Tag: ರಮೇಶ್‌ ಬಿಧುರಿ

  • ಚುನಾವಣೆಯಲ್ಲಿ ಗೆದ್ದರೆ ಪ್ರಿಯಾಂಕ ಕೆನ್ನೆಯಂತೆ ನಯವಾದ ರಸ್ತೆಗಳನ್ನು ನಿರ್ಮಿಸುತ್ತೇನೆ: ಬಿಜೆಪಿ ಅಭ್ಯರ್ಥಿ ವಿವಾದಾತ್ಮಕ ಹೇಳಿಕೆ

    ಚುನಾವಣೆಯಲ್ಲಿ ಗೆದ್ದರೆ ಪ್ರಿಯಾಂಕ ಕೆನ್ನೆಯಂತೆ ನಯವಾದ ರಸ್ತೆಗಳನ್ನು ನಿರ್ಮಿಸುತ್ತೇನೆ: ಬಿಜೆಪಿ ಅಭ್ಯರ್ಥಿ ವಿವಾದಾತ್ಮಕ ಹೇಳಿಕೆ

    ನವದೆಹಲಿ: ಚುನಾವಣೆಯಲ್ಲಿ ಗೆದ್ದರೆ ಪ್ರಿಯಾಂಕ ಕೆನ್ನಯಂತೆ (Priyanka Gandhi Cheeks) ನಯವಾದ ರಸ್ತೆಗಳನ್ನು ನಿರ್ಮಿಸುತ್ತೇನೆ ಎಂದು ಕಲ್ಕಾಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ (Ramesh Bidhuri) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ನವದೆಹಲಿ ವಿಧಾನಸಭೆ ಚುನಾವಣೆ ಪ್ರಯುಕ್ತ ಪ್ರಚಾರ ನಡೆಸಿದ ವೇಳೆ ಈ ಹೇಳಿಕೆ ನೀಡಿದ್ದಾರೆ. ಬಿಹಾರದಲ್ಲಿ ಹೇಮಾಮಾಲಿನಿಯ ಕೆನ್ನೆಯಂತೆ ರಸ್ತೆಗಳನ್ನು ಸುಗಮಗೊಳಿಸುವುದಾಗಿ ಲಾಲು ಹೇಳಿದರು. ಆದರೆ ಲಾಲು ಸುಳ್ಳು ಹೇಳಿದ್ದರು. ನಾನು ನಿಮಗೆ ಭರವಸೆ ನೀಡುತ್ತೇನೆ. ಓಖ್ಲಾ ಮತ್ತು ಸಂಗಮ್ ವಿಹಾರ್‌ನಲ್ಲಿ ನಿರ್ಮಿಸಿರುವಂತೆ, ಕಲ್ಕಾಜಿಯಲ್ಲೂ ಪ್ರಿಯಾಂಕ ಗಾಂಧಿಯವರ ಕೆನ್ನಯಂತಹ ರಸ್ತೆಗಳನ್ನು ನಿರ್ಮಿಸುತ್ತೇನೆ ಎಂದರು. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದೆ. ಇದನ್ನೂ ಓದಿ: ದರ ಏರಿಕೆ; ಟಿಕೆಟ್ ತೆಗೆದುಕೊಳ್ಳದೇ ಬಸ್‌ನಲ್ಲಿ ಪ್ರಯಾಣಿಸಿ ವಾಟಾಳ್ ಪ್ರತಿಭಟನೆ 

    ಪ್ರಿಯಾಂಕಾ ಗಾಂಧಿ ಬಗ್ಗೆ ರಮೇಶ್ ಬಿಧುರಿ ಅವರ ಹೇಳಿಕೆ ನಾಚಿಕೆಗೇಡಿನ ಸಂಗತಿ ಮಾತ್ರವಲ್ಲದೆ ಮಹಿಳೆಯರ ಬಗ್ಗೆ ಅವರ ಅಸಹ್ಯ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಬಳಿಕ ಮತ್ತೊಮ್ಮೆ ಸ್ಪಷ್ಟನೆ ನೀಡಿದ ಬಿಧುರಿ, ಹೇಮಾ ಮಾಲಿನಿ ಕೂಡ ಮಹಿಳೆಯೇ. ತಪ್ಪು ಮಾಡಿದವರು ಮೊದಲು ಕ್ಷಮೆ ಕೇಳಲಿ. ಅವರು ಸರಳ ಕುಟುಂಬದಿಂದ ಬಂದವರು. ಕಾಂಗ್ರೆಸ್ ಮೊದಲು ಸರಿದಾರಿಗೆ ತರಲಿ. 140 ಕೋಟಿ ಜನ ಸಾಮಾನ್ಯರಿದ್ದಾರೆ ಅಲ್ಲವೇ? ಹೇಮಾ ಮಾಲಿನಿ ಅವರ ವಿರುದ್ಧ ಕಾಮೆಂಟ್ ಮಾಡಿದಾಗ ಅವರು ಮಹಿಳೆ ಅಲ್ಲ ಎಂದರ್ಥನಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸ್ವಾಮಿ ಅವಧೇಶಾನಂದ ಗಿರಿ, ಸದ್ಗುರು ಭೇಟಿಯಾದ ಅಮಿತ್‌ ಶಾ

    ಕಾಂಗ್ರೆಸ್‌ ಟೀಕೆಯ ಬಳಿಕ ಪ್ರತಿಕ್ರಿಯಿಸಿದ ಬಿಧುರಿ, ಲಾಲು ಪ್ರಸಾದ್‌ ಅವರು ಮಾತನಾಡಿದ್ದ ದಾಟಿಯಲ್ಲಿ ಹೇಳಿಕೆ ನೀಡಿದ್ದೇನೆ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ರೆ ವಿಷಾದಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಆಂಧ್ರ, ತಮಿಳುನಾಡಿನಲ್ಲಿ ನಮಗಿಂತಲೂ ಹೆಚ್ಚಿನ ದರ ಇದೆ: ಶಿವಾನಂದ ಪಾಟೀಲ್ ಸಮರ್ಥನೆ

  • ಬಿಜೆಪಿ ನಾಯಕನಿಂದ ನಿಂದನೆಗೊಳಗಾದ ಸಂಸದರನ್ನು ರಾಹುಲ್ ಗಾಂಧಿ ಭೇಟಿ

    ಬಿಜೆಪಿ ನಾಯಕನಿಂದ ನಿಂದನೆಗೊಳಗಾದ ಸಂಸದರನ್ನು ರಾಹುಲ್ ಗಾಂಧಿ ಭೇಟಿ

    – ಈಗ ನಾನು ಒಬ್ಬಂಟಿಯಲ್ಲ ಅಂದ್ರು ಡ್ಯಾನಿಶ್ ಅಲಿ

    ನವದೆಹಲಿ: ಬಿಜೆಪಿ ನಾಯಕ, ಸಂಸದ ರಮೇಶ್ ಬಿಧುರಿಯಿಂದ (Ramesh Bidhuri) ನಿಂದನೆಗೊಳಗಾದ ಬಹುಜನ ಸಮಾಜ ಪಕ್ಷದ (BSP) ಸಂಸದ ಡ್ಯಾನಿಶ್ ಅಲಿಯನ್ನು (Danish Ali) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಯಾಗಿದ್ದಾರೆ.

    ಡ್ಯಾನಿಶ್ ಅಲಿಯನ್ನು ಭೇಟಿಯಾದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಾಹುಲ್ (Rahul Gandhi), ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ಎಂದು ಹೇಳಿದ್ದಾರೆ. ರಾಹುಲ್‍ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಹಾಗೂ ಸಂಸದ ಇಮ್ರಾನ್ ಪ್ರತಾಪಗಢಿ ಸಾಥ್ ನೀಡಿದ್ದಾರೆ.

    ಇತ್ತ ಭೇಟಿ ಬಳಿಕ ಡ್ಯಾನಿಶ್ ಅಲಿ ಮಾತನಾಡಿ, ರಾಹುಲ್ ಗಾಂಧಿ ಭೇಟಿ ಬಳಿಕ ನಾನು ಒಂಟಿಯಲ್ಲ ಎಂಬುದು ಮನವರಿಕೆಯಾಯ್ತು. ರಾಹುಲ್ ಗಾಂಧಿಯವರು ಬಂದು ನನ್ನ ಜೊತೆ ಮಾತುಕತೆ ನಡೆಸುವ ಮೂಲಕ ನನಗೆ ಧೈರ್ಯ ತುಂಬಿದರು. ಆಗಿದ್ದನ್ನು ಮನಸ್ಸಿಗೆ ಹಚ್ಚಿಕೊಳ್ಳಬೇಡಿ, ಅದರ ಕಡೆ ಹೆಚ್ಚಿನ ಗಮನವನ್ನೂ ಕೊಡಬೇಡಿ. ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ ಎಂದು ಧೈರ್ಯದ ಮಾತುಗಳನ್ನಾಡಿದರು. ಹೀಗಾಗಿ ಒಬ್ಬಂಟಿ ಎಂದು ಈಗ ನನಗನಿಸುತ್ತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಮುಲ್ಲಾ, ಭಯೋತ್ಪಾದಕ – ಲೋಕಸಭೆಯಲ್ಲಿ ಡ್ಯಾನಿಶ್‌ ಅಲಿಗೆ ಬಿಜೆಪಿ ಸಂಸದನಿಂದ ನಿಂದನೆ

    ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ದಾಳಿಯಾಗಿದೆ. ಇದೀಗ ಅಮೃತಕಾಲದಲ್ಲಿ ಹೊಸ ಸಂಸತ್ತಿನಲ್ಲಿ ದ್ವೇಷದ ಅಂಗಡಿಗಳು ಬೀದಿಗಿಳಿದಿರುವುದು ವಿಷಾದನೀಯ, ಲೋಕಸಭೆಯೇ ನಮ್ಮ ರಕ್ಷಕ ಎಂದು ಡ್ಯಾನಿಶ್ ಹೇಳಿದರು. ಇತ್ತ ರಾಹುಲ್ ಗಾಂಧಿ ಫೋಟೋ ಸಮೇತ ‘ಎಕ್ಸ್’ ನಲ್ಲಿ ಅಪ್ಲೋಡ್ ಮಾಡಿ, ರಮೇಶ್ ಬಿಧುರಿ ಸಂಸತ್‍ನಲ್ಲಿ ನಾಚಿಗೇಡಿನ ವರ್ತನೆ ತೋರಿದ್ದಾರೆ. ಈ ಮೂಲಕ ಅವರು ಸದನದ ಘನತೆಗೆ ಕಳಂಕ ತಂದಿದ್ದಾರೆ. ಪ್ರಜಾಪ್ರಭುತ್ವದ ದೇವಾಲಯದಲ್ಲಿ ಇಂತಹ ದ್ವೇಷ ಮತ್ತು ದ್ವೇಷದ ಮನಸ್ಥಿತಿಯನ್ನು ಪಕ್ಷವು ಬಲವಾಗಿ ವಿರೋಧಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

    ನಡೆದಿದ್ದೇನು..?: ಲೋಕಸಭೆಯಲ್ಲಿ (Loksabha) ಚಂದ್ರಯಾನದ ಯಶಸ್ಸು ಕುರಿತು ಚರ್ಚೆಯ ಸಂದರ್ಭದಲ್ಲಿ ರಮೇಶ್ ಬಿಧುರಿಯವರು ಡ್ಯಾನಿಶ್ ಅಲಿಯನ್ನು ಮುಲ್ಲಾ, ಭಯೋತ್ಪಾದಕ ಎಂದು ಕರೆಯುವ ಮೂಲಕ ನಿಂದಿಸಿದ್ದಾರೆ. ರಮೇಶ್ ಬಿಧುರಿ ಹೇಳಿಕೆಯ ವಿರುದ್ಧ ಸ್ಪೀಕರ್ ಓಂ ಬಿರ್ಲಾ ಸಿಟ್ಟಾಗಿದ್ದು ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮುಲ್ಲಾ, ಭಯೋತ್ಪಾದಕ – ಲೋಕಸಭೆಯಲ್ಲಿ ಡ್ಯಾನಿಶ್‌ ಅಲಿಗೆ ಬಿಜೆಪಿ ಸಂಸದನಿಂದ ನಿಂದನೆ

    ಮುಲ್ಲಾ, ಭಯೋತ್ಪಾದಕ – ಲೋಕಸಭೆಯಲ್ಲಿ ಡ್ಯಾನಿಶ್‌ ಅಲಿಗೆ ಬಿಜೆಪಿ ಸಂಸದನಿಂದ ನಿಂದನೆ

    ನವದೆಹಲಿ: ಬಹುಜನ ಸಮಾಜ ಪಕ್ಷದ (BSP) ಸಂಸದ ಡ್ಯಾನಿಶ್ ಅಲಿ (Danish Ali) ಅವರನ್ನು ಬಿಜೆಪಿ ಸಂಸದ ರಮೇಶ್ ಬಿಧುರಿ (Ramesh Bidhuri) ಅವರು ಲೋಕಸಭೆಯಲ್ಲಿ ಮುಲ್ಲಾ, ಭಯೋತ್ಪಾದಕ ಎಂದು ಕರೆಯುವ ಮೂಲಕ ನಿಂದಿಸಿದ್ದಾರೆ.

    ಲೋಕಸಭೆಯಲ್ಲಿ ಚಂದ್ರಯಾನದ ಯಶಸ್ಸು ಕುರಿತು ಚರ್ಚೆಯ ಸಂದರ್ಭದಲ್ಲಿ ರಮೇಶ್‌ ಬಿಧುರಿ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಾರೆ. ರಮೇಶ್‌ ಬಿಧುರಿ ಹೇಳಿಕೆಯ ವಿರುದ್ಧ ಸ್ಪೀಕರ್‌ ಓಂ ಬಿರ್ಲಾ (Om Birla) ಸಿಟ್ಟಾಗಿದ್ದು ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಮಹಿಳಾ ಕಾರ್ಯಕರ್ತೆಯರಿಂದ ಸನ್ಮಾನ- ತಲೆಬಾಗಿ ಕೈಮುಗಿದ ಪ್ರಧಾನಿ

    ಡ್ಯಾನಿಶ್ ಅಲಿ ಲೋಕಸಭೆಯಲ್ಲಿ (Lok Sabha) ಉತ್ತರ ಪ್ರದೇಶದ ಅಮ್ರೋಹಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಬಿಧುರಿ ಹೇಳಿಕೆಗೆ ರಕ್ಷಣಾ ಸಚಿವ ಮತ್ತು ಲೋಕಸಭೆಯ ಉಪನಾಯಕ ರಾಜನಾಥ್ ಸಿಂಗ್ (Rajnath Singh) ವಿಷಾದ ವ್ಯಕ್ತಪಡಿಸಿದ್ದಾರೆ.

    ಸದಸ್ಯರು ಮಾಡಿದ ಟೀಕೆಗಳಿಂದ ಪ್ರತಿಪಕ್ಷಗಳಿಗೆ ನೋವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ರಕ್ಷಣಾ ಸಚಿವರು ಹೇಳಿದರು. ಪ್ರತಿಪಕ್ಷಗಳು ಕ್ಷಮೆಯಾಚನೆ ಸಾಕಾಗುವುದಿಲ್ಲ. ಬಿಧುರಿ ಅವರನ್ನು ಅಮಾನತುಗೊಳಿಸಬೇಕು ಅಥವಾ ಬಂಧಿಸಬೇಕು ಎಂದು ಹೇಳಿವೆ.

    ಇದು ಸಂಪೂರ್ಣ ನಾಚಿಕೆಗೇಡಿನ ಸಂಗತಿ. ರಾಜನಾಥ್ ಸಿಂಗ್ ಅವರ ಕ್ಷಮೆಯಾಚನೆ ಸ್ವೀಕಾರಾರ್ಹವಲ್ಲ ಮತ್ತು ಅರೆಮನಸ್ಸಿನದು. ಇದು ಸಂಸತ್ತಿಗೆ ಮಾಡಿದ ಅವಮಾನ. ಇದು ಅಮಾನತುಗೊಳಿಸಬಹುದಾದ ಸ್ಪಷ್ಟ ಪ್ರಕರಣ. ಬಿಧುರಿ ಹೇಳಿಕೆಯಿಂದ ಪ್ರತಿಯೊಬ್ಬ ಭಾರತೀಯನಿಗೂ ಅವಮಾನವಾಗಿದೆ” ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಆಗ್ರಹಿಸಿದ್ದಾರೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]