Tag: ರಮೇಶ್ ಪಂಡಿತ್

  • ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕನ ‘ಭಾವಪೂರ್ಣ’ ಟ್ರೈಲರ್

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕನ ‘ಭಾವಪೂರ್ಣ’ ಟ್ರೈಲರ್

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಚೇತನ್ ಮುಂಡಾಡಿ (Chetan Mundadi) ನಿರ್ದೇಶನದ, ಪ್ರಶಾಂತ್ ಅಂಜನಪ್ಪ ನಿರ್ಮಾಣದ ಹಾಗೂ ರಮೇಶ್ ಪಂಡಿತ್ (Ramesh Pandit) ನಾಯಕರಾಗಿ ನಟಿಸಿರುವ ‘ಭಾವಪೂರ್ಣ’ (Bhavapurna) ಚಿತ್ರದ ಟ್ರೈಲರ್ (Trailer) ಇತ್ತೀಚೆಗೆ ಬಿಡುಗಡೆಯಾಯಿತು. ಆನಂತರ ಚಿತ್ರದ ಕುರಿತು ತಂಡದ ಸದಸ್ಯರು ಮಾಹಿತಿ ನೀಡಿದರು.

    ಭಾವಪೂರ್ಣ ಒಬ್ಬ ಮಧ್ಯ ವಯಸ್ಸು ಮೀರಿದ ಮುಗ್ಧನ ಭಾವ ತೀರ ಯಾನ.  ಸಾವಿನಾಚೆಗೂ ತಾನು ಈ ಭೂಮಿ ಮೇಲೆ ಬದುಕಿದ್ದೆ ಅನ್ನೋ ಕುರುಹನ್ನು ಬಿಟ್ಟುಹೋಗುವ  ಪ್ರಯತ್ನ ಎಂದು ಕೊಂಡು ಪ್ರತಿಹೆಜ್ಜೆಯಲ್ಲೂ ಪಡುವ ಬವಣೆ, ಆಗುವ ಒದ್ದಾಟ,  ಅವಘಡ ಮತ್ತು ಮನತಟ್ಟುವ ಮುಗ್ದ ತಮಾಷೆಗಳು. ಇದನ್ನೂ ಓದಿ:ಬಿಗ್ ಬಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್- ದೊಡ್ಮನೆ ಆಟಕ್ಕೆ ಮುಹೂರ್ತ ಫಿಕ್ಸ್

    ಇನ್ನೊಬ್ಬ ಯುವಕ.  ಕನಸುಗಳಿಗೆ ಬಣ್ಣ ಹಚ್ಚಿ ಬದುಕನ್ನು ಬಲೂನ್ ನಂತೆ ಹಾರಿ ಬಿಡುವೆ ಎನ್ನುವ ಹುಮ್ಮಸ್ಸಿನ  ಪ್ರೀತಿಯ ಪಯಣ.  ತನಗೆ ಬೇಕಾದಂತೆ ತನ್ನ ಬದುಕು ರೂಪಿಸಿಕೊಳ್ಳಬಹುದು ಎನ್ನುವ ಕಿಚ್ಚಿನಿಂದ ಹೊರಟವನು.ಇವರು ತಾವು ಅಂದುಕೊಂಡಿದ್ದನ್ನು ಸಾಧ್ಯವಾಗಿಸುವರೇ ಎನ್ನುವುದೇ ಭಾವಪೂರ್ಣ ಎದೆ ಬಡಿತದ ಕಥಾವಸ್ತುವಾಗಿ ಕಾಡುವುದು ಎಂದರು ನಿರ್ದೇಶಕ ಚೇತನ್ ಮುಂಡಾಡಿ.

    ನನಗೆ ಸುಮಾರು ವರ್ಷಗಳಿಂದ ಚಿತ್ರರಂಗದವರೊಂದಿಗೆ ಒಡನಾಟವಿದೆ. ನಿರ್ಮಾಪಕನಾಗಿ ಇದು ಮೊದಲ ಚಿತ್ರ. ಚೇತನ್ ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಎಲ್ಲಾ ಕಲಾವಿದರು ಚೆನ್ನಾಗಿ ನಟಿಸಿದ್ದಾರೆ‌. ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರುತ್ತೇವೆ ಎಂದು ನಿರ್ಮಾಪಕ ಪ್ರಶಾಂತ್ ಆಂಜನಪ್ಪ ತಿಳಿಸಿದರು.

    ಚಿತ್ರದಲ್ಲಿ ನಟಿಸಿರುವ ಶೈಲಶ್ರೀ ಧರ್ಮೇಂದ್ರ ಅರಸ್, ಅಥರ್ವ ಪ್ರಕಾಶ್, ಛಾಯಾಗ್ರಾಹಕ ಪ್ರಸನ್ನ, ಹಿನ್ನೆಲೆ ಸಂಗೀತ ನೀಡುರುವ ಅಕ್ಷಯ್ ಹಾಗೂ ಸಂಕಲನಕಾರ ಕೀರ್ತಿರಾಜ್.ಡಿ. ಭಾವಪೂರ್ಣದ ಬಗ್ಗೆ ಮಾತನಾಡಿದರು. ಇದೇ ಸಂದರ್ಭದಲ್ಲಿ ತಮ್ಮ ಸಿನಿಮಾ ಅಂಕಣಗಳಿಗಾಗಿ ರಾಷ್ಟ್ರೀಯ ಪ್ರಶಸ್ತಿ(ತೀರ್ಪುಗಾರರ ವಿಶೇಷ ಪ್ರಶಸ್ತಿ)ಪಡೆದಿರುವ ಹಿರಿಯ ಪತ್ರಕರ್ತ ಬಿ.ಎನ್ ಸುಬ್ರಹ್ಮಣ್ಯ ಅವರನ್ನು ಸನ್ಮಾನಿಸಲಾಯಿತು. ನಿರ್ದೇಶಕರಾದ ಲಿಂಗದೇವರು ಹಾಗೂ ಸತ್ಯಪ್ರಕಾಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಚೇತನ್ ಮುಂಡಾಡಿ ನಿರ್ದೇಶನದ ಹೊಸ ಚಿತ್ರಕ್ಕೆ ಚಾಲನೆ

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಚೇತನ್ ಮುಂಡಾಡಿ ನಿರ್ದೇಶನದ ಹೊಸ ಚಿತ್ರಕ್ಕೆ ಚಾಲನೆ

    ದಿಪು ಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ನಿರ್ದೇಶಕ ಚೇತನ್ ಮುಂಡಾಡಿ.  ಪ್ರಸ್ತುತ ಇವರು ನಿರ್ದೇಶಿಸುತ್ತಿರುವ “ಭಾವಪೂರ್ಣ” ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ 8 ರಿಂದ ಆರಂಭವಾಗಲಿದೆ. ಈ ಬಗ್ಗೆ ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಈವರೆಗೂ ಕಲಾತ್ಮಕ ಚಿತ್ರಗಳನ್ನು ನಿರ್ದೇಶಿಸಿರುವ ನನಗೆ ಇದು ಮೊದಲ ಕಮರ್ಷಿಯಲ್ ಚಿತ್ರ. ಇದು ತೊಂಭತ್ತರ ಕಾಲಘಟ್ಟದಲ್ಲಿ ನಡೆಯುವ ಕಥೆ. ಭಾವನೆಗಳೇ ಇಲ್ಲಿನ ಪಾತ್ರಗಳು. ಪುಟ್ಟಗ್ರಾಮವೊಂದರಲ್ಲಿ 50ರ ವಯಸ್ಸಿನ ವ್ಯಕ್ತಿಯಲ್ಲಿ ಚಿಗುರುವ ಅನಿವಾರ್ಯ ಬಯಕೆಯನ್ನು ಈಡೇರಿಸಿಕೊಳ್ಳಲು ಆತ ಪಡುವ ಪರಿಪಾಟಗಳೇ ಚಿತ್ರದ ಮುಖ್ಯ ಕಥಾಹಂದರ. ಧರ್ಮಣ್ಣ ಎಂಬ ಮುಖ್ಯಪಾತ್ರದಲ್ಲಿ ಹಿರಿಯ ನಟ ರಮೇಶ್ ಪಂಡಿತ್ ಅಭಿನಯಿಸುತ್ತಿದ್ದಾರೆ. ಮಂಜುನಾಥ್ ಹೆಗಡೆ ಮತ್ತೊಂದು ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ಶೈಲಶ್ರೀ, ಮಂಗಳಾ, ನಾಗೇಂದ್ರ ಶಾ, ಅಥರ್ವ ಪ್ರಕಾಶ್, ವಿ.ಮನೋಹರ್, ಸುಜಯ್ ಶಾಸ್ತ್ರಿ, ಎಂ.ಕೆ.ಮಠ, ವಿನ್ಯಾ, ಉಗ್ರಂ ಮಂಜು, ಜೆಜಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸೆಪ್ಟೆಂಬರ್ 8 ರಿಂದ ಸೌತಡ್ಕ, ಸಾಗರ, ಜೋಗ, ಮುರುಡೇಶ್ವರದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಚೇತನ್ ಮುಂಡಾಡಿ ಚಿತ್ರದ ಕುರಿತು ಮಾಹಿತಿ ನೀಡಿದರು.

    ಈ ಚಿತ್ರದಲ್ಲಿ ಧರ್ಮಣ್ಣ ಎನ್ನುವ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಅನ್ವೇಷಣೆಯ ಮೇಲೆ ಕಥೆ ಸಾಗುತ್ತದೆ ಎಂದು ರಮೇಶ್ ಪಂಡಿತ್ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ನನಗೆ ಅಳುವ ಹಾಗೂ ಸಂದೇಶ ನೀಡುವ ಚಿತ್ರಗಳಲ್ಲಿ ಆಸಕ್ತಿ ಇಲ್ಲ. ಜನ ಸಿನಿಮಾ ನೋಡಲು ಬರುವುದು ತಮ್ಮ ನಿತ್ಯದ ಕಷ್ಟಗಳನ್ನು ಮರೆಯುವುದಕ್ಕಾಗಿ. ಚಿತ್ರದಲ್ಲೂ ದುಖದ ಸಂಗತಿ ಇದ್ದರೆ ಯಾರು ಇಷ್ಟ ಪಡುವುದಿಲ್ಲ. ಹಾಗಾಗಿ ಚೇತನ್ ಮುಂಡಾಡಿ ಒಳ್ಳೆಯ ಮನೋರಂಜನೆಯಿರುವ ಕಥೆ ಮಾಡಿಕೊಂಡಿದ್ದಾರೆ. ಅವರಿಗೆ ಬೇಕಾದನ್ನು ಒದಗಿಸುವುದನ್ನು ನಾನು ಮಾಡುತ್ತೇನೆ ಎಂದರು ನಿರ್ಮಾಪಕ ಪ್ರಶಾಂತ್ ಅಂಜನಪ್ಪ. ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಈಗೀಗ ಚೈತ್ರಾ ಹಳ್ಳಿಕೇರಿ ಮುಖವಾಡ ಕಳಚ್ತಾ ಇದ್ದಾರೆ : ಸ್ಪೂರ್ತಿ ಗೌಡ

    “ಭಾವಪೂರ್ಣ” ದ ಬಗ್ಗೆ ಸವಿಸ್ತಾರವಾಗಿ ಸಂಭಾಷಣೆ ಬರೆದಿರುವ ಸುಂದರ್ ವಿವರಿಸಿದರು. ಮತ್ತೊಬ್ಬ ಮುಖ್ಯ ಪಾತ್ರಧಾರಿ ಮಂಜುನಾಥ್ ಹೆಗಡೆ ಸಹ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ವಿ.ಮನೋಹರ್ ಸಂಗೀತ ನಿರ್ದೇಶನ, ಪ್ರಸನ್ನ ಛಾಯಾಗ್ರಹಣ, ಕೀರ್ತಿ ಸಂಕಲನ ಹಾಗೂ ಅನಂತರಾಜ್ ಸಹ ನಿರ್ದೇಶನವಿರುವ ಈ ಚಿತ್ರಕ್ಕೆ ಸುಂದರ್ ವೀಣಾ ಸಂಭಾಷಣೆ ಬರೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಾರ್ವಜನಿಕರಲ್ಲಿ ವಿನಂತಿ: ಸೆನ್ಸಾರ್ ಮುಗಿಸಿಕೊಂಡು ಥೇಟರಿಗೆ ಬರಲು ರೆಡಿ!

    ಸಾರ್ವಜನಿಕರಲ್ಲಿ ವಿನಂತಿ: ಸೆನ್ಸಾರ್ ಮುಗಿಸಿಕೊಂಡು ಥೇಟರಿಗೆ ಬರಲು ರೆಡಿ!

    ಬೆಂಗಳೂರು: ಟೀಸರ್ ಮೂಲಕವೇ ವ್ಯಾಪಕ ಚರ್ಚೆ, ಕುತೂಹಲ ಹುಟ್ಟು ಹಾಕಿರೋ ಚಿತ್ರ `ಸಾರ್ವಜನಿಕರಲ್ಲಿ ವಿನಂತಿ’. ಯಾವ ಸದ್ದುಗದ್ದಲವೂ ಇಲ್ಲದೇ ಚಿತ್ರೀಕರಣ ಮುಗಿಸಿಕೊಂಡು ಆ ನಂತರ ಕೆಲಸ ಕಾರ್ಯಗಳ ಮೂಲಕವೇ ಸೆನ್ಸೇಷನ್ ಕ್ರಿಯೇಟ್ ಮಾಡುತ್ತವಲ್ಲಾ? ಅಂಥಾ ಚಿತ್ರಗಳನ್ನು ಪ್ರೇಕ್ಷಕರು ಗಂಭೀರವಾಗಿ ಪರಿಗಣಿಸುತ್ತಾರೆ. ಈ ವೆರೈಟಿಯ ಚಿತ್ರಗಳಿಗೆ ಗೆಲುವು ಗ್ಯಾರೆಂಟಿ ಎಂಬಂಥಾ ನಂಬಿಕೆಯೂ ಇದೆ. ಇಂಥಾ ನಂಬಿಕೆ ಹುಟ್ಟು ಹಾಕಿರೋ ಸಾರ್ವಜನಿಕರಲ್ಲಿ ವಿನಂತಿ ಸೆನ್ಸಾರ್ ಮುಗಿಸಿಕೊಂಡು ಥೇಟರಿನತ್ತ ಮುಖ ಮಾಡಿದೆ.

    ಕೃಪಾ ಸಾಗರ್ ನಿರ್ದೇಶನದ ಈ ಚಿತ್ರಕ್ಕೆ ಸೆನ್ಸಾರ್ ಕಡೆಯಿಂದ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ. ಇದೇ ಖುಷಿಯಲ್ಲಿ ಚಿತ್ರತಂಡ ಬಿಡುಗಡೆಯ ದಿನಾಂಕವನ್ನೂ ಘೋಷಿಸಿದೆ. ಈ ನಿಟ್ಟಿನಲ್ಲಿ ಹೇಳೋದಾದರೆ ಇದೇ ತಿಂಗಳ 21ರಂದು ತೆರೆಗಾಣಲಿದೆ.

    ಈಗಾಗಲೇ ಒಂದಷ್ಟು ವರ್ಷಗಳಿಂದ ಯೋಗರಾಜ ಭಟ್ ಸೇರಿದಂತೆ ಅನೇಕ ನಿರ್ದೇಶಕರ ಗರಡಿಯಲ್ಲಿ ಪಳಗಿಕೊಂಡಿರುವವರು ಕೃಪಾ ಸಾಗರ್. ಈ ಅವಧಿಯ ತುಂಬಾ ಪ್ರೇಕ್ಷಕರ ನಾಡಿ ಮಿಡಿತವನ್ನು ಅರ್ಥ ಮಾಡಿಕೊಂಡಿರೋ ಅವರು ಸಾಮಾಜಿಕ ಕಾಳಜಿ ಇರೋ ಕಥಾ ಹಂದರವನ್ನು ಈ ಮೂಲಕ ಪಕ್ಕಾ ಕಮರ್ಶಿಯಲ್ ವೇನಲ್ಲಿ ಹೇಳಿದ್ದಾರಂತೆ.

    ಈ ಚಿತ್ರದಲ್ಲಿ ಮದನ್ ರಾಜ್ ಮತ್ತು ಅಮೃತಾ ನಾಯಕ ನಾಯಕಿಯರಾಗಿ ನಟಿಸಿದ್ದಾರೆ. ಮಂಡ್ಯ ರಮೇಶ್, ರಮೇಶ್ ಪಂಡಿತ್ ಮುಂತಾದವರ ಅದ್ಧೂರಿ ತಾರಾಗಣ ಈ ಚಿತ್ರಕ್ಕಿದೆ. ಈ ಸಮಾಜದಲ್ಲಿ ಮೇಲು ನೋಟಕ್ಕೆ ಗೊತ್ತಾಗುವಂಥಾ ಅದೆಷ್ಟೋ ಬಗೆಯ ಅಪರಾಧ ಪ್ರಕರಣಗಳಿವೆ. ಆದರೆ ನಮ್ಮೆಲ್ಲರ ಬೆನ್ನ ಹಿಂದೆ ನಡೆಯೋ ನಿಗೂಢ ಕ್ರೈಮುಗಳದ್ದೊಂದು ಜಗತ್ತಿದೆ. ಅಂಥಾ ವಿರಳ ಸನ್ನಿವೇಶಗಳನ್ನು ಸೇರಿಸಿಕೊಂಡು ಸಾರ್ವಜನಿಕರೆಲ್ಲ ಗಮನಹರಿಸಲೇ ಬೇಕಾದ ಕಥೆಯನ್ನು ಥ್ರಿಲ್ಲರ್ ಶೈಲಿಯಲ್ಲಿ ಹೇಳಲಾಗಿದೆಯಂತೆ.