Tag: ರಸ್ತೆ ವಿಭಜಕ

  • ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಡುರಸ್ತೆಯಲ್ಲೇ ಕಾರು ಪಲ್ಟಿ

    ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಡುರಸ್ತೆಯಲ್ಲೇ ಕಾರು ಪಲ್ಟಿ

    ಹಾಸನ: ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರೊಂದು ನಡೆರಸ್ತೆಯಲ್ಲಿ ಪಲ್ಟಿಯಾದ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬರಗೂರು ಗ್ರಾಮದಲ್ಲಿ ನಡೆದಿದೆ.

    ಚಲಿಸುತ್ತಿದ್ದ ಟಾಟಾ ಟಿಯಾಗೊ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಹೊಡೆದು ಪಲ್ಟಿಯಾಗಿದೆ. ಪರಿಣಾಮ ನಡು ರಸ್ತೆಯಲ್ಲೇ ಕಾರು ಪಲ್ಟಿಯಾಗಿದೆ. ಘಟನೆಯಿಂದಾಗಿ ಅದೃಷ್ಟವಶಾತ್ ಕಾರೊಳಗಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ.

    ಸಂಬಂಧಿಕರ ಅಂತ್ಯ ಸಂಸ್ಕಾರಕ್ಕೆಂದು ಮೂವರು ಕಾರಿನಲ್ಲಿ ತೆರಳುತ್ತಿದ್ದರು. ರಾಮನಾಥಪುರದಿಂದ ಹಾಸನಕ್ಕೆ ಚಲಿಸುತ್ತಿದ ವೇಳೆ ಈ ಅವಘಡ ಸಂಭವಿಸಿದೆ. ಅರಕಲಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಕಾರ್ಮಿಕರನ್ನ ಕರೆದೊಯ್ಯುತ್ತಿದ್ದ ಬಸ್ ಪಲ್ಟಿ – 30 ಮಂದಿ ಆಸ್ಪತ್ರೆಗೆ ದಾಖಲು

    ಕಾರ್ಮಿಕರನ್ನ ಕರೆದೊಯ್ಯುತ್ತಿದ್ದ ಬಸ್ ಪಲ್ಟಿ – 30 ಮಂದಿ ಆಸ್ಪತ್ರೆಗೆ ದಾಖಲು

    ಚಿಕ್ಕಬಳ್ಳಾಪುರ: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 30 ಮಂದಿ ಕಾರ್ಮಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಪಟ್ಟಣದಲ್ಲಿ ನಡೆದಿದೆ.

    ಗೌರಿಬಿದನೂರು ನಗರ ಹೊರವಲಯದ ನೂತನ ಸರ್ಕಾರಿ ತಾಯಿ ಮಕ್ಕಳ ಆಸ್ಪತ್ರೆ ಎದುರು ಘಟನೆ ನಡೆದಿದ್ದು, ಗಾಯಾಳುಗಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಗೌರಿಬಿದನೂರು ತಾಲೂಕಿನ ಶ್ರಾವಂಡಹಳ್ಳಿ, ಚಂದನದೂರು, ಮಧುಗಿರಿ ತಾಲೂಕಿನ ಯಾಕರ್ಲಹಳ್ಳಿ, ಕೊಡಗೇನಹಳ್ಳಿ ಕಡೆಯವರು ಎಂದು ತಿಳಿದುಬಂದಿದೆ.

    ದೊಡ್ಡಬಳ್ಳಾಪುರದ ಎವರ್ ಬ್ಲೂ ಗಾರ್ಮೆಂಟ್ಸ್ ಗೆ ಕೆಲಸಕ್ಕೆ ತೆರಳಿದ್ದ ಕಾರ್ಮಿಕರು ಕೆಲಸ ಮುಗಿಸಿ ಫ್ಯಾಕ್ಟರಿಗೆ ಸೇರಿದ ಖಾಸಗಿ ಬಸ್ಸಿನಲ್ಲೇ ಮನೆಗೆ ವಾಪಾಸ್ಸಾಗುತ್ತಿದ್ದರು. ಆದರೆ ಗೌರಿಬಿದನೂರು ನಗರಕ್ಕೆ ಎಂಟ್ರಿ ಕೊಡುವ ಆರಂಭದಲ್ಲೇ ನೂತನ ರಸ್ತೆ ನಿರ್ಮಾಣ ಮಾಡಿದ್ದು, ರಸ್ತೆ ಮಧ್ಯೆ ಭಾಗ ಹೊಸದಾಗಿ ರಸ್ತೆ ವಿಭಜಕ ಆಳವಡಿಸಲಾಗಿದೆ. ಈ ರಸ್ತೆ ವಿಭಜಕದ ಬಗ್ಗೆ ಅರಿವಿಲ್ಲದ ಚಾಲಕ ರಸ್ತೆ ವಿಭಜಕದ ಮೇಲೆ ಬಸ್ ಹರಿಬಿಟ್ಟಿದ್ದಾನೆ.

    ವಿಭಜಕದ ಮೇಲೆ ಬಸ್ ಹತ್ತಿದ ಪರಿಣಾಮ ಬಸ್ ಉರುಳಿದೆ. ಹೀಗಾಗಿ 30 ಮಂದಿ ಗಾಯಗೊಂಡು ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಗೌರಿಬಿದನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.