Tag: ರನಿಲ್ ವಿಕ್ರಮ ಸಿಂಘೆ

  • ನನಗೆ ತುರ್ತು ವೈದ್ಯಕೀಯ ನೆರವು ನೀಡಿ – ಲಂಕಾಗೆ ನಿತ್ಯಾನಂದ ಮನವಿ

    ನನಗೆ ತುರ್ತು ವೈದ್ಯಕೀಯ ನೆರವು ನೀಡಿ – ಲಂಕಾಗೆ ನಿತ್ಯಾನಂದ ಮನವಿ

    ಕೊಲಂಬೊ: ಸ್ವಯಂ ಘೋಷಿತ ದೇವಮಾನವ ಹಾಗೂ ಅತ್ಯಾಚಾರ ಆರೋಪ ಹೊತ್ತಿರುವ ನಿತ್ಯಾನಂದ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾಗಿದ್ದು, ಶ್ರೀಲಂಕಾದಿಂದ ವೈದ್ಯಕೀಯ ನೆರವು ನೀಡುವಂತೆ ಮನವಿ ಮಾಡಿದ್ದಾರೆ.

    ದೇಶವನ್ನೇ ತೊರೆದು ಈಕ್ವೆಡಾರ್ ದ್ವೀಪದಲ್ಲಿ ನೆಲೆಸಿರುವ ಬಿಡದಿ ಧ್ಯಾನಪೀಠದ ಸ್ವಾಮಿ ನಿತ್ಯಾನಂದ ತನಗೆ ತುರ್ತು ವೈದ್ಯಕೀಯ ನೆರವು ನೀಡುವಂತೆ ಲಂಕಾ ಅಧ್ಯಕ್ಷರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಯುಕೆ ಹಿಂದಿಕ್ಕಿ ವಿಶ್ವದ 5ನೇ ಅತಿ ದೊಡ್ಡ ಆರ್ಥಿಕತೆಯ ದೇಶವಾಗಿ ಹೊರಹೊಮ್ಮಿದ ಭಾರತ

    ಕಳೆದ ಆಗಸ್ಟ್ 7ರಂದೇ ನಿತ್ಯಾನಂದ ಕೈಲಾಸ ಸಾರ್ವಭೌಮ ರಾಜ್ಯದಲ್ಲಿ ವೈದ್ಯಕೀಯ ಸೌಲಭ್ಯದ ಕೊರೆತೆಯನ್ನು ಉಲ್ಲೇಖಿಸಿ ಲಂಕಾ ಅಧ್ಯಕ್ಷರಿಗೆ ಪತ್ರ ಬರೆದಿದ್ದರು. ನಾನು ಅಸ್ವಸ್ಥನಾಗಿದ್ದೇನೆ, ಜೀವಕ್ಕೆ ಅಪಾಯವಿದ್ದು, ತುರ್ತು ಚಿಕಿತ್ಸೆಯ ಅವಶ್ಯಕತೆಯಿದೆ. ಕೂಡಲೇ ವೈದ್ಯಕೀಯ ಅಗತ್ಯತೆಗಳನ್ನು ಪೂರೈಸುವಂತೆ ಲಂಕಾ ಅಧ್ಯಕ್ಷ ರನಿಲ್ ವಿಕ್ರಮ ಸಿಂಘೆ ಅವರಿಗೆ ಕೋರಿದ್ದರು. ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಗಲಾಟೆ – ಹಿಂದೂ ಯುವಕರಿಗೆ ಗಾಯ, ಮೂವರು ವಶಕ್ಕೆ

    ನಿತ್ಯಾನಂದ ಬರೆದ ಪತ್ರದಲ್ಲಿ ಏನಿತ್ತು?
    ಹಿಂದೂ ಧರ್ಮದ ಪರಮ ಪೀಠಾಧಿಪತಿ ಶ್ರೀ ನಿತ್ಯಾನಂದ ಪರಮಶಿವಂ ಅವರ ಆರೋಗ್ಯ ಸ್ಥಿತಿ ಏರುಪೇರಾಗಿದ್ದು, ತುರ್ತು ವೈದ್ಯಕೀಯ ಸೇವೆಗಳ ಅಗತ್ಯವಿದೆ. ಪ್ರಸ್ತುತ ಕೈಲಾಸದಲ್ಲಿ ಲಭ್ಯವಿರುವ ವೈದ್ಯಕೀಯ ಸೌಲಭ್ಯಗಳು ಖಾಲಿಯಾಗುತ್ತಿದ್ದು, ಆದ್ದರಿಂದ ಆರೋಗ್ಯ ಸ್ಥಿತಿಯನ್ನು ಸುಧಾರಿಸಲು ಇನ್ನಷ್ಟು ಮೂಲ ಸೌಕರ್ಯಗಳ ಅಗತ್ಯವಿದೆ. ನಿತ್ಯಾನಂದ ತೀವ್ರವಾಗಿ ಅಸ್ವಸ್ಥಗೊಂಡಿರುವುದರಿಂದ ವೈದ್ಯಕೀಯ ಚಿಕಿತ್ಸೆ ಅಗತ್ಯವಿದ್ದು, ಕೂಡಲೇ ಸಹಾಯ ಮಾಡುವಂತೆ ಪತ್ರ ಬರೆದಿದ್ದರು.

    ಹೂಡಿಕೆ ಮಾಡೋದಾಗಿ ಆಫರ್: ಅಲ್ಲದೇ ಈಕ್ವೆಡಾರ್ ದ್ವೀಪವೊಂದನ್ನು ಖರೀದಿಸಿ ಅಲ್ಲಿಯೇ ಕೈಲಾಸ ದೇಶ ನಿರ್ಮಿಸಿರುವ ನಿತ್ಯಾನಂದ ಇದೀಗ ಲಂಕಾ ಸರ್ಕಾರ ವೈದ್ಯಕೀಯ ನೆರವು ನೀಡಿವುದಾದರೇ ಅಲ್ಲಿಯೇ ಲಕ್ಷಾಂತರ ಮೌಲ್ಯದ ಡಾಲರ್ ಹೂಡಿಕೆ ಮಾಡುವುದಾಗಿ ಆಫರ್ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹರಕೆ ತೀರಿಸಲು ಕೊಲ್ಲೂರಿಗೆ ಆಗಮಿಸಿದ ಲಂಕಾ ಪ್ರಧಾನಿ

    ಹರಕೆ ತೀರಿಸಲು ಕೊಲ್ಲೂರಿಗೆ ಆಗಮಿಸಿದ ಲಂಕಾ ಪ್ರಧಾನಿ

    ಉಡುಪಿ: ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಇಂದು ಕೊಲ್ಲೂರಿಗೆ ಭೇಟಿ ನೀಡಿದ್ದಾರೆ.

    ಬೆಳಗ್ಗೆಯೇ ನೂರಾರು ಭಕ್ತರು ದೇವರ ದರ್ಶನ ಪೂಜೆ ಕೈಗೊಂಡರು. ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಆಗಮನ ಹಿನ್ನೆಲೆಯಲ್ಲಿ ಕೊಲ್ಲೂರು ದೇವಳದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಭಾರತೀಯ ಸೇನೆ ಲಂಕಾ ಪ್ರಧಾನಿಗೆ ಭದ್ರತೆ ಕೊಟ್ಟಿದೆ. ದೇವಸ್ಥಾನ ಭದ್ರತೆಯ ಮೇಲೂ ನಿಗಾ ವಹಿಸಿದೆ. ಲಂಕಾ ಪ್ರಧಾನಿ ದೇವಳ ಭೇಟಿ ಹಿನ್ನೆಲೆಯಲ್ಲಿ ಭಕ್ತರಿಗೆ ದರ್ಶನ ವ್ಯವಸ್ಥೆಯನ್ನು ಬಂದ್ ಮಾಡಲಾಗಿದೆ.

    ಕೊಲಂಬೋ ಟು ಕೊಲ್ಲೂರು:
    ಕೊಲಂಬೋದಿಂದ ಬೆಂಗಳೂರಿಗೆ ಬಂದಿರುವ ಸಿಂಘೆ, ಅಲ್ಲಿಂದ ಮಂಗಳೂರಿಗೆ ವಿಮಾನದಲ್ಲಿ ಬಂದಿದ್ದಾರೆ. ಹೆಲಿಕಾಪ್ಟರ್ ಮೂಲಕ ಲಂಕಾ ಪ್ರಧಾನಿ ಬೈಂದೂರು ತಾಲೂಕಿನ ಅರೆ ಶೀರೂರಿಗೆ ಬಂದಿಳಿಯಬೇಕಿತ್ತು. ಉಡುಪಿಯಲ್ಲಿ ಬೆಳಗ್ಗೆಯಿಂದ ಧಾರಾಕಾರ ಮಳೆ. ಮೋಡ ಮುಸುಕಿದ ವಾತಾವರಣವಿದ್ದ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ಹಾರಾಟಕ್ಕೆ ಅಧಿಕಾರಿಗಳು ನಿರಾಕರಿಸಿದ್ದಾರೆ.

    ಹೀಗಾಗಿ ರಸ್ತೆ ಮೂಲಕ ಕೊಲ್ಲೂರಿಗೆ ತೆರಳುವಂತೆ ಸೂಚಿಸಿದ್ದಾರೆ. ಮಂಗಳೂರಿಂದ ಕೊಲ್ಲೂರು ವರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸುಮಾರು 130 ಕೀ.ಮಿ. ರಸ್ತೆ ಮಾರ್ಗದ ಮೂಲಕ ಪ್ರಯಾಣ ಮಾಡಲಿದ್ದಾರೆ.

    ಈ ನಡುವೆ ಮೂಕಾಂಬಿಕಾ ದೇವಿ ಸನ್ನಿಧಿಯಲ್ಲಿ ನವಚಂಡಿಕಾ ಯಾಗ ಆರಂಭವಾಗಿದ್ದು, ದೇವಸ್ಥಾನದ ಋತ್ವಿಜರಿಂದ ಹೋಮದ ವಿಧಿ ವಿಧಾನ ನಡೆದಿದೆ. ವಿಶೇಷ ಪೂಜೆಯ ಜೊತೆ ಯಜ್ಞಶಾಲೆಯಲ್ಲಿ ಹೋಮ ಆರಂಭವಾಗಿದೆ. ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಮಧ್ಯಾಹ್ನ 12.30 ರ ಸುಮಾರಿಗೆ ನಡೆಯಲಿರುವ ಪೂರ್ಣಾಹುತಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಲಂಕಾ ಪ್ರಧಾನಿ ನವಚಂಡಿಕಾಯಾಗದ ಹರಕೆಯನ್ನು ಈ ಹಿಂದೆಯೇ ಹೇಳಿದ್ದರು.