Tag: ರಾಕ್ಷಸರು

  • ರಾಕ್ಷಸರ ರೂಪದಲ್ಲಿ ಬರುತ್ತಿದ್ದಾರೆ ಡೈಲಾಂಗ್ ಕಿಂಗ್ ಸಾಯಿಕುಮಾರ್

    ರಾಕ್ಷಸರ ರೂಪದಲ್ಲಿ ಬರುತ್ತಿದ್ದಾರೆ ಡೈಲಾಂಗ್ ಕಿಂಗ್ ಸಾಯಿಕುಮಾರ್

    ನ್ನಡ ಚಿತ್ರರಂಗದಲ್ಲಿ ಸಿಂಹಾದ್ರಿ ಪ್ರೊಡಕ್ಷನ್ಸ್ ಮೂಲಕ ಉತ್ತಮ ಚಿತ್ರಗಳನ್ನು ನೀಡಿರುವ ರಮೇಶ್ ಕಶ್ಯಪ್ ಮತ್ತೊಂದು ಸಿನಿಮಾ ನಿರ್ಮಾಣ ಮಾಡಿದ್ದು, ಈ ಚಿತ್ರಕ್ಕೆ ರಾಕ್ಷಸರು ಎಂದು ಹೆಸರಿಡಲಾಗಿದೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ.

    ಇದೊಂದು ಸಖತ್ ಕ್ರೈಮ್ ಥ್ರಿಲ್ಲರ್ ಚಿತ್ರ. ಐದು ಜನ ಕ್ರಮಿನಲ್ ಗಳು  ಮಾಡಬಾರದ ದುಷ್ಕೃತ್ಯಗಳನ್ನು ಮಾಡಿ ತಲೆ ಮರಸಿಕೊಂಡಿರುತ್ತಾರೆ. ಇವರನ್ನು ಪೊಲೀಸರು ಹೇಗೆ ಹುಡುಕುತ್ತಾರೆ? ಎಂಬುದೇ ಕಥಾಹಂದರ. ದಂಡುಪಾಳ್ಯದ ಕ್ರಿಮಿನಲ್ ಗಳನ್ನು ಮೀರಿಸುವ ಕ್ರಿಮಿನಲ್ ಗಳು ಈ “ರಾಕ್ಷಸರು”. ರಜತ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಅವರ ಚೊಚ್ಚಲ ಚಿತ್ರ. ಇದನ್ನೂ ಓದಿ:ಬಿಗ್ ಬಾಸ್ ಖ್ಯಾತಿಯ ದಿವ್ಯಾ ಉರುಡುಗ-ಅರವಿಂದ ಪಾಲಿಗೆ ಈ ದಿನ ಯಾಕೆ ಸ್ಪೆಷಲ್ ಗೊತ್ತಾ?

    ಚಿತ್ರ ಸಿದ್ದವಾಗಿ ಬಹಳ ದಿನಗಳಾಗಿದೆ. ಆದರೆ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಿ, ಕ್ರೈಂ ಹೆಚ್ಚಾಗಿರುವುದರಿಂದ ಬಿಡುಗಡೆಗೆ ಒಪ್ಪಿಗೆ ನೀಡಲು ನಿರಾಕರಿಸಿದರು. ಆ ನಂತರ ನಿರ್ಮಾಪಕರ ಮನವಿ ಮೇರೆಗೆ ಕೆಲವು ಕಟ್ ಗಳ ಜೊತೆಗೆ A ಸರ್ಟಿಫಿಕೇಟ್ ನೀಡಿ ಬಿಡುಗಡೆಗೆ ಸೆನ್ಸಾರ್ ಮಂಡಳಿ ಒಪ್ಪಿಗೆ ನೀಡಿದೆ.

    ಆಗಸ್ಟ್‌ ಎರಡನೇ ವಾರ ಚಿತ್ರ ಭಾರತದಾದ್ಯಂತ ತೆರೆ ಕಾಣುತ್ತಿದೆ ಎಂದು ತಿಳಿಸಿರುವ ನಿರ್ಮಾಪಕರು, ಈ ಚಿತ್ರವನ್ನು ಆರಕ್ಷಕರಿಗೆ ಅರ್ಪಿಸಲು ನಿರ್ಧರಿಸಿದ್ದಾರೆ. ಎರಡು ಹಾಡುಗಳಿರುವ ಈ‌ ಚಿತ್ರಕ್ಕೆ ಎಮಿಲ್ ಸಂಗೀತ ನೀಡಿದ್ದಾರೆ. ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ. ಜನಾರ್ದನ ಬಾಬು ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಮನು ಅವರ ನೃತ್ಯ ನಿರ್ದೇಶನ ಈ  ಚಿತ್ರಕ್ಕಿದೆ.

    ಡೈಲಾಗ್ ಕಿಂಗ್ ಸಾಯಿಕುಮಾರ್, ರಾಜಶೇಖರ್, ನಾಜರ್, ಸುಮನ್, ಕಿರಣ್ ಸುನೀಲ್, ತ್ರಿವೇಣಿ, ಅವಿನಾಶ್ ನೀರಜ್ ಯಾದವ್, ಹರ್ಷಿತ್, ಚೈತ್ರ, ಮಾನಸ, ಆಶಾ, ಮಂಜುಳ, ಸುರೇಖ, ರಚನ, ಕಮಲ, ಚಂದ್ರಕಲಾ ರಾಧ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗೋಮಾಂಸ ತಿನ್ನುವವರು ರಾಕ್ಷಸ ಸಮಾನ: ಪೇಜಾವರ ಶ್ರೀ

    ಗೋಮಾಂಸ ತಿನ್ನುವವರು ರಾಕ್ಷಸ ಸಮಾನ: ಪೇಜಾವರ ಶ್ರೀ

    – ಹುಲಿ, ಸಿಂಹದಷ್ಟೇ ಗೋವು ಶ್ರೇಷ್ಠವಲ್ಲವೇ?

    ಉಡುಪಿ: ಗೋಮಾಂಸ ತಿನ್ನುವವ ರಾಕ್ಷಸ ಸಮಾನ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.

    ಕೃಷ್ಣಮಠದ ರಥಬೀದಿಯಲ್ಲಿ ನಡೆದ ದೇಸಿ ಗೋವು ಸಮ್ಮೇಳನದಲ್ಲಿ ಮಾತನಾಡಿದ ಅವರು, ಗೋವು ಭಕ್ಷಣೆ ಮಾಡುವವ ಮನುಷ್ಯನೇ ಅಲ್ಲ. ಗೋವು ಹಾಲು ಕೊಡುವ ಎಲ್ಲರ ತಾಯಿ. ಗೋವಿನ ಹಾಲು ಕುಡಿದವನಿಗೆ ಅದನ್ನು ಕೊಲ್ಲುವಾಗ ಏನೂ ಅನ್ನಿಸೋದಿಲ್ಲವೇ? ಗೋವನ್ನು ಕೊಲ್ಲುವವ ಮಾನವನೇ ಅಲ್ಲ. ಅವನು ರಾಕ್ಷಸ ಸಮಾನ. ಗೋಹತ್ಯೆ, ಗೋವು ಮಾಂಸ ಭಕ್ಷಣೆ ಹೇಯವಾದ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಧಾರ್ಮಿಕ ದೃಷ್ಟಿಗಿಂತ ಆಗದಿದ್ದರೆ, ಮಾನವೀಯ ದೃಷ್ಟಿಯಿಂದಾದರೂ ಗೋ ರಕ್ಷಣೆ ಮಾಡಿ. ಗೋ ರಕ್ಷಣೆಗೆ ಸರ್ಕಾರ ವಿಶೇಷ ಗಮನ ಕೊಡಬೇಕು ಎಂದು ಒತ್ತಾಯಿಸಿದರು. ಕೇಂದ್ರದಲ್ಲಿ ಮೋದಿ ಸರಕಾರ ಬಲವಾಗಿ ಬಂದಿದೆ. ಬಿಜೆಪಿಗೆ ಬಹುಮತ ಇದೆ. ಯಾವ ಪಕ್ಷದ ಬೆಂಬಲ ಇಲ್ಲದಿದ್ದರೂ ಮೊದಲ ವರ್ಷದಲ್ಲೇ ಗೋ ರಕ್ಷಣೆಗೆ ದೃಢ ಕಾನೂನು ತರಬೇಕು ಎಂದು ಮನವಿ ಮಾಡಿಕೊಂಡರು.

    ದೇಶದಲ್ಲಿ ಹುಲಿ, ಸಿಂಹ ಸಂತಾನ ಉಳಿಸಲು ಸರ್ಕಾರ ಬಹಳಷ್ಟು ಕ್ರಮ ಕೈಗೊಳ್ಳುತ್ತದೆ. ಆದರೆ ಗೋವಿನ ತಳಿ ಉಳಿಸಲು ಸರ್ಕಾರ ಈವರೆಗೆ ನಿಗದಿತ ಕ್ರಮ ಕೈಗೊಳ್ಳುವುದಿಲ್ಲ. ಪರಿಣಾಮಕಾರಿಯಾಗಿ ಕೆಲಸ ಮಾಡಿಲ್ಲ. ಸಿಂಹ- ಹುಲಿಗಿಂತ ಗೋವು ಕೀಳಾಗಿಬಿಟ್ಟಿದೆಯೇ? ಹುಲಿ, ಸಿಂಹದಷ್ಟೇ ಗೋವು ಶ್ರೇಷ್ಠವಲ್ಲವೇ? ಎಂದು ಪ್ರಶ್ನಿಸಿದರು. ಬಳಿಕ ಗೋ ಸಾಗಾಟ, ಗೋವು ಕೊಲ್ಲುವ ವಿಧಾನ ಅತ್ಯಂತ ಭಯಾನಕವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

    ಗೋವಿನ ಜೊತೆ ಗೂಳಿಯ ರಕ್ಷಣೆಯೂ ಆಗಬೇಕು. ಹಾಲು ಕೊಡುವ ಹಸುವಿರಬೇಕಾದರೆ ಎತ್ತು, ಕೋಣ ಇರಲೇಬೇಕು. ನಮ್ಮ ಭಾರತದ ದೇಸಿ ತಳಿ ಗೋವುಗಳ ರಕ್ಷಣೆ ಆಗಬೇಕು ಎಂದು ಸ್ವಾಮೀಜಿ ಒತ್ತಾಯಿಸಿದರು. ರಥಬೀದಿಯಲ್ಲಿ ಇಡೀ ದೇಶದ ದೇಸಿ ಹಸುಗಳ ಪ್ರದರ್ಶನ ನಡೆಯುತ್ತಿದ್ದು, ಬರುವ ಜನರಿಗೆ ಗೋವುಗಳ ಬಗ್ಗೆ ಮಾಹಿತಿಯನ್ನು ಕೊಡಲಾಗುತ್ತಿದೆ ಎಂದು ಸ್ವಾಮೀಜಿ ತಿಳಿಸಿದರು.

    https://www.youtube.com/watch?v=-atjvRa7zrk