Tag: ರಷ್ಯಾ

  • ರಷ್ಯಾದ 6 ಮಿಲಿಟರಿ ವಿಮಾನ ಪತನ – 50 ಸೈನಿಕರನ್ನು ಹತ್ಯೆಗೈದ ಉಕ್ರೇನ್‌

    ರಷ್ಯಾದ 6 ಮಿಲಿಟರಿ ವಿಮಾನ ಪತನ – 50 ಸೈನಿಕರನ್ನು ಹತ್ಯೆಗೈದ ಉಕ್ರೇನ್‌

    ಕೈವ್:‌ ತನ್ನ ಮೇಲೆ ಯುದ್ಧ ಸಾರಿರುವ ರಷ್ಯಾದ 6 ಮಿಲಿಟರಿ ಯುದ್ಧ ವಿಮಾನಗಳನ್ನು ನಮ್ಮ ಸೇನೆ ಹೊಡೆದುರುಳಿಸಿದೆ. ಅಲ್ಲದೇ 50 ರಷ್ಯಾ ಸೈನಿಕರನ್ನು ಹತ್ಯೆಗೈಯಲಾಗಿದೆ ಎಂದು ಉಕ್ರೇನ್‌ ತಿಳಿಸಿದೆ.

    ಉಕ್ರೇನ್‌ನ ರಾಜಧಾನಿ ಕೈವ್‌ನ ವಿಮಾನ ನಿಲ್ದಾಣದಲ್ಲಿ ಗುಂಡಿನ ಸದ್ದು ಮೊರೆದಿದೆ. ಪರಿಣಾಮವಾಗಿ ತವರು ದೇಶಗಳಿಗೆ ಮರಳಲು ಮುಂದಾಗಿದ್ದ ನಾಗರಿಕರಿಗೆ ಆತಂಕ ಎದುರಾಗಿದೆ. ಇದನ್ನೂ ಓದಿ: Russia-Ukraine crisis: ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಉಕ್ರೇನ್ ಮನವಿ

    ರಷ್ಯಾದ ಭೂಸೇನಾ ಪಡೆಗಳು ನಾನಾ ಕಡೆಗಳಿಂದ ಉಕ್ರೇನ್‌ ಗಡಿ ಭಾಗಗಳನ್ನು ಪ್ರವೇಶಿಸಿವೆ. ಈ ವೇಳೆ ರಷ್ಯಾದ 50 ಆಕ್ರಮಣಕಾರರನ್ನು ಹತ್ಯೆಗೈದಿರುವುದಾಗಿ ಉಕ್ರೇನ್‌ ತಿಳಿಸಿದೆ.

    ಕ್ರಿಮಿಯನ್ ಗಡಿಯಲ್ಲಿ ನಡೆದ ಶೆಲ್ ದಾಳಿಯಲ್ಲಿ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್‌ನ ಗಡಿ ಸಿಬ್ಬಂದಿ ಹೇಳಿದ್ದಾರೆ. ಇದು ರಷ್ಯಾ ಆಕ್ರಮಣದ ಅಧಿಕೃತವಾಗಿ ದೃಢಪಡಿಸಿದ ಮಿಲಿಟರಿ ಮೊದಲ ಸಾವಾಗಿದೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ಉಕ್ರೇನ್‍ನಲ್ಲಿ ನಾಶವಾಗಿದ್ದು ಏನೇನು? ಇಲ್ಲಿದೆ ವಿವರ

    ದೇಶದ ಪೂರ್ವದಲ್ಲಿ ಆರು ರಷ್ಯಾದ ವಿಮಾನಗಳು ಮತ್ತು ಹೆಲಿಕಾಪ್ಟರ್ ಅನ್ನು ಉರುಳಿಸಲಾಗಿದೆ ಎಂದು ಉಕ್ರೇನ್ ಹೇಳಿಕೊಂಡಿದೆ. ಜಂಟಿ ಫೋರ್ಸ್ ಕಮಾಂಡ್ ಪ್ರಕಾರ, ಇಂದು ಜಂಟಿ ಪಡೆಗಳ ಕಾರ್ಯಾಚರಣೆಯ ಪ್ರದೇಶದಲ್ಲಿ ರಷ್ಯಾ ಆಕ್ರಮಣಕಾರರ ಐದು ವಿಮಾನಗಳು ಮತ್ತು ಹೆಲಿಕಾಪ್ಟರ್ ಅನ್ನು ಹೊಡೆದುರುಳಿಸಲಾಗಿದೆ ಎಂದು ಉಕ್ರೇನ್ ಸೇನಾ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

    ಉಕ್ರೇನ್‌ನ ರಾಜಧಾನಿ ಕೈವ್‌ ಬಳಿಯಿದ್ದ ಮಿಲಿಟರಿ ಹೆಡ್‌ಕ್ವಾಟ್ರಸ್‌, ಏರ್‌ಪೋರ್ಟ್‌, ಸೇನಾನೆಲೆಗಳ ಮೇಲೆ ದಾಳಿ ನಡೆಸಿದೆ ಎಂದು ಉಕ್ರೇನ್‌ನ ಉಪ ಆಂತರಿಕ ಸಚಿವ ಆ್ಯಂಥೊನಿ ಗೆರಾಶ್ಚೆಂಕೊ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಉಕ್ರೇನ್‍ಗೆ ಹೋಗುತ್ತಿದ್ದ ಏರ್ ಇಂಡಿಯಾ ಮಾರ್ಗಮಧ್ಯದಲ್ಲೇ ವಾಪಸ್

  • Russia-Ukraine Crisis: ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಉಕ್ರೇನ್ ಮನವಿ

    Russia-Ukraine Crisis: ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಉಕ್ರೇನ್ ಮನವಿ

    ನವದೆಹಲಿ: ರಷ್ಯಾ – ಉಕ್ರೇನ್ ವಿರುದ್ಧ ಯುದ್ಧ ಘೋಷಿಸುತ್ತಿದ್ದಂತೆ ಈ ಎರಡು ರಾಷ್ಟ್ರಗಳ ಮಧ್ಯೆ ಮಾತುಕತೆ ನಡೆಸಿ ಯುದ್ಧ ನಿಲ್ಲಿಸುವ ಕಾರ್ಯಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮುಂದಾಗಬೇಕೆಂದು ಭಾರತದಲ್ಲಿರುವ ಉಕ್ರೇನ್ ರಾಯಭಾರಿ ಮನವಿ ಮಾಡಿಕೊಂಡಿದ್ದಾರೆ.

    ರಷ್ಯಾ ಈಗಾಗಲೇ ಉಕ್ರೇನ್ ಮೇಲೆ ಯುದ್ಧ ಸಾರಿದ್ದು, ಉಕ್ರೇನ್‍ನಿಂದ ಜನ ಮಹಾವಲಸೆ ಆರಂಭಿಸಿದ್ದಾರೆ. ರಷ್ಯಾ ಮತ್ತು ಭಾರತದ ನಡುವೆ ಉತ್ತಮ ಸಂಬಂಧವಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ರಷ್ಯಾದ ಅಧ್ಯಕ್ಷರಾದ ವಾಡ್ಲಿಮಿರ್ ಪುಟೀನ್ ಜೊತೆ ಮಾತುಕತೆ ನಡೆಸಬೇಕಾಗಿದೆ ಎಂದು ಉಕ್ರೇನ್ ರಾಯಭಾರಿ ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ಉಕ್ರೇನ್‍ನಲ್ಲಿ ನಾಶವಾಗಿದ್ದು ಏನೇನು? ಇಲ್ಲಿದೆ ವಿವರ

    ಈ ಬಗ್ಗೆ ಮಾತನಾಡಿರುವ ಉಕ್ರೇನ್ ರಾಯಭಾರಿ ಇಗೂರ್ ಪೋಲಿಖಾ, ಮೋದಿಯವರು ರಷ್ಯಾ ಅಧ್ಯಕ್ಷರಾದ ಪುಟೀನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಮಾತುಕತೆ ನಡೆಸಬೇಕು. ಈಗಾಗಲೇ ಯುದ್ಧ ಆರಂಭವಾಗಿದೆ. ಇದರಿಂದ ಉಕ್ರೇನ್ ನಾಗರೀಕರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಕಳವಳ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‍ಗೆ ಹೋಗುತ್ತಿದ್ದ ಏರ್ ಇಂಡಿಯಾ ಮಾರ್ಗಮಧ್ಯದಲ್ಲೇ ವಾಪಸ್

    ರಷ್ಯಾದ 5 ಯುದ್ಧ ವಿಮಾನ, 2 ಹೆಲಿಕಾಪ್ಟರ್, ಟ್ಯಾಂಕ್ ಮತ್ತು ಟ್ರಕ್‍ಗಳನ್ನು ಈಗಾಗಲೇ ಉಕ್ರೇನ್ ಮಿಲಿಟರಿ ಪಡೆ ಹೊಡೆದುರುಳಿಸಿದೆ. ನಾವು ಈ ಮೊದಲು ರಷ್ಯಾದ ಮಿಲಿಟರಿ ಪಡೆ ನಮ್ಮ ಗಡಿ ಪ್ರದೇಶದಿಂದ ಒಳಬರದಂತೆ ತಿಳಿಸಿದ್ದೇವು ಆದರೂ ಬಂದಿದ್ದಾರೆ ಹಾಗಾಗಿ ಉಕ್ರೇನ್, ರಷ್ಯಾದ ಮಿಲಿಟರಿ ಪಡೆಗಳನ್ನು ಹೊಡೆದುರುಳಿಸಿದೆ. ಈಗಾಗಲೇ ಪರಿಸ್ಥಿತಿ ಕೈಮೀರುತ್ತಿದ್ದು, ಭಾರತ ಕೂಡಲೇ ಮಧ್ಯಪ್ರವೇಶಿಸಿ ಮಾತುಕತೆಗೆ ಮುಂದಾಗಬೇಕು ಎಂದು ಕೇಳಿಕೊಂಡಿದ್ದಾರೆ.

    ಉಕ್ರೇನ್‍ನಲ್ಲಿ ಆತಂಕ ಮನೆ ಮಾಡಿದ್ದು, 5 ನಗರಗಳಲ್ಲಿ ಮಹಾವಲಸೆ ಆರಂಭವಾಗಿದೆ. ಇತ್ತ ಉಕ್ರೇನ್, ರಷ್ಯಾ ನಡುವೆ ಯುದ್ಧ ಘೋಷಣೆ ಆಗುತ್ತಿದ್ದಂತೆ ಅಂತರಾಷ್ಟ್ರೀಯ ಗಡಿಗಳಲ್ಲಿ ಭಾರತ ಮುನ್ನಚ್ಚರಿಕೆ ವಹಿಸಿದೆ. ಡ್ರೋನ್ ಮೂಲಕ ಬಿಎಸ್‍ಎಫ್ ಪರಿಶೀಲನೆ ಮಾಡಲಾರಂಭಿಸಿದೆ. ಅಂತರಾಷ್ಟ್ರೀಯ ಗಡಿಗಳಲ್ಲಿ ಭದ್ರತಾ ಪಡೆಗಳು ಆಕ್ಟಿವ್ ಆಗಿದ್ದು, ಭಾರತೀಯ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆ ಕರೆದಿದ್ದು, ಉಕ್ರೇನ್‍ನಲ್ಲಿನ ಪರಿಸ್ಥಿತಿಯ ಕುರಿತು ಅಜಿತ್ ದೋವಲ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಇದನ್ನೂ ಓದಿ:  ಉಕ್ರೇನ್ ವಿರುದ್ಧದ ದಾಳಿ ವಿಪತ್ಕಾರಕ ಜೀವಹಾನಿಗೆ ಕಾರಣವಾಗಬಹುದು: ಜೋ ಬೈಡೆನ್

  • ಉಕ್ರೇನ್‍ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ : ಬೊಮ್ಮಾಯಿ

    ಉಕ್ರೇನ್‍ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ : ಬೊಮ್ಮಾಯಿ

    ಬೆಂಗಳೂರು: ಉಕ್ರೇನ್‍ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

    ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಅವರು, ರಷ್ಯಾ ಮತ್ತು ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಸುಮಾರು ಭಾರತದ ವಿದ್ಯಾರ್ಥಿಗಳು ವಿಮಾನ ನಿಲ್ದಾಣಕ್ಕೆ ತಲುಪುವಾಗ ಯುದ್ಧ ಪ್ರಾರಂಭವಾಗಿದ್ದರಿಂದ 100 ವಿದ್ಯಾರ್ಥಿಗಳು ಎರಡು ಬಸ್‍ಗಳಲ್ಲಿ ಸಿಲುಕಿಕೊಂಡಿದ್ದಾರೆ. ಇವರಲ್ಲಿ 10 ಕ್ಕಿಂತ ಹೆಚ್ಚು ಕನ್ನಡಿಗರಿದ್ದು, ಅವರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದೆ. ಉಕ್ರೇನ್‍ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೂ ನಿರಂತರ ಸಂಪರ್ಕದಲ್ಲಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಇದನ್ನೂ ಓದಿ: ಬಜೆಟ್‍ನಲ್ಲಿ ಅಬಕಾರಿ ಇಲಾಖೆಗೆ ಹೊಸ ರೂಪ – ಪೂರ್ವಭಾವಿ ಸಭೆಯಲ್ಲಿ ಸಿಎಂ ಸ್ಪಷ್ಟನೆ

    ಉಕ್ರೇನ್‍ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತವಾಗಿರಲು ಭಾರತೀಯ ರಾಯಭಾರ ಕಚೇರಿ ಸೂಕ್ತ ಮಾರ್ಗದರ್ಶನವನ್ನು ನೀಡಿದೆ. ವಿಮಾನಗಳು ಪುನ: ಪ್ರಾರಂಭವಾದಾಗ ವಿದ್ಯಾರ್ಥಿಗಳನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರದ ವಿದೇಶಾಂಗ ಕಾರ್ಯದರ್ಶಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕೇಂದ್ರ ವಿದೇಶಾಂಗ ಸಚಿವರೊಂದಿಗೂ ಈ ಬಗ್ಗೆ ಚರ್ಚಿಸಲಾಗುವುದು ಎಂದರು. ಇದನ್ನೂ ಓದಿ: ಉಕ್ರೇನ್‍ಗೆ ಹೋಗುತ್ತಿದ್ದ ಏರ್ ಇಂಡಿಯಾ ಮಾರ್ಗಮಧ್ಯದಲ್ಲೇ ವಾಪಸ್

    ಉಕ್ರೇನ್‍ನಲ್ಲಿ ಯುದ್ಧದ ಛಾಯೆಯಿಂದಾಗಿ ಕಳೆದ ವಾರವೇ 200 ಭಾರತೀಯರು ಮರಳಿದ್ದರು. ಆಗ ವಿದ್ಯಾರ್ಥಿಗಳಿಗೆ ಮಾಹಿತಿ ಇರಲಿಲ್ಲವೇ ಎಂಬುದಕ್ಕೆ ಪ್ರತಿಕ್ರಿಯಿಸಿ, ವಿದ್ಯಾರ್ಥಿಗಳು ಬ್ಯಾಚ್‍ಗಳಲ್ಲಿ ಭಾರತಕ್ಕೆ ಮರಳುತ್ತಿದ್ದು, ಈ ಬ್ಯಾಚ್ ಕಡೆಯದಾಗಿತ್ತು. ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ರಷ್ಯಾ ದಾಳಿಯಿಂದ ಉಕ್ರೇನ್‍ನಲ್ಲಿ ನಾಶವಾಗಿದ್ದು ಏನೇನು? ಇಲ್ಲಿದೆ ವಿವರ


    Basavaraj Bommai, Kannadigas, Russia, Ukraine, Bengaluru

  • ಉಕ್ರೇನ್‍ನಲ್ಲಿ ಸಿಲುಕಿದ್ದಾರೆ 10 ಮಂದಿ ಕರ್ನಾಟಕ ವಿದ್ಯಾರ್ಥಿಗಳು!

    ಉಕ್ರೇನ್‍ನಲ್ಲಿ ಸಿಲುಕಿದ್ದಾರೆ 10 ಮಂದಿ ಕರ್ನಾಟಕ ವಿದ್ಯಾರ್ಥಿಗಳು!

    ಬೆಂಗಳೂರು: ರಷ್ಯಾ ಮತ್ತು ಉಕ್ರೇನ್ ನಡುವೆ ದಾಳಿ ನಡೆಯುತ್ತಿದೆ. ಈ ಮಧ್ಯೆ ಕರ್ನಾಟಕದ 10 ಮಂದಿ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದಾರೆ.

    ಉಕ್ರೇನ್ ನಲ್ಲಿ ಬೆಂಗಳೂರು ವಿದ್ಯಾರ್ಥಿ ಲಾಕ್ ಆಗಿದ್ದು, ಪೋಷಕರು ಆತಂಕದಲ್ಲಿ ಇದ್ದಾರೆ. ಪ್ರಸ್ತುತ ದಾಳಿಯಲ್ಲಿ ಸಿಕ್ಕಿಹಾಕಿಕೊಂಡಿರುವ ವಿದ್ಯಾರ್ಥಿಗಳ ಪೋಷಕರು ವಾಟ್ಸ್ ಆ್ಯಪ್ ವೀಡಿಯೋ ಕಾಲ್ ಮೂಲಕ ಸಂಪರ್ಕದಲ್ಲಿ ಇದ್ದಾರೆ. ಬೆಳಗ್ಗೆಯಿಂದ ಬಾಂಬ್ ಬ್ಲಾಸ್ಟ್ ಸದ್ದು ಕೇಳಿಬರುತ್ತಿದ್ದು, ನಾವು ಸುರಕ್ಷಿತವಾಗಿರುವುದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ಉಕ್ರೇನ್‍ನಲ್ಲಿ ನಾಶವಾಗಿದ್ದು ಏನೇನು? ಇಲ್ಲಿದೆ ವಿವರ

    ವಿದ್ಯಾರ್ಥಿಗಳು ಪ್ರಸ್ತುತ ಭಾರತಕ್ಕೆ ಬರಲು ವಿಮಾನ ಸಿಗದೇ ಇರುವುದರಿಂದ ವಾಪಸಾಗಲು ಪರದಾಡುತ್ತಿದ್ದಾರೆ. ಸುದ್ದಿ ತಿಳಿದ ಅಧಿಕಾರಿಗಳು ವಿದ್ಯಾರ್ಥಿಗಳ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ.

    ಸಿಎಂ ಬೊಮ್ಮಾಯಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ವಿದ್ಯಾರ್ಥಿಗಳ ಜೊತೆ ವಿದೇಶಾಂಗ ಕಾರ್ಯದರ್ಶಿ ನಿರಂತರ ಸಂಪರ್ಕದಲ್ಲಿದ್ದಾರೆ. ಕರ್ನಾಟಕದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿರಿಸುತ್ತೇವೆ. ವಿದ್ಯಾರ್ಥಿಗಳ ಕುಟುಂಬದವರಿಗೆ ಮಾಹಿತಿ ನೀಡಲಾಗುವುದು ಎಂದು ಭರವಸೆಯನ್ನು ಕೊಟ್ಟಿದ್ದಾರೆ. ಇದನ್ನೂ ಓದಿ: ಉಕ್ರೇನ್‍ಗೆ ಹೋಗುತ್ತಿದ್ದ ಏರ್ ಇಂಡಿಯಾ ಮಾರ್ಗಮಧ್ಯದಲ್ಲೇ ವಾಪಸ್

    ವಿದ್ಯಾರ್ಥಿಗಳು ಏರ್ ಪೋರ್ಟ್ ತನಕ ಬಸ್ ನಲ್ಲಿ ಬಂದಿದ್ದರು. ಏರ್ ಪೋರ್ಟ್‍ಗೆ ಬಂದ ಮೇಲೆ ಸಮಸ್ಯೆ ಕಾಣಿಸಿಕೊಂಡಿದ್ದು, ವಿಮಾನಗಳು ಹಾರಾಟ ಮಾಡಿಲ್ಲ. ಈ ಹಿನ್ನೆಲೆ ವಿದ್ಯಾರ್ಥಿಗಳು ಬಸ್ ನಲ್ಲೇ ಸಿಕ್ಕಿಕೊಂಡಿದ್ದಾರೆ. ಅವರಿಗೆ ಈಗ ಎಲ್ಲಿಗೆ ಬರಬೇಕು, ಯಾವುದು ಸುರಕ್ಷಿತ ಸ್ಥಳ ಎಂಬ ಮಾಹಿತಿ ನೀಡುತ್ತಿದ್ದೇವೆ. ಕೇಂದ್ರದ ವಿದೇಶಾಂಗ ಕಾರ್ಯದರ್ಶಿ ಜೊತೆಗೂ ನಾನು ಸಂಪರ್ಕ ಮಾಡಲು ಮುಂದಾಗಿದ್ದೇನೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

  • ರಷ್ಯಾ ದಾಳಿಯಿಂದ ಉಕ್ರೇನ್‍ನಲ್ಲಿ ನಾಶವಾಗಿದ್ದು ಏನೇನು? ಇಲ್ಲಿದೆ ವಿವರ

    ರಷ್ಯಾ ದಾಳಿಯಿಂದ ಉಕ್ರೇನ್‍ನಲ್ಲಿ ನಾಶವಾಗಿದ್ದು ಏನೇನು? ಇಲ್ಲಿದೆ ವಿವರ

    ಮಾಸ್ಕೋ: ರಷ್ಯಾ ಸೇನೆ ಉಕ್ರೇನ್ ವಿರುದ್ಧ ದಾಳಿ ನಡೆಸುತ್ತಿದೆ. ದಾಳಿಯ ಕೆಲವೇ ಗಂಟೆಗಳ ನಂತರ ಉಕ್ರೇನ್ ಸೇನಾ ವಾಯುನೆಲೆಗಳು ಮತ್ತು ಅದರ ವಾಯು ರಕ್ಷಣಾ ವ್ಯವಸ್ಥೆಯನ್ನು ನಾಶಗೊಳಿಸಿರುವುದಾಗಿ ರಷ್ಯಾದ ರಕ್ಷಣಾ ಸಚಿವಾಲಯ ವರದಿಯನ್ನು ನೀಡಿದೆ.

    ಈ ವರದಿಯಲ್ಲಿ, ಉಕ್ರೇನಿಯನ್ ಸೇನಾ ವಾಯುನೆಲೆಗಳಲ್ಲಿನ ಮಿಲಿಟರಿ ಮೂಲಸೌಕರ್ಯವನ್ನು ನಾಶಮಾಡಲಾಗಿದೆ. ರಾಜಧಾನಿ ಕೈವ್‍ನ ವಾಯು ರಕ್ಷಣಾ ವ್ಯವಸ್ಥೆಗಳನ್ನು ನಿರ್ಮೂಲನೆ ಮಾಡಲಾಗಿದೆ ಎಂದು ಮಾಹಿತಿಯಲ್ಲಿ ತಿಳಿಸಿದೆ.  ಈ ನಡುವೆ ರಷ್ಯಾದ ಐದು ಯುದ್ಧ ವಿಮಾನ ಮತ್ತು ಹೆಲಿಕ್ಯಾಪ್ಟರ್ ನನ್ನು ಉಕ್ರೇನ್ ನಾಶ ಮಾಡಿದೆ. ಇದನ್ನೂ ಓದಿ: ಉಕ್ರೇನ್‍ಗೆ ಹೋಗುತ್ತಿದ್ದ ಏರ್ ಇಂಡಿಯಾ ಮಾರ್ಗಮಧ್ಯದಲ್ಲೇ ವಾಪಸ್

    ವ್ಲಾಡಿಮಿರ್ ಪುಟಿನ್ ಇಂದು ಉಕ್ರೇನ್ ಮೇಲೆ ದಾಳಿ ಮಾಡುವುದಾಗಿ ಘೋಷಿಸಿದಾಗ ಎಲ್ಲ ಕಡೆ ಇದು ಸಂಚಲನ ಸೃಷ್ಟಿ ಮಾಡಿತ್ತು. ಯುದ್ಧ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಉಕ್ರೇನ್ ನಲ್ಲಿ ಸ್ಫೋಟಗಳು ಕೇಳಿಬಂದವು. ಈ ವೇಳೆ ವಿದೇಶಾಂಗ ಸಚಿವರು ಉಕ್ರೇನ್ ಮೇಲೆ ರಷ್ಯಾ ‘ಪೂರ್ಣ ಪ್ರಮಾಣದ ಆಕ್ರಮಣ’ ನಡೆಸುತ್ತಿದೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

    ಈ ವಾರ ಪೂರ್ತಿ ಅಮೆರಿಕ, ರಾಜತಾಂತ್ರಿಕತೆ ಮತ್ತು ರಷ್ಯಾದ ಮೇಲೆ ಪಾಶ್ಚಿಮಾತ್ಯ ನಿರ್ಬಂಧಗಳನ್ನು ಹೇರಿದರೂ ಸಹ ಪುಟಿನ್ ಅವರನ್ನು ಯುದ್ದ ಮಾಡದಂತೆ ತಡೆಯಲು ಸಾಧ್ಯವಾಗಿಲ್ಲ. ಅವರು ಉಕ್ರೇನ್ ಗಡಿಯಲ್ಲಿ 1,50,000 ರಿಂದ 2,00,000 ಸೈನಿಕರನ್ನು ಉಕ್ರೇನ್ ಮೇಲೆ ದಾಳಿ ಮಾಡುವುದಕ್ಕಾಗಿಯೇ ಕಳುಹಿಸಿದ್ದರು.

    ‘ನಾನು ಮಿಲಿಟರಿ ಕಾರ್ಯಾಚರಣೆಯ ನಿರ್ಧಾರವನ್ನು ಮಾಡಿದ್ದೇನೆ’ ಎಂದು ಪುಟಿನ್ ಹೇಳಿದ ತಕ್ಷಣ ಎಲ್ಲ ಕಡೆ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆ ಯುಎಸ್ ಅಧ್ಯಕ್ಷ ಜೋ ಬೈಡೆನ್ ಮತ್ತು ಇತರ ಪಾಶ್ಚಿಮಾತ್ಯ ನಾಯಕರಿಂದ ಈ ಘೋಷಣೆ ವಿರುದ್ಧ ಖಂಡನೆ ಕೇಳಿಬಂತು. ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಈ ಯುದ್ಧ ಭಾರೀ ಪರಿಣಾಮ ಬಿರುತ್ತೆ ಎಂದು ಎಲ್ಲ ಕಡೆ ಭೀತಿ ಪ್ರಾರಂಭವಾಗಿದೆ.

    ಪ್ರಕಟಣೆಯ ಸ್ವಲ್ಪ ಸಮಯದ ನಂತರ, ಉಕ್ರೇನ್‍ನ ರಾಜಧಾನಿ ಕೈವ್ ಮತ್ತು ಇತರ ಹಲವಾರು ನಗರಗಳಲ್ಲಿ ದಾಳಿ ನಡೆದಿದ್ದು, ಸ್ಫೋಟಗಳು ಕೇಳಿಬಂದವು. ಈ ವೇಳೆ ಉಕ್ರೇನಿಯನ್ ಗಡಿ ಕಾವಲುಗಾರರು ರಷ್ಯಾದ ಮತ್ತು ಬೆಲರೂಸಿಯನ್ ಗಡಿಗಳಲ್ಲಿ ದಾಳಿ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

    Vladimir Putin

    ಉಕ್ರೇನಿಯನ್ ನಾಯಕ ವೊಲೊಡಿಮಿರ್ ಝೆಲೆನ್ಸ್ಕಿ ಫೇಸ್‍ಬುಕ್ ಪೋಸ್ಟ್‍ನಲ್ಲಿ, ರಷ್ಯಾ ತನ್ನ ದೇಶದ ‘ಮಿಲಿಟರಿ ಮೂಲಸೌಕರ್ಯ’ದ ಮೇಲೆ ದಾಳಿ ಮಾಡುತ್ತಿದೆ. ಇದರಿಂದ ಗಾಬರಿಯಾಗದಂತೆ ನಾಗರಿಕರಿಗೆ ಧೈರ್ಯ ಕೊಟ್ಟಿದ್ದು, ನಾವು ಈ ಯುದ್ಧದಲ್ಲಿ ಜಯವನ್ನು ಸಾಧಿಸುತ್ತೇವೆ ಎಂದು ಭರವಸೆಯನ್ನು ವ್ಯಕ್ತಪಡಿಸಿದರು. ಇದನ್ನೂ ಓದಿ:  ಉಕ್ರೇನ್ ವಿರುದ್ಧದ ದಾಳಿ ವಿಪತ್ಕಾರಕ ಜೀವಹಾನಿಗೆ ಕಾರಣವಾಗಬಹುದು: ಜೋ ಬೈಡೆನ್

    ಪುಟಿನ್ ಇದೀಗ ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ಆಕ್ರಮಣವನ್ನು ಪ್ರಾರಂಭಿಸಿದ್ದಾರೆ. ಶಾಂತಿಯುತ ಉಕ್ರೇನಿಯನ್ ನಗರಗಳು ಗಲಭೆಗಳಿಂದ ತುಂಬಿದೆ ಎಂದು ಡಿಮಿಟ್ರೋ ಕುಲೆಬಾ ಟ್ವೀಟ್ ಮಾಡಿದ್ದಾರೆ. ಇದು ಆಕ್ರಮಣಕಾರಿ ಯುದ್ಧ, ಉಕ್ರೇನ್ ತನ್ನನ್ನು ತಾನು ರಕ್ಷಿಸಿಕೊಳ್ಳುತ್ತದೆ ಮತ್ತು ಗೆಲ್ಲುತ್ತದೆ. ಜಗತ್ತು ಪುಟಿನ್ ಅವರನ್ನು ತಡೆಯಬೇಕು ಎಂದು ಬರೆದುಕೊಂಡಿದ್ದಾರೆ.

  • ಉಕ್ರೇನ್‍ಗೆ ಹೋಗುತ್ತಿದ್ದ ಏರ್ ಇಂಡಿಯಾ ಮಾರ್ಗಮಧ್ಯದಲ್ಲೇ ವಾಪಸ್

    ಉಕ್ರೇನ್‍ಗೆ ಹೋಗುತ್ತಿದ್ದ ಏರ್ ಇಂಡಿಯಾ ಮಾರ್ಗಮಧ್ಯದಲ್ಲೇ ವಾಪಸ್

    ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿರುವ ಹಿನ್ನೆಲೆಯಲ್ಲಿ ಉಕ್ರೇನ್‍ನಲ್ಲಿ ವಾಸವಾಗಿರುವ ಭಾರತೀಯ ಪ್ರಜೆಗಳನ್ನು ಕರೆತರಲು ಉಕ್ರೇನ್‍ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನ ಮಾರ್ಗಮಧ್ಯೆಯೇ ದೆಹಲಿಗೆ ವಾಪಸ್ ಆಗಿದೆ.

    ಈಗಾಗಲೇ ಉಕ್ರೇನ್‍ನ ಪೂರ್ವ ಪ್ರದೇಶಗಳಲ್ಲಿ ರಷ್ಯಾದ ಮಿಲಿಟರಿ ಕಾರ್ಯಚರಣೆ ನಡೆಸುತ್ತಿದೆ. ಇದರ ಮಧ್ಯೆ ಉಕ್ರೇನ್ ತನ್ನ ಭದ್ರತೆಗಾಗಿ ವಾಯುಪ್ರದೇಶವನ್ನು ಮುಚ್ಚಿದೆ. ಇದರಿಂದಾಗಿ ಸಾವಿರಾರು ಭಾರತೀಯರು ಉಕ್ರೇನ್‍ನಲ್ಲಿ ಸಿಲುಕಿಕೊಂಡಿದ್ದು, ಸ್ವದೇಶಕ್ಕೆ ಬರಲು ಕಾಯುತ್ತಿದ್ದಾರೆ.

    ಆದರೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಬೆಳಗ್ಗೆ ಉಕ್ರೇನ್ ಮೇಲೆ ಮಿಲಿಟರಿ ದಾಳಿ ನಡೆಸುವಂತೆ ತನ್ನ ಸೇನೆಗೆ ಪುಟಿನ್ ಸೂಚನೆ ನೀಡಿದ್ದಾರೆ. ಸೂಚನೆ ಬೆನ್ನಲ್ಲೇ ರಷ್ಯಾ ಸೇನೆಯು ವೈಮಾನಿಕ ದಾಳಿ ನಡೆಸಿದೆ. ಇದರಿಂದಾಗಿ ಉಕ್ರೇನ್‍ನ ಪೂರ್ವ ಪ್ರದೇಶಗಳಲ್ಲಿ ಮಿಲಿಟರಿ ಕಾರ್ಯಚರಣೆ ನಡೆಯುತ್ತಿರುವುದರಿಂದ, ಎಲ್ಲಾ ವಾಣಿಜ್ಯ ವಿಮಾನಗಳು ಹೆಚ್ಚಿನ ಅಪಾಯದಲ್ಲಿವೆ. ಈ ಹಿನ್ನೆಲೆಯಲ್ಲಿ ಆದರೆ ಉಕ್ರೇನ್‍ಗೆ ಹೋಗುವ ಎಲ್ಲಾ ವಿಮಾನಗಳಿಗೆ ಏರ್‌ಮೆನ್‍ಗಳಿಗೆ ಸರ್ಕಾರ ಸೂಚನೆಯನ್ನು ನೀಡಿದ ನಂತರ ಏರ್ ಇಂಡಿಯಾ ವಿಮಾನವು ದೆಹಲಿಗೆ ವಾಪಾಸಾಗಲು ನಿರ್ಧರಿಸಿತು. ಇದನ್ನೂ ಓದಿ: ಉಕ್ರೇನ್ ವಿರುದ್ಧದ ದಾಳಿ ವಿಪತ್ಕಾರಕ ಜೀವಹಾನಿಗೆ ಕಾರಣವಾಗಬಹುದು: ಜೋ ಬೈಡೆನ್

    ಈಗಾಗಲೇ ಉಕ್ರೇನ್‍ನಲ್ಲಿರುವ ಪ್ರಜೆಗಳಿಗೆ ಭಾರತವು 24 ಗಂಟೆಗಳ ಕಾಲ ಸಹಾಯವಾಣಿಯನ್ನು ತೆರೆದಿದೆ. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ಯುದ್ಧ; ಗಗನಕ್ಕೇರಿದ ತೈಲ, ಚಿನ್ನದ ಬೆಲೆ – ಭಾರತದ ಶೇರು ಮಾರುಕಟ್ಟೆಯಲ್ಲಿ ತಲ್ಲಣ

    ಜುಲೈ 2014ರಲ್ಲಿ ಮಲೇಷ್ಯಾ ಏರ್‍ಲೈನ್ಸ್ ವಿಮಾನವನ್ನು ಹೊಡೆದುರುಳಿಸಲಾಯಿತು. ಉಕ್ರೇನ್‍ನ ಸಶಸ್ತ್ರ ಪಡೆಗಳು ಮತ್ತು ರಷ್ಯಾದ ಪರ ಪ್ರತ್ಯೇಕತಾವಾದಿಗಳ ನಡುವಿನ ಯುದ್ಧದಲ್ಲಿ ವಿಮಾನದಲ್ಲಿದ್ದ ಎಲ್ಲಾ 298 ಜನರು ಸಾವನ್ನಪ್ಪಿದರು.

  • ಉಕ್ರೇನ್ ಮೇಲೆ ರಷ್ಯಾ ಯುದ್ಧ; ಗಗನಕ್ಕೇರಿದ ತೈಲ, ಚಿನ್ನದ ಬೆಲೆ – ಭಾರತದ ಶೇರು ಮಾರುಕಟ್ಟೆಯಲ್ಲಿ ತಲ್ಲಣ

    ಉಕ್ರೇನ್ ಮೇಲೆ ರಷ್ಯಾ ಯುದ್ಧ; ಗಗನಕ್ಕೇರಿದ ತೈಲ, ಚಿನ್ನದ ಬೆಲೆ – ಭಾರತದ ಶೇರು ಮಾರುಕಟ್ಟೆಯಲ್ಲಿ ತಲ್ಲಣ

    ಮಾಸ್ಕೋ: ಉಕ್ರೇನ್ ಮೇಲೆ ರಷ್ಯಾ ಯುದ್ಧದ ಘೋಷಣೆ ಬೆನ್ನಲ್ಲೇ ಭಾರತೀಯ ಶೇರು ಮಾರುಕಟ್ಟೆಯಲ್ಲಿ ತಲ್ಲಣ ಉಂಟಾಗಿದೆ. ಜಾಗತಿಕ ಮಟ್ಟದಲ್ಲಿ ಪೆಟ್ರೋಲ್, ಚಿನ್ನ, ಬೆಳ್ಳಿಯ ಬೆಲೆಗಳು ಗಗನಕ್ಕೆ ಏರಿವೆ.

    2,000ಕ್ಕೂ ಅಧಿಕ ಪಾಯಿಂಟ್ಸ್ ಸೆನ್ಸೆಕ್ಸ್ ಕುಸಿತ ಕಂಡರೆ ನಿಫ್ಟಿ 600 ಪಾಯಿಂಟ್ಸ್ ಕುಸಿದಿದೆ. ಯುದ್ಧ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ಗಗನಕ್ಕೇರಿದ್ದು, ಪ್ರತಿ ಬ್ಯಾರಲ್ ಬೆಲೆ 100 ಡಾಲರ್ ಮೀರಿದೆ. ಈ ಹಿಂದೆ ಪ್ರತಿ ಬ್ಯಾರಲ್ ಬೆಲೆಯೂ 60-70 ಡಾಲರ್ ಆಸುಪಾಲಿನಲ್ಲಿತ್ತು. ನವೆಂಬರ್ 4ರಿಂದ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಿತ್ತು. ಜಾಗತಿಕ ಮಟ್ಟದಲ್ಲಿ ತೈಲಬೆಲೆ ಏರಿಕೆಯಾಗಿರುವುದರಿಂದ ಭಾರತದಲ್ಲೂ ಬೆಲೆ ಏರಿಸುವುದು ಅನಿವಾರ್ಯವಾಗಿದೆ.

    ಚಿನ್ನದ ಬೆಲೆಯೂ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇಂದು 24 ಕ್ಯಾರೆಟ್‍ನ 10 ಗ್ರಾಂ ಚಿನ್ನಕ್ಕೆ 5,320ರೂ. ಹಾಗೂ 22 ಕ್ಯಾರೆಟ್‍ನ 10 ಗ್ರಾಂ ಬಂಗಾರಕ್ಕೆ 4,750 ರೂಪಾಯಿಯಾಗಿದೆ. ನಿನ್ನೆಗಿಂತ ಇಂದು ಒಂದು ಗ್ರಾಂಗೆ 150 ರೂಪಾಯಿ ಹೆಚ್ಚಳವಾಗಿದೆ. 10 ಗ್ರಾಂ ಚಿನ್ನಕ್ಕೆ 1,500 ರೂ. ಹೆಚ್ಚಳವಾಗಿದೆ. ಇದನ್ನೂ ಓದಿ: ಉಕ್ರೇನ್ ವಿರುದ್ಧದ ದಾಳಿ ವಿಪತ್ಕಾರಕ ಜೀವಹಾನಿಗೆ ಕಾರಣವಾಗಬಹುದು: ಜೋ ಬೈಡೆನ್

    ಜೊತೆಗೆ ಒಂದು ಕೆಜಿ ಬೆಳ್ಳಿಗೆ 68,400 ರೂಪಾಯಿ ಹೆಚ್ಚಳವಾಗಿದೆ. ನಿನ್ನೆಗಿಂತ ಇಂದು ಬೆಳ್ಳಿ ಬೆಲೆಯಲ್ಲಿ 2,200 ರೂ ಏರಿಕೆಯಾಗಿದೆ. ರಷ್ಯಾ ಹಾಗೂ ಉಕ್ರೇನ್ ನಡುವೆ ನಡೆಯುತ್ತಿರೋ ಯುದ್ಧದಿಂದಾಗಿ ಚಿನ್ನ ಹಾಗೂ ಬೆಳ್ಳಿ ಏರಿಕೆಯಾಗಿದೆ. ಇದನ್ನೂ ಓದಿ: ಉಕ್ರೇನ್ ದೇಶವನ್ನೇ ಮೂರು ಭಾಗ ಮಾಡಿದ ರಷ್ಯಾ

    ಯುದ್ಧದ ಭೀತಿಯಿಂದಾಗಿ ಈಗಾಗಲೇ ಉಕ್ರೇನ್‍ನಿಂದ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ಪ್ರಜೆಗಳು ವಾಪಸ್ಸಾಗಿದ್ದಾರೆ. ವಿಶೇಷ ವಿಮಾನದ ಮೂಲಕ ಭಾರತೀಯರನ್ನು ಕೇಂದ್ರ ಸರ್ಕಾರ ವಾಪಸ್ ಕರೆಸಿಕೊಂಡಿದೆ. ಭಾರತೀಯ ಪ್ರಜೆಗಳು ದೆಹಲಿಯ ಅಂತರಾಷ್ಟ್ರೀಯ ವಿಮಾನಯಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

  • ಉಕ್ರೇನ್ ವಿರುದ್ಧದ ದಾಳಿ ವಿಪತ್ಕಾರಕ ಜೀವಹಾನಿಗೆ ಕಾರಣವಾಗಬಹುದು: ಜೋ ಬೈಡೆನ್

    ಉಕ್ರೇನ್ ವಿರುದ್ಧದ ದಾಳಿ ವಿಪತ್ಕಾರಕ ಜೀವಹಾನಿಗೆ ಕಾರಣವಾಗಬಹುದು: ಜೋ ಬೈಡೆನ್

    ವಾಷಿಂಗ್‍ಟನ್: ಉಕ್ರೇನ್ ವಿರುದ್ಧದ ದಾಳಿಗೆ ಜಗತ್ತು ರಷ್ಯಾವನ್ನು ಹೊಣೆಗಾರರನ್ನಾಗಿ ಮಾಡುತ್ತದೆ. ಇದು ವಿಪತ್ಕಾರಕ ಜೀವಹಾನಿಗೆ ಕಾರಣವಾಗಬಹುದು ಎಂದು ಯುಎಸ್ ಅಧ್ಯಕ್ಷ ಜೋ ಬೈಡೆನ್ ಹೇಳಿದ್ದಾರೆ.

    ರಷ್ಯಾ ಮತ್ತು ಉಕ್ರೇನ್ ನಡುವಿನ ಬಿಕ್ಕಟ್ಟು ಜಟಿಲಗೊಂಡಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿಲ್, ಉಕ್ರೇನ್ ಮೇಲೆ ಯುದ್ಧವನ್ನು ಘೋಷಿಸುತ್ತಿದ್ದಂತೆ ಗುರುವಾರ ಮಾತನಾಡಿದ ಜೋ ಬೈಡೆನ್ ಅವರು, ಉಕ್ರೇನ್ ವಿರುದ್ಧದ ದಾಳಿ ರಷ್ಯಾದ ಮೇಲೆ ಪರಿಣಾಮ ಬೀರುತ್ತದೆ. ಇದು ಪ್ರಚೋದಿತ ಮತ್ತು ನ್ಯಾಯ ಸಮ್ಮತವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್ ದೇಶವನ್ನೇ ಮೂರು ಭಾಗ ಮಾಡಿದ ರಷ್ಯಾ

    Vladimir Putin

    ಗುರುವಾರ ಬೆಳಗ್ಗೆ 9:00 ಗಂಟೆಗೆ ಬ್ರಿಟನ್, ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್ ಮತ್ತು ಯುನೈಟೆಡ್ ಸ್ಟೇಟ್ಸ್ ನಾಯಕರೊಂದಿಗೆ ವರ್ಚುವಲ್ ಸಭೆ ನಡೆಸಬೇಕಾಗಿತ್ತು. ಆದರೆ ಸಾರ್ವಜನಿಕರ ಟೀಕೆಗಳಿಂದ ವಾಷಿಂಗ್ಟನ್‍ನ ಶ್ವೇತಭವನದಲ್ಲಿ ಮಧ್ಯಾಹ್ನ ಸಭೆ ಆರಂಭವಾಗಲಿದೆ.

    ಮಂಗಳವಾರ ಉಕ್ರೇನ್‍ನ ಡಿಎನ್‍ಆರ್ ಮತ್ತು ಎನ್‍ಎನ್‍ಆರ್ ಎಂದು ಕರೆಯಲ್ಪಡುವ ಡೊನಸ್ಕ್ ಮತ್ತು ಲಂಗಸ್ಕ್ ಪ್ರದೇಶದಲ್ಲಿ ಅಮೆರಿಕದ ಪ್ರಜೆಗಳು ಯಾವುದೇ ಹೊಸ ಹೂಡಿಕೆ, ವ್ಯಾಪಾರ ಮತ್ತು ಹಣಕಾಸು ನೆರವು ನೀಡುವುದನ್ನು ನಿಷೇಧಿಸಲಾಗಿದೆ ಎಂದು ಶ್ವೇತಭವನದಲ್ಲಿ ಹೇಳಿದರು. ಇದನ್ನೂ ಓದಿ: ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಕಹಳೆ – ರಷ್ಯಾ ಮೇಲೆ ಹಣಕಾಸು ಸೇರಿ ವಿವಿಧ ನಿರ್ಬಂಧ ಹೇರಿದ ಅಮೆರಿಕ!

    ಬಿಡೆನ್ ಅವರು ರಷ್ಯಾದಿಂದ ಜರ್ಮನಿಗೆ ನಾರ್ಡ್ ಸ್ಟ್ರೀಮ್-2 ನೈಸರ್ಗಿಕ ಅನಿಲ ಪೈಪ್‍ಲೈನ್‍ಗೆ ನಿರ್ಬಂಧಗಳನ್ನು ವಿಧಿಸುವುದಾಗಿ ಬುಧವಾರ ಘೋಷಿಸಿದ್ದಾರೆ. ಇದು ಶಕ್ತಿ-ಸಮೃದ್ಧ ಮಾಸ್ಕೋದ ಅತ್ಯುನ್ನತ ಶಕ್ತಿ ಮತ್ತು ಭೌಗೋಳಿಕ ರಾಜಕೀಯ ಯೋಜನೆಗಳಲ್ಲಿ ಒಂದಾಗಿದೆ. ಜರ್ಮನಿಯು ಈ ಯೋಜನೆ ಮುಂದುವರಿಸುವುದನ್ನು ತಡೆಯುವುದಾಗಿ ಮೊದಲೇ ಘೋಷಿಸಿತ್ತು. ರಷ್ಯಾ ನಡೆಗೆ ಫ್ರಾನ್ಸ್, ಜರ್ಮನಿ ಸೇರಿದಂತೆ ಅನೇಕ ದೇಶಗಳು ವಿರೋಧ ವ್ಯಕ್ತಪಡಿಸಿವೆ. ಇದನ್ನೂ ಓದಿ: ಉಕ್ರೇನ್ ವಿರುದ್ಧ ಯುದ್ಧ: ಪುಟಿನ್ ಅಧಿಕೃತ ಘೋಷಣೆ

  • ಉಕ್ರೇನ್ ವಿರುದ್ಧ ಯುದ್ಧ: ಪುಟಿನ್ ಅಧಿಕೃತ ಘೋಷಣೆ

    ಉಕ್ರೇನ್ ವಿರುದ್ಧ ಯುದ್ಧ: ಪುಟಿನ್ ಅಧಿಕೃತ ಘೋಷಣೆ

    ಮಾಸ್ಕೋ: ರಷ್ಯಾ ಮತ್ತು ಉಕ್ರೇನ್‌ ನಡುವಿನ ಬಿಕ್ಕಟ್ಟು ಮತ್ತಷ್ಟು ಜಟಿಲಗೊಂಡಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿಲ್‌, ಉಕ್ರೇನ್‌ ಮೇಲೆ ಯುದ್ಧವನ್ನು ಘೋಷಿಸಿದ್ದಾರೆ.

    ಉಕ್ರೇನ್‌ ಮೇಲೆ ಮಿಲಿಟರಿ ದಾಳಿ ನಡೆಸುವಂತೆ ತನ್ನ ಸೇನೆಗೆ ಪುಟಿನ್‌ ಗುರುವಾರ ಸೂಚನೆ ನೀಡಿದ್ದಾರೆ. ಪುಟಿನ್‌ ದೂರದರ್ಶನದಲ್ಲಿ ಹೇಳಿಕೆಯನ್ನು ನೀಡಿದ್ದಾರೆ. ಸೂಚನೆ ಬೆನ್ನಲ್ಲೇ ರಷ್ಯಾ ಸೇನೆಯು ವೈಮಾನಿಕ ದಾಳಿ ನಡೆಸಿದೆ. ಇದನ್ನೂ ಓದಿ: ಅಪಪ್ರಚಾರ ಮಾಡಿದವರು ಕೊನೆಗೆ ಲಸಿಕೆ ಹಾಕಿಸಿಕೊಂಡರು: ಅಖಿಲೇಶ್‍ಗೆ ಮೋದಿ ಟಾಂಗ್

    ನಾನು ಮಿಲಿಟರಿ ಕಾರ್ಯಾಚರಣೆಯ ನಿರ್ಧಾರವನ್ನು ಮಾಡಿದ್ದೇನೆ ಎಂದು ಹೇಳಿರುವ ಅವರು, ಈ ವಿಚಾರವಾಗಿ ಯಾರಾದರೂ ಮಧ್ಯಪ್ರವೇಶಿಸಿದರೆ ಪ್ರತೀಕಾರ ತೀರಿಸಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಉಕ್ರೇನ್‌ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ತ್ಯಜಿಸಬೇಕು ಎಂದು ಸಲಹೆ ನೀಡಿದ್ದಾರೆ.

    ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪುಟಿನ್ ಅವರನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ. ಆದರೆ ʻಯಾವುದೇ ಉತ್ತರವಿಲ್ಲ, ಕೇವಲ ಮೌನʼ ಎಂದು ತಿಳಿಸಿದ್ದಾರೆ. ಮಾಸ್ಕೋ ಈಗ ಉಕ್ರೇನ್‌ನ ಗಡಿಯ ಬಳಿ ಸುಮಾರು 2,00,000 ಸೈನಿಕರನ್ನು ನಿಯೋಜಿಸಲಾಗಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: 200 ಶಾಸಕರಿಗೆ iPhone ಗಿಫ್ಟ್ ಕೊಟ್ಟ ರಾಜಸ್ಥಾನ ಸರ್ಕಾರ – ವಾಪಸ್ ಕೊಟ್ಟ ಬಿಜೆಪಿ

    ರಷ್ಯಾ ಬಂಡುಕೋರರ ಹಿಡಿತದಲ್ಲಿರುವ ಪೂರ್ವ ಉಕ್ರೇನ್‌ನ ಎರಡು ಪ್ರದೇಶಗಳನ್ನು ಸ್ವತಂತ್ರ ಎಂದು ಘೋಷಿಸಲು ರಷ್ಯಾ ಮುಂದಾಗಿದೆ. ಆದರೆ ಇದಕ್ಕೆ ಅಮೆರಿಕ ವಿರೋಧ ವ್ಯಕ್ತಪಡಿಸಿದೆ. ಸಮಸ್ಯೆ ಇತ್ಯರ್ಥಪಡಿಸಿಕೊಳ್ಳಲು ರಷ್ಯಾ ಮತ್ತು ಅಮೆರಿಕ ಅಧ್ಯಕ್ಷರ ನಡುವಿನ ಮಾತುಕತೆಯೂ ವಿಫಲವಾಯಿತು. ಇದಾದ ಬಳಿಕ ಈಗ ಉಕ್ರೇನ್‌ ಮೇಲೆ ರಷ್ಯಾ ಯುದ್ಧ ಸಾರಿದೆ.

  • ಉಕ್ರೇನ್ ಸುತ್ತುವರಿದ ರಷ್ಯಾ ಸೇನೆ – ಯುದ್ಧವಾಹನ, ಟ್ಯಾಂಕ್‍ಗಳು, ಫಿರಂಗಿಗಳೊಂದಿಗೆ ಆಗಮನ

    ಉಕ್ರೇನ್ ಸುತ್ತುವರಿದ ರಷ್ಯಾ ಸೇನೆ – ಯುದ್ಧವಾಹನ, ಟ್ಯಾಂಕ್‍ಗಳು, ಫಿರಂಗಿಗಳೊಂದಿಗೆ ಆಗಮನ

    ಮಾಸ್ಕೋ: ರಷ್ಯಾ-ಉಕ್ರೇನ್ ನಡುವೆ ಯುದ್ಧದ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಖಾಸಗಿ ಸಂಸ್ಥೆ ಬಿಡುಗಡೆ ಮಾಡಿರುವ ಉಪಗ್ರಹದ ಚಿತ್ರಗಳಲ್ಲಿ ರಷ್ಯಾ ಸೇನೆ ಸಂಪೂರ್ಣವಾಗಿ ಉಕ್ರೇನ್‍ನನ್ನು ಸುತ್ತುವರಿದಿದೆ.

    ರಷ್ಯಾ ಸೇನೆ ಅಗತ್ಯ ವಸ್ತುಗಳನ್ನು ರವಾನಿಸುತ್ತಿರೋದು ಗೊತ್ತಾಗಿದೆ. ದಕ್ಷಿಣ ಬೆಲಾರಸ್‍ನ ಮೊಜ್ಯೂರ್ ಏರ್‍ಫೀಲ್ಡ್ ಬಳಿ 100 ವಾಹನಗಳು ನಿಂತಿದ್ದು ಗುಡಾರಗಳನ್ನು ಹಾಕಿರೋದು ಕಂಡು ಬಂದಿದೆ. ಇಲ್ಲಿಂದ ಉಕ್ರೇನ್ ವಿಮಾನನಿಲ್ದಾಣ ಕೇವಲ 40 ಕಿ.ಮೀ ದೂರದಲ್ಲಿದೆ. ಅಷ್ಟೇ ಅಲ್ಲದೆ ಬೆಲ್ಗ್ರೋಡ್‍ನ ಮಿಲಿಟರಿ ಗ್ಯಾರಿಸನ್‍ನಲ್ಲಿ ಹೊಸ ಆಸ್ಪತ್ರೆಯನ್ನೂ ನಿರ್ಮಿಸಲಾಗಿದೆ. ಇದರ ಜೊತೆಗೆ ಉಕ್ರೇನ್‍ನಿಂದ 20 ಕಿ.ಮೀ ದೂರದಲ್ಲಿ ಯುದ್ದೋಪಕರಣಗಳ ಜೊತೆಗೆ ಸೇನಾಪಡೆಯನ್ನೂ ನಿಯೋಜಿಸಲಾಗಿದೆ. ಇದನ್ನೂ ಓದಿ: ಉಕ್ರೇನ್ ದೇಶವನ್ನೇ ಮೂರು ಭಾಗ ಮಾಡಿದ ರಷ್ಯಾ

    ಉತ್ತರ ಉಕ್ರೇನ್‍ನ 40 ಕಿ.ಮೀ. ದೂರದಲ್ಲಿ ಯುದ್ಧವಾಹನಗಳು, ಟ್ಯಾಂಕ್‍ಗಳು, ಫಿರಂಗಿಗಳು, ಭಾರೀ ಸಾಮಾಗ್ರಿಗಳನ್ನು ರಷ್ಯಾ ಸೇನೆ ರವಾನಿಸಿದೆ. ಪಶ್ಚಿಮ ರಷ್ಯಾದ ಪೊಚೆಪ್ ಬಳಿ ಹೆಚ್ಚುವರಿ ಸೇನೆ ನಿಯೋಜಿಸಲು ದೊಡ್ಡ ಪ್ರದೇಶವನ್ನು ತೆರವುಗೊಳಿಸಲಾಗ್ತಿದೆ. ಇನ್ನು, ರಷ್ಯಾ ವರ್ತನೆಗೆ ಯುರೋಪ್‍ನ ಹಲವು ದೇಶಗಳು ಕೆಂಡಾಮಂಡಲವಾಗಿವೆ. ಈಗಾಗಲೇ ಅಮೆರಿಕ ಆರ್ಥಿಕ ಸಂಸ್ಥೆಗಳ ವೆಬ್‍ಸೈಟ್ ಹಾಗೂ ಸೈನಿಕ ಬ್ಯಾಂಕ್‍ಗಳ ಮೇಲೆ ನಿರ್ಬಂಧ ವಿಧಿಸಿದೆ. ಪಶ್ಚಿಮ ದೇಶಗಳು ರಷ್ಯಾ ಜೊತೆಗಿನ ವ್ಯಾಪಾರ ಹಾಗೂ ವಾಣಿಜ್ಯ ವ್ಯವಹಾರಗಳನ್ನು ಬಂದ್ ಮಾಡೋದಾಗಿ ಹೇಳಿವೆ. ಉಕ್ರೇನ್‍ನಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವುದರಿಂದ 242 ಭಾರತೀಯರು ತವರಿಗೆ ಬಂದಿದ್ದಾರೆ. ಇದನ್ನೂ ಓದಿ: ಉಕ್ರೇನ್ ಉದ್ವಿಗ್ನತೆ ಬಗ್ಗೆ ವಿಶ್ವಸಂಸ್ಥೆಯಲ್ಲಿ ಭಾರತ ಆತಂಕ