Tag: ರವಿ ಕುಮಾರ್

  • ಶಾಲಿನಿ ರಜನೀಶ್‌ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ರೆ ನೇಣು ಹಾಕಿಕೊಳ್ಳುತ್ತೇನೆ: ರವಿಕುಮಾರ್‌

    ಶಾಲಿನಿ ರಜನೀಶ್‌ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ರೆ ನೇಣು ಹಾಕಿಕೊಳ್ಳುತ್ತೇನೆ: ರವಿಕುಮಾರ್‌

    ಬೆಂಗಳೂರು: ತನ್ನ ವಿರುದ್ಧ ಎಫ್‌ಐಆರ್‌ (FIR) ದಾಖಲಾದ ಬೆನ್ನಲ್ಲೇ ಎನ್ ರವಿಕುಮಾರ್ (Ravikumar) ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ (Shalini Rajneesh) ವಿರುದ್ಧ ನಾನು ಯಾವುದೇ ಅವಹೇಳನಕಾರಿಯಾಗಿ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ಈ ಸಂಬಂಧ ಪಬ್ಲಿಕ್‌ ಟಿವಿಗೆ ಪ್ರತಿಕ್ರಿಯೆ ನೀಡಿದ ಅವರು, ಶಾಲಿನಿ ರಜನೀಶ್ ಅವರ ಬಗ್ಗೆ ಬಹಳ ಗೌರವ ಇದೆ. ಅವರ ಬಗ್ಗೆ ಯಾವುದೇ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿಲ್ಲ. ಆಕ್ಷೇಪಾರ್ಹ ಹೇಳಿಕೆ ನೀಡಿದರೆ ನಾನು ನೇಣು ಹಾಕಿಕೊಳ್ಳುತ್ತೇನೆ ಎಂದು ರವಿಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ಶಾಲಿನಿ ರಜನೀಶ್‌ ವಿರುದ್ಧ ಅಸಭ್ಯ ಹೇಳಿಕೆ ರವಿಕುಮಾರ್ವಿರುದ್ಧ ಕೇಸ್ದಾಖಲು

     

    ಮುಖ್ಯ ಕಾರ್ಯದರ್ಶಿಯವರು ಅವರು 24 ಗಂಟೆ ಬ್ಯುಸಿ ಇದ್ದಾರೆ. ಹಾಗಾಗಿ ಅವರು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ ಎಂದೆ. ಹಗಲಲ್ಲಿ ಸಿಎಂ ಕಾರ್ಯಕ್ರಮಗಳಲ್ಲಿ ಭಾಗವಹಿಸ್ತಾರೆ, ರಾತ್ರಿಯೆಲ್ಲ ಸರ್ಕಾರದ ಕೆಲಸ ಮಾಡ್ತಾರೆ ಅಂದೆ. ಇದರೊಳಗೆ ಏನು ತಪ್ಪಿದೆ? ನಾನು ಅವಾಚ್ಯ ಶಬ್ಧ ಬಳಸಿಲ್ಲ ಎಂದು ತಿಳಿಸಿದರು.

    ಅವಾಚ್ಯ ಶಬ್ಧ ಬಳಸಿದರೆ ಕಾಂಗ್ರೆಸ್‌ನವರು ಬಹಿರಂಗಪಡಿಸಲಿ. ನನಗೂ ನನ್ನ ಮನೆಯಲ್ಲಿ ಸಹೋದರಿಯರು ಇದ್ದಾರೆ. ಯಾರ ಜತೆ ಹೇಗೆ ಮಾತನಾಡಬೇಕೆಂಬ ಪರಿಜ್ಞಾನ ಇದೆ. ಮುಖ್ಯ ಕಾರ್ಯದರ್ಶಿಗೆ ಆ ರೀತಿ ಮಾತನಾಡಲು

    ಆತರಹ ಮಾತಾಡಲು ಸಾಧ್ಯಾನಾ? ಯಾರಿಗೇ ಆಗಲೀ ಆಥರ ಮಾತಾಡೋದು ಸಾಧ್ಯನಾ? ಅವಾಚ್ಯ ಶಬ್ಧ ಇದ್ದರೆ ನೇಣು ಹಾಕಿಕೊಳ್ತೇನೆ. ನನ್ನ ವಿರುದ್ಧ ದ್ವೇಷದಿಂದ ಕಾಂಗ್ರೆಸ್‌ನವರು ದೂರು ಕೊಟ್ಟಿದ್ದಾರೆ ಎಂದು ರವಿಕುಮಾರ್ ಸ್ಪಷ್ಟ ಪಡಿಸಿದರು. ಇದನ್ನೂ ಓದಿ: Public TV Explainer | ಕಾಲ್ತುಳಿತ ದುರಂತದ ಬಳಿಕ ಎಚ್ಚೆತ್ತ ಪೊಲೀಸ್ಇಲಾಖೆ ಇನ್ಮುಂದೆ ಸಭೆ, ಸಮಾರಂಭಗಳಿಗೆ ಹೊಸ `SOP’

  • ಶಾಲಿನಿ ರಜನೀಶ್‌ ವಿರುದ್ಧ ಅಸಭ್ಯ ಹೇಳಿಕೆ – ರವಿಕುಮಾರ್‌ ವಿರುದ್ಧ ಕೇಸ್‌ ದಾಖಲು

    ಶಾಲಿನಿ ರಜನೀಶ್‌ ವಿರುದ್ಧ ಅಸಭ್ಯ ಹೇಳಿಕೆ – ರವಿಕುಮಾರ್‌ ವಿರುದ್ಧ ಕೇಸ್‌ ದಾಖಲು

    ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ (Shalini Rajneesh) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಬಿಜೆಪಿ ಪರಿಷತ್‌ ಸದಸ್ಯ ರವಿಕುಮಾರ್‌ (BJP MLC Ravikumar) ವಿರುದ್ಧ ವಿಧಾನಸೌದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

    ಜೆಪಿನಗರದ ನಿವಾಸಿಯಾಗಿರುವ ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬಿಎನ್‌ಎಸ್‌ ಸೆಕ್ಷನ್‌ 351(3)(ಅನೈತಿಕತೆಯ ಆರೋಪ), 75(3) (ಅಶ್ಲೀಲ ಹೇಳಿಕೆ), 79(ಮಹಿಳೆಯ ಮಾನಕ್ಕೆ ಕುಂದು ತರುವ ಉದ್ದೇಶದಿಂದ ಪ್ರಯೋಗಿಸಲಾದ ಪದ) ಅಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹಾಸನ| ಪತ್ನಿಯನ್ನು ಕೊಂದು ಹೃದಯಾಘಾತವಾಗಿದೆ ಎಂದು ಬಿಂಬಿಸಿದ್ನಾ ಪತಿ?


    ದೂರಿನಲ್ಲಿ ಏನಿದೆ?
    ನಾನು ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷಿಯಾಗಿರುತ್ತೇನೆ. ಜುಲೈ 1 ರಂದು ಬಿಜೆಪಿ ನಾಯಕರು ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ಮಾತನಾಡುತ್ತಿದ್ದರು.

    ಈ ಸಂದರ್ಭದಲ್ಲಿ ರವಿಕುಮಾರ್‌ ಅವರು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ, ಶಾಲಿನಿ ರಜಿನೀಶ್ ಅವರನ್ನು ಅಸಭ್ಯ ರೀತಿಯಲ್ಲಿ “ಅವರು ರಾತ್ರಿ ಸರ್ಕಾರಕ್ಕೆ ಹಗಲು ಸಿಎಂಗೆ ಕೆಲಸ ಮಾಡುತ್ತಾರೆಂದು” ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದು ಟಿವಿಯಲ್ಲಿ ಪ್ರಸಾರವಾಗಿತ್ತು. ಇದನ್ನೂ ಓದಿ: ಎಂಎಲ್‌ಸಿ ರವಿಕುಮಾರ್ ಮೇಲೆ ನಿಯಮಾವಳಿಗಳ ಪ್ರಕಾರ ಕ್ರಮ ಹೊರಟ್ಟಿ

    ಟಿವಿಯಲ್ಲಿ ಬಂದ ಸುದ್ದಿ ನೋಡಿ ನನಗೆ ನೋವುಂಟಾಗಿದ್ದು, ಅವರ ಹೇಳಿಕೆಯು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಆಗೌರವ ತೋರಿದಂತಾಗಿದೆ. ಶಾಲಿನಿ ರಜನೀಶ್ ಅವರ ಗೌರವಕ್ಕೆ ಕುಂದುಂಟು ಮಾಡಿ ಇಡಿ ಮಹಿಳಾ ಕುಲಕ್ಕೆ ಆಗೌರವ ತೋರಿರುತ್ತಾರೆ. ಇವರ ಮಾತು ಲೈಂಗಿಕ ಅರ್ಥ ಬರುವಂತಹ ಹೇಳಿಕೆಯಾಗಿದ್ದು ಮುಖ್ಯ ಕಾರ್ಯದರ್ಶಿರವರ ಖ್ಯಾತಿಗೆ ಹಾನಿ ಉಂಟು ಮಾಡಿದೆ. ರವಿಕುಮಾರ್ ಹೇಳಿಕೆಯಿಂದ ಮಹಿಳೆ ಹಾಗೂ ಮಹಿಳಾ ಸಮಾಜಕ್ಕೂ ಆಗೌರವ ಉಂಟಾಗಿದ್ದು, ಅವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಮನವಿ ಮಾಡುತ್ತಿದ್ದೇನೆ.

  • ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

    ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

    ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajanish) ಕುರಿತು ಅವಹೇಳನಕಾರಿ ಹೇಳಿಕೆ ಆರೋಪ ಹೊತ್ತಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebalkar) ಕಿಡಿಕಾರಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಿಜೆಪಿ (BJP) ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್‌ಸಿ ಅವರ ಮನಸ್ಥಿತಿ ಎಂಥಹದ್ದು ಎಂದು ತೋರಿಸುತ್ತದೆ. ರವಿಕುಮಾರ್ (Ravi Kumar) ಅವರು ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ ಇದಾಗಿದೆ. ರವಿಕುಮಾರ್ ಅವರ ಹೇಳಿಕೆಯನ್ನು ಕೇಂದ್ರ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುವರೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬಾಬಾನಗರದ ಬಳಿ ಹೊಸ ಕೆರೆ ನಿರ್ಮಿಸಲು 550 ಕೋಟಿ ರೂ. ಅನುದಾನಕ್ಕೆ ಎಂ.ಬಿ ಪಾಟೀಲ್ ಮನವಿ

    ಕಳೆದ ಬೆಳಗಾವಿ ಅಧಿವೇಶನದ ವೇಳೆಯಲ್ಲಿ ಸಿಟಿ ರವಿ ಅವರು ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡಿದಾಗ ಆ ಪಕ್ಷದ ನಾಯಕರು ಒಂದೂ ಮಾತನಾಡಲಿಲ್ಲ. ಇಂತಹ ನಾಯಕರ ಹೇಳಿಕೆಗಳಿಗೆ ಕೇಂದ್ರದ ನಾಯಕರು ಪರೋಕ್ಷ ಬೆಂಬಲ ನೀಡಿದಂತಿದೆ. ಇದು ಬಿಜೆಪಿ ನಾಯಕರು ಮಹಿಳೆಯರಿಗೆ ಕೊಡುವ ಗೌರವ ಎಂತಹದ್ದು ಎಂಬುದನ್ನು ತೋರಿಸುತ್ತದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂತಹ ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ಧಿ ಭ್ರಮಣೆಯಾಗಿದೆ ಅನಿಸುತ್ತದೆ. ಇನ್ನು ಮುಂದಾದರೂ ಇಂತಹ ಹೇಳಿಕೆಗಳನ್ನು ನೀಡದೇ ಜವಾಬ್ದಾರಿಯಿಂದ ವರ್ತಿಸಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಮೀಕ್ಷೆ ಮಾಡದೇ ಜಾತಿಗಣತಿ ಸ್ಟಿಕ್ಕರ್ ಅಂಟಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಕೇಸ್ – ಮೂವರು BBMP ನೌಕರರು ಅಮಾನತು

    ಕ್ಷಮೆಯಾಚನೆಗೆ ಪಟ್ಟು
    ಸಾರ್ವಜನಿಕವಾಗಿ ಮಹಿಳಾ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರವಿಕುಮಾರ್ ಅವರು ಕೂಡಲೇ ಕ್ಷಮೆಯಾಚಿಸಬೇಕು. ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳಲಿ, ಇಲ್ಲವಾದರೆ ರವಿಕುಮಾರ್ ಅವರು ಸಾರ್ವಜನಿಕರ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

  • ಫೋಟೋ ಕ್ಲಿಕ್ಕಿಸುವ ನೆಪದಲ್ಲಿ ಪ್ರಿಯಾಂಕಾ ಚೋಪ್ರಾ ಸಹೋದರಿಗೆ ಚುಂಬಿಸಿದ ನಿರ್ದೇಶಕ

    ಫೋಟೋ ಕ್ಲಿಕ್ಕಿಸುವ ನೆಪದಲ್ಲಿ ಪ್ರಿಯಾಂಕಾ ಚೋಪ್ರಾ ಸಹೋದರಿಗೆ ಚುಂಬಿಸಿದ ನಿರ್ದೇಶಕ

    ಕೆಲವು ಬಾರಿ ಹೀರೋಯಿನ್‌ಗಳ(Actress) ಜೊತೆ ಅಭಿಮಾನಿಗಳು ಅನುಚಿತ ವರ್ತನೆ ಮಾಡುವುದುಂಟು. ಆದರೆ ನಿರ್ದೇಶಕರು ಕೂಡ ಅದೇ ರೀತಿ ವರ್ತಿಸಿದರೆ ಹೇಗೆ? ಅಂಥದೊಂದು ಘಟನೆ ಇದೀಗ ನಡೆದಿದೆ. ಸಿನಿಮಾ ಪ್ರಚಾರ ಕಾರ್ಯದಲ್ಲಿ ಫೋಟೋ ಕ್ಲಿಕ್ಕಿಸುವ ನೆಪದಲ್ಲಿ ಮನ್ನಾರಾ ಚೋಪ್ರಾಗೆ (Mannara Chopra) ನಿರ್ದೇಶಕ ರವಿ ಕುಮಾರ್ (Ravikumar) ಕಿಸ್ ಮಾಡಿದ್ದಾರೆ. ನಿರ್ದೇಶಕನ ನಡೆಗೆ ನೆಟ್ಟಿಗರಿಂದ ತೀವ್ರ ಖಂಡನೆ ವ್ಯಕ್ತವಾಗಿದೆ.

    ನಿರ್ದೇಶಕ ಎಎಸ್ ರವಿಕುಮಾರ್ ಚೌಧರಿ ತಮ್ಮ ಮುಂಬರುವ ಸಿನಿಮಾ ‘ತಿರಗಬಡರ ಸಾಮಿ’ ಚಿತ್ರದ ಪ್ರಚಾರಕ್ಕೆ ನಟಿ ಮನ್ನಾರ ಅವರ ಜೊತೆಗೆ ಬಂದಿದ್ದರು. ಈ ವೇಳೆ ಕ್ಯಾಮೆರಾಗಳ ಎದುರು ಪ್ರಿಯಾಂಕಾ ಚೋಪ್ರಾ (Priyanka Chopra) ಅವರ ಸಹೋದರ ಸಂಬಂಧಿ ನಟಿ ಮನ್ನಾರಾ ಅವರನ್ನು ನಿರ್ದೇಶಕ ಚುಂಬಿಸಿದ್ದಾರೆ. ಇದಕ್ಕೆ ಹಲವರು ನಿರ್ದೇಶಕನಿಗೆ ಸರಿಯಾಗಿ ಉಗಿದಿದ್ದಾರೆ. ಆನ್‌ಲೈನ್‌ನಲ್ಲಿ ವೈರಲ್ ಆಗಿರುವ ವಿಡಿಯೊದಲ್ಲಿ, ನಟಿ ಮನ್ನಾರ ಅವರು ನಿರ್ದೇಶಕ ಎಎಸ್ ರವಿಕುಮಾರ್ ಚೌಧರಿ ಅವರ ಜೊತೆಗೆ ಕ್ಯಾಮೆರಾಗಳಿಗೆ ಪೋಸ್ ನೀಡುತ್ತಿದ್ದಾರೆ. ಈ ವೇಳೆ ನಿರ್ದೇಶಕ ಆಕೆಯ ಭುಜದ ಸುತ್ತ ಕೈ ಹಾಕಿದ್ದರು. ಇದೇ ವೇಳೆ ಆಕೆಯನ್ನು ಎಳೆದು ಚುಂಬಿಸಿದ್ದಾರೆ. ಇದನ್ನೂ ಓದಿ:ಕುಡಿತದ ಚಟದಿಂದ ಮದುವೆ ಮುರಿದೋಯ್ತು, ಮಗಳು ಕೈ ತಪ್ಪಿ ಹೋದಳು- ನಟಿ ಊರ್ವಶಿ

    ಘಟನೆಗೆ ಹೇಗೆ ಪ್ರತಿಕ್ರಿಯಿಸಬೇಕು ಎಂದು ತಿಳಿಯದೆ ನಟಿ ಮನ್ನಾರ ಆಶ್ಚರ್ಯದಿಂದ ನಿಂತಿದ್ದರು. ಸೋಷಿಯಲ್‌ ಮೀಡಿಯಾದಲ್ಲಿ ಈ ವಿಡಿಯೋ ಹಲವರು ಹಂಚಿಕೊಂಡಿದ್ದು, ವೈರಲ್ ಆಗಿತ್ತು. ನಿರ್ದೇಶಕನ ನಡವಳಿಕೆಗೆ ಅನೇಕರು ದೂಷಿಸಿದ್ದಾರೆ.

    ನಟಿ ಮನ್ನಾರಾ ಚೋಪ್ರಾ ಅವರು ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟು 9 ವರ್ಷಗಳಾಗಿದೆ. ನಟಿಯ ಕೆರಿಯರ್‌ಗೆ ಬಿಗ್ ಬ್ರೇಕ್ ಸಿಕ್ಕಿಲ್ಲ. ‘ತಿರಗಬಡರ ಸಾಮಿ’ ಚಿತ್ರದಿಂದ ನಟಿಗೆ ಯಶಸ್ಸು ಸಿಗುತ್ತಾ ಕಾಯಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಿಲುಮೆ ಅಕ್ರಮ ಪ್ರಕರಣ – ಪ್ರಮುಖ ಆರೋಪಿ ರವಿಕುಮಾರ್ ಬಂಧನ

    ಚಿಲುಮೆ ಅಕ್ರಮ ಪ್ರಕರಣ – ಪ್ರಮುಖ ಆರೋಪಿ ರವಿಕುಮಾರ್ ಬಂಧನ

    ಬೆಂಗಳೂರು: ಮತದಾರರ ಮಾಹಿತಿ ಕಳವು (Voter Data Theft) ಪ್ರಕರಣ ಸಂಬಂಧ ಪೊಲೀಸರ (Police) ತನಿಖೆ ತೀವ್ರಗೊಂಡಿದೆ. ಒಬ್ಬೊಬ್ಬರೇ ಆರೋಪಿಗಳು ಖಾಕಿ ಬಲೆಗೆ ಬೀಳುತ್ತಿದ್ದು, ಇದೀಗ ಪ್ರಕರಣದ ಪ್ರಮುಖ ಆರೋಪಿ ರವಿಕುಮಾರ್‌ನನ್ನು (Ravikumar) ಪೊಲೀಸರು ಬಂಧಿಸಿದ್ದಾರೆ.

    ಈಗಾಗಲೇ ನಾಲ್ವರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇದೀಗ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಹಲಸೂರು ಗೇಟ್ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸರಿಂದ ರೇಣುಕಪ್ರಸಾದ್, ಧರ್ಮೇಶ್ ಬೆನ್ನಲ್ಲೇ ಕಂಪನಿ ನಿರ್ದೇಶಕರಾದ ಕೆಂಪೇಗೌಡ, ಐಶ್ವರ್ಯರನ್ನು ಪೊಲೀಸ್ರು ಬಂಧಿಸಿದ್ರು. ಇಂದು ಡಿಜಿಟಲ್ ಸಮೀಕ್ಷಾ ಆ್ಯಪ್ ಡೆವಲಪ್ ಮಾಡಿದ್ದ ಸಂಜೀವ್ ಶೆಟ್ಟಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ಉಗ್ರರ ಅಡಗುತಾಣವಾಗ್ತಿದ್ಯಾ ಮಂಗಳೂರು – ಕರಾವಳಿ ಜಿಲ್ಲೆಯಾದ್ಯಂತ ಹೈ ಅಲರ್ಟ್

    ಡಿಜಿಟಲ್ ಸಮೀಕ್ಷಾ ಆ್ಯಪ್ ಶೋಧಿಸುವ ಕೆಲಸಕ್ಕೆ ಪೊಲೀಸರು ಮುಂದಾಗಿದ್ದಾರೆ. ಮತ್ತೊಂದು ಕಡೆ ವಿವಿಧ ತಂಡಗಳಾಗಿ ಪೊಲೀಸರು ಹಲವೆಡೆ ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ಕಲೆಹಾಕ್ತಿದ್ದಾರೆ. ಇಲ್ಲಿವರೆಗೂ ಚಿಲುಮೆ ಸಂಸ್ಥೆಯಿಂದ ಯಾರಿಗೆಲ್ಲಾ ಲಾಭವಾಗಿದೆ, ಯಾರೆಲ್ಲಾ ರಾಜಕೀಯ ಮುಖಂಡರು, ಅಧಿಕಾರಿಗಳು ಇದಕ್ಕೆ ಕೈ ಜೋಡಿಸಿದ್ದಾರೆ ಅನ್ನೋದ್ರ ಮಾಹಿತಿಯನ್ನು ಪೊಲೀಸ್ರು ಹೆಕ್ಕುತ್ತಿದ್ದಾರೆ. ಏಳಕ್ಕೂ ಹೆಚ್ಚು ಕ್ಷೇತ್ರಗಳ ಮತದಾರರ ಮಾಹಿತಿ ಎಗರಿಸಿದ್ದ ಚಿಲುಮೆ, ಸಚಿವರು ಮತ್ತು ಶಾಸಕರಿಗೆ ಮಾರಿಕೊಂಡಿದೆ ಎನ್ನಲಾಗಿದೆ. ಇದನ್ನೂ ಓದಿ: ಕಾಡಾನೆ ದಾಳಿಗೆ ಮಹಿಳೆ ಬಲಿ – ಮೃತದೇಹ ನೋಡಲು ಬಂದ ಶಾಸಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್‌ಗೆ ಕೊರೊನಾ ಸೋಂಕು ದೃಢ

    ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್‌ಗೆ ಕೊರೊನಾ ಸೋಂಕು ದೃಢ

    ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

    ಟ್ವೀಟ್ ಮಾಡುವ ಮೂಲಕ ಸ್ವತಃ ಅವರೇ ಖಚಿತಪಡಿಸಿದ್ದು, ಇಂದು ಕೊರೊನಾ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ. ಚಿಕಿತ್ಸೆ ಕಾರಣ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ, ಕ್ಷಮೆ ಇರಲಿ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಚಿಕಿತ್ಸೆಗೆ ಒಳಪಡಬೇಕೆಂದು ವಿನಂತಿಸುತ್ತೇನೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

    ಉಪಚುನಾವಣೆ ಹಿನ್ನೆಲೆ ಶುಕ್ರವಾರವಷ್ಟೆ ಶಿರಾ ಕ್ಷೇತ್ರಕ್ಕೆ ತೆರಳಿದ್ದ ರವಿ ಕುಮಾರ್, ವಿವಿಧೆಡೆ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಸಭೆಯೊಂದರಲ್ಲಿ ಒಬ್ಬರಿಗೊಬ್ಬರ ಕೈ ಹಿಡಿದು ನಿಲ್ಲುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದರು. ಆದರೆ ಇಂದು ಅವರಿಗೆ ಕೊರೊನಾ ಸೋಂಕು ದೃಢವಾಗಿದೆ.

  • ಇನ್ನೆರಡು ದಿನಗಳಲ್ಲಿ ಜಮೀರ್ ಅರೆಸ್ಟ್ ಆಗ್ತಾರೆ: ರವಿ ಕುಮಾರ್

    ಇನ್ನೆರಡು ದಿನಗಳಲ್ಲಿ ಜಮೀರ್ ಅರೆಸ್ಟ್ ಆಗ್ತಾರೆ: ರವಿ ಕುಮಾರ್

    ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಇಬ್ಬರು ನಟಿಯರು ಅರೆಸ್ಟ್ ಆದ ಬಳಿಕ ಕೇಸ್‍ನಲ್ಲಿ ರಾಜಕೀಯ ನಂಟಿನ ಕುರಿತ ಚರ್ಚೆ ಜೋರಾಗಿದೆ. ಶಾಸಕ ಜಮೀರ್ ಅಹ್ಮದ್ ಅವರ ಹೆಸರನ್ನು ಪ್ರಕರಣದಲ್ಲಿ ಬಿಜೆಪಿ ಎಳೆದು ತಂದಿದೆ. ಇದರ ಬೆನ್ನಲ್ಲೇ ಇನ್ನೆರಡು ದಿನಗಳಲ್ಲಿ ಜಮೀರ್ ಬಂಧನವಾಗುತ್ತದೆ ಎಂದು ಬಿಜೆಪಿ ವಕ್ತಾರ ರವಿ ಕುಮಾರ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ರವಿ ಕುಮಾರ್ ಅವರು, ಇನ್ನು ಕೆಲ ದಿನಗಳಲ್ಲಿ ಶಾಸಕ ಜಮೀರ್ ಅವರನ್ನು ಪ್ರಕರಣದಲ್ಲಿ ಬಂಧನ ಮಾಡುವ ಸಮಯ ಬರುತ್ತದೆ. ಜವಾಬ್ದಾರಿಯುತ ಸರ್ಕಾರ ಆಗಿರುವುದರಿಂದ ಅರೆಸ್ಟ್ ಮಾಡಲು ಬೇಕಾದ ಸೂಕ್ತ ಆಧಾರಗಳನ್ನು ಇಟ್ಟುಕೊಂಡು ಬಂಧನ ಮಾಡಬೇಕಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಸಂಜನಾ, ಜಮೀರ್ ಸಹಾಯ ಕೇಳಿದ್ದೇಕೆ?- ಡ್ರಗ್ಸ್ ಪ್ರಕರಣದಲ್ಲಿ ರಾಹುಲ್‍ಗೆ ಬಿಜೆಪಿ ಟಾಂಗ್

    ಪ್ರಶಾಂತ್ ಸಂಬರಗಿ ಅವರು ನೀಡಿದ ಹೇಳಿಕೆಯಂತೆ ಸಚಿವ ಸಿಟಿ ರವಿ ಅವರು ಕೂಡ ಹವಾಲಾ ಹಣದ ಕುರಿತು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ನಾಯಕರು ಜಮೀರ್ ಅವರ ಹೆಸರನ್ನು ಇಂದು ಎಳೆದು ತಂದಿದ್ದರು. ಡ್ರಗ್ಸ್ ವಿರುದ್ಧ ಈ ಬಾರಿ ಮಾತ್ರವಲ್ಲ, ಹಿಂದಿನ ಸರ್ಕಾರ ಇದ್ದಾಗಲೂ ಕೂಗು ಕೇಳಿ ಬರುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಮಾತ್ರ ಈ ಬಗ್ಗೆ ಕಠಿಣವಾದ ನಿರ್ಧಾರ ತೆಗೆದುಕೊಂಡು ಮಾಫಿಯಾ ಮಟ್ಟಹಾಕಲು ಮುಂದಾಗಿದೆ ಎಂದು ಕಟೀಲ್ ಹೇಳಿದ್ದಾರೆ. ಇದನ್ನೂ ಓದಿ: ಜಮೀರ್‌ನನ್ನು ಯಾಕೆ ಬಂಧಿಸಿಲ್ಲ- ಸರ್ಕಾರಕ್ಕೆ ಪ್ರತಾಪ್ ಸಿಂಹ ಪ್ರಶ್ನೆ

    ಇತ್ತ ಜಮೀರ್ ಅವರ ಪಾತ್ರದ ಕುರಿತು ಟ್ವೀಟ್ ಮಾಡಿರುವ ಸಚಿವ ಸಿಟಿ ರವಿ ಅವರು, ಶ್ರೀಲಂಕಾದಲ್ಲಿ ನಡೆದ ಪಾರ್ಟಿಯಲ್ಲಿ ಜಮೀರ್ ಉಪಸ್ಥಿತರಿದ್ದರು, ಇದರಲ್ಲಿ ಬಂಧನಕ್ಕೊಳಗಾಗಿರುವ ನಟಿ ಇದ್ದರು ಎಂಬುದು ನಿಜವಲ್ಲವೇ? ಬಂಧಿತ ಇನ್ನೊಬ್ಬ ನಟಿ ಸಹಾಯಕ್ಕಾಗಿ ಯಾಕೆ ಮನವಿ ಮಾಡಿದರು? ಅವನ ಮತ್ತು ಡ್ರಗ್ ಮಾಫಿಯಾ ನಡುವಿನ ಸಂಬಂಧ ಏನು ಎಂದು ಪ್ರಶ್ನಿಸಿದ್ದಾರೆ. ನಟಿ ಸಂಜನಾ ಬಂಧನ ಮುನ್ನ ಜಮೀರ್ ಅವರ ಸಹಾಯ ಕೋರಿದನ್ನೇ ಆಸ್ತ್ರವನ್ನಾಗಿ ಮಾಡಿಕೊಂಡಿರುವ ಬಿಜೆಪಿ, ಪ್ರಕರಣದಲ್ಲಿ ಜಮೀರ್ ಅವರಿಗೆ ನೋಟಿಸ್ ನೋಡಿ ವಿಚಾರಣೆಗೆ ಕರೆತರಲು ಆಗ್ರಹಿಸಿದ್ದಾರೆ. ಬಿಜೆಪಿ ನಾಯಕರ ಹೇಳಿಕೆಗಳಿಗೆ ಪಕ್ಷದ ರಾಜ್ಯ ಘಟಕವೂ ಬೆಂಬಲ ನೀಡಿ ಸರಣಿ ಟ್ವೀಟ್ ಮಾಡಿದೆ. ಇದನ್ನೂ ಓದಿ: ‘ಗಂಡ-ಹೆಂಡತಿ’ ನಟಿ ಮದುವೆ ಸೀಕ್ರೆಟ್- ಮ್ಯಾರೇಜ್ ಆಗಿಲ್ಲ ಅಂತ ಸುಳ್ಳು ಹೇಳಿದ್ರಾ ಸಂಜನಾ?   

  • ನೆಹರು ಕಾಲದಿಂದ ದೇಶದಲ್ಲಿ ಭ್ರಷ್ಟಾಚಾರ ಆರಂಭ: ರವಿಕುಮಾರ್

    ನೆಹರು ಕಾಲದಿಂದ ದೇಶದಲ್ಲಿ ಭ್ರಷ್ಟಾಚಾರ ಆರಂಭ: ರವಿಕುಮಾರ್

    ಬೆಂಗಳೂರು: ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರಿಂದಲೇ ಭಾರತದಲ್ಲಿ ಭ್ರಷ್ಟಾಚಾರ ಆರಂಭವಾಗಿದ್ದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಹೇಳಿದ್ದಾರೆ.

    ನಗರದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ವಿಜಯ ಲಕ್ಷ್ಯ- 2019 ಕಾರ್ಯಾಗಾರದಲ್ಲಿ ಮಾತನಾಡಿದ ರವಿ ಕುಮಾರ್, ಭ್ರಷ್ಟ ಇತಿಹಾಸ ಕಾಂಗ್ರೆಸ್‍ನಲ್ಲಿ ತುಂಬಿ ತುಳುಕುತ್ತಿದೆ. ಮಾಜಿ ಪ್ರಧಾನಿ ಜವಾಹರಲಾರ್ ನೆಹರು ಅವರ ಕಾಲದಿಂದ ಆರಂಭವಾದ ಭ್ರಷ್ಟಾಚಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಂದಲೂ ಮುಂದುವರಿಯುತ್ತಿದೆ ಎಂದು ಆರೋಪಿಸಿದರು.

    ದೇಶದ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನವೂ ರಜೆ ಹಾಕದೇ ಕೆಲಸ ಮಾಡುತ್ತಿದ್ದಾರೆ. ಇತ್ತ ರಾಹುಲ್ ಗಾಂಧಿ ಅವರು ಒಂದು ದಿನ ಪ್ರವಾಸ ಮಾಡಿದರೆ ಎರಡು ದಿನ ವಿದೇಶಕ್ಕೆ ಹೋಗಿ ವಿಶ್ರಾಂತಿ ಪಡೆಯುತ್ತಾರೆ. ಪಾರ್ಲಿಮೆಂಟ್‍ನಲ್ಲಿ ರಾಹುಲ್ ಗಾಂಧಿ ಕಣ್ಣು ಹೊಡೆಯುತ್ತಾರೆ. ಆದರೆ ಅವರು ಯಾರಿಗೆ ಕಣ್ಣು ಹೊಡೆಯುತ್ತಾರೆ ಅಂತ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.

    ವಿಧಾನಸೌಧದಲ್ಲಿ ಸಿಕ್ಕಿದ್ದ 25 ಲಕ್ಷ ರೂ. ಲಂಚದ ಹಣ ಪುಟ್ಗೋಸಿ ಎಂದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ನಾಚಿಕೆ ಇಲ್ಲ. 25 ಲಕ್ಷ ಸಿಕ್ಕಿರೋದಕ್ಕೆ ಪುಟ್ಗೋಸಿ ಅಂತ ಹೇಳುತ್ತೀರಲ್ಲ ಅದು ಭ್ರಷ್ಟಚಾರದ ಹಣ ಅಲ್ವಾ? ಭ್ರಷ್ಟಚಾರಿಗಳನ್ನು ಬಚಾವು ಮಾಡೋಕೆ ದಿನೇಶ್ ಗುಂಡೂರಾವ್ ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಮುಂಬರುವ ಲೋಕಸಭಾ ಚುನಾವಣೆ ಸಿದ್ಧತೆಗೆ ಮುಂದಾಗಿರುವ ರಾಜ್ಯ ಬಿಜೆಪಿಯು, ಯುವ ಮತದಾರರನ್ನು ಸೆಳೆಯಲು ವಿಜಯ ಲಕ್ಷ್ಯ ಕಾರ್ಯಾಗಾರ ಹಮ್ಮಿಕೊಂಡಿದೆ. ಈ ಯೋಜನೆ ಅಡಿ ಕೆಲಸ ಮಾಡುತ್ತಿರುವ ಯುವ ಮೋರ್ಚಾ ಕಾರ್ಯಕರ್ತರಿಗೆ ಇಂದು ಕಾರ್ಯಾಗಾರ ನಡೆಸಲಾಯಿತು. ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ, ರಾಷ್ಟ್ರೀಯ ಯುವ ಮೋರ್ಚಾ ಉಪಾಧ್ಯಕ್ಷ ಮಧುಕೇಶ್ವರ್ ದೇಸಾಯಿ ಭಾಗವಹಿಸಿದ್ದರು. ಆದರೆ ಕಾರ್ಯಾಗಾರದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ, ಸಂಸದ ಪ್ರತಾಪ್ ಸಿಂಹ ಅವರ ಗೈರು ಎದ್ದು ಕಾಣಿಸುತ್ತಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv