Tag: ರಷ್ಯಾ

  • ನೀವು ನಮ್ಮೊಂದಿಗಿದ್ದೀರಿ ಎಂಬುದನ್ನು ಸಾಬೀತುಪಡಿಸಿ: ಯೂರೋಪ್‌ ನಾಯಕರಿಗೆ ಉಕ್ರೇನ್‌ ಅಧ್ಯಕ್ಷ ಕರೆ

    ನೀವು ನಮ್ಮೊಂದಿಗಿದ್ದೀರಿ ಎಂಬುದನ್ನು ಸಾಬೀತುಪಡಿಸಿ: ಯೂರೋಪ್‌ ನಾಯಕರಿಗೆ ಉಕ್ರೇನ್‌ ಅಧ್ಯಕ್ಷ ಕರೆ

    ಕೀವ್: ನೀವು ನಮ್ಮೊಂದಿಗಿದ್ದೇವೆ ಎಂಬುದನ್ನು ಸಾಬೀತುಪಡಿಸಿ, ಕತ್ತಲಿನ ವಿರುದ್ಧ ಬೆಳಕು ಜಯ ಸಾಧಿಸುತ್ತೆ ಎಂದು ಯೂರೋಪ್‌ ರಾಷ್ಟ್ರಗಳ ನಾಯಕರಿಗೆ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಭಾವಾವೇಷದಲ್ಲಿ ಕರೆ ನೀಡಿದ್ದಾರೆ.

    ಯೂರೋಪ್‌ ನಾಯಕರೊಂದಿಗೆ ವೀಡಿಯೋ ಕರೆಯಲ್ಲಿ ಮಾತನಾಡಿದ ಅವರು, ನಾವು ನಮ್ಮ ನೆಲಕ್ಕಾಗಿ, ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿದ್ದೇವೆ. ನಮ್ಮ ದೇಶದ ಎಲ್ಲಾ ದೊಡ್ಡ ನಗರಗಳನ್ನು ಈಗ ನಿರ್ಬಂಧಿಸಲಾಗಿದೆ. ನೀವು ನಮ್ಮೊಂದಿಗಿದ್ದೀರಿ ಎಂಬುದನ್ನು ಸಾಬೀತುಪಡಿಸಿ. ನಮ್ಮನ್ನು ಇಲ್ಲಿಂದ ಹೋಗಲು ಬಿಡುವುದಿಲ್ಲ ಎಂದು ನೀವು ಸಾಬೀತುಪಡಿಸಿ. ನೀವು ನಿಜವಾಗಿಯೂ ಯುರೋಪಿಯನ್ನರು ಎಂದು ತೋರಿಸಿ. ಜೀವನವು ಸಾವಿನ ವಿರುದ್ಧ ಹಾಗೂ ಬೆಳಕು ಕತ್ತಲೆಯ ವಿರುದ್ಧ ಗೆಲ್ಲುತ್ತದೆ ಎಂದು ಭಾವುಕವಾಗಿ ನುಡಿದಿದ್ದಾರೆ. ಇದನ್ನೂ ಓದಿ: ರಷ್ಯಾ ಹಣಕಾಸು ಸಂಸ್ಥೆಗಳಿಗೆ ವೀಸಾ, ಮಾಸ್ಟರ್‌ ಕಾರ್ಡ್‌ ಬ್ಲಾಕ್‌ – ATMಗಳ ಮುಂದೆ ರಷ್ಯನ್ನರ ದಂಡು

    ಇಂದು ನಾವು ನಿಮ್ಮೆಲ್ಲರನ್ನೂ, ಯೂರೋಪಿಯನ್‌ ಒಕ್ಕೂಟದ ದೇಶಗಳನ್ನು ಒಗ್ಗೂಡಿಸಿದ್ದೇವೆ. ಇದು ನನಗೆ ಖುಷಿಯ ವಿಚಾರ. ಆದರೆ ಇದಕ್ಕಾಗಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಬೆಲೆ ತೆರಬೇಕು ಎಂದು ನನಗೆ ತಿಳಿದಿರಲಿಲ್ಲ. ರಷ್ಯಾ ಆಕ್ರಮಣ ನನಗೆ, ಪ್ರತಿಯೊಬ್ಬ ಉಕ್ರೇನಿಯನ್ನರಿಗೆ ಮತ್ತು ದೇಶಕ್ಕೆ ದೊಡ್ಡ ದುರಂತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಇಂದು ನಾವು ಮೌಲ್ಯಗಳಿಗಾಗಿ, ಹಕ್ಕುಗಳಿಗಾಗಿ, ಸ್ವಾತಂತ್ರ್ಯಕ್ಕಾಗಿ, ಸಮಾನವಾಗಿರಬೇಕೆಂಬ ಬಯಕೆಗಾಗಿ ಹೋರಾಡುತ್ತಿದ್ದೇವೆ. ರಷ್ಯಾ ಭಯೋತ್ಪಾದಕ ರಾಷ್ಟ್ರವಾಗಿದೆ. ಇದನ್ನು ಯಾರೂ ಕ್ಷಮಿಸುವುದಿಲ್ಲ, ಮರೆಯುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ವ್ಯಾಕ್ಯೂಮ್ ಬಾಂಬ್ ಪ್ರಯೋಗ ಆರೋಪ – ಏನಿದರ ವಿಶೇಷ?

    ಉಕ್ರೇನ್‌ ಮೇಲೆ ಕಳೆದ ವಾರ ರಷ್ಯಾ ಯುದ್ಧವನ್ನು ಘೋಷಿಸಿತು. ರಷ್ಯಾ ಸೇನಾ ಪಡೆ ನಿರಂತರವಾಗಿ ದಾಳಿಗಳನ್ನು ನಡೆಸುತ್ತಿದ್ದು, ಹಂತಹಂತವಾಗಿ ಉಕ್ರೇನ್‌ ಅನ್ನು ಅತಿಕ್ರಮಿಸುತ್ತಿದೆ. ಇದರಿಂದ ನೂರಾರು ಸಂಖ್ಯೆಯಲ್ಲಿ ಜನರು, ಸೈನಿಕರು ಸಾಯುತ್ತಿದ್ದಾರೆ. ಇದನ್ನೂ ಓದಿ: ಊಟ ತರಲು ನನ್ನ ಬಳಿ ದುಡ್ಡಿಲ್ಲ, ಸ್ವಲ್ಪ ಹಣ ಹಾಕು ಅಂದ ಅದೇ ನವೀನ್‍ನ ಕೊನೆ ಮಾತು: ಶ್ರೀಕಾಂತ್

  • ರಷ್ಯಾ ಹಣಕಾಸು ಸಂಸ್ಥೆಗಳಿಗೆ ವೀಸಾ, ಮಾಸ್ಟರ್‌ ಕಾರ್ಡ್‌ ಬ್ಲಾಕ್‌ – ATMಗಳ ಮುಂದೆ ರಷ್ಯನ್ನರ ದಂಡು

    ರಷ್ಯಾ ಹಣಕಾಸು ಸಂಸ್ಥೆಗಳಿಗೆ ವೀಸಾ, ಮಾಸ್ಟರ್‌ ಕಾರ್ಡ್‌ ಬ್ಲಾಕ್‌ – ATMಗಳ ಮುಂದೆ ರಷ್ಯನ್ನರ ದಂಡು

    ಮಾಸ್ಕೋ: ಯುಎಸ್‌ ಪಾವತಿ ಕಾರ್ಡ್‌ ಸಂಸ್ಥೆಗಳಾದ ವೀಸಾ ಮತ್ತು ಮಾಸ್ಟರ್‌ ಕಾರ್ಡ್‌ ತಮ್ಮ ನೆಟ್‌ವರ್ಕ್‌ನಿಂದ ರಷ್ಯಾದ ಹಣಕಾಸು ಸಂಸ್ಥೆಗಳನ್ನು ನಿರ್ಬಂಧಿಸಿವೆ. ಉಕ್ರೇನ್‌ ಮೇಲಿನ ರಷ್ಯಾ ಆಕ್ರಮಣಕ್ಕೆ ವಿರೋಧ ವ್ಯಕ್ತಪಡಿಸಿರುವ ಅಮೆರಿಕ ಹಲವು ನಿರ್ಬಂಧಗಳನ್ನು ವಿಧಿಸುತ್ತಿದೆ.

    ಸೋಮವಾರದಿಂದಲೇ ಈ ನಿರ್ಬಂಧ ಅನ್ವಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ. ಮಾನವೀಯ ಸಹಾಯಕ್ಕಾಗಿ 15.14 ಕೋಟಿ (2 ಮಿಲಿಯನ್‌ ಡಾಲರ್)‌ ದೇಣಿಗೆ ನೀಡುವುದಾಗಿ ವೀಸಾ ಸ್ಪಷ್ಟಪಡಿಸಿದೆ. ಮಾಸ್ಟರ್‌ ಕಾರ್ಡ್‌ ಕೂಡ 15.14 ಕೋಟಿ ರೂ. ಕೊಡುಗೆ ನೀಡುವುದಾಗಿ ತಿಳಿಸಿದೆ. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ವ್ಯಾಕ್ಯೂಮ್ ಬಾಂಬ್ ಪ್ರಯೋಗ ಆರೋಪ – ಏನಿದರ ವಿಶೇಷ?

    ಸರ್ಕಾರದ ನಿರ್ಬಂಧಗಳ ಪ್ರಕಾರ ವಿಶೇಷವಾಗಿ ಗೊತ್ತುಪಡಿಸಿದ ರಾಷ್ಟ್ರದ್ದು ಎಂದು ಪಟ್ಟಿ ಮಾಡಲಾದ ಘಟಗಳಿಗೆ ವೀಸಾ ತನ್ನ ನೆಟ್‌ವರ್ಕ್‌ಗೆ ಪ್ರವೇಶವನ್ನು ಅಮಾನತುಗೊಳಿಸಿದೆ. ರಷ್ಯಾದ ಕೇಂದ್ರ ಬ್ಯಾಂಕ್‌ ಮತ್ತು ಎರಡನೇ ಅತಿ ದೊಡ್ಡ ಸಾಲದಾತ ವಿಟಿಬಿ ಸೇರಿದಂತೆ ವಿವಿಧ ಹಣಕಾಸು ಸಂಸ್ಥೆಗಳನ್ನು ಈ ಪಟ್ಟಿಗೆ ಸೇರಿಸಲಾಗಿದೆ. ಯುಎಸ್‌, ಬ್ರಿಟನ್‌, ಯೂರೋಪ್‌ ಮತ್ತು ಕೆನಡಾ ದೇಶಗಳು ರಷ್ಯಾದ ಮೇಲೆ ಹೊಸ ನಿರ್ಬಂಧಗಳನ್ನು ಶನಿವಾರವೂ ಘೋಷಿಸಿವೆ.

    ಹಲವು ನಿರ್ಬಂಧಗಳ ಹಿನ್ನೆಲೆಯಲ್ಲಿ ಬ್ಯಾಂಕ್‌ ಕಾರ್ಡ್‌ಗಳು ಕಾರ್ಯನಿರ್ವಹಿಸುವುದನ್ನು ನಿಲ್ಲಿಸಬಹುದು, ಬ್ಯಾಂಕ್‌ಗಳು ನಗದು ಹಿಂಪಡೆಯುವಿಕೆಯನ್ನು ಮಿತಿಗೊಳಿಸಬಹುದು ಎಂದು ಆತಂಕದಲ್ಲಿ ರಷ್ಯನ್ನರು ಎಟಿಎಂಗಳ ಮುಂದೆ ಅಪಾರ ಸಂಖ್ಯೆಯಲ್ಲಿ ಜಮಾಯಿಸುತ್ತಿದ್ದಾರೆ. ಭಾನುವಾರ ಮತ್ತು ಸೋಮವಾರ ಎಟಿಎಂಗಳ ಮುಂದೆ ರಷ್ಯನ್ನರ ಉದ್ದದ ಕ್ಯೂ ಇದ್ದ ದೃಶ್ಯಗಳು ಕಂಡುಬಂದಿದ್ದವು. ಇದನ್ನೂ ಓದಿ: ಊಟ ತರಲು ನನ್ನ ಬಳಿ ದುಡ್ಡಿಲ್ಲ, ಸ್ವಲ್ಪ ಹಣ ಹಾಕು ಅಂದ ಅದೇ ನವೀನ್‍ನ ಕೊನೆ ಮಾತು: ಶ್ರೀಕಾಂತ್

    ರಷ್ಯಾ ಕಳೆದ ವಾರ ಉಕ್ರೇನ್‌ ಮೇಲೆ ಯುದ್ಧವನ್ನು ಸಾರಿತು. ಇದಕ್ಕೆ ಅನೇಕ ಪಾಶ್ಚಿಮಾತ್ಯ ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ. ಅನೇಕ ಪಾಶ್ಚಿಮಾತ್ಯ ಬ್ಯಾಂಕ್‌ಗಳು, ವಿಮಾನಯಾನ ಸಂಸ್ಥೆಗಳು ರಷ್ಯಾದೊಂದಿಗೆ ಸಂಬಂಧವನ್ನು ಕಡಿತಗೊಳಿಸಿವೆ. ರಷ್ಯಾದ ಕ್ರಮಗಳು ಸ್ವೀಕಾರಾರ್ಹವಲ್ಲ ಎಂದು ವಿರೋಧಿಸಿವೆ. ಇದನ್ನೂ ಓದಿ: ಉಕ್ರೇನ್‌ನಲ್ಲಿ ಶೆಲ್ ದಾಳಿಗೆ ಮಡಿದ ಕನ್ನಡಿಗನಿಗೆ ಸ್ಯಾಂಡಲ್ ವುಡ್ ಕಣ್ಣೀರು

  • ಉಕ್ರೇನ್ ಮೇಲೆ ರಷ್ಯಾ ವ್ಯಾಕ್ಯೂಮ್ ಬಾಂಬ್ ಪ್ರಯೋಗ ಆರೋಪ – ಏನಿದರ ವಿಶೇಷ?

    ಉಕ್ರೇನ್ ಮೇಲೆ ರಷ್ಯಾ ವ್ಯಾಕ್ಯೂಮ್ ಬಾಂಬ್ ಪ್ರಯೋಗ ಆರೋಪ – ಏನಿದರ ವಿಶೇಷ?

    ವಾಷಿಂಗ್ಟನ್: ಉಕ್ರೇನ್, ರಷ್ಯಾ ನಡುವೆ ಯುದ್ಧದಲ್ಲಿ ನಿನ್ನೆ ಅಣುಬಾಂಬ್‍ನ ಚರ್ಚೆ ಆಗಿತ್ತು. ಈ ಬೆನ್ನಲ್ಲೇ, ಉಕ್ರೇನ್ ರಾಜಧಾನಿ ಕೀವ್ ಮೇಲೆ ರಷ್ಯಾ ಕ್ಲಸ್ಟರ್ ಮತ್ತು ವ್ಯಾಕ್ಯೂಮ್ ಬಾಂಬ್ ಪ್ರಯೋಗಿಸಿದೆ ಎಂದು ಅಮೆರಿಕದಲ್ಲಿರುವ ಉಕ್ರೇನ್ ರಾಯಭಾರಿ ಒಕ್ಸಾನಾ ಮಾರ್ಕರೋವಾ ಗಂಭೀರ ಆರೋಪ ಮಾಡಿದ್ದಾರೆ.

    ಏನಿದು ವ್ಯಾಕ್ಯೂಮ್ ಬಾಂಬ್?
    ಜಾಗತೀಕವಾಗಿ ಬಲಿಷ್ಠ ಬಾಂಬ್ ಎಂದು ಕರೆಯಲ್ಪಡುವ ಬಾಂಬ್ ವ್ಯಾಕ್ಯೂಮ್ ಬಾಂಬ್. ಇದನ್ನು ಥರ್ಮೋಬಾರಿಕ್ ವೆಪನ್ ಅಂತಲೂ ಕರೆಯಲಾಗುತ್ತದೆ. ಆಕ್ಸಿಜನ್ ಹೈಟೆಂಪರೇಚರ್ ಸ್ಫೋಟಕ ತುಂಬಿರುವ ಬಾಂಬ್ ಇದಾಗಿದ್ದು, ಈ ಬಾಂಬ್ ಸ್ಫೋಟಿಸಿದಾಗ ಆಮ್ಲಜನಕವನ್ನು ಹೀರಿಕೊಳ್ಳುತ್ತದೆ. ಸ್ಫೋಟಗೊಂಡರೆ ಅಲ್ಟ್ರಾಸಾನಿಕ್ ಡೇಂಜರಸ್ ತರಂಗಗಳನ್ನು ಹೊರಸೂಸುತ್ತದೆ. ಮನುಷ್ಯರ ದೇಹಗಳನ್ನು ಆವಿಯಾಗಿಸುವ ಸಾಮರ್ಥ್ಯ ಈ ಬಾಂಬ್‍ಗಿದೆ. ದೀರ್ಘಕಾಲ, ಅತಿ ಹೆಚ್ಚು ಸ್ಫೋಟವಾಗುತ್ತದೆ ಮಾರಣಾಂತಿಕ, ವಿನಾಶಕಾರಿ ಬಾಂಬ್ ಎಂಬ ಖ್ಯಾತಿ ವ್ಯಾಕ್ಯೂಮ್ ಬಾಂಬ್‍ಗಿದೆ. ಇದನ್ನೂ ಓದಿ: ಊಟ ತರಲು ನನ್ನ ಬಳಿ ದುಡ್ಡಿಲ್ಲ, ಸ್ವಲ್ಪ ಹಣ ಹಾಕು ಅಂದ ಅದೇ ನವೀನ್‍ನ ಕೊನೆ ಮಾತು: ಶ್ರೀಕಾಂತ್

    ವ್ಯಾಕ್ಯೂಮ್ ಬಾಂಬ್ ಸಾಮಾನ್ಯವಾಗಿ 7,100 ಕೆ.ಜಿ ತೂಕ ಇದ್ದು, 300 ಮೀ.ವರೆಗೂ ಭಾರಿ ಹಾನಿ ಉಂಟು ಮಾಡುವ ಸಾಮರ್ಥ್ಯವಿದೆ. ಪರಮಾಣು ರಹಿತ ಅತ್ಯಾಧುನಿಕ ಬಾಂಬ್ ಎಂದು ವ್ಯಾಕ್ಯೂಮ್ ಬಾಂಬ್‍ನ್ನು ಕರೆಯಲಾಗುತ್ತದೆ. 2007ರಲ್ಲಿ ವ್ಯಾಕ್ಯೂಮ್ ಬಾಂಬ್ ಅಭಿವೃದ್ಧಿ ಮಾಡಿದ್ದ ರಷ್ಯಾ. 2016ರಲ್ಲಿ ಸಿರಿಯಾ ಮೇಲೆ ಪ್ರಯೋಗ ಮಾಡಿತ್ತು ಎಂಬ ಆರೋಪ ಇದೆ. ವಿಶ್ವದಲ್ಲೇ ಮೊದಲಿಗೆ ಅಮೆರಿಕ ಈ ಬಾಂಬ್ ತಯಾರಿಸಿತ್ತು. ಇದನ್ನೂ ಓದಿ: ಉಕ್ರೇನ್‌ನಲ್ಲಿ ಶೆಲ್ ದಾಳಿಗೆ ಮಡಿದ ಕನ್ನಡಿಗನಿಗೆ ಸ್ಯಾಂಡಲ್ ವುಡ್ ಕಣ್ಣೀರು

    ಇದೀಗ ಉಕ್ರೇನ್ ಮೇಲೆ ರಷ್ಯಾ, ವ್ಯಾಕ್ಯೊಮ್ ಬಾಂಬ್‍ನ್ನು ನಿರಾಶ್ರಿತರು ಆಶ್ರಯ ಪಡೆದಿರುವ ಶಾಲೆಯೊಂದರ ಮೇಲೆ ದಾಳಿ ನಡೆಸಿದೆ ಎಂದು ಮಾನವ ಹಕ್ಕುಗಳ ಸಂಘ ಆರೋಪಿಸಿದೆ. ಅಲ್ಲದೇ ಉಕ್ರೇನ್ ಸೈನಿಕರ ಮೇಲೆ ಕೂಡ ವ್ಯಾಕ್ಯೂಮ್ ಬಾಂಬ್ ಎಸೆಯಲಾಗಿದ್ದು, ಪುಟಿನ್ ಉಕ್ರೇನ್‍ನನ್ನು ನಾಶ ಪಡಿಸುವ ಉದ್ದೇಶದಿಂದ ಈ ದಾಳಿ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

  • ಊಟ ತರಲು ನನ್ನ ಬಳಿ ದುಡ್ಡಿಲ್ಲ, ಸ್ವಲ್ಪ ಹಣ ಹಾಕು ಅಂದ ಅದೇ ನವೀನ್‍ನ ಕೊನೆ ಮಾತು: ಶ್ರೀಕಾಂತ್

    ಊಟ ತರಲು ನನ್ನ ಬಳಿ ದುಡ್ಡಿಲ್ಲ, ಸ್ವಲ್ಪ ಹಣ ಹಾಕು ಅಂದ ಅದೇ ನವೀನ್‍ನ ಕೊನೆ ಮಾತು: ಶ್ರೀಕಾಂತ್

    ಕೀವ್: ಊಟ ತರಲು ನನ್ನ ಬಳಿ ದುಡ್ಡಿಲ್ಲ, ಸ್ವಲ್ಪ ಹಣ ಹಾಕು ಅಂದ. ಅದೇ ಅವನ ಕೊನೆ ಮಾತಾಗಿತ್ತು. ನಮಗೆಂದು ಊಟ ತರಲು ಹೋದವರ ಬರಲೇ ಇಲ್ಲ ಎಂದು ಉಕ್ರೇನ್‍ನ ಖಾರ್ಕಿವ್‍ನಲ್ಲಿ ಶೆಲ್ ದಾಳಿ ವೇಳೆ ಮೃತಪಟ್ಟ ಹಾವೇರಿ ಮೂಲದ ವೈದ್ಯಕೀಯ ವಿದ್ಯಾರ್ಥಿ ನವೀನ್‍ರನ್ನು ನೆನೆಪಿಸಿಕೊಂಡು ಅವರ ಸ್ನೇಹಿತ ಶ್ರೀಕಾಂತ್ ಭಾವುಕರಾಗಿದ್ದಾರೆ.

    ರಷ್ಯಾ-ಉಕ್ರೇನ್ ನಡುವಿನ ಯುದ್ಧದ ತೀವ್ರಗೊಳ್ಳುತ್ತಿದೆ. ಆದಷ್ಟು ಬೇಗ ಉಕ್ರೇನ್ ತೊರೆಯಿರಿ ಎಂದು ಕೇಂದ್ರ ಸರ್ಕಾರ ಸೂಚನೆ ಕೊಟ್ಟ ಬೆನ್ನಲ್ಲೇ ರಷ್ಯಾ ಶೆಲ್ ದಾಳಿಗೆ ಕನ್ನಡಿಗ ನವೀನ್ (22) ಬಲಿಯಾಗಿದ್ದಾರೆ. ಖಾರ್ಕಿವ್‌ನಲ್ಲಿ ಮೆಡಿಕಲ್ ಓದುತ್ತಿದ್ದ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಚಳಗೇರಿಯ ನವೀನ್ ದುರಂತ ಸಾವನ್ನಪ್ಪಿದ್ದಾರೆ. ಖಾರ್ಕೀವ್‍ನಲ್ಲಿ ಇವತ್ತು ಬೆಳಗ್ಗೆ 7 ಗಂಟೆಗೆ ಸೂಪರ್ ಮಾರ್ಕೆಟ್‍ಗೆ ಹೋಗಿ ಸಾಲಿನಲ್ಲಿ ನಿಂತಿದ್ದಾಗ ನವೀನ್ ದುರ್ಮರಣಕ್ಕೀಡಾಗಿದ್ದಾರೆ. ಇದನ್ನೂ ಓದಿ: ಉಕ್ರೇನ್‌ನಲ್ಲಿ ಶೆಲ್ ದಾಳಿಗೆ ಮಡಿದ ಕನ್ನಡಿಗನಿಗೆ ಸ್ಯಾಂಡಲ್ ವುಡ್ ಕಣ್ಣೀರು

    ಈ ಬಗ್ಗೆ, ಖಾರ್ಕಿವ್‌ನಲ್ಲಿರುವ ನವೀನ್ ಸ್ನೇಹಿತ ಶ್ರೀಕಾಂತ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಬೆಳಗ್ಗೆ 7.30ಕ್ಕೆ ರೈಲ್ವೇ ನಿಲ್ದಾಣಕ್ಕೆ ಹೋಗಬೇಕಿತ್ತು. ರೈಲಿನ ಮೂಲಕ ಪೋಲೆಂಡ್ ಗಡಿ ತಲುಪಬೇಕಿತ್ತು. ನವೀನ್ ಸೇರಿ 8 ಜನರ ನಮ್ಮ ತಂಡ ರೈಲ್ವೇ ನಿಲ್ದಾಣಕ್ಕೆ ಹೊರಡಬೇಕಿತ್ತು. ಈ ವೇಳೆ, ಎಲ್ಲರಿಗೂ ಊಟ ತರಲು ಬಂಕರ್‌ನಿಂದ ನವೀನ್ ಹೊರ ಹೋಗಿದ್ದ. ಸೂಪರ್ ಮಾರ್ಕೆಟ್ ಬಳಿ ತುಂಬಾ ಕ್ಯೂ ಇದೆ. ನನ್ನ ಬಳಿ ದುಡ್ಡಿಲ್ಲ, ಸ್ವಲ್ಪ ಹಣ ಹಾಕು ಅಂದ. ಅದೇ ಅವನ ಕೊನೆ ಮಾತಾಗಿತ್ತು. ನಮಗೆಂದು ಊಟ ತರಲು ಹೋದವರ ಬರಲೇ ಇಲ್ಲ ಅಂತ ಭಾವುಕರಾದರು. ಇದನ್ನೂ ಓದಿ: ಖಾರ್ಕಿವ್ ಶೆಲ್ ದಾಳಿ ಯುದ್ಧಾಪರಾಧ: ಉಕ್ರೇನ್ ಅಧ್ಯಕ್ಷ

  • ಖಾರ್ಕಿವ್ ಶೆಲ್ ದಾಳಿ ಯುದ್ಧಾಪರಾಧ: ಉಕ್ರೇನ್ ಅಧ್ಯಕ್ಷ

    ಕೀವ್: ಉಕ್ರೇನ್‍ನ ಖಾರ್ಕಿವ್‍ನಲ್ಲಿ ಮಂಗಳವಾರ ನಡೆದ ರಷ್ಯಾದ ಶೆಲ್ ದಾಳಿಯನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ವಿರೋಧಿಸಿದ್ದಾರೆ. ಈ ದಾಳಿಯನ್ನು ಯುದ್ಧಾಪರಾಧ ಎಂದು ಕರೆದಿದ್ದಾರೆ.

    ಖಾರ್ಕಿವ್‍ನಲ್ಲಿ ನಡೆದ ರಷ್ಯಾದ ಶೆಲ್ ದಾಳಿಯನ್ನು ಯುದ್ಧಾಪರಾಧ ಎಂದು ವಿರೋಧಿಸಿದ ಝೆಲೆನ್ಸ್ಕಿ ಉಕ್ರೇನ್‍ನ ರಾಜಧಾನಿ ಕೀವ್ ಅನ್ನು ರಕ್ಷಿಸುವುದು ರಷ್ಯಾ ಪಡೆಯ ಪ್ರಮುಖ ಆದ್ಯತೆ ಎಂದು ಆಘಾತ ವ್ಯಕ್ತಪಡಿಸಿದ್ದಾರೆ.

    ಖಾರ್ಕಿವ್ ಮೇಲಿನ ದಾಳಿ ಯುದ್ಧಾಪರಾಧ. ಖಾರ್ಕಿವ್ ಹಾಗೂ ಕೀವ್, ರಷ್ಯಾದ ಮುಖ್ಯ ಗುರಿಯಾಗಿದೆ. ಇದೀಗ ಖಾರ್ಕಿವ್‍ನಲ್ಲಿ ಘಟಿಸಿರುವ ದುರಂತದಂತೆ ರಾಜಧಾನಿಯಲ್ಲೂ ದಾಳಿ ನಡೆಸುವುದು ರಷ್ಯಾದ ಗುರಿ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಖಾರ್ಕಿವ್‍ನ ಆಡಳಿತ ಕಚೇರಿ ಮೇಲೆ ಬಾಂಬ್ ದಾಳಿ- ಕಟ್ಟಡ ಸಂಪೂರ್ಣ ಧ್ವಂಸ

    ಮಂಗಳವಾರ ಖಾರ್ಕಿವ್‍ನಲ್ಲಿರುವ ಸರ್ಕಾರಿ ಪ್ರಧಾನ ಕಛೇರಿ ಕಟ್ಟಡದ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿ ಭಾರೀ ಹಾನಿಯನ್ನು ಮಾಡಿದೆ. ಶೆಲ್ ದಾಳಿಗೆ ಕರ್ನಾಟಕ ಮೂಲದ ವಿದ್ಯಾರ್ಥಿ ಸೇರಿದಂತೆ ಒಟ್ಟು 17 ಮಂದಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ಸಾವು

    2ನೇ ಮಹಾಯುದ್ಧದ ಅಂತ್ಯದ ಬಳಿಕ ಇದೇ ಮೊದಲ ಬಾರಿಗೆ ಉಕ್ರೇನ್‍ನ ಖಾರ್ಕಿವ್ ಹಾಗೂ ಕೀವ್ ನಗರಗಳ ಮೇಲೆ ಬಾಂಬ್ ದಾಳಿ ನಡೆದಿದೆ. ಫೆಬ್ರವರಿ 24ರಂದು ರಷ್ಯಾ ಉಕ್ರೇನ್ ಅನ್ನು ಆಕ್ರಮಿಸಿ 1 ವಾರದಿಂದ ದೇಶಾದ್ಯಂತ ದಾಳಿ ನಡೆಸುತ್ತಿದೆ.

  • ಉಕ್ರೇನ್‌ ಯುದ್ಧ – ಸಾಕು ನಾಯಿಯೊಂದಿಗೆ ಭಾರತ ಮೂಲದ ವಿದ್ಯಾರ್ಥಿನಿ ಎಸ್ಕೇಪ್‌!

    ಉಕ್ರೇನ್‌ ಯುದ್ಧ – ಸಾಕು ನಾಯಿಯೊಂದಿಗೆ ಭಾರತ ಮೂಲದ ವಿದ್ಯಾರ್ಥಿನಿ ಎಸ್ಕೇಪ್‌!

    ಕೀವ್: ರಷ್ಯಾ ದಾಳಿಯಿಂದ ತತ್ತರಿಸಿರುವ ಉಕ್ರೇನ್‌ನಿಂದ ಭಾರತ ಮೂಲದ ವಿದ್ಯಾರ್ಥಿನಿಯೊಬ್ಬಳು ತನ್ನ ಸಾಕು ನಾಯಿಯೊಂದಿಗೆ ಎಸ್ಕೇಪ್‌ ಆಗಿದ್ದಾರೆ.

    ಆರ್ಯ ಆಲ್ಡ್ರಿನ್ ಎಸ್ಕೇಪ್‌ ಆಗಿರುವ ವಿದ್ಯಾರ್ಥಿನಿ. ಈಕೆ ತನ್ನ ಸಾಕು ನಾಯಿಯನ್ನು ತಬ್ಬಿಕೊಂಡು ವಾಹನದಲ್ಲಿ ಕುಳಿತಿರುವ ಘೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಫೋಟೋ ಜೊತೆಗೆ, ಆರ್ಯ ಯುದ್ಧ ಭೂಮಿಯಿಂದ ಸಾಕು ನಾಯಿಯನ್ನು ರಕ್ಷಿಸಿದ್ದಾರೆ. ಕೇರಳಕ್ಕೆ ಬಂದಿದ್ದಾರೆ ಎಂದು ಬರೆಯಲಾಗಿದೆ. ಇದನ್ನೂ ಓದಿ: ಕೀವ್‍ನಲ್ಲಿ ರಷ್ಯಾ ರಾಕೆಟ್ ದಾಳಿಗೆ 70 ಉಕ್ರೇನ್ ಸೈನಿಕರು ಬಲಿ

    ಸಾಕು ಪ್ರಾಣಿಯನ್ನು ಉಳಿಸಲು ಆರ್ಯ ಮಾಡಿದ ಪ್ರಯತ್ನಗಳಿಗೆ ಸಾಮಾಜಿಕ ಮಾಧ್ಯಮದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ತನ್ನ ಸಾಕುಪ್ರಾಣಿಯನ್ನು ಉಳಿಸಲು ಆರ್ಯ ಮಾಡಿದ ಪ್ರಯತ್ನಗಳನ್ನು ಬಳಕೆದಾರರು ಪ್ರಶಂಸಿಸಿದ್ದಾರೆ. ʻಉಕ್ರೇನ್ ಅಧ್ಯಕ್ಷರು ತಮ್ಮ ನಾಗರಿಕರನ್ನು ಬಿಟ್ಟು ಓಡಿಹೋಗಲಿಲ್ಲ. ಹಾಗೆಯೇ ವಿದ್ಯಾರ್ಥಿನಿಯೂ ತನ್ನ ನಾಯಿಯನ್ನು ಯುದ್ಧ ವಲಯದಲ್ಲಿ ಬಿಟ್ಟು ಓಡಿ ಹೋಗಲಿಲ್ಲʼ ಎಂದು ಒಬ್ಬರು ಕಾಮೆಂಟ್‌ ಮಾಡಿದ್ದಾರೆ.

    ಇದು ತುಂಬಾ ಹೃದಯ ಸ್ಪರ್ಶಿಯಾಗಿದೆ. ಅಂತಹ ಕರುಣಾಮಯಿಗಳನ್ನು ದೇವರು ಆಶೀರ್ವದಿಸಲಿ ಎಂದು ಮತ್ತೊಬ್ಬರು ಕಾಮೆಂಟ್‌ ಮಾಡಿದ್ದಾರೆ. ಇದನ್ನೂ ಓದಿ: ಕೀವ್‍ಗೆ ಮುನ್ನುಗ್ಗುತ್ತಿದೆ 64 ಕಿ.ಮೀ ಉದ್ದದ ರಷ್ಯಾ ಸೇನೆ

     

    ಆರ್ಯ, ಉಕ್ರೇನ್‌ನ ರಾಷ್ಟ್ರೀಯ ಪಿರಗಾವ್‌ ಮೆಮೋರಿಯಲ್‌ ಮೆಡಿಕಲ್‌ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿನಿ ಕೇರಳದ ಇಡುಕ್ಕಿ ಜಿಲ್ಲೆಗೆ ವಾಪಸ್ಸಾಗಿದ್ದಾರೆ ಎಂದು ಕೇರಳ ಶಿಕ್ಷಣ ಸಚಿವ ವಿ.ಶಿವಕುಟ್ಟಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

    https://twitter.com/kalidas_2k20/status/1498249132846170113?ref_src=twsrc%5Etfw%7Ctwcamp%5Etweetembed%7Ctwterm%5E1498249132846170113%7Ctwgr%5E%7Ctwcon%5Es1_&ref_url=https%3A%2F%2Fwww.ndtv.com%2Fworld-news%2Findian-student-manages-to-rescue-pet-dog-brings-it-to-kerala-2796341

    ಆರ್ಯ, ವಂಡಿಪೆರಿಯಾರ್‌ ಮೂಲದವರು. ಯುದ್ಧ ನಡೆಯುತ್ತಿರುವ ಉಕ್ರೇನ್‌ನಿಂದ ತವರು ಭಾರತಕ್ಕೆ ಮರಳಿದ್ದಾರೆ. ಈ ಜಗತ್ತು ಪ್ರೀತಿಯ ಮೂಲಕ ಬೆಳವಣಿಗೆಯನ್ನು ಬಯಸುತ್ತದೆ ಎಂದು ಕೇರಳ ಶಿಕ್ಷಣ ಸಚಿವ ಶಿವಕುಟ್ಟಿ ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ಸಾವು

    ರಷ್ಯಾ ಕಳೆದ ವಾರ ಉಕ್ರೇನ್‌ ಮೇಲೆ ಯುದ್ಧ ಸಾರಿದೆ. ಇದರಿಂದಾಗಿ ಇಲ್ಲಿನ ನಾಗರಿಕರು ಯುದ್ಧದ ಭೀತಿಯಿಂದಾಗಿ ಆತಂಕಗೊಂಡಿದ್ದಾರೆ. ಭಾರತ ಸೇರಿದಂತೆ ಅನೇಕ ದೇಶಗಳ ಪ್ರಜೆಗಳು ಮತ್ತು ವಿದ್ಯಾರ್ಥಿಗಳು ಉಕ್ರೇನ್‌ ತೊರೆಯುತ್ತಿದ್ದಾರೆ.

  • ಕೀವ್‍ನಲ್ಲಿ ರಷ್ಯಾ ರಾಕೆಟ್ ದಾಳಿಗೆ 70 ಉಕ್ರೇನ್ ಸೈನಿಕರು ಬಲಿ

    ಕೀವ್‍ನಲ್ಲಿ ರಷ್ಯಾ ರಾಕೆಟ್ ದಾಳಿಗೆ 70 ಉಕ್ರೇನ್ ಸೈನಿಕರು ಬಲಿ

    ಕೀವ್: ರಷ್ಯಾ ನಡೆಸಿದ ರಾಕೆಟ್ ದಾಳಿಗೆ 70 ಸೈನಿಕರು ಬಲಿಯಾಗಿದ್ದಾರೆ ಎಂದು ಉಕ್ರೇನ್ ಮಿಲಿಟರಿ ಪಡೆ ಮಾಹಿತಿ ನೀಡಿದೆ.

    ರಷ್ಯಾ ಮಿಲಿಟರಿ ಪಡೆ ಕೀವ್‍ನ್ನು ವಶಪಡಿಸಿಕೊಳ್ಳಲು ಹರಸಾಹಸ ಪಡುತ್ತಿದ್ದು, ಇಂದು ಉಕ್ರೇನ್‍ನ 70 ಸೈನಿಕರನ್ನು ರಾಕೆಟ್ ದಾಳಿ ಮೂಲಕ ಬಲಿ ಪಡೆದಿದೆ. ರಾಕೆಟ್ ದಾಳಿಗೆ ಸೈನಿಕರೊಂದಿಗೆ ಹಲವು ನಾಗರಿಕರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಕೀವ್‍ಗೆ ಮುನ್ನುಗ್ಗುತ್ತಿದೆ 64 ಕಿ.ಮೀ ಉದ್ದದ ರಷ್ಯಾ ಸೇನೆ

     

    ರಷ್ಯಾ ಇಂದು ಕೀವ್ ಮತ್ತು ಖಾರ್ಕಿವ್ ಪ್ರದೇಶದಲ್ಲಿ ಅತೀ ಹೆಚ್ಚಿನ ದಾಳಿ ಮಾಡಿದ್ದು, ರಾಕೆಟ್ ಮತ್ತು ಬಾಂಬ್ ದಾಳಿ ಮುಂದುವರಿಸಿರುವ ರಷ್ಯಾ ರಕ್ತಪಾತವನ್ನು ಮುಂದುವರಿಸಿದೆ. ನಿನ್ನೆ ಸಂಧಾನ ಸಭೆ ನಡೆಸಿದರೂ ಯಾವುದೇ ಫಲನೀಡಿಲ್ಲ ಎಂದು ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ಸಾವು

    ನಿನ್ನೆ ರಾತ್ರಿಯಿಡೀ ಕೀವ್ ಮೇಲೆ ರಷ್ಯಾ ದಾಳಿ ನಡೆಸಿದೆ. ರಷ್ಯಾ ದಾಳಿಗೆ ಉಕ್ರೇನ್‍ನ ಬೃಹತ್ ಕಟ್ಟಗಳು ಧ್ವಂಸವಾಗಿದೆ. ರಷ್ಯಾ ಜನವಸತಿ ಕೇಂದ್ರಗಳ ಮೇಲೂ ದಾಳಿ ಮಾಡುತ್ತಿದ್ದು, ಈಗ ಖಾರ್ಕಿವ್‍ನ ಕೇಂದ್ರದ ಮೇಲೆ ಬಾಂಬ್ ದಾಳಿ ಮಾಡಿದೆ. ಇದು ಸ್ಥಳೀಯ ಆಡಳಿತ ಕಚೇರಿ ಮೇಲೆ ರಷ್ಯಾ ದಾಳಿ ನಡೆಸಿದೆ. ಕೀವ್ ಮತ್ತು ಖಾರ್ಕಿವ್‍ನಲ್ಲಿ ಪರಿಸ್ಥಿತಿ ಶೋಚನೀಯವಾಗಿದೆ.

  • ಕೀವ್‍ಗೆ ಮುನ್ನುಗ್ಗುತ್ತಿದೆ 64 ಕಿ.ಮೀ ಉದ್ದದ ರಷ್ಯಾ ಸೇನೆ

    ಕೀವ್‍ಗೆ ಮುನ್ನುಗ್ಗುತ್ತಿದೆ 64 ಕಿ.ಮೀ ಉದ್ದದ ರಷ್ಯಾ ಸೇನೆ

    ಕೀವ್: ರಷ್ಯಾದ ಬೃಹತ್ ಸೇನೆ ಉಕ್ರೇನ್ ರಾಜಧಾನಿ ಕೀವ್ ಕಡೆ ಸಾಗುತ್ತಿರುವ ವಿಷಯ ಉಪಗ್ರಹ ಫೋಟೋಗಳಲ್ಲಿ ಬಹಿರಂಗವಾಗಿದೆ.

    ಉಕ್ರೇನ್‍ಗೆ ಬೆದರಿಕೆ ಹಾಕುತ್ತಿರುವ ರಷ್ಯಾದ ಮಿಲಿಟರಿ ಬೆಂಗಾವಲು ಯುದ್ಧ ಪ್ರಾರಂಭಕ್ಕೂ ಮುನ್ನ ಯೋಜಿಸಿದ್ದಕಿಂತ ಭಯಾನಕವಾಗಿರುವುದು ತಿಳಿದುಬರುತ್ತಿದೆ. ರಷ್ಯಾ ಸೇನೆ ಶಸ್ತ್ರಾಸ್ತ್ರ ಹಾಗೂ ಫಿರಂಗಿಗಳನ್ನು ತುಂಬಿರುವ ವಾಹನಗಳಲ್ಲಿ ಉಕ್ರೇನ್ ರಾಜಧಾನಿ ಕೀವ್ ಕಡೆಗೆ ಹೋಗುತ್ತಿರುವುದು ಮುಂದೆ ಭಾರೀ ದೊಡ್ಡ ಅಪಾಯವಾಗುವ ಸಾಧ್ಯತೆ ಇದೆ.

    ಈ ಹಿಂದೆ ರಷ್ಯಾ ಬೆಂಗಾವಲು ಪಡೆ 17 ಮೈಲು(27 ಕಿ.ಮೀ) ವ್ಯಾಪಿಸಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಅಮೆರಿಕನ್ ಕಂಪನಿ ಮ್ಯಾಕ್ಸರ್ ಉಪಗ್ರಹ ಕ್ಲಿಕ್ಕಿಸಿರುವ ಫೋಟೋಗಳು 40 ಮೈಲಿ(64 ಕಿ.ಮೀ) ಉದ್ದದ ಬೆಂಗಾವಲು ಪಡೆ ಉಕ್ರೇನ್ ರಾಜಧಾನಿಯತ್ತ ಹೋಗುತ್ತಿರುವುದನ್ನು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ತಕ್ಷಣವೇ ಉಕ್ರೇನ್‌ ರಾಜಧಾನಿ ತೊರೆಯಿರಿ: ಭಾರತೀಯರಿಗೆ ರಾಯಭಾರಿ ಕಚೇರಿ ಸೂಚನೆ

    ಈ ಉಪಗ್ರಹದ ಚಿತ್ರವನ್ನು ಪ್ರಿಬಸ್ರ್ಕ್‍ನ ಉತ್ತರದ ಆಂಟೋನೋವ್ ವಾಯುನೆಲೆಯಿಂದ ತೆಗೆಯಲಾಗಿದೆ ಎಂದು ಕಂಪನಿ ತಿಳಿಸಿದೆ. ಈ ಭಾರೀ ಪ್ರಮಾಣದ ಸೈನ್ಯ ಕೀವ್ ಹಾಗೂ ಇತರ ನಗರಗಳ ಮೇಲೆ ದಾಳಿ ನಡೆಸಿದರೆ ಕಲ್ಪಿಸಲೂ ಸಾಧ್ಯವಾಗದ ಮಟ್ಟಿನಲ್ಲಿ ಮಾರಣ ಹೋಮವಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ಸಾವು

    ರಷ್ಯಾಗೆ ಹೋಲಿಸಿದರೆ ಉಕ್ರೇನ್‍ನಲ್ಲಿ ಸದ್ಯ ಶಸ್ತ್ರಾಸ್ತ್ರ ಹಾಗೂ ಸೇನಾ ಬಲ ಕಡಿಮೆಯಿರಬಹುದು. ಆದರೂ ಉಕ್ರೇನ್ ದೇಶದ ಮೂರೂ ಕಡೆಯಿಂದ ದಾಳಿಯನ್ನು ಎದುರಿಸುತ್ತಿದ್ದರೂ ಶರಣಾಗತಿಗೆ ಒಪ್ಪುತ್ತಿಲ್ಲ.

  • ಭಾರತೀಯರ ಸ್ಥಳಾಂತರಕ್ಕೆ ತೆರಳಿದ ವಾಯುಪಡೆ

    ಭಾರತೀಯರ ಸ್ಥಳಾಂತರಕ್ಕೆ ತೆರಳಿದ ವಾಯುಪಡೆ

    ನವದೆಹಲಿ: ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವಂತೆ ವಾಯುಪಡೆಗೆ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ ಎಂದು ಅಧಿಕೃತ ಮೂಲ ಹೇಳಿದೆ.

    ವಾಯುಪಡೆಯ ಸಾಮಥ್ರ್ಯವನ್ನು ಸಹಾಯ ಪಡೆದುಕೊಂಡು ಕಡಿಮೆ ಸಮಯದಲ್ಲಿ ಹೆಚ್ಚಿನ ಜನರನ್ನು ಸ್ಥಳಾಂತರಿಸಬಹುದು. ಇದು ಇದರಿಂದ ಹೆಚ್ಚು ಜನರನ್ನು ಕರೆಸಿಕೊಳ್ಳಲು ಸಹಾಯವಾಗುತ್ತದೆ ಎಂದು ತಿಳಿಸಿದೆ.

    ಭಾರತದ ವಾಯುಪಡೆಯು ಸಿ-17 ಗ್ಲೋಬ್‍ಮಾಸ್ಟರ್ ವಿಮಾನವನ್ನು ಆಪರೇಷನ್ ಗಂಗಾದ ಭಾಗವಾಗಿ ಅಳವಡಿಸುವ ನಿರೀಕ್ಷೆಯಿದೆ. ಇಂದು ಬೆಳಗ್ಗೆ 182 ಭಾರತೀಯರನ್ನು ಹೊತ್ತ ವಿಮಾನವೊಂದು ಮುಂಬೈಗೆ ಬಂದಿಳಿದಿದೆ. ಉಕ್ರೇನ್ ತನ್ನ ವಾಯುಪ್ರದೇಶವನ್ನು ಮುಚ್ಚಿದ್ದರಿಂದ ಭಾರತೀಯ ವಿಮಾನವು ರೊಮೇನಿಯನ್ ರಾಜಧಾನಿ ಬುಕಾರೆಸ್ಟ್ ತಲುಪಿದೆ.

    ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಉಕ್ರೇನ್‍ನ ನೆರೆಯ ರಾಷ್ಟ್ರಗಳಾದ ರೊಮೇನಿಯಾ ಮತ್ತು ಸ್ಲೋವಾಕ್ ರಿಪಬ್ಲಿಕ್‍ನಲ್ಲಿರುವವರೊಂದಿಗೆ ಮಾತನಾಡಿ ಉಕ್ರೇನ್‍ನಲ್ಲಿ ಸಿಲುಕಿರುವವರನ್ನು ದೇಶಕ್ಕೆ ವಾಪಸ್ ಕರೆಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಟ್ರ್ಯಾಕ್ಟರ್ ಬಳಸಿ ರಷ್ಯಾದ ಮಿಲಿಟರಿ ಟ್ಯಾಂಕ್ ಹೊತ್ತೊಯ್ದ ರೈತ

    ಉಕ್ರೇನ್‍ನಲ್ಲಿದ್ದ ಅಂದಾಜು 20,000 ಭಾರತೀಯರಲ್ಲಿ ಸುಮಾರು 8,000 ಜನರು ಫೆಬ್ರವರಿ ತಿಂಗಳಲ್ಲಿ ದೇಶವನ್ನು ತೊರೆದಿದ್ದಾರೆ ಎಂದು ಸರ್ಕಾರ ಹೇಳಿದೆ. ಇದನ್ನೂ ಓದಿ: ಪುಟಿನ್ ಆದೇಶ ನಿರಾಕರಿಸಿ ಉಕ್ರೇನ್‍ನಿಂದ ಹಿಂದಿರುಗಿದ್ರೆ ಪ್ರತೀ ಸೈನಿಕರೊಂದಿಗೆ ಸೆಕ್ಸ್‌ಗೆ ಸಿದ್ಧಳಿದ್ದೇನೆ: ಮಾಡೆಲ್

  • ತಕ್ಷಣವೇ ಉಕ್ರೇನ್‌ ರಾಜಧಾನಿ ತೊರೆಯಿರಿ: ಭಾರತೀಯರಿಗೆ ರಾಯಭಾರಿ ಕಚೇರಿ ಸೂಚನೆ

    ತಕ್ಷಣವೇ ಉಕ್ರೇನ್‌ ರಾಜಧಾನಿ ತೊರೆಯಿರಿ: ಭಾರತೀಯರಿಗೆ ರಾಯಭಾರಿ ಕಚೇರಿ ಸೂಚನೆ

    ನವದೆಹಲಿ: ರಷ್ಯಾದ ಆಕ್ರಮಣಕ್ಕೆ ತುತ್ತಾಗಿರುವ ಉಕ್ರೇನ್‌ ರಾಜಧಾನಿ ಕೀವ್‌ ಅನ್ನು ಈಗಿಂದೀಗಲೇ ತೊರೆಯಿರಿ ಎಂದು ಭಾರತ ಮೂಲದ ನಾಗರಿಕರಿಗೆ ರಾಯಭಾರಿ ಕಚೇರಿ ತಿಳಿಸಿದೆ.

    ಉಕ್ರೇನ್‌ ರಾಜಧಾನಿಯಲ್ಲಿರುವ ಭಾರತೀಯ ಮೂಲದವರು ಈ ಕೂಡಲೇ ಕೀವ್‌ ಅನ್ನು ತೊರೆಯಿರಿ. ರೈಲು ಅಥವಾ ಇನ್ನಿತರ ಲಭ್ಯ ಸಾರಿಗೆ ವ್ಯವಸ್ಥೆ ಮೂಲಕ ರಾಜಧಾನಿಯಿಂದ ಹೊರಡಿ ಎಂದು ಉಕ್ರೇನ್‌ನಲ್ಲಿರುವ ಭಾರತ ರಾಯಭಾರಿ ಕಚೇರಿ ಟ್ವೀಟ್‌ ಮಾಡಿ ತಿಳಿಸಿದೆ. ಇದನ್ನೂ ಓದಿ: ಟ್ರ್ಯಾಕ್ಟರ್ ಬಳಸಿ ರಷ್ಯಾದ ಮಿಲಿಟರಿ ಟ್ಯಾಂಕ್ ಹೊತ್ತೊಯ್ದ ರೈತ

    ಕೀವ್‌ನ ವಾಯುವ್ಯ ರಸ್ತೆಗಳಲ್ಲಿ ರಷ್ಯಾ ಸೇನಾ ವಾಹನಗಳಿರುವ ಉಪಗ್ರಹ ಚಿತ್ರಗಳು ಬಿಡುಗಡೆಯಾದ ಕೆಲವೇ ಗಂಟೆಗಳ ನಂತರ ಈ ಸಲಹೆಯನ್ನು ಪೋಸ್ಟ್ ಮಾಡಲಾಗಿದೆ. ಯುಎಸ್ ಮೂಲದ ಬಾಹ್ಯಾಕಾಶ ತಂತ್ರಜ್ಞಾನ ಕಂಪನಿ ಬಿಡುಗಡೆ ಮಾಡಿದ ಚಿತ್ರಗಳಲ್ಲಿ ನೂರಾರು ಟ್ಯಾಂಕ್‌ಗಳು, ಫಿರಂಗಿಗಳು, ಶಸ್ತ್ರಸಜ್ಜಿತ ಮತ್ತು ಲಾಜಿಸ್ಟಿಕ್ ವಾಹನಗಳಿವೆ. ಕೀವ್‌ನಲ್ಲಿ ಪರಿಸ್ಥಿತಿ ಬಿಗಡಾಯಿಸಿದ್ದು, ಹೆಚ್ಚಿನ ದಾಳಿಯಾಗಿ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ.

    ಯುದ್ಧಪೀಡಿತ ರಾಷ್ಟ್ರ ಉಕ್ರೇನ್‌ನಲ್ಲಿ 16,000 ವಿದ್ಯಾರ್ಥಿಗಳು ಸಿಲುಕಿದ್ದಾರೆ. ಉಕ್ರೇನ್‌ ಬಂಕರ್‌ಗಳು, ಮೆಟ್ರೋ ನಿಲ್ದಾಣಗಳು, ಬಾಂಬ್‌ ಸೆಲ್ಟರ್‌ಗಳಲ್ಲಿ ಅಡಗಿರುವ ವಿದ್ಯಾರ್ಥಿಗಳು ಸಹಾಯಕ್ಕಾಗಿ ಬೇಡಿಕೆ ಇಡುತ್ತಿರುವ ಫೋಟೋ, ವೀಡಿಯೋಗಳನ್ನು ಶೇರ್‌ ಮಾಡುತ್ತಿದ್ದಾರೆ. ಇದನ್ನೂ ಓದಿ: ಪುಟಿನ್ ಆದೇಶ ನಿರಾಕರಿಸಿ ಉಕ್ರೇನ್‍ನಿಂದ ಹಿಂದಿರುಗಿದ್ರೆ ಪ್ರತೀ ಸೈನಿಕರೊಂದಿಗೆ ಸೆಕ್ಸ್‌ಗೆ ಸಿದ್ಧಳಿದ್ದೇನೆ: ಮಾಡೆಲ್

    ಇದುವರೆಗೆ 8,000 ಭಾರತೀಯರನ್ನು ಉಕ್ರೇನ್‌ನಿಂದ ಸ್ಥಳಾಂತರಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಉಕ್ರೇನ್‌ನ ಪೂರ್ವ ಭಾಗಗಳಲ್ಲಿ ಭಾರತೀಯ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ.