Tag: ರಮೇಶ್ ಜಾರಕಿ ಹೊಳಿ

  • ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ವಿಚಾರ ನನಗೆ ಗೊತ್ತಿಲ್ಲ: ಸತೀಶ್ ಜಾರಕಿಹೊಳಿ

    ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ವಿಚಾರ ನನಗೆ ಗೊತ್ತಿಲ್ಲ: ಸತೀಶ್ ಜಾರಕಿಹೊಳಿ

    ಚಿಕ್ಕೋಡಿ: ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ವಿಚಾರ ನನಗೆ ಗೊತ್ತಿಲ್ಲ. ರಾಜೀನಾಮೆ ಕೊಡುವ ಈ ಬಗ್ಗೆ ಅವರನ್ನೇ ಕೇಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಪಬ್ಲಿಕ್ ಟಿವಿಗೆ ಹೇಳಿಕೆ ನೀಡಿದ ಅವರು, ಅವರ ರಾಜೀನಾಮೆ ವಿಚಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.

    ಲಾಕ್‍ಡೌನ್ ಓಪನ್ ವಿಚಾರವಾಗಿ ಮಾತನಾಡಿದ ಅವರು, ಲಾಕ್ ಡೌನ್ ತಕ್ಷಣವೇ ಓಪನ್ ಮಾಡುವುದಕ್ಕೆ ಆಗುವುದಿಲ್ಲ. ಸರ್ಕಾರ ಹಂತ ಹಂತವಾಗಿ ಓಪನ್ ಮಾಡಲಿ, ಸರಕಾರ ಹೇಗೆ ಲಾಕ್‍ಡೌನ್ ಓಪನ್ ಮಾಡುತ್ತದೆ ಎಂಬುವುದನ್ನು ಕಾದು ನೋಡೋಣ. ಹಂತ ಹಂತವಾಗಿ ಲಾಕ್ ಡೌನ್ ಓಪನ್ ಮಾಡುವಂತೆ ನಾವು ಕೂಡ ಸಲಹೆ ನೀಡಿದ್ದೇವೆ ಎಂದರು.

    ಇದಕ್ಕೂ ಮೊದಲು ಶಾಸಕ ಸತೀಶ್ ಜಾರಕಿಹೊಳಿ ಹುಕ್ಕೇರಿ ತಾಲೂಕು ಪಂಚಾಯತಿ ಸಭಾ ಭವನದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಉಮೇಶ್ ಸಿದ್ನಾಳ್, ಜಿಲ್ಲಾ ಪಂಚಾಯತಿ ಸಹಾಯಕ ಎಂಜಿನಿಯರ್ ಪಟ್ಟಣಶೆಟ್ಟಿ, ತಹಶೀಲ್ದಾರ್ ಡಿ.ಎಚ್.ಹೂಗಾರ, ಲೋಕೋಪಯೋಗಿ ಇಲಾಖೆ ಅಧಿಕಾರಿ ಎಸ್.ಕೆ.ಹುಕ್ಕೇರಿ, ಕಾಂಗ್ರೆಸ್ ಮುಖಂಡ ಕಿರಣ ರಜಪೂತ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದನ್ನೂ ಓದಿ:ಕೋವಿಡ್ 3ನೇ ಅಲೆ ಎದುರಿಸಲು ಸಕಲ ಸಿದ್ಧತೆ: ಶಶಿಕಲಾ ಜೊಲ್ಲೆ

  • ರಾಜಕೀಯ ಮಾಡಲು ಬೇರೆ ಮಾರ್ಗಗಳಿವೆ, ಸಿಡಿ ಬಗ್ಗೆ ಮಾತನಾಡಲ್ಲ: ಹೆಚ್‍ಡಿಕೆ

    ರಾಜಕೀಯ ಮಾಡಲು ಬೇರೆ ಮಾರ್ಗಗಳಿವೆ, ಸಿಡಿ ಬಗ್ಗೆ ಮಾತನಾಡಲ್ಲ: ಹೆಚ್‍ಡಿಕೆ

    ಬೆಂಗಳೂರು: ರಾಜಕೀಯ ಮಾಡುವುದಕ್ಕೆ ಬೇರೆ ರೀತಿಯ ಮಾರ್ಗಗಳಿವೆ. ಸಿಡಿ ವಿಚಾರವಾಗಿ ಮಾತನಾಡುವುದು ನಮಗೆ ಶೋಭೆ ತರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಹೇಳಿದ್ದಾರೆ.

    ಸಚಿವ ರಮೇಶ್ ಜಾರಕಿಹೊಳಿ ರಾಸಲೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜೆಪಿ ನಗರದ ನಿವಾಸದಲ್ಲಿ ಮಾತನಾಡಿದ ಅವರು, ಸಿಡಿ ಬಗ್ಗೆ ಮಾತನಾಡುವುದು ನಮಗೆ ಶೋಭೆ ತರುವುದಿಲ್ಲ. ಇಂತಹ ವಿಷಯ ಇಟ್ಟುಕೊಂಡು ನಾನು ರಾಜಕೀಯ ಮಾಡುವುದಿಲ್ಲ. ರಾಜಕೀಯ ಮಾಡವುದಕ್ಕೆ ಬೇರೆ ಮಾರ್ಗಗಳಿವೆ ಎಂದು ಹೇಳಿದ್ದಾರೆ.

    ರಾಜಕೀಯ ವ್ಯಕ್ತಿಗಳ ಇಂತಹ ನಡವಳಿಕೆಗಳಿಂದ ಸಮಾಜದಲ್ಲಿ ಬೆಳವಣಿಗೆ ಬಗ್ಗೆ ಗೊತ್ತಾಗುತ್ತೆ. ನನ್ನ ಸರ್ಕಾರ ತೆಗೆದರು. ಆದರೆ ನನಗೆ ಯಾವುದೇ ಬೇಸರವಿಲ್ಲ. ಈಗ ಯಡಿಯೂರಪ್ಪನವರ ಸರ್ಕಾರ ಇದೆ. ಹಾಗಾಗಿ ಈ ವಿಚಾರವಾಗಿ ಉತ್ತರ ಯಡಿಯೂರಪ್ಪನವರು ನೀಡಬೇಕು. ಬಿಜೆಪಿ ನಾಯಕರಿಂದ ಉತ್ತರ ಪಡೆಯುವುದು ಸೂಕ್ತ ಎಂದರು.

    ವಿಶ್ವನಾಥ್‍ರವರು ಕರ್ನಾಟಕದಲ್ಲಿ ರಾಕ್ಷಸಿ ಸರ್ಕಾರ ಇತ್ತು. ರಾಕ್ಷಸಿ ಸರ್ಕಾರ ತೆಗೆಯಲು ನಾವು ಗುಂಪು ಮಾಡಿಕೊಂಡು ಬಾಂಬೆಗೆ ಹೋಗಿ ರಾಮ ರಾಜ್ಯ ತಂದಿದ್ದೇವೆ ಎಂದು ಹೇಳಿದ್ದರು. ಯಾವ ರಾಮ ರಾಜ್ಯ ತಂದಿದ್ದಾರೆ ಎಂದು ಇವರೆಲ್ಲ ಕುಳಿತು ಆತ್ಮಾವಲೋಕನ ಮಾಡಿಕೊಳ್ಳಲಿ. ನಾನು ಈ ವಿಚಾರವಾಗಿ ಯಾವುದೇ ರಿಯಾಕ್ಷನ್ ಕೊಡುವುದಿಲ್ಲ ಎಂದು ಹೇಳಿದರು.

  • ಆಪರೇಷನ್ ಕಮಲದ ಬೆನ್ನಲ್ಲೇ ಬಿಎಸ್‍ವೈ ಭೇಟಿಯಾದ ಕಾಂಗ್ರೆಸ್ ಸಚಿವ..!

    ಆಪರೇಷನ್ ಕಮಲದ ಬೆನ್ನಲ್ಲೇ ಬಿಎಸ್‍ವೈ ಭೇಟಿಯಾದ ಕಾಂಗ್ರೆಸ್ ಸಚಿವ..!

    ಬೆಂಗಳೂರು: ಆಪರೇಷನ್ ಕಮಲ ನಡೆಯುತ್ತಿರೋ ಬೆನ್ನಲ್ಲೇ ಕಾಂಗ್ರೆಸ್ ಸಚಿವರೊಬ್ಬರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.

    ಹೌದು. ಸಚಿವ ರಮೇಶ್ ಜಾರಕಿಹೊಳಿ ಅವರು ಬಿಎಸ್ ವೈ ಅವರನ್ನು ಭೇಟಿ ಮಾಡಿದ್ದಾರೆ. ಯಡಿಯೂರಪ್ಪ ಅವರ ಆಪ್ತ ಸಹಾಯಕ ಸಂತೋಷ್ ಆರತಕ್ಷತೆಯಲ್ಲಿ ರಮೇಶ್ ಅವರು ಭಾಗಿಯಾಗಿದ್ದಾರೆ. ಈ ಹಿಂದೆ `ಆಪರೇಷನ್ ಕಮಲ’ ಯತ್ನ ವೇಳೆ ಬಿಎಸ್‍ವೈ ಆಪ್ತನ ಜೊತೆಗೆ ನಿರಂತರ ಸಂಪರ್ಕದಲ್ಲಿ ಇದ್ದರು ಎಂದು ಹೇಳಲಾಗಿದ್ದು, ಆ ಸ್ನೇಹದಿಂದಲೇ ಇದೀಗ ಸಚಿವರು ಸಂತೋಷ್ ಆರತಕ್ಷತೆಗೆ ಆಗಮಿಸಿದ್ದಾರೆ ಅಂತ ತಿಳಿದುಬಂದಿದೆ.

    ಇತ್ತೀಚೆಗಷ್ಟೇ ಅಂಬಿಡೆಂಟ್ ಜೊತೆ 20 ಕೋಟಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಣಿಧಣಿ ಜನಾರ್ದನ ರೆಡ್ಡಿ ಅವರ ಬಂಧನ ತಪ್ಪಿಸಲು ರಮೇಶ್ ಜಾರಕಿಹೊಳಿ ಪ್ರಯತ್ನಿಸಿದ್ದರು ಎನ್ನುವ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿತ್ತು.

    ರೆಡ್ಡಿ ಬಂಧನಕ್ಕೆ ಬಲೆ ಬೀಸುತ್ತಲೇ ರಮೇಶ್ ಜಾರಕಿಹೊಳಿ ಮೂಲಕ ಸಿಎಂ ಮೇಲೆ ರಾಮುಲು ಒತ್ತಡ ಹೇರಿದ್ದಾರಂತೆ. ಸಿಎಂ ಕುಮಾರಸ್ವಾಮಿ ಜೊತೆ ಆತ್ಮೀಯ ಒಡನಾಟ ಹೊಂದಿರುವ ರಮೇಶ್ ಜಾರಕಿಹೊಳಿಯಿಂದ ಈ ಒತ್ತಡ ತಂತ್ರ ಹೂಡಲಾಗಿದೆ. ಆದರೆ ರೆಡ್ಡಿ ಪ್ರಕರಣಕ್ಕೂ ಸರ್ಕಾರಕ್ಕೂ ಸಂಬಂಧ ಇಲ್ಲ. ನೀವು ಸುಮ್ಮನಿರಿ ಅಂತ ಕುಮಾರಸ್ವಾಮಿ ಹೇಳಿದ್ದು, ಕೊನೆಗೆ ಡಿಸಿಎಂ ಪರಮೇಶ್ವರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಮೂಲಕ ಒತ್ತಡ ಹೇರಲು ಪ್ರಯತ್ನ ಮಾಡಲಾಗಿದೆ ಅಂತ ಹೇಳಲಾಗಿತ್ತು.

    ರೆಡ್ಡಿ ಅರೆಸ್ಟ್ ಆದ್ರೆ ರಾಮುಲು ಅವರ ವಾಲ್ಮೀಕಿ ಸಮುದಾಯ ಮುನಿಸಿಕೊಳ್ಳಬಹುದು ಎಂದು ಪರೋಕ್ಷ ಬೆದರಿಕೆ ಹಾಕಲಾಗಿತ್ತು. ನಮಗೂ ಕಷ್ಟ ಆಗುತ್ತೆ. ಮುಂದಿನ ದಿನಗಳಲ್ಲಿ ಇದು ಬೇರೆ ಬೆಳವಣಿಗೆಗಳಿಗೂ ಕಾರಣವಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಆದರೆ ಇದ್ಯಾವುದಕ್ಕೂ ಮುಖ್ಯಮಂತ್ರಿಯವರು ಸೊಪ್ಪು ಹಾಕಿಲ್ಲ. ಹೀಗಾಗಿ ರಮೇಶ್ ಜಾರಕಿಹೊಳಿ ಪ್ರಯತ್ನಕ್ಕೂ ಯಶಸ್ಸು ಸಿಕ್ಕಿಲ್ಲ ಎಂಬುದಾಗಿ ತಿಳಿದುಬಂದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ರೆಡ್ಡಿ ಬಂಧನ ತಪ್ಪಿಸಿದ್ದು ಸಚಿವ ರಮೇಶ್ ಜಾರಕಿಹೊಳಿ..?

    ರೆಡ್ಡಿ ಬಂಧನ ತಪ್ಪಿಸಿದ್ದು ಸಚಿವ ರಮೇಶ್ ಜಾರಕಿಹೊಳಿ..?

    ಬೆಂಗಳೂರು: ಅಂಬಿಡೆಂಟ್ ಕಂಪೆನಿ ಜೊತೆ 20 ಕೋಟಿ ಡೀಲ್ ಕೇಸಲ್ಲಿ ಜೈಲಿಗೆ ಹೋಗಿದ್ದ ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿಯಿಂದ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾಗುತ್ತಾ ಅನ್ನೋ ಪ್ರಶ್ನೆಯೊಂದು ಇದೀಗ ರಾಜಕೀಯ ವಲಯದಲ್ಲಿ ಎದ್ದಿದೆ.

    ಜನಾರ್ದನ ರೆಡ್ಡಿ ಬಂಧನ ತಪ್ಪಿಸಲು ಕಾಂಗ್ರೆಸ್‍ ನ ಪ್ರಭಾವಿ ಸಚಿವ ರಮೇಶ್ ಜಾರಕಿಹೊಳಿ ಯತ್ನಿಸಿದ್ದಾರೆ ಅನ್ನೋ ಮಾಹಿತಿಯೊಂದು ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿದೆ.

    ರೆಡ್ಡಿ ಬಂಧನಕ್ಕೆ ಬಲೆ ಬೀಸುತ್ತಲೇ ರಮೇಶ್ ಜಾರಕಿಹೊಳಿ ಮೂಲಕ ಸಿಎಂ ಮೇಲೆ ರಾಮುಲು ಒತ್ತಡ ಹೇರಿದ್ದಾರಂತೆ. ಸಿಎಂ ಕುಮಾರಸ್ವಾಮಿ ಜೊತೆ ಆತ್ಮಿಯ ಒಡನಾಟ ಹೊಂದಿರುವ ರಮೇಶ್ ಜಾರಕಿಹೊಳಿಯಿಂದ ಈ ಒತ್ತಡ ತಂತ್ರ ಹೂಡಲಾಗಿದೆ. ಆದರೆ ರೆಡ್ಡಿ ಪ್ರಕರಣಕ್ಕೂ ಸರ್ಕಾರಕ್ಕೂ ಸಂಬಂಧ ಇಲ್ಲ. ನೀವು ಸುಮ್ಮನಿರಿ ಅಂತ ಕುಮಾರಸ್ವಾಮಿ ಹೇಳಿದ್ದು, ಕೊನೆಗೆ ಡಿಸಿಎಂ ಪರಮೇಶ್ವರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಮೂಲಕ ಒತ್ತಡ ಹೇರಲು ಪ್ರಯತ್ನ ಮಾಡಲಾಗಿದೆ ಅಂತ ಹೇಳಲಾಗುತ್ತಿದೆ.

    ರೆಡ್ಡಿ ಅರೆಸ್ಟ್ ಆದ್ರೆ ರಾಮುಲು ಅವರ ವಾಲ್ಮೀಕಿ ಸಮುದಾಯ ಮುನಿಸಿಕೊಳ್ಳಬಹುದು ಎಂದು ಪರೋಕ್ಷ ಬೆದರಿಕೆ ಹಾಕಲಾಗಿತ್ತು. ನಮಗೂ ಕಷ್ಟ ಆಗುತ್ತೆ. ಮುಂದಿನ ದಿನಗಳಲ್ಲಿ ಇದು ಬೇರೆ ಬೆಳವಣಿಗೆಗಳಿಗೂ ಕಾರಣವಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಆದರೆ ಇದ್ಯಾವುದಕ್ಕೂ ಮುಖ್ಯಮಂತ್ರಿಯವರು ಸೊಪ್ಪು ಹಾಕಿಲ್ಲ. ಹೀಗಾಗಿ ರಮೇಶ್ ಜಾರಕಿಹೊಳಿ ಪ್ರಯತ್ನಕ್ಕೂ ಯಶಸ್ಸು ಸಿಕ್ಕಿಲ್ಲ. ಈ ಬೆಳವಣಿಗೆಯಿಂದ ಮುಂದಿನ ದಿನಗಳಲ್ಲಿ ದೊಸ್ತಿ ಸರ್ಕಾರಕ್ಕೆ ಕಂಟಕ ಎದುರಾಗುತ್ತಾ ಅನ್ನೋ ಚರ್ಚೆಗಳು ಆರಂಭವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews