Tag: ರಮೇಶ್ ಬಂಡಿಸಿದ್ದೇಗೌಡ

  • ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ಜ್ಞಾನೋದಯ – ಕ್ಷಮೆಯಾಚಿಸಿದ ಬಂಡಿಸಿದ್ದೇಗೌಡ

    ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ಜ್ಞಾನೋದಯ – ಕ್ಷಮೆಯಾಚಿಸಿದ ಬಂಡಿಸಿದ್ದೇಗೌಡ

    ಮಂಡ್ಯ: ಕಾಶ್ಮೀರದಲ್ಲಿನ (Jammu Kashmir) ನರಮೇಧಕ್ಕೆ ಆರ್ಟಿಕಲ್ 370 ತೆಗೆದಿದ್ದೇ ಕಾರಣ ಎಂದು ಹೇಳಿಕೆ ನೀಡಿದ್ದ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ (Ramesh Bandisidde gowda) ಇದೀಗ ಕ್ಷಮೆಯಾಚಿಸಿದ್ದಾರೆ. ಪಹಲ್ಗಾಮ್ ಉಗ್ರರ ದಾಳಿಯ (Pahalgam Terrorist Attack) ಬಳಿಕ ನೀಡಿದ್ದ ವಿವಾದಾತ್ಮಕ ಹೇಳಿಕೆಯಿಂದಾಗಿ ರಮೇಶ್ ಬಂಡಿಸಿದ್ದೇಗೌಡ ಜನರಿಂದ ಛೀಮಾರಿಗೊಳಗಾಗಿದ್ದರು.

    ಶ್ರೀರಂಗಪಟ್ಟಣ (Srirangapatna) ತಾಲೂಕಿನ ಕೆಆರ್‌ಎಸ್‌ನಲ್ಲಿ (KRS) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಹಾಗೆ ಮಾತನಾಡಬಾರದಿತ್ತು, ನನ್ನ ಮಾತಿನಿಂದ ಎಲ್ಲರಿಗೂ ನೋವಾಗಿದೆ. ಹೀಗಾಗಿ ನನ್ನ ಹೇಳಿಕೆಯನ್ನು ವಾಪಸ್ ಪಡೆದು ಕ್ಷಮೆಯಾಚಿಸುತ್ತೇನೆ ಎಂದು ಹೇಳಿದರು.ಇದನ್ನೂ ಓದಿ: ಆರ್ಟಿಕಲ್ 370 ತೆಗೆದಿದ್ದೇ ಪಹಲ್ಗಾಮ್ ನರಮೇಧಕ್ಕೆ ಕಾರಣ: ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ 

    ದೇಶದಲ್ಲಿ ಆಯಾ ಸರ್ಕಾರಗಳು ಭದ್ರತೆಯನ್ನು ಹೆಚ್ಚಿಸಬೇಕು. ಸದ್ಯ ಕಾಶ್ಮೀರದಲ್ಲಿ ನರಮೇಧ ಮಾಡಿರುವವರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಬೇಕು. ಈ ಘಟನೆಯಲ್ಲಿ ಸಾವನ್ನಪ್ಪಿರುವವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಸ್ಥರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದರು.

    ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿದ್ದ ಉಗ್ರರ ದಾಳಿಯ ಕುರಿತು ಏ.23 ರಂದು ಮಾತನಾಡಿದ್ದ ಅವರು, ಆರ್ಟಿಕಲ್ 370 ತೆಗೆದಿರುವುದೇ ಪಹಲ್ಗಾಮ್ ಘಟನೆ ಕಾರಣ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆರ್ಟಿಕಲ್ 370 ತೆಗೆಯೋದಕ್ಕೂ ಮೊದಲು ಯೋಚನೆ ಮಾಡಬೇಕಿತ್ತು. ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಅತಿಯಾದ ಆತ್ಮವಿಶ್ವಾಸದಿಂದ ಈ ಘಟನೆ ನಡೆದಿದೆ ಎನ್ನುವ ಮೂಲಕ ಘಟನೆಗೆ ಪರೋಕ್ಷವಾಗಿ ಬಿಜೆಪಿ ಕಾರಣ ಎಂದಿದ್ದರು.

    ಆರ್ಟಿಕಲ್ 370 ತೆಗೆಯುವ ಮುನ್ನ ಕಾಶ್ಮೀರದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿತ್ತು. ಅವರ ದುಡುಕಿನ ನಿರ್ಧಾರದಿಂದ ಈ ಘಟನೆ ನಡೆದಿದೆ. ಜನರ ಭಾವನೆ ಅರ್ಥ ಮಾಡಿಕೊಂಡು ಆರ್ಟಿಕಲ್ 370 ತೆಗೆಯಬೇಕಿತ್ತು ಎಂದು ಕಿಡಿಕಾರಿದ್ದರು.ಇದನ್ನೂ ಓದಿ: ಪಹಲ್ಗಾಮ್ ಉಗ್ರರ ದಾಳಿ: ಅಮಾಯಕರ ಹತ್ಯೆಯಿಂದ ಆಘಾತವಾಗಿದೆ ಎಂದ ಆಮೀರ್ ಖಾನ್

  • ಮುಡಾ ಹಗರಣಕ್ಕೆ ಅಧಿಕಾರಿ ಕಾರಣವೇ ಹೊರತು ಪ್ರಾಧಿಕಾರ ಸಮಿತಿಯಲ್ಲ – ರಮೇಶ ಬಂಡಿಸಿದ್ದೇಗೌಡ

    ಮುಡಾ ಹಗರಣಕ್ಕೆ ಅಧಿಕಾರಿ ಕಾರಣವೇ ಹೊರತು ಪ್ರಾಧಿಕಾರ ಸಮಿತಿಯಲ್ಲ – ರಮೇಶ ಬಂಡಿಸಿದ್ದೇಗೌಡ

    ಹಾಸನ: ಅಧಿಕಾರಿಗಳು 50:50 ನಿವೇಶನ ಕೊಡುವುದನ್ನು ಯಾವುದೇ ಕಾರಣಕ್ಕೂ ಸಭೆಗೆ ಮಂಡಿಸಲ್ಲ. ಅವರಿಗೆ ಆ ಅಧಿಕಾರವಿದೆ. ಮುಡಾ ಹಗರಣಕ್ಕೆ (MUDA Scam) ಅಧಿಕಾರಿಗಳು ಕಾರಣವೇ ಹೊರತು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಮಿತಿಯಲ್ಲ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ (Ramesha Bandisiddegowda) ಹೇಳಿದರು.

    ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ (Siddaramaiah) ಅವರು ನೇರ ಅರ್ಜಿದಾರರಲ್ಲ. ಸಿದ್ದರಾಮಯ್ಯ ಅವರ ಒಂದೇ ಒಂದು ಸಹಿ ಇಲ್ಲ. ಯಾರ ಗಮನಕ್ಕೂ ತರದೇ ಅಧಿಕಾರಿಗಳೇ ಇದನ್ನ ಮಾಡಿದ್ದಾರೆ. ಇದು ಮುಡಾ ಅಧ್ಯಕ್ಷರು ಮತ್ತು ಯಾವ ಸದಸ್ಯರ ಗಮನಕ್ಕೂ ಬರಲ್ಲ. ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ. ಸವಲತ್ತು ಪಡೆದಿರುವ ಎಲ್ಲರ ಹೆಸರು ಹೇಳಬೇಕು. ತನಿಖೆ ನಡೆಯುತ್ತಿದೆ ಸತ್ಯಾಂಶ ಹೊರಬರುತ್ತದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: Fashion Tips| ಹೆಣ್ಣಿಗೆ ಸೀರೆ ಯಾಕೆ ಅಂದ?- ನಾರಿಮಣಿಯರ ಗಮನ ಸೆಳೆದ ಬನಾರಸ್ ಸೀರೆ

    ನಾನು ಒಬ್ಬ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ. ನಾನು ಮೂರು ಬಾರಿ ಶಾಸಕನಾಗಿ ಮುಡಾದಲ್ಲಿ ಕೆಲಸ ಮಾಡಿದ್ದೇನೆ. ಅರ್ಜಿ ಇಲ್ಲದೇನೆ ಹೇಗೆ ಮಂಜೂರಾತಿ ಮಾಡಲು ಆಗುತ್ತೆ? ಅರ್ಜಿ ಇಲ್ಲ ಎಂದು ನಾವೇನು ಹೇಳಿಲ್ಲ. ಮಂಜೂರಾತಿ ಮಾಡಿಕೊಡಿ ಎಂದು ಅರ್ಜಿ ಕೊಟ್ಟಿದ್ದಾರೆ. ತಪ್ಪು ಬರೆದಾಗ ವೈಟ್ನರ್ ಹಾಕೋದು ಸಹಜ. ನ್ಯಾಯಾಂಗ ತನಿಖೆಗೆ ಕೊಟ್ಟಿದ್ದೇವೆ ಪರಿಶೀಲನೆ ಮಾಡಲಿ ಎಂದು ತಿಳಿಸಿದರು. ಇದನ್ನೂ ಓದಿ: ಮಂಕಿಪಾಕ್ಸ್ ಕಾಯಿಲೆ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾದಲ್ಲಿ 50 ಬೆಡ್ ಮೀಸಲು – ಶರಣ ಪ್ರಕಾಶ್ ಪಾಟೀಲ್

    ಯಡಿಯೂರಪ್ಪ (BS Yediyurappa) ಅವರ ತಂಗಿ ಮಕ್ಕಳಿಗೆ ನಿವೇಶನಗಳನ್ನು ಕೊಟ್ಟಿಲ್ವಾ? 50:50 ಯಲ್ಲಿ ನಿವೇಶನ ತಗೊಂಡಿಲ್ವಾ? ಪ್ರಾಮಾಣಿಕರಾಗಿದ್ದರೆ ಅವರು ತಿಳಿಸಲಿ. ಜೆಡಿಎಸ್ ಶಾಸಕರು (JDS MLAs) 50:50 ಹಂಚಿಕೆ ಅಡಿಯಲ್ಲಿ ಎಷ್ಟು ನಿವೇಶನ ತೆಗೆದುಕೊಂಡಿದ್ದಾರೆ? 1800-2000 ಸೈಟ್‌ಗಳನ್ನು ವ್ಯವಸ್ಥಿತವಾಗಿ ತೆಗೆದುಕೊಂಡಿದ್ದಾರಲ್ಲಾ? ಅದು ಯಾರದ್ದು? ಇವರು, ಇವರ ತಮ್ಮನ ಮಕ್ಕಳು, ಅಕ್ಕನ ಮಕ್ಕಳು, ಚಿಕ್ಕಪ್ಪ, ದೊಡ್ಡಪ್ಪನ ಮಕ್ಕಳಿಗೆ ಕೊಟ್ಟಿಲ್ವಾ? ಎಂದು ಕಿಡಿಕಾರಿದರು.

    ಸಿಎಂ, ಡಿಸಿಎಂ ದೆಹಲಿ ಭೇಟಿಯ ವಿಚಾರ ತಿಳಿಸಿದ ಅವರು, ಎಲ್ಲಾ ಶಾಸಕರು ದೆಹಲಿಗೆ ಹೋಗಿಲ್ಲ. ಸಿಎಂ ಮತ್ತು ಡಿಸಿಎಂ ಅವರು ರಾಜ್ಯದ ಇವತ್ತಿನ ಪರಿಸ್ಥಿತಿ ಬಗ್ಗೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಹಿತಿ ನೀಡಲು ದೆಹಲಿಗೆ ಹೋಗಿದ್ದಾರೆ. ಅವರನ್ನು ದೆಹಲಿಗೆ ಹೋಗುವುದಕ್ಕೆ ಎಲ್ಲಾ ಶಾಸಕರು ಒತ್ತಾಯ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಸಂಬಂಧಿಕನಿಂದಲೇ 10ರ ಬಾಲಕಿ ಮೇಲೆ ಅತ್ಯಾಚಾರ – ಅರೆಬೆತ್ತಲೆ ಸ್ಥಿತಿಯಲ್ಲಿ ಶವ ಪತ್ತೆ; ಕಾಮುಕ ಅರೆಸ್ಟ್

    ರಾಷ್ಟ್ರಪತಿ ಅವರನ್ನು ಭೇಟಿ ಮಾಡೋಣ ಎಂದಿದ್ದೇವೆ. ಬಿಜೆಪಿ-ಜೆಡಿಎಸ್ ನವರು ಗದಾಪ್ರಹಾರ ಮಾಡುತ್ತಿದ್ದಾರೆ. ಅದನ್ನು ರಾಷ್ಟ್ರಪತಿಗಳಿಗೆ ಮನದಟ್ಟು ಮಾಡಿಕೊಡೋಣ ಎಂದು ಹೇಳಿದ್ದೇವೆ. ಆದಷ್ಟು ಬೇಗ ಎಲ್ಲಾ ಶಾಸಕರು ಹೋಗಿ ರಾಷ್ಟ್ರಪತಿಗಳನ್ನು ಭೇಟಿ ಮಾಡುತ್ತೇವೆ ಎಂದು ಹೇಳಿದರು.

  • ಪ್ರಜಾಪ್ರಭುತ್ವ ಚುನಾಯಿತ ಸರ್ಕಾರ ಉರುಳಿಸಲು ಯತ್ನ: ರಮೇಶ್ ಬಂಡಿಸಿದ್ದೇಗೌಡ

    ಪ್ರಜಾಪ್ರಭುತ್ವ ಚುನಾಯಿತ ಸರ್ಕಾರ ಉರುಳಿಸಲು ಯತ್ನ: ರಮೇಶ್ ಬಂಡಿಸಿದ್ದೇಗೌಡ

    – ಸೋಮವಾರದಿಂದ ಪ್ರತಿದಿನ ರಾಜ್ಯಪಾಲರ ವಿರುದ್ಧ ಕಪ್ಪು ದಿನ ಆಚರಣೆ

    ಮಂಡ್ಯ: ಪ್ರಜಾಪ್ರಭುತ್ವ ಚುನಾಯಿತ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿದ್ದಾರೆ. ಏನು ಕಳ್ಳತನ ಮಾಡಿದ್ದಾರೆ ಎಂದು ಪ್ರಾಸಿಕ್ಯೂಷನ್ (Prosecution)  ಕೊಟ್ಟಿದ್ದಾರೆ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ (Ramesha Bandisiddegowda) ರಾಜ್ಯಪಾಲರು ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

    ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ವಿಚಾರವನ್ನು ವಿರೋಧಿಸಿ ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಾನು ಒಬ್ಬ ಮುಡಾ ಸದಸ್ಯನಾಗಿದ್ದೇನೆ. ಯಾರ ಕಾಲದಲ್ಲಿ 50:50 ಅಡಿ ಸೈಟ್ ಕೊಟ್ಟಿರೋದು? ಸಿದ್ದರಾಮಯ್ಯ ಮೇಲೆ ಪ್ರಾಸಿಕ್ಯೂಷನ್ ಕೊಡಬಾರದಿತ್ತು. ಹಾಗಿದ್ರೆ ಮೊದಲು ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ಬಾಮಿ ಮೇಲೆ ಪ್ರಾಷಿಕ್ಯೂಷನ್ ಕೊಡಬೇಕು. ಬಿಜೆಪಿಯವರು ಸ್ವತಂತ್ರ ಹರಣ ಮಾಡುವ ಕೆಲಸ ಮಾಡುತ್ತಿದ್ದಾರೆ. ಹೆಚ್‌ಡಿಕೆ, ನಿರಾಣಿ ಮೇಲೆ ಪ್ರಾಸಿಕ್ಯೂಷನ್ ಕೇಳಿದ್ದಾರೆ. ಅವರ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದೀರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: 8ನೇ ಕ್ಲಾಸ್ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನಿಂದಲೇ ರೇಪ್ – ಆಸ್ಪತ್ರೆಗೆ ದಾಖಲಾದ 20 ದಿನಗಳ ಬಳಿಕ ಸಾವು

    ಇಂದು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲಾಗಿದೆ. ಸಿದ್ದರಾಮಯ್ಯರ ಪರ 135 ಶಾಸಕರಿದ್ದೇವೆ. ಯಾವುದೇ ಕಾರಣಕ್ಕೂ ಸಿಎಂ ಸ್ಥಾನದಿಂದ ಕೆಳಗಿಳಿಯಲು ಬಿಡಲ್ಲ. ಕಳಂಕರಹಿತ ಸಿಎಂ ಮೇಲೆ ಆಪಾದನೆ ಮಾಡುತ್ತಿರೋದು ಸರಿಯಲ್ಲ. ಇಂದು ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ಸೋಮವಾರದಿಂದ ಪ್ರತಿದಿನ ರಾಜ್ಯಪಾಲರ ವಿರುದ್ಧ ಕಪ್ಪು ದಿನ ಆಚರಣೆ ಮಾಡುತ್ತೇವೆ ಎಂದು ಹರಿಹಾಯ್ದರು. ಇದನ್ನೂ ಓದಿ: ಇದು ದೊಡ್ಡ ಷಡ್ಯಂತ್ರ.. ಕಾನೂನಿನಡಿ ಹೋರಾಟ ಮಾಡ್ತೀನಿ: ಸಿಎಂ ಸಿದ್ದರಾಮಯ್ಯ

  • ಪೊಲೀಸರ ಮುಂದೆಯೇ ಮಾಜಿ ಶಾಸಕರ ಗೂಂಡಾಗಿರಿ

    ಪೊಲೀಸರ ಮುಂದೆಯೇ ಮಾಜಿ ಶಾಸಕರ ಗೂಂಡಾಗಿರಿ

    ಮಂಡ್ಯ: ಪೊಲೀಸರ ಮುಂದೆಯೇ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಗೂಂಡಾಗಿರಿ ನಡೆಸಿದ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆಯಲ್ಲಿ ನಡೆದಿದೆ.

    ಅರಕೆರೆ ಗ್ರಾಮದಲ್ಲಿ ರಸ್ತೆ ಅಗಲೀಕರಣ ನಡೆಯುತ್ತಿದ್ದ ಸ್ಥಳಕ್ಕೆ ಬಂದ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಜೆಸಿಬಿ ಚಾಲಕರ ಮೇಲೆ ಹಲ್ಲೆ ನಡೆಸಿದ್ದಾರೆ. ರಸ್ತೆ ಅಗಲೀಕರಣ ನಡೆಸಕೂಡದು ಎಂದು ಆಗ್ರಹಿಸಿ ಪೊಲೀಸರ ಮುಂದೆಯೇ ಗೂಂಡಾಗಿರಿ ಮಾಡಿದ್ದಾರೆ. ಸ್ಥಳದಲ್ಲಿದ್ದ ಅಧಿಕಾರಿಗಳು ಮತ್ತು ಪೊಲೀಸರು ಮಾಜಿ ಶಾಸಕರಿಗೆ ಸ್ಪಷ್ಟನೆ ನೀಡಿದ್ರೂ ಕೇಳದ ಮಾಜಿ ಶಾಸಕ ಪುಡಿ ರೌಡಿಯಂತೆ ವರ್ತಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಮಂಡ್ಯ ಎಸ್‍ಪಿ ಪರಶುರಾಮ್, ಅರಕೆರೆಯಲ್ಲಿ ಇಂದು ರಸ್ತೆ ಅಗಲಿಕರಣ ಕೆಲಸ ನಡೆಯುತ್ತಿತ್ತು. ಅಧಿಕಾರಿಗಳು ಎಲ್ಲರೂ ಸ್ಥಳದಲ್ಲಿದ್ದು ಸಮಾಜಯಿಷಿ ನೀಡಿದ್ರು ಕೆಲವರು ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಿ, ಕೆಲಸಕ್ಕೆ ಅಡ್ಡಿಪಡಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

    ಇನ್ನು ಸರ್ಕಾರಿ ಅಧಿಕಾರಿಗಳ ಅನತಿಯಂತೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ಮಾಜಿ ಶಾಸಕರ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.