Tag: ರಫೆಲ್ ನಡಾಲ್

  • ಟೆನಿಸ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ ರಫೆಲ್ ನಡಾಲ್

    ಟೆನಿಸ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ ರಫೆಲ್ ನಡಾಲ್

    ಆಮಸ್ಟರ್‌ಡ್ಯಾಂ: ಮಂಗಳವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸೋಲನ್ನು ಅನುಭವಿಸಿದ ಸ್ಪೇನ್‌ನ (Spain) ಟೆನಿಸ್ ದಿಗ್ಗಜ ರಫೆಲ್ ನಡಾಲ್ (Rafael Nadal) ತಮ್ಮ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ.

    ಕಿಂಗ್ ಆಫ್ ಕ್ಲೇ ಎಂದೇ ಪ್ರಸಿದ್ಧಿಯಾಗಿರುವ ರಫೆಲ್ ನಡಾಲ್ ನ.19 ರಂದು ನಡೆದ ನೆದರ್‌ಲ್ಯಾಂಡ್ (Netherland) ವಿರುದ್ಧದ ಡೇವಿಸ್ ಕಪ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸೋಲನ್ನು ಅನುಭವಿಸಿದರು. ಈ ಮೂಲಕ ತಮ್ಮ ವೃತ್ತಿ ಜೀವನಕ್ಕೆ ನಿವೃತ್ತಿಯನ್ನು ಘೋಷಿಸಿದರು.ಇದನ್ನೂ ಓದಿ: ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಅಂಬುಲೆನ್ಸ್‌ ಪಲ್ಟಿ

    ನಿವೃತ್ತಿ ಘೋಷಿಸಿದ ಬಳಿಕ ಸ್ಪ್ಯಾನಿಷ್ ರಾಷ್ಟ್ರಗೀತೆಯ ಸಂದರ್ಭದಲ್ಲಿ ರಫೆಲ್ ಭಾವುಕರಾದರು. ಇನ್ನೂ 10,000ಕ್ಕೂ ಹೆಚ್ಚು ಅಭಿಮಾನಿಗಳು “ರಾಫಾ, ರಾಫಾ” ಎಂದು ಕೂಗಿ ಹುರಿದುಂಬಿಸಿದರು.

    ಈ ಕುರಿತು ರಫೆಲ್ ಮಾತನಾಡಿ, ಇಂದು ನನ್ನ ಭಾವನಾತ್ಮಕ ದಿನ, ವೃತ್ತಿಪರನಾಗಿ ಇಂದು ನನ್ನ ಕೊನೆಯ ಪಂದ್ಯ. ಕೊನೆಯ ಬಾರಿ ಈ ರೀತಿಯಾಗಿ ರಾಷ್ಟ್ರಗೀತೆಯನ್ನು ಕೇಳುವುದು ಒಂದು ವಿಶೇಷ ಭಾವನೆ ಎಂದು ತಿಳಿಸಿದರು.

    2004ರಲ್ಲಿ ವೃತ್ತಿಜೀವನಕ್ಕೆ ಕಾಲಿಟ್ಟ ರಫೆಲ್ 30 ಡೇವಿಸ್ ಕಪ್ ಸಿಂಗಲ್ಸ್ ಪಂದ್ಯಗಳಲ್ಲಿ 29 ಪಂದ್ಯಗಳನ್ನು ಗೆದ್ದಿದ್ದಾರೆ. ಇನ್ನೂ ನೆದರ್‌ಲ್ಯಾಂಡ್ ವಿರುದ್ಧದ ಆಡಿದ ಕೊನೆಯ ಪಂದ್ಯದಲ್ಲಿ 6-4, 6-4 ಅಂತರದಲ್ಲಿ ಸೋಲನುಭವಿಸಿದರು.ಇದನ್ನೂ ಓದಿ: ‘ಲಕ್ಷ್ಮಿ ಬಾರಮ್ಮ’ ಸೀರಿಯಲ್‌ನಲ್ಲಿ ಮಹಾ ತಿರುವು- ಕಾವೇರಿ ಅಟ್ಟಹಾಸಕ್ಕೆ ಬ್ರೇಕ್‌ ಹಾಕಲು ಬಂದ ಕೀರ್ತಿ

  • ಟೆನಿಸ್‌ಗೆ ರಫೆಲ್‌ ನಡಾಲ್‌ ವಿದಾಯ

    ಟೆನಿಸ್‌ಗೆ ರಫೆಲ್‌ ನಡಾಲ್‌ ವಿದಾಯ

    ಮ್ಯಾಡ್ರಿಡ್‌: ಟೆನಿಸ್‌ನ ಸಾರ್ವಕಾಲಿಕ ಶ್ರೇಷ್ಠರಲ್ಲಿ ಒಬ್ಬರಾದ ರಾಫೆಲ್ ನಡಾಲ್ (Rafael Nadal) ಅವರು ಕ್ರೀಡೆಯಿಂದ ನಿವೃತ್ತಿ ಘೋಷಿಸಿದ್ದಾರೆ. 22 ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದಿರುವ ಅವರು ಟೆನಿಸ್‌ಗೆ ವಿದಾಯ ಹೇಳಿದ್ದಾರೆ.

    ಸ್ಪ್ಯಾನಿಷ್ ದಂತಕಥೆ ನಡಾಲ್‌, ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊದ ಮೂಲಕ ನಿವೃತ್ತಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಅವರ ವೃತ್ತಿಜೀವನದುದ್ದಕ್ಕೂ ಬೆಂಬಲ ನೀಡಿದವರು ಮತ್ತು ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.‌ ಇದನ್ನೂ ಓದಿ: ರತನ್‌ ಟಾಟಾ ಅಂತಿಮ ದರ್ಶನ ಪಡೆದ ಕ್ರಿಕೆಟ್‌ ದೇವರು

    ಈ ನವೆಂಬರ್‌ನಲ್ಲಿ ಮಲಗಾದಲ್ಲಿ ನಡೆಯಲಿರುವ ಡೇವಿಸ್ ಕಪ್ ಫೈನಲ್‌ ಮ್ಯಾಚ್‌, ನಡಾಲ್ ಅವರ ಅಂತಿಮ ಪಂದ್ಯಾವಳಿಯಾಗಿದೆ. ನವೆಂಬರ್ 19 ಮತ್ತು 21 ರ ನಡುವಿನ ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ಅನ್ನು ಸ್ಪೇನ್‌ ಎದುರಿಸಲಿದೆ.

    ಈ ವರ್ಷದ ಆರಂಭದಲ್ಲಿ ಪ್ಯಾರಿಸ್ ಒಲಿಂಪಿಕ್ಸ್‌ನ ನಂತರ ಅವರು ಅಂಕಣದಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಾರೆ. 2004 ರಲ್ಲಿ, ಯುವ ನಡಾಲ್ ಸ್ಪೇನ್‌ಗೆ ಡೇವಿಸ್ ಕಪ್ ಪ್ರಶಸ್ತಿಯನ್ನು ಪಡೆಯಲು ಸಹಾಯ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಅನುಭವವನ್ನು ಅವರು ತಮ್ಮ ನಿವೃತ್ತಿ ಘೋಷಣೆಯಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ನಿತೀಶ್‌-ರಿಂಕು ಸ್ಫೋಟಕ ಫಿಫ್ಟಿ; ಬಾಂಗ್ಲಾ ವಿರುದ್ಧ 86 ರನ್‌ಗಳ ಜಯ – ಭಾರತಕ್ಕೆ ಸರಣಿ ಜಯ

  • 22ನೇ ಗ್ರ್ಯಾನ್ ಸ್ಲಾಂನ ಕಿರೀಟ ಮುಡಿಗೇರಿಸಿಕೊಂಡ ನಡಾಲ್ – ನಾರ್ವೆಯ ಕಾಸ್ಪರ್ ರೂಡ್‍ಗೆ ನಿರಾಸೆ

    22ನೇ ಗ್ರ್ಯಾನ್ ಸ್ಲಾಂನ ಕಿರೀಟ ಮುಡಿಗೇರಿಸಿಕೊಂಡ ನಡಾಲ್ – ನಾರ್ವೆಯ ಕಾಸ್ಪರ್ ರೂಡ್‍ಗೆ ನಿರಾಸೆ

    ಪ್ಯಾರಿಸ್: ಸ್ಪೇನ್‍ನ ರಫೆಲ್ ನಡಾಲ್ ಫ್ರೆಂಚ್ ಓಪನ್ ಗ್ರ್ಯಾನ್‍ ಸ್ಲಾಂ ಟೆನಿಸ್ ಟೂರ್ನಿಯ 22 ಗ್ರ್ಯಾನ್ ಸ್ಲಾಂನ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದು, ಈ ಮೂಲಕ 22ನೇ ಗ್ರ್ಯಾನ್ ಸ್ಲಾಂ ಪಡೆಯುವ ಮೂಲಕ ದಾಖಲೆ ಬರೆದಿದ್ದಾರೆ.

    ರೋಲ್ಯಾಂಡ್ ಗ್ಯಾರೋಸ್‍ನ ಫಿಲಿಪ್ ಚಾಟ್ರಿಯರ್ ಕೋರ್ಟ್‍ನಲ್ಲಿ ಭಾನುವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಫೈನಲ್‍ನಲ್ಲಿ ನಾರ್ವೆಯ ಕಾಸ್ಪರ್ ರೂಡ್ ವಿರುದ್ಧ 6-3, 6-3, 6-0 ರ ನೇರ ಸೆಟ್‍ಗಳ ಜಯ ಸಾಧಿಸಿದರು. ಇಲ್ಲಿ ತಮ್ಮ 14ನೇ ಪ್ರಶಸ್ತಿ ಮುಡಿಗೇರಿಸಿಕೊಂಡಲ್ಲದೆ, ‘ಕ್ಲೇ ಕೋರ್ಟ್ ಕಿಂಗ್’ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದರು.

    ಜನವರಿಯಲ್ಲಿ ನಡೆದಿದ್ದ ಆಸ್ಟ್ರೇಲಿಯನ್ ಓಪನ್ ಟೂರ್ನಿಯಲ್ಲಿ ಗೆದ್ದು ದಾಖಲೆಯ 21ನೇ ಟ್ರೋಫಿ ಜಯಿಸಿದ್ದ ನಡಾಲ್, ಗ್ರ್ಯಾನ್ ಸ್ಲಾಂ ಪ್ರಶಸ್ತಿಗಳ ಸಂಖ್ಯೆಯನ್ನು 22ಕ್ಕೆ ಹೆಚ್ಚಿಸಿಕೊಂಡರು. 23 ವರ್ಷದ ರೂಡ್, ತನಗಿಂತ 13 ವರ್ಷ ಹಿರಿಯ ಆಟಗಾರನಿಗೆ ಸರಿಸಾಟಿಯಾಗಿ ನಿಲ್ಲಲು ವಿಫಲರಾದರು. ರೂಡ್ ಬತ್ತಳಿಕೆಯಲ್ಲಿದ್ದ ಅಸ್ತ್ರಗಳು ನಡಾಲ್ ಮುಂದೆ ನಡೆಯಲಿಲ್ಲ. ಗ್ರ್ಯಾನ್‍ಸ್ಲಾಂ ಪ್ರಶಸ್ತಿ ಗೆದ್ದ ನಾರ್ವೆಯ ಮೊದಲ ಆಟಗಾರ ಎನಿಸಿಕೊಳ್ಳುವ ಅವರ ಆಸೆ ಕೈಗೂಡಲಿಲ್ಲ.

    ಫ್ರೆಂಚ್ ಓಪನ್‍ನಲ್ಲಿ ಪ್ರಶಸ್ತಿ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ಗೌರವ ನಡಾಲ್‍ಗೆ ಒಲಿಯಿತು. ಆಂಡ್ರೆಸ್ ಗಿಮೆನೊ ಹೆಸರಲ್ಲಿದ್ದ 50 ವರ್ಷಗಳಷ್ಟು ಹಳೆಯ ದಾಖಲೆಯನ್ನು ಅವರು ಮುರಿದರು. ಸ್ಪೇನ್‍ನವರೇ ಆದ ಗಿಮೆನೊ 1972 ರಲ್ಲಿ ತಮ್ಮ 34ನೇ ವಯಸ್ಸಿನಲ್ಲಿ ಇಲ್ಲಿ ಚಾಂಪಿಯನ್ ಆಗಿದ್ದರು.

    ಕಳೆದ ಮೂರು ವರ್ಷಗಳಿಂದ ಕ್ಲೇ ಕೋರ್ಟ್ ಟೂರ್ನಿಗಳಲ್ಲಿ ಪ್ರದರ್ಶನದಲ್ಲಿ ಸ್ಥಿರತೆ ಕಾಪಾಡಿಕೊಂಡಿರುವ ರೂಢ್, ನಡಾಲ್‍ಗೆ ಪೈಪೋಟಿ ನೀಡಬಹುದು ಎಂಬ ನಿರೀಕ್ಷೆ ಹುಸಿಯಾಯಿತು.

    ಮೊದಲ ಸೆಟ್‍ನ ಎರಡನೇ ಗೇಮ್‍ನಲ್ಲೇ ಎದುರಾಳಿಯ ಸರ್ವ್ ಬ್ರೇಕ್ ಮಾಡಿದ ನಡಾಲ್, ತಮ್ಮ ಉದ್ದೇಶ ಏನೆಂಬುದನ್ನು ಸ್ಪಷ್ಟಪಡಿಸಿದರು. ಮುಂದಿನ ಗೇಮ್‍ನಲ್ಲಿ ರೂಡ್, ನಡಾಲ್ ಸರ್ವ್ ಮುರಿದು ತಿರುಗೇಟು ನೀಡಿದರು. ನಾಲ್ಕನೇ ಗೇಮ್‍ನಲ್ಲಿ ಮತ್ತೆ ಎದುರಾಳಿಯ ಸರ್ವ್ ಮುರಿದ ಸ್ಪೇನ್ ಆಟಗಾರ, 3-1ರ ಮುನ್ನಡೆ ಗಳಿಸಿದರು. ಪಂದ್ಯ ಸಾಗಿದಂತೆ ತಮ್ಮ ಹಿಡಿತ ಬಿಗಿಗೊಳಿಸಿ 6-3 ರಲ್ಲಿ ಸೆಟ್ ಗೆದ್ದರು.

    ಎರಡನೇ ಸೆಟ್‍ನ ನಾಲ್ಕನೇ ಗೇಮ್‍ನಲ್ಲಿ ಎದುರಾಳಿಯ ಸರ್ವ್ ಬ್ರೇಕ್ ಮಾಡಿದ ರೂಡ್ 3-1 ರಲ್ಲಿ ಮೇಲುಗೈ ಸಾಧಿಸಿ, ಮರುಹೋರಾಟದ ಸೂಚನೆ ನೀಡಿದರು. ಆದರೆ ಮುಂದಿನ ಗೇಮ್‍ನಲ್ಲಿ ರೂಡ್ ಸರ್ವ್ ಬ್ರೇಕ್ ಮಾಡಿ, ಬಳಿಕ ತಮ್ಮ ಸರ್ವ್ ಉಳಿಸಿಕೊಂಡ ನಡಾಲ್ 3-3 ರಲ್ಲಿ ಸಮಬಲ ಸಾಧಿಸಿದರು. ಆ ಬಳಿಕದ ಆಟ ಏಕಪಕ್ಷೀಯವಾಗಿ ನಡೆಯಿತು. ಸತತ ಒಂಬತ್ತು ಗೇಮ್‍ಗಳನ್ನು ಗೆದ್ದುಕೊಂಡು ಟ್ರೋಫಿಗೆ ಮುತ್ತಿಕ್ಕಿದರು.