Tag: ರವಿರಾಜ್

  • ನಿರ್ದೇಶಕನಿಗೆ ಕಾರು ಉಡುಗೊರೆ ನೀಡಿದ ರಾಧಿಕಾ ಕುಮಾರಸ್ವಾಮಿ

    ನಿರ್ದೇಶಕನಿಗೆ ಕಾರು ಉಡುಗೊರೆ ನೀಡಿದ ರಾಧಿಕಾ ಕುಮಾರಸ್ವಾಮಿ

    ಯಾವುದೇ ಚಿತ್ರವಾದರೂ ಸರಿ. ಮೊದಲು ಬಂಡಾವಳ ಹಾಕಿದ ನಿರ್ಮಾಪಕರಿಗೆ ಆ ಸಿನಿಮಾ ಮೆಚ್ಚುಗೆಯಾಗಬೇಕು. ನಿರ್ಮಾಪಕರಿಗೆ ಸಿನಿಮಾ ಇಷ್ಟವಾದಾರೆ ನಿರ್ದೇಶಕ ಅರ್ಧ ಗೆದ್ದ ಹಾಗೆ. ರಾಧಿಕಾ ಕುಮಾರಸ್ವಾಮಿ  (Radhika Kumaraswamy)ಅವರು ನಾಯಕಿಯಾಗಿ ನಟಿಸಿರುವ, ರವಿರಾಜ್ ನಿರ್ಮಾಣದ ಹಾಗೂ ಎಂ.ಶಶಿಧರ್ ನಿರ್ದೇಶನದ ‘ಅಜಾಗ್ರತ’ ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಗಿದು ಚಿತ್ರದ ರಫ್ ಕಾಪಿ ಬಂದಿದೆ. ‘ಅಜಾಗ್ರತ’ (Ajagrata) ಚಿತ್ರದ ರಫ್ ಕಾಪಿ ನೋಡಿದ ನಿರ್ಮಾಪಕರಿಗೆ ಚಿತ್ರ ತುಂಬಾ ಇಷ್ಟವಾಗಿದೆಯಂತೆ.  ಈ ಸಂದರ್ಭದಲ್ಲಿ  ನಿರ್ಮಾಪಕ ರವಿರಾಜ್ (Raviraj), ನಿರ್ದೇಶಕ ಶಶಿಧರ್ ಅವರಿಗೆ ದುಬಾರಿ ಕಾರು ನೀಡುವ ಮೂಲಕ ಚಿತ್ರ ಉತ್ತಮವಾಗಿ ಮೂಡಿಬಂದಿರುವ ಖುಷಿಯನ್ನು ವ್ಯಕ್ತಪಡಿಸಿದ್ದಾರೆ‌.

    ನಿರ್ದೇಶಕರು ಕಥೆ ಹೇಳಿದ ರೀತಿಯಲ್ಲೇ, ಅದಕ್ಕೂ ಹೆಚ್ಚಾಗಿಯೇ ಚಿತ್ರವನ್ನು ಬಹಳ ಚೆನ್ನಾಗಿ ಮಾಡಿ ಮುಗಿಸಿದ್ದಾರೆ. ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಚಿತ್ರ ನೋಡಿ ನನಗೆ ತುಂಬಾ ಖುಷಿಯಾಗಿದೆ. ಚಿತ್ರವನ್ನು ಉತ್ತಮವಾಗಿ ನಿರ್ದೇಶಿಸಿರುವ ನಿರ್ದೇಶಕರಿಗೆ ಉಡುಗೊರೆ ನೀಡುವ ಮನಸ್ಸಾಯಿತು. ಹಾಗಾಗಿ ಫಾರ್ಚ್ಯೂನರ್ ಕಾರನ್ನು ಉಡುಗೊರೆಯಾಗಿ ನೀಡುತ್ತೀದ್ದೇನೆ” ಎಂದು ನಿರ್ಮಾಪಕ ರವಿರಾಜ್ ತಿಳಿಸಿದ್ದಾರೆ.  ಚಿತ್ರ ಬಿಡುಗಡೆಯಾಗಿ ಯಶಸ್ವಿಯಾದ ನಂತರ ನಿರ್ದೇಶಕರಿಗೆ ಉಡುಗೊರೆ ನೀಡುವ ನಿರ್ಮಾಪಕರಿದ್ದಾರೆ. ಆದರೆ ಚಿತ್ರ ಬಿಡುಗಡೆಗೂ ಮುನ್ನ ನಿರ್ದೇಶಕರ ಕಾರ್ಯವನ್ನು ಮೆಚ್ಚಿ, ಕಾರನ್ನು ಉಡುಗೊರೆ ನೀಡಿರುವ ನಿರ್ಮಾಪಕ ರವಿರಾಜ್ ಅವರ ಗುಣ ನಿಜಕ್ಕೂ ಶ್ಲಾಘನೀಯ.

    ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ಈ ಚಿತ್ರದ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ  ಅಭಿನಯಿಸಿದ್ದಾರೆ.  ಹೆಸರಾಂತ ನಟ ಬಾಬಿ ಸಿಂಹ ಸಹ ಈಗ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ.  ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

  • ನೂರು ದಿನಗಳ ಶೂಟಿಂಗ್ ಮುಗಿಸಿದ ಸ್ವೀಟಿ ರಾಧಿಕಾ ಚಿತ್ರ

    ನೂರು ದಿನಗಳ ಶೂಟಿಂಗ್ ಮುಗಿಸಿದ ಸ್ವೀಟಿ ರಾಧಿಕಾ ಚಿತ್ರ

    ರಾಧಿಕಾ ಕುಮಾರಸ್ವಾಮಿ (Radhika Kumaraswamy) ಅವರು ನಾಯಕಿಯಾಗಿ ನಟಿಸುತ್ತಿರುವ, ರವಿರಾಜ್ ನಿರ್ಮಾಣದ ಹಾಗೂ ಎಂ.ಶಶಿಧರ್ (Sashidhar) ನಿರ್ದೇಶನದ ‘ಅಜಾಗ್ರತ’ (Ajagrata) ಚಿತ್ರಕ್ಕೆ ನೂರು ದಿನಗಳ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಹೈದರಾಬಾದ್ ಹಾಗೂ ಮುಂಬೈನಲ್ಲಿ ಚಿತ್ರೀಕರಣವಾಗಿದೆ. ಕೆಲವು ಮಾತಿನ ಭಾಗದ ಹಾಗೂ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಈ ತಿಂಗಳ ಕೊನೆಗೆ ಕೊನೆಯ ಹಂತದ ಚಿತ್ರೀಕರಣ ಆರಂಭವಾಗಲಿದೆ.

    ಇತ್ತೀಚಿಗೆ ನಿರ್ದೇಶಕ ಶಶಿಧರ್ ಅವರ ಹುಟ್ಟುಹಬ್ಬ ಹಾಗೂ ಚಿತ್ರ ನೂರು ದಿನಗಳ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರೈಸಿದೆ. ಈ ಎರಡು ಸಂಭ್ರಮಗಳನ್ನು ಸಂಭ್ರಮಿಸಲು ನಿರ್ಮಾಪಕ ರವಿರಾಜ್ ಹಾಗೂ ರಾಧಿಕಾ ಕುಮಾರಸ್ವಾಮಿ ಅವರು ನಿರ್ದೇಶಕರಿಂದ ನೂರು ಕೇಜಿ ಕೇಕ್ ಕಟ್ ಮಾಡಿಸಿದರು. ಇಡೀ ಚಿತ್ರತಂಡ ಈ ಸಂದರ್ಭದಲ್ಲಿ ಭಾಗಿಯಾಗಿತ್ತು.

    ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ  ಅಭಿನಯಿಸುತ್ತಿದ್ದಾರೆ.  ಹೆಸರಾಂತ ನಟ ಬಾಬಿ ಸಿಂಹ ಸಹ ಈಗ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ.  ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ.  ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

  • ‘ಕ್ಯಾಪ್ಚರ್’ ಚಿತ್ರದ 60 ಅಡಿ ಎತ್ತರದ ಟೈಟಲ್ ಪೋಸ್ಟರ್ ರಿಲೀಸ್

    ‘ಕ್ಯಾಪ್ಚರ್’ ಚಿತ್ರದ 60 ಅಡಿ ಎತ್ತರದ ಟೈಟಲ್ ಪೋಸ್ಟರ್ ರಿಲೀಸ್

    ಸ್ಯಾಂಡಲ್ ವುಡ್ ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ ಮತ್ತೊಂದು ಹಾರರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಪ್ರಿಯಾಂಕಾ ಅವರ ಹೊಸ ಸಿನಿಮಾಗೆ ಕ್ಯಾಪ್ಚರ್ ಎಂದು ಟೈಟಲ್ ಇಡಲಾಗಿದೆ. ಸದ್ಯ ಕ್ಯಾಪ್ಚರ್ ತಂಡ ಟೈಟಲ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಅಭಿಮಾನಿಗಳ ಮಧ್ಯೆ ಕ್ಯಾಪ್ಚರ್ ಸಿನಿಮಾದ ಪೋಸ್ಟರ್ ಲಾಂಚ್ ಮಾಡಿದ್ದು ವಿಶೇಷವಾಗಿತ್ತು.

    ಸ್ಯಾಂಡಲ್‌ವುಡ್‌ನಲ್ಲೇ ಮೊದಲ ಬಾರಿಗೆ ನಾಯಕಿಯೊಬ್ಬರ ಪೋಸ್ಟರ್ ಅನ್ನು ಇಷ್ಟು ದೊಡ್ಡ ಮಟ್ಟದಲ್ಲಿ 60 ಅಡಿಯ ಕಟೌಟ್ ನಿಲ್ಲಿಸುವ ಮೂಲಕ ಬಿಡುಗಡೆ ಮಾಡಿರುವುದು ಖುಷಿಯ ವಿಚಾರವಾದ್ರೆ ಮತ್ತೊಂದು ಕಡೆ ಕನ್ನಡ ಸಿನಿಮಾರಂಗದಲ್ಲಿಯೇ ಇದೊಂದು ವಿನೂತನವಾದ ಪ್ರಯತ್ನವಾಗಿದೆ ..

    ವಿಶೇಷ ಎಂದರೆ ಈ ಸಿನಿಮಾಗೆ ಮಮ್ಮಿ, ದೇವಕಿ ಸಿನಿಮಾ ಖ್ಯಾತಿಯ ನಿರ್ದೇಶಕ ಲೋಹಿತ್ ಆಕ್ಷನ್ ಕಟ್ ಹೇಳಿದ್ದಾರೆ. ಪ್ರಿಯಾಂಕಾ ಮತ್ತು ಲೋಹಿತ್ ಕಾಂಬಿನೇಷನ್‌ನ 3ನೇ ಸಿನಿಮಾ ಇದಾಗಿದೆ. ಈ ಸಿನಿಮಾಗೆ ರವಿರಾಜ್ ಅವರು ತಮ್ಮ ಶ್ರಿ ದುರ್ಗಪರಮೇಶ್ವರಿ  ಪ್ರೊಡಕ್ಷನ್ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಈ ಬ್ಯಾನರ್‌ನಲ್ಲಿ ಮೂಡಿಬರುತ್ತಿರುವ ಮೊದಲ  ಸಿನಿಮಾ ಇದಾಗಿದೆ. ಅಂದಹಾಗೆ ರವಿರಾಜ್ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಅವರ ಸಹೋದರ.

    ಕ್ಯಾಪ್ಚರ್ ಸಿನಿಮಾದ ಟೈಟಲ್ ಪೋಸ್ಟರ್ ಅನ್ನು ವಿಭಿನ್ನವಾಗಿ ಲಾಂಚ್ ಮಾಡಲಾಯಿತು. ವೀರೇಶ್ ಚಿತ್ರಮಂದಿರದ ಮುಂಭಾಗದಲ್ಲಿ ಪ್ರಿಯಾಂಕಾ ಉಪೇಂದ್ರ ಅವರ 60 ಅಡಿ ಕೌಟೌಟ್ ಪೋಸ್ಟರ್ ನಿಲ್ಲಿಸುವ ಮೂಲಕ ಸಿನಿಮಾದ ಟೈಟಲ್ ಪೋಸ್ಟರ್ ರಿವೀಲ್ ಮಾಡಲಾಯಿತು. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಪೋಸ್ಟರ್ ಲಾಂಚ್ ಮಾಡಿದರು.

    ಕ್ಯಾಪ್ಚರ್ ಬಗ್ಗೆ ಹೇಳುವುದಾದರೆ ಹಾರರ್ ಅಂದಮೇಲೆ ಭಯ, ಕುತೂಹಲ, ಟ್ವಿಸ್ಟ್‌ಗಳು ಇದ್ದೇ ಇರುತ್ತೆ. ಇದೆಲ್ಲದರ ಜೊತೆಗೆ ಈ ಸಿನಿಮಾ ಒಂದು ವಿಭಿನ್ನ ಅನುಭವ ನೀಡಲಿದೆ. ಯಾಕೆಂದ್ರೆ ಸಂಪೂರ್ಣ ಸಿನಿಮಾ ಸಿಸಿ ಟಿವಿ ಕಾನ್ಸೆಪ್ಟ್‌ನಲ್ಲಿ ಚಿತ್ರೀಕರಣ ಮಾಡಲಾಗಿದೆ. ವಿಶ್ವದಲ್ಲಿಯೇ ಮೊದಲ ಬಾರಿಗೆ ಈ ರೀತಿಯ ಪ್ರಯತ್ನ ಮಾಡಲಾಗಿದೆ.

    ಸೈಲೆಂಟ್ ಆಗಿ ಸಿನಿಮಾ ಚಿತ್ರೀಕರಣ ಮುಗಿಸಿ ಟೈಟಲ್ ಪೋಸ್ಟರ್ ಮೂಲಕ ಸದ್ದು ಮಾಡುತ್ತಿರುವ ಕ್ಯಾಪ್ಚರ್ ಚಿತ್ರಮಂದಿರದ ಅಂಗಳಕ್ಕೆ ಬರಲು ಎದುರು ನೋಡುತ್ತಿದೆ. ಚಿತ್ರಕ್ಕೆ ಎಸ್ ಪಾಂಡಿಕುಮಾರ್ ಕ್ಯಾಮೆರಾ ವರ್ಕ್ ಮಾಡಿದ್ದು ರವಿಚಂದ್ರನ್ ಅವ್ರ ಸಂಕಲನವಿದೆ. ಪ್ರಿಯಾಂಕ ಉಪೇಂದ್ರ ಅವ್ರ ಜೊತೆ ಜೊತೆಗೆ ಇನ್ನು ಸಾಕಷ್ಟು ಸ್ಟಾರ್ ಕಲಾವಿದರು ಸಿನಿಮಾದಲ್ಲಿದ್ದಾರೆ…ಎಲ್ಲವು ಅಂದುಕೊಂಡಂತೆ ಆದರೆ ಸಿನಿಮಾ ಮುಂದಿನ ತಿಂಗಳು ನವೆಂಬರ್‌ನಲ್ಲಿ ತೆರೆಗೆ ಬರಲಿದೆ. ಪ್ರಿಯಾಂಕಾ ಮತ್ತು ಲೋಹಿತ್ ಕಾಂಬಿನೇಷನ್‌ನ ಹ್ಯಾಟ್ರಿಕ್ ಸಿನಿಮಾ ಇದಾಗಿದ್ದು ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಧಿಕಾ ಕುಮಾರಸ್ವಾಮಿ ಸಹೋದರನ ಚಿತ್ರಕ್ಕೆ ಲೋಹಿತ್ ನಿರ್ದೇಶಕ

    ರಾಧಿಕಾ ಕುಮಾರಸ್ವಾಮಿ ಸಹೋದರನ ಚಿತ್ರಕ್ಕೆ ಲೋಹಿತ್ ನಿರ್ದೇಶಕ

    ನಿನ್ನೆಯಷ್ಟೇ ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್ ಸಿನಿಮಾ ರಂಗಕ್ಕೆ ನಿರ್ಮಾಪಕರಾಗಿ ಪ್ರವೇಶ ಮಾಡುತ್ತಿರುವ ವಿಷಯ ಬಹಿರಂಗವಾಗಿತ್ತು. ಇದೀಗ ಅವರ ನಿರ್ಮಾಣದ ಸಿನಿಮಾವನ್ನು ಲೋಹಿತ್  ನಿರ್ದೇಶನ ಮಾಡಲಿದ್ದಾರೆ ಎನ್ನುವ ಮಾಹಿತಿ ಹೊರ ಬಿದ್ದಿದೆ. ಮತ್ತೊಂದು ಹಾರಾರ್ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ ನಿರ್ದೇಶಕ ಲೋಹಿತ್ (Lohit). ಇವರ ಹೊಸ ಕನಸಿನ ಸಿನಿಮಾಗೆ ರವಿರಾಜ್ ಬಂಡವಾಳ

    ನಟಿ ರಾಧಿಕಾ ಕುಮಾರಸ್ವಾಮಿ (Radhika Kumaraswamy) ನಟನೆ ಜೊತೆಗೆ ನಿರ್ಮಾಣದಲ್ಲೂ ಗುರುತಿಸಿಕೊಂಡಿದ್ದಾರೆ. ತಮ್ಮ ಶಮಿಕಾ ಎಂಟರ್ ಪ್ರೈಸಸ್ ಮೂಲಕ ರಾಧಿಕಾ ಮೂರು ಸಿನಿಮಾಗನ್ನು ನಿರ್ಮಾಣ ಮಾಡಿದ್ದಾರೆ. ಇದೀಗ ಅವರ ಸಹೋದರ ರವಿರಾಜ್ ಚಂದನವನಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ನಟನಾಗಿ ಅಲ್ಲ ನಿರ್ಮಾಪಕನಾಗಿ. ರವಿರಾಜ್ (Raviraj) ಅವರಿಗೆ ಸಿನಿಮಾರಂಗ ಹೊಸದೇನಲ್ಲ. ತನ್ನ ಸಹೋದರಿ ರಾಧಿಕಾ ಅವರ ಶಮಿಕಾ ಎಂಟರ್ ಪ್ರೈಸಸ್ ನಲ್ಲಿ ಸಹ ನಿರ್ಮಾಪಕನಾಗಿ ಕೆಲಸ ಮಾಡಿರುವ ಅನುಭವ ರವಿರಾಜ್ ಅವರಿಗಿದೆ. ‘ಲಕ್ಕಿ’, ‘ಸ್ವೀಟಿ ನನ್ನ ಜೋಡಿ’, ಭೈರಾದೇವಿ ಸಿನಿಮಾಗಳಲ್ಲಿ ರವಿರಾಜ್ ತಂಗಿ ರಾಧಿಕಾ ಜೊತೆ ಕೆಲಸ ಮಾಡಿದ್ದರು ಜೊತೆಗೆ ಸಿನಿಮಾ ವಿತರಣೆ ವಿಭಾಗದಲ್ಲೂ ಕೆಲಸ ಮಾಡಿದ್ದಾರೆ. ಆದರೀಗ ಸ್ವತಂತ್ರ ನಿರ್ಮಾಪಕರಾಗಿ ಚಂದನವನಕ್ಕೆ (Sandalwood) ಪದಾರ್ಪಣೆ ಮಾಡತ್ತಿದ್ದಾರೆ ರವಿರಾಜ್.

    ತಮ್ಮದೇ ಆದ ಹೊಸ ನಿರ್ಮಾಣ ಸಂಸ್ಥೆ ಹುಟ್ಟುಹಾಕಿದ್ದು ಈಗಾಗಲೇ ಮೊದಲ ಸಿನಿಮಾದ ಚಿತ್ರೀಕರಣ ಕೂಡ ಮುಗಿಸಿದ್ದಾರೆ. ರವಿರಾಜ್ ತಮ್ಮ ನಿರ್ಮಾಣ ಸಂಸ್ಥೆಗೆ ‘ಶ್ರೀ ದುರ್ಗಾಪರಮೇಶ್ವರಿ ಪ್ರೊಡಕ್ಷನ್’ ಎಂದು ಹೆಸರಿಟ್ಟಿದ್ದಾರೆ. ಅಂದಹಾಗೆ ಇದು ರವಿರಾಜ್ ಅವರ ತಂದೆಯ ಕನಸಿನ ಬ್ಯಾನರ್. ಅಪ್ಪನ ಕನಸನ್ನು ‘ಶ್ರೀ ದುರ್ಗಾಪರಮೇಶ್ವರಿ’ ಬ್ಯಾನರ್ ಮೂಲಕ ನನಸು ಮಾಡಿದ್ದಾರೆ ರವಿರಾಜ್. ತಮ್ಮ ಬ್ಯಾನರ್‌ನ ಮೊದಲ ಸಿನಿಮಾವಾಗಿ ಹಾರರ್ ಚಿತ್ರ ತಯಾರಾಗಿದ್ದು ರಿಲೀಸ್‌ಗೆ ರೆಡಿಯಾಗಿದೆ. ಇದುವರೆಗೂ ನೋಡಿರದ ಹಾರರ್ ಸಬ್ಜೆಕ್ಟ್ ಮೂಲಕ ಅಭಿಮಾನಿಗಳನ್ನು ಭಯ ಬೀಳಿಸಲು ಸಜ್ಜಾಗಿದ್ದಾರೆ ರವಿರಾಜ್ ಮತ್ತು ತಂಡ.

    ಅಂದಹಾಗೆ ರವಿರಾಜ್ ಅವರ ಚೊಚ್ಚಲ ನಿರ್ಮಾಣದ ಸಿನಿಮಾದಲ್ಲಿ ದೊಡ್ಡ ದೊಡ್ಡ ಸ್ಟಾರ್ಸ್ ನಟಿಸಿದ್ದಾರೆ. ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಈ ಹಾರರ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಯಾರೆಲ್ಲ ನಟಿಸಿದ್ದಾರೆ, ನಿರ್ದೇಶಕ ಯಾರು ಎನ್ನುವುದನ್ನು ಸೀಕ್ರೆಟ್ ಆಗಿಯೇ ಇಟ್ಟಿದ್ದಾರೆ ನಿರ್ಮಾಪಕ ರವಿರಾಜ್. ಹಾರರ್ ಸಿನಿಮಾ ಎಂದು ಸಾಕಷ್ಟು ಕುತೂಹಲ ಮೂಡಿಸಿರುವ ರವಿರಾಜ್ ಸದ್ಯದಲ್ಲೇ ಅಭಿಮಾನಿಗಳ ಮುಂದೆ ಬರಲಿದ್ದಾರೆ.

    ಶ್ರೀ ದುರ್ಗಾಪರಮೇಶ್ವರಿ ಬ್ಯಾನರ್ ಮೂಲಕ ಉತ್ತಮ ಸಿನಿಮಾಗಳನ್ನು ಮಾಡುವ ಆಸೆ ಇಟ್ಟುಕೊಂಡಿದ್ದಾರೆ. ವರ್ಷಕ್ಕೆ ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿ ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡಬೇಕು ಎನ್ನುವುದು ಅವರ ಕನಸು. ಸದ್ಯ ಹಾರರ್ ಸಿನಿಮಾ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಸಹೋದರಿ ರಾಧಿಕಾ ಈಗಾಗಲೇ ಸಿನಿಮಾರಂಗದಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದ್ದಾರೆ. ತಂಗಿಯ ಹಾಗೆ ಅಣ್ಣ ಕೂಡ ದೊಡ್ಡ ಮಟ್ಟದ ಖ್ಯಾತಿಗಳಿಸಲಿ ಎನ್ನುವುದು ಎಲ್ಲರ ಆಶಯ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಧಿಕಾ ಕುಮಾರಸ್ವಾಮಿ ಸಹೋದರ ಚಿತ್ರರಂಗಕ್ಕೆ ಎಂಟ್ರಿ

    ರಾಧಿಕಾ ಕುಮಾರಸ್ವಾಮಿ ಸಹೋದರ ಚಿತ್ರರಂಗಕ್ಕೆ ಎಂಟ್ರಿ

    ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ (Radhika Kumaraswamy) ನಟನೆ ಜೊತೆಗೆ ನಿರ್ಮಾಣದಲ್ಲೂ ಗುರುತಿಸಿಕೊಂಡಿದ್ದಾರೆ. ತಮ್ಮ ಶಮಿಕಾ ಎಂಟರ್ ಪ್ರೈಸಸ್ ಮೂಲಕ ರಾಧಿಕಾ ಮೂರು ಸಿನಿಮಾಗನ್ನು ನಿರ್ಮಾಣ ಮಾಡಿದ್ದಾರೆ. ಇದೀಗ ಅವರ ಸಹೋದರ ರವಿರಾಜ್ ಚಂದನವನಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ನಟನಾಗಿ ಅಲ್ಲ ನಿರ್ಮಾಪಕನಾಗಿ. ರವಿರಾಜ್ (Raviraj) ಅವರಿಗೆ ಸಿನಿಮಾರಂಗ ಹೊಸದೇನಲ್ಲ. ತನ್ನ ಸಹೋದರಿ ರಾಧಿಕಾ ಅವರ ಶಮಿಕಾ ಎಂಟರ್ ಪ್ರೈಸಸ್ ನಲ್ಲಿ ಸಹ ನಿರ್ಮಾಪಕನಾಗಿ ಕೆಲಸ ಮಾಡಿರುವ ಅನುಭವ ರವಿರಾಜ್ ಅವರಿಗಿದೆ. ‘ಲಕ್ಕಿ’, ‘ಸ್ವೀಟಿ ನನ್ನ ಜೋಡಿ’, ಭೈರಾದೇವಿ ಸಿನಿಮಾಗಳಲ್ಲಿ ರವಿರಾಜ್ ತಂಗಿ ರಾಧಿಕಾ ಜೊತೆ ಕೆಲಸ ಮಾಡಿದ್ದರು ಜೊತೆಗೆ ಸಿನಿಮಾ ವಿತರಣೆ ವಿಭಾಗದಲ್ಲೂ ಕೆಲಸ ಮಾಡಿದ್ದಾರೆ. ಆದರೀಗ ಸ್ವತಂತ್ರ ನಿರ್ಮಾಪಕರಾಗಿ ಚಂದನವನಕ್ಕೆ (Sandalwood) ಪದಾರ್ಪಣೆ ಮಾಡತ್ತಿದ್ದಾರೆ ರವಿರಾಜ್.

    ತಮ್ಮದೇ ಆದ ಹೊಸ ನಿರ್ಮಾಣ ಸಂಸ್ಥೆ ಹುಟ್ಟುಹಾಕಿದ್ದು ಈಗಾಗಲೇ ಮೊದಲ ಸಿನಿಮಾದ ಚಿತ್ರೀಕರಣ ಕೂಡ ಮುಗಿಸಿದ್ದಾರೆ. ರವಿರಾಜ್ ತಮ್ಮ ನಿರ್ಮಾಣ ಸಂಸ್ಥೆಗೆ ‘ಶ್ರೀ ದುರ್ಗಾಪರಮೇಶ್ವರಿ ಪ್ರೊಡಕ್ಷನ್’ ಎಂದು ಹೆಸರಿಟ್ಟಿದ್ದಾರೆ. ಅಂದಹಾಗೆ ಇದು ರವಿರಾಜ್ ಅವರ ತಂದೆಯ ಕನಸಿನ ಬ್ಯಾನರ್. ಅಪ್ಪನ ಕನಸನ್ನು ‘ಶ್ರೀ ದುರ್ಗಾಪರಮೇಶ್ವರಿ’ ಬ್ಯಾನರ್ ಮೂಲಕ ನನಸು ಮಾಡಿದ್ದಾರೆ ರವಿರಾಜ್. ತಮ್ಮ ಬ್ಯಾನರ್‌ನ ಮೊದಲ ಸಿನಿಮಾವಾಗಿ ಹಾರರ್ ಚಿತ್ರ ತಯಾರಾಗಿದ್ದು ರಿಲೀಸ್‌ಗೆ ರೆಡಿಯಾಗಿದೆ. ಇದುವರೆಗೂ ನೋಡಿರದ ಹಾರರ್ ಸಬ್ಜೆಕ್ಟ್ ಮೂಲಕ ಅಭಿಮಾನಿಗಳನ್ನು ಭಯ ಬೀಳಿಸಲು ಸಜ್ಜಾಗಿದ್ದಾರೆ ರವಿರಾಜ್ ಮತ್ತು ತಂಡ.

    ಅಂದಹಾಗೆ ರವಿರಾಜ್ ಅವರ ಚೊಚ್ಚಲ ನಿರ್ಮಾಣದ ಸಿನಿಮಾದಲ್ಲಿ ದೊಡ್ಡ ದೊಡ್ಡ ಸ್ಟಾರ್ಸ್ ನಟಿಸಿದ್ದಾರೆ. ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಈ ಹಾರರ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಯಾರೆಲ್ಲ ನಟಿಸಿದ್ದಾರೆ, ನಿರ್ದೇಶಕ ಯಾರು ಎನ್ನುವುದನ್ನು ಸೀಕ್ರೆಟ್ ಆಗಿಯೇ ಇಟ್ಟಿದ್ದಾರೆ ನಿರ್ಮಾಪಕ ರವಿರಾಜ್. ಹಾರರ್ ಸಿನಿಮಾ ಎಂದು ಸಾಕಷ್ಟು ಕುತೂಹಲ ಮೂಡಿಸಿರುವ ರವಿರಾಜ್ ಸದ್ಯದಲ್ಲೇ ಅಭಿಮಾನಿಗಳ ಮುಂದೆ ಬರಲಿದ್ದಾರೆ.

    ಶ್ರೀ ದುರ್ಗಾಪರಮೇಶ್ವರಿ ಬ್ಯಾನರ್ ಮೂಲಕ ಉತ್ತಮ ಸಿನಿಮಾಗಳನ್ನು ಮಾಡುವ ಆಸೆ ಇಟ್ಟುಕೊಂಡಿದ್ದಾರೆ. ವರ್ಷಕ್ಕೆ ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿ ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡಬೇಕು ಎನ್ನುವುದು ಅವರ ಕನಸು. ಸದ್ಯ ಹಾರರ್ ಸಿನಿಮಾ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಸಹೋದರಿ ರಾಧಿಕಾ ಈಗಾಗಲೇ ಸಿನಿಮಾರಂಗದಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದ್ದಾರೆ. ತಂಗಿಯ ಹಾಗೆ ಅಣ್ಣ ಕೂಡ ದೊಡ್ಡ ಮಟ್ಟದ ಖ್ಯಾತಿಗಳಿಸಲಿ ಎನ್ನುವುದು ಎಲ್ಲರ ಆಶಯ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಿಸ್ತೂಲಿನಿಂದ ಆಕಸ್ಮಿಕ ಹಾರಿದ ಗುಂಡು: ಆಸ್ಪತ್ರೆಯಲ್ಲಿ ನಟ ರವಿರಾಜ್

    ಪಿಸ್ತೂಲಿನಿಂದ ಆಕಸ್ಮಿಕ ಹಾರಿದ ಗುಂಡು: ಆಸ್ಪತ್ರೆಯಲ್ಲಿ ನಟ ರವಿರಾಜ್

    ನಸಿನ ರಾಣಿ ಮಾಲಾಶ್ರೀ ನಾಯಕಿಯಾಗಿ ನಟಿಸಿರುವ ‘ರಾಜಾ ಕೆಂಪು ರೋಜ’ (Raja Kempu Roja) ಸಿನಿಮಾದ ನಟಿಸಿರುವ ರವಿರಾಜ್ ಗೆ ಗುಂಡು ತಗುಲಿ ಆಸ್ಪತ್ರೆ ಸೇರಿಕೊಂಡಿದ್ದಾರೆ. ಮನೆಯಲ್ಲಿದ್ದ ಪಿಸ್ತೂಲ್ (Pistol) ಅನ್ನು ನವೀಕರಣಕ್ಕಾಗಿ ಸ್ವಚ್ಚಗೊಳಿಸುತ್ತಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಸಿಡಿದ ಗುಂಡಿನಿಂದ (Gundu) ರವಿರಾಜ್ (Raviraj) ಅವರಿಗೆ ತಲೆಗೆ ಗಾಯವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

    ದಾವಣಗೆರೆ (Davangere) ಮೂಲದ ರವಿರಾಜ್ ಚಿನ್ನದ ವ್ಯಾಪಾರಿ ಕೂಡ ಆಗಿದ್ದಾರೆ. ಹಾಗಾಗಿ ಪರವಾಣಿಗೆ ಸಹಿತ ಪಿಸ್ತೂಲ್ ಹೊಂದಿದ್ದಾರೆ. ಎಂಸಿಸಿ ಬಿ ಬ್ಲಾಕ್ ನಿವಾಸಿ ಆಗಿರುವ ಅವರು ಬುಧವಾರ ಸಂಜೆ ಪಿಸ್ತೂಲಿನ ಲೈಸೆನ್ಸ್ ನವೀಕರಣಕ್ಕೆ ಹೋಗಬೇಕಿತ್ತು. ಹಾಗಾಗಿ ಅದನ್ನು ಸ್ವಚ್ಛಗೊಳಿಸುತ್ತಿದ್ದರು. ಈ ವೇಳೆ ಟ್ರಿಗರ್ ಒತ್ತಿದ ಪರಿಣಾಮ ಗುಂಡು ಸಿಡಿದಿದೆ. ಹಣೆಯ ಭಾಗಕ್ಕೆ ಗುಂಡು ಹೊಕ್ಕಿದೆ. ಕೂಡಲೇ ಅವರನ್ನು ಸಿಟಿ ಸೆಂಟ್ರಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದನ್ನೂ ಓದಿ: ‘ಆಸ್ಕರ್’ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೀಪಿಕಾ ಪಡುಕೋಣೆ ನಿರೂಪಕಿ

    ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ಎಲ್. ಸುಬ್ಬರಾವ್ ನೇತೃತ್ವದ ತಂಡವು ತುರ್ತು ಚಿಕಿತ್ಸೆ ನಡೆಸಿ, ಯಶಸ್ಸಿಯಾಗಿ ಗುಂಡು ಹೊರತಗೆಯಲಾಗಿದೆ. ತಲೆಬುರುಡೆಯ ಮೂಳೆಯಲ್ಲಿ ಗುಂಡು ಹೊಕ್ಕಿತ್ತು ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ರವಿರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿನಿಮಾ ರಂಗದಲ್ಲಿ ರವಿರಾಜ್ ಎಂದೇ ಗುರುತಿಸಿಕೊಂಡಿದ್ದ ಅವರು ದಾವಣಗೆರೆ ಜನತೆಗೆ ಮಂಜುನಾಥ ರೇವಣ್ಕರ್ (Manjunath Revankar) ಎಂದು ಪರಿಚಿತರು.

    ಸಿನಿಮಾ ರಂಗದಲ್ಲಿ ನಟರಾಗಿ, ನಾಯಕ ನಟರಾಗಿ ನಂತರ ಒಂದು ಸಿನಿಮಾವನ್ನೂ ನಿರ್ಮಾಣ ಮಾಡಿದ್ದಾರೆ. ಆನಂತರ ಸಿನಿಮಾ ರಂಗದಿಂದ ದೂರವಾಗಿ ತಮ್ಮ ವೃತ್ತಿಯಲ್ಲೇ ಮುಂದುವರೆದಿದ್ದರು. ಸಿನಿಮಾ ರಂಗದಿಂದ ದೂರವಾಗಿದ್ದರೂ, ಸಿನಿಮಾಗಳಿಂದ ಅವರು ದೂರವಾಗಿರಲಿಲ್ಲ. ಆಗಾಗ್ಗೆ ಸಿನಿಮಾ ಸಂಬಂಧಿ ಕಾರ್ಯಕ್ರಮಗಳಲ್ಲೂ ಭಾಗಿಯಾಗುತ್ತಿದ್ದರು.