Tag: ರಾಗಿಗುಡ್ಡ

  • ಸೌಹಾರ್ದಯುತ ಈದ್ ಮಿಲಾದ್ ಹಬ್ಬದಂದೇ ಕಿಡಿಗೇಡಿಗಳು ಶಾಂತಿ ಭಂಗಕ್ಕೆ ಯತ್ನಿಸಿದ್ದಾರೆ: ಉಮೇಶ್ ಜಾಧವ್

    ಸೌಹಾರ್ದಯುತ ಈದ್ ಮಿಲಾದ್ ಹಬ್ಬದಂದೇ ಕಿಡಿಗೇಡಿಗಳು ಶಾಂತಿ ಭಂಗಕ್ಕೆ ಯತ್ನಿಸಿದ್ದಾರೆ: ಉಮೇಶ್ ಜಾಧವ್

    ಕಲಬುರಗಿ: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಶಿವಮೊಗ್ಗ (Shivamogga) ಗಲಾಟೆ ಕುರಿತು ಕಲಬುರಗಿಯಲ್ಲಿ ಸಂಸದ ಡಾ. ಉಮೇಶ್ ಜಾಧವ್ (Umesh Jadhav) ಪ್ರತಿಕ್ರಿಯೆ ನೀಡಿದ್ದಾರೆ.

    ಸರ್ಕಾರ ಮುಂಜಾಗೃತ ಕ್ರಮ ಕೈಗೊಂಡಿದ್ದರೆ ಶಿವಮೊಗ್ಗ ಘಟನೆ ನಡೆಯುತ್ತಿರಲಿಲ್ಲ. ಈದ್ ಮಿಲಾದ್ ಎಂದರೆ ಸೌಹಾರ್ದಯುತ ಹಬ್ಬವಾಗಿರುತ್ತದೆ. ಆದರೆ ಕೆಲ ಕಿಡಿಗೇಡಿಗಳು ಅದೇ ದಿನ ಕಲ್ಲು ತೂರಾಟ ನಡೆಸಿ ಶಾಂತಿ ಭಂಗ ಮಾಡುವ ಯತ್ನ ಮಾಡಿದ್ದಾರೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.

    ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸರಿಯಾದ ಸ್ಥಾನಮಾನದ ಬಗ್ಗೆ ಶಾಮನೂರು ಶಿವಶಂಕರಪ್ಪ ಸರಿಯಾಗಿ ಹೇಳಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ವೀರಶೈವ ಲಿಂಗಾಯತ ಸಮಾಜದ ಹಿರಿಯರು. ಅವರು ಹೇಳಿದ ಮಾತು ಸತ್ಯಾವಗಿದೆ ಎಂದರು. ಇದನ್ನೂ ಓದಿ: ಕರ್ನಾಟಕ ಮತ್ತೊಂದು ಬಿಹಾರ ಆಗ್ತಿದೆ ಅನಿಸುತ್ತಿದೆ: ಆರ್. ಅಶೋಕ್

    ಇದಕ್ಕೆ ಯಡಿಯೂರಪ್ಪ ಅವರು ಸಹ ಪ್ರತಿಕ್ರಿಯೆ ನೀಡಿದ್ದಾರೆ. ಕಲಬುರಗಿಯಲ್ಲಿ ಸಹ ಪಾಲಿಕೆಯ ಲಿಂಗಾಯತ ಮುಖಂಡನ ಮೇಲೆ ಹಲ್ಲೆ ಮಾಡಿದ್ರು ಸಹ ಇಲ್ಲಿಯವರೆಗೆ ಆರೋಪಿಗಳನ್ನು ಈ ಸರ್ಕಾರ ಬಂಧಿಸಿಲ್ಲ. ಹೀಗಾಗಿ ಈ ಸರ್ಕಾರದಲ್ಲಿ ವೀರಶೈವ ಲಿಂಗಾಯತರಿಗೆ ಬೆಲೆ ಇಲ್ಲದಂತಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಡಾ. ಉಮೇಶ್ ಜಾಧವ್ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಕೋಮು ಸಂಘರ್ಷ – ತಪ್ಪಿತಸ್ಥರ ವಿರುದ್ದ ಕ್ರಮ ತೆಗೆದುಕೊಳ್ಳದಿದ್ದರೆ ಕಿಡಿ ರಾಜ್ಯಕ್ಕೆ ಹಬ್ಬಬಹುದು: ವಿಜಯೇಂದ್ರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಿವಮೊಗ್ಗ ಕೋಮು ಗಲಭೆ ಪ್ರಕರಣದಲ್ಲಿ 43 ಜನರ ಬಂಧನ: ಸಿದ್ದರಾಮಯ್ಯ

    ಶಿವಮೊಗ್ಗ ಕೋಮು ಗಲಭೆ ಪ್ರಕರಣದಲ್ಲಿ 43 ಜನರ ಬಂಧನ: ಸಿದ್ದರಾಮಯ್ಯ

    ಬೆಂಗಳೂರು: ಶಿವಮೊಗ್ಗ (Shivamogga) ಕೋಮುಗಲಭೆ (Communal Riots) ಪ್ರಕರಣದಲ್ಲಿ 43ಕ್ಕೂ ಹೆಚ್ಚು ಜನರನ್ನು ಬಂಧನ ಮಾಡಲಾಗಿದ್ದು, ಸದ್ಯ ಶಿವಮೊಗ್ಗ ಶಾಂತಿಯುತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.

    ಶಿವಮೊಗ್ಗ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಭಾನುವಾರ ಈದ್ ಮಿಲಾದ್ ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ ಯಾರೋ ದುಷ್ಕರ್ಮಿಗಳು ಕಲ್ಲು ಹೊಡೆದಿದ್ದಾರೆ. ರಾಗಿಗುಡ್ಡದಲ್ಲಿ (Ragigudda) ಈ ಘಟನೆ ನಡೆದಿದ್ದು, ಪೊಲೀಸರ ಮೇಲೂ ಕಲ್ಲು ತೂರಾಟ ಮಾಡಿದ್ದಾರೆ. ಹೀಗಾಗಿ ಅನಿವಾರ್ಯವಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಹಬ್ಬಗಳಿದ್ದರೂ ಸರ್ಕಾರ ಅಗತ್ಯ ಕ್ರಮ ಕೈಗೊಂಡಿಲ್ಲ: ಬೊಮ್ಮಾಯಿ ಕಿಡಿ

    ಕಲ್ಲು ತೂರಾಟ ಮಾಡಿದವರು, ಗಲಾಟೆ ಮಾಡಿದ 43ಕ್ಕೂ ಹೆಚ್ಚು ಜನರನ್ನು ಬಂಧನ ಮಾಡಲಾಗಿದೆ. ಅವರ ಮೇಲೆ ಮೊಕದ್ದಮೆ ಹಾಕಲಾಗಿದೆ. ಯಾವುದೇ ಧಾರ್ಮಿಕ ಕಾರ್ಯಕ್ರಮದಲ್ಲಿ ಕಲ್ಲು ಎಸೆಯೋದು ಕಾನೂನು ಬಾಹಿರ ಚಟುವಟಿಕೆ. ಇಂತಹ ಘಟನೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇಂತಹ ಘಟನೆಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತೇನೆ ಎಂದರು. ಇದನ್ನೂ ಓದಿ: ಮಳೆಗಾಲದಲ್ಲೂ ಬರಿದಾದ ಕೆಆರ್‌ಎಸ್ ಡ್ಯಾಂ ನೋಡಿ ರಾಜವಂಶಸ್ಥೆ ಬೇಸರ

    ಶಿವಮೊಗ್ಗ ಈಗ ಸಂಪೂರ್ಣ ನಿಯಂತ್ರಣದಲ್ಲಿ ಇದೆ. ಶಿವಮೊಗ್ಗ ಶಾಂತಿಯುತವಾಗಿದೆ. ಪೊಲೀಸ್ ಇಲಾಖೆ ಎಲ್ಲಾ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಶಾಂತಿ ಕಾಪಾಡಿ ಎಂದು ನಾನು ಮನವಿ ಮಾಡುತ್ತೇನೆ. ಶಾಂತಿ ಕಾಪಾಡಲು ಸರ್ಕಾರ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ ಎಂದು ಹೇಳಿದರು.  ಇದನ್ನೂ ಓದಿ: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಖರ್ಗೆ ಅಳಿಯ ಸ್ಪರ್ಧೆ ಸಾಧ್ಯತೆ: ಚಿಂಚನಸೂರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ – 35 ಜನ ಪೊಲೀಸ್ ವಶಕ್ಕೆ

    ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ – 35 ಜನ ಪೊಲೀಸ್ ವಶಕ್ಕೆ

    ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ (Eid Milad Procession) ವೇಳೆ ಕಲ್ಲು ತೂರಾಟ (Stone Pelting) ನಡೆಸಿರುವ ಘಟನೆ ಶಿವಮೊಗ್ಗದ (Shivamogga) ರಾಗಿಗುಡ್ಡ (Ragigudda) ಶಾಂತಿನಗರದಲ್ಲಿ ನಡೆದಿದೆ. 2 ಗುಂಪಿನ ನಡುವೆ ಕಲ್ಲು ತೂರಾಟ ನಡೆದು, 6 ಮಂದಿ ಗಾಯಗೊಂಡಿದ್ದಾರೆ. 7 ಮನೆ, 1 ಕಾರು, 1 ಬೈಕ್ ಜಖಂಗೊಂಡಿವೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. 35 ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಈದ್ ಮಿಲಾದ್ ಹಬ್ಬದ ಅಂಗವಾಗಿ ಶಿವಮೊಗ್ಗದಲ್ಲಿ ಮುಸ್ಲಿಂ ಬಾಂಧವರು ಮೆರವಣಿಗೆ ಹಮ್ಮಿಕೊಂಡಿದ್ದರು. ಕಳೆದ 28ನೇ ದಿನದಂದು ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಮೆರವಣಿಗೆ ಇದ್ದಿದ್ದರಿಂದ, ಈದ್ ಮಿಲಾದ್ ಮೆರವಣಿಗೆಯನ್ನು ನಿನ್ನೆಗೆ (ಭಾನುವಾರ) ಮುಸ್ಲಿಂ ಮುಖಂಡರು ಹಮ್ಮಿಕೊಂಡಿದ್ದರು. ಹೀಗಾಗಿ ಈದ್ ಮಿಲಾದ್ ಮೆರವಣಿಗೆಗೆ ಇಡೀ ಶಿವಮೊಗ್ಗ ನಗರವನ್ನು ಹಸಿರುಮಯ ಮಾಡಲಾಗಿತ್ತು. ಹಸಿರು ಬಾವುಟ, ಟಿಪ್ಪು ಸುಲ್ತಾನ್, ಔರಂಗಜೇಬ್ ಕಟೌಟ್ ಹಾಕಿದ್ದರು.

    ನಿನ್ನೆ ಸರಿಸುಮಾರು ಮಧ್ಯಾಹ್ನ 3 ಗಂಟೆಗೆ ಗಾಂಧಿ ಬಜಾರಿನ ಜಾಮೀಯಾ ಮಸೀದಿಯಿಂದ ಮೆರವಣಿಗೆ ಆರಂಭವಾಗಿತ್ತು. ಮೆರವಣಿಗೆಯಲ್ಲಿ ಭಾಗವಹಿಸಲು ನಗರದ ಎಲ್ಲಾ ಬಡಾವಣೆಗಳಿಂದ ಮುಸ್ಲಿಂ ಬಾಂಧವರು ಆಗಮಿಸಿದರು. ರಾಗಿಗುಡ್ಡದಿಂದಲೂ ಮೆರವಣಿಗೆಯಲ್ಲಿ ಭಾಗಿಯಾಗಲು ಕೆಲ ಮುಸ್ಲಿಂ ಬಾಂಧವರು ತೆರಳುತ್ತಿದ್ದರು. ಈ ವೇಳೆ ರಾಗಿಗುಡ್ಡದ ಶನೇಶ್ವರ ದೇವಸ್ಥಾನದ ಬಳಿ ಮೆರವಣಿಗೆ ಸಾಗುವಾಗ ಕಲ್ಲು ತೂರಾಟ ನಡೆದಿದೆ. ಈ ವೇಳೆ ಪ್ರತಿಯಾಗಿ ಮೆರವಣಿಗೆಯಲ್ಲಿ ಇದ್ದವರು ಕಲ್ಲು ತೂರಾಟ ನಡೆಸಿದರು. ಪರಿಣಾಮ ಹಿಂದೂಗಳಿಗೆ ಸೇರಿದ 7 ಮನೆಗಳು ಹಾಗೂ 1 ಬೈಕ್, 1 ಕಾರು ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆ ಪ್ರಕರಣ – ಇಬ್ಬರು ಮಹಿಳೆಯರು ಸೇರಿ ನಾಲ್ವರ ಬಂಧನ

    ಭಾನುವಾರ ಮುಂಜಾನೆ ಕೂಡ ರಾಗಿಗುಡ್ಡದಲ್ಲಿ ಗೊಂದಲ ಉಂಟಾಗಿತ್ತು. ರಾಗಿಗುಡ್ಡದ ವೃತ್ತವೊಂದರಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ಹಾಕಿದ್ದರು. ಟಿಪ್ಪು ಸುಲ್ತಾನ್ ಇಬ್ಬರು ಹಿಂದೂ ಮಾದರಿಯ ಸೈನಿಕರನ್ನು ತುಳಿಯುತ್ತಿರುವ ರೀತಿ ಕಟೌಟ್ ಹಾಕಿದ್ದರು. ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪೊಲೀಸರು ಬಣ್ಣ ಹಚ್ಚಿ ಮುಚ್ಚಿದ್ದರು. ಇದಕ್ಕೆ ಮುಸ್ಲಿಮರು ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದರು. ನಂತರ ಸ್ಥಳಕ್ಕೆ ಎಸ್‌ಪಿ ಮಿಥುನ್ ಕುಮಾರ್ ಭೇಟಿ ನೀಡಿ ಮನವೊಲಿಸಿದ್ದರು.

    ಇಷ್ಟಾದ ಮೇಲೂ ರಾಗಿಗುಡ್ಡದಿಂದ ಗಾಂಧಿ ಬಜಾರಿಗೆ ಮೆರವಣಿಗೆ ತೆರಳುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ. ಪ್ರತಿಯಾಗಿ ಮೆರವಣಿಗೆಯಲ್ಲಿ ಇದ್ದವರು ಕಲ್ಲು ತೂರಾಟ ನಡೆಸಿದರು. ಘಟನೆಯಲ್ಲಿ ಮನೆಯ ಕಿಟಕಿಗಳಿಗೆ, ವಾಹನಗಳಿಗೆ ಹಾನಿಯಾಗಿದೆ. ಪೊಲೀಸರು ಸೇರಿದಂತೆ 6 ಮಂದಿ ಗಾಯಗೊಂಡಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. ಸದ್ಯ ಕಲ್ಲು ತೂರಾಟ ನಡೆಸಿದವರ ಪತ್ತೆ ಹಚ್ಚಿ ಮನೆ ಮನೆಗೆ ತೆರಳಿ ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಪತ್ತೆಗೆ ಎಸ್‌ಪಿ 3 ವಿಶೇಷ ತಂಡ ರಚನೆ ಮಾಡಿದ್ದು, ಇದುವರೆಗೆ 11ಕ್ಕೂ ಅಧಿಕ ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಗಿಗುಡ್ಡ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಸದ್ಯ ಗಲಭೆ ನಡೆದ ಸ್ಥಳದಲ್ಲಿ ಆರ್‌ಎಎಫ್, ಡಿಎಆರ್, ಕೆಎಸ್‌ಆರ್‌ಪಿ ತುಕಡಿ ಸೇರಿದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಕಲ್ಲು ತೂರಾಟ; ಟಿಪ್ಪುವಿನ ಕಾರಣ ಬಲಿಷ್ಠವಾಗಿ ನಿಂತುಬಿಡ್ತು ಅನ್ನಿಸುತ್ತೆ ಎಂದ ಶಾಸಕ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಗಿಗುಡ್ಡದ ಬಳಿ ಗೋಶಾಲೆ ನಿರ್ಮಾಣಕ್ಕೆ ಸ್ಥಳೀಯರ ವಿರೋಧ

    ರಾಗಿಗುಡ್ಡದ ಬಳಿ ಗೋಶಾಲೆ ನಿರ್ಮಾಣಕ್ಕೆ ಸ್ಥಳೀಯರ ವಿರೋಧ

    ಶಿವಮೊಗ್ಗ: ಮಹಾನಗರ ಪಾಲಿಕೆ ವತಿಯಿಂದ ನಿರ್ಮಿಸಲಾಗುತ್ತಿರುವ ಸರ್ಕಾರಿ ಗೋಶಾಲೆ ನಿರ್ಮಾಣಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದಾರೆ. ಆದರೆ ಪಾಲಿಕೆಯ ಮೇಯರ್, ಸ್ಥಳೀಯರ ವಿರೋಧದ ನಡುವೆಯೂ ಅದೇ ಸ್ಥಳದಲ್ಲೇ ಗೋಶಾಲೆ ನಿರ್ಮಿಸುತ್ತೇವೆ ಎಂದು ಕಠುವಾಗಿ ನುಡಿದರು.

    ಶಿವಮೊಗ್ಗ ನಗರ ಪ್ರದೇಶದಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದೆ. ಜೊತೆಗೆ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆಗಳನ್ನು ಅಗೆದು ಹಾಕಲಾಗಿದೆ. ಪರಿಣಾಮ ನಗರದ ಪ್ರಮುಖ ರಸ್ತೆಗಳೇ ಬಿಡಾಡಿ ದನಗಳ ಆವಾಸ ಸ್ಥಾನವಾಗಿದೆ. ಇದನ್ನೂ ಓದಿ: ಕಾಲೇಜುಗಳಿಗೆ ಹಣ ಬಿಡುಗಡೆ ಮಾಡಿ – ದೆಹಲಿ ಸರ್ಕಾರದ ವಿರುದ್ಧ ತಿರುಗಿಬಿದ್ದ ಶಿಕ್ಷಕರು

    ರಸ್ತೆಯಲ್ಲಿ ಜಾನುವಾರುಗಳು ಅಡ್ಡಾದಿಡ್ಡಿ ಓಡಾಡುವುದರಿಂದ ಅಪಘಾತಗಳು ಸಹ ನಡೆಯುತ್ತಿವೆ. ಒಂದೆಡೆ ಮಹಾನಗರ ಪಾಲಿಕೆ ಬಿಡಾಡಿ ದನಗಳ ರಕ್ಷಿಸಲು ಹಾಗೂ ಬಿಡಾಡಿ ದನಗಳಿಂದ ಸಂಭವಿಸುತ್ತಿದ್ದ ಅಪಘಾತ ತಪ್ಪಿಸಲು ಮಹಾನಗರ ಪಾಲಿಕೆ ನಗರದ ಹೊರ ವಲಯದ ರಾಗಿಗುಡ್ಡದ ಸಮೀಪ ಗೋಶಾಲೆ ನಿರ್ಮಿಸಲು ಮುಂದಾಗಿದೆ. ಆದರೆ ಮಹಾನಗರ ಪಾಲಿಕೆಯ ಗೋಶಾಲೆ ನಿರ್ಮಾಣಕ್ಕೆ ಸ್ಥಳೀಯ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

    ರಾಗಿಗುಡ್ಡದ ಸಮೀಪ ಜಿಲ್ಲಾಧಿಕಾರಿ ಅವರು ಗೋಶಾಲೆ ನಿರ್ಮಾಣಕ್ಕೆ ಐದು ಎಕರೆ ಜಮೀನು ಮಂಜೂರು ಮಾಡಿ ಪಾಲಿಕೆಗೆ ಹಸ್ತಾಂತರಿಸಿದ್ದಾರೆ. ಆದರೆ ಈ ಜಮೀನು ವಿವಾದದಲ್ಲಿದ್ದು, ನ್ಯಾಯಾಲಯದಲ್ಲಿ ಕೇಸ್ ನಡೆಯುತ್ತಿದೆ. ಜೊತೆಗೆ ಈ ಪ್ರದೇಶದಲ್ಲಿ ಗೋಶಾಲೆ ನಿರ್ಮಾಣವಾದರೆ ಇಲ್ಲಿನ ನಿವಾಸಿಗಳಿಗೆ ತೊಂದರೆ ಆಗುತ್ತದೆ. ಅಲ್ಲದೇ ಮುಂದೆ ಕೋಮುಗಲಭೆ ಉಂಟಾಗುವ ಸಂಭವ ಸಹ ಇದೆ. ಪಾಲಿಕೆ ನಿರ್ಮಾಣ ಮಾಡುತ್ತಿರುವ ಗೋಶಾಲೆ ನಗರ ಪ್ರದೇಶದಿಂದ 5 ಕಿ.ಮೀ ದೂರದಲ್ಲಿ ಇರಬೇಕು. ಜನ ವಸತಿ ಪ್ರದೇಶದಲ್ಲಿ ಇರಬಾರದು ಎಂಬ ನಿಯಮವನ್ನು ಉಲ್ಲಂಘಿಸಿ ಗೋಶಾಲೆ ನಿರ್ಮಾಣ ಮಾಡುತ್ತಿದ್ದಾರೆ. ಈ ಹಿನ್ನೆಲೆ ಯಾವುದೇ ಕಾರಣಕ್ಕು ಈ ಸ್ಥಳದಲ್ಲಿ ಗೋಶಾಲೆ ನಿರ್ಮಿಸದಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

    ಈ ನಡುವೆ ಪಾಲಿಕೆ ಮೇಯರ್, ನಾವು ಇದೇ ಸ್ಥಳದಲ್ಲಿ ಗೋಶಾಲೆ ನಿರ್ಮಿಸಲು ತೀರ್ಮಾನಿಸಿದ್ದೇವೆ. ಈ ಜಮೀನಿನ ಮೇಲೆ ಯಾವುದೇ ವಿವಾದ ಇಲ್ಲ. ಇದು ಸರ್ಕಾರಿ ಭೂಮಿಯಾಗಿದೆ. ಕೆಲವು ಪಟ್ಟಾಭದ್ರ ಹಿತಾಸಕ್ತಿಗಳು ಕೋಟ್ಯಾಂತರ ರೂ. ಮೌಲ್ಯದ ಭೂಮಿ ಕಬಳಿಸುವ ಸಲುವಾಗಿ ಈ ರೀತಿ ಹುನ್ನಾರ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಿಟ್‌ಕ್ಯಾಟ್ ರ‍್ಯಾಪರ್‌ನಲ್ಲಿ ಲಾರ್ಡ್ ಪುರಿ ಜಗನ್ನಾಥ ಫೋಟೋ – ಪ್ಯಾಕ್‌ಗಳನ್ನು ಹಿಂತೆಗೆದುಕೊಂಡ ನೆಸ್ಲೆ ಇಂಡಿಯಾ

    ಕೆಲವರು ಸ್ಥಳೀಯರನ್ನು ಎತ್ತಿಕಟ್ಟಿ ಗಲಭೆ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಏನೇ ಅಡ್ಡಿ ಆತಂಕ ಎದುರಾದರೂ ಇದೇ ಸ್ಥಳದಲ್ಲಿ ಗೋಶಾಲೆ ನಿರ್ಮಾಣ ಮಾಡುತ್ತೇವೆ ಎಂದರು.

    ಒಟ್ಟಿನಲ್ಲಿ ಗೋಶಾಲೆ ನಿರ್ಮಾಣದ ಹೆಸರಿನಲ್ಲಿ ರಾಜಕಾರಣ ಬೆರೆತು ಹೋಗಿರುವುದಂತು ಸತ್ಯ. ಗೋಶಾಲೆ ನಿರ್ಮಾಣ ಕೈಬಿಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ. ಪಾಲಿಕೆ ಇದೇ ಸ್ಥಳದಲ್ಲಿ ಗೋಶಾಲೆ ನಿರ್ಮಾಣ ಮಾಡುತ್ತೇವೆ ಎಂಬ ಹಠಕ್ಕೆ ಬಿದ್ದಿದೆ. ಮುಂದಿನ ದಿನಗಳಲ್ಲಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.