Tag: ರವಿಶಾಸ್ತ್ರಿ

  • ಕಾರ್ಕಳದ ಎರ್ಲಪಾಡಿ ಕ್ಷೇತ್ರಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ

    ಕಾರ್ಕಳದ ಎರ್ಲಪಾಡಿ ಕ್ಷೇತ್ರಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ

    ಉಡುಪಿ: ಕಾರ್ಕಳ ತಾಲೂಕಿನ ಎರ್ಲಪಾಡಿ ಕರ್ವಾಲು ವಿಷ್ಣುಮೂರ್ತಿ ದೇವಸ್ಥಾನಕ್ಕೆ ಮಾಜಿ ಕ್ರಿಕೆಟಿಗ, ಖ್ಯಾತ ಕಮೆಂಟೇಟರ್ ರವಿಶಾಸ್ತ್ರಿ ಭೇಟಿ ನೀಡಿದರು. ಮೂಲ ನಾಗದೇವರಿಗೆ ಸರ್ವಸೇವೆ ನೀಡಿದರು.

    ಭಾರತ ತಂಡದ ಮಾಜಿ ಕ್ಯಾಪ್ಟನ್ ರವಿಶಾಸ್ತ್ರಿ ಅವರ ಪೂರ್ವಜರು ಕಾರ್ಕಳ ತಾಲೂಕಿನ ಎರ್ಲಪಾಡಿಯವರು. 14 ವರ್ಷಗಳ ಹಿಂದೆ ಪತ್ನಿ ಸಮೇತ ಕ್ಷೇತ್ರಕ್ಕೆ ಭೇಟಿ ನೀಡಿದ್ದ ರವಿಶಾಸ್ತ್ರಿ ನಾಗ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಇದನ್ನೂ ಓದಿ: ನ್ಯಾಯಬೆಲೆ ಅಂಗಡಿಯಲ್ಲಿ ಟೋಕನ್ ಎಸೆದವನ ಮೇಲೆ ಕ್ರಮ: ಮುನಿಯಪ್ಪ

    ಎರ್ಲಪಾಡಿ ಕ್ಷೇತ್ರ ದೇವರ ಆಶೀರ್ವಾದದಿಂದ ಈ ದಂಪತಿ ಮಗಳನ್ನು ಪಡೆದಿದ್ದರು. ಅಂದಿನಿಂದ ಇಂದಿನವರೆಗೆ ರವಿಶಾಸ್ತ್ರಿಪ್ರತಿವರ್ಷ ಒಂದೆರಡು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: ಬ್ರೇಕಪ್ ಬೆನ್ನಲ್ಲೇ ಸಿನಿಮಾದಲ್ಲಿ ತಮನ್ನಾ ಆ್ಯಕ್ಟೀವ್- ಬಾಲಿವುಡ್‌ನಲ್ಲಿ ಬಿಗ್ ಚಾನ್ಸ್

  • ಭಾರತ ಟಿ20 ವಿಶ್ವಕಪ್‌ ಗೆಲ್ಲುತ್ತೆ ಎಂದು ಭವಿಷ್ಯ ನುಡಿದಿದ್ದ ಜಯ್‌ ಶಾ – ವೀಡಿಯೋ ವೈರಲ್‌

    ಭಾರತ ಟಿ20 ವಿಶ್ವಕಪ್‌ ಗೆಲ್ಲುತ್ತೆ ಎಂದು ಭವಿಷ್ಯ ನುಡಿದಿದ್ದ ಜಯ್‌ ಶಾ – ವೀಡಿಯೋ ವೈರಲ್‌

    ಬ್ರಿಡ್ಜ್‌ಟೌನ್: ಟಿ20 ವಿಶ್ವಕಪ್‌ (T20 World Cup 2024) ಟೂರ್ನಿ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ (South Africa) ತಂಡವನ್ನು ಬಗ್ಗು ಬಡಿದ ಟೀಂ ಇಂಡಿಯಾ ವಿಶ್ವ ಚಾಂಪಿಯನ್‌ ಆಗಿದೆ. ಭಾರತ ಟ್ರೋಫಿ ಗೆಲ್ಲುವ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ (Jai Shah) ಈ ಹಿಂದೆಯೇ ಭವಿಷ್ಯ ನುಡಿದಿದ್ದರು. ಅವರ ಭವಿಷ್ಯವಾಣಿ ಈಗ ಎಲ್ಲೆಡೆ ವೈರಲ್‌ ಆಗುತ್ತಿದೆ.

    ‘ವಿಶ್ವಕಪ್‌ನಲ್ಲಿ ನನ್ನ ಹೇಳಿಕೆಗಾಗಿ ಎಲ್ಲರೂ ಕಾಯುತ್ತಿದ್ದರು. 2023 ರಲ್ಲಿ, ಭಾರತವು ಸತತ 10 ಪಂದ್ಯಗಳನ್ನು ಗೆದ್ದು ಫೈನಲ್‌ ಪ್ರವೇಶಿಸಿ ವಿಶ್ವಕಪ್ ಗೆಲ್ಲಲಿಲ್ಲ. ಆದರೆ ನಾವು ಹೃದಯವನ್ನು ಗೆದ್ದಿದ್ದೇವೆ. ಆದರೆ 2024 ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತವು ಬಾರ್ಬಡೋಸ್‌ನಲ್ಲಿ ಟಿ20 ವಿಶ್ವಕಪ್ ಗೆಲ್ಲುತ್ತದೆ ಎಂದು ನಾನು ಭರವಸೆ ನೀಡಲು ಬಯಸುತ್ತೇನೆ’ ಎಂದು ರಾಜ್‌ಕೋಟ್‌ನ ಎಸ್‌ಸಿಎ ಸ್ಟೇಡಿಯಂ ಅನ್ನು ನಿರಂಜನ್ ಶಾ ಸ್ಟೇಡಿಯಂ ಎಂದು ಮರುನಾಮಕರಣ ಮಾಡುವ ಮೊದಲು ಜಯ್‌ ಶಾ ಹಿಂದೆಯೇ ಭವಿಷ್ಯ ನುಡಿದಿದ್ದರು. ಇದನ್ನೂ ಓದಿ: ಹುಟ್ಟುಹಬ್ಬಕ್ಕೆ ಉಡುಗೊರೆ ನೀಡಿದ್ದಕ್ಕೆ ಧನ್ಯವಾದ: ವಿಶ್ವಕಪ್‌ ಗೆದ್ದ ಭಾರತಕ್ಕೆ ಧೋನಿ ವಿಶ್‌

    ಚೆನ್ನಾಗಿದೆ ಜಯ್‌ ಶಾ. ನಿಮ್ಮ ಹೊಸ ಹೆಸರು ಜಯ್‌ ನಾಸ್ಟ್ರಾಡಾಮಸ್ ಶಾ. ನೀವು 4 ತಿಂಗಳ ಹಿಂದೆ ರೋಹಿತ್‌ ಶರ್ಮಾ ನಾಯಕನನ್ನು ನೇಮಿಸಿದ್ದಿರಿ. ಭಾರತವು ಕಪ್ ಎತ್ತುತ್ತದೆ ಎಂದು ಭವಿಷ್ಯ ನುಡಿದಿದ್ದೀರಿ ಎಂದು ರವಿಶಾಸ್ತ್ರಿ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿ ಜಯ್‌ ಶಾ ಮಾತುಗಳನ್ನು ನೆನಪಿಸಿಕೊಂಡಿದ್ದಾರೆ.

    ಜಯ್‌ ಶಾ ಅವರು ಮಾತನಾಡಿರುವ ವೀಡಿಯೋವನ್ನು ಮೋಹಿತ್‌ ಬಾಬು ಎಂಬವರು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇವರು ಜಯ್‌ ಶಾ ಅವರ ಗ್ಯಾರಂಟಿ. ದಿ ಅಲ್ಟಿಮೇಟ್ ಸ್ಕ್ರಿಪ್ಟ್ ರೈಟರ್ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ಕೊಹ್ಲಿ ಜೊತೆಗೆ ಟಿ20 ವಿಶ್ವಕಪ್‌ಗೆ ವಿದಾಯ ಹೇಳಿದ ಹಿಟ್‌ಮ್ಯಾನ್‌

    ಶನಿವಾರ ನಡೆದ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಐತಿಹಾಸಿಕ ಗೆಲುವು ದಾಖಲಿಸಿತು. ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 20 ಓವರ್‌ಗಳಿಗೆ 176 ರನ್‌ ಗಳಿಸಿತ್ತು. 177 ರನ್‌ ಗುರಿ ಬೆನ್ನತ್ತಿದ ಆಫ್ರಿಕಾ ಪಡೆ 20 ಓವರ್‌ಗೆ 8 ವಿಕೆಟ್‌ ನಷ್ಟಕ್ಕೆ 168 ರನ್‌ ಗಳಿಸಿ ಸೋತಿತು. ಭಾರತ 7 ರನ್‌ಗಳ ಭರ್ಜರಿ ಜಯ ದಾಖಲಿಸಿತು.

  • ಮದುವೆಯಾಗಿ 12 ವರ್ಷಗಳ ನಂತರ ಲವ್‌ ಬ್ರೇಕಪ್‌ ಬಗ್ಗೆ ಬಾಯ್ಬಿಟ್ಟ ‘ರವಿಶಾಸ್ತ್ರಿ’ ನಟಿ ಸ್ನೇಹಾ

    ಮದುವೆಯಾಗಿ 12 ವರ್ಷಗಳ ನಂತರ ಲವ್‌ ಬ್ರೇಕಪ್‌ ಬಗ್ಗೆ ಬಾಯ್ಬಿಟ್ಟ ‘ರವಿಶಾಸ್ತ್ರಿ’ ನಟಿ ಸ್ನೇಹಾ

    ನ್ನಡದ ರವಿಶಾಸ್ತ್ರಿ, ಕುರುಕ್ಷೇತ್ರ ಸಿನಿಮಾದಲ್ಲಿ ನಟಿಸಿರುವ ತಮಿಳು ನಟಿ ಸ್ನೇಹಾ (Actress Sneha) ಇದೀಗ ತಮ್ಮ ದಾಂಪತ್ಯದ (Wedding) ಬಗ್ಗೆ ಮಾತನಾಡಿದ್ದಾರೆ. ಕೆಲ ತಿಂಗಳುಗಳಿಂದ ಸ್ನೇಹಾ ದಾಂಪತ್ಯದಲ್ಲಿ ಬಿರುಕಾಗಿದೆ. ಡಿವೋರ್ಸ್‌ಗೆ ಸ್ನೇಹಾ- ಪ್ರಸನ್ನ ದಂಪತಿ ಸಜ್ಜಾಗಿದ್ದಾರೆ ಎಂದೆಲ್ಲಾ ಸುದ್ದಿ ಹಬ್ಬಿತ್ತು. ಡಿವೋರ್ಸ್ (Divorce) ಸುದ್ದಿ ಸುಳ್ಳು ನಾವು ಚೆನ್ನಾಗಿದ್ದೇವೆ ಎಂದು ನಟಿ ಉತ್ತರ ನೀಡಿದ್ದಾರೆ. ದಾಂಪತ್ಯದ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

    ಪ್ರೀತಿಯಲ್ಲಿ (Love) ಪೊಸೆಸಿವ್‌ನೆಸ್ ಬೇರೆ. ನಂಬಿಕೆ ಬೇರೆ. ಹೆಚ್ಚು ಪೊಸೆಸಿವ್ ಆಗಿಬಿಟ್ಟರೆ ನಂಬಿಕೆ ಬ್ಯಾಲೆನ್ಸ್ ಮಾಡುವುದು ಕಷ್ಟ. ಮತ್ತೊಬ್ಬರಿಗೆ ಅದು ಅರ್ಥವಾಗುವುದಿಲ್ಲ. ಎಲ್ಲಿ ಹೋಗುತ್ತಿದ್ದೀರಾ, ಏನು ಮಾಡುತ್ತಿದ್ದೀರಾ? ಎಂದು ಕೇಳುವುದು ಕೂಡ ಪೊಸೆಸಿವ್‌ನೆಸ್ ಇರುಬಹುದು, ನಂಬಿಕೆಯೂ ಆಗಿರಬಹುದು. ಒಬ್ಬರನ್ನು ಇನ್ನೊಬ್ಬರು ಅರ್ಥಮಾಡಿಕೊಂಡರೆ ಸಮಸ್ಯೆ ಆಗಲ್ಲ ಎಂದು ನಟಿ ಸ್ನೇಹಾ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಇದನ್ನೂ ಓದಿ:ಅಕ್ಷಯ್ ಕುಮಾರ್ ಬಳಿಕ ‘ಕಣ್ಣಪ್ಪ’ ಸಿನಿಮಾದಲ್ಲಿ ಕಾಜಲ್ ಅಗರ್ವಾಲ್

    ದೈನಂದಿನ ಜೀವನದಲ್ಲಿ ನಾವು ಏನು ಮಾಡುತ್ತಿದ್ದೇನೆ. ಎಲ್ಲಿ ಹೋಗುತ್ತಿದ್ದೇನೆ. ಎಷ್ಟು ಹೊತ್ತಿಗೆ ಬರುತ್ತೇನೆ ಎನ್ನುವುದನ್ನು ಒಬ್ಬರು ಕೇಳುವುದಕ್ಕೆ ಮುನ್ನ ಇನ್ನೊಬ್ಬರು ಹೇಳಬೇಕು. ಅಲ್ಲಿಗೆ ಹೋದ ಮೇಲೂ ಸಮಯ ಇದ್ದರೆ ಒಮ್ಮೆ ಫೋನ್ ಮಾಡಿ ಮಾತನಾಡಿ. ಊಟ ಆಯ್ತಾ? ಏನು ಮಾಡುತ್ತಿದ್ದೀಯಾ ಅಂತ ಕೇಳಬೇಕು. ಇಂತಹ ವಿಷಯಗಳೇ ಇಬ್ಬರಲ್ಲಿ ನಂಬಿಕೆ ಹೆಚ್ಚಿಸುತ್ತದೆ. ಆರಂಭದಲ್ಲಿ ನಾನು ಸ್ವಲ್ಪ ಪೊಸೆಸಿವ್ ಆಗಿದ್ದೆ. ಹಾಗಂತ ನಂಬಿಕೆ ಇರಲಿಲ್ಲ ಅಂತ ಅಲ್ಲ. ಮದುವೆ ಆದ ಮೇಲೆ ಜೀವನ ನಮಗೂ ಬೋರ್ ಎನಿಸಿತ್ತು. ನಾನು ಸಾಕಷ್ಟು ಜಗಳ ಆಡಿದ್ದೇವೆ. ಜಗಳದ ಬಳಿಕ ಇಬ್ಬರೂ ಡೇಟ್ ನೈಟ್ ಹೋಗುತ್ತೇವೆ. ಆ ಸಮಯದಲ್ಲಿ ಮಾತನಾಡಿ, ಎಲ್ಲಾ ಬಗೆಹರಿಸಿಕೊಳ್ಳುತ್ತೇವೆ. ಬಳಿಕ ಮತ್ತೆ ಜೀವನ ಹೀಗೆ ಮುಂದುವರೆಯುತ್ತದೆ. ಒಬ್ಬರನ್ನು ಒಬ್ಬರು ಅರ್ಥ ಮಾಡಿಕೊಳ್ಳಬೇಕು. ಆಗ ಸಮಸ್ಯೆ ಇರುವುದಿಲ್ಲ ಎಂದು ವೈವಾಹಿಕ ಬದುಕಿನ ಬಗ್ಗೆ ನಟಿ ಸಲಹೆ ನೀಡಿದ್ದಾರೆ.

    ಸ್ನೇಹಾ ಮೊದಲ ಬಾರಿಗೆ ತಮ್ಮ ಲವ್ ಬ್ರೇಕಪ್ ಬಗ್ಗೆ ಮಾತನಾಡಿದ್ದಾರೆ. ಪ್ರಸನ್ನ(Actor Prasanna) ಕೈ ಹಿಡಿಯುವ ಮುನ್ನ ನನಗೆ ಒಂದು ಲವ್ ಬ್ರೇಕಪ್ (Love Breakup) ಆಗಿತ್ತು. ಆ ಸಮಯದಲ್ಲಿ ನಾನು ಮಾನಸಿಕವಾಗಿ ಸಾಕಷ್ಟು ನೋವು ಅನುಭವಿಸಿದೆ. ಒಂದರ್ಥದಲ್ಲಿ ಖಿನ್ನತೆಗೆ ಒಳಗಾಗಿದ್ದೆ. ಆ ಇಡೀ ವರ್ಷ ನನಗೆ ಬಹಳ ಕೆಟ್ಟದಾಗಿತ್ತು. ಹೊರಗೆ ಸಾಕಷ್ಟು ಜನ ಏನೇನೋ ಮಾತನಾಡುತ್ತಿದ್ದರು. ಈ ಬಗ್ಗೆ ಪೋಷಕರು ನನ್ನ ಜೊತೆ ಚರ್ಚಿಸಿ ಸಂತೈಸಿದ್ದರು. ಅದರ ನಡುವೆ ಸಿನಿಮಾಗಳಲ್ಲಿ ನಟಿಸುತ್ತಿದ್ದೆ. ವಿಶೇಷ ಅಂದರೆ, ಅದೇ ವರ್ಷ ನನ್ನ ನಟನೆಗೆ ರಾಜ್ಯ ಪ್ರಶಸ್ತಿ ಸಿಕ್ಕಿತ್ತು. ಆ ವರ್ಷವನ್ನು ಮರೆಯುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ. ಈ ಮೂಲಕ ತಮ್ಮ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ನಟಿ ತೆರೆ ಎಳೆದಿದ್ದಾರೆ.

  • ಇನ್ನೂ ಚಾಂಪಿಯನ್ ಎಂದು ಕರೆದುಕೊಳ್ಳುತ್ತೀರಾ? ಇಂಗ್ಲೆಂಡ್‍ಗೆ ಕುಟುಕಿದ ಶಾಸ್ತ್ರಿ

    ಇನ್ನೂ ಚಾಂಪಿಯನ್ ಎಂದು ಕರೆದುಕೊಳ್ಳುತ್ತೀರಾ? ಇಂಗ್ಲೆಂಡ್‍ಗೆ ಕುಟುಕಿದ ಶಾಸ್ತ್ರಿ

    ಲಕ್ನೋ: ಟೀಂ ಇಂಡಿಯಾ (Team India) ಮತ್ತು ಇಂಗ್ಲೆಂಡ್ (England) ವಿರುದ್ಧದ ಪಂದ್ಯದ ವೇಳೆ ರವಿಶಾಸ್ತ್ರಿ (Ravi Shastri) ಕಾಮೆಂಟರಿ ಮಾಡುವಾಗ ನಿಮ್ಮನ್ನು ಇನ್ನೂ ಮುಂದೆಯೂ ಹಾಲಿ ಚಾಂಪಿಯನ್ ಎಂದು ಕರೆದುಕೊಳ್ಳುತ್ತೀರಾ? ಎಂದು ಕುಟುಕಿದ್ದಾರೆ.

    ಭಾನುವಾರದ ಪಂದ್ಯದಲ್ಲಿ ಮೊಹಮ್ಮದ್ ಶಮಿ ಹಾಗೂ ಜಸ್ಪ್ರೀತ್ ಬುಮ್ರಾ ಬೌಲಿಂಗ್ ದಾಳಿಯ ನೆರವಿನಿಂದ ಟೀಂ ಇಂಡಿಯಾ, ಇಂಗ್ಲೆಂಡ್ ವಿರುದ್ಧ 100 ರನ್‍ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಬರೋಬ್ಬರಿ 20 ವರ್ಷಗಳ ಬಳಿಕ ವಿಶ್ವಕಪ್ (World Cup )ಟೂರ್ನಿಯಲ್ಲಿ ಆಂಗ್ಲರನ್ನ ಸೋಲಿಸಿ ಜಯದ ಮಾಲೆ ಧರಿಸಿದೆ. ಇದರೊಂದಿಗೆ 6 ಪಂದ್ಯಗಳಲ್ಲಿ ಜಯ ಸಾಧಿಸಿ, ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಜಿಗಿದಿದೆ. ನಿರಂತರ ಸೋಲಿನ ಸುಳಿಗೆ ಸುಲುಕಿರುವ ಇಂಗ್ಲೆಂಡ್ ತಂಡದ ವಿರುದ್ಧ ಕಮೆಂಟ್ ಮಾಡಿ ಕಾಲೆಳೆದಿದ್ದಾರೆ. ಇದನ್ನೂ ಓದಿ: ಬಾತುಕೋಳಿ ತಲೆಗೆ ಕೊಹ್ಲಿ ಫೋಟೊ ಹಾಕಿ ತಗ್ಲಾಕ್ಕೊಂಡ ಇಂಗ್ಲೆಂಡ್‌ ಫ್ಯಾನ್ಸ್‌ – ಇಂಗ್ಲೆಂಡ್‌ ಆರ್ಮಿಗೆ ಭಾರತ್‌ ಆರ್ಮಿ ಕೌಂಟರ್‌

    ಬಾಂಗ್ಲಾದೇಶ ವಿರುದ್ಧದ ಗೆಲುವನ್ನು ಹೊರತುಪಡಿಸಿ ಇಂಗ್ಲೆಂಡ್‍ನ ಎಲ್ಲಾ ಐದು ಪಂದ್ಯಗಳಲ್ಲಿ ಸೋಲು ಕಂಡಿದೆ. ಟೂರ್ನಿಯ ಆರಂಭಿಕ ಪಂದ್ಯದಲ್ಲಿ ನ್ಯೂಜಿಲೆಂಡ್ 9 ವಿಕೆಟ್‍ಗಳಿಂದ ಸೋಲಿಸಿತ್ತು. ಅಫ್ಘಾನಿಸ್ತಾನ 69 ರನ್‍ಗಳಿಂದ ಆಂಗ್ಲರಿಗೆ ಶಾಕ್ ಕೊಟ್ಟಿತ್ತು. ಸೌತ್ ಆಫ್ರಿಕಾ ತಂಡ ಅವರನ್ನು 229 ರನ್‍ಗಳಿಂದ ಸೋಲುಣಿಸಿತ್ತು. ಶ್ರೀಲಂಕಾ ವಿರುದ್ಧ ಎಂಟು ವಿಕೆಟ್‍ಗಳಿಂದ ಸೋಲು ಕಂಡಿತ್ತು.

    ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ನಾಯಕತ್ವದಲ್ಲಿ ಭಾರತ 2003 ರಲ್ಲಿ ಕೊನೆಯ ಬಾರಿಗೆ ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸಿತ್ತು. ಉಳಿದಂತೆ 2007, 2011, 2015 ಮತ್ತು 2019ರಲ್ಲಿ ಭಾರತ, ಇಂಗ್ಲೆಂಡ್ ಎದುರು ಸೋಲು ಅನುಭವಿಸಿತ್ತು. ಹೀಗಾಗಿ ಕಳೆದ 20 ವರ್ಷಗಳಿಂದ ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಆಂಗ್ಲರ ವಿರುದ್ಧ ಗೆಲುವು ಸಿಕ್ಕಿರಲಿಲ್ಲ. ಈಗ 100 ರನ್‍ಗಳ ಭರ್ಜರಿ ಜಯದೊಂದಿಗೆ ಸೆಮಿಫೈನಲ್‍ನತ್ತ ಸಾಗುತ್ತಿದೆ. ಇದನ್ನೂ ಓದಿ: ವಿಶ್ವಕಪ್‌ನ ಟಾಪ್‌ 7 ತಂಡಗಳು 2025 ರ ಚಾಂಪಿಯನ್ಸ್‌ ಟ್ರೋಫಿಗೆ – ಪಾಕಿಸ್ತಾನ ಡೈರೆಕ್ಟ್‌ ಎಂಟ್ರಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಐಪಿಎಲ್ 2022ರಲ್ಲಿ ಫಾಫ್ ಡು ಪ್ಲೆಸಿಸ್ ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಬೇಕಿತ್ತು: ರವಿಶಾಸ್ತ್ರಿ

    ಐಪಿಎಲ್ 2022ರಲ್ಲಿ ಫಾಫ್ ಡು ಪ್ಲೆಸಿಸ್ ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಬೇಕಿತ್ತು: ರವಿಶಾಸ್ತ್ರಿ

    ಮುಂಬೈ: ಐಪಿಎಲ್ 2022ರಲ್ಲಿ ಫಾಫ್ ಡು ಪ್ಲೆಸಿಸ್ ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಬೇಕಿತ್ತು ಎಂದು ಭಾರತದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.

    ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಸಿಎಸ್‍ಕೆ ಫಾಫ್ ಡು ಪ್ಲೆಸಿಸ್ ಅವರನ್ನು ಬಿಡಬಾರದಿತ್ತು. ರವೀಂದ್ರ ಜಡೇಜಾ ತಮ್ಮ ಫಾರ್ಮ್‍ನತ್ತ ಗಮನ ಹರಿಸಬೇಕಾಗಿದೆ. ಐಪಿಎಲ್ 2022ರ ಮೊದಲು ಧೋನಿ ಸಿಎಸ್‍ಕೆ ನಾಯಕತ್ವದಿಂದ ಕೆಳಗಿಳಿದಿದ್ದು, ಈ ಋತುವಿನಲ್ಲಿ ಇನ್ನೂ ತಮ್ಮ ಮೊದಲ ಗೆಲುವು ದಾಖಲಿಸದ ರವೀಂದ್ರ ಜಡೇಜಾಗೆ ನಾಯಕತ್ವವನ್ನು ಹಸ್ತಾಂತರಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಕಳೆದ ವರ್ಷ ಬೆಂಚ್ ಬಿಸಿ ಮಾಡಿದ ಆಟಗಾರರು ಈ ಬಾರಿ ಮ್ಯಾಚ್ ವಿನ್ನರ್ಸ್‌

    ಪ್ರಸ್ತುತ ಐಪಿಎಲ್ 2022ರಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಈಗಾಗಲೇ ತನ್ನ ಆರಂಭಿಕ ನಾಲ್ಕು ಪಂದ್ಯಗಳನ್ನು ಕಳೆದುಕೊಂಡಿದೆ. ಇದು ಫ್ರಾಂಚೈಸಿ ಇತಿಹಾಸದಲ್ಲಿ ಮೊದಲ ಬಾರಿಗೆ ಸಂಭವಿಸಿದೆ. ಚೆನ್ನೈ ಟೂರ್ನಿಯಲ್ಲಿ ನಾಲ್ಕು ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಆದರೆ ಈ ಋತುವಿನಲ್ಲಿ ಜಯದ ಲಯ ಕಂಡುಕೊಳ್ಳಲು ಹೆಣಗಾಡುತ್ತಿದೆ ಎಂದರು. ಇದನ್ನೂ ಓದಿ: ರಾಹುಲ್ ಗೋಲ್ಡನ್ ಡಕ್ – ನಿರಾಸೆಗೊಂಡ ಆಥಿಯಾ ಶೆಟ್ಟಿ

    ಐಪಿಎಲ್ 2022ರ ಮೆಗಾ ಹರಾಜಿನಲ್ಲಿ ರೂ. 7 ಕೋಟಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಖರೀದಿಸಿದ ಫಾಫ್ ಡು ಪ್ಲೆಸಿಸ್ ಅವರು ತಮ್ಮ ಸಂಪೂರ್ಣ ಐಪಿಎಲ್ ವೃತ್ತಿಜೀವನವನ್ನು ಸಿಎಸ್‍ಕೆಯೊಂದಿಗೆ ಕಳೆದಿದ್ದರು. ಅವರು ಈ ಹಿಂದೆ ಚೆನ್ನೈನ 2021 ರ ಐಪಿಎಲ್ ವಿಜಯೋತ್ಸವದಲ್ಲಿ 59 ಎಸೆತಗಳಲ್ಲಿ 86 ರನ್ ಗಳಿಸಿ ಪ್ರಮುಖ ಪಾತ್ರ ವಹಿಸಿದ್ದರು. ಕೆಕೆಆರ್ ವಿರುದ್ಧದ ಫೈನಲ್‍ನಲ್ಲಿ ಪ್ಲೇಯರ್ ಆಫ್ ದಿ ಮ್ಯಾಚ್ ಸಹ ಅವರು ತಮ್ಮ ಮುಡಿಗೇರಿಸಿಕೊಂಡಿದ್ದರು.

    ರವೀಂದ್ರ ಜಡೇಜಾ ಅವರ ಮೇಲೆ ಯಾವುದೇ ನಾಯಕತ್ವದ ಒತ್ತಡವನ್ನು ಹೇರದೆ ಆಟಗಾರನಾಗಿಯೇ ಆಡಿಸಬೇಕಿತ್ತು ಎಂದು ಅಭಿಪ್ರಾಯಪಟ್ಟರು.

  • ರವಿಶಾಸ್ತ್ರಿ ಹೇಳಿಕೆ ನನ್ನನ್ನು ಟೀಂ ಇಂಡಿಯಾದ ಬಸ್‍ನಿಂದ ತಳ್ಳಿದಂತಾಗಿತ್ತು: ಅಶ್ವಿನ್

    ರವಿಶಾಸ್ತ್ರಿ ಹೇಳಿಕೆ ನನ್ನನ್ನು ಟೀಂ ಇಂಡಿಯಾದ ಬಸ್‍ನಿಂದ ತಳ್ಳಿದಂತಾಗಿತ್ತು: ಅಶ್ವಿನ್

    ಮುಂಬೈ: ಟೀಂ ಇಂಡಿಯಾದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಭಾರತದ ಮಾಜಿ ಕೋಚ್ ರವಿಶಾಸ್ತ್ರಿ ಬಗ್ಗೆ ಬಹಿರಂಗವಾಗಿಯೇ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದು ಈಗ ಎಲ್ಲೆಡೆ ಚರ್ಚೆ ಆಗುತ್ತಿದೆ.

    2019ರ ಆಸ್ಟ್ರೇಲಿಯಾ ಪ್ರವಾಸದ ವೇಳೆ ರವಿಶಾಸ್ತ್ರಿ, ಕುಲ್‍ದೀಪ್ ಯಾದವ್ ಟೀಂ ಇಂಡಿಯಾದ ನಂಬರ್ 1 ಬೌಲರ್ ಎಂದಿದ್ದರು. ಈ ಮಾತನ್ನು ಕೇಳಿ ನನಗೆ ಟೀಂ ಇಂಡಿಯಾದ ಬಸ್‍ನಿಂದ ನನ್ನನ್ನು ತಳ್ಳಿದಂತಾಗಿತ್ತು ಮತ್ತು ನಾನು ಕುಗ್ಗಿ ಹೋಗಿದ್ದೆ ಎಂದು ಮಾಧ್ಯಮವೊಂದರ ಸಂದರ್ಶನದಲ್ಲಿ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ರೋಹಿತ್ ಶರ್ಮಾಗೆ ಬೌಲಿಂಗ್ ಮಾಡುವುದು ಕಷ್ಟ – ಪಾಕ್ ಬೌಲರ್

    ಆಸ್ಟ್ರೇಲಿಯಾ ಪ್ರವಾಸದಲ್ಲಿ ಕುಲ್‍ದೀಪ್ ಯಾದವ್ ಇನ್ನಿಂಗ್ಸ್ ಒಂದರಲ್ಲಿ 5 ವಿಕೆಟ್ ಕಿತ್ತು ಮಿಂಚಿದ್ದರು. ಈ ವೇಳೆ ನಾನು ಕೂಡ ತಂಡದಲ್ಲಿದ್ದೆ. ಕುಲ್‍ದೀಪ್ ಸಾಧನೆಯನ್ನು ಹೊಗಳಿದ ರವಿಶಾಸ್ತ್ರಿ ಭಾರತ ನಂಬರ್ 1 ಬೌಲರ್ ಕುಲ್‍ದೀಪ್ ಎಂದಿದ್ದರು. ಈ ಮಾತು ಕೇಳಿ ನಾನು ಕುಗ್ಗಿ ಹೋಗಿದ್ದೆ. ಆ ಬಳಿಕ ಹಲವು ಬಾರಿ ಕ್ರಿಕೆಟ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಲು ತೀರ್ಮಾನಿಸಿದೆ. ನನಗೆ ಶಾಸ್ತ್ರಿ ಮಾತು ತುಂಬಾ ಘಾಸಿಗೊಳಿಸಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಉತ್ತಮ ಆಯ್ಕೆ: ಎಂಎಸ್‌ಕೆ ಪ್ರಸಾದ್

    ನಾನು ಟೀಂ ಇಂಡಿಯಾದ ಯಶಸ್ಸಿಗಾಗಿ ತಂಡದಲ್ಲಿ ಆಡಲು ತುಂಬಾ ಸಂತೋಷ ಪಡುತ್ತೇನೆ. ಅಂದು ಕುಲ್‍ದೀಪ್ ಸಾಧನೆ ಕೂಡ ನನಗೆ ತುಂಬಾ ಹೆಮ್ಮೆ ಅನಿಸಿತ್ತು. ನನಗೆ ಆ ಪಂದ್ಯದಲ್ಲಿ 5 ವಿಕೆಟ್ ಪಡೆಯಲು ಆಗಿರಲಿಲ್ಲ. ಆದರೆ ಕುಲ್‍ದೀಪ್ 5 ವಿಕೆಟ್ ಪಡೆದು ಮಿಂಚಿದ್ದರು. ಆಸ್ಟ್ರೇಲಿಯಾದ ನೆಲದಲ್ಲಿ 5 ವಿಕೆಟ್ ತೆಗೆಯುವುದು ತುಂಬಾ ಕಷ್ಟ ಎಂದು ನನಗೆ ಅರಿವಿತ್ತು. ನಾನು ತಂಡದ ಯಶಸ್ಸಿನಿಂದಾಗಿ ತುಂಬಾ ಸಂತೋಷಗೊಂಡಿದ್ದೆ ಎಂದು ಮನದ ಮಾತು ಹಂಚಿಕೊಂಡಿದ್ದಾರೆ.

    ಟೀಂ ಇಂಡಿಯಾಕ್ಕೆ ಹೊಸ ಆಟಗಾರರ ಆಗಮನವಾಗುತ್ತಿದ್ದಂತೆ ನನ್ನ ಮೇಲೆ ತುಂಬಾ ಒತ್ತಡ ಇತ್ತು. ನಾನು ಪ್ರತಿ ಪಂದ್ಯದಲ್ಲೂ ಬೌಲಿಂಗ್ ಉತ್ತಮವಾಗಿ ಮಾಡಲು ಶ್ರಮಿಸುತ್ತಿದ್ದೆ ಮತ್ತು 6 ಎಸೆತಗಳನ್ನು ವಿವಿಧ ಬಗೆಯಲ್ಲಿ ಎಸೆಯಲು ಪ್ರಯತ್ನಿಸುತ್ತಿದ್ದೆ. ಕೆಲ ಕಾಲ ತಂಡದಿಂದ ಹೊರಗುಳಿದರು ಕೂಡ ಇದೀಗ ಮತ್ತೆ ಕಂಬ್ಯಾಕ್ ಮಾಡಿದ್ದೇನೆ ಎಂದು ಸಂತಸ ಪಟ್ಟರು. ಇದನ್ನೂ ಓದಿ: ಐಪಿಎಲ್ 2022 – ಯಾರು ಯಾವ ತಂಡಕ್ಕೆ ನಾಯಕ? – ಇಲ್ಲಿದೆ ಪೂರ್ಣ ವಿವರ

    ಅಶ್ವಿನ್ ಟೆಸ್ಟ್ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು 427 ವಿಕೆಟ್ ಪಡೆದು ಭಾರತದ ನಂಬರ್ 1 ಸ್ಪಿನ್ನರ್ ಎನಿಸಿಕೊಂಡಿದ್ದಾರೆ. ಅದಲ್ಲದೆ ಅನಿಲ್ ಕುಂಬ್ಳೆ ಮತ್ತು ಕಪಿಲ್ ದೇವ್ ಬಳಿಕ ಅತಿ ಹೆಚ್ಚು ವಿಕೆಟ್ ಪಡೆದ 3 ಬೌಲರ್ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

  • ಅಂತ್ಯವಾಯಿತು ಟೀಂ ಇಂಡಿಯಾದಲ್ಲಿ ಕೊಹ್ಲಿ, ಶಾಸ್ತ್ರಿ ಯುಗ

    ಅಂತ್ಯವಾಯಿತು ಟೀಂ ಇಂಡಿಯಾದಲ್ಲಿ ಕೊಹ್ಲಿ, ಶಾಸ್ತ್ರಿ ಯುಗ

    ಮುಂಬೈ: ಟೀಂ ಇಂಡಿಯಾದಲ್ಲಿ ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ರವಿಶಾಸ್ತ್ರಿ ನಡುವಿನ ಉತ್ತಮವಾದ ಕಾಂಬಿನೇಷನ್ ಇಂದಿಗೆ ಅಂತ್ಯವಾಗಿದೆ.

    ಶಾಸ್ತ್ರಿ 2014ರಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಡೈರೆಕ್ಟರ್ ಆಗಿ ಆಯ್ಕೆಗೊಂಡರು. 2016ರ ಬಳಿಕ ಒಂದು ವರ್ಷಗಳ ಕಾಲ ಕನ್ನಡಿಗ ಅನಿಲ್ ಕುಂಬ್ಳೆ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಿದರು. ನಂತರ 2017ರಲ್ಲಿ ರವಿಶಾಸ್ತ್ರಿ ಮುಖ್ಯ ಕೋಚ್ ಆಗಿ ಟೀಂ ಇಂಡಿಯಾಗೆ ನೇಮಕಗೊಂಡರು. ರವಿಶಾಸ್ತ್ರಿ ಸಾರಥ್ಯದಲ್ಲಿ ಮುನ್ನಡೆದ ಭಾರತ ತಂಡ ಚಾಂಪಿಯನ್ ಟ್ರೋಫಿ, ಆಸ್ಟ್ರೇಲಿಯಾ ಸರಣಿ, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಸಹಿತ ಹಲವು ಮಹತ್ವದ ಪಂದ್ಯಗಳಲ್ಲಿ ಭಾರತ ಉತ್ತಮ ಪ್ರದರ್ಶನ ನೀಡಿದೆ. ಈ ಬಾರಿ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಕೋಚ್ ಸ್ಥಾನದಿಂದ ಕೆಳಗಿಳಿಯುವ ಹುಮ್ಮಸ್ಸಿನಲ್ಲಿದ್ದರು. ಆದರೆ ಟೀಂ ಇಂಡಿಯಾ ಸೋಲಿನಿಂದ ಈ ಅವಕಾಶ ಕೈತಪ್ಪಿತು. ಇದನ್ನೂ ಓದಿ: ಐಪಿಎಲ್‍ನ ನೂತನ ತಂಡ ಅಹಮದಾಬಾದ್‍ನ ಕೋಚ್ ಆಗಲಿದ್ದಾರೆ ರವಿಶಾಸ್ತ್ರಿ?

    ಟಿ20 ವಿಶ್ವಕಪ್ ಮುಗಿದ ಕೂಡಲೇ ಭಾರತ ಟಿ20 ತಂಡದ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಗುಡ್‍ಬೈ ಹೇಳುದಾಗಿ ವಿಶ್ವಕಪ್ ಆರಂಭಕ್ಕೂ ಮೊದಲೇ ಹೇಳಿಕೊಂಡಿದ್ದರು. ಅದರಂತೆ ಟಿ20 ವಿಶ್ವಕಪ್‍ನ ಕಡೆಯ ಪಂದ್ಯ ನಮೀಬಿಯ ವಿರುದ್ಧ ನಾಯಕನಾಗಿ ಕಡೆಯ ಪಂದ್ಯವನ್ನು ಕೊಹ್ಲಿ ಆಡಿದರು. ವಿರಾಟ್ ಕೊಹ್ಲಿ ಟಿ20 ತಂಡದ ನಾಯಕನಾಗಿ 50 ಪಂದ್ಯವಾಡಿದ್ದು ಅದರಲ್ಲಿ 30 ಪಂದ್ಯಗಳಲ್ಲಿ ಜಯ, 16 ಸೋಲು, 2 ಪಂದ್ಯ ಟೈ ಮತ್ತು 2 ಪಂದ್ಯ ರದ್ದು ಗೊಂಡಿದೆ. ಈ ಮೂಲಕ ಟೀಂ ಇಂಡಿಯಾದಲ್ಲಿ ಮಹೇಂದ್ರ ಸಿಂಗ್ ಧೋನಿ ಬಳಿಕ ಯಶಸ್ಸಿಯಾಗಿ ಮುನ್ನಡೆಸಿದ ಗೆಲುವಿನ ರೆಕಾರ್ಡ್ ಕೊಹ್ಲಿ ಹೆಸರಿನಲ್ಲಿದೆ. ಇದನ್ನೂ ಓದಿ: ಪಂದ್ಯಕ್ಕೂ ಮೊದಲು ಅಬುಧಾಬಿ ಪಿಚ್‌ ಕ್ಯೂರೇಟರ್‌ ನಿಗೂಢ ಸಾವು

    ವಿರಾಟ್ ಕೊಹ್ಲಿ 50 ಪಂದ್ಯಗಳಲ್ಲಿ ನಾಯನಾಗಿ ತಂಡವನ್ನು ಮುನ್ನಡೆಸಿ ನಾಯಕತ್ವಕ್ಕೆ ಗುಡ್‍ಬೈ ಹೇಳಿದರೆ, ಟಿ20 ವಿಶ್ವಕಪ್‍ನ ಕಡೆಯ ಪಂದ್ಯದ ಗೆಲುವಿನೊಂದಿಗೆ ಕೋಚ್ ರವಿಶಾಸ್ತ್ರಿ ತಂಡದಿಂದ ಬೇರ್ಪಟ್ಟಿದ್ದಾರೆ. ಈ ಇಬ್ಬರೂ ಕೂಡ ನಾಯಕ ಮತ್ತು ಕೋಚ್ ಆಗಿ ತಂಡವನ್ನು ಉತ್ತಮವಾಗಿ ಬೆಳೆಸಿದ್ದು ಇವರಿಬ್ಬರಲ್ಲಿ ಉತ್ತಮವಾದ ಕಾಂಬಿನೇಷನ್ ಮೂಡಿತ್ತು, ಇಂದಿಗೆ ಆ ಯುಗ ಅಂತ್ಯವಾಗಿದೆ. ಇದನ್ನೂ ಓದಿ: ಅಂತರಾಷ್ಟ್ರೀಯ ಕ್ರಿಕೆಟ್‍ಗೆ ಗುಡ್ ಬೈ ಹೇಳಲು ಮುಂದಾದ್ರಾ ಕ್ರಿಸ್ ಗೇಲ್?

  • IPL ನೂತನ ತಂಡ ಅಹಮದಾಬಾದ್‍ ಕೋಚ್ ಆಗ್ತಾರಂತೆ ರವಿಶಾಸ್ತ್ರಿ?

    IPL ನೂತನ ತಂಡ ಅಹಮದಾಬಾದ್‍ ಕೋಚ್ ಆಗ್ತಾರಂತೆ ರವಿಶಾಸ್ತ್ರಿ?

    ಮುಂಬೈ: ಟಿ20 ವಿಶ್ವಕಪ್ ಬಳಿಕ ಭಾರತ ತಂಡದ ಕೋಚ್ ಸ್ಥಾನದಿಂದ ಕೆಳಗಿಳಿಯುವ ರವಿಶಾಸ್ತ್ರಿ 2022ರ 15ನೇ ಆವೃತ್ತಿಯ ಐಪಿಎಲ್‍ನಲ್ಲಿ ನೂತನ ತಂಡವಾಗಿರುವ ಅಹಮದಾಬಾದ್ ತಂಡಕ್ಕೆ ಮುಖ್ಯ ಕೋಚ್ ಆಗಲಿದ್ದಾರೆ ಎಂದು ವರದಿಯಾಗಿದೆ.

    2017ರ ಬಳಿಕ ಟೀಂ ಇಂಡಿಯಾದ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ರವಿಶಾಸ್ತ್ರಿ ಭಾರತ ಟಿ20 ವಿಶ್ವಕಪ್ ಅಭಿಯಾನ ಮುಗಿಸಿದ ಕೂಡಲೇ ಕೋಚ್ ಸ್ಥಾನದಿಂದ ಕೆಳಗಿಳಿಯಲಿದ್ದಾರೆ. ಆ ಬಳಿಕ ಅವರು 2022ರ ಐಪಿಎಲ್‍ಗೆ ಇದೀಗ ಹೊಸದಾಗಿ ಸೇರ್ಪಡೆಗೊಂಡಿರುವ ಅಹಮದಾಬಾದ್ ತಂಡದ ಪರ ಕೋಚ್ ಆಗಿ ಕಾರ್ಯನಿರ್ವಹಿಸಲು ತಂಡದ ಮಾಲೀಕರಾಗಿರುವ ಸಿವಿಸಿ ಕ್ಯಾಪಿಟಲ್ಸ್, ಶಾಸ್ತ್ರಿ ಅವರನ್ನು ಸಂಪರ್ಕಿಸಿದ್ದಾರೆ ಎಂದು ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಟೀಮ್ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ

    ರವಿಶಾಸ್ತ್ರಿ ಜೊತೆಗೆ ಟೀಂ ಇಂಡಿಯಾದ ಬೌಲಿಂಗ್ ಕೋಚ್ ಭರತ್ ಅರುಣ್ ಮತ್ತು ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಅವರಿಗೂ ಕೂಡ ಅಹಮದಾಬಾದ್ ಫ್ರಾಂಚೈಸಿ ಆಫರ್ ನೀಡಿದ್ದು, ಈ ಮೂವರು ಕೂಡ ಹೊಸ ತಂಡದೊಂದಿಗೆ ಕೈಜೋಡಿಸುವ ಸಾಧ್ಯತೆ ಹೆಚ್ಚಿದೆ ಎಂದು ಮಾಹಿತಿ ಇದೆ. ಈ ನಡುವೆ ಆರ್​ಸಿಬಿ ತಂಡ ಕೂಡ ರವಿ ಶಾಸ್ತ್ರಿ ಅವರನ್ನು ಸಂಪರ್ಕಿಸಿ ಕೋಚ್ ಸ್ಥಾನಕ್ಕೆ ಆಫರ್ ನೀಡಿದೆ ಎಂದು ವರದಿಯಾಗಿದ್ದು, ಸದ್ಯ ರವಿಶಾಸ್ತ್ರಿ ನಡೆ ಯಾವ ಕಡೆ ಎಂಬುದು ಕೆಲದಿನಗಳಲ್ಲಿ ಹೊರಬೀಳಲಿದೆ.

    ಇದೀಗ ರವಿಶಾಸ್ತ್ರಿ ಕೋಚ್ ಹುದ್ದೆಯಿಂದ ನಿರ್ಗಮಿಸುತ್ತಿದ್ದಂತೆ ನೂತನ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನು ಬಿಸಿಸಿಐ ನೇಮಿಸಿದೆ. ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾ ನವೆಂಬರ್ 17 ರಿಂದ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡಬೇಕಿದ್ದು, ಈ ಸರಣಿಯೊಂದಿಗೆ ರಾಹುಲ್ ದ್ರಾವಿಡ್ ಕೋಚ್ ಆಗಿ ತಮ್ಮ ಕಾರ್ಯ ಆರಂಭಿಸಲಿದ್ದಾರೆ. ಇದನ್ನೂ ಓದಿ: ಪಂದ್ಯಕ್ಕೂ ಮೊದಲು ಅಬುಧಾಬಿ ಪಿಚ್‌ ಕ್ಯೂರೇಟರ್‌ ನಿಗೂಢ ಸಾವು

  • ನ್ಯೂಜಿಲೆಂಡ್ ಸರಣಿಗೆ ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಕೋಚ್?

    ನ್ಯೂಜಿಲೆಂಡ್ ಸರಣಿಗೆ ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಕೋಚ್?

    ಮುಂಬೈ: ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ಕೋಚ್ ಸ್ಥಾನದಿಂದ ರವಿಶಾಸ್ತ್ರಿ ಕೆಳಗಿಳಿಯಲಿದ್ದು, ಬಳಿಕ ನ್ಯೂಜಿಲೆಂಡ್ ಸರಣಿಗೆ ಭಾರತ ತಂಡದ ಮಧ್ಯಂತರ ಕೋಚ್ ಆಗಿ ಕನ್ನಡಿಗ ರಾಹುಲ್ ದ್ರಾವಿಡ್ ನೇಮಕವಾಗುವ ಸಾಧ್ಯತೆ ಇದೆ.

    ಕೆಲದಿನಗಳ ಹಿಂದೆ ರವಿಶಾಸ್ತ್ರಿ ಬಳಿಕ ರಾಹುಲ್ ದ್ರಾವಿಡ್ ಅವರನ್ನು ಟೀಂ ಇಂಡಿಯಾದ ಪೂರ್ಣ ಪ್ರಮಾಣದ ಕೋಚ್ ಆಗಿ ಕಾರ್ಯನಿರ್ವಹಿಸುವಂತೆ ಬಿಸಿಸಿಐ ಕೋರಿತ್ತು. ಆದರೆ ಇದನ್ನು ರಾಹುಲ್ ದ್ರಾವಿಡ್ ತಿರಸ್ಕರಿಸಿದ್ದಾರೆ ಎಂದು ವರದಿಯಾಗಿತ್ತು. ಆದರೆ ಇದೀಗ ಟಿ20 ವಿಶ್ವಕಪ್ ಬಳಿಕ ನ್ಯೂಜಿಲೆಂಡ್ ಸರಣಿಗಾಗಿ ಭಾರತ ತಂಡದ ಮಧ್ಯಂತರ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನು ನೇಮಿಸಲು ಬಿಸಿಸಿಐ ಮುಂದಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಟಿ20 ವಿಶ್ವಕಪ್‍ಗಾಗಿ ಟೀಂ ಇಂಡಿಯಾ ಸೇರ್ಪಡೆಗೊಂಡ ಐಪಿಎಲ್ ಸ್ಟಾರ್ಸ್

    ದುಬೈನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಕೊನೆಗೊಳ್ಳುತ್ತಿದ್ದಂತೆ ರವಿಶಾಸ್ತ್ರಿ ಕೋಚ್ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಶಾಸ್ತ್ರಿ 2014ರಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಡೈರೆಕ್ಟರ್ ಆಗಿ ಆಯ್ಕೆಗೊಂಡಿದ್ದರು. 2016ರ ಬಳಿಕ ಒಂದು ವರ್ಷಗಳ ಕಾಲ ಕನ್ನಡಿಗ ಅನಿಲ್ ಕುಂಬ್ಳೆ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಿದರು. ನಂತರ 2017ರಲ್ಲಿ ರವಿಶಾಸ್ತ್ರಿ ಮುಖ್ಯ ಕೋಚ್ ಆಗಿ ಟೀಂ ಇಂಡಿಯಾಗೆ ನೇಮಕಗೊಂಡರು. ರವಿಶಾಸ್ತ್ರಿ ಸಾರಥ್ಯದಲ್ಲಿ ಮುನ್ನಡೆದ ಭಾರತ ತಂಡ ಚಾಂಪಿಯನ್ ಟ್ರೋಫಿ, ಆಸ್ಟ್ರೇಲಿಯಾ ಸರಣಿ, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಸಹಿತ ಹಲವು ಮಹತ್ವದ ಪಂದ್ಯಗಳಲ್ಲಿ ಭಾರತ ಉತ್ತಮ ಪ್ರದರ್ಶನ ನೀಡಿದೆ.

    ಇದೀಗ ಬಿಸಿಸಿಐ ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರಿಗೆ ಆಫರ್ ನೀಡಿತ್ತು. ಆದರೆ ದ್ರಾವಿಡ್ ಕೋಚ್ ಹುದ್ದೆ ಸ್ವೀಕರಿಸಲು ಸಿದ್ಧರಿಲ್ಲ ಎಂದು ಕೇಳಿಬರುತ್ತಿದೆ. ಈ ನಡುವೆ ಮಾಜಿ ಆಟಗಾರ ವಿ.ವಿ.ಎಸ್ ಲಕ್ಷ್ಮಣ್, ಪ್ರಸ್ತುತ ಬ್ಯಾಟಿಂಗ್ ಕೋಚ್ ಆಗಿರುವ ವಿಕ್ರಮ್ ರಾಥೋರ್ ಅವರ ಹೆಸರಿನೊಂದಿಗೆ ಕೆಲ ವಿದೇಶಿ ಕೋಚ್‍ಗಳ ಹೆಸರು ಕೇಳಿ ಬರುತ್ತಿದೆ. ಆದರೆ ಬಿಸಿಸಿಐ ಮಾತ್ರ ಸ್ವದೇಶಿ ಕೋಚ್‍ಗಳನ್ನು ಪರಿಗಣಿಸಲು ಒಲವು ತೋರಿಸಿದೆ ಎಂಬ ಮಾಹಿತಿ ಇದೆ. ಇದನ್ನೂ ಓದಿ: T20 ವಿಶ್ವಕಪ್‍ಗೆ ಟೀಂ ಇಂಡಿಯಾ ಹೊಸ ಜೆರ್ಸಿ ಅನಾವರಣ

  • ರವಿಶಾಸ್ತ್ರಿ ಬಳಿಕ ಟೀಂ ಇಂಡಿಯಾಕ್ಕೆ ಕನ್ನಡಿಗ ಕೋಚ್?

    ರವಿಶಾಸ್ತ್ರಿ ಬಳಿಕ ಟೀಂ ಇಂಡಿಯಾಕ್ಕೆ ಕನ್ನಡಿಗ ಕೋಚ್?

    ಮುಂಬೈ: ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾದ ಮುಖ್ಯ ಕೋಚ್ ರವಿಶಾಸ್ತ್ರಿಯವರ ಒಪ್ಪಂದ ಕೊನೆಗೊಳ್ಳುತ್ತದೆ. ಈ ನಡುವೆ ಬಿಸಿಸಿಐ ಈಗಾಗಲೇ ಕೋಚ್‍ಗಳ ಹುಡುಕಾಟದಲ್ಲಿ ತೊಡಗಿದ್ದು, ಕನ್ನಡಿಗರೊಬ್ಬರಿಗೆ ಕೋಚ್ ಆಗುವಂತೆ ಆಫರ್ ಕೂಡ ಕೊಟ್ಟಿದೆ ಎಂದು ವರದಿಯಾಗಿದೆ.

    ದುಬೈನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಕೊನೆಗೊಳ್ಳುತ್ತಿದ್ದಂತೆ ರವಿಶಾಸ್ತ್ರಿ ಕೋಚ್ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಶಾಸ್ತ್ರಿ 2014ರಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಡೈರೆಕ್ಟರ್ ಆಗಿ ಆಯ್ಕೆಗೊಂಡರು. 2016ರ ಬಳಿಕ ಒಂದು ವರ್ಷಗಳ ಕಾಲ ಕನ್ನಡಿಗ ಅನಿಲ್ ಕುಂಬ್ಳೆ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಿದರು. ನಂತರ 2017ರಲ್ಲಿ ರವಿಶಾಸ್ತ್ರಿ ಮುಖ್ಯ ಕೋಚ್ ಆಗಿ ಟೀಂ ಇಂಡಿಯಾಗೆ ನೇಮಕಗೊಂಡರು. ರವಿಶಾಸ್ತ್ರಿ ಸಾರಥ್ಯದಲ್ಲಿ ಮುನ್ನಡೆದ ಭಾರತ ತಂಡ ಚಾಂಪಿಯನ್ ಟ್ರೋಫಿ, ಆಸ್ಟ್ರೇಲಿಯಾ ಸರಣಿ, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಸಹಿತ ಹಲವು ಮಹತ್ವದ ಪಂದ್ಯಗಳಲ್ಲಿ ಭಾರತ ಉತ್ತಮ ಪ್ರದರ್ಶನ ನೀಡಿದೆ.

    2019ರ ಏಕದಿನ ವಿಶ್ವಕಪ್‍ನಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದ ಭಾರತ ಸೋತರು ಕೂಡ ಈ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿತ್ತು. ತವರಿನಲ್ಲಿ ನಡೆದ ಆಸ್ಟ್ರೇಲಿಯಾ, ಇಂಗ್ಲೆಂಡ್, ಸೌತ್ ಆಫ್ರಿಕಾ, ಸರಣಿ ಗೆಲ್ಲುವ ಮೂಲಕ ಭಾರತ ತಂಡ ವಿಶೇಷ ಸಾಧನೆ ಮಾಡಿದೆ. ಟೀ ಇಂಡಿಯಾದಲ್ಲಿ ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚು ಸಾಧಿಸಿದ್ದೇವೆ ಎಂಬ ಸಂತೃಪ್ತಿ ಇದೆ ಎಂದು ಶಾಸ್ತ್ರಿ ಕೂಡ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ಕುಂಬ್ಳೆ, ಲಕ್ಷ್ಮಣ್ !

    ಇದೀಗ ಟಿ-20 ವಿಶ್ವಕಪ್ ಬಳಿಕ ಬಿಸಿಸಿಐ ಜೊತೆಗಿನ ಒಪ್ಪಂದ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಮುಖ್ಯ ಕೋಚ್ ಹುದ್ದೆಗೆ ಕನ್ನಡಿಗ ಅನಿಲ್ ಕುಂಬ್ಳೆ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಈ ಹಿಂದೆ 2016-17ರ ನಡುವೆ ಒಂದು ವರ್ಷ ಕುಂಬ್ಳೆ ಕೋಚ್ ಆಗಿ ತಂಡದಲ್ಲಿ ಕಾರ್ಯನಿರ್ವಹಿಸಿದ್ದರು. ಬಳಿಕ ವಿರಾಟ್ ಕೊಹ್ಲಿ ಜೊತೆಗಿನ ವೈಮನಸ್ಸಿನಿಂದಾಗಿ ಕೋಚ್ ಸ್ಥಾನದಿಂದ ಕೆಳಗಿಳಿದಿದ್ದರು. ಇದೀಗ ಮತ್ತೆ ಬಿಸಿಸಿಐ ಕುಂಬ್ಳೆ ಕಡೆಗೆ ಒಲವನ್ನು ತೋರಿದೆ ಎಂದು ವರದಿಯಾಗಿದೆ.

    ಕುಂಬ್ಳೆ ಜೊತೆ ಕನ್ನಡಿಗ ರಾಹುಲ್ ದ್ರಾವಿಡ್ ಹೆಸರು ಕೂಡ ಕೇಳಿ ಬರುತ್ತಿದೆ. ಆದರೆ ದ್ರಾವಿಡ್ ಕೋಚ್ ಹುದ್ದೆ ಸ್ವೀಕರಿಸಲು ಸಿದ್ಧರಿಲ್ಲ ಎಂದು ಕೇಳಿಬರುತ್ತಿದೆ. ಈ ನಡುವೆ ಮಾಜಿ ಆಟಗಾರ ವಿ.ವಿ.ಎಸ್ ಲಕ್ಷ್ಮಣ್, ಪ್ರಸ್ತುತ ಬ್ಯಾಟಿಂಗ್ ಕೋಚ್ ಆಗಿರುವ ವಿಕ್ರಮ್ ರಾಥೋರ್ ಅವರ ಹೆಸರಿನೊಂದಿಗೆ ಕೆಲ ವಿದೇಶಿ ಕೋಚ್‍ಗಳ ಹೆಸರು ಕೇಳಿ ಬರುತ್ತಿದೆ. ಆದರೆ ಬಿಸಿಸಿಐ ಮಾತ್ರ ಸ್ವದೇಶಿ ಕೋಚ್‍ಗಳನ್ನು ಪರಿಗಣಿಸಲು ಒಲವು ತೋರಿಸಿದೆ ಎಂಬ ಮಾಹಿತಿ ಇದೆ. ಇದನ್ನೂ ಓದಿ: ನಾಳೆಯಿಂದ ದುಬೈನಲ್ಲಿ ಐಪಿಎಲ್ ಕಲರವ

    ರವಿಶಾಸ್ತ್ರಿ ಕೋಚ್ ಆಗಿ ಕಾರ್ಯನಿರ್ವಹಿಸಿದ ಬಳಿಕ ಭಾರತ ತಂಡದಲ್ಲಿ ಆಟಗಾರರ ಬೆಂಚ್ ಸ್ಟ್ರೆಂತ್ ತುಂಬಾನೆ ಬೆಳೆದಿದ್ದು, ಹಲವು ಉದಯೋನ್ಮುಕ ಆಟಗಾರರು ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಅವರ ಸರದಿ ಮುಗಿದ ಬಳಿಕ ಮುಂದಿನ ಕೋಚ್ ಯಾರಗಳಿದ್ದಾರೆ ಎಂಬ ಕುರಿತು ಕ್ರಿಕೆಟ್ ಅಂಗಳದಲ್ಲಿ ಚರ್ಚೆ ಜೋರಾಗಿದೆ. ಇದನ್ನೂ ಓದಿ:ಮಾಸ್ಕ್ ಹಾಕಿ, ಲಸಿಕೆ ಪಡೆಯಿರಿ- ಧೋನಿ ಕ್ಯಾಂಪೇನ್