Tag: ರಶೀದ್ ಅಲ್ವಿ

  • ಮುಸ್ಲಿಂ ವ್ಯಕ್ತಿಯೊಂದಿಗೆ ನಿಶ್ಚಯವಾಗಿದ್ದ ಮಗಳ ಮದುವೆ ಕ್ಯಾನ್ಸಲ್‌ ಮಾಡಿದ ಬಿಜೆಪಿ ನಾಯಕ

    ಮುಸ್ಲಿಂ ವ್ಯಕ್ತಿಯೊಂದಿಗೆ ನಿಶ್ಚಯವಾಗಿದ್ದ ಮಗಳ ಮದುವೆ ಕ್ಯಾನ್ಸಲ್‌ ಮಾಡಿದ ಬಿಜೆಪಿ ನಾಯಕ

    ನವದೆಹಲಿ: ಮುಸ್ಲಿಂ ವ್ಯಕ್ತಿಯೊಂದಿಗೆ ಬಿಜೆಪಿ ನಾಯಕನ ಮಗಳ ಮದುವೆ ವಿಚಾರ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವಿವಾದದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ, ಎರಡೂ ಕುಟುಂಬಗಳು ಪರಸ್ಪರ ಒಪ್ಪಿಗೆ ಮೇರೆಗೆ ಮದುವೆ ರದ್ದುಗೊಳಿಸಿಕೊಂಡಿವೆ.

    ಬಿಜೆಪಿ ನಾಯಕ ಯಶ್ಪಾಲ್ ಬೇನಾಂ ಅವರು ಮುಸ್ಲಿಂ ವ್ಯಕ್ತಿಯೊಂದಿಗೆ ತಮ್ಮ ಮಗಳ ಮದುವೆಯನ್ನು ರದ್ದುಗೊಳಿಸಿದ್ದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಶೀದ್ ಅಲ್ವಿ, “ಅದು ಅವರ ವೈಯಕ್ತಿಕ ವಿಚಾರ. ಆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವಂತಿಲ್ಲ. ಪರಸ್ಪರ ಒಪ್ಪಿಗೆಯಿಂದಲೇ ಮದುವೆ ನಿಶ್ಚಯಿಸಲಾಗಿತ್ತು. ಅದರಲ್ಲಿ ತಪ್ಪೇನಿತ್ತು” ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: 2 ಸಾವಿರ ರೂ. ನೋಟು ಮೋದಿಗೆ ಇಷ್ಟವಿರಲಿಲ್ಲ – ಸಭೆಯ ಮಾಹಿತಿ ರಿವೀಲ್‌ ಮಾಡಿದ ನೃಪೇಂದ್ರ ಮಿಶ್ರಾ

    ಮದುವೆಯ ಆಮಂತ್ರಣ ಪತ್ರಿಕೆಯ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾದ ನಂತರ ಬಿಜೆಪಿ ನಾಯಕ ಬೇನಾಮ್ ಅವರು ಶನಿವಾರ ಉತ್ತರಾಖಂಡದ ಪೌರಿ ಗಡ್ವಾಲ್‌ನಲ್ಲಿ ಮುಸ್ಲಿಂ ವ್ಯಕ್ತಿಯೊಂದಿಗೆ ತಮ್ಮ ಮಗಳ ಮದುವೆಯನ್ನು ವರನ ಕುಟುಂಬದೊಂದಿಗೆ “ಪರಸ್ಪರ ಒಪ್ಪಿಗೆ” ಯೊಂದಿಗೆ ರದ್ದುಗೊಳಿಸಿದ್ದಾರೆ.

    ಬಿಜೆಪಿ ಮುಖಂಡರ ಮಗಳ ಮದುವೆ ಮೇ 28ರಂದು ನಡೆಯಬೇಕಿತ್ತು. ಮದುವೆಯನ್ನು ರದ್ದುಗೊಳಿಸಲಾಗಿದೆ ಎಂದು ಬಿಜೆಪಿ ನಾಯಕ ಶನಿವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ರಾಜಸ್ಥಾನ ಸರ್ಕಾರಿ ಕಟ್ಟಡದಲ್ಲಿ 2.1 ಕೋಟಿ ರೂ. ಹಣ, 1 ಕೆಜಿ ಚಿನ್ನ ಪತ್ತೆ

    ಸಾರ್ವಜನಿಕ ಪ್ರತಿನಿಧಿಯಾಗಿರುವ ನನಗೆ ನನ್ನ ಮಗಳ ಮದುವೆ ಪೊಲೀಸ್ ಮತ್ತು ಆಡಳಿತದ ರಕ್ಷಣೆಯಲ್ಲಿ ನಡೆಯುವುದು ಇಷ್ಟವಿರಲಿಲ್ಲ. ನಾನು ಸಾರ್ವಜನಿಕ ಭಾವನೆಗಳನ್ನು ಗೌರವಿಸುತ್ತೇನೆ ಎಂದು ಬಿಜೆಪಿ ನಾಯಕ ಸ್ಪಷ್ಟಪಡಿಸಿದ್ದಾರೆ.

    ನನ್ನ ಮಗಳು ಮುಸ್ಲಿಂ ಯುವಕನನ್ನು ಮದುವೆಯಾಗಲು ಇಷ್ಟ ಪಟ್ಟಿದ್ದಳು. ಮಕ್ಕಳ ಸಂತೋಷ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಎರಡೂ ಕುಟುಂಬಗಳು ಅವರಿಗೆ ಮದುವೆ ಮಾಡಲು ನಿರ್ಧರಿಸಿದ್ದೆವು. ಅದಕ್ಕಾಗಿ ಕಾರ್ಡ್‌ಗಳನ್ನು ಸಹ ಮುದ್ರಿಸಿ ಹಂಚಿಕೊಳ್ಳಲಾಗಿತ್ತು. ಆದರೆ ಮದುವೆಯ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಮದುವೆಗೆ ಹಲವು ರೀತಿಯ ಆಕ್ಷೇಪಗಳು ಬಂದಿವೆ. ಅದಕ್ಕಾಗಿ ಎರಡೂ ಕುಟುಂಬಗಳು ಪರಸ್ಪರ ಒಪ್ಪಿಗೆ ಮೇರೆಗೆ ಮದುವೆ ರದ್ದುಗೊಳಿಸಿದ್ದೇವೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ಇದನ್ನೂ ಓದಿ: MIG-21 ಫೈಟರ್‌ ಜೆಟ್‌ ಹಾರಾಟ ಬಂದ್ – IAF ಮಹತ್ವದ ನಿರ್ಧಾರ

  • ಜೈ ಶ್ರೀರಾಮ್ ಅನ್ನೋರು ರಾಕ್ಷಸರು: ರಶೀದ್ ಅಲ್ವಿ

    ಜೈ ಶ್ರೀರಾಮ್ ಅನ್ನೋರು ರಾಕ್ಷಸರು: ರಶೀದ್ ಅಲ್ವಿ

    ನವದೆಹಲಿ: ರಾಮರಾಜ್ಯ, ಜೈ ಶ್ರೀರಾಮ್ ಘೋಷಣೆ ಕೂಗುವವರು ರಾಕ್ಷಸರು ಎಂದು ಕಾಂಗ್ರೆಸ್ ನಾಯಕ ರಶೀದ್ ಅಲ್ವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಉತ್ತರಪ್ರದೇಶದ ಸಂಭಾಲ್ ಜಿಲ್ಲೆಯ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದ ರಶೀದ್ ಅಲ್ವಿ, ಈ ದೇಶದಲ್ಲಿ ರಾಮರಾಜ್ಯ ಆಗಬೇಕು ಎನ್ನುವುದು ನಮಗೂ ಇದೆ. ಮೇಕೆಗಳು ಮತ್ತು ಸಿಂಹಗಳು ನೀರು ಕುಡಿಯುವ ರಾಜ್ಯದಲ್ಲಿ ದ್ವೇಷ ಹೇಗೆ ಉಂಟಾಗುತ್ತದೆ? ಈ ದೇಶದಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗುವ ಮೂಲಕಜನರನ್ನು ದಾರಿ ತಪ್ಪಿಸುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದಿದ್ದಾರೆ. ಇದನ್ನೂ ಓದಿ  ದೇಶ ವಿಭಜನೆಗೆ ಅಂದಿನ ಕಾಂಗ್ರೆಸ್ ನಾಯಕರೇ ಕಾರಣ: ಓವೈಸಿ

    ರಾಮರಾಜ್ಯ ಇದೆ ಎಂದು ಹೇಳುತ್ತೇವೆ. ಆದರೆ ರಾಮರಾಜ್ಯ ಹೇಗೆ ಇರಬೇಕು? ಜೈ ಶ್ರೀರಾಮ್ ಎಂದು ಘೋಷಣೆ ಕೂಗುವವರು ರಾಮಾಯಣದ ಕಾಲನೇಮಿ ರಾಕ್ಷಸರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಅಲ್ವಿ ಹೇಳಿಕೆಯ ವೀಡಿಯೋವನ್ನು ಟ್ವೀಟ್ ಮಾಡಿರುವ ಬಿಜೆಪಿ ವಕ್ತಾರ ಅಮಿತ್ ಮಾಳವಿಯಾ, ಸಲ್ಮಾನ್ ಖುರ್ಷಿದ್ ನಂತರ ಕಾಂಗ್ರೆಸ್ ನಾಯಕ ರಶೀದ್ ಅಲ್ವಿ ಜೈ ಶ್ರೀರಾಮ್ ಹೇಳುವವರನ್ನು ನಿಶಾಚರರು ಎಂದು ಕರೆಯುತ್ತಾರೆ. ಭಕ್ತರ ಬಗ್ಗೆ ಕಾಂಗ್ರೆಸ್ಸಿನ ಚಿಂತನೆಗಳಲ್ಲಿ ಎಷು ವಿಷ ಬೆರೆತಿದೆ ಎಂದು ಆಕ್ರೋಶವನ್ನು ಸೋಶಿಯಲ್ ಮೀಡಿಯಾದಲ್ಲಿ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪೇಂಟಿಂಗ್‌ ಕೆಲಸಕ್ಕೆ ಬಂದು ಬೀಗ ಹಾಕಿದ ಮನೆಗಳಲ್ಲಿ ಕಳ್ಳತನ- ಖತರ್ನಾಕ್‌ ಕಳ್ಳ ಅಂದರ್‌!