Tag: ರವಿ ಮೋಹನ್‌

  • ಸಿಡಿದೆದ್ದ ಜಯಂ ರವಿ: ಪರಿಹಾರಕ್ಕಾಗಿ 9 ಕೋಟಿ ಬೇಡಿಕೆ

    ಸಿಡಿದೆದ್ದ ಜಯಂ ರವಿ: ಪರಿಹಾರಕ್ಕಾಗಿ 9 ಕೋಟಿ ಬೇಡಿಕೆ

    ಮಿಳು ನಟ ಜಯಂ ರವಿ (Jayam Ravi) ಇತ್ತೀಚೆಗೆ ತಮ್ಮ ಸಿನಿಮಾಗಳಿಗಿಂತ ವೈಯಕ್ತಿಕ ಕಾರಣಗಳಿಂದಲೇ ಹೆಚ್ಚು ಸುದ್ದಿಯಲ್ಲಿದ್ದಾರೆ. ಪತ್ನಿಯೊಂದಿಗೆ ಜಗಳ ಹಾಗೂ ವಿಚ್ಛೇದನ ವಿಚಾರವಾಗಿ ಜಯಂ ರವಿ ಸುದ್ದಿಯಾಗಿದ್ದರು. ಇದೀಗ ಸಿನಿಮಾ ನಿರ್ಮಾಪಕರು ಹಾಗೂ ನಿರ್ಮಾಣ ಸಂಸ್ಥೆಯ ವಿಚಾರವಾಗಿ ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ.

    ಜಯಂ ರವಿ ಜೊತೆ ಸಿನಿಮಾ ಮಾಡುವುದಾಗಿ 80 ದಿನಗಳ ಕಾಲ್‌ಶೀಟ್ ಪಡೆದು ಅನಾವಶ್ಯಕವಾಗಿ ಕಾಲಹರಣ ಮಾಡಿದೆ. ಕಾಲ್‌ಶೀಟ್ ಕೊಟ್ಟ ದಿನಾಂಕದಂದು ಯಾವುದೇ ಸಿನಿಮಾ ಮಾಡಿಲ್ಲ. ಹೀಗಾಗಿ, ಜಯಂ ರವಿ ಇದಕ್ಕೆ ಪರಿಹಾರವಾಗಿ ನಿರ್ಮಾಪಕರು 9 ಕೋಟಿ ಹಣ ನೀಡಬೇಕು ಅಂತಾ ಕೋರ್ಟ್ ಮುಂದೆ ಹೋಗಿದ್ದಾರೆ. ಇದನ್ನೂ ಓದಿ: ಸುಪ್ರೀಂ ಟೆನ್ಶನ್‌ ನಡ್ವೆಯೂ ʻಡೆವಿಲ್ʼ ಸಂಭ್ರಮಕ್ಕೆ ಸಜ್ಜಾದ ಡಿಬಾಸ್‌ ಫ್ಯಾನ್ಸ್

    ಅಂದಹಾಗೆ ನಟ ರವಿ ಮೋಹನ್ ಅವರು ಬಾಂಬೆ ಟಚ್ ಗೋಲ್ಡ್ ಯೂನಿವರ್ಸ್ ಪ್ರೈವೆಟ್ ಲಿಮಿಟೆಡ್ ಹೆಸರಿನ ನಿರ್ಮಾಣ ಸಂಸ್ಥೆಗೆ ಬರೋಬ್ಬರಿ 80 ದಿನಗಳ ಕಾಲ್‌ಶೀಟ್ ನೀಡಿದ್ದರಂತೆ. ಈ ಸಂಸ್ಥೆ ಸಿನಿಮಾವನ್ನ ಪ್ರಾರಂಭ ಕೂಡ ಮಾಡಿಲ್ಲ. ಅಲ್ಲದೇ ಆ ಕಾಲ್‌ಶೀಟ್ ಕೊಟ್ಟ ಟೈಂನಲ್ಲಿ ಜಯಂ ರವಿ ಬೇರೆ ಯಾವುದೇ ಪ್ರಾಜೆಕ್ಟ್ ಒಪ್ಪಿಕೊಂಡಿಲ್ಲ. ಕಾಲ್‌ಶೀಟ್ ಮೇಲೆ ಎರಡು ಸಿನಿಮಾಗಳ ಆಫರ್ ಕೂಡಾ ಬಂದಿದ್ದರೂ ಒಪ್ಪಿಕೊಳ್ಳಲಿಲ್ಲ.

    ಸುಳ್ಳು ಭರವಸೆ ನೀಡಿ ಸಿನಿಮಾನೂ ಮಾಡದೇ ಇರೋ ಕಾರಣಕ್ಕೆ ಜಯಂ ರವಿ ಬಾಂಬೆ ಟಚ್ ಗೋಲ್ಡ್ ಯೂನಿವರ್ಸ್ ಪ್ರೈವೆಟ್ ಲಿಮಿಟೆಡ್ ಹೆಸರಿನ ನಿರ್ಮಾಣ ಸಂಸ್ಥೆ ವಿರುದ್ಧ ಹೈದರಾಬಾದ್ ಕೋರ್ಟ್‌ನಲ್ಲಿ ಅರ್ಜಿ ಹಾಕಿದ್ದಾರಂತೆ. ಇದನ್ನೂ ಓದಿ: ಫೋಟೋಶೂಟ್ ಮೂಡ್‌ನಲ್ಲಿ ಪವಿತ್ರಾ ಗೌಡ

  • ಹೊಸ ಚಿತ್ರ ಘೋಷಿಸಿದ ರವಿ ಮೋಹನ್ – `ಬ್ರೋಕೋಡ್’ ಮೂಲಕ ನಿರ್ಮಾಣ ರಂಗಕ್ಕಿಳಿದ ತಮಿಳು ನಟ

    ಹೊಸ ಚಿತ್ರ ಘೋಷಿಸಿದ ರವಿ ಮೋಹನ್ – `ಬ್ರೋಕೋಡ್’ ಮೂಲಕ ನಿರ್ಮಾಣ ರಂಗಕ್ಕಿಳಿದ ತಮಿಳು ನಟ

    ಮಿಳು ಚಿತ್ರರಂಗದ ಪ್ರತಿಭಾನ್ವಿತ ನಟ ರವಿ ಮೋಹನ್ (Ravi Mohan) ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಬ್ರೋಕೋಡ್ (Bro Code) ಎಂಬ ಚಿತ್ರ ಅನೌನ್ಸ್ ಮಾಡಿರುವ ಅವರೀಗ, ನಿರ್ಮಾಣದ ಜವಾಬ್ದಾರಿ ಕೂಡ ಹೊತ್ತುಕೊಂಡಿದ್ದಾರೆ.

    ಇತ್ತೀಚೆಗಷ್ಟೇ ತಮ್ಮದೇ ನಿರ್ಮಾಣ ಸಂಸ್ಥೆ ಬಗ್ಗೆ ಮಾಹಿತಿ ನೀಡಿದ್ದ ರವಿ ಮೋಹನ್, ಆ ಸಂಸ್ಥೆಯ ಚೊಚ್ಚಲ ಚಿತ್ರ ಯಾವುದು ಎಂಬ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ರವಿ ಮೋಹನ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಬ್ರೋಕೋಡ್‌ಗೆ ಅವರೇ ನಾಯಕ ನಟನಾಗಿ ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ: ನಾಳೆ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ

    ಡಿಕ್ಕಿಲೂನಾ ಮತ್ತು ವಡಕ್ಕುಪಟ್ಟಿ ರಾಮಸಾಮಿ ಚಿತ್ರದ ನಿರ್ದೇಶಕ ಕಾರ್ತಿಕ್ ಯೋಗಿ `ಬ್ರೋಕೋಡ್’ ಸಿನಿಮಾಗೆ ಆಕ್ಷನ್ ಕಟ್ ಹೇಳಲಿದ್ದಾರೆ. ರವಿ ಮೋಹನ್ ಜೊತೆಗೆ ಎಸ್.ಜೆ ಸೂರ್ಯ ಹಾಗೂ ನಾಲ್ವರು ಪ್ರಮುಖ ನಟಿಯರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಆ ನಾಲ್ವರು ನಟಿಯರು ಯಾರೆಂದು ಚಿತ್ರತಂಡ ಇನ್ನೂ ರಿವೀಲ್ ಮಾಡಿಲ್ಲ. ಪೊರ್ ತೋಝಿಲ್ ಚಿತ್ರದ ಮೂಲಕ ಹೆಸರುವಾಸಿಯಾದ ಕಲೈಸೆಲ್ವನ್ ಶಿವಾಜಿ ಅವರ ಛಾಯಾಗ್ರಹಣ ಈ ಚಿತ್ರಕ್ಕೆ ಇರಲಿದೆ. ಇದನ್ನೂ ಓದಿ: ಕಮಲ್‌ ಹಾಸನ್‌ಗೆ ಮತ್ತೆ ಶಾಕ್‌ – ತುರ್ತು ವಿಚಾರಣೆ ನಡೆಸಲ್ಲ ಎಂದ ಸುಪ್ರೀಂ ಕೋರ್ಟ್‌

    ಅನಿಮಲ್ ಮತ್ತು ಅರ್ಜುನ್ ರೆಡ್ಡಿಯಂತಹ ಹಿಟ್ ಸಾಂಗ್‌ಗಳ ಸಂಗೀತ ನಿರ್ದೇಶಕ ಹರ್ಷವರ್ಧನ್ ಮ್ಯೂಸಿಕ್, ಪ್ರದೀಪ್ ಇ. ರಾಘವ್ ಸಂಕಲನ, ಎ. ರಾಜೇಶ್ ಕಲಾ ನಿರ್ದೇಶನದಲ್ಲಿ `ಬ್ರೋಕೋಡ್’ ಸಿನಿಮಾ ಮೂಡಿಬರಲಿದೆ. ಇದೊಂದು ಪಕ್ಕ ಫ್ಯಾಮಿಲಿ ಎಂಟರ್‌ಟೈನಿಂಗ್ ಜೊತೆಗೆ ಕಾಮಿಡಿ ಜಾನರ್ ಕಥೆಯನ್ನು ಒಳಗೊಂಡಿದೆ. ಇದನ್ನೂ ಓದಿ: ಸಿದ್ದು ಸಂಪುಟಕ್ಕೆ ನಡೆಯುತ್ತಾ ಮೇಜರ್‌ ಸರ್ಜರಿ? – 10 ಸಚಿವರಿಗೆ ಕೊಕ್‌ ಸಾಧ್ಯತೆ

    `ಬ್ರೋಕೋಡ್’ ಸಿನಿಮಾದ ಕುರಿತು ಮಾತನಾಡಿದ ನಿರ್ದೇಶಕ ಕಾರ್ತಿಕ್ ಯೋಗಿ, ನಾನು ರವಿ ಮೋಹನ್ ಅವರಿಗೆ ಕಥೆಯನ್ನು ಹೇಳಿದಾಗ, ಅವರು ಅದನ್ನು ಸಂಪೂರ್ಣವಾಗಿ ಆನಂದಿಸಿದರು. ಅಲ್ಲದೇ ತಕ್ಷಣವೇ ಅದನ್ನು ನಿರ್ಮಿಸಲು ಮುಂದೆ ಬಂದರು ಎಂದು ಹೇಳಿದ್ದಾರೆ. ಇದನ್ನೂ ಓದಿ: Nelamangala | 2 ಸ್ಕೂಲ್ ಬಸ್‌ಗಳ ನಡುವೆ ಅಪಘಾತ – ಮಕ್ಕಳಿಗೆ ಸಣ್ಣಪುಟ್ಟ ಗಾಯ

    ಈ ಸಿನಿಮಾದ ಚಿತ್ರೀಕರಣವು ಸೆಪ್ಟೆಂಬರ್‌ನಲ್ಲಿ ಪ್ರಾರಂಭವಾಗಲಿದೆ. ಇನ್ನೂ, ರವಿ ಮೋಹನ್ ಅವರು ಸುಧಾ ಕೊಂಗರ ನಿರ್ದೇಶನದ ಪರಾಶಕ್ತಿ ಮತ್ತು ಗಣೇಶ್ ಕೆ.ಬಾಬು ನಿರ್ದೇಶನದ ಕರಾಟೆ ಬಾಬು ಚಿತ್ರಗಳಲ್ಲಿಯೂ ನಟಿಸುತ್ತಿದ್ದಾರೆ. ಇದೀಗ ಅವರು ಮತ್ತೊಂದು ಸಿನಿಮಾ ಘೋಷಣೆ ಮಾಡಿರುವುದು ಅವರ ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ.

  • ಡಿವೋರ್ಸ್ ಘೋಷಿಸಿದ ಬೆನ್ನಲ್ಲೇ ಗಾಯಕಿ ಜೊತೆ ಕಾಣಿಸಿಕೊಂಡ ರವಿ ಮೋಹನ್

    ಡಿವೋರ್ಸ್ ಘೋಷಿಸಿದ ಬೆನ್ನಲ್ಲೇ ಗಾಯಕಿ ಜೊತೆ ಕಾಣಿಸಿಕೊಂಡ ರವಿ ಮೋಹನ್

    ಸೌತ್ ನಟ ರವಿ ಮೋಹನ್ (Ravi Mohan) ಅವರು ಆರತಿ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡೋದಾಗಿ ಕಳೆದ ಸೆಪ್ಟೆಂಬರ್‌ನಲ್ಲಿ ಘೋಷಿಸಿದ್ದರು. ಈ ಬೆನ್ನಲ್ಲೇ ಇದೀಗ ಗಾಯಕಿ ಕೆನಿಶಾ ಫ್ರಾನ್ಸಿಸ್ ಜೊತೆ ರವಿ ಮೋಹನ್ ಕಾಣಿಸಿಕೊಂಡಿದ್ದಾರೆ. ಅವರ ಫೋಟೋ ವೈರಲ್ ಆಗಿದ್ದು, ಇಬ್ಬರ ರಿಲೇಷನ್‌ಶಿಪ್ ವಿಚಾರ ಮುನ್ನೆಲೆಗೆ ಬಂದಿದೆ. ಇದನ್ನೂ ಓದಿ:ಆರ್ಮಿಗೆ ಸಂಬಂಧಿಸಿದ ವಿಡಿಯೋಗಳನ್ನು ಶೇರ್ ಮಾಡಬೇಡಿ: ರಾಜಮೌಳಿ ಮನವಿ

    ನಿರ್ಮಾಪಕ ಇಶಾರಿ ಗಣೇಶ್ ಅವರ ಮಗಳ ಮದುವೆಯಲ್ಲಿ ಕೆನಿಶಾ ಜೊತೆ ರವಿ ಮೋಹನ್ ಆಗಮಿಸಿದ್ದು, ಇಬ್ಬರೂ ಗೋಲ್ಡನ್ ಕಲರ್ ಉಡುಗೆಯಲ್ಲಿ ಮಿಂಚಿದ್ದಾರೆ. ಸಮಾರಂಭದಲ್ಲಿ ಕೆನಿಶಾ ಜೊತೆ ನಟ ಕ್ಲೋಸ್ ಆಗಿ ಇರುವ ವಿಡಿಯೋ ನೋಡಿ ಇಬ್ಬರ ನಡುವೆ ಪ್ರೀತಿ ಇದ್ಯಾ ಎಂದೆಲ್ಲಾ ಫ್ಯಾನ್ಸ್ ಕಾಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ:‘ಆಪರೇಷನ್ ಸಿಂಧೂರ’ ಟೈಟಲ್‌ಗೆ ಬೇಡಿಕೆ- ರಿಜಿಸ್ಟರ್ ಮಾಡಲು ಮುಗಿಬಿದ್ದ ನಿರ್ಮಾಪಕರು

    ಸದ್ಯ ಬೆಂಗಳೂರಿನ ಗಾಯಕಿ ಕೆನಿಶಾ ಜೊತೆ ರವಿ ಮೋಹನ್ ಕಾಣಿಸಿಕೊಂಡಿರೋದು ಡೇಟಿಂಗ್ ವದಂತಿಗೆ ಪುಷ್ಠಿ ನೀಡಿದೆ. ಈ ಹಿಂದೆಯೇ ಕೆನಿಶಾ ಜೊತೆ ರವಿ ಮೋಹನ್ ಹೆಸರು ಸದ್ದು ಮಾಡಿತ್ತು. ಆದರೆ ನಾವಿಬ್ಬರು ಫ್ರೆಂಡ್ಸ್ ಎಂದು ನಟ ಸ್ಪಷ್ಟನೆ ನೀಡಿದ್ದರು. ಆದರೀಗ ಮತ್ತೆ ಜೊತೆಯಾಗಿ ಕಾಣಿಸಿಕೊಂಡಿರೋದು ಗಾಸಿಪ್ ಪ್ರಿಯರ ಬಾಯಿಗೆ ಆಹಾರವಾಗಿದೆ.

    ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಆರತಿ ಜೊತೆಗಿನ ವೈವಾಹಿಕ ಜೀವನಕ್ಕೆ ಅಂತ್ಯ (Divorce) ಹಾಡೋದಾಗಿ ಘೋಷಿಸಿದ್ದರು. ಡಿವೋರ್ಸ್‌ಗೆ ನನ್ನ ಸಮ್ಮತಿ ಇಲ್ಲ ಎಂದು ಆರತಿ ಕಿಡಿಕಾರಿದ್ದರು. ಪ್ರಸ್ತುತ ಇಬ್ಬರ ಡಿವೋರ್ಸ್ ವಿಚಾರ ಕೋರ್ಟ್‌ದಲ್ಲಿದೆ.

  • ಜಯಂ ರವಿ ಈಗ ರವಿ ಮೋಹನ್- ಹೆಸರು ಬದಲಿಸಿಕೊಂಡು ಹೊಸ ಜರ್ನಿ ಶುರು ಮಾಡಿದ ನಟ

    ಜಯಂ ರವಿ ಈಗ ರವಿ ಮೋಹನ್- ಹೆಸರು ಬದಲಿಸಿಕೊಂಡು ಹೊಸ ಜರ್ನಿ ಶುರು ಮಾಡಿದ ನಟ

    ಮಿಳು ಚಿತ್ರರಂಗದ ಖ್ಯಾತ ನಟರಲ್ಲಿ ಒಬ್ಬರು ಜಯಂ ರವಿ. ವಿಭಿನ್ನ ಪಾತ್ರಗಳ ಮೂಲಕ ಗಮನಸೆಳೆದ ಅವರೀಗ ಹೆಸರು ಬದಲಿಸಿಕೊಂಡಿದ್ದಾರೆ. ಜಯಂ ರವಿ (Jayam Ravi) ಇನ್ಮುಂದೆ ರವಿ ಮೋಹನ್ (Ravi Mohan) ಆಗಿ ಬದಲಾಗಿದ್ದಾರೆ. ಹೊಸ ವರ್ಷಕ್ಕೆ ಅಭಿಮಾನಿಗಳಿಗೆ ಶುಭ ಕೋರುತ್ತಾ ತಾವು ಇಲ್ಲಿವರೆಗೆ ಜಯಂ ರವಿಗೆ ನೀಡಿದ ಬೆಂಬಲವನ್ನು ರವಿ ಮೋಹನ್ ಹೆಸರಿಗೂ ನೀಡಬೇಕು ಎಂದಿದ್ದಾರೆ. ಇದನ್ನೂ ಓದಿ:ಅನಯಾ ವಸುಧಾ ಜೊತೆ ಚಾರ್ಲಿ-777 ನಿರ್ದೇಶಕ ಕಿರಣ್ ರಾಜ್ ಎಂಗೇಜ್

    ಜಯಂ ರವಿ ಅವರು ರವಿ ಮೋಹನ್ ಆಗಿ ಹೆಸರು ಬದಲಾಯಿಸಿಕೊಳ್ಳುವುದರ ಜೊತೆಗೆ ಹೊಸ ಪಯಣ ಕೂಡ ಆರಂಭಿಸಿದ್ದಾರೆ. ‘ರವಿ ಮೋಹನ್ ಸ್ಟುಡಿಯೋಸ್’ ಎಂಬ ಹೆಸರಿನ ಪ್ರೊಡಕ್ಷನ್ ಹೌಸ್ ಪ್ರಾರಂಭಿಸಿದ್ದಾರೆ, ಈ ಸಂಸ್ಥೆಯಡಿ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿ ಒಳ್ಳೆಯ ಸಿನಿಮಾಗಳನ್ನು, ನಿರ್ದೇಶಕರು ಹಾಗೂ ಹೊಸ ನಾಯಕರನ್ನು ಚಿತ್ರರಂಗಕ್ಕೆ ಕೊಡುಗೆಯಾಗಿ ನೀಡುವುದಾಗಿ ರವಿ ಮೋಹನ್ ಘೋಷಣೆ ಮಾಡಿದ್ದಾರೆ.

     

    View this post on Instagram

     

    A post shared by Ravi Mohan (@jayamravi_official)

    ರವಿ ಮೋಹನ್ ತಮ್ಮನ್ನು ಇಲ್ಲಿವರೆಗೆ ಬೆಳೆಸಿದ ಹಾಗೂ ಬೆಂಬಲಿಸಿ ಅಭಿಮಾನಿಗಳಿಗೆ ಏನಾದರೂ ಮರಳಿ ಕೊಡಬೇಕೆಂಬ ತೀರ್ಮಾನಕ್ಕೆ ಬಂದಿದ್ದಾರೆ. ಅದಕ್ಕಾಗಿ ರವಿ ಮೋಹನ್ ಫ್ಯಾನ್ಸ್ ಕ್ಲಬ್ ಗಳು ರವಿ ಮೋಹನ್ ಫ್ಯಾನ್ಸ್ ಫೌಂಡೇಶನ್ ಎಂಬ ರಚನಾತ್ಮಕ ಸಂಸ್ಥೆಯಾಗಿ ಪರಿವರ್ತನೆಯಾಗಿವೆ. ಈ ಫೌಂಡೇಷನ್ ಮೂಲಕ ಅಗತ್ಯವಿರುವ ಎಲ್ಲರಿಗೂ ಸಹಾಯ ಮಾಡುವುದಾಗಿ ರವಿ ಮೋಹನ್ ತಿಳಿಸಿದ್ದಾರೆ.