ರವಿ ಬಸ್ರೂರು (Ravi Basrur) ನಿರ್ದೇಶನದ ಕಟಕ (Kataka 2) ಸಿನಿಮಾ ವಿಭಿನ್ನ ಕಥೆ ಹಾಗೂ ವಿಭಿನ್ನ ಜಾನರ್‌ನಿಂದ ಗಮನ ಸೆಳೆದಿತ್ತು. ಅಶೋಕ್ ರಾಜ್, ಸ್ಪಂದನ ಪ್ರಸಾದ್ ಹಾಗೂ ಶಾಲಗಾ ಸಾಲಿಗ್ರಾಮ ಈ ಚಿತ್ರದ ಮುಖ್ಯಪಾತ್ರದಲ್ಲಿ ನಟಿಸಿದ್ದರು. ರವಿ ಬಸ್ರೂರು ಈ ಸಿನಿಮಾಗೆ ನಿರ್ದೇಶನ ಮಾಡುವುದರ ಜೊತೆಗೆ ಸಂಗೀತ ನಿರ್ದೇಶನವನ್ನ ಕೂಡಾ ನಿಭಾಯಿಸಿದ್ದರು.
ಅಂದಹಾಗೆ ಕಟಕ ನೈಜ ಘಟನೆಯಾಧಾರಿತ ಸಿನಿಮಾವಾಗಿದ್ದು, ಸಿಂಪಲ್ ಆಗಿ ಒಂದು ಹಳ್ಳಿಯಲ್ಲಿ ನಡೆಯುವ ಕಥೆಯಲ್ಲಿ ಹಾರರ್ ಹಾಗೂ ಸಸ್ಪೆನ್ಸ್ ಅಂಶಗಳೇ ಹೈಲೈಟ್ ಆಗಿದ್ದವು. ಇದೀಗ ಕಟಕ ಚಿತ್ರದ ಭಾಗ-2 ಬರುವ ಬಗ್ಗೆ ಸುಳಿವು ನೀಡಿದೆ ಚಿತ್ರತಂಡ. ಈ ಸಿನಿಮಾ ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡಿದೆ ಕಟಕ-2 ಚಿತ್ರತಂಡ. ಇದನ್ನೂ ಓದಿ: ತಮಿಳಿನ ಜನಪ್ರಿಯ ಹಾಸ್ಯನಟ ಮಧನ್ ಬಾಬ್ ನಿಧನ
ಕಟಕ ಸಿನಿಮಾದ ಮೊದಲ ಭಾಗಕ್ಕೆ ಬಂಡವಾಳ ಹೂಡಿ ನಿರ್ಮಾಣ ಮಾಡಿದ್ದರು ಎನ್‌ಎಸ್ ರಾಜ್‌ಕುಮಾರ್. ಕಟಕ-2 ಸಿನಿಮಾದ ಇಂಗ್ಲಿಷ್ ವರ್ಷನ್ ಟೈಟಲ್ ಟ್ರಾö್ಯಕ್ ಬಿಡುಗಡೆಯಾಗಿದ್ದು, ರವಿ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಸಂತೋಷ್ ವೆಂಕಿ, ಐರಾ ಉಡುಪಿ ಹಾಗೂ ರೋಹಿತ್ ಸಿದ್ದಪ್ಪ ಈ ಟ್ರ್ಯಾಕ್‌ಗೆ ಧ್ವನಿಯಾಗಿದ್ದಾರೆ. ಈ ಟೈಟಲ್ ಟ್ರ್ಯಾಕ್ ಮೂಲಕ ಕಟಕ-2 ಚಿತ್ರದ ಬಗ್ಗೆ ಹಿಂಟ್ ಕೊಟ್ಟಿದೆ ಚಿತ್ರತಂಡ. ವೀರ ಚಂದ್ರಹಾಸ ಸಿನಿಮಾದ ನಂತರ ಇದೀಗ ತೆರೆಮರೆಯಲ್ಲಿ ಕಟಕ-2 ಭರ್ಜರಿ ಸಿದ್ಧತೆಗಳು ನಡೆದಿವೆ.
ಮಂಗಳೂರು: ಪ್ರಪಂಚದ ಚಿತ್ರರಂಗದ ಇತಿಹಾಸದಲ್ಲಿ ಪ್ರಥಮ ಬಾರಿಗೆ, ಕರಾವಳಿ ಕರ್ನಾಟಕದ ಸಮೃದ್ಧ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾದ ಯಕ್ಷಗಾನವನ್ನು ‘ವೀರ ಚಂದ್ರಹಾಸ’ (Veera Chandrahasa) ಚಿತ್ರದ ಮೂಲಕ ಬೆಳ್ಳಿಪರದೆಗೆ ತರಲಾಗಿದೆ. ಏ.18 ರಂದು ಇದನ್ನು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೀಗ ಕರವಾಳಿಯಲ್ಲಿ ಬಿಡುಗಡೆಗೊಳಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಬೇರೆ ಕಡೆಗಳಲ್ಲೂ ಹಂತಹಂತವಾಗಿ ಬಿಡುಗಡೆಗೊಳಿಸಲಾಗುವುದು ಎಂದು ಖ್ಯಾತ ಸಂಗೀತ, ಚಲನಚಿತ್ರ ನಿರ್ದೇಶಕ ರವಿ ಬಸ್ರೂರು (Ravi Basrur) ಹೇಳಿದರು.
ಮಂಗಳೂರಿನ (Mangaluru) ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ನನ್ನ ಅಜ್ಜ ಯಕ್ಷಗಾನ ಕಲಾವಿದರಾಗಿದ್ದು, ಒಮ್ಮೆಲೆ ಐದು ವಾದ್ಯಗಳನ್ನು ನುಡಿಸಬಲ್ಲ ಸಾಮರ್ಥ್ಯದವರು. ನನ್ನ ತಂದೆ ಸೇರಿ ಇಡೀ ಕುಟುಂಬದಲ್ಲಿ ಎಲ್ಲರೂ ಯಕ್ಷಗಾನ ಕಲಾವಿದರಾಗಿದ್ದಾರೆ. ಯಕ್ಷಗಾನವನ್ನು ಎಲ್ಲೋ ಮಿಸ್ ಮಾಡುತ್ತಿದ್ದೇನೆ ಎಂದೆನಿಸಿತು. ಸುಮಾರು ಹನ್ನೆರಡು ವರ್ಷಗಳ ಮುಂಚೆ ಪ್ರಯತ್ನಿಸಿದ್ದೆ. ಆದರೆ, ಆಗ ನನ್ನ ಕಿಸೆಯಲ್ಲಿ ದುಡ್ಡಿರಲಿಲ್ಲ, ಅನುಭವವೂ ಇರಲಿಲ್ಲ. ಆದರೆ ಈ ವರ್ಷ ಅದಕ್ಕೆ ಕಾಲ ಕೂಡಿ ಬಂದಿತು ಎಂದರು. ಇದನ್ನೂ ಓದಿ: ಉಗ್ರರ ದಾಳಿ ಸ್ಥಳದಲ್ಲೇ ಮಾರ್ಟಿನ್ ಸಿನಿಮಾ ಶೂಟಿಂಗ್ ನಡೆದಿತ್ತು, ಆಗ ಸೆಕ್ಯೂರಿಟಿ ಚೆನ್ನಾಗಿತ್ತು: ಧ್ರುವ ಸರ್ಜಾ
ಎಲ್ಲರೂ ಇದನ್ನು ಸಿನಿಮಾ ಆಂಗಲ್‌ನಲ್ಲಿ ನೋಡುತ್ತಿದ್ದರು. ಆದರೆ ಇದು ಬರೇ ಸಿನಿಮಾ ಅಲ್ಲ, ಇದು ತುಳುನಾಡಿನ ಕಲೆ. ಆದ್ದರಿಂದ ಇದನ್ನು ಅದೇ ಶೈಲಿಯಲ್ಲಿ ನೋಡಿದರೆ, ವೀಕ್ಷಕನ ದೃಷ್ಟಿಕೋನ ಬದಲಾಗುತ್ತೆ. ಅದ್ಭುತ ಜ್ಞಾನ ಭಂಡಾರವನ್ನೇ ಹೊಂದಿರುವ ಯಕ್ಷಗಾನವನ್ನು ಯಾಕೆ ಇಷ್ಟಕ್ಕೇ ಸೀಮಿತವಾಗಿಟ್ಟುಕೊಳ್ಳಬೇಕು? ಇದನ್ನು ಪ್ರಪಂಚದ ಮುಂದೆ ತರಬೇಕು ಎನ್ನುವ ನಿಟ್ಟಿನಲ್ಲಿ ಈ ಚಿತ್ರ ರೂಪಿಸಲಾಗಿದೆ. ಬಾಹುಬಲಿಯನ್ನು ಮೀರಿಸುವ ಎಲ್ಲಾ ಲಕ್ಷಣವನ್ನು ಈ ಚಿತ್ರ ಹೊಂದಿದೆ. ಇಲ್ಲಿ ಯಕ್ಷಗಾನ ಮಾತ್ರವಲ್ಲ ಕಲಾವಿದರ ಬದುಕೂ ಕೂಡಾ ಅನಾವರಣಗೊಂಡಿದೆ. 1,500 ಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಯಕ್ಷಗಾನ ಕಲೆಯನ್ನು ವಿಜೃಂಭಣೆಯಿಂದ ವಿಶ್ವದ ಮುಂದೆ ಮೆರೆಸುವ ಒಂದು ಪ್ರಯತ್ನ. ಇದು ಕೇವಲ ಮನೋರಂಜನೆ ಉದ್ದೇಶವಷ್ಟೇ ಅಲ್ಲದೆ, ಭವಿಷ್ಯದ ಅನೇಕ ಚಿತ್ರಗಳಿಗೆ ದಾರಿ ತೋರುವ, ಪರಂಪರೆ ಉಳಿಸುವ, ಭವಿಷ್ಯದ ಪೀಳಿಗೆಗೆ ನಮ್ಮ ಕಲೆಯನ್ನು ಪರಿಚಯಿಸುವ ಒಂದು ಹೊಸ ಆರಂಭ. ಇದರಲ್ಲಿ ಹೆಚ್ಚಾಗಿ ಯಕ್ಷ ಕಲಾವಿದರೇ ಅಭಿನಯಿಸಿದ್ದಾರೆ ಎಂದರು ರವಿ ಬಸ್ರೂರು.
ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ, ಯಕ್ಷಗಾನ ಕಲಾವಿದರನ್ನೇ ಬಳಸಿ, ಯಕ್ಷಗಾನೀಯವಾಗಿ ಚಲನಚಿತ್ರವನ್ನು ಹೇಗೆ ಮಾಡಬಹುದು ಎನ್ನುವುದನ್ನು ಬಸ್ರೂರು ತೋರಿಸಿಕೊಟ್ಟಿದ್ದಾರೆ. ಕಾಂತಾರ ಚಲನಚಿತ್ರ ಬಂದ ಮೇಲೆ ದೈವಾರಾಧನೆಗೆ ವಿಶ್ವಮಟ್ಟದ ಮನ್ನಣೆ ಸಿಕ್ಕಿತು. ಅದೇ ರೀತಿ ಈ ಚಿತ್ರದಲ್ಲಿ ಯಕ್ಷಗಾನ ಕಲೆ ಹಾಗೂ ಕಲಾವಿದರಿಗೆ ಮನ್ನಣೆ ಸಿಕ್ಕಿದೆ. ಈ ಚಿತ್ರದಲ್ಲಿ ನಾನೂ ಒಂದು ಹಾಡನ್ನು ಯಕ್ಷಗಾನ ಶೈಲಿಯಲ್ಲೇ ಹಾಡಿದ್ದು ವಿಶೇಷ. ಈ ಚಿತ್ರದಲ್ಲಿ ಯಕ್ಷಗಾನಕ್ಕೆ ಎಲ್ಲಿಯೂ ಲೋಪ, ಅಪಚಾರ ಆಗದ ಹಾಗೆ ನೋಡಲಾಗಿದೆ. ಮುಂದಿನ ಜನಾಂಗಕ್ಕೆ ಮಾತ್ರವಲ್ಲ ಯಕ್ಷಗಾನದ ಮೇಲೆ ಆಸಕ್ತಿ ಇಲ್ಲದವನೂ ಕೂಡ ಆಸಕ್ತಿ ಬೆಳೆಸುವಂತೆ ಈ ಚಿತ್ರದಲ್ಲಿ ತೋರಿಸಲಾಗಿದೆ. ಸಿನಿಮಾದ ಮೂಲಕ ಯಕ್ಷಗಾನದ ಕಂಪನ್ನು ವಿಶ್ವದೆಲ್ಲೆಡೆ ರವಿ ಬಸ್ರೂರು ಪಸರಿಸಿದ್ದಾರೆ ಎಂದರು. ಇದನ್ನೂ ಓದಿ: ಗೋಲ್ಡ್ ಸ್ಮಗ್ಲಿಂಗ್ ಕೇಸ್ – ರನ್ಯಾರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಖ್ಯಾತ ಯಕ್ಷಗಾನ ಭಾಗವತ ರಾಘವೇಂದ್ರ ಝನ್ಸಾಲೆ ಮಾತನಾಡಿ, ಆರೇಳು ಗಂಟೆ ಇರುವ ಯಕ್ಷಗಾನವನ್ನು ಎರಡೂವರೆ ಗಂಟೆಗೆ ಸೀಮಿತಗೊಳಿಸಲಾಗಿದೆ. ಆದರೆ ಚಿತ್ರದಲ್ಲಿ ಯಕ್ಷಗಾನಕ್ಕೆ ಎಲ್ಲೂ ಲೋಪವಾಗಿಲ್ಲ. ಅವರ ಚಿತ್ರದ ಉದ್ದೇಶ ಉತ್ತಮವಾಗಿದ್ದು, ನಾವದಕ್ಕೆ ಪ್ರೋತ್ಸಾಹಿಸೋಣ ಎಂದರು.
ರವಿ ಬಸ್ರೂರು ತಂಡದ ಪರಿಶ್ರಮದಲ್ಲಿ ಮೂಡಿಬಂದ ಈ ಚಲನಚಿತ್ರವನ್ನು ಎನ್.ಎಸ್. ರಾಜಕುಮಾರ್ ನಿರ್ಮಿಸಿದ್ದಾರೆ. ಗೀತಾ ರವಿ ಬಸ್ರೂರು, ಅನೂಪ್ ಗೌಡ, ಅನುಲ್ ಕುಮಾರ್ ಪೂವ್ವಾಡಿ ಸಹ ನಿರ್ಮಾಪಕರಾಗಿ, ರವಿ ಬಸ್ರೂರು ಸಂಗೀತ, ಕಿರಣ್ ಕುಮಾರ್ ಆರ್ ಛಾಯಾಗ್ರಹಣ ಮಾಡಿದ್ದಾರೆ. ಸ್ಯಾಂಡಲ್‌ವುಡ್ ನಟ ಡಾ. ಶಿವರಾಜ್ ಕುಮಾರ್ ಕೂಡಾ ಬಣ್ಣ ಹಚ್ಚಿದ್ದು ಸುಮಾರು 900 ಕಲಾವಿದರಿದ್ದಾರೆ. ಖ್ಯಾತ ಭಾಗವತರುಗಳಾದ ಪಟ್ಲ ಸತೀಶ್ ಶೆಟ್ಟಿ ಮತ್ತು ರಾಘವೇಂದ್ರ ಝನ್ಸಾಲೆ ಈ ಸಿನಿಮಾದಲ್ಲಿ ಹಾಡಿದ್ದಾರೆ.
ಹೊಸಬರ ‘ಸಿಂಹರೂಪಿಣಿ’ (Simharoopini) ಚಿತ್ರದ ಟೀಸರ್ ಬಿಡುಗಡೆ ಮಾಡಿ ‘ಕೆಜಿಎಫ್ 2’ (KGF 2) ಸಂಗೀತ ನಿರ್ದೇಶಕ ರವಿ ಬಸ್ರೂರು (Ravi Basrur) ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ. ಸದ್ಯ ಸಿನಿಮಾದ ಟೀಸರ್‌ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ:ರಶ್ಮಿಕಾ ಮಂದಣ್ಣಗೆ ಸ್ವೀಟ್ ಹಾರ್ಟ್ ಎಂದ ವಿಕ್ಕಿ ಕೌಶಲ್
ಕಲಾವಿದರ ಭವನದಲ್ಲಿ ಸಿಂಹರೂಪಿಣಿ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನೆರವೇರಿದೆ. ಟೀಸರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ರವಿ ಬಸ್ರೂರು ಬೆಂಬಲಿಸಿದ್ದಾರೆ. ಈ ಚಿತ್ರಕ್ಕೆ ಕಿನ್ನಾಳ್ ರಾಜ್ ಚಿತ್ರಕಥೆ, ಸಂಭಾಷಣೆ, ಸಾಹಿತ್ಯದ ಜೊತೆ ನಿರ್ದೇಶನ ಕೂಡ ಮಾಡಿದ್ದಾರೆ. ದೊಡ್ಡಬಳ್ಳಾಪುರ ಕೆ.ಎಂ ನಂಜುಂಡೇಶ್ವರ ಕಥೆ ಬರೆದು ಶ್ರೀ ಚಕ್ರ ಫಿಲಿಂಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಆಕಾಶ್ ಪರ್ವ ಸಂಗೀತ, ಕಿರಣ್ ಕುಮಾರ್ ಛಾಯಾಗ್ರಹಣ, ವೆಂಕಿ ಸಂಕಲನ, ಕಿಶೋರ್ ಕಲರಿಸ್ಟ್, ಸಾಹಸ ನಿರ್ದೇಶನ ಥ್ರಿಲ್ಲರ್ ಮಂಜು, ಚಂದ್ರು, ಬಂಡೆ ಮಂಜುನಾಗಪ್ಪ, ಸೌಂಡ್ ಎಫೆಕ್ಟ್ ನಂದು.ಜೆ ಇವರುಗಳ ಶ್ರಮದಿಂದ ಸಿದ್ಧಗೊಂಡಿರುವ 1.45 ನಿಮಿಷದ ತುಣುಕುಗಳು ದೊಡ್ಡ ಪರದೆ ಮೇಲೆ ಅನಾವರಣ ಮಾಡಲಾಯಿತು.
ಪ್ಯಾನ್ ಇಂಡಿಯಾ ಸಂಗೀತ ಸಂಯೋಜಕ ರವಿ ಬಸ್ರೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿ, ನಿರ್ದೇಶಕರು, ನಿರ್ಮಾಪಕರ ದೇವಿಯ ಮೇಲಿನ ಭಕ್ತಿ, ತಂತ್ರಜ್ಞರ ಕೆಲಸಗಳು ಚೆನ್ನಾಗಿ ಮೂಡಿ ಬಂದಿದೆ. ದೃಶ್ಯಗಳನ್ನು ನೋಡಿ ನನಗೆ ಆದಂತ ಕಂಪನ ಎಲ್ಲರಿಗೂ ಆಗಿದೆ ಅಂತ ಭಾವಿಸುತ್ತೇನೆ. ನನ್ನ ಮತ್ತು ನಿರ್ದೇಶಕರಾದ ಕಿನ್ನಾಳ್ ರಾಜ್ ಪಯಣ ಸುಮಾರು 15 ವರ್ಷದಷ್ಟು ಹಳೆಯದು. ಇವರ ನಿರ್ದೇಶನದಲ್ಲಿ ನಾನು ಸಂಗೀತ ಕಂಪೋಸ್ ಮಾಡಬೇಕೆಂದು ಆ ಸಮಯದಲ್ಲಿ ಮಾತಾಡಿಕೊಂಡಿದ್ದೇವು. ಅಲ್ಲಿಂದ ಒಂದಷ್ಟು ಸಿನಿಮಾಗಳಲ್ಲಿ ನಾವಿಬ್ಬರು ಸೇರಿದ್ದೇವು. ಉದ್ಯಮದ ಬೆಳವಣಿಗೆಗೆ ಇಂತಹ ಪ್ರತಿಭೆಗಳ ಪಾತ್ರ ತುಂಬ ಅಗತ್ಯವಿದೆ ಎಂದರು.
‘ಕಾಟೇರ’ ಖ್ಯಾತಿಯ ಜಡೇಶ್ ಕುಮಾರ್ ಪೋಸ್ಟರ್ ಬಿಡುಗಡೆ ಮಾಡಿದ ನಂತರ ಮಾತನಾಡಿ, ನಿರ್ದೇಶಕರು ನಮ್ಮ ಊರಿನ ಪಕ್ಕದವರು. ಪ್ರಾರಂಭದಿಂದಲೂ ಅವರ ಶ್ರಮವನ್ನು ನೋಡುತ್ತಾ ಬಂದಿದ್ದೇನೆ. ಈ ಚಿತ್ರದಲ್ಲಿ ನಮ್ಮ ಊರಿನ, ಭಾಗದ ಸಂಸ್ಕೃತಿಯನ್ನು ತೋರಿಸಲಾಗಿದೆ. ಅಂತಹ ಪ್ರಯತ್ನಗಳು ನಡೆದಾಗಲೇ ಮಾಹಿತಿಗಳು ಎಲ್ಲರಿಗೂ ತಿಳಿಯುತ್ತದೆ. ಮ್ಯೂಸಿಕ್ ಚೆನ್ನಾಗಿದೆ. ‘ಕಾಟೇರ’ ಕೋಣ ಇಲ್ಲಿಗೆ ಯಾಕೆ ಬಂತು ಅಂತ ಕೇಳಿದೆ. ಸಿನಿಮಾ ನೋಡಿ ಅಂತಾರೆ. ನಿಮ್ಮಗಳ ಪ್ರಯತ್ನಕ್ಕೆ ಶುಭವಾಗಲಿ ಎಂದು ಹಾರೈಸಿದರು.
ಸಿನಿಮಾದ ಕುರಿತು ಡೈರೆಕ್ಟರ್ ಕಿನ್ನಾಳ್ ರಾಜ್ ಮಾತನಾಡಿ, ಜೀವನದಲ್ಲಿ ನನ್ನ ಹೆಸರು ಟೈಟಲ್ ಕಾರ್ಡ್ದಲ್ಲಿ ಕಾಣಿಸಬೇಕೆಂದು ಆಸೆಪಟ್ಟವನು. ರವಿಬಸ್ರೂರು ‘ಅಂಜನಿಪುತ್ರ’ ಸಿನಿಮಾಗೆ ಹಾಡು ಬರೆಯಲು ಅವಕಾಶ ಮಾಡಿಕೊಟ್ಟರು. ನಂತರ ‘ಕೆಜಿಎಫ್’ನಿಂದ ಎಲ್ಲರೂ ಗುರುತು ಹಿಡಿಯುವಂತಾಯಿತು. ಈಗ ತಾಯಿ ಚಿತ್ರ ಮಾಡುತ್ತಿದ್ದೇನೆ. ಶೀರ್ಷಿಕೆ ಹೇಳುವಂತೆ ಶ್ರೀ ಮಾರಮ್ಮ ದೇವಿ ಕುರಿತಾಗಿದ್ದು, ಗ್ರಾಫಿಕ್ಸ್ ತಂತ್ರಜ್ಞಾನ ಇರುವುದು ವಿಶೇಷ. ಸಪ್ತ ಮಾತ್ರ‍್ರಿಕೆಯರ ವಿಷಯಗಳನ್ನು ಹೊಂದಿದ್ದು, ರಾಕ್ಷಸನನ್ನು ಸಂಹಾರ ಮಾಡಲು ಪಾರ್ವತಿದೇವಿ ಏಳು ಅವತಾರಗಳಲ್ಲಿ ಭೂಮಿಗೆ ಬರುತ್ತಾಳೆ. ಅದರಲ್ಲಿ ಕೊನೆಯದು ಶ್ರೀ ಮಾರಮ್ಮ ದೇವಿಯದು ಆಗಿರುತ್ತದೆ. ತಾಯಿಯ ಮಹಿಮೆ,ಪವಾಡಗಳು, ಈಗಿನ ಟ್ರೆಂಡ್‌ಗೆ ತಕ್ಕಂತೆ ಕಮರ್ಷಿಯಲ್ ಅಂಶಗಳನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ. ನಿರ್ಮಾಪಕರ ಹುಟ್ಟಿದ ಹಬ್ಬ, ಗುರುಪೂರ್ಣೀಮೆ ಶುಭದಿನವಾಗಿದ್ದರಿಂದ ಕಾರ್ಯಕ್ರಮ ಏರ್ಪಾಟು ಮಾಡಲಾಗಿದೆ. ಚಿತ್ರದಲ್ಲಿ 132 ಕಲಾವಿದರು ಅಭಿನಯಿಸಿದ್ದಾರೆ. ನಿರ್ಮಾಪಕರ ಕಥೆಗೆ ಚಿತ್ರರೂಪ ಕೊಟ್ಟಿದ್ದೇನೆ. ಹಾಡು ಬರೆಯಲು ಹೋದವನು, ಅಂತಿಮವಾಗಿ ನಿರ್ದೇಶನ ಮಾಡಲು ಹೇಳಿದ್ದೆ, ಇಲ್ಲಿಯ ತನಕ ತಂದು ನಿಲ್ಲಿಸಿದೆ. ಗ್ರಾಫಿಕ್ಸ್ 15 ನಿಮಿಷದ ಕಾಲ ಬರುತ್ತದೆ. ಸದ್ಯ ಸಿಜಿ ನಡೆಯುತ್ತಿದ್ದು, ಕೋಣ ಯಾಕೆ ಇದೆ ಎಂಬುದು ಸಿನಿಮಾ ನೋಡಿದರೆ ತಿಳಿಯುತ್ತದೆಂದು ಕುತೂಹಲ ಕಾಯ್ದಿರಿಸಿದರು.
ನಿರ್ಮಾಪಕ ಕೆ.ಎಂ.ನಂಜುಡೇಶ್ವರ ಹೇಳುವಂತೆ ಪ್ರತಿಯೊಬ್ಬರ ಜೀವನದಲ್ಲಿ ಒಂದೊಂದು ಅನುಭವ ಆಗಿರುತ್ತದೆ. ತಾಯಿ ವಿರಾಜಮಾನವಾಗಿ ಕೂತಿದ್ದಾಳೆ. ನೀವುಗಳು ದರ್ಶನ ಮಾಡಿದ್ದೀರಾ. ನಿಮ್ಮ ಸಮಸ್ಯೆಗಳು ನಿವಾರಣೆಯಾಗುತ್ತದೆ. ತಾಯಿಯ ಅನುಭವವನ್ನು ಫೀಲ್ ಮಾಡಿ. ತ್ರಿಮೂರ್ತಿ, ತ್ರಿಶಕ್ತಿ , ಸರ್ವಶಕ್ತಿ ಸ್ವರೂಪಿಣಿ ಗ್ರಾಮ ದೇವತೆ ಮಾರಮ್ಮ. ಮೂರು ದೇವತೆಗಳು, ತ್ರಿಮೂರ್ತಿಗಳು. ಎಲ್ಲಾ ದೇವರುಗಳಿಗೆ ಮೂಲ ದೇವರು ಗ್ರಾಮ ದೇವತೆ. ನಿಮ್ಮೂರಿನ ದೇವತೆಯ ಪೂಜೆ ಮಾಡಿ, ಶ್ರೀಮನ್ ನಾರಾಯಣ ತಿರುಪತಿಯಲ್ಲಿ ದರ್ಶನವಾದಂತೆ ಆಗುತ್ತದೆ. ಚಿತ್ರ ನೋಡಿದ ಮೇಲೆ ನೀವುಗಳು ತಾಯಿ ಪ್ರೀತಿ ಬಗ್ಗೆ ಮಾತನಾಡುತ್ತಿರಾ. ಮನುಷ್ಯನಾಗಿ ಹುಟ್ಟಿ ಎಲ್ಲವನ್ನು ದೇವರ ಅನುಗ್ರಹದಿಂದ ಪಡೆದುಕೊಂಡು ನಾವು ಏನು ಮಾಡಿಲ್ಲ. ಅದಕ್ಕಾಗಿ ಸಿನಿಮಾ ಮಾಡಿದ್ದೇನೆ. ಅಮ್ಮ ಅಂತ ಒಂದು ಹೆಜ್ಜೆ ಇಟ್ಟರೆ, ತಾಯಿ ಮೂರು ಹೆಜ್ಜೆ ಮುಂದಿಡುತ್ತಾಳೆ. ನಮಗೆ ಹರಸಲು ಎಲ್ಲಾ ವರ್ಗದಿಂದ ಹಿತೈಷಿಗಳು ಬಂದಿದ್ದಾರೆ. ನಿಮ್ಮಗಳ ಪ್ರೋತ್ಸಾಹ ಇದೇ ರೀತಿ ಇರಬೇಕೆಂದು ಕೋರಿಕೊಂಡರು.
ಖ್ಯಾತ ನಿರೂಪಕಿ ಅಂಕಿತಾ ಗೌಡ ಈ ಚಿತ್ರದ ಮೂಲಕ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ದೇವಿಯಾಗಿ ಯಶಸ್ವಿನಿ ಸಿದ್ದೇಗೌಡ, ರವಿಬಸ್ರೂರು ಪುತ್ರಿ ಖುಷಿ ಬಸ್ರೂರು ಬಾಲ ದೇವಿಯಾಗಿ ಕಾಣಿಸಿಕೊಂಡಿದ್ದಾರೆ. ಇವರೊಂದಿಗೆ ಹರೀಶ್ ರಾಯ್, ಯಶ್ ಶೆಟ್ಟಿ, ದಿನೇಶ್ ಮಂಗಳೂರು, ಪುನೀತ್ ರುದ್ರನಾಗ್, ಭಜರಂಗಿ ಪ್ರಸನ್ನ, ನೀನಾಸಂ ಅಶ್ವತ್ಥ್, ಹಿರಿಯ ನಟ ಸುಮನ್, ತಮಿಳಿನ ದಿನಾ, ಸಾಗರ್ ಕೂಡ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಉಳಿದಂತೆ ತಬಲನಾಣಿ, ವಿಜಯ್‌ಚೆಂಡೂರು, ದಿವ್ಯಾ ಆಲೂರು, ಮನಮೋಹನ್ ರೈ, ಆರವ್ ಲೋಹಿತ್, ಪಿಳ್ಳಣ್ಣ, ಮಧುಶ್ರೀ, ದಿವ್ಯಾ ಆಲೂರು., ವೇದಾಹಾಸನ್, ಸುನಂದಕಲ್ಬುರ್ಗಿ, ಶಶಿಕುಮಾರ್, ಕೆ.ಬಾಲಸುಬ್ರಮಣ್ಯಂ ಮುಂತಾದವರು ನಟಿಸಿದ್ದಾರೆ. ಕಲಾವಿದರು, ತಂತ್ರಜ್ಞರು ಹಾಗೂ ಚಿತ್ರಕ್ಕೆ ದುಡಿದವರನ್ನು ವೇದಿಕೆಗೆ ಆಹ್ವಾನಿಸಿ ಅವರುಗಳಿಗೂ ಮಾತನಾಡಲು ಅವಕಾಶ ಕಲ್ಪಸಿದ್ದು ನಿರ್ದೇಶಕರ ದೊಡ್ಡ ಗುಣವೆಂದು ಹೇಳಬಹುದು. ಸುಮಾರು ಎರಡೂವರೆ ಗಂಟೆಗಳ ಕಾಲ ನಡೆದ ಸುಂದರ ಸಮಾರಂಭವು ಎಲ್ಲರಿಗೂ ಭಕ್ತಿಭಾವದಲ್ಲಿ ಮಿಂದಂತೆ ಆಗಿತ್ತು.
ಉಗ್ರಂ, ಮಫ್ತಿ, ಕೆಜಿಎಫ್ ನಂತಹ ಸೂಪರ್ ಹಿಟ್ ಸಿನಿಮಾಗಳಿಗೆ ಸಂಗೀತ ನೀಡಿರುವ ರವಿ ಬಸ್ರೂರ್ (Ravi Basrur) ಗಾಯಕರಾಗಿಯೂ, ನಿರ್ಮಾಪಕರಾಗಿಯೂ ಸ್ಯಾಂಡಲ್ ವುಡ್ ಗೆ ಚಿರಪರಿತ.. ಪರಭಾಷೆಯ ಚಿತ್ರಗಳಿಗೂ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡುತ್ತಿರುವ ರವಿ ಬಸ್ರೂರ್ ಪುತ್ರ ಮಾಸ್ಟರ್ ಪವನ್ ಬಸ್ರೂರು (Pawan Basrur) ಸಿನಿಮಾ ಇಂಡಸ್ಟ್ರೀಗೆ ಎಂಟ್ರಿ ಕೊಟ್ಟಿದ್ದಾರೆ.
ಐಟಿ ಉದ್ಯೋಗಿಯಾಗಿರುವ ಶಶಿಕಿರಣ್ ಸಿನಿಮಾ ಮೇಲಿನ ಅಪಾರ ಪ್ರೀತಿಯಿಂದ ತಮ್ಮದೇ ಶರಣ್ಯ ಫಿಲ್ಮಂಸ್ ನಡಿ ಕ್ಲಿಕ್ (Click)ಎಂಬ ಹೊಸ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಮೂಲಕ ರವಿ ಬಸ್ರೂರ್ ಮಗ ಪವನ್ ಬಸ್ರೂರ್ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದ್ದಾರೆ. ಮಾಸ್ಟರ್ ಪವನ್ ಜೊತೆಯಲ್ಲಿ ಮತ್ತೊಬ್ಬ ಯುವ ನಟ ಕಾರ್ತಿಕ್ ಕೂಡ ಮುಖ್ಯಭೂಮಿಕೆಯಲ್ಲಿ ನಟಿಸ್ತಿದ್ದು, ಉಳಿದಂತೆ ಚಂದ್ರಕಲಾಮೋಹನ್, ರಚನಾ ದಶರತ್, ಸಂಜು ಬಸಯ್ಯ, ಸಿಲ್ಲಿಲಲ್ಲಿ ಆನಂದ್, ಸುಮನ್ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ:27 ವರ್ಷಗಳ ಬಳಿಕ ಮಲಯಾಳಂ ಸಿನಿಮಾ ರಂಗಕ್ಕೆ ಕೀರವಾಣಿ ಎಂಟ್ರಿ
ನಮ್ಮಲ್ಲಿ ಹೆಚ್ಚಿನ ಪಾಲು ಪೋಷಕರು ಮಕ್ಕಳು ಡಾಕ್ಟರ್-ಇಂಜಿನಿಯರ್ ಆಗಬೇಕು ಎಂದು ಬಯಸುತ್ತಾರೆ. ಆದರೆ ಈ ಎರಡು ವಲಯದ ಹೊರತಾಗಿ ನಮ್ಮ ಮುಂದೆ ತುಂಬಾ ಆಯ್ಕೆಗಳಿವೆ. ಮಕ್ಕಳ ಇಚ್ಛೆಗೆ ತಕ್ಕಂತೆ ಓದಲು, ಆಯ್ಕೆ ಮಾಡಲು ಬಿಡಬೇಕು ಎಂಬ ಶಿಕ್ಷಣದ ಕಥೆ ಸುತ್ತ ಸಾಗುವ ಈ ಚಿತ್ರಕ್ಕೆ ಯುವ ನಿರ್ದೇಶಕ ಶಶಿಕುಮಾರ್ ಆಕ್ಷನ್ ಕಟ್ ಹೇಳಿದ್ದಾರೆ. ಕೋ ಡೈರೆಕ್ಟರ್ ಆಗಿ ವೀರು ಸಾಥ್ ಕೊಟ್ಟಿದ್ದಾರೆ. ಬೆಂಗಳೂರು, ಬಿಡದಿ ರಾಮನಗರ ಕುಂದಾಪುರ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಈಗಾಗ್ಲೇ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಕ್ಲಿಕ್ ಸಿನಿಮಾಗೆ ಆಕಾಶ್ ಪರ್ವ-ವಿಶ್ವಾಸ್ ಕೌಶಿಕ್ ಸಂಗೀತ ನಿರ್ದೇಶನ, ಜೀವನ್ ಗೌಡ ಛಾಯಾಗ್ರಹಣ, ವಿನಯ್ ಕುಮಾರ್ ಸಂಕಲನವಿದೆ. ಶೀಘ್ರದಲ್ಲಿಯೇ ಸಿನಿಮಾವನ್ನು ತೆರೆಗೆ ತರುಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivarajkumar) ಅವರು ತಮ್ಮ ಸಿನಿಮಾಗಳ ಮೂಲಕ ಹಿಟ್ ಮೇಲೆ ಹಿಟ್ ಕೊಡುತ್ತಿದ್ದಾರೆ. ಸಾಲು ಸಾಲು ಚಿತ್ರಗಳ ಮೂಲಕ ಶಿವಣ್ಣ ಸುದ್ದಿಯಲ್ಲಿದ್ದಾರೆ. ಇತ್ತೀಚಿಗೆ ಶಿವಣ್ಣ `ಭೈರತಿ ರಣಗಲ್’ ಚಿತ್ರದ ಪೋಸ್ಟರ್ ರಿವೀಲ್ ಮಾಡಿದ್ದರು. ಈ ಬೆನ್ನಲ್ಲೇ ಸಿನಿಮಾ ಬಗ್ಗೆ ಚಿತ್ರತಂಡ ಮತ್ತೊಂದು ಅಪ್‌ಡೇಟ್ ಹಂಚಿಕೊಂಡಿದೆ. ಇದನ್ನೂ ಓದಿ: ನಟಿ ಸ್ವರಾ ಭಾಸ್ಕರ್ ಆರತಕ್ಷತೆಯಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ
2017ರಲ್ಲಿ ‘ಮಫ್ತಿ’ (Mufti)ಸಿನಿಮಾದಲ್ಲಿ ಶಿವಣ್ಣನ ನಿರ್ವಹಿಸಿದ್ದ `ಭೈರತಿ ರಣಗಲ್’ ಪಾತ್ರ ಸೂಪರ್ ಹಿಟ್ ಆಗಿತ್ತು. ಆ ಸಿನಿಮಾಕ್ಕೆ ಗೆಲ್ಲುವ ಶಕ್ತಿ ತಂದುಕೊಟ್ಟಿದ್ದೇ ಶಿವಣ್ಣನ ಪಾತ್ರ. ಈಗ ಅದೇ ಪಾತ್ರವನ್ನು ಪ್ರಧಾನವಾಗಿರಿಸಿಕೊಂಡು ಸಿನಿಮಾ ತೆರೆಗೆ ಬರುತ್ತಿದ್ದು, ಪಾತ್ರದ ಹೆಸರಾದ `ಭೈರತಿ ರಣಗಲ್’ ಅನ್ನು ಸಿನಿಮಾಕ್ಕೂ ಇಡಲಾಗಿದೆ.
`ಮಫ್ತಿ’ ಪ್ರೀಕ್ವೆಲ್ ಭೈರತಿ ರಣಗಲ್‌ಗೆ ನರ್ತನ್ ನಿರ್ದೇಶನ ಮಾಡಲಿದ್ದಾರೆ. ಈ ಚಿತ್ರಕ್ಕೆ `ಕೆಜಿಎಫ್ 2′ (KGF 2) ಖ್ಯಾತಿಯ ರವಿ ಬಸ್ರೂರು (Ravi Basrur) ಸಂಗೀತ ನಿರ್ದೇಶನ ಮಾಡಲಿದ್ದಾರೆ ಎಂಬುದನ್ನು ಚಿತ್ರತಂಡ ಘೋಷಿಸಿದೆ. ಪೋಸ್ಟರ್ ಒಂದನ್ನು ಬಿಡುಗಡೆ ಮಾಡುವ ಮೂಲಕ ರವಿ ಬಸ್ರೂರು ಅವರನ್ನು ತಂಡಕ್ಕೆ ಸ್ವಾಗತಿಸಿದೆ. ಈ ಹಿಂದೆ ಇದೇ ತಂಡದ ಜೊತೆ ಕೈ ಜೋಡಿಸಿ `ಮಫ್ತಿ’ಗೂ ಸಂಗೀತ ನಿರ್ದೇಶನ ಮಾಡಿ ಗೆದ್ದಿದ್ದ ರವಿ ಬಸ್ರೂರು ಈಗ `ಭೈರತಿ ರಣಗಲ್’ ಸಿನಿಮಾಗೂ ಕೆಲಸ ನಿರ್ವಹಿಸಲಿದ್ದಾರೆ. ಈ ಮೂಲಕ ಹಿಟ್ ಕಾಂಬಿನೇಷನ್ ಒಂದ್ತಾಗಿದೆ.
ಶಿವರಾಜ್ ಕುಮಾರ್ ಅವರ ಹೋಂ ಬ್ಯಾನರ್ ಗೀತಾ ಪಿಕ್ಚರ್ಸ್ ಇದು ಎರಡನೇ ಸಿನಿಮಾ ಆಗಿದ್ದು, ಮೊದಲ ಸಿನಿಮಾ `ವೇದ’ ಮೂಲಕ ಹಿಟ್ ನೀಡಿರುವ ನಿರ್ಮಾಪಕಿ ಗೀತಾ `ಭೈರತಿ ರಣಗಲ್’ ಪ್ಯಾನ್ ಇಂಡಿಯಾ ಸಿನಿಮಾಗೂ ಸಾಥ್ ನೀಡುತ್ತಿದ್ದಾರೆ. ಸದ್ಯದಲ್ಲಿಯೇ ಈ ಸಿನಿಮಾದ ಚಿತ್ರೀಕರಣ ಆರಂಭ ಮಾಡಲಿದ್ದಾರೆ.
ಕೆಜಿಎಫ್ 2 ಸಿನಿಮಾದ ನಂತರ ಕನ್ನಡದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ ‘ಕಬ್ಜ’ ತಯಾರಾಗಿದ್ದು, ಈಗಾಗಲೇ ಹಲವು ಲುಕ್ ಗಳಿಂದ ಗಮನ ಸೆಳೆದಿದೆ. ಇದೇ ಮೊದಲ ಬಾರಿಗೆ ಈ ಚಿತ್ರದ ಟೀಸರ್ (Teaser) ರೆಡಿಯಾಗಿದ್ದು, ಚಿತ್ರದ ನಾಯಕ ಉಪೇಂದ್ರ (Upendra) ಅವರ ಹುಟ್ಟು ಹಬ್ಬದ ದಿನದಂದು ಬಿಡುಗಡೆ ಆಗುತ್ತಿರುವುದು ವಿಶೇಷ. ಕನ್ನಡದ ಹೆಸರಾಂತ ನಿರ್ದೇಶಕ ಆರ್.ಚಂದ್ರು (R. Chandru) ಈಗಾಗಲೇ ಟೀಸರ್ ರೆಡಿ ಮಾಡುತ್ತಿದ್ದು ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಹೀಗೆ ಐದು ಭಾಷೆಗಳಲ್ಲಿ ಟೀಸರ್ ರಿಲೀಸ್ ಆಗುತ್ತಿರುವುದು ವಿಶೇಷ.
ಸೆಪ್ಟಂಬರ್ 18ಕ್ಕೆ ಉಪ್ಪಿ ಹುಟ್ಟು ಹಬ್ಬ. ಈ ಹುಟ್ಟು ಹಬ್ಬವನ್ನು ಮತ್ತಷ್ಟು ರಂಗಾಗಿಸಲು ಕಬ್ಜ ನಿರ್ದೇಶಕ ಆರ್.ಚಂದ್ರು ಸಜ್ಜಾಗಿದ್ದು, ಉಪ್ಪಿ ಅಭಿಮಾನಿಗಳಿಗೆ ಭರ್ಜರಿ ಬಹುಮಾನವನ್ನೇ ಕೊಡಲಿದ್ದಾರಂತೆ. ‘ಕೆಜಿಎಫ್ 2’ ಚಿತ್ರಕ್ಕೆ ಸಂಗೀತ ನೀಡಿದ್ದ ರವಿ ಬಸ್ರೂರ್ (Ravi Basrur) ಅವರೇ ಈ ಸಿನಿಮಾಗೂ ಸಂಗೀತ ನೀಡುತ್ತಿದ್ದು, ಟೀಸರ್ ಹೇಗೆ ಇರಲಿದೆ ಎನ್ನುವ ಕುತೂಹಲವಂತೂ ಮೂಡಿದೆ. ಚಂದ್ರು ಅವರು ಸೆರೆ ಹಿಡಿದಿರುವ ವಿಷ್ಯುವೆಲ್ಸ್, ರವಿ ಬಸ್ರೂರ್ ಮ್ಯೂಸಿಕ್ ಅಭಿಮಾನಿಗಳನ್ನು ಮೋಡಿ ಮಾಡುವದಂತೂ ಕಂಡಿತ. ಇದನ್ನೂ ಓದಿ:‘ಮದುವೆ’ ನಂತರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆದ ಮಹಾಲಕ್ಷ್ಮಿ ರವೀಂದರ್
ಕನ್ನಡ ಸಿನಿಮಾ ರಂಗಕ್ಕೆ (Sandalwood) ಅನೇಕ ಹಿಟ್ ಚಿತ್ರಗಳನ್ನು ನೀಡಿರುವ ನಿರ್ದೇಶಕ ಆರ್.ಚಂದ್ರು ‘ಕಬ್ಜ’ (Kabzaa) ಸಿನಿಮಾವನ್ನು ಮತ್ತೊಂದು ಲೇವಲ್ ಗೆ ತಗೆದುಕೊಂಡು ಹೋಗಿದ್ದು, ಯಾವುದೇ ರೀತಿಯಲ್ಲಿ ಕಾಂಪ್ರಮೈಸ್ ಮಾಡಿಕೊಳ್ಳದೇ ಅದ್ಧೂರಿಯಾಗಿ ಚಿತ್ರ ಮಾಡಿದ್ದು, ಭಾರತೀಯ ಸಿನಿಮಾ ರಂಗದಲ್ಲಿ ‘ಕಬ್ಜ’ ಮತ್ತೊಂದು ಇತಿಹಾಸವನ್ನು ನಿರ್ಮಿಸಲಿದೆ ಎಂದು ಅಂದಾಜಿಸಲಾಗಿದೆ. ಚಿತ್ರಕ್ಕೆ ಭಾರೀ ಬೇಡಿಕೆ ಕೂಡ ಬರುತ್ತಿದ್ದು, ಸಿನಿಮಾ ರಿಲೀಸ್ ಗೂ ಮುನ್ನವೇ ಸೇಫ್ ಆಗಲಿದೆ ಎನ್ನುವ ಲೆಕ್ಕಾಚಾರವೂ ಶುರುವಾಗಿದೆ.
ಹೊಸ ರೀತಿಯಲ್ಲಿ ಆಲೋಚಿಸುವ ನಿರ್ದೇಶಕ ಚಂದ್ರು, ಸೂಪರ್ ಸ್ಟಾರ್ ಉಪೇಂದ್ರ ಮತ್ತು ಕಿಚ್ಚ ಸುದೀಪ್ (Sudeep) ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಹೀಗಾಗಿ ಪ್ಯಾನ್ ಇಂಡಿಯಾ ಲೇವಲ್ ನಲ್ಲಿ ಸುದ್ದಿ ಆಗುತ್ತಿದೆ. ಕೆಜಿಎಫ್ 2 ಸಿನಿಮಾದಲ್ಲಿ ಕೆಲಸ ಮಾಡಿರುವ ಅನೇಕ ತಂತ್ರಜ್ಞರು ಈ ಸಿನಿಮಾಗೂ ಕೆಲಸ ಮಾಡಿದ್ದಾರೆ. ಹಾಗಾಗಿ ಕೆಜಿಎಫ್ 2 ಚಿತ್ರದ ಜೊತೆಗೆ ಕಬ್ಜ ಸಿನಿಮಾವನ್ನು ಹೋಲಿಕೆ ಮಾಡಲಾಗುತ್ತಿದೆ. ಹಾಗಾಗಿ ಭಾರತೀಯ ಸಿನಿಮಾ ರಂಗದಲ್ಲಿ ಕನ್ನಡದ ಮತ್ತೊಂದು ಸಿನಿಮಾ ಗೆಲುವಿನ ಬಾವುಟ ಹಾರಿಸಲು ರೆಡಿ ಆಗುತ್ತಿದೆ.
Live Tv
[brid partner=56869869 player=32851 video=960834 autoplay=true]
ಕೆಜಿಎಫ್ 2 ಸಿನಿಮಾ ಸೇರಿದಂತೆ ಹಲವು ಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡಿರುವ ರವಿ ಬಸ್ರೂರು ಅವರಿಗೆ ಸೌತ್ ಸಿನಿಮಾ ರಂಗದಲ್ಲಿ ಮತ್ತು ಬಾಲಿವುಡ್ ಸಿನಿಮಾ ರಂಗದಲ್ಲೂ ಬೇಡಿಕೆ ಹೆಚ್ಚಾಗಿದೆ. ಮೊನ್ನೆಯಷ್ಟೇ ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಸಿನಿಮಾಗೆ ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡಲಿದ್ದಾರೆ ಎಂದು ಸುದ್ದಿ ಆಗಿತ್ತು. ಇದೀಗ ಮಲಯಾಳಂ ಸ್ಟಾರ್ ನಟನ ಚಿತ್ರಕ್ಕೂ ಇವರೇ ಸಂಗೀತ ಸಂಯೋಜನೆ ಮಾಡಲಿದ್ದಾರಂತೆ.
ಮಲಯಾಳಂ ಸಿನಿಮಾ ರಂಗಕ್ಕೆ ಇವರ ಮೊದಲ ಎಂಟ್ರಿ ಏನಲ್ಲವಾದರೂ, ಇದೇ ಮೊದಲ ಬಾರಿಗೆ ಸ್ಟಾರ್ ನಟನ ಚಿತ್ರಕ್ಕೆ ಸಂಗೀತ ಮಾಡುತ್ತಿರುವುದು ವಿಶೇಷ. ಈ ಹಿಂದೆ ಮಡ್ಡಿ ಎಂಬ ಮಲಯಾಳಂ ಸಿನಿಮಾಗೆ ರವಿ ಸಂಗೀತ ನೀಡಿದ್ದರು. ಇದೀಗ ಪೃಥ್ವಿ ಸುಕುಮಾರನ್ ನಟಿಸುತ್ತಿರುವ, ಪೌರಾಣಿಕ ಚಿತ್ರ ಕಾಲಿಯನ್ ಗೆ ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡಲಿದ್ದಾರೆ. ಇದೊಂದು ಹೊಸ ಬಗೆಯ ಸಿನಿಮಾವಾಗಿದ್ದರಿಂದ ಇವರನ್ನು ಅವಕಾಶ ಹುಡುಕಿಕೊಂಡು ಬಂದಿದೆಯಂತೆ. ಇದನ್ನೂ ಓದಿ:ರಣ್‌ವೀರ್ ಸಂಪೂರ್ಣ ಬೆತ್ತಲೆ:ಕಣ್ಣುಮುಚ್ಚಿಕೊಂಡ ದೀಪಿಕಾ
ಕೆಜಿಎಫ್ 2 ವಿಶ್ವ ಮಟ್ಟದಲ್ಲಿ ಗೆಲುವು ಸಾಧಿಸುತ್ತಿದ್ದಂತೆಯೇ ಈ ಸಿನಿಮಾದ ಬಹುತೇಕ ತಂತ್ರಜ್ಞರಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಎಡಿಟರ್, ಸಿನಿಮಾಟೋಗ್ರಾಫರ್, ಕಲಾ ನಿರ್ದೇಶಕರು ಸೇರಿದಂತೆ ಅನೇಕರಿಗೆ ಭಾರೀ ಬಜೆಟ್ ಸಿನಿಮಾಗಳಿಂದ ಆಫರ್ ಬರುತ್ತಿವೆ. ಅದರಲ್ಲೂ ರವಿ ಬಸ್ರೂರು ಭಾರೀ ವೇಗದಲ್ಲಿ ಬೇಡಿಕೆಯನ್ನು ಗಳಿಸುತ್ತಿದ್ದಾರೆ. ಇದೀಗ ಮಲಯಾಳಂ ಸಿನಿಮಾ ರಂಗದಲ್ಲೂ ತಮ್ಮ ಛಾಪು ಮೂಡಿಸಲು ಹೊರಟಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಸದ್ಯ `ಕಭಿ ಈದ್ ಕಭಿ ದಿವಾಲಿ’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈಗ ಈ ಚಿತ್ರಕ್ಕೆ ಕನ್ನಡಿಗನ ಎಂಟ್ರಿಯಾಗಿದೆ. ಸಲ್ಲು ಭಾಯ್ ಸಿನಿಮಾಗೆ `ಕೆಜಿಎಫ್’ ಖ್ಯಾತಿಯ ರವಿ ಬಸ್ರೂರು ಸಂಗೀತ ನೀಡಲಿದ್ದಾರೆ.
ಸಲ್ಮಾನ್ ಖಾನ್ ಗಮನ ಸದ್ಯ `ಕಭಿ ಈದ್ ಕಭಿ ದಿವಾಲಿ’ ಸಿನಿಮಾ ಮೇಲಿದೆ. ಚಿತ್ರೀಕರಣಕ್ಕಾಗಿ ಸದ್ಯ ಹೈದರಾಬಾದ್‌ನಲ್ಲಿ ಬೀಡು ಬಿಟ್ಟಿದೆ. ಕಲಾವಿದರ ಆಯ್ಕೆ ಜತೆ ಮ್ಯೂಸಿಕ್‌ಗೂ ಆಧ್ಯತೆ ಕೊಡಲಾಗಿದೆ. ಹಾಗಾಗಿ ಕನ್ನಡದ ಪ್ರತಿಭಾನ್ವಿತ ಸಂಗೀತ ನಿರ್ದೇಶ ರವಿ ಬಸ್ರೂರು ಮ್ಯೂಸಿಕ್ ಕಂಪೋಸ್ ಮಾಡಲಿದ್ದಾರೆ. ಇದನ್ನೂ ಓದಿ:`ರಾ ರಾ ರಕ್ಕಮ್ಮ’ ನಂತರ ನಾಳೆ ಮತ್ತೊಂದು ಸಾಂಗ್ ರಿಲೀಸ್: ವಿಕ್ರಾಂತ್ ರೋಣ
`ಕೆಜಿಎಫ್’ ಚಾಪ್ಟರ್ 1 ಮತ್ತು 2 ಚಿತ್ರದ ಹಾಡಿನಿಂದ ಇಡೀ ದೇಶದ ಗಮನ ಸೆಳೆದಿರುವ ಕನ್ನಡಿಗ ರವಿ ಬಸ್ರೂರು ಅವರ ಸಂಗೀತಕ್ಕೆ ಈಗ ಬಾಲಿವುಡ್ ಕೂಡ ತಲೆಬಾಗಿದೆ. ಸಲ್ಮಾನ್ ಖಾನ್ ಚಿತ್ರಕ್ಕೆ ಸಂಗೀತ ನೀಡಲು `ಕೆಜಿಎಫ್’ ಖ್ಯಾತಿಯ ರವಿ ಬಸ್ರೂರು ಸಾಥ್ ನೀಡಲಿದ್ದಾರೆ. ಮುಂದಿನ ದಿನಗಳಲ್ಲಿ ಕನ್ನಡದ ಪ್ರತಿಭೆ ಬಾಲಿವುಡ್ ರಂಗದಲ್ಲೂ ಹೇಗೆಲ್ಲಾ ಮೋಡಿ ಮಾಡಬಹುದು ಅಂತಾ ಕಾದು ನೋಡಬೇಕಿದೆ.
ಯಶ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ಏ.14 ರಂದು ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ. ಕನ್ನಡ, ತಮಿಳು, ತೆಲುಗು, ಮಲಯಾಳ ಮತ್ತು ಹಿಂದಿಯಲ್ಲಿ ಈ ಸಿನಿಮಾ ಏಕಕಾಲಕ್ಕೆ ರಿಲೀಸ್ ಆಗುತ್ತಿದ್ದು, ಅದಕ್ಕೂ ಮುನ್ನ ಮಾ.27ರಂದು ಚಿತ್ರದ ಟ್ರೇಲರ್ ಬಿಡುಗಡೆ ಮಾಡಲು ಸಿನಿಮಾ ತಂಡ ಸಿದ್ಧತೆ ಮಾಡಿಕೊಂಡಿದೆ. ಅವತ್ತು ಬೆಂಗಳೂರಿಗೆ ಪ್ರತಿಷ್ಠತ ಸ್ಟಾರ್ ಹೋಟೆಲ್ ನಲ್ಲಿ ಕೇವಲ ಮಾಧ್ಯಮ ಗೋಷ್ಠಿ ಮಾಡುವ ಮೂಲಕ ಟ್ರೇಲರ್ ಬಿಡುಗಡೆ ಆಗುತ್ತಿದ್ದು ಭಾರತೀಯ ಭಾಷೆಯ 180ಕ್ಕೂ ಹೆಚ್ಚು ಬೇರೆ ಭಾಷೆಯ ಪತ್ರಕರ್ತರು ಅಂದು ಟ್ರೇಲರ್ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.
ಮಾರ್ಚ್ 27ರ ಸಂಜೆ 6.45ಕ್ಕೆ ಟ್ರೇಲರ್ ಬಿಡುಗಡೆ ಆಗಲಿದ್ದು, ಚಿತ್ರತಂಡದ ಪ್ರಮುಖ ಕಲಾವಿದರು, ತಂತ್ರಜ್ಞರು ಮತ್ತು ಕನ್ನಡದ ಹೆಸರಾಂತ ನಟರು ಹಾಗೂ ಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ. ಇದನ್ನೂ ಓದಿ : ಕದ್ದುಮುಚ್ಚಿ ಮದುವೆ ಆಗಿಲ್ಲ, ಬಾಡಿಗೆ ತಾಯಿ ಸುಳ್ಳು : ನಯನತಾರಾ
ಅತಿಥಿಗಳು ಯಾರು?
ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮತ್ತು ಶಿವರಾಜ್ ಕುಮಾರ್ ಆಗಮಿಸುತ್ತಿದ್ದು, ಸಿನಿಮಾದ ಕಲಾವಿದರಾದ ಬಾಲಿವುಡ್ ನಟ ಸಂಜಯ್ ದತ್, ಮಲಯಾಳಂ ಹೆಸರಾಂತ ನಟ ಪೃಥ್ವಿರಾಜ್, ಬಾಲಿವುಡ್ ನಟಿ ರವೀನಾ ಟಂಡನ್, ನಟ ಯಶ್, ನಟಿ ಶ್ರೀನಿಧಿ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್, ಸಂಗೀತ ನಿರ್ದೇಶಕ ರವಿ ಬಸ್ರೂರು, ನಿರ್ಮಾಪಕ ವಿಜಯ ಕಿರಗಂದೂರು ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ವೇದಿಕೆಯ ಮೇಲೆ ಇರಲಿದ್ದಾರೆ. ಇದನ್ನೂ ಓದಿ: ಕಾದಂಬರಿ ಆಧರಿತ ಸಿನಿಮಾದಲ್ಲಿ ಪ್ರಿಯಾಂಕಾ ಚೋಪ್ರಾ
7 ಸಾವಿರ ಚಿತ್ರಮಂದಿರದಲ್ಲಿ ಸಿನಿಮಾ ರಿಲೀಸ್
ಕೆಜಿಎಫ್ 2 ಸಿನಿಮಾ ಕನ್ನಡ, ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗುತ್ತಿದ್ದು ವಿಶ್ವದಾದ್ಯಂತ ಏಳು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಮಾಡಲಾಗಿದೆ ಅಂತಾರೆ ನಿರ್ಮಾಪಕ ವಿಜಯ್ ಕಿರಗಂದೂರು. ಕರ್ನಾಟಕದಲ್ಲೇ 450ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆದರೆ, ತಮಿಳಿನಲ್ಲಿ ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕೆಜಿಎಫ್ 2 ಪ್ರದರ್ಶನ ಕಾಣಲಿದೆ. ಹಾಗೆಯೇ ವಿವಿಧ ಭಾಷೆಯ ಚಿತ್ರಮಂದಿರಗಳಲ್ಲಿ ಸಾವಿರ ಸಾವಿರ ಥಿಯೇಟರ್ ನಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿರುವುದು ವಿಶೇಷ. ಇದನ್ನೂ ಓದಿ : ಅನಿಲ್ ಕಪೂರ್ ಈ ಫೋಟೋ ಹಾಕಬಾರದಿತ್ತು: ಕಿವಿ ಹಿಂಡಿದ ಅಭಿಮಾನಿಗಳು
ಅರೆಬಿಕ್ ಮತ್ತು ಇಂಗ್ಲಿಷ್ ನಲ್ಲಿ ಸಬ್ ಟೈಟಲ್
ಐದು ಭಾಷೆಗಳ ಹೊರತಾಗಿ ಉಳಿದಂತೆ ಎಲ್ಲ ಭಾಷೆಯ ಚಿತ್ರಗಳಲ್ಲೂ ಇಂಗ್ಲಿಷ್ ನಲ್ಲಿ ಸಬ್ ಟೈಟಲ್ ಇರುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. ಆದರೆ, ದುಬೈನಲ್ಲಿ ಮಾತ್ರ ಸಬ್ ಟೈಟಲ್ ಭಾಷೆ ಬದಲಾಗಲಿದೆ. ಇಲ್ಲಿ ಅರೆಬಿಕ್ ಭಾಷೆಯ ಸಬ್ ಟೈಟಲ್ ನಲ್ಲಿ ಸಿನಿಮಾ ವೀಕ್ಷಿಸಬಹುದಾಗಿದೆ. ಚೀನಾ ಸೇರಿದಂತೆ ಇತರ ಭಾಷೆಯ ಸಬ್ ಟೈಟಲ್ ಗೂ ಬೇಡಿಕೆಯಿದ್ದು, ಅಲ್ಲೆಲ್ಲ ಇಂಗ್ಲಿಷ್ ನಲ್ಲಿಯೇ ಚಿತ್ರವನ್ನು ವೀಕ್ಷಿಸಬಹುದಾಗಿದೆ. ಇದನ್ನೂ ಓದಿ : ರಾಜಕೀಯ ದಾಳವಾದ ಪುನೀತ್ ನಟನೆಯ ‘ಜೇಮ್ಸ್’ ಚಿತ್ರ
70 ದೇಶಗಳಲ್ಲಿ ಕೆಜಿಎಫ್ 2 ಬಿಡುಗಡೆ
ಜಪಾನ್, ಅಮೆರಿಕಾ, ಇಂಗ್ಲೆಂಡ್, ದುಬೈ ಹೀಗೆ 70ಕ್ಕೂ ಹೆಚ್ಚು ದೇಶಗಳಲ್ಲಿ ಈ ಸಿನಿಮಾವನ್ನು ರಿಲೀಸ್ ಮಾಡುವ ಪ್ಲ್ಯಾನ್ ಮಾಡಿದ್ದಾರೆ ನಿರ್ಮಾಪಕರು. ಈಗಾಗಲೇ ಚಿತ್ರಕ್ಕೆ ಸಾಕಷ್ಟು ಬೇಡಿಕೆ ಬಂದಿದ್ದು, ಅಷ್ಟೂ ದೇಶಗಳಲ್ಲೂ ಏಕಕಾಲಕ್ಕೆ ಚಿತ್ರವನ್ನು ಬಿಡುಗಡೆ ಮಾಡುವ ಪ್ಲ್ಯಾನ್ ಮಾಡಲಾಗಿದೆ. ಚಿತ್ರಕ್ಕೆ ಹೆಚ್ಚಿನ ಹಣವೂ ವಿದೇಶದಿಂದಲೇ ಹರಿದು ಬರಲಿದೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ : ಸ್ವಂತ ಜಮೀನು ಮಾರಿ ಆಸ್ಪತ್ರೆ ಕಟ್ಟಿಸಲು ಮುಂದಾದ ಹಿರಿಯ ನಟಿ ಲೀಲಾವತಿ: ಬಹುಪರಾಕ್ ಹೇಳಿದ ಕನ್ನಡ ಜನತೆ
ಪ್ರಿ ರಿಲೀಸ್ ಇವೆಂಟ್ ಇಲ್ಲ
ಕೋವಿಡ್ ನಿಯಮ ಮತ್ತು ಅಪ್ಪು ನಿಧನದಿಂದಾಗಿ ಈ ಬಾರಿ ಪ್ರಿ ರಿಲೀಸ್ ಇವೆಂಟ್ ಇರುವುದಿಲ್ಲ ಎಂದು ತಿಳಿಸಿದ್ದಾರೆ ನಿರ್ಮಾಪಕ ವಿಜಯ್ ಕಿರಗಂದೂರ್. ಪ್ರಿ ರಿಲೀಸ್ ಇವೆಂಟ್ ಮಾಡುವಂತೆ ನಿರ್ಮಾಪಕರಿಗೆ ಸಾಕಷ್ಟು ಒತ್ತಡವಿದ್ದು, ಬೇರೆ ಭಾಷೆಯಲ್ಲೂ ಪ್ರಿ ರಿಲೀಸ್ ಇವೆಂಟ್ ಮಾಡುವಂತೆ ಕೇಳುತ್ತಿದ್ದಾರೆ. ಆದರೆ, ಕೋವಿಡ್ ನಿಯಮ ಮತ್ತು ಅಪ್ಪು ನಿಧನದ ಕಾರಣದಿಂದಾಗಿ ಪ್ರಿ ರಿಲೀಸ್ ಇವೆಂಟ್ ಆಯೋಜನೆ ಮಾಡಿಲ್ಲ ಚಿತ್ರತಂಡ.
ನಟ, ನಿರ್ದೇಶಕರಾಗಿ ಮಾತ್ರವಲ್ಲದೇ ವೀಕೆಂಡ್ ವಿತ್ ರಮೇಶ್ ಎಂಬ ಕಾರ್ಯಕ್ರಮದ ಮೂಲಕವೂ ಮನೆ ಮಾತಾಗಿರುವವರು ರಮೇಶ್ ಅರವಿಂದ್. ಇತ್ತೀಚೆಗಷ್ಟೇ ಪತ್ತೇದಾರಿಕೆಯ ಗೆಟಪ್ಪಿನಲ್ಲಿ ಮಿಂಚಿ ಗೆದ್ದಿದ್ದ ರಮೇಶ್, ಇದೀಗ ಮತ್ತೆ 100 ಅನ್ನೋ ಸಿನಿಮಾ ಮೂಲಕ ಮತ್ತೊಂದು ಅವತಾರದಲ್ಲಿ ಪ್ರೇಕ್ಷಕರನ್ನು ತಾಕುವ ಖುಷಿಯಲ್ಲಿದ್ದಾರೆ. ಅದೇ ಖುಷಿಯಲ್ಲಿ ಚಿತ್ರತಂಡ ರಮೇಶ್ ಅರವಿಂದ್ ಅವರ ಬರ್ತ್‍ಡೇ ಸ್ಪೆಷಲ್ ಎಂಬಂತೆ 100 ಚಿತ್ರದ ಚೆಂದದ ಲಿರಿಕಲ್ ವಿಡಿಯೋ ಸಾಂಗ್ ಅನ್ನು ಬಿಡುಗಡೆಗೊಳಿಸಿದೆ.
ಈ ಹಿಂದೆ ಸದಭಿರುಚಿಯ ಸಿನಿಮಾಗಳ ಮೂಲಕ ಹೆಸರಾಗಿದ್ದ ಎಂ.ರಮೇಶ್ ರೆಡ್ಡಿ ನಂಗಲಿ ನಿರ್ಮಾಣದಲ್ಲಿ ‘100’ ಚಿತ್ರ ಮೂಡಿ ಬಂದಿದೆ. ಕೊರೊನಾ ಸಂಕಷ್ಟ ಒಂದಿಲ್ಲದೇ ಹೋಗಿದ್ದರೆ ಖಂಡಿತವಾಗಿಯೂ ಇಷ್ಟು ಹೊತ್ತಿಗೆಲ್ಲ ಈ ಚಿತ್ರ ಪ್ರೇಕ್ಷಕರ ಮುಂದೆ ಬಂದಿರುತ್ತಿತ್ತು. ಆ ಹಿನ್ನಡೆಯನ್ನೂ ಲೆಕ್ಕಿಸದೆ ಚಿತ್ರತಂಡ ಎಲ್ಲ ಕೆಲಸ ಕಾರ್ಯಗಳನ್ನು ಪೂರೈಸಿಕೊಂಡಿದೆ. ಬಿಡುಗಡೆಯ ಹೊಸ್ತಿಲಲ್ಲಿಯೇ ರಮೇಶ್ ಅವರ ಬರ್ತ್‍ಡೇಗಾಗಿ ಈ ಲಿರಿಕಲ್ ವೀಡಿಯೋ ಲಾಂಚ್ ಮಾಡಲಾಗಿದೆ.
ಇದು ಪಾರ್ಟಿ ಮೂಡಿಗೆ ಜಾರಿಸುವಂಥ ಮಜವಾದ ಹಾಡು. ವಿಶೇಷ ಅಂದ್ರೆ ಈ ಹಾಡಿಗೆ ಕೆಜಿಎಫ್ ಖ್ಯಾತಿಯ ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡಿದ್ದಾರೆ. ಕಿನ್ನಲ್ ರಾಜ್, ಪ್ರಮೋದ್ ಮರವಂತೆ ಮತ್ತು ಭಾಸ್ಕರ್ ಬಂಗೇರ ಸೇರಿಕೊಂಡು ಈ ಹಾಡಿಗೆ ಸಾಹಿತ್ಯ ಒದಗಿಸಿದ್ದಾರೆ. ರಮೇಶ್ ಅರವಿಂದ್, ಅನನ್ಯಾ ಭಟ್ ಮತ್ತು ನೀತು ಸುಬ್ರಹ್ಮಣ್ಯ ಅಷ್ಟೇ ಮಜವಾಗಿ ಹಾಡಿದ್ದಾರೆ.
ಈವತ್ತಿಗೆ ಸೋಶಿಯಲ್ ಮೀಡಿಯಾ ಅನ್ನೋದು ಸರ್ವವ್ಯಾಪಿಯಾಗಿದೆ. ಮನಸ್ಥಿತಿ ನೆಟ್ಟಗಿದ್ದರೆ ಇದನ್ನು ಸಕಾರಾತ್ಮಕವಾಗಿಯೇ ಬಳಸಿಕೊಳ್ಳಬಹುದು. ಆದ್ರೆ ಕೆಲ ವಿಕೃತರು ಸಾಮಾಜಿಕ ಜಾಲತಾಣಗಳ ವ್ಯಾಪ್ತಿ, ವಿಸ್ತಾರಗಳನ್ನು ಸಮಾಜ ಬಾಹಿರ ದಂಧೆಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಇದುವೇ ಹಲವರ ನೆಮ್ಮದಿಗೆ ಕುತ್ತು ತಂದಿದೆ. ಕೆಲ ಸಂದರ್ಭಗಳಲ್ಲಿ ಜೀವ ಹಾನಿಗಳೂ ಸಂಭವಿಸುತ್ತಿವೆ. ಇದೇ ಕಥಾ ಹಂದರ ಹೊಂದಿರೋ ಚೆಂದದ ಕಥೆಯನ್ನಿಲ್ಲಿ ರಮೇಶ್ ಅರವಿಂದ್ ನಿರ್ದೇಶನ ಮಾಡಿದ್ದಾರಂತೆ.