇವರು ನಿರ್ದೇಶನದ ‘ವಿರಾಟಪುರ ವಿರಾಗಿ’ ಸಿನಿಮಾಗಾಗಿ 7000 ಕಿಲೋಮೀಟರ್ ರಥಯಾತ್ರೆ

    ಲಿಂಗದೇವರು ನಿರ್ದೇಶನದ ‘ವಿರಾಟಪುರ ವಿರಾಗಿ’ ಸಿನಿಮಾಗಾಗಿ 7000 ಕಿಲೋಮೀಟರ್ ರಥಯಾತ್ರೆ

    ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್.ಲಿಂಗದೇವರು ನಿರ್ದೇಶನದಲ್ಲಿ ಮೂಡಿ ಬಂದಿರುವ, ಹಾನಗಲ್ಲ ಕುಮಾರ ಶಿವಯೋಗಿಗಳ ಜೀವನಚರಿತ್ರೆ ಆಧರಿತ ಸಿನಿಮಾ ‘ವಿರಾಟಪುರ ವಿರಾಗಿ’ ಸಿದ್ಧವಾಗಿದೆ. ಸಮಾಧಾನ ಸಂಸ್ಥೆ ನಿರ್ಮಾಣದಲ್ಲಿ ಮೂಡಿ ಬಂದಿರುವ ಈ ಸಿನಿಮಾದ  ಹಿನ್ನೆಲೆಯನ್ನು ಸಾರುವುದಕ್ಕಾಗಿ ಕುಮಾರ ಶಿವಯೋಗಿಗಳ ನೆನಪಿನಲ್ಲಿ ‘ವಿರಾಗಿ ಶ್ರೀ ಕುಮಾರೇಶ್ವರ ರಥಯಾತ್ರೆ’ ನಡೆಸಲು ಉದ್ದೇಶಿಸಲಾಗಿದೆ.

    ರಾಜ್ಯಾದ್ಯಂತ ಆರು ರಥಗಳು, ಹದಿಮೂರು ದಿನಗಳ ಕಾಲ, ಏಳು ಸಾವಿರ ಕಿಲೋ ಮೀಟರ್ ಪಯಣವನ್ನು ಮಾಡಲಿವೆ. ಈ ರಥಯಾತ್ರೆಯಲ್ಲಿ ಒಟ್ಟು 360 ಸಭೆಗಳನ್ನೂ ಆಯೋಜನೆ ಮಾಡಲಾಗಿದ್ದು, ಒಂದು ಕೋಟಿ ಜನರನ್ನು ಮುಟ್ಟುವ ಗುರಿಯನ್ನು ಹೊಂದಲಾಗಿದೆ ಎಂದು ಲಿಂಗದೇವರು ತಿಳಿಸಿದ್ದಾರೆ. ಡಿಸೆಂಬರ್ 20ರಂದು ಶುರುವಾಗಲಿರುವ ಈ ರಥಯಾತ್ರೆಯು ಜನವರಿ 1 ರಂದು ಗದಗನಲ್ಲಿ ಮುಕ್ತಾಯಗೊಳ್ಳಲಿದೆ. ಇದನ್ನೂ ಓದಿ: ನಾನು ಪಠಾಣ್ ಸಿನಿಮಾ ನೋಡುತ್ತೇನೆ: ಬಹಿರಂಗವಾಗಿ ಘೋಷಿಸಿಕೊಂಡ ನಟ ಪ್ರಕಾಶ್ ಬೆಳವಾಡಿ

    ಸಿನಿಮಾ ಕುರಿತು ಮತ್ತೋರ್ವ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ‘ಕುಮಾರ ಶಿವಯೋಗಿಗಳು ಒಂದು ದಂತಕಥೆ. ಒಬ್ಬ ಮನುಷ್ಯ ತನ್ನ ಜೀವಿತಾಧಿಯಲ್ಲಿ ಏನೇನು ಮಾಡಲು ಅಸಾಧ್ಯವೋ ಅದನ್ನೆಲ್ಲಾ ಸಾಧ್ಯ ಮಾಡಿದ್ದಾರೆ. ಗಾಂಧೀಜಿಯವರು ಭಾರತಕ್ಕೆ ಬರುವ ಕೆಲವು ವರ್ಷಗಳ ಮೊದಲೇ ಗಾಂಧೀಜಿ ಅವರು ಆದರ್ಶ ಅಂದುಕೊಂಡಿದ್ದ ಬಹುತೇಕ ಕೆಲಸಗಳನ್ನು ಮಾಡಿ ತೋರಿಸಿದವರು ಹಾನಗಲ್ಲ ಗುರುಕುಮಾರ ಶಿವಯೋಗಿಗಳು’ ಎಂದು ಮಾತನಾಡಿದ್ದಾರೆ.

    ಹಾನಗಲ್ಲ  ಕುಮಾರೇಶ್ವರನನ್ನು 2ನೇ ಬಸವಣ್ಣ ಎಂದು ಕರೆಯಲಾಗುತ್ತದೆ. ಸ್ವಾತಂತ್ರ್ಯ ಪೂರ್ವದ ವಿಪರ್ಯಾಸದ ದಿನಗಳಲ್ಲಿ ನಾಡಿನ ಹಿತಕ್ಕಾಗಿ ನಿಂತವರು ಹಾನಗಲ್ಲ ಶ್ರೀಗಳು. ಮಠದಿಂದ ಘಟ ಬೆಳಗಬಾರದು – ಘಟದಿಂದ ಮಠ ಬೆಳಗಬೇಕೆಂದು ಸಾಧಿಸಿ ತೋರಿಸಿದವರು. 19ನೇ ಶತಮಾನದ ಆದಿಯಲ್ಲಿಯೇ ಅವರು ಹೊಸ ಮನ್ವಂತರಕ್ಕೆ ಭದ್ರ ಬುನಾದಿ ಹಾಕಿದವರು. ಸಮ ಸಮಾಜ ನಿರ್ಮಾಣದ ರೂವಾರಿಗಳು. ಸರ್ವರಿಗೂ ಶಿಕ್ಷಣ. ಅಂಧರ ಬಾಳಿಗೆ ಸಂಗೀತ ಶಿಕ್ಷಣ. ಅಖಿಲ ಭಾರತ ವೀರಶೈವ (ಲಿಂಗಾಯತ) ಮಹಾಸಭಾ ಸ್ಥಾಪನೆ. ಮಹಿಳಾ ಶಿಕ್ಷಣ ಮತ್ತು ಸ್ತ್ರೀ ಸಬಲೀಕರಣ. ಶಿವಯೋಗ ಮಂದಿರ ಸ್ಥಾಪನೆ. ವಚನ ತಾಡೋಲೆಗಳ ಸಂಗ್ರಹ ಮತ್ತುಗ್ರಂಥಾಲಯ ಸ್ಥಾಪನೆ. ಅಧುನಿಕ ಕೃಷಿ ಪದ್ಧತಿ ಮತ್ತು ಗೋಶಾಲೆ ಸ್ಥಾಪನೆ. ವಿಭೂತಿ ಹಾಗೂ ಇಷ್ಟ ಲಿಂಗದ ನಿರ್ಮಾಣ, ಹತ್ತಿ ಕಾರ್ಖಾನೆಯ ಸ್ಥಾಪನೆ. ಆಯುರ್ವೇದಚಿಕಿತ್ಸಾಲಯ ಸ್ಥಾಪನೆ. ಚಿತ್ರಮಂದಿರಗಳ ಪ್ರಾರಂಭ, ಪ್ರಾಣಿ ಬಲಿ ನಿಷೇಧ. ಹೀಗೆ ಹತ್ತು ಹಲವಾರು ಸಾಧ್ಯತೆಗಳನ್ನು ಸಾಧ್ಯವಾಗಿಸಿದವರು  ಇವೆಲ್ಲವುಗಳನ್ನೂ ಸಿನಿಮಾದಲ್ಲಿ ಹೇಳುವ ಪ್ರಯತ್ನ ಮಾಡಿದ್ದಾರಂತೆ ಲಿಂಗದೇವರು.

    ಕನ್ನಡದ ಖ್ಯಾತ ನಟ ಸುಚೇಂದ್ರ ಪ್ರಸಾದ್ ಹಾನಗಲ್ ಕುಮಾರ ಶ್ರೀಗಳ ಪಾತ್ರವನ್ನು ನಿರ್ವಹಿಸಿದ್ದು, ಲೇಖಕಿ ಕುಸುಮಾ ಆಯರಹಳ್ಳಿ ಅವರ ಪುತ್ರ ಸಮರ್ಥ ಆಯರಹಳ್ಳಿ ಹಾನಗಲ್ ಕುಮಾರ ಶ್ರೀಗಳ ಬಾಲ್ಯದ ಪಾತ್ರ ಮಾಡಿದ್ದಾರೆ. ಕರ್ನಾಟಕದ ನಾನಾ ಮಠಗಳ ಮಠಾಧೀಶರು ಕೂಡ ಪಾತ್ರ ಮಾಡಿರುವುದು ವಿಶೇಷ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿದ್ದು, ಅಶೋಕ್ ವಿ ರಾಮನ್ ಅವರ ಸಿನಿಮಾಟೋಗ್ರಫಿ ಹಾಗೂ ಎಸ್. ಗುಣಶೇಖರನ್ ಅವರು ಸಂಕಲನ ಚಿತ್ರಕ್ಕಿದೆ. ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದ್ದು ಮೆಚ್ಚುಗೆ ವ್ಯಕ್ತವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಗಣೇಶೋತ್ಸವ ಫ್ಲೆಕ್ಸ್‌ನಲ್ಲಿದ್ದ ಸಾವರ್ಕರ್ ಫೋಟೋ ಹರಿದುಹಾಕಿದ ಕಿಡಿಗೇಡಿಗಳು

    ಗಣೇಶೋತ್ಸವ ಫ್ಲೆಕ್ಸ್‌ನಲ್ಲಿದ್ದ ಸಾವರ್ಕರ್ ಫೋಟೋ ಹರಿದುಹಾಕಿದ ಕಿಡಿಗೇಡಿಗಳು

    ದಾವಣಗೆರೆ: ಸಾವರ್ಕರ್ ಫೋಟೋ ವಿವಾದ ದಾವಣಗೆರೆವರೆಗೂ ತಲುಪಿದೆ. ಗಣೇಶ ಹಬ್ಬದ ಪ್ರಯುಕ್ತ ಹೊನ್ನಾಳಿಯಲ್ಲಿ ಹಿಂದೂ ಮಹಾಸಭಾ ಗಣೇಶ ಸೇವಾ ಸಮಿತಿ ಹಾಕಿದ್ದ ಸಾವರ್ಕರ್ ಫೋಟೋವನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.

    ಗಣೇಶೋತ್ಸವದ ಅಂಗವಾಗಿ ನಗರದಲ್ಲಿ ಫ್ಲೆಕ್ಸ್ ಅಳವಡಿಸಲಾಗಿತ್ತು. ಫ್ಲೆಕ್ಸ್‌ನಲ್ಲಿದ್ದ ಸಾವರ್ಕರ್ ಫೋಟೋ ಜೊತೆಗೆ ಬಾಲಗಂಗಾಧನಾಥ ತಿಲಕರ ಫೋಟೋವನ್ನು ಸಹ ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಕಾರ್ಯಕರ್ತರು ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮುಂಬೈನ ಗಣಪತಿಗೆ 316.40 ಕೋಟಿ ರೂ. ವಿಮೆ

    ಇತ್ತ ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧ ಸಾರ್ವಕರ್ ಸಮರ ಸಾರಿರುವ ಬಿಜೆಪಿ ಮೊದಲಿಗೆ ಸಿದ್ದು ಅಖಾಡದಿಂದಲೇ ಯುದ್ಧ ಆರಂಭಿಸಿದೆ. ರಾಜ್ಯ ಬಿಜೆಪಿಯ ರಾಜಾಹುಲಿ ಕೈಯಲ್ಲಿ ಹಿಂದುತ್ವ ಅಸ್ತ್ರ ಕೊಟ್ಟು, ರಥಯಾತ್ರೆಗೆ ಚಾಲನೆ ನೀಡಲಾಗಿದೆ. ಮುಂಬರುವ ಚುನಾವಣೆಗೆ ಬಿಜೆಪಿಯಿಂದ ಸಾವರ್ಕರ್ ಅಸ್ತ್ರ ಪ್ರಯೋಗಿಸಲು ಸಿದ್ಧತೆ ನಡೆದಿದೆ. ಈ ಮೂಲಕ ಮುಂಬರುವ ಚುನಾವಣೆಯಲ್ಲಿ ಯಡಿಯೂರಪ್ಪರನ್ನೇ ಮುಂದೆ ಬಿಡಲು ಹೈಕಮಾಂಡ್ ಪ್ಲಾನ್ ಮಾಡಿದೆ. ಈ ಮೂಲಕ ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ರಾಜ್ಯ ಬಿಜೆಪಿಗೆ ರಾಜಾಹುಲಿ ಬಲ ಸಿಗಲಿದೆ. ರಥಯಾತ್ರೆಗೆ ಚಾಲನೆ ಕೊಟ್ಟಿರುವ ಯಡಿಯೂರಪ್ಪ ಆಗಸ್ಟ್ 30ರ ರಥಯಾತ್ರೆಯ ಸಮಾರೋಪದಲ್ಲಿ ಭಾಗಿ ಆಗಿ ಕಾಂಗ್ರೆಸ್ ವಿರುದ್ಧ ಗುಡುಗಲಿದ್ದಾರೆ. ಉಳಿದ ಜಿಲ್ಲೆಗಳಲ್ಲೂ ಸಾವರ್ಕರ್ ರಥಯಾತ್ರೆ ಮೂಲಕ ಪಕ್ಷದ ಪರ ಟ್ರೆಂಡ್ ನಿರ್ಮಾಣಕ್ಕೆ ಪ್ಲಾನ್ ಮಾಡಲಾಗಿದೆ. ಇನ್ನು ಇಂದು ಮೈಸೂರು, ನಾಳೆ ಎಚ್.ಡಿ.ಕೋಟೆ, ಸರಗೂರು, 25, 26ರಂದು ನಂಜನಗೂಡು ಮೂಲಕ ಚಾಮರಾಜನಗರ ಜಿಲ್ಲೆ, 27 ರಿಂದ 29ರವರೆಗೆ ಮಂಡ್ಯ ಜಿಲ್ಲೆಯಲ್ಲಿ ರಥಯಾತ್ರೆ ಸಾಗಲಿದ್ದು. 30ಕ್ಕೆ ಮೈಸೂರಿನಲ್ಲಿ ಕೊನೆಗೊಳ್ಳಲಿದೆ. ಇದನ್ನೂ ಓದಿ: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ಕೋರಿ ಸಿಟಿ ರವಿ ಪತ್ರ

    Live Tv
    [brid partner=56869869 player=32851 video=960834 autoplay=true]

  • ಸಂಸದೆ ನುಸ್ರತ್ ಜಹಾನ್ ಇಸ್ಕಾನ್ ಕಾರ್ಯಕ್ರಮದ ವಿಶೇಷ ಅತಿಥಿ

    ಸಂಸದೆ ನುಸ್ರತ್ ಜಹಾನ್ ಇಸ್ಕಾನ್ ಕಾರ್ಯಕ್ರಮದ ವಿಶೇಷ ಅತಿಥಿ

    ಕೋಲ್ಕತ್ತಾ: ನಾನು ಅಂತರ್ಗತ ಭಾರತವನ್ನು ಪ್ರತಿನಿಧಿಸುತ್ತೇನೆ ಎಂದು ಹೇಳುವ ಮೂಲಕ ಸುದ್ದಿಯಾಗಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಅವನರನ್ನು ಇಸ್ಕಾನ್‍ನ ‘ಸಾಮಾಜಿಕ ಸಾಮರಸ್ಯ’ ಕುರಿತ ರಥಯಾತ್ರೆಗೆ ವಿಶೇಷ ಅತಿಥಿಯನ್ನಾಗಿ ಆಹ್ವಾನಿಸಲಾಗಿದೆ.

    ಇಸ್ಕಾನ್‍ನ ಆಹ್ವಾನವನ್ನು ನುಸ್ರತ್ ಜಹಾನ್ ಅವರು ಖುಷಿಯಿಂದಲೇ ಸ್ವಾಗತಿಸಿದ್ದು, ಇಸ್ಕಾನ್ ವಕ್ತಾರ ರಾಧಾರಮಣ್ ದಾಸ್ ಅವರು ಆಹ್ವಾನ ಸ್ವೀಕರಿಸಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ. ಅಂತರ್ಗತ ಭಾರತದ ಹೊಸ ಕಲ್ಪನೆಯನ್ನು ನೀಡುವ ಮೂಲಕ ಭವಿಷ್ಯದ ದಾರಿಯನ್ನು ತೋರಿಸಿದ್ದಾರೆ ಎಂದು ರಾಧಾರಮಣ ದಾಸ್ ತಿಳಿಸಿದ್ದಾರೆ.

    ಇದು ಇಂಟರ್‍ನ್ಯಾಷನಲ್ ಸೊಸೈಟಿ ಆಫ್ ಕೃಷ್ಣ ಕಾನ್ಸಿಯಸ್‍ನೆಸ್(ಇಸ್ಕಾನ್)ನ 48ನೇ ರಥಯಾತ್ರೆಯಾಗಿದ್ದು, 1971ರಿಂದಲೂ ಈ ರಥಯಾತ್ರೆ ನಡೆಯುತ್ತಿದೆ. ಕಾರ್ಯಕ್ರಮವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಉದ್ಘಾಟಿಸುತ್ತಿದ್ದಾರೆ.

    ನುಸ್ರತ್ ಜಹಾನ್ ಅವರು ಕೋಲ್ಕತ್ತಾ ಮೂಲದ ಉದ್ಯಮಿಯನ್ನು ಮದುವೆಯಾಗಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬುರ್ಖಾ ಧರಿಸದಿರುವುದು, ಮಂಗಳ ಸೂತ್ರ ಕಟ್ಟಿರುವುದು ಹಾಗೂ ಸಿಂಧೂರ ಇಟ್ಟಿದ್ದಕ್ಕೆ ಮುಸ್ಲಿಂ ಗುರುಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಅಲ್ಲದೆ, ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಮುಸ್ಲಿಂ ನಾಯಕರು ಆಕ್ರೋಶ ಹೊರಹಾಕಿದ್ದರು.

    ಟೀಕೆಗಳಿಗೆ ಉತ್ತರಿಸಿದ್ದ ಸಂಸದೆ ನುಸ್ರತ್ ಜಹಾನ್, ನಾನು ಅಂತರ್ಗತ ಭಾರತವನ್ನು ಪಾಲಿಸುತ್ತೇನೆ, ಯಾವುದೇ ಜಾತಿ, ಪಂಥ, ಧರ್ಮಕ್ಕೆ ಸೀಮಿತವಾಗಿಲ್ಲ ಎಂದು ಉತ್ತರಿಸಿದ್ದರು. ಇದೀಗ ಸಂಸದೆ ನುಸ್ರತ್ ಅವರು ತಮ್ಮ ಪತಿ ಹಾಗೂ ಇತರ ನಟ, ನಟಿಯರೊಂದಿಗೆ ಇಸ್ಕಾನ್‍ನ ರಥಯಾತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

    ನುಸ್ರತ್ ಜಹಾನ್ ಅವರು ಹೊಸ ಭಾರತವನ್ನು ಪ್ರತಿನಿಧಿಸುತ್ತಾರೆ, ನಾವೆಲ್ಲರೂ ಅಂತರ್ಗತ ಭಾರತದಲ್ಲಿ ನಂಬಿಕೆ ಇಟ್ಟವರು. ಇತರ ಧರ್ಮಗಳ ನಂಬಿಕೆಗಳನ್ನು ಗೌರವಿಸಬೇಕು. ಅವರ ಹಬ್ಬಗಳಲ್ಲಿ ಭಾಗವಹಿಸುವ ಮೂಲಕ ಭಾರತವನ್ನು ಮತ್ತೆ ಬೆಳಗುವಂತೆ ಮಾಡಬೇಕು. ಇದು ಭಾರತದ ನಿಲುವಾಗಿದೆ, ಈ ನಿಟ್ಟಿನಲ್ಲಿ ನುಸ್ರತ್ ಅವರು ಯುವಕರಿಗೆ ಮಾರ್ಗದರ್ಶಿಯಾಗಿದ್ದಾರೆ ಎಂದು ರಾಧಾರಮಣ ದಾಸ್ ತಿಳಿಸಿದ್ದಾರೆ.

    ಎಲ್ಲರಿಗೂ ಅವರ ಆಯ್ಕೆಯನ್ನು ಮಾಡಿಕೊಳ್ಳುವ ಸ್ವಾತಂತ್ರ್ಯವನ್ನು ಸಮಾಜ ನೀಡಿದೆ, ಈ ಮೂಲಕ ನವು ಸಂತೋಷಕರವಾದ ಸಮಾಜವನ್ನು ನಿರ್ಮಿಸಬೇಕು. ಹೀಗಾಗಿಯೇ ದೇವರು ಎಲ್ಲರಿಗೂ ಸ್ವಾತಂತ್ರ ನೀಡಿದ್ದಾನೆ. ಈ ಸ್ವಾತಂತ್ರ್ಯವನ್ನು ನಾವು ಯಾರಿಂದಲೂ ಕಸಿಕೊಳ್ಳಬಾರದು ಎಂದು ತಿಳಿಸಿದ್ದಾರೆ.

    ನುಸ್ರತ್ ಜಹಾನ್ ವಿವಾದ: ಬುರ್ಖಾ ಧರಿಸದೆ ಸಂಸತ್ ಪ್ರವೇಶಿಸಿರುವುದು, ಸಿಂಧೂರ ಇಟ್ಟಿರುವುದು ಹಾಗೂ ಕೈಗೆ ಬಳೆ ತೊಟ್ಟಿದ್ದಕ್ಕೆ ಸಂಸದೆ ನುಸ್ರತ್ ಅವರನ್ನು ಮುಸ್ಲಿಂ ಧರ್ಮ ಗುರುಗಳು ಸೇರಿದಂತೆ ಹಲವರು ಟೀಕಿಸಿದ್ದರು. ಇದಕ್ಕೆ ಉತ್ತರಿಸಿದ್ದ ಸಂಸದೆ, ನಾನು `ಅಂತರ್ಗತ ಭಾರತ’ವನ್ನು ಪ್ರತಿನಿಧಿಸುತ್ತೇನೆ ಎಂದು ಟೀಕಾಕಾರರಿಗೆ ತಿರುಗೇಟು ನೀಡಿದ್ದರು.

    ನಾನು ಜಾತಿ, ಮತ, ಧರ್ಮಗಳ ಹಂಗು ಮೀರಿದ `ಅಂತರ್ಗತ ಭಾರತ’ವನ್ನು ಪ್ರತಿನಿಧಿಸುತ್ತೇನೆ. ಅಲ್ಲದೆ ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ ಎಂದು ಸಂಸತ್‍ನಲ್ಲಿ ಉತ್ತರಿಸಿದ್ದರು. ತಮ್ಮ ಟ್ವಿಟ್ಟರ್ ಖಾತೆಯಲ್ಲಿಯೂ ಸಹ ಈ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದರು. ನಾನು ಇನ್ನೂ ಮುಸ್ಲಿಂ ಧರ್ಮದಲ್ಲಿದ್ದೇನೆ. ಆದರೆ ನಾನು ಧರಿಸುವ ಉಡುಪಿನ ಕುರಿತು ಟೀಕಿಸುವ ಹಕ್ಕು ಯಾರಿಗೂ ಇಲ್ಲ. ನಂಬಿಕೆ ಉಡುಪುಗಳನ್ನು ಮೀರಿದ ವಿಷಯ. ಎಲ್ಲ ಧರ್ಮಗಳ ಅಮೂಲ್ಯವಾದ ಸಿದ್ಧಾಂತಗಳಲ್ಲಿ ನಂಬಿಕೆ ಇಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕಿದೆ ಎಂದು ಜಹಾನ್ ಟೀಕಾಕಾರರನ್ನು ಕುಟುಕಿದ್ದರು.