Tag: ರಷ್ಯಾ

  • ಉಕ್ರೇನ್ ಗಡಿಯಲ್ಲಿ ರೈಲ್ವೆ ಬ್ರಿಡ್ಜ್ ಕುಸಿತ – ಹಳಿ ತಪ್ಪಿ 7 ಮಂದಿ ಸಾವು, 30 ಜನಕ್ಕೆ ಗಾಯ

    ಉಕ್ರೇನ್ ಗಡಿಯಲ್ಲಿ ರೈಲ್ವೆ ಬ್ರಿಡ್ಜ್ ಕುಸಿತ – ಹಳಿ ತಪ್ಪಿ 7 ಮಂದಿ ಸಾವು, 30 ಜನಕ್ಕೆ ಗಾಯ

    ಮಾಸ್ಕೋ: ರಷ್ಯಾದ (Russia) ಪಶ್ಚಿಮ ಬ್ರಿಯಾನ್ಸ್ಕ್‌ ಪ್ರದೇಶದಲ್ಲಿ ಶನಿವಾರ ತಡರಾತ್ರಿ ರೈಲು ಸೇತುವೆ ಕುಸಿದ (Bridge Collapse) ಪರಿಣಾಮ ರೈಲು ಹಳಿ ತಪ್ಪಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದು, 30 ಜನರು ಗಾಯಗೊಂಡಿದ್ದಾರೆ ಎಂದು ರಷ್ಯಾದ ಅಧಿಕಾರಿಗಳು ತಿಳಿಸಿದ್ದಾರೆ.

    ಸಾರಿಗೆ ಕಾರ್ಯಾಚರಣೆಗಳ ಮೇಲಿನ ಅಕ್ರಮ ದಾಳಿಯಿಂದ ಉಕ್ರೇನ್ (Ukraine) ಗಡಿ ಭಾಗಗಲ್ಲಿರುವ ರೈಲ್ವೆ ಬ್ರಿಡ್ಜ್ ಕುಸಿದು ಬಿದ್ದಿದೆ. ಕ್ಲಿಮೊವೊದಿಂದ ಮಾಸ್ಕೋಗೆ ರೈಲು ಬರುತ್ತಿದ್ದಾಗ ಈ ಸೇತುವೆ ಕುಸಿದಿದೆ. ಪರಿಣಾಮ ರೈಲು ಹಳಿ ತಪ್ಪಿ ದುರಂತ ಸಂಭವಿಸಿದೆ ಎಂದು ರಷ್ಯಾದ ರೈಲ್ವೆ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

    ಸೇತುವೆ ಕುಸಿದ ನಂತರ ಪಶ್ಚಿಮ ರಷ್ಯಾದಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಶನಿವಾರ ರಾತ್ರಿ 10.40ರ ಸುಮಾರಿಗೆ ರೈಲ್ವೆ ಬ್ರಿಡ್ಜ್ ಕುಸಿದು 7 ಮಂದಿ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ತುರ್ತು ರಕ್ಷಣಾ ಕಾರ್ಯಾಚರಣೆ ಮಾಡಲಾಗುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ ಎಂದು ರಷ್ಯಾ ಕೇಂದ್ರ ಸಚಿವಾಲಯ ಮಾಹಿತಿ ನೀಡಿದೆ. ಇದನ್ನೂ ಓದಿ: Miss World | ಥಾಯ್ಲೆಂಡ್‌ನ ಒಪಾಲ್ ಸುಚಾತಾಗೆ 72ನೇ ವಿಶ್ವ ಸುಂದರಿ ಕಿರೀಟ

    3 ವರ್ಷಗಳ ಹಿಂದೆ ರಷ್ಯಾ, ಉಕ್ರೇನ್ ಮೇಲೆ ಯುದ್ಧ ಆರಂಭವಾದಾಗಿನಿಂದ ಬ್ರಿಯಾನ್ಸ್ಕ್‌ ಸೇರಿದಂತೆ ಗಡಿ ಪ್ರದೇಶಗಳಲ್ಲಿ ಪದೇ ಪದೇ ಉಕ್ರೇನ್, ಡ್ರೋನ್ ದಾಳಿಗಳು, ಶೆಲ್ ದಾಳಿಯನ್ನು ನಡೆಸುತ್ತಲೇ ಬಂದಿದೆ. ಇದನ್ನೂ ಓದಿ: ಗೈಡೆಡ್ ಟೂರ್ ಶುರು – ಇಂದಿನಿಂದ ವಿಧಾನಸೌಧ ವೀಕ್ಷಣೆಗೆ ಮುಕ್ತ ಅವಕಾಶ; ಯಾರಿಗೆ ಉಚಿತ, ಯಾರಿಗೆ ಟಿಕೆಟ್‌ ಖಚಿತ?

    ಕದನ ವಿರಾಮಕ್ಕೆ ಟ್ರಂಪ್ ಒತ್ತಾಯ
    ರಷ್ಯಾ ಹಾಗೂ ಉಕ್ರೇನ್ ಎರಡೂ ದೇಶಗಳು ಕದನ ವಿರಾಮ ಮಾಡುವಂತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಒತ್ತಾಯಿಸುತ್ತಿದ್ದಾರೆ. ಈ ಹಿಂದೆ ಹಲವು ಬಾರಿ ಎರಡೂ ದೇಶಗಳ ನಡುವೆ ನಡೆದ ಶಾಂತಿ ಒಪ್ಪಂದ ವಿಫಲವಾಗಿತ್ತು. ಮುಂದಿನ ವಾರ ಇಸ್ತಾನ್‌ಬುಲ್‌ನಲ್ಲಿ ಉಕ್ರೇನ್ ಅಧಿಕಾರಿಗಳೊಂದಿಗೆ ಎರಡನೇ ಸುತ್ತಿನ ವೈಯಕ್ತಿಕ ಮಾತುಕತೆ ನಡೆಸಲು ಮುಂದಾಗಿರುವುದನ್ನು ರಷ್ಯಾ ತಿಳಿಸಿದೆ.

  • ಪುಟಿನ್ ಹೆಲಿಕಾಪ್ಟರ್ ಗುರಿಯಾಗಿಸಿ ಉಕ್ರೇನ್ ಡ್ರೋನ್ ದಾಳಿ – ರಷ್ಯಾದ ಕಮಾಂಡರ್‌ಗೆ ಗಾಯ

    ಪುಟಿನ್ ಹೆಲಿಕಾಪ್ಟರ್ ಗುರಿಯಾಗಿಸಿ ಉಕ್ರೇನ್ ಡ್ರೋನ್ ದಾಳಿ – ರಷ್ಯಾದ ಕಮಾಂಡರ್‌ಗೆ ಗಾಯ

    ಮಾಸ್ಕೋ: ಉಕ್ರೇನ್ ಡ್ರೋನ್ ದಾಳಿಯೊಂದಕ್ಕೆ (Ukraine Drone Attack) ರಷ್ಯಾದ ಉನ್ನತ ಕಮಾಂಡರ್‌ರೊಬ್ಬರು ಗಾಯಗೊಂಡಿದ್ದಾರೆ. ಆದರೆ ಈ ದಾಳಿಯ ಕೇಂದ್ರ ಬಿಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಆಗಿತ್ತು ಎಂದು ವಾಯು ರಕ್ಷಣಾ ವಿಭಾಗದ ಕಮಾಂಡರ್ ಯೂರಿ ಡ್ಯಾಶ್ಕಿನ್ ಆರೋಪ ಮಾಡಿದ್ದಾರೆ. ಈ ಘಟನೆ ರಷ್ಯಾ-ಉಕ್ರೇನ್ ಸಂಘರ್ಷದಲ್ಲಿ ಹೊಸ ತಿರುವು ನೀಡಿದೆ.

    ಭಾನುವಾರ ರಾತ್ರಿ ರಷ್ಯಾದ ಗಡಿಯ ಸಮೀಪದಲ್ಲಿ ನಡೆದ ಈ ದಾಳಿಯಲ್ಲಿ ಉಕ್ರೇನ್ ಡ್ರೋನ್‌ಗಳು ರಷ್ಯಾದ ಸೇನಾ ಹೆಲಿಕಾಪ್ಟರ್‌ವೊಂದನ್ನು ಗುರಿಯಾಗಿಸಿವೆ. ಈ ಹೆಲಿಕಾಪ್ಟರ್‌ನಲ್ಲಿ ಪುಟಿನ್ ಆಪ್ತ ಕಮಾಂಡರ್ ಇದ್ದರು ಎಂದು ತಿಳಿದುಬಂದಿದೆ. ದಾಳಿಯಿಂದ ಕಮಾಂಡರ್ ಗಾಯಗೊಂಡಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ರಷ್ಯಾದ ಅಧಿಕಾರಿಗಳು ದೃಢಪಡಿಸಿದ್ದಾರೆ. ಇದನ್ನೂ ಓದಿ: ಸರ್ಕಾರದ ಮೇಲೆ ಸುಳ್ಳು ಆರೋಪ – ಅದಕ್ಕೆ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್: ಹೆಚ್.ಕೆ ಪಾಟೀಲ್

    ಈ ದಾಳಿಯನ್ನು ಉಕ್ರೇನ್ ಸೇನೆಯ ವಿಶೇಷ ಡ್ರೋನ್ ತಂಡವು ಯೋಜಿಸಿತ್ತು. ಇದು ರಷ್ಯಾದ ಸೇನಾ ಚಟುವಟಿಕೆಗಳಿಗೆ ತಕ್ಕ ಪ್ರತಿಕ್ರಿಯೆ ಎಂದು ಉಕ್ರೇನ್‌ನ ಸೇನಾ ವಕ್ತಾರರೊಬ್ಬರು ಹೇಳಿದ್ದಾರೆ. ರಷ್ಯಾದ ಕ್ರೆಮ್ಲಿನ್ ಈ ದಾಳಿಯನ್ನು ಖಂಡಿಸಿದ್ದು, ಉಕ್ರೇನ್‌ನ ಈ ಕೃತ್ಯಕ್ಕೆ ತಕ್ಕ ಉತ್ತರ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದೆ. ಈ ಘಟನೆಯಿಂದ ಎರಡೂ ರಾಷ್ಟ್ರಗಳ ನಡುವಿನ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದೆ. ಇದನ್ನೂ ಓದಿ: ಒಂದು ವಾರದಲ್ಲಿ ದೇಶದಲ್ಲಿ 752 ಮಂದಿಗೆ ಕೊರೊನಾ ಸೋಂಕು – ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣ

    ಭಾನುವಾರ ಉಕ್ರೇನ್ ವಿರುದ್ಧ ರಷ್ಯಾ ಮಾರಣಾಂತಿಕ ಡ್ರೋನ್ ದಾಳಿ ನಡೆಸಿದ ನಂತರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೆರಳಿ ಕೆಂಡವಾಗಿದ್ದಾರೆ. ಯುದ್ಧ ಪೀಡಿತ ಉಭಯ ರಾಷ್ಟ್ರಗಳು ದೊಡ್ಡ ಪ್ರಮಾಣದ ಕೈದಿಗಳ ವಿನಿಮಯ ಪೂರ್ಣಗೊಳಿಸಿದರೂ ರಷ್ಯಾ ಮತ್ತೆ ಡ್ರೋನ್ ದಾಳಿ ನಡೆಸಿ ಹಲವರ ಸಾವಿಗೆ ಕಾರಣವಾಗಿರುವುದಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ‘ಕ್ರೇಜಿ’ (ಹುಚ್ಚ) ಎಂದು ಟ್ರಂಪ್ ಕರೆದಿದ್ದಾರೆ. ಭಾನುವಾರ ರಾತ್ರಿ ಉಕ್ರೇನ್ ವಿರುದ್ಧ ರಷ್ಯಾ ಬೃಹತ್ ಡ್ರೋನ್ ದಾಳಿ ನಡೆಸಿದ್ದರಿಂದ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಸದ್ಯದಲ್ಲೇ ರಾಜನಾಥ್ ಭೇಟಿ, ಡಿಫೆನ್ಸ್ ಕಾರಿಡಾರ್‌ಗೆ ಪಟ್ಟು: ಎಂಬಿಪಿ

    ವ್ಲಾಡಿಮಿರ್ ಪುಟಿನ್ ಅವರೊಂದಿಗೆ ತಾಳ್ಮೆ ಕಳೆದುಕೊಳ್ಳುತ್ತಿರುವುದಾಗಿ ಟ್ರಂಪ್ ಸ್ಪಷ್ಟಪಡಿಸಿದ್ದು, ರಷ್ಯಾದ ನಾಯಕನ ವಿರುದ್ಧ ತೀಕ್ಷ್ಣವಾಗಿ ಟೀಕೆಗಳನ್ನು ಮಾಡಿದ್ದಾರೆ. ಪುಟಿನ್ ಜೊತೆಗೆ ಯಾವಾಗಲೂ ಉತ್ತಮ ಸಂಬಂಧ ಹೊಂದಿದ್ದೇನೆ. ಆದರೆ ಅವರಿಗೆ ಏನೋ ಆಗಿದೆ. ಅವರು ಸಂಪೂರ್ಣವಾಗಿ ಹುಚ್ಚರಾಗಿದ್ದಾರೆ ಎಂದು ಟ್ರಂಪ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ  ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಸ್ವಚ್ಛವಾಹಿನಿ ಚಾಲಕಿಯರ ವೇತನ, ಸೌಲಭ್ಯಗಳ ನಿರ್ವಹಣೆಗೆ ಪ್ರತ್ಯೇಕ ಅಧಿಕಾರಿ: ಪ್ರಿಯಾಂಕ್ ಖರ್ಗೆ

  • ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿ; ಭಾರತದ ನಿಲುವು ಸ್ಪಷ್ಟಪಡಿಸಿದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ

    ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿ; ಭಾರತದ ನಿಲುವು ಸ್ಪಷ್ಟಪಡಿಸಿದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ

    ರಷ್ಯಾ: ಭಯೋತ್ಪಾದನೆ ಬೆಂಬಲಿಸುತ್ತಿರುವ ಪಾಕಿಸ್ತಾನದ (Pakistan) ನಿಜ ಬಣ್ಣ ಬಯಲು ಮಾಡಲು ರಷ್ಯಾಕ್ಕೆ ತೆರಳಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ (Capt. Brijesh Chowta) ಅವರನ್ನು ಒಳಗೊಂಡ ಸಂಸದೆ ಕನಿಮೋಳ್ ನೇತೃತ್ವದ ಸರ್ವಪಕ್ಷಗಳ ನಿಯೋಗವು (All Party Delegations) ಇಂದು ಹಲವು ಕಡೆ ಉನ್ನತ ಮಟ್ಟದ ಸಭೆ, ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದೆ.

    ರಷ್ಯಾಕ್ಕೆ (Russia) ಆಗಮಿಸಿದ ಐವರು ಸಂಸದರನ್ನು ಒಳಗೊಂಡ ಈ ನಿಯೋಗವನ್ನು ಅಲ್ಲಿನ ಭಾರತೀಯ ರಾಯಭಾರಿ ಅಧಿಕಾರಿಗಳು ಬರಮಾಡಿಕೊಂಡಿದ್ದರು. ನಂತರ ರಷ್ಯಾದಲ್ಲಿನ ಭಾರತದ ರಾಯಭಾರಿ ವಿನಯ್ ಕುಮಾರ್ ಅವರು ಸರ್ವಪಕ್ಷ ಸಂಸದೀಯ ನಿಯೋಗದ ಜೊತೆಗೆ ಭಾರತ-ರಷ್ಯಾ ಸಂಬಂಧಗಳ ವಿವಿಧ ಅಂಶಗಳ ಕುರಿತು ಸಮಗ್ರ ಮಾಹಿತಿ ಹಂಚಿಕೊಂಡರು.ಇದನ್ನೂ ಓದಿ:ತಾಳಿ ಕಟ್ಟುವಾಗಲೇ ಮದುವೆ ಬೇಡವೆಂದ ವಧು ತಾನು ಪ್ರೀತಿಸಿದ ಯುವಕನ ಜೊತೆ ವಿವಾಹ

    ಇದಾದ ಬಳಿಕ ಸರ್ವಪಕ್ಷಗಳ ನಿಯೋಗವು ಮೊದಲು ರಷ್ಯಾದ ಫೆಡರೇಶನ್ ಕೌನ್ಸಿಲ್‌ನ ಅಂತಾರಾಷ್ಟ್ರೀಯ ವ್ಯವಹಾರಗಳ ಸಮಿತಿ ಉಪಾಧ್ಯಕ್ಷ ಆಂಡ್ರೆ ಡೆನಿಸೋವ್ ಮತ್ತು ಇತರ ಸೆನೆಟರ್‌ಗಳೊಂದಿಗೆ ಸಭೆ ನಡೆಸಿದರು. ಈ ಮೂಲಕ ಭಯೋತ್ಪಾದನೆ ಹಾಗೂ ಪಾಕಿಸ್ತಾನ ಬೆಂಬಲಿತ ಭಯೋತ್ಪಾದನೆ ವಿರುದ್ಧದ ಭಾರತದ ದಿಟ್ಟ ಹೋರಾಟದ ಬಗ್ಗೆ ಮನವರಿಕೆ ಮಾಡಿಕೊಟ್ಟಿದೆ. ಜೊತೆಗೆ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ್ದ ಆ ಭೀಕರ ದಾಳಿ ಹಾಗೂ ಅದಕ್ಕೆ ಭಾರತವು ಪಾಕಿಸ್ತಾನಕ್ಕೆ ತಿರುಗೇಟು ಕೊಟ್ಟ `ಆಪರೇಷನ್ ಸಿಂಧೂರ’ದ ಯಶಸ್ವಿನ ಬಗ್ಗೆಯೂ ತಿಳಿಸಿದೆ. ಅಲ್ಲದೆ ಭಯೋತ್ಪಾದನೆ ವಿರುದ್ಧದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೀಡಿರುವ ಸ್ಪಷ್ಟ ಸಂದೇಶ ಏನು ಎಂಬುದನ್ನು ಕೂಡ ವಿವರಿಸಿದ್ದಾರೆ.

    ಬಳಿಕ ಶುಕ್ರವಾರ ಮಧ್ಯಾಹ್ನ ಭಾರತದ ನಿಯೋಗವು ಸ್ಟೇಟ್ ಡುಮಾಕ್ಕೆ ಭೇಟಿ ನೀಡಿದ್ದು, ಅಲ್ಲಿ ಅಂತಾರಾಷ್ಟ್ರೀಯ ವ್ಯವಹಾರಗಳಿಗೆ ಸಂಬಂಧಿಸಿದ ಸಮಿತಿಯ ಅಧ್ಯಕ್ಷ ಲಿಯೋನಿಡ್ ಸ್ಲಟ್ಸ್ಕಿ ಹಾಗೂ ಸದಸ್ಯರನ್ನು ಭೇಟಿ ಮಾಡಿ ಮಹತ್ವದ ಸಭೆ ನಡೆಸಿದ್ದಾರೆ. ಈ ಭೇಟಿಯ ನಂತರ ಸರ್ವಪಕ್ಷಗಳ ನಿಯೋಗವು ರಷ್ಯಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಉಪವಿದೇಶಾಂಗ ಸಚಿವ ಆಂಡ್ರಿ ರುಡೆನ್ಕೊ ಅವರನ್ನು ಭೇಟಿ ಮಾಡಿ, ಪಾಕಿಸ್ತಾನವು ಹಲವು ದಶಕಗಳಿಂದ ಯಾವ ರೀತಿ ಭಯೋತ್ಪಾದನೆಯನ್ನು ಸೃಷ್ಟಿಸಿ ಉಗ್ರರನ್ನು ಪೋಷಿಸುತ್ತಿದೆ ಎಂಬುದನ್ನು ಸವಿವರವಾಗಿ ಮನವರಿಕೆ ಮಾಡಿಕೊಟ್ಟಿದೆ. ಇದಾದ ಬಳಿಕ ಸಂಸದರ ನಿಯೋಗವು ರಷ್ಯನ್ ಇನ್‌ಸ್ಟಿಟ್ಯೂಟ್ ಆಫ್ ಸ್ಟ್ರಾಟೆಜಿಕ್ ಸ್ಟಡೀಸ್‌ನ ಮಿಖೈಲ್ ಫ್ರೆಡ್ಕೋವ್ ಅವರನ್ನು ಭೇಟಿ ಮಾಡಿ, ಭಯೋತ್ಪಾದನೆ ವಿರುದ್ಧ ಭಾರತದ ನಿಲುವುಗಳ ಬಗ್ಗೆ ವಿಚಾರ ವಿನಿಮಯ ಮಾಡಿದೆ.

    ರಷ್ಯಾದ ಮಹತ್ವದ ವೇದಿಕೆಗಳಲ್ಲಿ ಭಯೋತ್ಪಾದನೆ ಹಾಗೂ ಪಾಕಿಸ್ತಾನ ಸೃಷ್ಟಿಸುತ್ತಿರುವ ಉಗ್ರರನ್ನು ಮಟ್ಟ ಹಾಕುವ ಹೋರಾಟದಲ್ಲಿ ವಿಶ್ವ ಸಮುದಾಯಗಳು ಒಂದಾಗಬೇಕು ಎನ್ನುವ ಕೋರಿಕೆಯನ್ನು ಭಾರತವು ರಷ್ಯಾದ ಎಲ್ಲ ವೇದಿಕೆಗಳ ಮುಂದಿಟ್ಟಿದೆ. ಇದಕ್ಕೆ ಪೂರಕವಾಗಿ ರಷ್ಯಾದ ಹಲವು ಚಿಂತಕರು ಹಾಗೂ ವಿವಿಧ ಕ್ಷೇತ್ರಗಳ ಪರಿಣಿತರನ್ನು ಭೇಟಿ ಮಾಡಿ, ಚರ್ಚೆ ನಡೆಸಿದೆ.

    ಶನಿವಾರದಂದು ಸರ್ವಪಕ್ಷಗಳ ನಿಯೋಗವು ಮಾಸ್ಕೋದಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಲಿದ್ದು, ಬಳಿಕ ಸ್ಲೊವೇನಿಯಾ ದೇಶದತ್ತ ಪ್ರಯಾಣಿಸಲಿದೆ.ಇದನ್ನೂ ಓದಿ:ಅಭಿಷೇಕ್‌ ಶರ್ಮಾ ಹೊಡೆದ ಸಿಕ್ಸ್‌ಗೆ ಕಾರಿನ ಗ್ಲಾಸ್‌ ಪುಡಿ.. ಪುಡಿ.. – 5 ಲಕ್ಷ ನಷ್ಟ

  • Operation Sindoor – 1 ಬ್ರಹ್ಮೋಸ್‌ ಕ್ಷಿಪಣಿಯ ದರ ಎಷ್ಟು? ಸ್ಪೀಡ್‌ ಎಷ್ಟಿರುತ್ತೆ?

    Operation Sindoor – 1 ಬ್ರಹ್ಮೋಸ್‌ ಕ್ಷಿಪಣಿಯ ದರ ಎಷ್ಟು? ಸ್ಪೀಡ್‌ ಎಷ್ಟಿರುತ್ತೆ?

    – 1998 ರಲ್ಲಿ ಭಾರತ – ರಷ್ಯಾ ಜಂಟಿ ಹೂಡಿಕೆಯಲ್ಲಿ ಕಂಪನಿ ಆರಂಭ
    – ಪಾಕ್‌ ಉಗ್ರರ ನೆಲೆಗಳ ಮೇಲೆ ನಿಖರ ದಾಳಿ

    ನವದೆಹಲಿ: ಆಪರೇಷನ್‌ ಸಿಂಧೂರ (Operation Sindoor) ಕಾರ್ಯಾಚರಣೆಯ ಬಳಿಕ ಭಾರತ (India) ಮತ್ತು ರಷ್ಯಾ (Russia) ಜಂಟಿಯಾಗಿ ಉತ್ಪಾದನೆ ಮಾಡಿದ ಬ್ರಹ್ಮೋಸ್‌ ಕ್ಷಿಪಣಿ (BrahMos Missile) ಖರೀದಿಗೆ ಹಲವು ದೇಶಗಳು ಈಗ ಆಸಕ್ತಿ ತೋರಿಸಿವೆ.

    ಹಲವು ದೇಶಗಳು ಕ್ಷಿಪಣಿ ಖರೀದಿಗೆ ಆಸಕ್ತಿ ತೋರಿಸಲು ಕಾರಣವೂ ಇದೆ. ಬ್ರಹ್ಮೋಸ್‌ ಚೀನಾದ HQ-9 ವಾಯು ರಕ್ಷಣಾ ವ್ಯವಸ್ಥೆಗೂ ಕಾಣದಂತೆ ಪಾಕ್‌ ಒಳಗಡೆ ನುಗ್ಗಿ ಉಗ್ರರ ನೆಲೆಗಳನ್ನು ಧ್ವಂಸ ಮಾಡಿತ್ತು. ಕಡಿಮೆ ಬೆಲೆಯಲ್ಲಿ ನಿಖರ ದಾಳಿ ನಡೆಸಿದ್ದಕ್ಕೆ ಈಗ ಸುಮಾರು 18 ದೇಶಗಳು ಬ್ರಹ್ಮೋಸ್‌ ಕ್ಷಿಪಣಿ ಖರೀದಿಗೆ ಆಸಕ್ತಿ ತೋರಿಸಿವೆ.

    250 ಮಿಲಿಯನ್ ಡಾಲರ್‌ (ಇಂದಿನ ಮೌಲ್ಯದಲ್ಲಿ ಹೇಳುವುದಾದರೆ 2,135 ಕೋಟಿ ರೂ.) ಹೂಡಿಕೆಯೊಂದಿಗೆ 1998ರಲ್ಲಿ ಬ್ರಹ್ಮೋಸ್‌ ಕ್ಷಿಪಣಿ ತಯಾರಿಸುವ ಕಂಪನಿ ಆರಂಭವಾಯಿತು. ಬ್ರಹ್ಮೋಸ್ ಕ್ಷಿಪಣಿಯ ಅಭಿವೃದ್ಧಿಯ ವೆಚ್ಚ ಅಧಿಕೃತವಾಗಿ ಎಲ್ಲಿಯೂ ಪ್ರಕಟವಾಗಿಲ್ಲ. ಆದರೆ ಮಾಧ್ಯಮ ವರದಿಗಳ ಪ್ರಕಾರ, ಬ್ರಹ್ಮೋಸ್‌ ಉತ್ಪಾದನಾ ಘಟಕವನ್ನು ಅಭಿವೃದ್ಧಿಪಡಿಸಲು 300 ಕೋಟಿ ರೂ.ವೆಚ್ಚ ಆಗಲಿದ್ದು ಪ್ರತಿ ಕ್ಷಿಪಣಿಗೆ ಮಾರುಕಟ್ಟೆ ಮೌಲ್ಯದಲ್ಲಿ ಸುಮಾರು 34 ಕೋಟಿ ರೂ. ವೆಚ್ಚವಾಗುತ್ತದೆ ಎಂದು ವರದಿಯಾಗಿದೆ.

    ವೇಗ ಎಷ್ಟು?
    ಎಷ್ಟು ವೇಗದಲ್ಲಿ ಹೋಗುತ್ತದೆ ಅಂದರೆ ಮ್ಯಾಕ್ 2.8 ರಿಂದ ಮ್ಯಾಕ್ 3.5 ವೇಗದಲ್ಲಿ ಸಂಚರಿಸುತ್ತದೆ. ಕ್ಷಿಪಣಿಗಳು ಶಬ್ದದ ವೇಗಕ್ಕಿಂತಲೂ ವೇಗವಾಗಿ ಹೋಗುವುದರಿಂದ ಅದರ ವೇಗವನ್ನು ಅಳೆಯಲು ಮ್ಯಾಕ್‌ ಸಂಖ್ಯೆಗಳನ್ನು ಬಳಸಲಾಗುತ್ತದೆ. ಶಬ್ಧದ ವೇಗ ಗಂಟೆಗೆ 1,234 ಕಿ.ಮೀ. ಅಂದರೆ ಬ್ರಹ್ಮೋಸ್‌ ಕ್ಷಿಪಣಿ ಗಂಟೆಗೆ 3,455 ಕಿ.ಮೀಗಿಂತಲೂ ಹೆಚ್ಚು ವೇಗದಲ್ಲಿ ಸಂಚರಿಸಿ ನೆಲೆಗಳನ್ನು ಧ್ವಂಸ ಮಾಡುತ್ತದೆ. ಇದನ್ನೂ ಓದಿ: ಪಾಕ್‌ ವಿರುದ್ಧ ‘ಬ್ರಹ್ಮೋಸ್‌’ ಪರಾಕ್ರಮ – ಬ್ರಹ್ಮೋಸ್‌ ಕ್ಷಿಪಣಿಗಾಗಿ 18 ರಾಷ್ಟ್ರಗಳಿಂದ ಬೇಡಿಕೆ

    ಬ್ರಹ್ಮೋಸ್‌ ಅಭಿವೃದ್ಧಿಯಾಗಿದ್ದು ಹೇಗೆ?
    ಸ್ವಾತಂತ್ರ್ಯ ಸಿಕ್ಕಿದ ಬಳಿಕ ಭಾರತ (India) ಶಾಂತಿ ಮಂತ್ರವನ್ನು ಅನುಸರಿಸಿದರೂ ಪಾಕಿಸ್ತಾನ ಮತ್ತು ಚೀನಾದ (China) ಮಧ್ಯೆ ಯುದ್ಧ ನಡೆಸಬೇಕಾಯಿತು. 1947, 1965, 1971 ರಲ್ಲಿ ಪಾಕಿಸ್ತಾನದ ಜೊತೆ 1962 ರಲ್ಲಿ ಚೀನಾದ ಜೊತೆ ಯುದ್ಧ ಮಾಡಬೇಕಾಯಿತು. ಪಾಕಿಸ್ತಾನ ಜೊತೆಗಿನ ಮೂರು ಯುದ್ಧದಲ್ಲಿ ಭಾರತ ಗೆದ್ದರೆ ಚೀನಾದ ವಿರುದ್ಧ ಭಾರತ ಸೋತಿತ್ತು. ಗಡಿಯಲ್ಲಿರುವ ಈ ದೇಶಗಳ ಕಿರಿಕಿರಿ ಜಾಸ್ತಿ ಆಗುತ್ತಿದ್ದಂತೆ ಭಾರತ ಸರ್ಕಾರ ರಕ್ಷಣೆಗೆ ಹೆಚ್ಚು ಒತ್ತು ನೀಡಲು ಆರಂಭಿಸಿತು. ಅಷ್ಟೇ ಅಲ್ಲದೇ ಸ್ವಂತ ಕ್ಷಿಪಣಿ ಅಭಿವೃದ್ಧಿ ಪಡಿಸಲು ಮುಂದಾಯಿತು.

    ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಾದ ಡಿಆರ್‌ಡಿಒ ವಿಜ್ಞಾನಿಗಳು 1989ರಲ್ಲಿ ಅಗ್ನಿ ಕ್ಷಿಪಣಿಯನ್ನು ಅಭಿವೃದ್ಧಿ ಪಡಿಸಿ ಪರೀಕ್ಷಾರ್ಥ ಪ್ರಯೋಗ ನಡೆಸಿದ್ದರು. ಈ ಸಂದರ್ಭದಲ್ಲಿ ಧ್ವನಿಗಿಂತ ವೇಗವಾಗಿ ಸಂಚರಿಸುವ ಸೂಪರ್‌ ಸಾನಿಕ್‌ ಕ್ಷಿಪಣಿಯನ್ನು ಅಭಿವೃದ್ಧಿ ಪಡಿಸಲು ಭಾರತ ಮುಂದಾಯಿತು. ಆದರೆ ಅದಕ್ಕೆ ಬೇಕಾದ ತಂತ್ರಜ್ಞಾನ ಭಾರತದ ಬಳಿ ಇರಲಿಲ್ಲ.

    ಅಣುಬಾಂಬ್ ಪರೀಕ್ಷೆ ಮಾಡಿದ ಬಳಿಕ ಅಮೆರಿಕ ಭಾರತದ ಮೇಲೆ ಹಲವು ದಿಗ್ಭಂಧನ ವಿಧಿಸಿತ್ತು. ಈ ಸಂದರ್ಭದಲ್ಲಿ ಭಾರತ ಮತ್ತು ರಷ್ಯಾದ ಸಂಬಂಧ ಚೆನ್ನಾಗಿತ್ತು. ಕೊನೆಗೆ ಭಾರತ ಮತ್ತು ರಷ್ಯಾದ ಜಂಟಿ ಹೂಡಿಕೆಯಲ್ಲಿ ಬ್ರಹ್ಮೋಸ್‌ ಕಂಪನಿ 1998ರಲ್ಲಿ ಸ್ಥಾಪನೆಯಾಯಿತು.

    ಕ್ಷಿಪಣಿ ಮನುಷ್ಯ ಅಬ್ಧುಲ್‌ ಕಲಾಂ ಮತ್ತು ರಷ್ಯಾದ ರಕ್ಷಣಾ ಸಚಿವ ಮಿಖಾಲಿವೋ ಫೆಬ್ರವರಿ 12 ರಂದು ಮಾಸ್ಕೋದಲ್ಲಿ ಸಹಿ ಹಾಕಿದರು. ಬ್ರಹ್ಮೋಸ್ ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತು ರಷ್ಯಾದ NPOM ನಡುವಿನ ಜಂಟಿ ಉದ್ಯಮವಾಗಿದೆ. ʼಬ್ರಹ್ಮಪುತ್ರʼ ಮತ್ತು ರಷ್ಯಾದ ʼಮಾಸ್ಕೋವಾʼ ನದಿಗಳನ್ನು ಪ್ರತಿನಿಧಿಸಲು ಈ ಕ್ಷಿಪಣಿಗೆ ಬ್ರಹ್ಮೋಸ್‌ ಎಂದು ಹೆಸರನ್ನು ಇಡಲಾಯಿತು. 250 ಮಿಲಿಯನ್‌ ಡಾಲರ್‌ ಹೂಡಿಕೆಯ ಕಂಪನಿಯಲ್ಲಿ ಭಾರತದ ಪಾಲು 50.5% ಇದ್ದರೆ ರಷ್ಯಾದ ಪಾಲು 49.5% ಇದೆ.

    ಬ್ರಹ್ಮೋಸ್‌ ವಿಶೇಷತೆ ಏನು?
    ಚಲಿಸುವ ಪಥದ ಆಧಾರದ ಮೇಲೆ ಕ್ಷಿಪಣಿಗಳನ್ನು ಬ್ಯಾಲಿಸ್ಟಿಕ್‌ ಮತ್ತು ಕ್ರೂಸ್‌ ಕ್ಷಿಪಣಿಗಳಾಗಿ ವಿಂಗಡಿಸಲಾಗುತ್ತದೆ. ಬ್ಯಾಲಿಸ್ಟಿಕ್‌ ಕ್ಷಿಪಣಿ ಭೂಮಿಯ ವಾತಾವರಣವನ್ನು ಬಿಟ್ಟು ಬಾಹ್ಯಾಕಾಶವನ್ನು ಪ್ರವೇಶಿಸಿ ನಂತರ ಭೂಮಿಗೆ ಅಪ್ಪಳಿಸುತ್ತದೆ. ಭಾರತದ ಅಗ್ನಿ, ಪೃಥ್ವಿ ಬ್ಯಾಲಿಸ್ಟಿಕ್‌ ಕ್ಷಿಪಣಿಗಳಾಗಿವೆ. ಇದನ್ನೂ ಓದಿ: ಪಾಕ್‌, ಉಗ್ರರ ಮೇಲೆ ಕಣ್ಣು – ನಾಳೆ ಭಾರತದ ಬೇಹುಗಾರಿಕಾ ಉಪಗ್ರಹ ಉಡಾವಣೆ!

    ಕ್ರೂಸ್‌ ಕ್ಷಿಪಣಿ ಶಬ್ಧದ ವೇಗಕ್ಕಿಂತ ಹೆಚ್ಚು ವೇಗದಲ್ಲಿ ಹೋಗುತ್ತದೆ. ಆರಂಭದಲ್ಲಿ ಕ್ರೂಸ್‌ ಕ್ಷಿಪಣಿ ಕೆಳಹಂತದಲ್ಲಿ ಭೂಮಿಯ ಮೇಲ್ಮೆಗೆ ಸಮಾನಂತರವಾಗಿ ಶಬ್ಧದ ವೇಗಕ್ಕಿಂತ ಕಡಿಮೆ ವೇಗದಲ್ಲಿ ಚಲಿಸಿ ಗುರಿ ತಲುಪುತ್ತಿದ್ದಂತೆ ಇದರ ವೇಗ ಶಬ್ಧದ ವೇಗಕ್ಕಿಂತ ಹೆಚ್ಚಾಗಿ ಕೊನೆಗೆ ಗುರಿಯನ್ನು ತಲುಪುತ್ತದೆ. ಈ ತಂತ್ರಜ್ಞಾನದಿಂದ ಶತ್ರುಗಳ ರೇಡಾರ್‌ಗಳಿಗೆ ಸಹ ಈ ಕ್ಷಿಪಣಿಯ ಪಥವನ್ನು ಅಷ್ಟು ಸುಲಭವಾಗಿ ಪತ್ತೆ ಹಚ್ಚಲು ಸಾಧ್ಯವಾಗುವುದಿಲ್ಲ. ಈ ಕ್ಷಿಪಣಿ ಸಮುದ್ರದ ಒಳಗೆ ಹೋಗಿ ಮತ್ತೆ ಮೇಲೆ ಬರುವ ಸಾಮರ್ಥ್ಯವನ್ನು ಹೊಂದಿದೆ. ಭಾರತದ ಬ್ರಹ್ಮೋಸ್‌ ಕ್ರೂಸ್‌ ಕ್ಷಿಪಣಿಯ ವರ್ಗಕ್ಕೆ ಸೇರುತ್ತದೆ.

    ಚಲಿಸುವ ಗುರಿಯನ್ನು ನಿಖರವಾಗಿ ಹೊಡೆದು ಉರುಳಿಸವ ಸಾಮರ್ಥ್ಯ ಬ್ರಹ್ಮೋಸ್‌ಗೆ ಇದೆ. ಶತ್ರು ನೆಲೆಗಳಿಂದ ಬರುವ ಕ್ಷಿಪಣಿ ಹಾದಿಯನ್ನು ತಪ್ಪಿಸುವ ಎಲೆಕ್ಟ್ರಾನ್‌ ಸಂಕೇತಗಳ ವಿರುದ್ಧ ತನ್ನನ್ನು ರಕ್ಷಿಸಿಕೊಳ್ಳುವ ಸಿಗ್ನಲ್‌ ಜಾಮಿಂಗ್‌ ವ್ಯವಸ್ಥೆ ಬ್ರಹ್ಮೋಸ್‌ನಲ್ಲಿದೆ. ಈ ಕಾರಣಕ್ಕೆ ಬ್ರಹ್ಮೋಸ್‌ ಚೀನಾದ ವಾಯು ರಕ್ಷಣಾ ವ್ಯವಸ್ಥೆಗೂ ಸಿಗದಂತೆ ಯಶಸ್ವಿಯಾಗಿ ಒಳನಗ್ಗಿ ನೆಲೆಗಳನ್ನು ಧ್ವಂಸಗೊಳಿಸಿತ್ತು.

    ಮೊದಲ ಬಾರಿಗೆ ಬ್ರಹ್ಮೋಸ್‌ ಕ್ಷಿಪಣಿಯನ್ನು 2001ರ ಜೂನ್‌ 12 ರಲ್ಲಿ ಒಡಿಶಾದ ತೀರಪ್ರದೇದೇಶದದಲ್ಲಿ ಪರೀಕ್ಷೆ ಮಾಡಿದ್ದು ಈಗ ಭಾರತದ ಭೂ, ವಾಯು, ನೌಕಾ ಸೇನೆಗೆ ಸೇರ್ಪಡೆಯಾಗಿದೆ. 300 ಕೆಜಿ ಸಿಡಿತಲೆಯನ್ನು ಹೊತ್ತುಕೊಂಡು 300 ಕಿ.ಮೀ ದೂರದವರೆಗಿನ ಗುರಿಯನ್ನು ಧ್ವಂಸ ಮಾಡುವ ಸಾಮರ್ಥ್ಯ ಬ್ರಹ್ಮೋಸ್‌ಗೆ ಇದೆ.

  • ಭಾರತ, ಚೀನಾವನ್ನು ಪಾಶ್ಚಿಮಾತ್ಯ ರಾಷ್ಟ್ರಗಳು ಎತ್ತಿಕಟ್ಟುತ್ತಿವೆ: ರಷ್ಯಾ ವಿದೇಶಾಂಗ ಸಚಿವ

    ಭಾರತ, ಚೀನಾವನ್ನು ಪಾಶ್ಚಿಮಾತ್ಯ ರಾಷ್ಟ್ರಗಳು ಎತ್ತಿಕಟ್ಟುತ್ತಿವೆ: ರಷ್ಯಾ ವಿದೇಶಾಂಗ ಸಚಿವ

    ಮಾಸ್ಕೋ: ಪಾಶ್ಚಿಮಾತ್ಯ ರಾಷ್ಟ್ರಗಳು ಭಾರತ (India) ಮತ್ತು ಚೀನಾವನ್ನು (China) ಪರಸ್ಪರ ಎತ್ತಿಕಟ್ಟುತ್ತಿವೆ ಎಂದು ರಷ್ಯಾದ (Russia) ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ (Sergey Lavrov ಹೇಳಿದ್ದಾರೆ.

    ಪಾಶ್ಚಿಮಾತ್ಯ ರಾಷ್ಟ್ರಗಳು ಚೀನಾ, ಭಾರತದ ಮೇಲೆ ಕಣ್ಣಿಟ್ಟಿದೆ. ಆಸಿಯಾನ್ ಭಾಗದಲ್ಲಿ ಪ್ರಮುಖ ಪಾತ್ರ ವಹಿಸಲು ಪಾಶ್ಚಿಮಾತ್ಯ ರಾಷ್ಟ್ರಗಳು ಈ ರೀತಿ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬಿಎಸ್‌ಎಫ್‌ ಯೋಧನಿಗೆ 20 ದಿನವೂ ಇನ್ನಿಲ್ಲದ ಟಾರ್ಚರ್‌ ನೀಡಿದ್ದ ಪಾಕ್‌

    ಆಸಿಯಾನ್ ಪಾತ್ರವನ್ನು ದುರ್ಬಲಗೊಳಿಸಲು ಪಶ್ಚಿಮ ಪ್ರಯತ್ನಿಸುತ್ತಿದೆ. ಹೀಗಾಗಿ ಯುರೇಷಿಯಾದಲ್ಲಿ ಸಾಮೂಹಿಕ ಭದ್ರತಾ ವ್ಯವಸ್ಥೆಗಾಗಿ ಕಾಲ ಕೂಡಿ ಬಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಆಫ್ರಿಕಾದಲ್ಲಿ ಉಪ-ಪ್ರಾದೇಶಿಕ ಸ್ವರೂಪಗಳ ಜೊತೆಗೆ ಆಫ್ರಿಕನ್ ಒಕ್ಕೂಟ ಸ್ಥಾಪನೆಯಾಗಿದೆ. ಲ್ಯಾಟಿನ್ ಅಮೆರಿಕ ಮತ್ತು ಕೆರಿಬಿಯನ್‌ನಲ್ಲಿ ಲ್ಯಾಟಿನ್ ಅಮೆರಿಕನ್ ಮತ್ತು ಕೆರಿಬಿಯನ್ ರಾಜ್ಯಗಳ ಸಮುದಾಯ (CELAC) ರಚನೆಯಾಗಿದೆ. ಆದರೆ ಇಲ್ಲಿಯವರೆಗೆ ಯುರೇಷಿಯಾದಲ್ಲಿ ಇದುವರೆಗೂ ಅಂತಹ ಯಾವುದೇ ಸಾಮೂಹಿಕ ಸಂಘಟನೆ ರಚನೆಯಾಗಿಲ್ಲ ಎಂದು ತಿಳಿಸಿದರು.

  • ಬ್ಲೂ ಫಿಲ್ಮ್ ವೀಕ್ಷಣೆ, ಚಿತ್ರೀಕರಣ ಕಾನೂನುಬದ್ಧಗೊಳಿಸಲು ಮುಂದಾದ ಉಕ್ರೇನ್

    ಬ್ಲೂ ಫಿಲ್ಮ್ ವೀಕ್ಷಣೆ, ಚಿತ್ರೀಕರಣ ಕಾನೂನುಬದ್ಧಗೊಳಿಸಲು ಮುಂದಾದ ಉಕ್ರೇನ್

    ಕೀವ್: ಕಳೆದ 3 ವರ್ಷಗಳಿಂದ ರಷ್ಯಾ (Russia) ಜೊತೆಗೆ ಉಕ್ರೇನ್ (Ukraine) ಯುದ್ಧದಲ್ಲಿ ತೊಡಗಿಕೊಂಡಿದೆ. ಹೀಗಾಗಿ ತನ್ನ ಸೇನೆಯ ಖರ್ಚು ಸೇರಿ ಯುದ್ಧದ ವೆಚ್ಚ ಭರಿಸಲು ನೀಲಿ ಚಿತ್ರಕ್ಕೆ (Blue Film) ಕಾನೂನು ಮಾನ್ಯತೆ ನೀಡಲು ಉಕ್ರೇನ್ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

    ತನ್ನ ದೇಶದಲ್ಲಿ ನೀಲಿ ಚಿತ್ರ ಚಿತ್ರೀಕರಣ, ಪ್ರಸಾರ ಮತ್ತು ವೀಕ್ಷಣೆಗೆ ಕಾನೂನು ಮಾನ್ಯತೆ ನೀಡಲು ಉಕ್ರೇನ್ ಮುಂದಾಗಿದ್ದು, ಈ ಹಿನ್ನೆಲೆ ಕಾನೂನು ತಿದ್ದುಪಡಿ ಮಾಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ.ಇದನ್ನೂ ಓದಿ: ಪೋಷಕರ ಇಚ್ಛೆಗೆ ವಿರುದ್ಧವಾಗಿ ಮದುವೆಯಾದರೆ ಪೊಲೀಸ್ ರಕ್ಷಣೆ ಇಲ್ಲ: ಹೈಕೋರ್ಟ್

    ಒಂದು ವೇಳೆ ನೀಲಿ ಚಿತ್ರಕ್ಕೆ ಕಾನೂನು ಮಾನ್ಯತೆ ಸಿಕ್ಕರೆ, ಇದರಿಂದ ಬರುವ ಆದಾಯವನ್ನು ಸೇನೆಯ ಖರ್ಚು, ವೆಚ್ಚವನ್ನು ನೋಡಿಕೊಳ್ಳಲು ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelenskyy) ಸರ್ಕಾರ ನಿರ್ಧರಿಸಿದೆ ಎನ್ನಲಾಗುತ್ತಿದೆ. ಆದರೆ ಕಳೆದ ವರ್ಷ ಈ ಕಾನೂನಿನಡಿ 1,400 ಕೇಸುಗಳು ದಾಖಲಾಗಿದ್ದವು.

    ಆದರೆ ದೇಶದಲ್ಲಿ ಈ ಕಾನೂನು ಜಾರಿಗೆ ಭಾರೀ ವಿರೋಧ ವ್ಯಕ್ತವಾಗಿದೆ. ಒಂದು ವೇಳೆ ಕಾನೂನು ಮಾನ್ಯತೆ ಸಿಕ್ಕಲ್ಲಿ ಉಕ್ರೇನ್‌ಗೆ ವಾರ್ಷಿಕ ನೂರಾರು ಕೋಟಿ ರೂ. ಆದಾಯ ಹರಿದುಬರಲಿದೆ ಎಂದು ಅಂದಾಜಿಸಲಾಗಿದೆ. ಈ ಮೊತ್ತದಿಂದ 24,000 ಮಾನವ ಬಳಕೆ ಡ್ರೋನ್‌ಗಳನ್ನು ಖರೀದಿಸಬಹುದಾಗಿದೆ ಎಂದು ವರದಿಗಳು ತಿಳಿಸಿದೆ.ಇದನ್ನೂ ಓದಿ: ಹೊಸಪೇಟೆ | ಟಿಬಿ ಡ್ಯಾಂ ಬಳಿಯ ಗುಡ್ಡದಲ್ಲಿ ಭಾರೀ ಬೆಂಕಿ

  • ಉಕ್ರೇನ್‌ನ ಸುಮಿ ಮೇಲೆ ರಷ್ಯಾ ಕ್ಷಿಪಣಿ ದಾಳಿ – 21 ಮಂದಿ ಸಾವು

    ಉಕ್ರೇನ್‌ನ ಸುಮಿ ಮೇಲೆ ರಷ್ಯಾ ಕ್ಷಿಪಣಿ ದಾಳಿ – 21 ಮಂದಿ ಸಾವು

    ಕೀವ್: ಉತ್ತರ ಉಕ್ರೇನಿಯನ್ (Ukraine) ನಗರದ ಸುಮಿಯ ಹೃದಯಭಾಗದಲ್ಲಿ ಭಾನುವಾರ ಬೆಳಗ್ಗೆ ನಡೆದ ರಷ್ಯಾದ ಬ್ಯಾಲಿಸ್ಟಿಕ್ ಕ್ಷಿಪಣಿ (Russian Missile Strike) ದಾಳಿಯಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ. 83 ಜನರು ಗಾಯಗೊಂಡಿದ್ದಾರೆ ಎಂದು ಉಕ್ರೇನ್‌ನ ಆಂತರಿಕ ಸಚಿವ ಇಹೋರ್ ಕ್ಲಿಮೆಂಕೊ ಹೇಳಿದ್ದಾರೆ.

    ಈ ವರ್ಷ ಉಕ್ರೇನ್ ಮೇಲೆ ನಡೆದ ಅತ್ಯಂತ ಭೀಕರ ದಾಳಿಯನ್ನು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಖಂಡಿಸಿದ್ದಾರೆ. ‘ಕಿಡಿಗೇಡಿಗಳು ಮಾತ್ರ ಈ ರೀತಿ ವರ್ತಿಸಲು ಸಾಧ್ಯ. ಸಾಮಾನ್ಯ ಜನರ ಜೀವ ತೆಗೆಯಲಾಗುತ್ತಿದೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿ ಖಂಡನೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಭಾರತೀಯ ಔಷಧ ಕಂಪನಿ ಮೇಲೆ ರಷ್ಯಾ ಕ್ಷಿಪಣಿ ದಾಳಿ – ಭಾರತದ ಕಂಪನಿಗಳೇ ಟಾರ್ಗೆಟ್ ಎಂದ ಉಕ್ರೇನ್‌

    ಇಂದು ಜನರು ಚರ್ಚ್‌ಗೆ ಹೋಗುವ ದಿನ. ಪಾಮ್‌ ಸಂಡೆ, ಜೆರುಸಲೇಂಗೆ ಭಗವಂತ ಆಗಮಿಸಿದ ದಿನ. ಚರ್ಚ್‌ನ ಪ್ರಮುಖ ಹಬ್ಬದ ದಿನದಂದೇ ನಾಗರಿಕರನ್ನು ಉದ್ದೇಶಪೂರ್ವಕವಾಗಿ ಹತ್ಯೆ ಮಾಡಲಾಗುತ್ತಿದೆ ಎಂದು ರಷ್ಯಾ ವಿರುದ್ಧ ಗುಡುಗಿದ್ದಾರೆ.

    ಉಕ್ರೇನ್‌ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿಶೇಷ ರಾಯಭಾರಿಯಾಗಿರುವ ವಿಟ್ಕಾಫ್ ಭೇಟಿ ನೀಡಿದ್ದರು. ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಉಕ್ರೇನ್ ಶಾಂತಿ ಒಪ್ಪಂದದ ಕುರಿತು ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದರು. ಇದನ್ನೂ ಓದಿ: Donald Trump | ಭಾರತ ಸೇರಿದಂತೆ ಅಮೆರಿಕದಲ್ಲಿರುವ ವಿದೇಶಿಗರು 24×7 ವೀಸಾ ಹೊಂದಿರಬೇಕು

    ರಷ್ಯಾದ ಇಂಧನ ಮೂಲಸೌಕರ್ಯದ ಮೇಲೆ ಉಕ್ರೇನ್ ಐದು ಬಾರಿ ದಾಳಿ ನಡೆಸಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ಶನಿವಾರ ಆರೋಪಿಸಿತ್ತು. ಶಾಂತಿ ಒಪ್ಪಂದಕ್ಕೆ ಅಮೆರಿಕ ಮಧ್ಯಸ್ಥಿಕೆ ವಹಿಸಿದ ಬಳಿಕವೂ ದಾಳಿ ನಡೆಸುತ್ತಿರುವುದು ನಿಯಮದ ಉಲ್ಲಂಘನೆಯಾಗಿದೆ ಎಂದು ರಷ್ಯಾ ಖಂಡಿಸಿತ್ತು.

  • ಝೆಲೆನ್ಸ್ಕಿ ತವರೂರು ಕ್ರಿವಿ ರಿಹ್‌ ಮೇಲೆ ರಷ್ಯಾ ದಾಳಿ – 18 ಮಂದಿ ಸಾವು

    ಝೆಲೆನ್ಸ್ಕಿ ತವರೂರು ಕ್ರಿವಿ ರಿಹ್‌ ಮೇಲೆ ರಷ್ಯಾ ದಾಳಿ – 18 ಮಂದಿ ಸಾವು

    ಕೀವ್: ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್ಕಿ (Volodymyr Zelenskyy) ತವರೂರು ಕ್ರಿವಿ ರಿಹ್‌ನ (Kryvyi Rih) ವಸತಿ ಪ್ರದೇಶದ ಮೇಲೆ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಒಂಬತ್ತು ಮಕ್ಕಳು ಸೇರಿದಂತೆ 18 ಮಂದಿ ಸಾವನ್ನಪ್ಪಿದ್ದಾರೆ. ಇದು ಈ ವರ್ಷದ ಮಾಸ್ಕೋದ ಅತ್ಯಂತ ಮಾರಕ ದಾಳಿಗಳಲ್ಲಿ ಒಂದಾಗಿದೆ.

    ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುದ್ಧದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿರುವ ಹೊತ್ತಿನಲ್ಲೇ ಈ ದಾಳಿ ನಡೆದಿದೆ. ಅಧ್ಯಕ್ಷ ಝೆಲೆನ್ಸ್ಕಿ ಅವರ ತವರು ನಗರದ ಮೇಲೆ ಶುಕ್ರವಾರ ನಡೆದ ದಾಳಿಯು ವಸತಿ ಬ್ಲಾಕ್‌ಗಳನ್ನು ಹಾನಿಗೊಳಿಸಿದ್ದು, ಭಾರೀ ಬೆಂಕಿಗೆ ಕಾರಣವಾಯಿತು ಎಂದು ಡ್ನಿಪ್ರೊಪೆಟ್ರೋವ್ಸ್ಕ್ ಗವರ್ನರ್ ಸೆರ್ಹಿ ಲೈಸಾಕ್ ತಿಳಿಸಿದ್ದಾರೆ. ಇದನ್ನೂ ಓದಿ: ಏ.10ರಿಂದ ಅಮೆರಿಕದ ಸರಕುಗಳ ಮೇಲೆ 34% ಆಮದು ಸುಂಕ – ಚೀನಾ ಪ್ರತೀಕಾರದ ಸುಂಕಕ್ಕೆ ದೊಡ್ಡಣ್ಣ ಗರಂ

    ಕನಿಷ್ಠ 50 ಜನರು ಗಾಯಗೊಂಡಿದ್ದಾರೆ ಎಂದು ತುರ್ತು ಸೇವೆಗಳು ತಿಳಿಸಿವೆ. ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು. ಮೂರು ತಿಂಗಳ ಮಗು ಸೇರಿದಂತೆ 30 ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಲೈಸಾಕ್ ಮಾಹಿತಿ ನೀಡಿದ್ದಾರೆ.

    ಮಾನವ ಹಕ್ಕುಗಳ ತನಿಖಾಧಿಕಾರಿ ಡಿಮಿಟ್ರೋ ಲುಬಿನೆಟ್ಸ್ ಅವರ ಪ್ರಕಾರ, ರಷ್ಯಾದ ಪಡೆಗಳು ದಾಳಿಗೆ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಬಳಸಿವೆ. ಅಂತಹ ಶಸ್ತ್ರಾಸ್ತ್ರಗಳು ತಮ್ಮ ಗುರಿಗಳನ್ನು ತಲುಪಲು ಕೆಲವೇ ನಿಮಿಷಗಳನ್ನು ತೆಗೆದುಕೊಳ್ಳುತ್ತವೆ. ಉನ್ನತ ಮಟ್ಟದ ವಾಯು ರಕ್ಷಣೆಯನ್ನು ಹೊರತುಪಡಿಸಿ ಉಳಿದೆಲ್ಲವನ್ನೂ ಹೊಡೆದುರುಳಿಸುವುದು ಕಷ್ಟ. ಇದನ್ನೂ ಓದಿ: ನೇಪಾಳದಲ್ಲಿ 5.0 ತೀವ್ರತೆಯ ಭೂಕಂಪನ – ಉತ್ತರ ಭಾರತದಲ್ಲೂ ಎಫೆಕ್ಟ್‌

  • ರಷ್ಯಾದಲ್ಲಿ ಕೋವಿಡ್ ಮಾದರಿ ನಿಗೂಢ ವೈರಸ್!

    ರಷ್ಯಾದಲ್ಲಿ ಕೋವಿಡ್ ಮಾದರಿ ನಿಗೂಢ ವೈರಸ್!

    ಮಾಸ್ಕೋ: ರಷ್ಯಾದಲ್ಲಿ (Russia) ಕೋವಿಡ್ ಮಾದರಿಯ ನಿಗೂಢ ವೈರಸ್ (Virus) ವಿಜೃಂಭಿಸುತ್ತಿದೆ ಎಂಬ ಸುದ್ದಿ ಆತಂಕ ಮೂಡಿಸಿದೆ.

    ಅಲ್ಲಿನ ಪ್ರಜೆಗಳು ತೀವ್ರ ಸ್ವರೂಪದ ಶ್ವಾಸಕೋಶ ಸಂಬಂಧಿ ರೋಗಗಳು, ದೀರ್ಘಕಾಲಿಕ ಜ್ವರದಿಂದ ಬಳಲುತ್ತಿದ್ದಾರೆ. ವೈರಸ್ ಕಾರಣದಿಂದ ಅವರು ಕೆಮ್ಮುವಾಗ ರಕ್ತ ಕೂಡ ಬೀಳುತ್ತಿದೆ. ಹಲವು ನಗರಗಳಲ್ಲಿ ಈ ವೈರಸ್ ತೀವ್ರ ವೇಗದಲ್ಲಿ ಹಬ್ಬುತ್ತಿದೆ. ವೈದ್ಯರು ಕೋವಿಡ್ ಟೆಸ್ಟ್ ಮಾಡಿದಾಗ ನೆಗೆಟಿವ್ ಎಂದು ಬಂದಿದೆ. ಹೀಗಾಗಿ ಇದು ಹೊಸ ವೈರಸ್ ಆಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ನಿಮ್ಮ ವಕ್ಫ್‌ಗೆ ಒಬ್ಬ ಮುಸ್ಲಿಮೇತರರೂ ಬರುವುದಿಲ್ಲ – ಅಮಿತ್ ಶಾ

    ಆದರೆ ಈ ವರದಿಗಳನ್ನು ರಷ್ಯಾ ತಳ್ಳಿ ಹಾಕಿದೆ. ಮಿಸ್ಟರಿ ವೈರಸ್ ಕುರಿತ ವರದಿಗಳು ಆಧಾರರಹಿತ. ಅಂಥಾದ್ದೇನು ನಮ್ಮ ದೇಶದಲ್ಲಿ ಕಂಡುಬಂದಿಲ್ಲ ಎಂದು ರಷ್ಯಾ ತಿಳಿಸಿದೆ. ಇದನ್ನೂ ಓದಿ: ನ್ಯಾಯಾಧೀಶರ ಮನೆಯಲ್ಲಿಯೇ 7 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ

  • ಉಕ್ರೇನ್‌ ಮಹಿಳೆಯರನ್ನ ರೇಪ್‌ ಮಾಡುವಂತೆ ಒತ್ತಾಯಿಸುತ್ತಿದ್ದ ರಷ್ಯಾ ಸೈನಿಕನ ಪತ್ನಿಗೆ ಕಠಿಣ ಜೈಲು ಶಿಕ್ಷೆ

    ಉಕ್ರೇನ್‌ ಮಹಿಳೆಯರನ್ನ ರೇಪ್‌ ಮಾಡುವಂತೆ ಒತ್ತಾಯಿಸುತ್ತಿದ್ದ ರಷ್ಯಾ ಸೈನಿಕನ ಪತ್ನಿಗೆ ಕಠಿಣ ಜೈಲು ಶಿಕ್ಷೆ

    ಕೈವ್‌/ಮಾಸ್ಕೋ: ರಷ್ಯಾ-ಉಕ್ರೇನ್‌ ನಡುವಿನ ಯುದ್ಧದ (Russia Ukraine War) ಸಂದರ್ಭದಲ್ಲಿ ಉಕ್ರೇನ್‌ ಮಹಿಳೆಯರ (Ukrainian Women) ಮೇಲೆ ಅತ್ಯಾಚಾರ ಮಾಡುವಂತೆ ತನ್ನ ಪತಿಗೆ ಒತ್ತಾಯಿಸುತ್ತಿದ್ದ ರಷ್ಯಾ ಸೈನಿಕನ ಪತ್ನಿಗೆ 5 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

    ಓಲ್ಗಾ ಬೈಕೊವ್ಸ್ಕಯಾ ಎಂಬ ಮಹಿಳೆ ತನ್ನ ಸೈನಿಕ ಪತಿ ರೋಮನ್ ಬೈಕೊಬ್ಸ್ಕಿಗೆ ಉಕ್ರೇನಿಯನ್‌ ಮಹಿಳೆಯರ ಮೇಲೆ ಅತ್ಯಾಚಾರ ಎಸಗುವಂತೆ ದೂರವಾಣಿ ಕರೆ ಮಾಡಿ ಒತ್ತಾಯಿಸುತ್ತಿದ್ದಳು. ನನಗೆ ಏನನ್ನೂ ಹೇಳಬೇಡಿ, ಅರ್ಥಮಾಡಿಕೊಳ್ಳಿ ನೀವು ಅವರನ್ನು ರೇಪ್‌ ಮಾಡಿ ಎಂದು ಒತ್ತಾಯಿಸಿದ್ದಳು. ಈ ಸಂಭಾಷಣೆಯ ಆಡಿಯೋವನ್ನ ಉಕ್ರೇನ್‌ ಸೀಕ್ರೆಟ್ ಸರ್ವಿಸ್ ರಿಲೀಸ್‌ ಮಾಡಿದ್ದು, ಮಹಿಳೆಗೆ ಉಕ್ರೇನ್‌ ಕೋರ್ಟ್‌ 5 ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಎಲ್ಲಾ ಅಧಿಕಾರ ಅನುಭವಿಸಿದ್ದೇನೆ, ಮಂತ್ರಿ ಮಾಡೋದು ಸಿಎಂಗೆ ಬಿಟ್ಟ ವಿಚಾರ: ಆರ್.ವಿ.ದೇಶಪಾಂಡೆ

    ಬಹಳ ದಿನಗಳಿಂದಲೂ ಉಕ್ರೇನ್‌ನ ಮೋಸ್ಟ್‌ ವಾಂಟೆಡ್‌ ಪಟ್ಟಿಯಲ್ಲಿದ್ದ ರಷ್ಯಾ ಸೈನಿಕನ ಪತ್ನಿ ವಿರುದ್ಧ ಯುದ್ಧದ ಕಾನೂನು ಉಲ್ಲಂಘನೆ, ಯುದ್ಧಾಪರಾಧ ಸೇರಿದಂತೆ ವಿವಿಧ ಅಪರಾಧಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಾರದೇ ಇದ್ದರೆ ಈ ಸಂಸತ್ತನ್ನೇ ಕಾಂಗ್ರೆಸ್‌ ವಕ್ಫ್‌ಗೆ ನೀಡ್ತಿತ್ತು: ಕಿರಣ್‌ ರಿಜಿಜು

    ಸದ್ಯ ಉಕ್ರೇನ್‌ ಕೋರ್ಟ್‌ ಆಕೆಗೆ ಶಿಕ್ಷೆ ವಿಧಿಸಿದ್ದರೂ ಆಕೆ ಸಿಕ್ಕಿಲ್ಲ, ತಲೆ ಮರೆಸಿಕೊಂಡಿದ್ದಾಳೆ. ಆಕೆ ಬಂಧನಕ್ಕೆ ಉಕ್ರೇನ್‌ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಇದನ್ನೂ ಓದಿ: ಬ್ಲಡ್ ಶುಗರ್ ಲೆವೆಲ್ ಏರಿಕೆ – ಲಾಲೂ ಪ್ರಸಾದ್ ಯಾದವ್ ಆಸ್ಪತ್ರೆಗೆ ದಾಖಲು