Tag: ರಮನಾಥ್ ಕೋವಿಂದ್

  • ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳ ರದ್ದು ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ

    ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳ ರದ್ದು ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ

    ನವದೆಹಲಿ: ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳ ರದ್ದು ಪ್ರಕ್ರಿಯೆ ಇವತ್ತು ಅಧಿಕೃತವಾಗಿ ಪೂರ್ಣಗೊಂಡಿದೆ. ಇದಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.

    ರೈತರ ಪ್ರತಿಭಟನೆಗೆ ಮಣಿದು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ಮೋದಿ ಅವರು ಘೋಷಿಸಿದ ಬಳಿಕ ಸಂಸತ್ ಅಧಿವೇಶನದಲ್ಲಿ ಕಾಯ್ದೆಗಳನ್ನು ಹಿಂಪಡೆಯುವ ಮಸೂದೆ ಅಂಗೀಕಾರಕ್ಕೆ ಕೇಂದ್ರ ಸರ್ಕಾರ ಮುಂದಾಯಿತು. ಚರ್ಚೆಗೆ ಒಳಪಡಿಸದೇ ಮಸೂದೆಗಳ ಅಂಗೀಕಾರ ಸರಿಯಲ್ಲ. ಪ್ರತಿಭಟನೆ ವೇಳೆ ನೂರಾರು ರೈತರು ಸಾವನ್ನಪ್ಪಿದ್ದಾರೆ. ಅವರಿಗೆ ಕೇಂದ್ರ ಸರ್ಕಾರ ಪರಿಹಾರ ನೀಡಬೇಕು. ಹೀಗಾಗಿ ಮಸೂದೆಯನ್ನು ಚರ್ಚೆಗೆ ಒಳಪಡಿಸಬೇಕು ಎಂದು ವಿಪಕ್ಷಗಳು ಒತ್ತಾಯಿಸಿದ್ದವು. ಪ್ರತಿಪಕ್ಷಗಳ ವಿರೋಧದ ನಡುವೆಯೂ ಮಸೂದೆಗೆ ಅಂಗೀಕಾರ ನೀಡಲಾಗಿದ್ದು, ಇದೀಗ ಅಧಿಕೃತವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ಇದನ್ನೂ ಓದಿ: ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಬಗ್ಗೆ ದಾಖಲೆಗಳಿಲ್ಲ, ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ: ಕೇಂದ್ರ ಸರ್ಕಾರ

    ಸಂಸತ್ ಅಧಿವೇಶನದಲ್ಲಿ ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ಹೋರಾಟ ನಡೆಸುವ ವೇಳೆ ಸಾವನ್ನಪ್ಪಿದ ರೈತರ ಬಗ್ಗೆ ತಮ್ಮ ಬಳಿ ಮಾಹಿತಿ ಇಲ್ಲ. ಹೀಗಾಗಿ ಪರಿಹಾರ ನೀಡುವ ಪ್ರಶ್ನಯೇ ಉದ್ಭವಿಸಲ್ಲ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮಾರ್ ಸಂಸತ್‍ಗೆ ಲಿಖಿತ ಉತ್ತರ ನೀಡಿದ್ದಾರೆ. ತೋಮರ್ ಉತ್ತರಕ್ಕೆ ವಿಪಕ್ಷಗಳು ತೀವ್ರ ಆಕ್ರೋಶ ಹೊರಹಾಕಿವೆ. ಹುತಾತ್ಮ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕೆಂದು ವಿಪಕ್ಷಗಳು ಒತ್ತಾಯಿಸಿದ್ದವು. ವಿಪಕ್ಷಗಳು ರೈತ ಸಂಘಗಳ ಮುಖಂಡರು ಹೇಳುವ ಪ್ರಕಾರ, ಹೋರಾಟದ ವೇಳೆ 700ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಮಧ್ಯೆ, ರೈತರ ಉತ್ಪನ್ನಗಳಿಗೆ ಎಂಎಸ್‍ಪಿ ನೀಡುವ ಸಂಬಂಧ ಕೇಂದ್ರ ಸರ್ಕಾರ ರಚಿಸಲಿರುವ ಸಮಿತಿಗೆ ಐವರ ಹೆಸರು ಸೂಚಿಸುವಂತೆ ರೈತ ಸಂಘಟನೆಗಳಿಗೆ ಕೇಂದ್ರ ಸರ್ಕಾರ ಮನವಿ ಮಾಡಿಕೊಂಡಿದೆ, ಡಿಸೆಂಬರ್ 4ರ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ರೈತ ಸಂಘಟನೆಗಳು ತಿಳಿಸಿವೆ. ಇದನ್ನೂ ಓದಿ: ಮೈತ್ರಿ ಬಗ್ಗೆ ಪ್ರಧಾನಿ ಮೋದಿ, ಅಮಿತ್‌ ಶಾ ಜೊತೆ ಮಾತನಾಡಿದ್ದೇನೆ: ಅಮರೀಂದರ್‌ ಸಿಂಗ್‌

  • ಗಣೇಶ ಹಬ್ಬಕ್ಕೆ ಶುಭಕೋರಿದ ಪ್ರಧಾನಿ, ರಾಷ್ಟ್ರಪತಿ

    ಗಣೇಶ ಹಬ್ಬಕ್ಕೆ ಶುಭಕೋರಿದ ಪ್ರಧಾನಿ, ರಾಷ್ಟ್ರಪತಿ

    ನವದೆಹಲಿ: ದೇಶಾದ್ಯಂತ ಸಂಭ್ರಮದಿಂದ ಆಚರಿಸುತ್ತಿರುವ ಗಣೇಶ ಹಬ್ಬಕ್ಕೆ ಟ್ವಿಟ್ಟರ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಾಶಯ ಕೋರಿದ್ದಾರೆ.

    ನಿಮ್ಮೆಲ್ಲರಿಗೂ ಗಣೇಶ ಚತುರ್ಥಿಯ ಶುಭಾಶಯಗಳು. ಗಣೇಶ ಹಬ್ಬದ ಮೂಲಕ ಪ್ರತಿಯೊಬ್ಬರ ಜೀವನಕ್ಕೂ ಸುಖ, ಶಾಂತಿ, ಸಂತೋಷ, ಅದೃಷ್ಟ ಮತ್ತು ಉತ್ತಮ ಆರೋಗ್ಯವನ್ನು ತರಲಿ. ಗಣಪತಿ ಬಪ್ಪ ಮೋರಿಯಾ ಎಂದು ಮೋದಿ ದೇಶದ ಜನತೆಗೆ ಶುಭಕೋರಿದ್ದಾರೆ. ಇದನ್ನೂ ಓದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಸಿಎಂ

    ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೂಡ ದೇಶದ ಜನತೆ ಟ್ಟಿಟ್ಟರ್ ಮೂಲಕ ಶುಭಾಶಯ ತಿಳಿದ್ದು, ಗಣಪತಿ ಬಪ್ಪ ಮೋರಿಯಾ. ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಹಾರ್ದಿಕ ಶುಭಾಶಯಗಳು. ಕೋವಿಡ್-19 ವಿರುದ್ಧ ವಿಘ್ನನಿವಾರಕ ಗಣೇಶ ನಮ್ಮ ಪ್ರಯತ್ನವನ್ನು ಯಶಸ್ವಿಗೊಳಿಸಲಿ ಮತ್ತು ಎಲ್ಲರನ್ನೂ ಸಂತೋಷ ಮತ್ತು ಶಾಂತಿಯಿಂದ ಆಶೀರ್ವದಿಸಲಿ ಎಂದು ಹಾರೈಸುತ್ತೇನೆ. ನಾವೆಲ್ಲರೂ ಈ ಹಬ್ಬವನ್ನು ಕೋವಿಡ್ ಸ್ನೇಹಿಯಾಗಿ ಆಚರಿಸೋಣ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಫಸ್ಟ್ ಟೈಂ ವಾಯುಸೇನೆ ವಿಮಾನ ರಾಷ್ಟ್ರೀಯ ಹೆದ್ದಾರಿಯಲ್ಲಿ ತುರ್ತು ಲ್ಯಾಂಡಿಂಗ್

  • 47ನೇ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾ.ಎಸ್.ಎ.ಬೋಬ್ಡೆ

    47ನೇ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾ.ಎಸ್.ಎ.ಬೋಬ್ಡೆ

    ನವದೆಹಲಿ: ಸುಪ್ರೀಂಕೋರ್ಟಿನ 47ನೇ ಮುಖ್ಯ ನ್ಯಾಯಾಧೀಶರಾಗಿ ಶರದ್ ಅರವಿಂದ್ ಬೋಬ್ಡೆ ಪ್ರಮಾಣ ವಚನ ಸ್ವೀಕರಿಸಿದರು. ನ್ಯಾ.ಬೋಬ್ಡೆ ಅವರಿಗೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಪ್ರಮಾಣ ವಚನ ಬೋಧಿಸಿದರು. 23 ಏಪ್ರಿಲ್ 2021ರವರೆಗೆ ಬೋಬ್ಡೆ ಅವರು ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಲಿದ್ದಾರೆ.

    ಅಯೋಧ್ಯೆ ತೀರ್ಪು ನೀಡಿದ ಸಾಂವಿಧಾನಿಕ ಪೀಠದ ಐವರು ನ್ಯಾಯಾಧೀಶರಲ್ಲಿ ಬೋಬ್ಡೆ ಅವರು ಒಬ್ಬರಾಗಿದ್ದರು. ಮುಖ್ಯ ನ್ಯಾಯಮೂರ್ತಿಗಳಾಗಿದ್ದ ರಂಜನ್ ಗೋಗೋಯ್, ನ್ಯಾಯಮೂರ್ತಿ ಎಸ್‍ಎ ಬೋಬ್ಡೆ, ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ಕರ್ನಾಟಕ ಮೂಲದ ನ್ಯಾಯಮೂರ್ತಿ ಅಬ್ದುಲ್ ನಜೀರ್ ಮತ್ತು ನ್ಯಾಯಮೂರ್ತಿ ಅಶೋಕ್ ಭೂಷಣ್ ಪೀಠ ಅಯೋಧ್ಯೆ ತೀರ್ಪು ಪ್ರಕಟಿಸಿತ್ತು.

    ರಂಜನ್ ಗೋಗೊಯ್ ಅವರ ನಿವೃತ್ತಿ ಬಳಿಕ ನ್ಯಾ. ಶರದ್ ಅರವಿಂದ್ ಬೋಬ್ಡೆ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 2000ರಲ್ಲಿ ಬಾಂಬೆ ಹೈಕೋರ್ಟ್ ನಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಬೋಬ್ಡೆ ಅವರು ನೇಮಕಗೊಂಡರು. ಮಧ್ಯಪ್ರದೇಶದ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ಮಹಾರಾಷ್ಟ್ರ ಮೂಲದವರಾಗಿರುವ ಬೋಬ್ಡೆ ಅವರು ಏಪ್ರಿಲ್ 2013ರಲ್ಲಿ ಸುಪ್ರಿಂಕೋರ್ಟಿಗೆ ಬಡ್ತಿ ಪಡೆದರು. 63 ವರ್ಷದ ಬೋಬ್ಡೆ ಸಿಜೆಐ ಆಗಿ 18 ತಿಂಗಳು ಕಾರ್ಯ ನಿರ್ವಹಿಸಲಿದ್ದಾರೆ.