Tag: ರಸ್ತೆ ಗುಂಡಿ

  • ಯುಪಿ, ಮಹಾರಾಷ್ಟ್ರದಲ್ಲಿ ಟೀಕೆ ಟಿಪ್ಪಣಿ ಮಾಡಿದ್ರೆ ಜೈಲಿಗೆ ಹೋಗ್ತಿದ್ರು – ಕಿರಣ್ ಮಜುಂದಾರ್ ಷಾ ಟ್ವೀಟ್‌ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

    ಯುಪಿ, ಮಹಾರಾಷ್ಟ್ರದಲ್ಲಿ ಟೀಕೆ ಟಿಪ್ಪಣಿ ಮಾಡಿದ್ರೆ ಜೈಲಿಗೆ ಹೋಗ್ತಿದ್ರು – ಕಿರಣ್ ಮಜುಂದಾರ್ ಷಾ ಟ್ವೀಟ್‌ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

    ಬೆಂಗಳೂರು: ಯುಪಿ, ಮಹಾರಾಷ್ಟ್ರದಲ್ಲಿ ಈ ರೀತಿ ಟೀಕೆ ಟಿಪ್ಪಣಿ ಮಾಡಲಿ ನೋಡೋಣ, ಅಲ್ಲಿ ಮಾಡಿದ್ರೆ ಜೈಲಿಗೆ ಹೋಗುತ್ತಿದ್ರು ಎಂದು ಬೆಂಗಳೂರಿನ ರಸ್ತೆಗುಂಡಿಗಳು (Patholes) ಹಾಗೂ ಕಸದ ಸಮಸ್ಯೆ ಬಗ್ಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ (Kiran Mazumdar-Shaw) ಟ್ವೀಟ್‌ಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಉದ್ಯಮಿಯೊಬ್ಬರ ಅಭಿಪ್ರಾಯವನ್ನ ಕಿರಣ್ ಮಜುಂದಾರ್ ಟ್ವೀಟ್ ಮಾಡಿದ್ದಾರೆ. ಮೆಸೇಜ್ ಮಾಡಿ ಸಲಹೆ ಕೊಡಲಿ, ಬೇರೆ ಸರ್ಕಾರ ಇದ್ದಾಗ ಹೀಗೆ ಆಗುತ್ತಾ? ಯುಪಿ, ಮಹಾರಾಷ್ಟ್ರದಲ್ಲಿ ಟೀಕೆ ಟಿಪ್ಪಣಿ ಮಾಡಲಿ ನೋಡೋಣ. ನಾವು ಕೇಳ್ತೀವಿ ಅಂತ ಹೀಗೆಲ್ಲಾ ಮಾಡ್ತಾರೆ. ಅಲ್ಲಿ ಮಾಡಿದರೆ ಜೈಲಿನಲ್ಲಿ ಇರ್ತಾರೆ ಎಂದು ಅಸಮಾಧಾನ ಹೊರಹಾಕಿದರು.ಇದನ್ನೂ ಓದಿ: ಬೆಂಗಳೂರಲ್ಲಿ ರಸ್ತೆ ಗುಂಡಿ, ಕಸದ ಅದ್ವಾನ – ರಾಜ್ಯ ಸರ್ಕಾರದ ವಿರುದ್ಧ ಉದ್ಯಮಿ ಕಿರಣ್ ಮಜುಂದಾರ್ ಶಾ ಕಿಡಿ

    ಉದ್ಯಮಿಗಳು ಹೇಳಿದ್ದನ್ನು ನಾವು ಕೇಳ್ತೀವಲ್ಲಾ ಅದಕ್ಕೆ ಅವರು ಟೀಕೆ ಮಾಡ್ತಾರೆ. ನಿರಂತರವಾಗಿ ಒಂದೂವರೆ ತಿಂಗಳಿಂದ ಅನಿರೀಕ್ಷಿತ ಮಳೆ ಆಗ್ತಿದೆ. ಸ್ವಲ್ಪ ಸಮಯ ಬೇಕಾಗುತ್ತೆ ಅಂತಾ ಸಿಎಂ ಹೇಳಿದ್ದಾರೆ. ಸಲಹೆ ಪಡೆಯಲು ಸಮಿತಿ ಕೂಡ ಮಾಡಿದ್ದಾರೆ. ಡಿಟೇಲ್ ರೂಟ್ ಮ್ಯಾಪ್ ಮಾಡ್ತಿದ್ದಾರೆ. ಟಾಸ್ಕ್‌ಫೋರ್ಸ್‌ ಮಾಡಿದಾಗ ಕಿರಣ್ ಮಜುಂದಾರ್, ಮೋಹನ್ ದಾಸ್ ಪೈ ಎಲ್ಲಾ ಇರುತ್ತಾರೆ. ಈ ಉದ್ಯಮಿಗಳದ್ದು ಅವರದ್ದೇ ಆದ ಕೊಡುಗೆ ಇದೆ. ಕಸ ಹಾಕೋರು ಯಾರು? ಮೇಲಿಂದ ಬಂದು ಬೀಳುತ್ತಾ? ನಾಗರಿಕರು ಜವಾಬ್ದಾರಾಗಬೇಕು, ಸಹಕಾರ ಕೊಡಬೇಕು ಎಂದು ಹೇಳಿದರು.

    ಆಂಧ್ರಪ್ರದೇಶದ ಐಟಿ ಮಿನಿಸ್ಟರ್ ರಣಹದ್ದು ಥರ ಕಾಯ್ಕೊಂಡು ಇರುತ್ತಾರೆ. ಯಾರು ಎಲ್ಲಿಗೆ ಬರ್ತಾರೆ, ಎಲ್ಲಿಗೆ ಹೋಗ್ತಾರೆ ಎಂದು ಕಾಯ್ಕೊಂಡು ಕುಳಿತಿರುತ್ತಾರೆ. ಅಭಿವೃದ್ಧಿ ಬಗ್ಗೆ ಪ್ರತಿಪಕ್ಷದವರು ಸಲಹೆ ಕೊಡಲ್ಲ, ಆ ನಿರೀಕ್ಷೆಯೂ ಇಲ್ಲ. ಈ ರೀತಿ ಆದ್ರೆ ಅನ್ಯ ರಾಜ್ಯದವರು ಉದ್ಯಮಿಗಳಿಗೆ ಆಹ್ವಾನ ಮಾಡೋದು ಸಹಜ ಅಲ್ಲವಾ? ಎಂದು ಕಿಡಿಕಾರಿದರು.ಇದನ್ನೂ ಓದಿ: ಸಿಎಂ, ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ ಅಲರ್ಟ್‌ – ಪ್ರಕರಣ ಭೇದಿಸಲು SIT ರಚಿಸಿದ ಸರ್ಕಾರ

  • ರಸ್ತೆಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿ – ಕುಟುಂಬಸ್ಥರನ್ನ ರಕ್ಷಿಸಿದ ʻಪಬ್ಲಿಕ್ ಟಿವಿʼ ತಂಡ

    ರಸ್ತೆಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿ – ಕುಟುಂಬಸ್ಥರನ್ನ ರಕ್ಷಿಸಿದ ʻಪಬ್ಲಿಕ್ ಟಿವಿʼ ತಂಡ

    ಮಡಿಕೇರಿ: ರಸ್ತೆಗುಂಡಿ (Pothole) ತಪ್ಪಿಸಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಗ್ರಾಮದಲ್ಲಿಂದು ನಡೆದಿದೆ. ಇದೇ ಸಮಯಕ್ಕೆ ಅಲ್ಲಿಗೆ ಧಾವಿಸಿದ ನಿಮ್ಮ ʻಪಬ್ಲಿಕ್‌ ಟಿವಿʼ ತಂಡ (Public TV Team) ಕುಟುಂಬಸ್ಥರನ್ನ ರಕ್ಷಣೆ ಮಾಡಿದೆ.

    ಹೌದು. ಮಡಿಕೇರಿಯ (Madikeri) ತಲಕಾವೇರಿ ರಸ್ತೆ ಸಂಪೂರ್ಣವಾಗಿ ಗುಂಡಿಮಯವಾಗಿರುವ ಹಿನ್ನೆಲೆ ʻಪಬ್ಲಿಕ್ ಟಿವಿʼ ತಂಡ ರಿಯಾಲಿಟಿ ಚೆಕ್ ಮಾಡಲು ತೆರಳಿತ್ತು. ಇದೇ ರಸ್ತೆ ಗುಂಡಿ ತಪ್ಪಿಸಲು ಹೋದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿತ್ತು. ಈ ದೃಶ್ಯ ಕೂಡ ಪಬ್ಲಿಕ್‌ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೂಡಲೇ ʻಪಬ್ಲಿಕ್‌ ಟಿವಿʼ ತಂಡ ಕಾರಿನಲ್ಲಿದ್ದ ಕುಟುಂಬಸ್ಥರ ರಕ್ಷಣೆ ಮಾಡಿದೆ. ಕಾರಿನಲ್ಲಿದ್ದ ಮಕ್ಕಳು, ಕಾರು ಚಾಲಕ ಹಾಗೂ ವೃದ್ಧೆಯೊಬ್ಬರನ್ನ ರಕ್ಷಣೆ ಮಾಡಿದೆ, ಬಳಿಕ ಅವರನ್ನ ಮಡಿಕೇರಿ ಆಸ್ಪತ್ರೆಗೆ ಸುರಕ್ಷಿತವಾಗಿ ರವಾನೆ ಮಾಡಿದೆ. ಇದನ್ನೂ ಓದಿ: ದಸರಾ ದಶಮಂಟಪಗಳ ಶೋಭಯಾತ್ರೆಯಲ್ಲಿ ನಿಯಮ ಉಲ್ಲಂಘಿಸಿ ಡಿಜೆ ಬಳಕೆ – 62 ಮಂದಿ ವಿರುದ್ಧ ಕೇಸ್‌

    ಉಡುಪಿಯಿಂದ ನೇರವಾಗಿ ಮಡಿಕೇರಿ ತಾಲೂಕಿನ ಎಮ್ಮೆಮಾಡು ಗ್ರಾಮದಲ್ಲಿರುವ ದರ್ಗಾಕ್ಕೆ ತೆರಳುವ ವೇಳೆಯಲ್ಲಿ ಈ ಘಟನೆ ಸಂಭವಿಸಿರುವುದರಿಂದ ಕಾರಿನಲ್ಲಿ ಇದ್ದ ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ. ಅಪಘಾತದಿಂದ ಕಾರಿನ‌ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜು ಆಗಿದೆ. ಇದನ್ನೂ ಓದಿ: ಕುಟುಂಬಸ್ಥರ ಶವಸಂಸ್ಕಾರ ಮುಗಿಸಿ ನಾಲೆಯಲ್ಲಿ ಸ್ನಾನಕ್ಕೆ ತೆರಳಿದ ಯುವಕ ನೀರುಪಾಲು

    ಘಟನೆಗೆ ಸಂಬಂಧಿಸಿದಂತೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ಪಬ್ಲಿಕ್ ಟಿವಿ ತಂಡ ಕುಟುಂಬಸ್ಥರು ರಕ್ಷಣೆ ಮಾಡಿದಕ್ಕೆ ಬೆಟ್ಟಗೇರಿ ಗ್ರಾಮಸ್ಥರು ‌ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ ಗಣತಿದಾರರ ಪರದಾಟ – ಮುಂದುವರಿದ ಸರ್ವರ್​ ಸಮಸ್ಯೆ, 4 ದಿನಗಳಲ್ಲಿ ಕೇವಲ 1,133 ಮಂದಿ ದತ್ತಾಂಶ ಸಂಗ್ರಹ

  • ದೊಡ್ಡ ನಗರಗಳಲ್ಲಿ ಗುಂಡಿ ಇದ್ದೇ ಇರುತ್ತದೆ: ಡಿಕೆಶಿ

    ದೊಡ್ಡ ನಗರಗಳಲ್ಲಿ ಗುಂಡಿ ಇದ್ದೇ ಇರುತ್ತದೆ: ಡಿಕೆಶಿ

    ಬೆಂಗಳೂರು: ಎಷ್ಟೇ ಮಾಡಿದರೂ ಮಹಾನಗರಗಳಲ್ಲಿ ಗುಂಡಿಗಳು (Pothole) ಇದ್ದೇ ಇರುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar)  ಹೇಳಿದ್ದಾರೆ.

    ರಸ್ತೆ ಗುಂಡಿ ವಿಚಾರದ ಬಗ್ಗೆ ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಎಷ್ಟೇ ಮಾಡಿದರೂ ಗುಂಡಿ ಇದ್ದೇ ಇರುತ್ತದೆ. ಗಾಡಿಗಳ ದಟ್ಟಣೆ ಇರುತ್ತೆ, ಲಾರಿ ಎಲ್ಲಾ ಹೆಚ್ಚು ಇರೋದ್ರಿಂದ ಇದ್ದೇ ಇರುತ್ತದೆ. ಎಷ್ಟೇ ದಪ್ಪ ರಸ್ತೆ ಮಾಡಿದರೂ ಗುಂಡಿ ಇರುತ್ತೆ. ಬೆಂಗಳೂರನ್ನ ಕಂಪ್ಲೀಟ್ ವೈಟ್ ಟಾಪಿಂಗ್ ಮಾಡೋವರೆಗೂ ಗುಂಡಿ ಇರುತ್ತೆ. ಎಲ್ಲಾ ರಾಜ್ಯದ ಸಿಟಿಯ ಡೇಟಾ ನೀವು ತರಿಸಿಕೊಳ್ಳಿ, ಹೇಳ್ತಾರೆ. ನಮ್ಮ ಹತ್ರ ಏನಾಗುತ್ತೋ ಅದನ್ನ ಮಾಡುತ್ತಿದ್ದೇವೆ. ಡೆಡ್ ಲೈನ್ ಫಿಕ್ಸ್ ಮಾಡಿದ್ದೇವೆ. ಗುತ್ತಿಗೆದಾರರಿಗೆ ಶಿಕ್ಷೆಗೆ ಒಳಪಡಿಸೋದಾಗಿ ಹೇಳಿದ್ದೇವೆ. ನಾನು ನಿರಂತರವಾಗಿ ಐದು ಕಾರ್ಪೋರೇಷನ್ ಬಗ್ಗೆ ನಿಗಾ ಇಟ್ಟಿದ್ದೇನೆ ಎಂದರು. ಇದನ್ನೂ ಓದಿ: ಜಯನಗರಕ್ಕೆ ಶೀಘ್ರದಲ್ಲೇ ಪೈಪ್‌ಲೈನ್ ಅನಿಲ ಲಭ್ಯ- ಗೇಲ್ PNG ಯೋಜನೆಗೆ ತೇಜಸ್ವಿ ಸೂರ್ಯ ಚಾಲನೆ

    ಇದೇ ಸಂದರ್ಭದಲ್ಲಿ ಸಿಎಂ ಸಿಟಿ ರೌಡ್ಸ್ ಬಗ್ಗೆಯೂ ಮಾತನಾಡಿದ ಅವರು, ನಾನು ಸಹ ಅದರಲ್ಲಿ ಇರಬೇಕಿತ್ತು. ಆದರೆ ನನಗೆ ಒಂದು ಮೀಟಿಂಗ್ ಇತ್ತು, ಗ್ಯಾರಂಟಿ ಸಮಿತಿ ಅವರಿಗೆ ಟ್ರೈನಿಂಗ್ ಕೊಡಬೇಕಿತ್ತು. ಹೀಗಾಗಿ ಸಿಎಂಗೆ ತಡವಾಗುತ್ತೆ ಎಂದು ನಾನು ಹೋಗಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಡಿಸಿಎಂ ಅವರೇ ರೈತರ ಮುಂದೆ ತೊಡೆ ತಟ್ಟುತ್ತಿದ್ದೀರಿ, ನಿಮ್ಮ ತೊಡೆ ಮುರಿಯುವ ಕಾಲ ದೂರವಿಲ್ಲ: ನಿಖಿಲ್

  • ಬೆಂಗಳೂರಿನಲ್ಲಿ ಗುಂಡಿಗಳದ್ದೇ ಕಾರುಬಾರು – ಸಿಎಂ, ಡಿಸಿಎಂ ಸಿಟಿ ರೌಂಡ್ಸ್

    ಬೆಂಗಳೂರಿನಲ್ಲಿ ಗುಂಡಿಗಳದ್ದೇ ಕಾರುಬಾರು – ಸಿಎಂ, ಡಿಸಿಎಂ ಸಿಟಿ ರೌಂಡ್ಸ್

    – ಜಲ್ಲಿ ಹಾಕಿ ಟಾರ್ ಹಾಕದ ಎಂಜಿನಿಯರ್ ಸಸ್ಪೆಂಡ್
    – ರಸ್ತೆಯಲ್ಲೇ ಕಸ ಸುರಿದಿರೋದಕ್ಕೆ ಸಿಎಂ ಗರಂ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ರಸ್ತೆಗುಂಡಿಗಳಿಂದಾಗಿ (Road Potholes) ಗುಂಡಿಯೂರು ಅಂತ ರಾಷ್ಟ್ರಮಟ್ಟದಲ್ಲಿ ಸದ್ದುಮಾಡುತ್ತಿದೆ. ಈ ಬಗ್ಗೆ ಪಬ್ಲಿಕ್ ಟಿವಿ ಅಭಿಯಾನದ ಬೆನ್ನಲ್ಲೇ ಸಿಎಂ, ಡಿಸಿಎಂ ನಗರ ಪ್ರದಕ್ಷಿಣೆ ನಡೆಸಿದ್ದಾರೆ.

    ಬೆಂಗಳೂರಿನ ಬಳ್ಳಾರಿ ರಸ್ತೆಯ ವಿಂಡ್ಸರ್ ಮ್ಯಾನರ್ ವೃತ್ತ, ಹೆಬ್ಬಾಳ ಫ್ಲೈಓವರ್‌  ರಸ್ತೆಯಲ್ಲಿ ಸಿಎಂ (Siddaramaiah) ಪರಿಶೀಲನೆ ನಡೆಸಿದ್ದಾರೆ. ಹೆಬ್ಬಾಳ ಫ್ಲೈಓವರ್‌ ರಸ್ತೆಯಲ್ಲಿ ರಸ್ತೆಯಲ್ಲಿ ಕಸ ಡಂಪ್ ಮಾಡಿದ್ದಕ್ಕೆ ಸಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಣ್ಣೂರು-ಬಾಗಲೂರು ರಸ್ತೆ ವೈಟ್ ಟ್ಯಾಪಿಂಗ್ ಕೂಡ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಆಯುಧ ಪೂಜೆ ಹಬ್ಬಕ್ಕೂ ಸಾರಿಗೆ ಇಲಾಖೆಯಲ್ಲಿ ದುಡ್ಡಿಲ್ವಾ?- ಒಂದು ಬಸ್‌ಗೆ ಕೇವಲ 150 ರೂ. ಬಿಡುಗಡೆ

    ಸಿಟಿ ರೌಂಡ್ಸ್ ಬಳಿಕ ಮಾತನಾಡಿದ ಸಿಎಂ, 16 ಸಾವಿರ ಗುಂಡಿಗಳಲ್ಲಿ 4 ಸಾವಿರ ಮಾತ್ರ ಬಾಕಿ ಇದೆ. ಎಲ್ಲೆಲ್ಲಿ ಗುಂಡಿಗಳು ಇದೆಯೋ ಅಲ್ಲೆಲ್ಲಾ ಮುಚ್ಚಲು ಸೂಚನೆ ನೀಡಿದ್ದೇನೆ. ಗುಂಡಿಗಳಿಗೆ ಜಲ್ಲಿ ಹಾಕಿ ಟಾರ್ ಹಾಕದ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್‌ನ ಅಮಾನತು ಮಾಡಿದ್ದೇನೆ. ಹೆಣ್ಣೂರು ರಸ್ತೆ ವೈಟ್ ಟ್ಯಾಪಿಂಗ್ ಆಗಿದೆ. ಪ್ರತಿ ಕಿಲೋ ಮೀಟರ್ ರಸ್ತೆಗೆ 13 ಕೋಟಿ ರೂ. ಕೊಡುತ್ತಿದ್ದೇವೆ. ಬಿಜೆಪಿಯವರು ಗುಂಡಿಗಳು ಮುಚ್ಚಿದ್ರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ: ಜಾತಿಗಣತಿ ಬಹಿಷ್ಕಾರಕ್ಕೆ ತೇಜಸ್ವಿ ಸೂರ್ಯ ಕರೆ

    ಡಿಸಿಎಂ ಡಿಕೆಶಿ (DK Shivakumar) ಕನಕಪುರ ಪ್ರವಾಸಕ್ಕೆ ತೆರಳುವಾಗ ಮಾರ್ಗಮಧ್ಯದಲ್ಲಿ ಬೆಂಗಳೂರಿನ ಮಾಗಡಿ ರಸ್ತೆಯ ಸುಮನಹಳ್ಳಿ ಮೇಲ್ಸೇತುವೆ ರಸ್ತೆ ದುರಸ್ತಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸಮಸ್ಯೆ ಬಗೆಹರಿಸದೇ ಸಿಎಂ ಧಮ್ಕಿ ಹಾಕೋದು ಸರಿಯಲ್ಲ: ಸಿ.ಟಿ ರವಿ

  • ರಸ್ತೆ ಗುಂಡಿ ಮುಚ್ಚದ ಸರ್ಕಾರದ ವಿರುದ್ಧ ಸಿಡಿದ ಕೇಸರಿ ಪಡೆ – ರಾಜ್ಯಾದ್ಯಂತ ರಸ್ತೆ ತಡೆ ಪ್ರತಿಭಟನೆ

    ರಸ್ತೆ ಗುಂಡಿ ಮುಚ್ಚದ ಸರ್ಕಾರದ ವಿರುದ್ಧ ಸಿಡಿದ ಕೇಸರಿ ಪಡೆ – ರಾಜ್ಯಾದ್ಯಂತ ರಸ್ತೆ ತಡೆ ಪ್ರತಿಭಟನೆ

    – ಗುಂಡಿ ಮುಂದೆ ಕುಳಿತು ಬಾಯಿ ಬಾಯಿ ಬಡಿದುಕೊಂಡ ಪ್ರತಿಭಟನಕಾರರು
    – ತಾವೇ ಖುದ್ದು ಗುಂಡಿ ಮುಚ್ಚಿದ ಬಿಜೆಪಿ ನಾಯಕರು

    ಬೆಂಗಳೂರು: ಸಿಲಿಕಾನ್ ಸಿಟಿಯ ಮಾನ, ರಸ್ತೆ ಗುಂಡಿಗಳಲ್ಲಿ (Road Pothole) ಹರಾಜು ಆಗ್ತಿದೆ. ನಿತ್ಯ ಗುಂಡಿಗಳಿಂದ ವಾಹನ ಸವಾರರು ನರಕ ಅನುಭವಿಸ್ತಿದ್ದಾರೆ. ಅದೇ ರೀತಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ರಸ್ತೆ ಗುಂಡಿ ಸಮಸ್ಯೆ ಇದೆ. ಸರ್ಕಾರ ಅಭಿವೃದ್ಧಿ ಕಾರ್ಯ ಮಾಡದೇ ಭ್ರಷ್ಟಾಚಾರದಲ್ಲಿ ತೊಡಗಿದೆ. ಹೀಗಾಗಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಗಂಟೆಗಳ ಕಾಲ ರಸ್ತೆ ತಡೆದು ಬಿಜೆಪಿ ಪ್ರತಿಭಟನೆ (BJP Protest) ನಡೆಸುತ್ತಿದೆ.

    ಬೆಂಗಳೂರು ನಗರದ (Bengaluru City) ಬಸವನಗುಡಿ, ಗೋವಿಂದರಾಜನಗರ, ವಿಜಯನಗರ, ಬಿಟಿಎಂ ಲೇಔಟ್‌ ಕ್ಷೇತ್ರಗಳಲ್ಲಿ ರಸ್ತೆ ತಡೆ ನಡೆಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿದಿನ 1 ಗಂಟೆ ರಸ್ತೆ ತಡೆ ನಡೆಸಿ ಅಥವಾ ಗುಂಡಿ ಬಿದ್ದಿರೋ ಜಾಗದಲ್ಲಿ ಕುಳಿತು ಪ್ರತಿಭಟನೆ ನಡೆಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಇದರೊಂದಿಗೆ ತಾವೇ ಗುಂಡಿ ಮುಚ್ಚುವ ಕೆಲಸವನ್ನೂ ಮಾಡುತ್ತಿದ್ದಾರೆ.

    224 ಕ್ಷೇತ್ರಗಳಲ್ಲಿ ಪ್ರತಿಭಟನೆ
    ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಆಯಾಯಾ ಸ್ಥಳೀಯ ನಾಯಕರ ನೇತೃತ್ವದಲ್ಲಿ ರಸ್ತೆ ರೋಕೋ (ರಸ್ತೆ ತಡೆ) ನಡೆಸಿ ಪ್ರತಿಭಟನೆ ನಡೆಸಲಾಗುತ್ತಿದೆ.

    ಬೆಂಗಳೂರು ನಗರದ ಮಹಾಲಕ್ಷ್ಮಿ ಲೇಔಟ್‌ ಕ್ಷೇತ್ರದಲ್ಲಿ ರಸ್ತೆಗುಂಡಿ ಸಂಬಂಧ ಶಾಸಕ ಗೋಪಾಲಯ್ಯ ನೇತೃತ್ವದಲ್ಲಿ ಸಂಚಾರ ತಡೆ ಚಳವಳಿ ನಡೆಸಲಾಗುತ್ತಿದೆ. ಕಠೀರವ ಸ್ಟುಡಿಯೋ ಬಳಿ ರಸ್ತೆ ತಡೆದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಂಠೀರವ ಸ್ಟುಡಿಯೋ ರಸ್ತೆ, ಸುಮ್ಮನಹಳ್ಳಿ, ನಾಗರಭಾವಿ, ಕಾಮಾಕ್ಷಿಪಾಳ್ಯ, ಮಾಗಡಿ ರಸ್ತೆಗಳು ಗುಂಡಿಮಯವಾಗಿದ್ದರೂ ಸರ್ಕಾರ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಕಿಡಿ ಕಾರಿದ್ದಾರೆ. ʻಗುಂಡಿ ಮುಚ್ಚಿ ಜನರ ಪ್ರಾಣ ಉಳಿಸಿ, ಗುಂಡಿಗಳ ಊರು ಮಾಡಿದ ಕಾಂಗ್ರೆಸ್‌ ಸರ್ಕಾರʼ ಅಂತ ಘೋಷಣೆ ಕೂಗುತ್ತಾ ಆಕ್ರೋಶ ಹೊರಹಾಕಿದ್ದಾರೆ.

    ರಸ್ತೆ ಗುಂಡಿಗಳ ಮುಂದೆ ಕುಳಿಯು ಬಾಯಿ ಬಾಯಿ ಬಡಿದುಕೊಳ್ಳುತ್ತಿರುವ ಪ್ರತಿಭಟನಾಕಾರರು, ತಾವೇ ಗುಂಡಿ ಮುಚ್ಚುವ ಕೆಲಸವನ್ನೂ ಮಾಡುತ್ತಿದ್ದಾರೆ. ಮಾಜಿ ಶಾಸಕ ನೇಲ ನರೇಂದ್ರ ಬಾಬು, ಉಪ ಮೇಯರ್ ಹರೀಶ್ ಸಹ ಗುಂಡಿ ಮುಚ್ಚುವ ಕೆಲಸದಲ್ಲಿ ತೊಡಗಿದ್ದಾರೆ.

  • ರಾಜ್ಯದಲ್ಲಿರೋದು ಗುಂಡಿಗಳನ್ನ ನಡೆಸೋ ಸರ್ಕಾರ: ಸಿ.ಸಿ.ಪಾಟೀಲ್

    ರಾಜ್ಯದಲ್ಲಿರೋದು ಗುಂಡಿಗಳನ್ನ ನಡೆಸೋ ಸರ್ಕಾರ: ಸಿ.ಸಿ.ಪಾಟೀಲ್

    ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರೋದು ಗುಂಡಿಗಳನ್ನ ನಡೆಸೋ ಸರ್ಕಾರ. ಇಂತಹ ಸರ್ಕಾರ ನಾನು ನೋಡೇ ಇಲ್ಲ ಎಂದು ಮಾಜಿ ಸಚಿವ ಸಿ.ಸಿ. ಪಾಟೀಲ್ (CC Patil) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಬೆಂಗಳೂರು ಗುಂಡಿಗಳ (Bengaluru Pothole) ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಇಂತಹ ಗುಂಡಿಗಳನ್ನ ನಡೆಸೋ ಸರ್ಕಾರ ನಾನು ನೋಡೇ ಇರಲಿಲ್ಲ. 6 ಸಾವಿರ, 3 ಸಾವಿರ ಗುಂಡಿಗಳು ಎನ್ನುತ್ತಿದ್ದಾರೆ. ಅಧಿಕಾರಿಗಳನ್ನ ಗುಂಡಿ ಮುಚ್ಚೋಕೆ ನೇಮಿಸಿರುವ ಏಕೈಕ ಸರ್ಕಾರ ಅಂದರೆ ಸ್ವಾತಂತ್ರ‍್ಯ ಭಾರತದ ಇತಿಹಾಸದಲ್ಲಿ ಕರ್ನಾಟಕದಲ್ಲಿ ಇದೇ ಮೊದಲ ಸರ್ಕಾರ ಎಂದು ಕಿಡಿಕಾರಿದರು. ಇದನ್ನೂ ಓದಿ: ಟೆಕ್ಸಾಸ್‌ನಲ್ಲಿ ಹಿಂದೂ ದೇವರ ಪ್ರತಿಮೆ ಯಾಕೆ? ನಮ್ಮದು ಕ್ರಿಶ್ಚಿಯನ್‌ ರಾಷ್ಟ್ರ – ಟ್ರಂಪ್‌ ಬೆಂಬಲಿಗನ ಪೋಸ್ಟ್‌

    ಸೋಮವಾರ ರಾತ್ರಿ ನಾನು ವಿಮಾನದಲ್ಲಿ ಬೆಂಗಳೂರಿಗೆ ಬಂದೆ. ಬಿಡಿಎ ಮುಂದೆ ಫ್ಲೈಓವರ್ ಮೇಲೆ ಮಳೆ ಬರುತ್ತಿದ್ದರೂ ಗುಂಡಿ ಮುಚ್ಚುತ್ತಿದ್ದಾರೆ. ಮಳೆ ಬರೋವಾಗ ಗುಂಡಿ ಮುಚ್ಚಿದ್ರೆ ಇರುತ್ತದೆಯಾ? ಜಿಬಿಎ (GBA) ಅಧಿಕಾರಿಗಳಿಗೆ ಅಷ್ಟು ಪರಿಜ್ಞಾನ ಇಲ್ಲವಾ? ಮಳೆ ಬರೋವಾಗ ಗುಂಡಿ ಮುಚ್ಚಿದ್ರೆ ಆಗುತ್ತಾ? ಏನು ಮಾಡ್ತಿದೆ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದೆಹಲಿಯಲ್ಲಿರುವ ಪ್ರಧಾನಿ ಮೋದಿ ನಿವಾಸದ ರಸ್ತೆಯಲ್ಲೂ ಗುಂಡಿಗಳಿವೆ: ಡಿಕೆಶಿ ಕೌಂಟರ್

    ಪ್ರಧಾನಿ ಮನೆ ಮುಂದೆ ಗುಂಡಿ ಇದೆ ಎಂಬ ಡಿಕೆ ಶಿವಕುಮಾರ್ (DK Shivakumar) ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರಧಾನಿ ಮನೆ ಮುಂದೆ ಗುಂಡಿ ಇದ್ದರೆ ಡಿಕೆಶಿ ಮನೆ ಮುಂದೆ ಹೊಂಡಾ ಮಾಡಿಕೊಳ್ಳೋಕೆ ಹೇಳಿ. ಇವರ ಮನೆ ಮುಂದೆ ಒಂದು ಲೇಕ್ ಮಾಡಿಕೊಳ್ಳಲಿ. ಏನು ಕೇಳಿದ್ರು ಮೋದಿ ಮಾಡಿಲ್ಲ, ನೀವು ಇದ್ದಾಗ ಮಾಡಿಲ್ಲ ಎನ್ನುತ್ತಾರೆ. ನಾವು ಇದ್ದಾಗ ಮಾಡಿಲ್ಲ ಅನ್ನೋದಕ್ಕೆ ನೀವು ಅಧಿಕಾರಕ್ಕೆ ಬಂದಿದ್ದೀರಾ. ಮತ್ತೆ ನೀವು ಹೋಗೋಕೆ ತಯಾರಾಗಿ, ನಾವು ಬರುತ್ತೇವೆ ಎಂದು ಹರಿಹಾಯ್ದರು. ಇದನ್ನೂ ಓದಿ: ಮಾಜಿ ಸಚಿವ, ಬಿಜೆಪಿ ಶಾಸಕ ಸುರೇಶ್ ಕುಮಾರ್​​​ಗೆ ಮಾತೃವಿಯೋಗ

  • ಬೆಂಗಳೂರಿನಲ್ಲಿ 7 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿ ಮುಚ್ಚಿದ್ದೇವೆ, ವಿಪಕ್ಷಗಳು ರಾಜಕೀಯ ಮಾಡ್ತಿದೆ: ಡಿಕೆಶಿ

    ಬೆಂಗಳೂರಿನಲ್ಲಿ 7 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿ ಮುಚ್ಚಿದ್ದೇವೆ, ವಿಪಕ್ಷಗಳು ರಾಜಕೀಯ ಮಾಡ್ತಿದೆ: ಡಿಕೆಶಿ

    ಬೆಂಗಳೂರು: ಹೆಚ್ಚು ಮಳೆ ಹಾಗೂ ಟ್ರಾಫಿಕ್‌ನಿಂದ ರಸ್ತೆ ಗುಂಡಿ ಆಗುತ್ತದೆ. 7 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿ ಮುಚ್ಚಿದ್ದೇವೆ. ಇನ್ನೂ ಐದು ಸಾವಿರ ರಸ್ತೆ ಗುಂಡಿ ಬಾಕಿ ಇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

    ಬೆಂಗಳೂರು ರಸ್ತೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮಸ್ಯೆ ಪರಿಹರಿಸಲು ಕ್ರಮವಹಿಸಲಾಗುತ್ತದೆ. ಆದರೆ ವಿಪಕ್ಷಗಳು ರಾಜಕೀಯ ಮಾಡುತ್ತಿದೆ. ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಇದೆ. ಈಗಾಗಲೇ ಗುಂಡಿಗಳ ಪತ್ತೆ ಹಚ್ಚಲು ಸೂಚನೆ ನೀಡಲಾಗಿದೆ. ಜನರು ಕೂಡಾ ಗುಂಡಿ ಬಗ್ಗೆ ಮಾಹಿತಿ ಕೊಡಲು ಸೂಚನೆ ನೀಡಲಾಗಿದೆ. ಆದಷ್ಟೂ ಬೇಗ ಗುಂಡಿ ಮುಚ್ಚೋ ಕೆಲಸ ಆಗುತ್ತದೆ ಎಂದರು. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ನಾವು ಸಮಸ್ಯೆಗಳನ್ನು ಬಗೆಹರಿಸಲು ಇದ್ದೇವೆ. ಬಿಜೆಪಿಯವರು (BJP) ರಾಜಕೀಯ ಮಾಡಲು ಇದ್ದಾರೆ. ಸಿಎಂ ಕೂಡ ರಸ್ತೆ ಗುಂಡಿ (Road Pothole) ಮುಚ್ಚಲು ಸೂಚಿಸಿದ್ದಾರೆ. ಯಾವುದೇ ಗುಂಡಿಗಳು ಇರಬಾರದು. ಯಾರೂ ಕೂಡ ರಸ್ತೆ ಗುಂಡಿಯನ್ನು ಮಾಡೋದಿಲ್ಲ, ಬಯಸೋದೂ ಇಲ್ಲ. ಪೊಲೀಸರಿಗೂ ಹಾಗೂ ಸಾರ್ವಜನಿಕರಿಗೂ ರಸ್ತೆ ಗುಂಡಿ ಬಗ್ಗೆ ಮಾಹಿತಿ ಕೊಡಲು ತಿಳಿಸಿದ್ದೇವೆ. ರಾಜಕೀಯ ಮಾಡುವವರು ರಾಜಕೀಯ ಮಾಡಲಿ, ನಾವು ಏನೂ ಹೇಳಲು ಆಗಲ್ಲ. ನಮ್ಮ ಬಳಿ ಪರಿಹಾರ ಇದೆ. ನಾವೂ ಬಿಜೆಪಿ ಶಾಸಕರ ಕ್ಷೇತ್ರಕ್ಕೂ ತಾರತಮ್ಯ ಮಾಡದೇ ಅನುದಾನ ಕೊಟ್ಟಿದ್ದೇವೆ. ಈಗಲೂ ಕೂಡ 25 ಕೋಟಿ ಅನುದಾನ ಕೊಟ್ಟಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕ್ರಿಶ್ಚಿಯನ್ ಕುರುಬ ಅಂತ ನಾವು ಬರೆಸಿಲ್ಲ, ಜನರೇ ಬರೆಸಿದ್ದಾರೆ: ಶಿವರಾಜ ತಂಗಡಗಿ

  • ಹಣ ಸಂಗ್ರಹಿಸಿ 3 ಕಿ.ಮೀ. ರಾಜ್ಯ ಹೆದ್ದಾರಿಯ ಗುಂಡಿ ಮುಚ್ಚಿದ ಬೀದರ್‌ ಗ್ರಾಮಸ್ಥರು!

    ಹಣ ಸಂಗ್ರಹಿಸಿ 3 ಕಿ.ಮೀ. ರಾಜ್ಯ ಹೆದ್ದಾರಿಯ ಗುಂಡಿ ಮುಚ್ಚಿದ ಬೀದರ್‌ ಗ್ರಾಮಸ್ಥರು!

    – ಕಂದಗೋಳ ಗ್ರಾಮಸ್ಥರಿಂದ ಕೆಲಸ
    – ಗ್ಯಾರಂಟಿಯಿಂದ ಸರ್ಕಾರದ ಬಳಿ ದುಡ್ಡಿ ಇಲ್ಲ ಎಂದು ಆಕ್ರೋಶ

    ಬೀದರ್‌: ಪಂಚ ಗ್ಯಾರಂಟಿ (Congress Guarantee) ಯೋಜನೆಯನ್ನು ಜಾರಿ ಮಾಡಿದ ಬಳಿಕ ರಾಜ್ಯ ಸರ್ಕಾರದ ಬಳಿ ಡೆಡ್ಲಿ ಗುಂಡಿಗಳನ್ನು ಮುಚ್ಚಲು (Road Repair) ಹಣವಿಲ್ವಾ ಎಂಬ ಪ್ರಶ್ನೆ ಎದ್ದಿದೆ. ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿ ಸುಸ್ತಾದ ಜಿಲ್ಲೆಯ ಕಂದಗೋಳ ಗ್ರಾಮಸ್ಥರು ತಮ್ಮ ಸ್ವಂತ ಖರ್ಚಿನಲ್ಲೇ ಗುಂಡಿಗಳನ್ನು ಮುಚ್ಚಲು ಆರಂಭಿಸಿದ್ದಾರೆ.

    ಬೀದರ್‌ನಿಂದ (Bidar) ತೆಲಂಗಾಣದ ಹಾಗೂ ಮಹಾರಾಷ್ಟಕ್ಕೆ ಹೋಗುವ ರಾಜ್ಯ ಹೆದ್ದಾರಿಯಲ್ಲಿ ದೊಡ್ಡ ದೊಡ್ಡ ಗುಂಡಿಗಳು (Potholes) ಸೃಷ್ಟಿಯಾಗಿವೆ. ಬೀದರ್‌ನಿಂದ ವಡಗಾಂವ್ ಮಾರ್ಗವಾಗಿ ತೆಲಂಗಾಣದ ಮತ್ತು ನಾಗಮಾರಪಳ್ಳಿ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಇದನ್ನೂ ಓದಿ: ಬೇಕರಿ, ದಿನಸಿ ಅಂಗಡಿಗಳಿಗೆ ಲಕ್ಷ ಲಕ್ಷ ಟ್ಯಾಕ್ಸ್ ಬಂದ್‌ ಎಚ್ಚರಿಕೆ ಕೊಟ್ಟ ಮಾಲೀಕರು

    ಭಾರೀ ಗಾತ್ರದ ವಾಹನಗಳ ಓಡಾಟದಿಂದ ರಸ್ತೆಗಳು ಮತ್ತಷ್ಟು ಹಾಳಾಗಿವೆ. ಪ್ರತಿದಿನ ಬೀದರ್‌ಗೆ ಹಾಗೂ ಔರಾದ್‌ಗೆ ಹೋಗಬೇಕಾದರೆ ಭಯದಲ್ಲೇ ಜನ ಸಂಚಾರ ಮಾಡುತ್ತಿದ್ದರು. ಈ ಬಗ್ಗೆ ಅಧಿಕಾರಿಗಳಿಗೆ ಸಾಕಷ್ಟು ಮನವಿ ಮಾಡಿದರೂ ಪ್ರಯೋಜನ ಆಗಿರಲಿಲ್ಲ. ಶಾಸಕರು ಮತ್ತು ಮಾಜಿ ಸಚಿವರಾದ ಪ್ರಭು ಚೌಹಾಣ್‌ಗೆ ಹತ್ತಾರು ಬಾರಿ ಮನವಿ ಮಾಡಿದರೂ ಕೆಲಸ ಆಗಲಿಲ್ಲ.

    ಮನವಿಗೆ ಯಾವುದೇ ಸ್ಪಂದನೆ ಸಿಗದ ಕಾರಣ ಕಂದಗೋಳ ಗ್ರಾಮಸ್ಥರೇ ತಮ್ಮ ತಮ್ಮ ಕೈಯಿಂದ ಹಣ ಹಾಕಿಕೊಂಡು ರಸ್ತೆ ರಿಪೇರಿ ಮಾಡಿದ್ದಾರೆ. ತಮ್ಮ ಸ್ವಂತ ಖರ್ಚಿನಲ್ಲೇ ಜಲ್ಲಿ, ಮರಳು ತಂದು ರಸ್ತೆಯಲ್ಲಿ ಬಿದ್ದ ಗುಂಡಿಗಳನ್ನು ಮುಚ್ಚಿದ್ದಾರೆ. ಮೂರು ಕಿಲೋಮೀಟರ್ ದೂರದವರೆಗೆ ಇರುವ ಗುಂಡಿಗಳನ್ನು ಮಣ್ಣಿನಿಂದ ಮುಚ್ಚಿ ಮಾದರಿ ಆಗಿದ್ದಾರೆ. ಇದರಿಂದ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮುಜುಗರವಾಗಿದೆ.

    ಗ್ರಾಮಸ್ಥ ಕಾಶಿನಾಥ್‌ ಪ್ರತಿಕ್ರಿಯಿಸಿ, ಪ್ರತಿದಿನ ಇಲ್ಲಿ ಸಾವಿರಾರು ವಾಹನಗಳು ಓಡಾಡುತ್ತಿವೆ. ಪ್ರತಿದಿನ ಬೈಕಿನಿಂದ ಸವಾರರು ರಸ್ತೆಗೆ ಬಿದ್ದು ಆಸ್ಪತ್ರೆಯಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾವು ಈ ರಸ್ತೆಯಲ್ಲಿ ಓಡಾಡುತ್ತಿದ್ದು ಹಲವು ಬಾರಿ ಬಿದ್ದಿದ್ದೇವೆ. ಸಾಕಷ್ಟು ಬಾರಿ ಅಧಿಕಾರಿಗಳನ್ನು, ಜನಪ್ರತಿನಿಧಿಗಳ ಬಳಿ ಮನವಿ ಮಾಡಿ ರಿಪೇರಿ ಮಾಡುವಂತೆ ಕೇಳಿಕೊಂಡಿದ್ದೆವು. ಆದರೆ ಯಾವುದೇ ಪ್ರಯೋಜನ ಆಗಿಲ್ಲ. ಕೊನೆಗೆ ನಾವೇ ಗ್ರಾಮಸ್ಥರಿಂದ ಹಣವನ್ನು ಸಂಗ್ರಹ ಮಾಡಿ ಗುಂಡಿ ಮುಚ್ಚಲು ಮುಂದಾಗುತ್ತಿದ್ದೇವೆ. ಪಂಚ ಗ್ಯಾರಂಟಿ ಯೋಜನೆಯಿಂದ ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ ಎಂದು ದೂರಿದರು. ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ ಕೇಸ್ ವರದಿ ಬಹಿರಂಗಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

  • ದಾಸರಹಳ್ಳಿಯಲ್ಲಿ ತಲೆಯೆತ್ತಿದ್ದ ಗುಂಡಿ ಸಮಸ್ಯೆ – ಡೆಡ್‌ಲೈನ್ ಮುಗಿದರೂ ದುರಸ್ತಿಯಿಲ್ಲ

    ದಾಸರಹಳ್ಳಿಯಲ್ಲಿ ತಲೆಯೆತ್ತಿದ್ದ ಗುಂಡಿ ಸಮಸ್ಯೆ – ಡೆಡ್‌ಲೈನ್ ಮುಗಿದರೂ ದುರಸ್ತಿಯಿಲ್ಲ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ಇತ್ತೀಚಿಗಷ್ಟೇ ಗುಂಡಿಯನ್ನು ಮುಚ್ಚಬೇಕು ಎನ್ನುವ ಡೆಡ್‌ಲೈನ್ (DeadLine) ಮುಗಿದಿದ್ದು, ನಗರದ ಹೊರವಲಯದಲ್ಲಿರುವ ಚಿಕ್ಕಸಂದ್ರ (Chikkasandra) ಮುಖ್ಯ ರಸ್ತೆಯಿಂದ ಹೆಸರುಘಟ್ಟ (Hesaraghatta) ರಸ್ತೆಯ ಸಾಕಷ್ಟು ಮುಖ್ಯ ರಸ್ತೆಗಳ ಗುಂಡಿಗಳು ಮುಚ್ಚದೇ ಹಾಗೇ ಉಳಿದಿವೆ.

    ಡಿಸಿಎಂ ಡಿ.ಕೆ.ಶಿವಕುಮಾರ್‌ರವರು (DCM DKShivakumar) ಬೆಂಗಳೂರು ನಗರವನ್ನು ಬ್ರಾಂಡ್ ಬೆಂಗಳೂರು (Brand Bengaluru) ಮಾಡಲು ಮುಂದಾಗಿದ್ದಾರೆ. ಹೀಗಾಗಿ ಈ ನಡುವೆ ಬಿಬಿಎಂಪಿ (BBMP) ಅಧಿಕಾರಿಗಳಿಗೆ ನಗರದ ಗುಂಡಿಗಳನ್ನು ಮುಚ್ಚಲು ಗಡುವು ನೀಡಿದ್ದರು. ಈಗಾಗಲೇ ಗಡುವು ಮುಗಿದು ಹಲವು ದಿನಗಳು ಕಳೆದಿವೆ. ಆದರೆ ಟಿ.ದಾಸರಹಳ್ಳಿ (T Dasarahalli) ವಿಧಾನಸಭಾ ಕ್ಷೇತ್ರದ ಚಿಕ್ಕಸಂದ್ರ ಮುಖ್ಯ ರಸ್ತೆಯಿಂದ ಹೆಸರುಘಟ್ಟ ರಸ್ತೆಯ ಸಾಕಷ್ಟು ಮುಖ್ಯ ರಸ್ತೆಗಳು ಗುಂಡಿ ಗಂಡಾಂತರಗಳಿಂದ ಕೂಡಿದ್ದು, ಅವ್ಯವಸ್ಥೆಯಾಗಿ ಉಳಿದಿದೆ.ಇದನ್ನೂ ಓದಿ: 2027ರ ವೇಳೆಗೆ ಚಂದ್ರಯಾನ-4ರ ಸುಳಿವು ಕೊಟ್ಟ ಇಸ್ರೋ; ಚಂದ್ರನಲ್ಲಿಗೆ ಗಗನಯಾತ್ರಿಗಳು ಹೆಜ್ಜೆ ಇಡಲು ಹೇಗೆ ಸಹಕಾರಿ?

    ಗಡುವು ನೀಡಿದ್ದರೂ ಈ ವಿಧಾನಸಭಾ ಕ್ಷೇತ್ರದಲ್ಲಿ ಜನರ ಪಾಡು ಕೇಳುವವರೇ ಇಲ್ಲದಂತಾಗಿದೆ. ಸಾಕಷ್ಟು ಬಾರಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ ಈ ಸಮಸ್ಯೆ ಹಾಗೆಯೇ ಉಳಿದಿದೆ. ಹೀಗಾಗಿ ರಸ್ತೆ ದುರಸ್ತಿಗಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

    ಮಂಡಿಯುದ್ದದ ಗುಂಡಿಗಳು ವಾಹನ ಸವಾರರಲ್ಲಿ ಮೃತ್ಯು ಕೂಪವಾಗಿ ಪರಿಣಮಿಸಿವೆ. ಯಮಸ್ವರೂಪಿ ಗುಂಡಿ ಗಂಡಾಂತರದಿಂದ ಎದ್ದು ಬಿದ್ದು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಹಿಳೆಯರು ತಮ್ಮ ಮಕ್ಕಳನ್ನು ಶಾಲೆಗೆ, ಶಾಲೆಯಿಂದ ಮನೆಗೆ ಕರೆತರಬೇಕಾದರೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಇನ್ನೂ ಮಳೆಗಾಲದಲ್ಲಿ ಎಲ್ಲಿ ಗುಂಡಿ ಇದೆಯೋ, ಎಲ್ಲಿ ಮಳೆಯ ನೀರು ಇದೆಯೋ ಎಂಬುದು ತಿಳಿಯದ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ತಮ್ಮ ಅಳಲನ್ನು ಆಕ್ರೋಶದ ರೀತಿಯಲ್ಲಿ ದುರಸ್ತಿ ಮಾಡಲು ಮನವಿ ಮಾಡಿದ್ದಾರೆ.

    ಒಟ್ಟಾರೆ ಬೃಹತ್ ಮಹಾನಗರ ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಗಳು ಈ ವರ್ಷದಲ್ಲಿ ದುರಸ್ತಿಯಾಗುತ್ತದೆಯಾ? ಎಂಬ ಅನುಮಾನವಿದ್ದು, ಬಿಬಿಎಂಪಿ ಅಧಿಕಾರಿಗಳು ಡಿಸಿಎಂ ಆದೇಶಕ್ಕೆ ದುರಸ್ತಿ ಮಾಡುತ್ತಾರಾ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.ಇದನ್ನೂ ಓದಿ: ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ – ಕಾಮುಕ ಶಿಕ್ಷಕ ಅರೆಸ್ಟ್‌

    &

  • ರಾತ್ರೋ ರಾತ್ರಿ ಫೀಲ್ಡಿಗಿಳಿದು ರಸ್ತೆ ಗುಂಡಿ ಪರಿಶೀಲಿಸಿದ ಡಿಸಿಎಂ – 14,307 ರಸ್ತೆಗುಂಡಿಗಳಿಗೆ ಮುಕ್ತಿ

    ರಾತ್ರೋ ರಾತ್ರಿ ಫೀಲ್ಡಿಗಿಳಿದು ರಸ್ತೆ ಗುಂಡಿ ಪರಿಶೀಲಿಸಿದ ಡಿಸಿಎಂ – 14,307 ರಸ್ತೆಗುಂಡಿಗಳಿಗೆ ಮುಕ್ತಿ

    – ನನಗೆ ಪೇಪರ್, ಅಧಿಕಾರಿಗಳ ಮಾತಿನ ಮೇಲೆ ನಂಬಿಕೆ ಇಲ್ಲ ಎಂದ ಡಿಕೆಶಿ

    ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ರಸ್ತೆ ಗುಂಡಿ (Bengaluru Road Potholes) ಮುಚ್ಚಲು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ನೀಡಿದ್ದ ಡೆಡ್ ಲೈನ್ ಮುಗಿದ ಕಾರಣ ಅವರು, ಭಾನುವಾರ ತಡರಾತ್ರಿ ಬೆಂಗಳೂರಿನ ರಸ್ತೆ ಕಾಮಗಾರಿ ವೀಕ್ಷಣೆ ನಡೆಸಿದರು. ಇದರಿಂದಾಗಿ ಏಕಾಏಕಿ ಅಧಿಕಾರಿಗಳು ಗಡಿಬಿಡಿಗೊಂಡಿದ್ದರು. ಸದಾಶಿವನಗರದ ತಮ್ಮ ನಿವಾಸದಿಂದ ಡಿಸಿಎಂ ನಗರ ಪ್ರದಕ್ಷಿಣೆಗೆ ಮಾಡಿ, ಹಲವೆಡೆ ರಸ್ತೆ ಪರಿಶೀಲನೆ ನಡೆಸಿದರು. ಡಿಸಿಎಂಗೆ ಶಾಸಕ ಹ್ಯಾರೀಸ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸಾಥ್ ನೀಡಿದರು.

    ಸಿಲಿಕಾನ್ ಸಿಟಿ, ಟೆಕ್‌ ಹಬ್ ಎಂದೆಲ್ಲ ಖ್ಯಾತಿ ಗಳಿಸಿದ ಬೆಂಗಳೂರು ಗುಂಡಿಗಳ ರಾಜಧಾನಿ ಎಂಬ ಕುಖ್ಯಾತಿಗೆ ಪಾತ್ರವಾಗಿತ್ತು. ರಸ್ತೆ ಗುಂಡಿಗಳ ಬಗ್ಗೆ ʻಪಬ್ಲಿಕ್‌ ಟಿವಿʼ ನಿರಂತರ ವರದಿ ಪ್ರಸಾರ ಮಾಡಿತ್ತು. ಇದಕ್ಕೆ ಸ್ಪಂದಿಸಿದ್ದ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್, ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿಗೆ (BBMP) ಗಡುವು ನೀಡಿದರು. ಗಡುವು ಮುಕ್ತಾಯಗೊಂಡ ಹಿನ್ನೆಲೆ ಖುದ್ದು ರಸ್ತೆಗಿಳಿದು ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಸಿಎಂ ಪಾಲಿಗೆ ಇಂದು ಬಿಗ್ ಡೇ – ಮುಡಾ ಕೇಸಲ್ಲಿ ತನಿಖೆಯೋ? ಸೇಫೋ?; ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ..!

    ಸುಮಾರು ರಾತ್ರಿ 11:30ರ ವೇಳೆಗೆ ಪ್ರದಕ್ಷಿಣೆ ಆರಂಭಿಸಿದ ಡಿಸಿಎಂ ಮಧ್ಯರಾತ್ರಿ 2 ಗಂಟೆವರೆಗೂ ಪ್ರದಕ್ಷಿಣೆ ನಡೆಸಿದರು. ಖುದ್ದು ರಸ್ತೆಗಿಳಿದ ಡಿಸಿಎಂ, ಜಯಮಹಲ್ ರಸ್ತೆಯ ಪ್ಯಾಚ್ ವರ್ಕ್ ವೀಕ್ಷಣೆ ವೇಳೆ ಆರೆಯಿಂದ ನೆಲಕ್ಕೆ ಗುದ್ದಿ ಪರಿಶೀಲನೆ ನಡೆಸಿದರು. ನಂತರ ಟ್ರಿನಿಟಿ ಜಂಕ್ಷನ್‌ನಲ್ಲಿ ಡಾಂಬರೀಕರಣಕ್ಕೂ ಮುನ್ನ ಮಾಡುವ ಮಿಲ್ಲಿಂಗ್ ಕಾಮಗಾರಿಗಳ ಪರಿಶೀಲಿಸಿದರು. ರಸ್ತೆಯ ಹದಗೆಟ್ಟಿರುವ ಭಾಗವನ್ನು ಮಿಲ್ಲಿಂಗ್ ಮಾಡಿ ಡಾಂಬರೀಕರಣ ಮಾಡುವಂತೆ ಸೂಚಿಸಿದರು. ಬಳಿಕ ಬನಶಂಕರಿ ಮೇಟ್ರೋ ಬಳಿಯ ಬನಶಂಕರಿ ರಸ್ತೆ ಕಾಮಗಾರಿಯನ್ನೂ ಪರಿಶೀಲಿಸಿದರು. ಜೊತೆಗೆ ಪಾಲಿಕೆ ಆಯುಕ್ತರಿಗೆ ರಸ್ತೆ ಬದಿಯಲ್ಲಿ ಅಂಗಡಿ ಹಾಕಿರೋದನ್ನ ತೆಗೆಸಬೇಕು ಅಂತ ಸೂಚನೆ ನೀಡಿದರು. ಇದನ್ನೂ ಓದಿ: ನಿಮ್ಮ ಕೈಯಲ್ಲಿರೋ ಸ್ಮಾರ್ಟ್‌ಫೋನ್‌ ಹ್ಯಾಕ್‌ ಮಾಡಿ ಸ್ಫೋಟಿಲು ಸಾಧ್ಯವೇ? ಹ್ಯಾಕಿಂಗ್‌ ತಪ್ಪಿಸಲು ಏನು ಮಾಡ್ಬೇಕು?

    14,307 ಗುಂಡಿಗಳನ್ನು ಮುಚ್ಚಿಸಿದ್ದಾರೆ:
    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಗುಂಡಿಬಿದ್ದ ರಸ್ತೆಗಳ ಬಗ್ಗೆ ಮಾಹಿತಿ ಬಂದಿತ್ತು, ಹಾಗಾಗಿ ಗುಂಡಿ ಮುಚ್ಚೋದಕ್ಕೆ ಎಲ್ಲರಿಗೂ ಹೇಳಿದ್ದೆ. ಯಾವುದೇ ಸಮಾಧಾನಕರವಾದ ಕೆಲಸ ನನ್ನ ಗಮನಕ್ಕೆ ಬಂದಿರಲಿಲ್ಲ. 15 ದಿನದ ಹಿಂದೆ ಮೀಟಿಂಗ್ ಮಾಡಿ ಡೆಡ್ ಲೈನ್ ನೀಡಿದ್ದೆ. ಆಯುಕ್ತರು, ಜಂಟಿ ಆಯುಕ್ತರು ಎಲ್ಲರಿಗೂ ಮಾಹಿತಿ ನೀಡಿದ್ದೆ. ಕೆಲಸದ ವಿಡಿಯೋ ಮಾಡಿ ಪೋಸ್ಟ್ ಮಾಡೋದಕ್ಕೆ ಹೇಳಿದ್ದೆ. ಇದುವರೆಗೆ 14,307 ಗುಂಡಿಗಳನ್ನ ಅಧಿಕಾರಿಗಳು ಮುಚ್ಚಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪುಣೆ ಏರ್‌ಪೋರ್ಟ್ ಹೆಸರು ಬದಲಾವಣೆ – ಜಗದ್ಗುರು ಸಂತ ತುಕಾರಾಂ ನಿಲ್ದಾಣವಾಗಿ ಮರುನಾಮಕರಣ

    ಅಧಿಕಾರಿಗಳ ಮಾತಿನ ಮೇಲೆ ನಂಬಿಕೆಯಿಲ್ಲ:
    ಎಲ್ಲಾ ವಿಡಿಯೋಗಳು ನನ್ನ ಮೊಬೈಲ್ ಫೋನ್‌ಗೆ ಬಂದಿವೆ. ಸದ್ಯದ ಮಟ್ಟಿಗೆ ಎಲ್ಲವೂ ಸಮಾಧಾನಕರವಾಗಿ ಕಾಣ್ತಾ ಇದೆ. ಆದರೂ ಒಮ್ಮೆ ನಾನು ಪರಿಶೀಲನೆ ಮಾಡಿ ನೋಡಬೇಕು. ಮಳೆ ಕಾರಣದಿಂದ ಕ್ವಾಲಿಟಿ ಮೆಂಟೇನ್ ಮಾಡೋದು ಸ್ವಲ್ಪ ಕಷ್ಟ. ಸರಿಯಾಗಿ ಕೆಲಸ ಆಗದೇ ಇದ್ದರೆ ಖಂಡಿತಾ ತಲೆದಂಡ ಎದುರಿಸಬೇಕಾಗುತ್ತೆ. ನಾಗರೀಕರಿಗೆ ಒಳ್ಳೆದಾಗ್ಬೇಕು, ಗುಂಡಿಯಿಂದ ಯಾರ ಪ್ರಾಣವೂ ಹೋಗಬಾರದು, ನನಗೆ ಪೇಪರ್ ಮತ್ತು ಅಧಿಕಾರಿಗಳ ಮಾತಿನ ಮೇಲೆ ನಂಬಿಕೆ ಇಲ್ಲ. ಎಲ್ಲಾ ನಾನೇ ನನ್ನ ಕಣ್ಣಾರೆ ನೋಡಿ ಸಮಾಧಾನ ಆಗಬೇಕು ಅಂತ ರೌಂಡ್ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.