Tag: ರಸ್ತೆ ಸಂಚಾರ

  • ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಭಾರೀ ಮಳೆ, ಹಲವೆಡೆ ರಸ್ತೆ ಸಂಚಾರ ಬಂದ್

    ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಭಾರೀ ಮಳೆ, ಹಲವೆಡೆ ರಸ್ತೆ ಸಂಚಾರ ಬಂದ್

    ಚಿಕ್ಕಬಳ್ಳಾಪುರ: ತಡರಾತ್ರಿ ಜಿಲ್ಲೆಯಾದ್ಯಾಂತ ಧಾರಕಾರ ಮಳೆಯಾಗಿದ್ದು (Heavy Rain), ಹಲವೆಡೆ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ.

    ಜಿಲ್ಲೆಯ ಗುಡಿಬಂಡೆ, ಬಾಗೇಪಲ್ಲಿ, ಗೌರಿಬಿದನೂರು ಭಾಗದಲ್ಲಿ ಅತಿ ಹೆಚ್ಚಿನ ಮಳೆಯಾಗಿದೆ. ಗುಡಿಬಂಡೆ ಅಮಾನಿ ಬೈರಸಾಗರ ಕೆರೆ ಅಪಾಯದ ಮಟ್ಟ ಮೀರಿ ಕೋಡಿ ಹರಿಯುತ್ತಿದೆ. ಇದನ್ನೂ ಓದಿ: ಮುರುಘಾ ಶ್ರೀಗೆ ಮತ್ತೆ ಸಂಕಷ್ಟ – ಮೈಸೂರಿನಲ್ಲಿ ಮತ್ತೊಂದು FIR ದಾಖಲು

    ಎಲ್ಲೆಲ್ಲಿ ಸಂಚಾರ ಬಂದ್?
    ಗುಡಿಬಂಡೆ-ಪೇರೇಸಂದ್ರ ಮಾರ್ಗ, ಗುಡಿಬಂಡೆ ಹಂಪಸಂದ್ರ-ಬಾಗೇಪಲ್ಲಿ ಮಾರ್ಗ, ಗುಡಿಬಂಡೆ-ಲಕ್ಕೇನಹಳ್ಳಿ ಮಾರ್ಗ, ರಾಮಪಟ್ಟಣ ನವಿಲುಗುರ್ಕಿ ಮಾರ್ಗ, ಗುಡಿಬಂಡೆ ಅಮಾನಿ ಭೈರಸಾಗರ ಮಾರ್ಗಗಳಲ್ಲಿ ರಸ್ತೆಯಲ್ಲೇ ನೀರು ಹರಿಯುತ್ತಿರುವುದರಿಂದ ಜಲದಿಗ್ಬಂಧನವಾಗಿದೆ. ಪರ್ಯಾಯ ವ್ಯವಸ್ಥೆ ಕಲ್ಪಿಸಿರುವ ಮಾರ್ಗಗಳಲ್ಲೂ ಸಂಚಾರ ಕಷ್ಟಕರವಾಗಿದೆ. ಇದನ್ನೂ ಓದಿ: ಪ್ರಹ್ಲಾದ್‌ ಜೋಶಿ ಕಾರ್ಯವೈಖರಿ ಹೊಗಳಿದ ಕಾಂಗ್ರೆಸ್ ನಾಯಕ, ರಾಜಸ್ಥಾನ ಸಿಎಂ ಗೆಹ್ಲೋಟ್

    ಚಿಕ್ಕಬಳ್ಳಾಪುರ (Chikkaballapur) ಜಿಲ್ಲಾಕೇಂದ್ರಕ್ಕೆ ಬರಲು ಗೌರಿಬಿದನೂರು ಮಾರ್ಗ ಬಳಸಬೇಕಿದೆ. ಬಾಗೇಪಲ್ಲಿಯಲ್ಲೂ ಭರ್ಜರಿ ಮಳೆಯಾಗಿರುವುದರಿಂದ ಪಟ್ಟಣದ ಟಿಬಿ ಕ್ರಾಸ್ ಬಳಿ ಅಂಡರ್ ಪಾಸ್ ಜಲಾವೃತವಾಗಿ ವಾಹನ (Vehicle) ಸವಾರರು ಪರದಾಡುತ್ತಿದ್ದಾರೆ. ಇದರಿಂದ ಬಾಗೇಪಲ್ಲಿಗೆ ತೆರಳಲು ಎಲ್ಲೋಡು ಮಾರ್ಗ ಕಲ್ಪಿಸಲಾಗಿದೆ. ಕಾರೊಂದು ಜಲಾವೃತವಾಗಿ ಅಂಡರ್ ಪಾಸ್‌ನಲ್ಲೇ ಕೆಟ್ಟುನಿಂತಿದೆ. ಬಾಗೇಪಲ್ಲಿ-ಪುಟ್ಟಪರ್ತಿ ಮಾರ್ಗದಲ್ಲಿ ಕುಶಾವತಿ ಮೈದುಂಬಿ ಹರಿಯುತ್ತಿದ್ದು, ಪುಟ್ಟಪರ್ತಿ ಮಾರ್ಗದ ಸಂಚಾರ ಬಂದ್ ಆಗಿದೆ. ಗುಡಿಬಂಡೆ ತಾಲ್ಲೂಕು ನಿಲಗುಂಬ ಗ್ರಾಮ ಸೇರಿ ಹಲವೆಡೆ ಮನೆಗಳು ಕುಸಿದಿರುವ ಮಾಹಿತಿಯಿದೆ.

    Live Tv
    [brid partner=56869869 player=32851 video=960834 autoplay=true]

  • ಮೈಸೂರು-ಬೆಂಗ್ಳೂರು ಸಂಚಾರಕ್ಕೆ ಪರ್ಯಾಯ ಮಾರ್ಗ ಬಳಸಿ

    ಮೈಸೂರು-ಬೆಂಗ್ಳೂರು ಸಂಚಾರಕ್ಕೆ ಪರ್ಯಾಯ ಮಾರ್ಗ ಬಳಸಿ

    ರಾಮನಗದ: ಜಿಲ್ಲೆಯಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಕೆರೆಕಟ್ಟೆಗಳು ತುಂಬಿ ರಸ್ತೆಗೆ ಕೋಡಿ ಹರಿದಿದ್ದು, ಮೈಸೂರು-ಬೆಂಗಳೂರಿಗೆ ಸಂಚರಿಸುವ ವಾಹನಗಳಿಗೆ ಬದಲಿ ರಸ್ತೆ ಮಾರ್ಗಗಳನ್ನು ಸೂಚಿಸಲಾಗಿದೆ.

    ಕೆರೆ ಕೋಡಿ ಹರಿದು ಹಲವು ರಸ್ತೆಗಳು ಜಲಾವೃತಗೊಂಡಿವೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಹಲವೆಡೆ ದುಸ್ಥಿತಿಯಾಗಿದೆ. ಈ ಹಿನ್ನೆಲೆಯಲ್ಲಿ ಬದಲಿ ಮಾರ್ಗಗಳನ್ನು ಬಳಸುವಂತೆ ರಾಮನಗರ ಜಿಲ್ಲಾಡಳಿತ ಮನವಿ ಮಾಡಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ರಸ್ತೆ ಗುಂಡಿಯಿಂದಾಗಿ ಬೈಕ್‍ನಿಂದ ಬಿದ್ದು ನರಳಾಡಿದ ಯುವತಿ!

    ಇಂದಿನಿಂದ ಮೂರು ದಿನಗಳವರೆಗೆ ಬೆಂಗಳೂರು – ಮೈಸೂರು ಮಾರ್ಗವಾಗಿ ಪ್ರಯಾಣಿಸುವ ಬಸ್ ಹಾಗೂ ಇತರೇ ಪ್ರಯಾಣಿಕರು ಬೆಂಗಳೂರು-ಕನಕಪುರ-ಮೈಸೂರು ಮಾರ್ಗವಾಗಿ ಅಥವಾ ಬೆಂಗಳೂರು- ಕುಣಿಗಲ್- ಮೈಸೂರು ಮಾರ್ಗವಾಗಿ ಪ್ರಯಾಣಿಸುವಂತೆ ರಾಮನಗರ ಜಿಲ್ಲಾ ಪೊಲೀಸರು ಸೂಚಿಸಿದ್ದಾರೆ. ಸುಗಮ ಸಂಚಾರಕ್ಕಾಗಿ ಬದಲಿ ಮಾರ್ಗಗಳನ್ನು ಅನುಸರಿಸುವಂತೆ ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಲೆ ಮಹದೇಶ್ವರ ಬೆಟ್ಟದಲ್ಲಿ ಭೂ ಕುಸಿತ – ಸಂಚಾರ ಅಸ್ತವ್ಯಸ್ತ

    ಮಲೆ ಮಹದೇಶ್ವರ ಬೆಟ್ಟದಲ್ಲಿ ಭೂ ಕುಸಿತ – ಸಂಚಾರ ಅಸ್ತವ್ಯಸ್ತ

    ಚಾಮರಾಜನಗರ: ಮೈಸೂರಿನ ಚಾಮುಂಡಿ ಬೆಟ್ಟದ ಬಳಿಕ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೂ ಕುಸಿತ ಉಂಟಾಗಿ ಕೆಲತಾಸು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.

    Mahadeshwara Hill

    ಕಳೆದ ಒಂದು ವಾರದಿಂದ ಭರ್ಜರಿ ಮಳೆಯಾಗುತ್ತಿದ್ದು, ಮಲೆಮಹದೇಶ್ವರ ಬೆಟ್ಟದಿಂದ ತಮಿಳುನಾಡಿಗೆ ಹೋಗುವ ಪಾಲಾರ್ ಮಾರ್ಗದಲ್ಲಿ ಭೂ ಕುಸಿತ ಉಂಟಾಗಿ ಭತ್ತ ಕಟಾವು ಯಂತ್ರ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜೆಸಿಬಿ ಸಹಾಯದಿಂದ ಕುಸಿತ ಉಂಟಾದ ಸ್ಥಳದಲ್ಲಿ ಕಲ್ಲು, ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಇದನ್ನೂ ಓದಿ: ರಮೇಶ್‌ಕುಮಾರ್‌ನ ಜೈಲಿಗೆ ಕಳುಹಿಸುತ್ತೇನೆ – ಸುಧಾಕರ್ ಶಪಥ

    Mahadeshwara Hill

    2019ರಲ್ಲೂ ಜೋರು ಮಳೆಯಿಂದಾಗಿ ಸುಮಾರು 10 ಕಡೆ ಭೂ ಕುಸಿತ ಉಂಟಾಗಿ ಆತಂಕ ಸೃಷ್ಟಿಯಾಗಿತ್ತು. ಸದ್ಯ ಮಳೆಯಿಂದಾಗಿ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಕೈಗೊಂಡಿರುವ ಕೆಲ ಕಾಮಗಾರಿಗೂ ಅಡಚಣೆ ಉಂಟಾಗಿದೆ. ಇದನ್ನೂ ಓದಿ: ಭಾರೀ ಮಳೆ – ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ

  • 1 ತಿಂಗಳ ನಂತರ ಮಡಿಕೇರಿ-ಸೋಮವಾರಪೇಟೆ ರಾಜ್ಯ ಹೆದ್ದಾರಿ ಸಂಚಾರಕ್ಕೆ ಮುಕ್ತ

    1 ತಿಂಗಳ ನಂತರ ಮಡಿಕೇರಿ-ಸೋಮವಾರಪೇಟೆ ರಾಜ್ಯ ಹೆದ್ದಾರಿ ಸಂಚಾರಕ್ಕೆ ಮುಕ್ತ

    ಮಡಿಕೇರಿ: ಮಡಿಕೇರಿ-ಸೋಮವಾರಪೇಟೆ ರಾಜ್ಯ ಹೆದ್ದಾರಿಯು ಇಂದು ಮಧ್ಯಾಹ್ನದ ನಂತರ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ. ಮಡಿಕೇರಿ ಶಾಸಕರ ಅಪ್ಪಚ್ಚು ರಂಜನ್ ಅವರು ಪೂಜೆ ಸಲ್ಲಿಸಿ, ಚಾಲನೆ ನೀಡಲಿದ್ದಾರೆ.

    ಆಗಸ್ಟ್‍ನಲ್ಲಿ ಕೊಡಗು ಜಿಲ್ಲೆಯಲ್ಲಿ ಸುರಿದ ಮಹಾಮಳೆಗೆ ಸೋಮವಾರ ಪೇಟೆ ತಾಲೂಕಿನ ಮಾದಾಪುರ, ಹಟ್ಟಿಹೊಳೆ ಮತ್ತು ಮುಕ್ಕೋಡ್ಲು ಪ್ರದೇಶದಲ್ಲಿ ಸೇತುವೆ ಮತ್ತು ಭೂಕುಸಿತವಾಗಿತ್ತು. ಇತ್ತ ಮಡಿಕೇರಿ-ಸೋಮವಾರಪೇಟೆ ರಾಜ್ಯ ಹೆದ್ದಾರಿಯಲ್ಲಿ ಒಂಬತ್ತು ಕಡೆಗೆ ಭೂಸಿತವಾಗಿತ್ತು. ಇದರಿಂದಾಗಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.

    ಈಗಾಗಲೇ ಲೋಕೋಪಯೋಗಿ ಇಲಾಖೆಯು ರಸ್ತೆ ದುರಸ್ತಿ ಕಾಮಗಾರಿಯನ್ನು ಪೂರ್ಣಗೊಳಿಸಿದ್ದು, ಬರೋಬ್ಬರಿ ಒಂದು ತಿಂಗಳ ಬಳಿಕ ವಾಹನ ಸಂಚಾರಕ್ಕೆ ಮಡಿಕೇರಿ-ಸೋಮವಾರ ರಾಜ್ಯ ಹೆದ್ದಾರಿ ಮುಕ್ತವಾಗಿದೆ.

    ನಿವಾಸಕ್ಕೆ ಆಗ್ರಹ:
    ಪ್ರಕೃತಿ ವಿಕೋಪದಿಂದಾಗಿ ಮನೆಯನ್ನು ಕಳೆದುಕೊಂಡ ಕೊಡಗು ಸಂತ್ರಸ್ತರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಸತ್ಯಾಗ್ರಹ ನಡೆಸಲಾಗುತ್ತಿದೆ. ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ನಂದಿನೆರವಂಡ ನಾಚಪ್ಪ ಸತ್ಯಾಗ್ರಹದ ಮುಂದಾಳತ್ವದಲ್ಲಿ 100ಕ್ಕೂ ಹೆಚ್ಚು ಮಂದಿ ನಿರಾಶ್ರಿತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕುದುರೆಮುಖ ಘಾಟ್ ರಸ್ತೆ ಸಂಚಾರ ಸ್ಥಗಿತ- ವಾಹನ ಸವಾರರ ಪರದಾಟ

    ಕುದುರೆಮುಖ ಘಾಟ್ ರಸ್ತೆ ಸಂಚಾರ ಸ್ಥಗಿತ- ವಾಹನ ಸವಾರರ ಪರದಾಟ

    ಚಿಕ್ಕಮಗಳೂರು: ಕುದುರೆಮುಖ ಘಾಟ್ ತಿರುವಿನಲ್ಲಿ ಕಂಟೈನರ್ ಒಂದು ಕಿರಿದಾದ ರಸ್ತೆಯಲ್ಲಿ ಸಿಕ್ಕಿಹಾಕಿಕೊಂಡ ಪರಿಣಾಮ ಸಂಚಾರ ಸ್ಥಗಿತಗೊಂಡಿದ್ದು, ಲಾರಿ ಚಾಲಕರು ಮತ್ತು ಪ್ರವಾಸಿಗರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಶುಕ್ರವಾರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ರಸ್ತೆ ಬದಿಯ ಮಣ್ಣಿನಲ್ಲಿ ಸಿಲುಕಿಕೊಂಡಿದೆ. ಕಿರಿದಾದ ಘಾಟಿ ರಸ್ತೆಯಲ್ಲಿ ಕಂಟೈನರ್ ತೆರವುಗೊಳಿಸಲು ಕಾರ್ಯಚರಣೆ ಕಷ್ಟವಾಗುತ್ತಿದ್ದು, ಸ್ಥಳಕ್ಕೆ ಕುದುರೆಮುಖ ಪೊಲೀಸರು ಭೇಟಿ ನೀಡಿ, ತೆರವು ಕಾರ್ಯ ಆರಂಭಿಸಿದ್ದಾರೆ.

    ರಸ್ತೆ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ವಾಹನಗಳು ಕಿಲೋಮೀಟರ್ ಗಟ್ಟಲೇ ನಿಂತಿವೆ. ಈ ಮಾರ್ಗವಾಗಿ ಸಂಚರಿಸುತ್ತಿದ್ದ ಲಾರಿ ಚಾಲಕರು ಮತ್ತು ಪ್ರವಾಸಿಗರು ಪರದಾಡುತ್ತಿದ್ದಾರೆ.

    ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾತ್ರದ ವಾಹನಗಳ ಸಂಚಾರವನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಕುದುರೆಮುಖ ಘಾಟಿ ಮಾರ್ಗವಾಗಿ ಮಂಗಳೂರಿಗೆ ಸಂಚಾರ ಕಲ್ಪಿಸಿತ್ತು. ಇದರಿಂದಾಗಿ ಕಳಸ-ಮಂಗಳೂರು ಸಂಚಾರಕ್ಕಾಗಿ ಕುದುರೆಮುಖ ಘಾಟ್ ಮಾರ್ಗದ ಮೂಲಕ ಅವಕಾಶ ನೀಡಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಜ್ಯದ ಹಲವೆಡೆ ಮಳೆರಾಯನ ರುದ್ರನರ್ತನ- ಈ ಮಾರ್ಗದ ರಸ್ತೆಗಳು ಬಂದ್

    ರಾಜ್ಯದ ಹಲವೆಡೆ ಮಳೆರಾಯನ ರುದ್ರನರ್ತನ- ಈ ಮಾರ್ಗದ ರಸ್ತೆಗಳು ಬಂದ್

    ಬೆಂಗಳೂರು: ಮಳೆ ಬಂದ್ರೂ ಕಷ್ಟ, ಬರದಿದ್ರೂ ಕಷ್ಟ. ಮುಂಗಾರು ಮಳೆ ಕೈಕೊಡ್ತಲ್ಲಪ್ಪ ಅನ್ನೋ ಹೊತ್ತಲ್ಲಿ ಕರ್ನಾಟಕದ ಹಲವೆಡೆ ಮಳೆರಾಯ ಅಬ್ಬರಿಸಿದ್ದಾನೆ.

    ಚಿಕ್ಕಮಗಳೂರಲ್ಲಿ ಮಳೆಯ ಆರ್ಭಟ ನಿಲ್ತಿಲ್ಲ. ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈಗಾಗಲೇ ಕಳಸ ಸಮೀಪದ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಹೊರನಾಡು-ಕಳಸ ರಸ್ತೆ ಸಂಪರ್ಕ ಬಂದ್ ಆಗಿದೆ. ಮೂಡಿಗೆರೆ, ಶೃಂಗೇರಿ, ಎನ್.ಆರ್. ಪುರ, ಕೊಪ್ಪ, ತರೀಕೆರೆ ತಾಲೂಕುಗಳಲ್ಲಿ ವಿದ್ಯುತ್ ಕಂಬಗಳು, ಮರಗಳು ನೆಲ ಕಚ್ಚಿವೆ.

    ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದಲ್ಲಿ ಕಳೆದ 48 ಗಂಟೆಯಲ್ಲಿ ಭಾರೀ ಮಳೆ ಸುರಿದಿದ್ದು ಚಾಂದೇವಾಡಿ ಸೇತುವೆ ಮುಳುಗಡೆಯಾಗಿದೆ. ಬುಧವಾರ ಶಾಲೆ ಮುಗಿಸಿ ಬರ್ತಿದ್ದ 50ಕ್ಕೂ ಹೆಚ್ಚು ಮಕ್ಕಳು ನದಿ ದಡದಲ್ಲಿ ಸಿಲುಕಿದ್ರು. ರಬ್ಬರ್ ಬೋಟ್ ಬಳಸಿ ಮಕ್ಕಳನ್ನ ರಕ್ಷಿಸಲಾಯ್ತು.

    ವ್ಯಕ್ತಿ ಸಾವು: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ಗುಡ್ಡ ಕುಸಿತದಿಂದ ಮಲ್ಲಿಕಾರ್ಜುನ ಎಂಬ 31 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಕಣಕುಂಬಿಯಲ್ಲಿ ಕಳಸ ರಸ್ತೆ ಬಂದ್ ಆಗಿದೆ. ಅಥಣಿ, ರಾಯಭಾಗ, ಚಿಕ್ಕೋಡಿ ತಾಲೂಕಿನ ಕೆಳ ಹಂತದ ಸೇತುವೆಗಳು ಮುಳುಗಡೆ ಭೀತಿಯಲ್ಲಿವೆ. ಚಿಕ್ಕೋಡಿ ತಾಲೂಕಿನ ಯಡುರ-ಕಲ್ಲೋಳ ಸೇತುವೆಗಳು ಸಹ ಜಲಾವೃತಗೊಂಡಿವೆ.

    ಶಾಲೆಗೆ ರಜೆ: ಕೊಡಗು ಜಿಲ್ಲೆಯಲ್ಲಿ ಮಳೆರಾಯನ ಆರ್ಭಟದಿಂದ ಭಾಗಮಂಡಲ, ತ್ರಿವೇಣಿ ಸಂಗಮ ಭರ್ತಿಯಾಗಿದೆ. ನಾಪೋಕ್ಲು ಸುತ್ತಾಮುತ್ತಾ ಗದ್ದೆ ಜಲಾವೃತವಾಗಿದೆ. ಭಾಗಮಂಡಲ ರಸ್ತೆ ಜಲವೃತವಾಗಿ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಭಾರೀ ಮಳೆಯಿಂದಾಗಿ ಹಲವೆಡೆ ವಿದ್ಯುತ್ ಕಂಬಗಳ ಮೇಲೆ ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇವತ್ತು ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಒಂದು ದಿನ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ರಿಚರ್ಡ್ ವಿನ್ಸೆಂಟ್ ಆದೇಶಿಸಿದ್ದಾರೆ.

    ಶಿವಮೊಗ್ಗ ಜಿಲ್ಲೆಯಲ್ಲಿ 24 ಗಂಟೆಗಳ ಅವಧಿಯಲ್ಲಿ ತೀರ್ಥಹಳ್ಳಿ, ಸಾಗರದಲ್ಲಿ 83 ಮಿಲಿಮೀಟರ್ ಮಳೆಯಾಗಿದೆ. ಹೊಸನಗರದಲ್ಲಿ 110 ಮಿಲಿಮೀಟರ್ ಮಳೆಯಾಗಿದೆ. ಹಾಸನದ ಶಿರಾಡಿ ಘಾಟ್‍ನ ಕೆಂಪುಹೊಳೆ ಬಳಿ ರಾತ್ರಿ ಗುಡ್ಡ ಕುಸಿದು ಕೆಲವರಿಗೆ ಗಾಯವಾಗಿದೆ. ಧರ್ಮಸ್ಥಳ ಮಂಗಳೂರು ರಸ್ತೆ 2 ಗಂಟೆಗೂ ಹೆಚ್ಚು ಕಾಲ ಬಂದ್ ಆಗಿತ್ತು.