Tag: ರಥಯಾತ್ರೆ

  • ಕೋಲ್ಕತ್ತಾ ಹೈಕೋರ್ಟ್ ನಿಂದ ಬಿಜೆಪಿ ರಥಯಾತ್ರೆಗೆ ಗ್ರೀನ್ ಸಿಗ್ನಲ್

    ಕೋಲ್ಕತ್ತಾ ಹೈಕೋರ್ಟ್ ನಿಂದ ಬಿಜೆಪಿ ರಥಯಾತ್ರೆಗೆ ಗ್ರೀನ್ ಸಿಗ್ನಲ್

    -ಆಡಳಿತಾರೂಢ ದೀದಿ ಸರ್ಕಾರಕ್ಕೆ ಮುಖಭಂಗ

    ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ರಥಯಾತ್ರೆಗೆ ಕೋಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ್ದು, ಅಲ್ಲದೇ ಕಾನುನೂ ಸುವ್ಯವಸ್ಥೆ ಕಾಪಾಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.

    ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ರಥಯಾತ್ರೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರ ಅನುಮತಿಯನ್ನು ನಿರಾಕರಿಸಿದ ಬೆನ್ನಲ್ಲೇ ಹೈಕೋರ್ಟ್ ಏಕ ಸದಸ್ಯ ಪೀಠ ಸಹ ಯಾತ್ರೆಗೆ ತಡೆಹಿಡಿದಿತ್ತು. ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಸೋಮವಾರ ಆದೇಶವನ್ನು ಮರುಪರಿಶೀಲಿಸುವಂತೆ ಮೇಲ್ಮನವಿ ಸಲ್ಲಿಸಿತ್ತು.

    ಇಂದು ಬಿಜೆಪಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತ್ತು. ಈ ವೇಳೆ ಬಿಜೆಪಿಗೆ ಕೆಲ ಷರತ್ತುಗಳನ್ನು ವಿಧಿಸಿ, ಯಾತ್ರೆಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

    ಈ ಹಿಂದೆ ಕೂಚ್ ಬಿಹಾರ್ ನಿಂದ ಆರಂಭವಾಗಬೇಕಿದ್ದ ಬಿಜೆಪಿಯ `ರಥ ಯಾತ್ರೆ’ಗೆ ಕೋಲ್ಕತಾ ಹೈಕೋರ್ಟ್ ನ ಏಕ ಸದಸ್ಯ ಪೀಠ ಅನುಮತಿ ನಿರಾಕರಿಸಿತ್ತು. ಏಕ ಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ವಿಭಾಗೀಯ ಪೀಠ, ರಥ ಯಾತ್ರೆಗೆ ಅನುಮತಿ ನೀಡುವ ಕುರಿತು ಬಿಜೆಪಿಯ ಮೂವರು ಸದಸ್ಯರ ತಂಡದೊಂದಿಗೆ ಚರ್ಚಿಸಿ, ಡಿಸೆಂಬರ್ 14 ರೊಳಗೆ ಅಂತಿಮ ನಿರ್ಧಾರಕ್ಕೆ ಬನ್ನಿ ಎಂದು ಪಶ್ಚಿಮ ಬಂಗಾಳ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾ ನಿರ್ದೇಶಕರಿಗೆ ಮತ್ತು ಗೃಹ ಕಾರ್ಯದರ್ಶಿಗೆ ಸೂಚಿಸಿತ್ತು. ಆದರೆ ರಥ ಯಾತ್ರೆಯಿಂದ ಕೋಮುಗಲಭೆ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ರಥ ಯಾತ್ರೆಗೆ ಅನುಮತಿ ನೀಡಲು ನಿರಾಕರಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ.ಬಂಗಾಳದಲ್ಲಿ ಬಿಜೆಪಿಯ ರಥಯಾತ್ರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ

    ಪ.ಬಂಗಾಳದಲ್ಲಿ ಬಿಜೆಪಿಯ ರಥಯಾತ್ರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ

    – ಪರೋಕ್ಷವಾಗಿ ದಿದಿಗೆ ಕುಟುಕಿದ ಚಾಣಾಕ್ಯ

    ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ರಥಯಾತ್ರೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ರಥಯಾತ್ರೆಯನ್ನು ಮಾಡಿಯೇ ತೀರುತ್ತೇವೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

    ಶುಕ್ರವಾರದ ಬಿಜೆಪಿ ರಥಯಾತ್ರೆಗೆ ಕೋಲ್ಕತ್ತ ಹೈಕೋರ್ಟ್ ಅನುಮತಿ ನಿರಾಕರಿಸಿದ್ದರ ಕುರಿತು ಪ್ರತಿಕ್ರಿಯಿಸಿರುವ ಅವರು, ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಖಂಡಿತವಾಗಿಯೂ ರಥಯಾತ್ರೆ ನಡೆಸಲಿದೆ. ಈ ನಮ್ಮ ರಥಯಾತ್ರೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಪಶ್ಚಿಮ ಬಂಗಾಳ ರಾಜ್ಯದಲ್ಲಿ ಬದಲಾವಣೆ ತರುವಲ್ಲಿ ಬಿಜೆಪಿ ಸಿದ್ಧವಾಗಿದೆ. ರಥಯಾತ್ರೆಯನ್ನು ವಾಪಸ್ ಪಡೆದಿಲ್ಲ. ಆದರೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಬಂಗಾಳದಲ್ಲಿ ಭಯೋತ್ಪಾದನೆಯ ಆಳ್ವಿಕೆ ಸೃಷ್ಟಿಯಾಗಿದೆ. ಮಮತಾ ಬ್ಯಾನರ್ಜಿ ಪ್ರಜಾಪ್ರಭುತ್ವವನ್ನು ಚಲಾಯಿಸುತ್ತಿದ್ದಾರೆ. ಎನ್ನುವ ಮೂಲಕ ದೀದಿಗೆ ತಿರುಗೇಟು ನೀಡಿದ್ದಾರೆ.

    ರಥಯಾತ್ರೆಗೆ ಅನುಮತಿ ನಿರಾಕರಿಸಿದ್ದೇಕೆ?
    ಪಶ್ಚಿಮ ಬಂಗಾಳದ ಕೂಚ್‍ಬೆಹರ್ ಕೋಮುಗಲಭೆಯ ಪ್ರದೇಶವಾಗಿದೆ. ಒಂದು ವೇಳೆ ಬಿಜೆಪಿ ಈ ಪ್ರದೇಶದಲ್ಲಿ ರಥಯಾತ್ರೆ ಕೈಗೊಂಡರೆ, ಕೋಮುಗಲಭೆ ಉಂಟಾಗುವ ಸಾಧ್ಯತೆ ಹೆಚ್ಚಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ಯಾತ್ರೆಗೆ ತಡೆ ಕೋರುವಂತೆ ಕೋಲ್ಕತ್ತ ಹೈಕೋರ್ಟ್ ಮೊರೆ ಹೋಗಿತ್ತು. ಗುರುವಾರ ಈ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್, ಕೋಮುಗಲಭೆ ಉಂಟಾಗುವ ಭೀತಿಯಿಂದ ಶುಕ್ರವಾರ ನಡೆಯಬೇಕಿದ್ದ ಬಿಜೆಪಿ ರಥಯಾತ್ರೆಗೆ ಅನುಮತಿಯನ್ನು ನಿರಾಕರಿಸಿತ್ತು.

    ಮುಂಬರುವ ಲೋಕಸಭಾ ಚುನಾವಣೆಗಾಗಿ ಪಶ್ಚಿಮ ಬಂಗಾಳದ 42 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ರಥಯಾತ್ರೆ ನಡೆಸಲು ತೀರ್ಮಾನಿಸಿತ್ತು. ಒಟ್ಟು 42 ಕ್ಷೇತ್ರಗಳ ಪೈಕಿ 2014ರ ಚುನಾವಣೆಯಲ್ಲಿ 2 ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿದ್ದು, ಈ ಬಾರಿ ಕನಿಷ್ಟ 22 ರಲ್ಲಿ ಜಯಗಳಿಸುವ ಗುರಿಯನ್ನು ಅಮಿತ್ ಶಾ ಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಜೆಪಿ ರಥಯಾತ್ರೆ ತಡೆಯುವವರ ತಲೆಗಳು, ಚಕ್ರಕ್ಕೆ ಸಿಲುಕಿ ಪುಡಿಯಾಗುತ್ತೆ: ಬಿಜೆಪಿ ನಾಯಕಿ

    ಬಿಜೆಪಿ ರಥಯಾತ್ರೆ ತಡೆಯುವವರ ತಲೆಗಳು, ಚಕ್ರಕ್ಕೆ ಸಿಲುಕಿ ಪುಡಿಯಾಗುತ್ತೆ: ಬಿಜೆಪಿ ನಾಯಕಿ

    ಕೋಲ್ಕತಾ: ರಾಜ್ಯದಲ್ಲಿ ನಡೆಯುವ ಬಿಜೆಪಿ ರಥಯಾತ್ರೆಗೆ ಅಡ್ಡಿಪಡಿಸುವವರ ತಲೆಗಳು ಚಕ್ರಕ್ಕೆ ಸಿಲುಕಿ ಪುಡಿಯಾಗುತ್ತದೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮಹಿಳಾ ಘಟಕದ ಮುಖ್ಯಸ್ಥೆ ಲಾಕೆಟ್ ಚಟರ್ಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಸಿನಿಮಾದಿಂದ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿರುವ ಲಾಕೆಟ್ ಚಟರ್ಜಿ ಶನಿವಾರ ಮಲ್ಡಾ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಪ್ರಜಾಪ್ರಭುತ್ವದ ಉಳಿವಿಗಾಗಿ ಬಿಜೆಪಿ ರಥಯಾತ್ರೆ ಮಾಡುತ್ತಿದೆ. ಅಲ್ಲದೇ ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲು ಯಾತ್ರೆಯನ್ನು ಹಮ್ಮಿಕೊಂಡಿದ್ದೇವೆ. ಈ ರಥಯಾತ್ರೆಯನ್ನು ಯಾರೇ ತಡೆಯಲು ಮುಂದಾದರೆ, ಅವರ ತಲೆಗಳೇ ಚಕ್ರಕ್ಕೆ ಸಿಲುಕಿ ಪುಡಿಯಾಗುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಮುಂಬರುವ ಲೋಕಸಭಾ ಚುನಾವಣೆಯ ಅಂಗವಾಗಿ ರಾಜ್ಯದಲ್ಲಿ ಡಿಸೆಂಬರ್ 5, 6 ಮತ್ತು 7 ರಂದು 42 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ರಥಯಾತ್ರೆ ಸಂಚರಿಸಲಿದೆ. ಈ ಯಾತ್ರೆಯನ್ನು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಉದ್ಘಾಟಿಸಲಿದ್ದಾರೆ. ಅಲ್ಲದೇ ರಥಯಾತ್ರೆಯ ಸಮಾರೋಪ ಸಮಾರಂಭವನ್ನು ಕೋಲ್ಕತಾದಲ್ಲಿ ನಡೆಸಲು ತೀರ್ಮಾನಿಸಿದ್ದೇವೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

    ಲಾಕೆಟ್ ಚಟರ್ಜಿ ಹೇಳಿಕೆಯನ್ನು ತೃಣಮೂಲ ಕಾಂಗ್ರೆಸ್ಸಿನ ಕಾರ್ಯದರ್ಶಿ ಪಾರ್ಥ ಚಟರ್ಜಿ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿ ನಾಯಕರು ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ಕೆಲಸಕ್ಕೆ ಕೈ ಹಾಕಿದ್ದಾರೆ. ಬಂಗಾಳದಲ್ಲಿ ಕೋಮುವಾದವನ್ನು ಬಿತ್ತುವುದೇ ಬಿಜೆಪಿ ನಾಯಕರ ಪ್ರಮುಖ ಉದ್ದೇಶ. ಹೀಗಾಗಿಯೇ ಅವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ ಬಿಜೆಪಿಯ ಒಡೆದು ಆಳುವ ನೀತಿಯನ್ನು, ಪಶ್ಚಿಮ ಬಂಗಾಳ ಜನ ಚುನಾವಣೆಯಲ್ಲಿ ಅವರನ್ನು ಸೋಲಿಸುವ ಮೂಲಕ ಉತ್ತರಿಸುತ್ತಾರೆಂದು ಕಿಡಿಕಾರಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews